Tag: ಏಷ್ಯನ್ ಗೇಮ್ಸ್ ಕ್ರಿಕೆಟ್ 2023

  • ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ ಶಫಾಲಿ ವರ್ಮಾ

    ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ ಶಫಾಲಿ ವರ್ಮಾ

    ಹ್ಯಾಂಗ್‌ಜೂ: ಚೀನಾದ ಹ್ಯಾಂಗ್‌ಜೂನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ (Asian Games 2023) ಭಾರತೀಯ ಮಹಿಳಾ ತಂಡದ ಆಟಗಾರ್ತಿ ಶಫಾಲಿ ವರ್ಮಾ (Shafali Verma) ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

    ಹ್ಯಾಂಗ್‌ಜೂನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದಲ್ಲಿಂದು (ಗುರುವಾರ) ನಡೆದ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಮತ್ತು ಮಲೇಷ್ಯಾ ಮಹಿಳಾ ಕ್ರಿಕೆಟ್ (Malaysia Womens Team) ತಂಡಗಳ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಆದ್ರೆ ಈ ಪಂದ್ಯದಲ್ಲಿ ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾ ಪರ ಶಫಾಲಿ ವರ್ಮಾ 31 ಎಸೆತಗಳಲ್ಲಿ 51 ರನ್‌ ಬಾರಿಸುವ ಮೂಲಕ ಏಷ್ಯನ್ ಗೇಮ್ಸ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

    ಆರಂಭಿಕರಾಗಿ ಕಣಕ್ಕಿಳಿದ ಶಫಾಲಿ ವರ್ಮಾ 171.79 ಸ್ಟ್ರೈಕ್‌ರೇಟ್‌ ಬ್ಯಾಟ್ ಬೀಸಿ 39 ಎಸೆತಗಳಲ್ಲಿ 67 ರನ್ (5 ಸಿಕ್ಸರ್, 4 ಬೌಂಡರಿ) ಚಚ್ಚಿದರು. ಈ ಮೂಲಕ ಏಷ್ಯನ್ ಗೇಮ್ಸ್ ಕ್ರಿಕೆಟ್ ಇತಿಹಾಸದಲ್ಲಿ ಅರ್ಧಶತಕ ಸಿಡಿಸಿದ ಮೊದಲ ಮಹಿಳಾ ಆಟಗಾರ್ತಿ ಎಂಬ ಕೀರ್ತಿಗೆ ಪಾತ್ರರಾದರು. ಇದನ್ನೂ ಓದಿ: ಏಷ್ಯನ್ ಗೇಮ್ಸ್: ಭಾರತ-ಮಲೇಷ್ಯಾ ಪಂದ್ಯ ರದ್ದು, ಕ್ವಾರ್ಟರ್ ಫೈನಲ್‍ಗೆ ಜಿಗಿದ ಟೀಂ ಇಂಡಿಯಾ

    ಈ ಪಂದ್ಯದಲ್ಲಿ ಭಾರತ 5.4 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 60 ರನ್ ಗಳಿಸಿದ್ದಾಗ ಮಳೆ ಅಡ್ಡಿಯಾಯಿತು. ಆದ್ದರಿಂದ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಪಂದ್ಯವನ್ನ 15 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಸ್ಮೃತಿ ಮಂಧಾನ (Smriti Mandhana) 27 ರನ್ ಗಳಿಸಿದ್ರೆ, ಸೋಟಕ ಆರಂಭ ನೀಡಿದ ಶಫಾಲಿ ವರ್ಮಾ 67 ರನ್ ಚಚ್ಚಿದರು. ಇದರೊಂದಿಗೆ ಜೆಮಿಮಾ ರೊಡ್ರಿಗಸ್ ಅಜೇಯ 47 ರನ್ (29 ಎಸೆತ, 6 ಬೌಂಡರಿ) ಹಾಗೂ ರಿಷಾ ಘೋಷ್ ಕೇವಲ 7 ಎಸೆತಗಳಲ್ಲಿ ಸ್ಫೋಟಕ 21 ರನ್ (3 ಬೌಂಡರಿ, 1 ಸಿಕ್ಸರ್) ಚಚ್ಚಿ ತಂಡದ ಮೊತ್ತ 170ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ಭಾರತ ನಿಗದಿತ 15 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ ಭಾರತ 173 ರನ್ ಕಲೆಹಾಕಿತು. ಇದನ್ನೂ ಓದಿ: ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ – ಕೆ.ಎಲ್‌ ರಾಹುಲ್‌ಗೆ ನಾಯಕತ್ವ, ಸೂರ್ಯನಿಗೂ ಚಾನ್ಸ್‌

    ಈ ಗುರಿ ಬೆನ್ನಟ್ಟಿದ ಮಲೇಷ್ಯಾ ಇನಿಂಗ್ಸ್ ಆರಂಭಿಸುತ್ತಿದ್ದಂತೆಯೇ ಮತ್ತೆ ಮಳೆ ಸುರಿಯಲಾರಂಭಿಸಿತು. ಮಲೇಷ್ಯಾ ತಂಡ ಕೇವಲ ಎರಡು ಎಸೆತಗಳನ್ನು ಎದುರಿಸಿದ್ದಾಗ ಮಳೆ ಆರಂಭವಾಯಿತು. ಭಾರೀ ಮಳೆಯ ಕಾರಣ ಪಂದ್ಯವು ಫಲಿತಾಂಶವಿಲ್ಲದೆ ರದ್ದಾಯಿತು. ಭಾರತ ಉತ್ತಮ ರನ್‌ರೇಟ್ ಹೊಂದಿದ್ದ ಕಾರಣ ಸೆಮಿಫೈನಲ್ ಪ್ರವೇಶಿಸಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಏಷ್ಯನ್ ಗೇಮ್ಸ್: ಭಾರತ-ಮಲೇಷ್ಯಾ ಪಂದ್ಯ ರದ್ದು, ಕ್ವಾರ್ಟರ್ ಫೈನಲ್‍ಗೆ ಜಿಗಿದ ಟೀಂ ಇಂಡಿಯಾ

    ಏಷ್ಯನ್ ಗೇಮ್ಸ್: ಭಾರತ-ಮಲೇಷ್ಯಾ ಪಂದ್ಯ ರದ್ದು, ಕ್ವಾರ್ಟರ್ ಫೈನಲ್‍ಗೆ ಜಿಗಿದ ಟೀಂ ಇಂಡಿಯಾ

    ನವದೆಹಲಿ: ಏಷ್ಯನ್ ಗೇಮ್ಸ್ ಕ್ರಿಕೆಟ್ 2023 (Asian Games 2023) ಟೂರ್ನಿಯಲ್ಲಿ ಚೀನಾದ ಹಾಂಗ್‍ಝೌನ ಪಿಂಗ್‍ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದಲ್ಲಿ ಇಂದು (ಗುರುವಾರ) ನಡೆದ ಪಂದ್ಯದಲ್ಲಿ ಭಾರತ (India) ಮತ್ತು ಮಲೇಷ್ಯಾ (Malaysia) ಮಹಿಳಾ ತಂಡಗಳ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ರನ್ ರೇಟ್ ಆಧಾರದ ಮೇಲೆ ಭಾರತ ತಂಡ ಟೂರ್ನಿಯ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.

    ಈ ಮೂಲಕ ಮಹಿಳಾ ಕ್ರಿಕೆಟ್ ಟೂರ್ನಿಯ ಮೊದಲ ಕ್ವಾರ್ಟರ್ ಫೈನಲ್ ಪಂದ್ಯ ಮಳೆಯಿಂದಾಗಿ ಫಲಿತಾಂಶವಿಲ್ಲದೆ ರದ್ದಾಗಿದೆ. ಆದರೂ ಭಾರತ ತಂಡ ಸೆಮಿಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಿತು. ಟೀಂ ಇಂಡಿಯಾಗೆ ಸ್ಮೃತಿ ಮಂದಾನ (27) ಹಾಗೂ ಶೆಫಾಲಿ ವರ್ಮಾ ಜೋಡಿ ಮೊದಲ ವಿಕೆಟ್‍ಗೆ 57 ರನ್ ಕಲೆಹಾಕಿ ಉತ್ತಮ ಆರಂಭ ನೀಡಿತು. ಭಾರತ 5.4 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು 60 ರನ್ ಗಳಿಸಿದ್ದಾಗ ಮಳೆ ಸುರಿಯಿತು. ಇದರಿಂದಾಗಿ ಪಂದ್ಯವನ್ನು 15 ಓವರ್‌ಗಳಿಗೆ ಕಡಿತಗೊಳಿಸಲಾಯಿತು. ಇದನ್ನೂ ಓದಿ: ಏಷ್ಯನ್ ಗೇಮ್ಸ್ ಫೈನಲ್ ತಲುಪಿದರೆ ಕಣಕ್ಕಿಳಿಯಲು ಹರ್ಮನ್‍ಪ್ರೀತ್ ಕೌರ್ ಸಜ್ಜು

    ಅಬ್ಬರದ ಬ್ಯಾಟಿಂಗ್ ನಡೆಸಿದ ಶೆಫಾಲಿ 39 ಎಸೆತಗಳಲ್ಲಿ 4 ಬೌಂಡರಿ ಮತ್ತು 5 ಸಿಕ್ಸರ್‍ಗಳಿದ್ದ 67 ರನ್ ಸಿಡಿಸಿ ಔಟಾದರು. ಅವರಿಗೆ ಉತ್ತಮ ಸಾಥ್ ನೀಡಿದ ಜೆಮಿಯಾ ರಾಡ್ರಿಗಸ್ 29 ಎಸೆತಗಳಲ್ಲಿ 47 ರನ್ ಬಾರಿಸಿ ಅಜೇಯವಾಗಿ ಉಳಿದರು. ಅವರ ಇನಿಂಗ್ಸ್‍ನಲ್ಲಿ 6 ಬೌಂಡರಿಗಳು ದಾಖಲಾದವು. ಕೇವಲ 7 ಎಸೆತಗಳನ್ನು ಎದುರಿಸಿದ ರಿಚಾ ಘೋಷ್, 3 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 21 ರನ್ ಗಳಿಸಿದರು. ಅಂತಿಮವಾಗಿ ಭಾರತ ನಿಗದಿತ ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 173 ರನ್ ಕಲೆಹಾಕಿತು.

    ಈ ಗುರಿ ಬೆನ್ನಟ್ಟಿದ ಮಲೇಷ್ಯಾ ಇನಿಂಗ್ಸ್ ಆರಂಭಿಸುತ್ತಿದ್ದಂತೆಯೇ ಮಳೆ ಸುರಿಯಲಾರಂಭಿಸಿತು. ಮಲೇಷ್ಯಾ ತಂಡ ಕೇವಲ ಎರಡು ಎಸೆತಗಳನ್ನು ಎದುರಿಸಿದ್ದಾಗ ಮಳೆ ಆರಂಭವಾಯಿತು. ಭಾರೀ ಮಳೆಯ ಕಾರಣ ಪಂದ್ಯವು ಫಲಿತಾಂಶವಿಲ್ಲದೆ ರದ್ದಾಯಿತು. ಸೆಮಿಫೈನಲ್ ಹಣಾಹಣಿಯು ಇದೇ ಕ್ರೀಡಾಂಗಣದಲ್ಲಿ ಸೆ.24 ರಂದು ನಡೆಯಲಿದೆ. ಇದನ್ನೂ ಓದಿ: ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ – ಕೆ.ಎಲ್‌ ರಾಹುಲ್‌ಗೆ ನಾಯಕತ್ವ, ಸೂರ್ಯನಿಗೂ ಚಾನ್ಸ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]