Tag: ಐಎಂಡಿಬಿ

  • ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸಮಂತಾ ನಂ 1

    ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸಮಂತಾ ನಂ 1

    ಪುಷ್ಪ ಸಿನಿಮಾದ ನಂತರ ಸಮಂತಾ ರುತ್ ಪ್ರಭು (Samantha) ಅಷ್ಟೇನೂ ಹೇಳಿಕೊಳ್ಳುವಂತಹ ಸಿನಿಮಾ ಕೊಟ್ಟಿಲ್ಲ. ಮಾಡಿರುವ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಗೆಲ್ಲಲು ತಿಣುಕಾಡಿವೆ. ಆದರೂ, ಭಾರತದ ಜನಪ್ರಿಯ ಸೆಲೆಬ್ರಿಟಿಗಳ (Celebrity) ಪಟ್ಟಿಯಲ್ಲಿ ಸಮಂತಾ ನಂಬರ್ 1 (Number 1) ಸ್ಥಾನವನ್ನು ಅಲಂಕರಿಸಿದ್ದಾರೆ.  ಸದಾ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಜೊತೆ ಮುಖಾಮುಖಿ ಆಗುವ ಸಮಂತಾ, ಇತ್ತೀಚಿನ ದಿನಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಅಪ್ ಡೇಟ್ ನೀಡಿದ್ದರು.

    ಐಎಂಡಿಬಿ (IMDb) ಪ್ರಕಟಿಸಿರುವ ಭಾರತದ ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸಮಂತಾ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿರುವುದಕ್ಕೆ ಅಭಿಮಾನಿಗಳಿಗೆ ಸಹಜವಾಗಿಯೇ ಖುಷಿ ಆಗಿದೆ. ಅನೇಕರು ಸಮಂತಾಗೆ ಶುಭ ಹಾರೈಸಿದ್ದಾರೆ. ಇನ್ನೂ ಎತ್ತರಕ್ಕೆ ನೀವು ಬೆಳೆಯಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಎಲ್ಲ ನೋವಿನಿಂದಲೂ ಬೇಗ ಆಚೆ ಬರುವಂತೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ನಟಿ ಮೇಘನಾ ರಾಜ್ ಹುಟ್ಟು ಹಬ್ಬಕ್ಕೆ ತತ್ಸಮ ತದ್ಭವ ಪೋಸ್ಟರ್ ರಿಲೀಸ್

    ಸದ್ಯ ಸಮಂತಾ ಸಿಟಾಡೆಲ್ (Citadel) ವೆಬ್ ಸೀರಿಸ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಅಲ್ಲಿಯೇ ತಮ್ಮ ಹುಟ್ಟುಹಬ್ಬವನ್ನೂ ಆಚರಿಸಿಕೊಂಡಿದ್ದರು. ಅಲ್ಲದೇ, ಐಸ್ ಬಾತ್ ಥಿರೇಪಿಗೂ ಅವರು ಒಳಗಾಗಿದ್ದರು. ಆ ಅನುಭವನ್ನು ನಿನ್ನೆಯಷ್ಟೇ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಅಲ್ಲದೇ, ಅದೊಂದು ಯಮಯಾತನೆಯ ನೋವು ಎಂದು ಹೇಳಿದ್ದರು.

    ಸಮಂತಾ ವೈಯಕ್ತಿಕ ಕಾರಣಗಳಿಂದಾಗಿ ಹಲವು ಬಾರಿ ಸುದ್ದಿ ಆಗಿದ್ದಾರೆ. ಅಲ್ಲದೇ, ನಿರ್ಮಾಪಕ ಚಿಟ್ಟಿಬಾಬು ಕೂಡ ಸಮಂತಾ ಅವರ ಮೇಲೆ ನಿರಂತರವಾಗಿ ಮಾತಿನ ದಾಳಿ ಮಾಡಿದ್ದರು. ಅದಕ್ಕೂ ಸೌಮ್ಯ ರೀತಿಯಲ್ಲಿ ಸಮಂತಾ ಉತ್ತರ ನೀಡಿದ್ದರು.

  • ಕೆಜಿಎಫ್ ಸಿನಿಮಾಗೆ ಐಎಂಡಿಬಿನಿಂದ 9.6 ಮಾರ್ಕ್ಸ್‌

    ಕೆಜಿಎಫ್ ಸಿನಿಮಾಗೆ ಐಎಂಡಿಬಿನಿಂದ 9.6 ಮಾರ್ಕ್ಸ್‌

    ಬೆಂಗಳೂರು: ಕನ್ನಡ ಸಿನಿಮಾಲೋಕದಲ್ಲೇ ಹೊಸ ಇತಿಹಾಸ ಸೃಷ್ಟಿಸಿರುವ ‘ಕೆಜಿಎಫ್’ ಸಿನಿಮಾಗೆ ಖ್ಯಾತ ಸಿನಿಮಾ ಡೇಟಾಬೇಸ್ ಬೆಬ್‍ಸೈಟ್ ಇಂಟರ್ ನೆಟ್ ಮೂವಿ ಡೇಡಾ ಬೇಸ್(ಐಎಂಡಿಬಿ) ರೇಟಿಂಗ್ಸ್ ಕೊಟ್ಟಿದೆ.

    ಐಎಂಡಿಬಿ ರಾಕಿಂಗ್ ಸ್ಟಾರ್ ಯಶ್ ಅಭಿಯನಯದ `ಕೆಜಿಎಫ್’ ಸಿನಿಮಾ ಸೂಪರ್ ಡೂಪರ್ ಎಂದು ವಿಶ್ಲೇಷಿಸಿದ್ದು, 10ರಲ್ಲಿ 9.6 ಮಾರ್ಕ್ಸ್‌ ಕೊಟ್ಟಿದೆ. ಈ ಮೂಲಕ ಕನ್ನಡ ಸಿನಿಮಾ ಆನ್‍ಲೈನ್ ರೇಟಿಂಗ್ಸ್ ಕೊಡುವ ವೆಬ್‍ಸೈಟ್‍ ನಲ್ಲಿ ಕೆಜಿಎಫ್ ಅಬ್ಬರಿಸುತ್ತಿದೆ.

    ಈ ಹಿಂದೆ ಕೂಡ ಐಎಂಡಿಬಿ ಪಟ್ಟಿಯಲ್ಲಿ ಕೆಜಿಎಫ್ ಮೊದಲನೇ ಸ್ಥಾನ ಪಡೆದುಕೊಳ್ಳುವ ಮೂಲಕ ಬಾಲಿವುಡ್ ಬಾದ್‍ಶಾ ಶಾರೂಖ್ ಖಾನ್ ಅಭಿನಯದ ಸಿನಿಮಾವನ್ನು ಹಿಂದಿಕ್ಕಿತ್ತು. ಕರ್ನಾಟಕದ 400 ಸ್ಕ್ರೀನ್‍ಗಳು ಸೇರಿದಂತೆ ವಿಶ್ವದ 2 ಸಾವಿರದಷ್ಟು ಸ್ಕ್ರೀನ್‍ಗಳಲ್ಲಿ ರಾಕಿಂಗ್ ಸ್ಟಾರ್ ಯಶ್‍ಗೆ ಅಭಿಮಾನಿಗಳು ಸಲಾಂ ರಾಕಿಭಾಯ್ ಅಂತಿದ್ದಾರೆ.

    ಉಗ್ರಂ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಡೈರೆಕ್ಟ್ ಮಾಡಿರುವ 70 ಕೋಟಿ ರೂಪಾಯಿ ವೆಚ್ಚದ ಕೆಜಿಎಫ್ ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಮಲಯಾಳಂ, ಹಿಂದಿ ಹೀಗೆ ಐದು ಭಾಷೆಗಳಲ್ಲಿ ಬಿಡುಗಡೆ ಆಗಿದೆ. ವಿಜಯ್ ಕಿರಂಗದೂರು ನಿರ್ಮಾಣದ ಸಿನಿಮಾದಲ್ಲಿ ಮಾಸ್ಟರ್ ಪೀಸ್‍ಗೆ ಶ್ರೀನಿಧಿ ಶೆಟ್ಟಿ ಜೋಡಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾರತದ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಮೊದಲ ಸ್ಥಾನ ಪಡೆದ ಕೆಜಿಎಫ್

    ಭಾರತದ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಮೊದಲ ಸ್ಥಾನ ಪಡೆದ ಕೆಜಿಎಫ್

    ಬೆಂಗಳೂರು: ದೇಶದ ಬಹುನಿರೀಕ್ಷೆಯ ಸಿನಿಮಾಗಳ ಪಟ್ಟಿಯಲ್ಲಿ ಕೆಜಿಎಫ್ ಮೊದಲ ಸ್ಥಾನವನ್ನು ಪಡೆದುಕೊಂಡಿದೆ ಎಂದು ಇಂಟರ್ ನೆಟ್ ಮೂವಿ ಡೇಟಾ ಬೇಸ್ (ಐಎಂಡಿಬಿ) ಖ್ಯಾತ ಸಿನಿಮಾ ಡೇಟಾಬೇಸ್ ವೆಬ್‍ಸೈಟ್ ಪ್ರಕಟಿಸಿದೆ.

    ಕೆಜಿಎಫ್: ಚಾಪ್ಟರ್ 1 ಇದೇ ಶುಕ್ರವಾರ ದೇಶಾದ್ಯಂತ ಬಿಡುಗಡೆ ಆಗಲು ಸಿದ್ಧಗೊಂಡಿದೆ. ಯಶ್ ಅಭಿನಯದ ಪ್ರಶಾಂತ್ ನೀಲ್ ನಿರ್ದೇಶನದಲ್ಲ ಸಿನಿಮಾ ಮೂಡಿ ಬಂದಿದ್ದು, ಚಿತ್ರ ನೋಡಲು ಅಭಿಮಾನಿಗಳು ಟಿಕೆಟ್ ಕೌಂಟರ್ ನಲ್ಲಿ ಕಾಯುತ್ತಿದ್ದಾರೆ. ಬೆಂಗಳೂರಿನ ಕೆಲ ಚಿತ್ರಮಂದಿರಗಳಲ್ಲಿ ಆರಂಭದ ಶೋಗಳ ಟಿಕೆಟ್ ಖರೀದಿಯಾಗಿದ್ದು, ಬಹುತೇಕ ಕಡೆ ಹೌಸ್ ಫುಲ್ ಎಂಬ ಬೋರ್ಡ್ ಕಾಣಿಸುತ್ತಿದೆ.

    ಬಾಲಿವುಡ್ ಡಾನ್ ಶಾರೂಖ್ ಖಾನ್ ಅಭಿನಯದ ಝೀರೋ ಸಿನಿಮಾ ಸಹ ಇದೇ ಶುಕ್ರವಾರ ತೆರೆಕಾಣಲಿದೆ. ಬಹುತಾರಾಗಣವುಳ್ಳ ಸಿನಿಮಾ ಆಗಿದ್ದರೂ, ಎರಡನೇ ಸ್ಥಾನದಲ್ಲಿದೆ. ಕೆಜಿಎಫ್ ಸಿನಿಮಾ ನೋಡಲು ಶೇ. 81ರಷ್ಟು ಜನರು ಕಾಯುತ್ತಿದ್ದಾರೆ. ಶೇ.11.7ರಷ್ಟು ಜನರು ಝೀರೋ ಸಿನಿಮಾ ನೋಡುವ ನಿರೀಕ್ಷೆಯಲ್ಲಿದ್ದಾರೆ.

    ಭೂಗತ ಲೋಕದ ಕರಾಳ ಸತ್ಯವನ್ನು ಕೆಜಿಎಫ್ ತೋರಿಸಲಿದೆ ಎಂಬುವುದನ್ನು ಟ್ರೇಲರ್ ಸಾರಿ ಸಾರಿ ಹೇಳುತ್ತಿದೆ. ಓರ್ವ ಕಥಾನಾಯಕನ ಜೀವನದ ಏರುಪೇರುಗಳನ್ನು ತುಂಬಾ ಸ್ಪಷ್ಟವಾಗಿ ಪ್ರಶಾಂತ್ ನೀಲ್ ತೋರಿಸುವ ಪ್ರಯತ್ನ ಟ್ರೇಲರ್ ನಲ್ಲಿ ಕಾಣುತ್ತಿದೆ. ಇನ್ನು ಟೀಸರ್ ಆರಂಭದಲ್ಲಿ ಕೇಳಿಬರುವ ಹಿನ್ನೆಲೆ ಧ್ವನಿ ಟ್ರೇಲರ್ ನಲ್ಲಿ ನೋಡುಗರಲ್ಲಿ ರೋಮ ರೋಮಗಳಲ್ಲಿ ರೋಮಾಂಚನ ಮಾಡುವಲ್ಲಿ ಯಶ್ವಸಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಾರೂಖ್ ಖಾನ್ ನಟನೆಯ ಝೀರೋ ಸಿನಿಮಾ ಹಿಂದಿಕ್ಕಿದ ಕೆಜಿಎಫ್

    ಶಾರೂಖ್ ಖಾನ್ ನಟನೆಯ ಝೀರೋ ಸಿನಿಮಾ ಹಿಂದಿಕ್ಕಿದ ಕೆಜಿಎಫ್

    -ದೇಶಾದ್ಯಂತ ಕೆಜಿಎಫ್ ಸಂಚಲನ

    ಬೆಂಗಳೂರು: ರಾಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್ ಸಿನಿಮಾ ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ದೇಶಾದ್ಯಂತ ಸಂಚಲನ ಮೂಡಲಾರಂಭಿಸಿದೆ.

    ಖ್ಯಾತ ಸಿನಿಮಾ ಡೇಟಾಬೇಸ್ ವೆಬ್‍ಸೈಟ್ ಇಂಟರ್ ನೆಟ್ ಮೂವಿ ಡೇಟಾ ಬೇಸ್(ಐಎಂಡಿಬಿ) ಪಟ್ಟಿಯಲ್ಲಿ ಕೆಜಿಎಫ್ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ಬಾಲಿವುಡ್ ಬಾದ್‍ಶಾ ಶಾರೂಖ್ ಖಾನ್ ಅಭಿನಯದ ಸಿನಿಮಾವನ್ನು ಹಿಂದಿಕ್ಕಿದೆ. ತೆಲುಗಿನ ವಿಜಯ್ ದೇವರಕೊಂಡ ಅಭಿನಯದ ಟ್ಯಾಕ್ಸಿವಾಲಾ ಮೂರನೇ ಸ್ಥಾನದಲ್ಲಿದೆ. ಝೀರೋ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ರಜಿನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅಭಿನಯದ 2.0 ಮೊದಲ ಸ್ಥಾನದಲ್ಲಿದೆ.

    ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಕೆಜಿಎಫ್ ಒಟ್ಟು ಐದು ಭಾಷೆಗಳಲ್ಲಿ ನಿರ್ಮಾಣಗೊಂಡಿವೆ. ಡಿಸೆಂಬರ್ 21ರಂದು ಚಿತ್ರ ತೆರೆಕಾಣಲಿದೆ. ಶಾರೂಖ್ ಖಾನ್ ಅಭಿನಯದ ಝೀರೋ ಸಿನಿಮಾ ಸಹ ಡಿಸೆಂಬರ್ 21ರಂದು ತೆರೆಕಾಣಲಿದೆ. ಈಗಾಗಲೇ ಎರಡು ಚಿತ್ರಗಳು ಟ್ರೇಲರ್ ಮೂಲಕ ತನ್ನದೇ ಗುರುತನ್ನು ಸಿನಿ ಅಂಗಳದಲ್ಲಿ ಮೂಡಿಸುವ ಪ್ರಯತ್ನ ಮಾಡಿವೆ. ನವೆಂಬರ್ 9ರಂದು ಬಿಡುಗಡೆ ಆಗಿರುವ ಕನ್ನಡದ ಕೆಜಿಎಫ್ ಟ್ರೇಲರ್ ಇದೂವರೆಗೂ 71 ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದೆ. ತೆಲುಗು ಭಾಷೆಯ ಟ್ರೇಲರ್ 45 ಲಕ್ಷಕ್ಕೂ ಅಧಿಕ ಮತ್ತು ಹಿಂದಿ ಭಾಷೆಯ ಟ್ರೇಲರ್ 95 ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದೆ.

    ನವೆಂಬರ್ 2ರಂದು ಬಿಡುಗಡೆ ಆಗಿರುವ ಝೀರೋ ಸಿನಿಮಾ ಇದೂವರೆಗೂ 8 ಕೋಟಿಗೂ ಅಧಿಕ ಬಾರಿ ವೀಕ್ಷಣೆಯಾಗಿದೆ. ಯಶ್ ಅಭಿನಯದ ಈ ಚಿತ್ರ ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಅಭಿನಯದ ಝೀರೋ ಚಿತ್ರಕ್ಕೆದುರಾಗಿ ಬಿಡುಗಡೆಯಾಗಲಿದೆ ಎಂಬ ವಿಚಾರ ತಿಳಿಯುತ್ತಲೇ ಅನೇಕರು ಲೇವಡಿಯಾಡಿದ್ದೂ ಇದೆ. ಆದರೆ ಇದೀಗ ಕೆಜಿಎಫ್ ಟ್ರೇಲರ್ ಬಾಲಿವುಡ್ ಮಟ್ಟದಲ್ಲಿಯೂ ಸಂಚಲನ ಸೃಷ್ಟಿಸಿದೆ. ಇದುವೇ ಈ ಚಿತ್ರದ ಗೆಲುವಿನ ಭವಿಷ್ಯವನ್ನೂ ಹೇಳುತ್ತಿದೆ.

    ಭೂಗತ ಲೋಕದ ಕರಾಳ ಸತ್ಯವನ್ನು ಕೆಜಿಎಫ್ ತೋರಿಸಲಿದೆ ಎಂಬುವುದನ್ನು ಟ್ರೇಲರ್ ಸಾರಿ ಸಾರಿ ಹೇಳುತ್ತಿದೆ. ಓರ್ವ ಕಥಾನಾಯಕನ ಜೀವನದ ಏರುಪೇರುಗಳನ್ನು ತುಂಬಾ ಸ್ಪಷ್ಟವಾಗಿ ಪ್ರಶಾಂತ್ ನೀಲ್ ತೋರಿಸುವ ಪ್ರಯತ್ನ ಟ್ರೇಲರ್ ನಲ್ಲಿ ಕಾಣುತ್ತಿದೆ. ಇನ್ನು ಟೀಸರ್ ಆರಂಭದಲ್ಲಿ ಕೇಳಿಬರುವ ಹಿನ್ನೆಲೆ ಧ್ವನಿ ಟ್ರೇಲರ್ ನಲ್ಲಿ ನೋಡುಗರಲ್ಲಿ ರೋಮ ರೋಮಗಳಲ್ಲಿ ರೋಮಾಂಚನ ಮಾಡುವಲ್ಲಿ ಯಶ್ವಸಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ವಿಜಯ ದೇವರಕೊಂಡ ಟ್ಯಾಕ್ಸಿವಾಲ ಹಿಂದಿಕ್ಕಿದ ಕೆಜಿಎಫ್

    ವಿಜಯ ದೇವರಕೊಂಡ ಟ್ಯಾಕ್ಸಿವಾಲ ಹಿಂದಿಕ್ಕಿದ ಕೆಜಿಎಫ್

    – ದೇಶದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯ ಐದನೇ ಸ್ಥಾನದಲ್ಲಿ ಕೆಜಿಎಫ್

    ಬೆಂಗಳೂರು: ಈ ವರ್ಷದ ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಕನ್ನಡದ, ರಾಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್ ಚಿತ್ರ ಐದನೇ ಸ್ಥಾನದಲ್ಲಿದೆ. ಖ್ಯಾತ ಸಿನಿಮಾ ಡೇಟಾಬೇಸ್ ವೆಬ್‍ಸೈಟ್ ಇಂಟರ್ ನೆಟ್ ಮೂವಿ ಡೇಟಾ ಬೇಸ್(ಐಎಂಡಿಬಿ) ಪಟ್ಟಿಯಲ್ಲಿ ತೆಲುಗಿನ ವಿಜಯ ದೇವರಕೊಂಡ ಅಭಿನಯದ ‘ಟ್ಯಾಕ್ಸಿವಾಲಾ’ ಆರನೇ ಸ್ಥಾನದಲ್ಲಿದೆ. ಈ ಪಟ್ಟಿಯ ಮೂಲಕ ಕನ್ನಡ ಸಿನಿಮಾಗಳಿಗೆ ದೇಶದಾದ್ಯಂತ ಮಾರುಕಟ್ಟೆ ಲಭ್ಯವಾಗಿತ್ತಿರೋದು ಖುಷಿಯ ವಿಚಾರವಾಗಿದೆ.

    ಐಎಂಡಿಬಿ ಪಟ್ಟಿಯ ಮೊದಲ ಸ್ಥಾನದಲ್ಲಿ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅಭಿನಯದ ‘2.0’ ಮೊದಲ ಸ್ಥಾನದಲ್ಲಿದೆ. ನಂತರ ತಮಿಳಿನ ಸರ್ಕಾರ್, ಹಿಂದಿಯ ಜೀರೋ, ಥಗ್ಸ್ ಆಫ್ ಹಿಂದೋಸ್ತಾನ್ ಕ್ರಮವಾಗಿ ಎರಡು, ಮೂರು ಮತ್ತು ನಾಲ್ಕನೇ ಕ್ರಮಾಂಕದಲ್ಲಿವೆ. 5ನೇ ಸ್ಥಾನದಲ್ಲಿ ಕೆಜಿಎಫ್ ಇದೆ. ಉಳಿದಂತೆ ತೆಲುಗಿನ ಟ್ಯಾಕ್ಸಿವಾಲಾ, ಹಿಂದಿಯ ಮಿರ್ಜಾಪುರ, ಮೊಹಲ್ಲಾ ಐಸಿ, ಕೇದರನಾಥ್ ಮತ್ತು ಮೈರ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದುಕೊಂಡಿದೆ.

    ದೇಶಾದ್ಯಂತ ಸುದ್ದಿ ಮಾಡಿದ ಬೇರೆ ಭಾಷೆಗಳ ಚಿತ್ರಗಳ ಕಾರ್ಯಕ್ರಮಗಳಿಗೆ ಕನ್ನಡದ ಮಾಧ್ಯಮಕ್ಕೆ ಆಗಾಗ ಕರೆ ಬರೋದಿದೆ. ಆದರೆ ಬೇರೆ ಭಾಷೆಗಳ ಮಾಧ್ಯಮ ಮಂದಿಯೇ ಕನ್ನಡ ಚಿತ್ರದ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಬಂದಿಳಿದ್ದಿಲ್ಲ. ಆದರೀಗ ಕೆಜಿಎಫ್ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ತೆಲುಗು ಮತ್ತು ತಮಿಳು ಮಾಧ್ಯಮದವರೇ ಬೆಂಗಳೂರಿಗೆ ಬರುವಂತೆ ಮಾಡಿದೆ.

    ಇದೇ ತಿಂಗಳ 9ರಂದು ಅದ್ಧೂರಿ ಸಮಾರಂಭವೊಂದರ ಮೂಲಕ ಕೆಜಿಎಫ್ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಲಿದೆ. ಅದಕ್ಕೆ ತೆಲುಗು ಮತ್ತು ತಮಿಳು ಮಾಧ್ಯಮಗಳಿಗೂ ಆಹ್ವಾನ ಹೋಗಿದೆ. ಅವರೂ ಕೂಡಾ ಬರಲು ಉತ್ಸುಕರಾಗಿದ್ದಾರೆ. ಇದು ನಿಜಕ್ಕೂ ಕನ್ನಡ ಚಿತ್ರರಂಗದ ಘನತೆಯನ್ನು ದಕ್ಷಿಣ ಭಾರತೀಯ ಚಿತ್ರ ರಂಗಕ್ಕೆ ಪರಿಚಯಿಸುವಂಥಾ ವಿದ್ಯಮಾನ. ಸಿನಿಮಾ ಡಿಸೆಂಬರ್ 21ರಂದು ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv