ನವದೆಹಲಿ:ಬಿಹಾರದಲ್ಲಿ (Bihar) INDIA ಒಕ್ಕೂಟ ಸೀಟು ಹಂಚಿಕೆ ಅಧಿಕೃತವಾಗಿ ಫೈನಲ್ ಮಾಡಿದೆ. ಆರ್‌ಜೆಡಿ (RJD), ಕಾಂಗ್ರೆಸ್ (Congress), ಎಡಪಕ್ಷಗಳು ಒಟ್ಟಾಗಿ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆಯ (Lok Sabha Election) ಸೀಟು ಹಂಚಿಕೆ ವಿಚಾರ ತಿಳಿಸಿವೆ.
ಎನ್‌ಡಿಎ (NDA) ಒಕ್ಕೂಟ ಈಗಾಗಲೇ ಸ್ಥಾನ ಹಂಚಿಕೆ ಮಾಡಿದೆ. ಬಿಜೆಪಿ 17, ಜೆಡಿಯು 16, ಜಿತನ್ ರಾಮ್ ಮಾಂಜಿ ಅವರ ಹಿಂದೂಸ್ತಾನಿ ಆವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಸಮತಾ ಪಾರ್ಟಿ 1 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಲೋಕ ಜನಶಕ್ತಿ ಪಾರ್ಟಿ (ರಾಮ್ ವಿಲಾಸ್) ಪಕ್ಷ 5 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಯು, ಎಲ್‌ಜೆಪಿ ಮೈತ್ರಿ 40 ಕ್ಷೇತ್ರಗಳ ಪೈಕಿ 39 ಸ್ಥಾನಗಳನ್ನು ಗೆದ್ದುಕೊಂಡಿತ್ತು.
ಬಿಹಾರದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
ನವದೆಹಲಿ: ಲೋಕಸಭಾ ಚುನಾವಣೆ (Loksabha Elections) ಸನಿಹದಲ್ಲಿ ವಿಪಕ್ಷ ಐಎನ್‍ಡಿಐಎ ಕೂಟದ ನಾಯಕರು ವಿವಾದಾತ್ಮಕ ಹೇಳಿಕೆಗಳ ಮೂಲಕ ಸದ್ದು ಮಾಡತೊಡಗಿದ್ದಾರೆ.
ದೇಶ, ದೇವರು, ರಾಮ, ರಾಮಾಯಣ, ರಾಮಮಂದಿರ ಮತ್ತು ಪ್ರಧಾನಿ ಮೋದಿ ವಿಚಾರವಾಗಿ ಕಾಂಗ್ರೆಸ್, ಡಿಎಂಕೆ ಮತ್ತು ಟಿಎಂಸಿಯ ಮೂವರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಡಿಎಂಕೆ ಎ ರಾಜಾ ಅಂತೂ ಇಂಡಿಯಾ ಅಂದ್ರೆ ದೇಶ ಅಲ್ಲ. ಅದು ಉಪಖಂಡ ಎಂದಿದ್ದಾರೆ. ಮಣಿಪುರದಲ್ಲಿ ನಾಯಿ ಮಾಂಸ ತಿನ್ನುವುದು ಕೂಡ ಸಂಸ್ಕೃತಿ. ಕೆಲವರು ಬೀಫ್ ತಿನ್ನುತ್ತಾರೆ, ಅದು ಅವರ ಸಂಸ್ಕೃತಿ. ಅದನ್ನು ಗೌರವಿಸಬೇಕು ಎಂದಿದ್ದಾರೆ.
ರಾಹುಲ್ ಗಾಂಧಿ (Rahul Gandhi) ಮಾತನಾಡಿ, ದೇಶದಲ್ಲಿ ನಿರುದ್ಯೋಗ, ಹಸಿವಿನ ಸಾವು ಹೆಚ್ಚುತ್ತಿದೆ. ಆದ್ರೆ ಮೋದಿ ಮಾತ್ರ ಜೈಶ್ರೀರಾಮ್ ಅಂತಾ ಕೂಗಿ ಎನ್ನುತ್ತಿದ್ದಾರೆ. ನೀವು ಜೈಶ್ರೀರಾಮ್ ಎಂದು ಹೇಳುತ್ತಾ ಹಸಿವಿನಿಂದ ಸಾಯಬೇಕು ಎಂದು ಪ್ರಧಾನಿ ಬಯಸ್ತಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಟಿಎಂಸಿಯ ರಾಮೆಂದು ಸಿನ್ಹಾ ರಾಯ್ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಅಯೋಧ್ಯೆಯ ರಾಮಮಂದಿರ ಅಪವಿತ್ರ ಪ್ರದೇಶ.. ಹಿಂದೂಗಳ್ಯಾರು ಅಲ್ಲಿ ಹೋಗಿ ಪೂಜಿಸಬಾರದು ಎಂದು ನಾಲಗೆ ಹರಿಬಿಟ್ಟಿದ್ದಾರೆ.
ಮೈತ್ರಿಕೂಟದ ಪಕ್ಷಗಳು 2024ರ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಸಾಧ್ಯವಾದಷ್ಟು ಒಟ್ಟಿಗೆ ಸ್ಪರ್ಧಿಸುವುದಾಗಿ ಹೇಳಿವೆ ಎಂದರಲ್ಲದೇ, ಕೆಲವು ರಾಜ್ಯಗಳಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಫೋಟಗೊಳ್ಳುತ್ತಿದೆ ಅನ್ನೋದು ಊಹಾಪೋಹ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಭಾರತ ದೇಶವು ಕವಲು ದಾರಿಯಲ್ಲಿ ಸಾಗುತ್ತಿದೆ. ಅನೇಕ ಆಂತರಿಕ ಸವಾಲುಗಳನ್ನ ಎದುರಿಸುತ್ತಿದೆ. ಇದಕ್ಕೆ ಮಣಿಪುರದಲ್ಲಿ ಇನ್ನೂ ಹೆಚ್ಚಿನ ಉದ್ವಿಗ್ನತೆ ಸೃಷ್ಟಿಯಾಗುತ್ತಿರುವುದೇ ಸಾಕ್ಷಿಯಾಗಿದೆ. ಮೋದಿ ಸರ್ಕಾರ ಮಣಿಪುರದ ಬೆಂಕಿ ಹರಿಯಾಣದ ನುಹ್ ಜಿಲ್ಲೆಯವರೆಗೆ ತಲುಪೋದಕ್ಕೆ ಅವಕಾಶ ಮಾಡಿಕೊಟ್ಟಿತು. ಇಂತಹ ಘಟನೆಗಳು ಆಧುನಿಕ, ಪ್ರತಿಪರ ಹಾಗೂ ಜಾತ್ಯತೀತ ರಾಷ್ಟ್ರದ ಗೌರವಕ್ಕೆ ಕಳಂಕ ತರುತ್ತಿವೆ ಎಂದು ಕಿಡಿ ಕಾರಿದ್ದಾರೆ.
ದೇಶದ ಆರ್ಥಿಕತೆಯು ಅಪಾಯದಲ್ಲಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದೆ. ಈ ನಡುವೆ ಚೀನಾದ ಅತಿಕ್ರಮಗಳ ಮೇಲೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿದ್ದು, ದೇಶದ ಭದ್ರತೆಗೂ ಅಪಾಯವನ್ನುಂಟು ಮಾಡುವ ಸನ್ನಿವೇಶ ತಂದೊಡ್ಡಿದೆ. ಆದರೆ ಕೇಂದ್ರ ಅಮೃತಕಾಲ್ ಹಾಗೂ 3ನೇ ಅತಿದೊಡ್ಡ ಆರ್ಥಿಕ ದೇಶ ಎಂಬ ಖಾಲಿ ಘೋಷಣೆಗಳನ್ನ ಮಾಡುತ್ತ ನೈಜ ಸಮಸ್ಯೆಗಳಿಂದ ಗಮನವನ್ನ ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇನ್ನೂ 3 ಡಿಸಿಎಂ ಬೇಕು ಅಂತ ರಾಜಣ್ಣ ಕೇಳೋದ್ರಲ್ಲಿ ಏನು ತಪ್ಪಿದೆ: ಜಿ.ಪರಮೇಶ್ವರ್ ಪ್ರಶ್ನೆ
ಇದೇ ವೇಳೆ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ವಿಧಾನಸಭಾ ಚುನಾವಣೆ ಮತ್ತು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗಳ ಸಿದ್ಧತೆ ಬಗ್ಗೆಯೂ ಚರ್ಚಿಸಲಾಯಿತು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಕೇಂದ್ರ ಸಚಿವರಾದ ಪಿ. ಚಿದಂಬರಂ ಮತ್ತು ಜೈರಾಮ್ ರಮೇಶ್, ಶಶಿ ತರೂರ್, ಸಚಿನ್ ಪೈಲಟ್, ಗೌರವ್ ಗೊಗೊಯ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಹಾಜರಿದ್ದರು.
ಭೋಪಾಲ್: ಸ್ವಾಮಿ ವಿವೇಕಾನಂದ ಮತ್ತು ಲೋಕಮಾನ್ಯ ತಿಲಕರಿಗೆ ಸ್ಫೂರ್ತಿ ನೀಡಿದ ಸನಾತನ ಧರ್ಮವನ್ನು ಈ ಇಂಡಿಯಾ ಮೈತ್ರಿಕೂಟದ (INDIA Alliance) ಜನರು ಅಳಿಸಿ ಹಾಕಲು ಬಯಸುತ್ತಿದ್ದಾರೆ. ಈ ಒಕ್ಕೂಟವು ಸನಾತನ ಧರ್ಮವನ್ನು (Sanatan Dharma Row) ನಾಶ ಮಾಡಲು ಬಯಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಒಕ್ಕೂಟದ ನಾಯಕರು ಬಹಿರಂಗವಾಗಿ ಸನಾತನ ಧರ್ಮವನ್ನು ಗುರಿಯಾಗಿಸಲು ಆರಂಭಿಸಿದ್ದಾರೆ. ನಾಳೆ ನಮ್ಮ ಮೇಲೆ ದಾಳಿಯನ್ನು ಹೆಚ್ಚಿಸುತ್ತಾರೆ. ದೇಶದಾದ್ಯಂತ ಎಲ್ಲಾ ಸನಾತನಿಗಳು ಮತ್ತು ನಮ್ಮ ದೇಶವನ್ನು ಪ್ರೀತಿಸುವ ಜನರು ಎಚ್ಚೆತ್ತುಕೊಳ್ಳಬೇಕು. ಅಂತಹವರನ್ನು ನಾವು ತಡೆಯಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಸನಾತನ ಧರ್ಮದ ವಿರುದ್ಧ ಹೇಳಿಕೆ ನಿಲ್ಲಿಸಿ, ಬಿಜೆಪಿ ಭ್ರಷ್ಟಚಾರದ ಬಗ್ಗೆ ಮಾತನಾಡಿ: ಕಾರ್ಯಕರ್ತರಿಗೆ ಸ್ಟಾಲಿನ್ ಸಲಹೆ
INDIA ಒಕ್ಕೂಟಕ್ಕೆ INDI ಎಂದು ಕರೆದ ಪ್ರಧಾನಿ ಮೋದಿ, INDI ಒಕ್ಕೂಟಕ್ಕೆ ನಾಯಕರಿಲ್ಲ. ಭಾರತದ ಸಂಸ್ಕೃತಿಯ ಮೇಲೆ ದಾಳಿ ಮಾಡಲು ಗುಪ್ತ ಕಾರ್ಯಸೂಚಿಯನ್ನು ಮಾಡಿದೆ. ಸನಾತನ ಸಂಸ್ಕೃತಿಯನ್ನು ಕೊನೆಗೊಳಿಸುವ ನಿರ್ಣಯದೊಂದಿಗೆ ಮೈತ್ರಿ ಅನುಷ್ಠಾನಕ್ಕೆ ಬಂದಿದೆ. ದೇಶ ಮತ್ತು ಸಮಾಜವನ್ನು ವಿಭಜನೆ ಮಾಡುವ ಕೆಲಸ ಮಾಡ್ತಿದೆ. ಭಾರತದ ಸಂಸ್ಕೃತಿ ಮೇಲೆ ದಾಳಿ ಮಾಡುವ ಕುತಂತ್ರ ಮಾಡಿದೆ. ಸಾವಿರಾರು ವರ್ಷಗಳ ನಂಬಿಕೆ ಮುಗಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಈ ತಿಂಗಳ ಆರಂಭದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸಿದ್ದರು. ಈ ಹೇಳಿಕೆ ಬೆನ್ನಲ್ಲೇ ಡಿಎಂಕೆ ನಾಯಕ, ಲೋಕಸಭಾ ಸಂಸದ ಮತ್ತು ಕೇಂದ್ರ ಮಾಜಿ ಸಚಿವ ಎ. ರಾಜಾ ಸನಾತನ ಧರ್ಮವನ್ನು ಕುಷ್ಠರೋಗ ಮತ್ತು ಹೆಚ್‌ಐವಿಯಂತಹ ಕಾಯಿಲೆಗಳಿಗೆ ಹೋಲಿಸಿದ್ದರು.
ಕೋಲಾರ: ಸನಾತನ ಧರ್ಮದ ವಿರುದ್ಧ ಮಾತಾಡಿದರೆ ಪಾಕಿಸ್ತಾನದ ಪರ ಇರುವವರು ಮತ ಕೊಡುತ್ತಾರೆ ಎಂಬ ಉದ್ದೇಶದಿಂದ ಉದಯನಿಧಿ ಸ್ಟಾಲಿನ್ (Udhayanidhi Stalin) ಮಾತಾಡಿದ್ದಾರೆ ಎಂದು ಸಂಸದ ಮುನಿಸ್ವಾಮಿ (Muniswamy) ವಾಗ್ದಾಳಿ ನಡೆಸಿದ್ದಾರೆ.
ಬಂಗಾರಪೇಟೆಯ ರೈಲ್ವೆ ನಿಲ್ದಾಣದಲ್ಲಿ ಎಕ್ಸಿಲೇಟರ್ ಲೋಕಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಬಿಜೆಪಿ ಹಿಂದೂಪರ ಇದೆ. ಆದರೆ ಐ.ಎನ್.ಡಿ.ಐ.ಎ (I.N.D.I.A) ಒಕ್ಕೂಟ ಪಾಕಿಸ್ತಾನದ ಪರ ಸಾಗುತ್ತಿದೆ. ಭಾರತದಲ್ಲಿ 800 ವರ್ಷ ಆಳ್ವಿಕೆ ನಡೆಸಿದ ಮಹಮ್ಮದ್ ಘಜ್ನಿಯಿಂದ ಸಹ ಹಿಂದೂ ಧರ್ಮ ನಾಶ ಮಾಡಲು ಸಾಧ್ಯವಾಗಿಲ್ಲ. ಅಧರ್ಮ ಅಳಿಸಲು ಶ್ರೀಕೃಷ್ಣನ ಅವತಾರದಂತೆ ನರೇಂದ್ರ ಮೋದಿಯವರು ದೇಶದಲ್ಲಿ ಇದ್ದಾರೆ. ಆಲಿಬಾಬಾ 40 ಕಳ್ಳರ ತಂಡದ ಐ.ಎನ್.ಡಿ.ಐ.ಎ ಒಕ್ಕೂಟದ ಅಂತ್ಯಕಾಲ ಸಮೀಪದಲ್ಲೇ ಇದೇ ಎಂದಿದ್ದಾರೆ. ಇದನ್ನೂ ಓದಿ: ‘INDIA’ ಬಗ್ಗೆ ಭಯ ಬಂದು ಹೆಸರು ಬದಲಾವಣೆ: ಡಿಕೆಶಿ ಲೇವಡಿ
ರಿಪಬ್ಲಿಕ್ ಆಫ್ ಇಂಡಿಯಾ ಹೆಸರನ್ನು ರಿಪಬ್ಲಿಕ್ ಆಫ್ ಭಾರತ ಮಾಡುವ ವಿಚಾರವಾಗಿ, ಮೊದಲು ಈಸ್ಟ್ ಇಂಡಿಯಾ ಕಂಪನಿ ಎಂದು ನಾಮಕರಣ ಮಾಡಿಕೊಂಡಿದ್ದರು. ಈಗ ಭಾರತ ಎಂದರೆ ಇಡೀ ವಿಶ್ವಕ್ಕೆ ಗೊತ್ತಿದೆ. ಭಾರತ ಎಂದರೆ ಹಿಂದೂಸ್ತಾನ, ಇತಿಹಾಸ ಇರುವಂತಹ ದೇಶ. ಈ ಕೆಲಸಕ್ಕೆ ಬಾರದವರು ಯುಪಿಎ ಸರ್ಕಾರ ಇದ್ದಾಗ ಯುಪಿಎ1, ಯುಪಿಎ2 ಎಂದು ಮಾಡಿಕೊಂಡು ಭ್ರಷ್ಟಾಚಾರ ಮಾಡಿದ್ದರು. ಅದನ್ನು ತೊಳೆದುಕೊಳ್ಳುವ ನಿಟ್ಟಿನಲ್ಲಿ ಹೊಸ ಹೆಸರು ಐ.ಎನ್.ಡಿ.ಐ.ಎ ಎಂದು ಇಟ್ಟುಕೊಂಡಿದ್ದಾರೆ. ಭಾರತ ಎಂದರೆ ವಿರೋಧ ಮಾಡುವವರು ಯಾರೂ ಇಲ್ಲ. ಹೀಗಾಗಿ ಮರುನಾಮಕರಣ ಮಾಡಲು ನಮ್ಮ ಒಪ್ಪಿಗೆ ಇದೆ ಎಂದಿದ್ದಾರೆ.
ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಸ್ತಾಪಿಸಿರುವ `ಒಂದು ರಾಷ್ಟ್ರ, ಒಂದು ಚುನಾವಣೆ’ (One Nation One Election) ಪರಿಕಲ್ಪನೆಗೆ ಐಎನ್‌ಡಿಐಎ (INDIA) ಮೈತ್ರಿಕೂಟ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ನಡುವೆ ಚುನಾವಣಾ ಚಾಣಕ್ಯ, ರಾಜಕೀಯ ತಂತ್ರಗಾರ ಎಂದೇ ಹೆಸರಾಗಿರುವ ಪ್ರಶಾಂತ್ ಕಿಶೋರ್ (Prashant Kishor) ಈ ಪರಿಕಲ್ಪನೆಯ ಉದ್ದೇಶ ಒಳ್ಳೆಯದಾಗಿದ್ದರೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
#WATCH | On ‘One Nation, One Election’, Prashant Kishor says, “If this is done with the correct intentions and there be a transition phase of 4-5 years, then it is in the interest of the country. This was once in effect in the country for 17-18 years. Secondly, in a country as… pic.twitter.com/beTAZqf0Gl
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಶಾಂತ್ ಕಿಶೋರ್, ಈ ಹಿಂದೆಯೂ ಇಂತಹ ಚುನಾವಣಾ ಪದ್ಧತಿ ದೇಶದಲ್ಲಿ ಜಾರಿಯಲ್ಲಿತ್ತು. ಏಕಕಾಲದಲ್ಲಿ ಚುನಾವಣೆ ನಡೆದರೆ ಸಮಯ ಮತ್ತು ಹಣ ಉಳಿತಾಯವಾಗುತ್ತದೆ. ಜೊತೆಗೆ 5 ವರ್ಷದ ಅಧಿಕಾರವಧಿಯಲ್ಲಿ ಸರ್ಕಾರ ಪದೇ-ಪದೇ ಚುನಾವಣೆಗಳನ್ನ (Elections) ಎದುರಿಸುವ ಗೋಜಲು ತಪ್ಪಿಸಬಹುದು ಎಂದು ಸಲಹೆ ಕೊಟ್ಟಿದ್ದಾರೆ.
ಒಂದು ರಾಷ್ಟ್ರ ಒಂದು ಚುನಾವಣೆ ಪರಿಕಲ್ಪನೆ ಭಾರತದಂತಹ ದೊಡ್ಡ ದೇಶದಲ್ಲಿ ಅನುಷ್ಠಾನಕ್ಕೆ ತರಲು ಸಾಧ್ಯವೇ ಎಂಬುದನ್ನ ಗಮನಿಸಬೇಕು. ಏಕೆಂದರೆ ದೇಶದಲ್ಲಿ ಪ್ರತಿ ವರ್ಷ 25% ಜನರು ಚುನಾವಣೆಯಲ್ಲಿ ಮತದಾನ ಮಾಡುತ್ತಲೇ ಇರುತ್ತಾರೆ. ಸರ್ಕಾರಗಳು ಕೂಡ 5 ವರ್ಷದಲ್ಲಿ ಹಲವು ಬಾರಿ ಚುನಾವಣೆಗಳನ್ನ ಎದುರಿಸುತ್ತವೆ. ಇದರ ಬದಲಿಗೆ 1 ಅಥವಾ 2 ಬಾರಿ ಚುನಾವಣೆ ನಡೆಸಿದರೆ ಉತ್ತಮ. ಇದು ವೆಚ್ಚ ತಗ್ಗಿಸುವುದರ ಜೊತೆಗೆ ಜನರು ಒಂದೇ ಬಾರಿಗೆ ಯಾವ ಸರ್ಕಾರ ಬೇಕೆಂಬುದನ್ನು ನಿರ್ಧರಿಸಲು ಅವಕಾಶ ಸಿಗಲಿದೆ. ಈ ಪರಿಕಲ್ಪನೆ ಒಳ್ಳೆಯ ಉದ್ದೇಶ ಹೊಂದಿದ್ದರೆ ಅಥವಾ 4-5 ವರ್ಷಗಳ ಪರಿವರ್ತನೆಯ ಹಂತವಿದ್ದರೆ ಅದು ದೇಶಕ್ಕೆ ಹಿತಾಸಕ್ತಿಯಾಗುತ್ತದೆ. ಈ ಬಗ್ಗೆ ಜನರೇ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ರಾತ್ರೋ ರಾತ್ರಿ ಬದಲಾವಣೆ ತರಲು ಪ್ರಯತ್ನಿಸಿದರೆ ಸಮಸ್ಯೆಗಳೂ ಉಂಟಾಗುತ್ತವೆ ಎಂದು ಎಚ್ಚರಿಸಿದ್ದಾರೆ.
ಏಕಾಏಕಿ ಪರಿವರ್ತನೆ ತರಲು ಸಾಧ್ಯವಿಲ್ಲ. ಇದರಿಂದ ಸಮಸ್ಯೆಗಳೇ ಹೆಚ್ಚಾಗುತ್ತವೆ. ಸರ್ಕಾರ ಒಂದೇ ಬಾರಿಗೆ ಚುನಾವಣೆ ನಡೆಸುವ ಮಸೂದೆ ತರುತ್ತಿದೆ. ಅದು ಮೊದಲು ಜಾರಿಗೆ ಬರಲಿ. ಇದನ್ನು ಸರ್ಕಾರ ಒಳ್ಳೆಯ ಉದ್ದೇಶದಿಂದ ತಂದಿದ್ದೇ ಆದಲ್ಲಿ, ದೇಶಕ್ಕೆ ಒಳಿತಾಗುತ್ತದೆ ಎಂದರೆ ಬೆಂಬಲ ನೀಡೋಣ. ಆದರೆ ಸರ್ಕಾರವು ಯಾವ ಉದ್ದೇಶದಿಂದ ಅದನ್ನ ತರುತ್ತಿದೆ ಎಂಬುದರ ಮೇಲೆ ಪ್ರತಿಕ್ರಿಯೆ ಅವಲಂಬಿತವಾಗಿರುತ್ತದೆ ಎಂದು ಹೇಳಿದ್ದಾರೆ.
ಒಂದು ರಾಷ್ಟ್ರ-ಒಂದು ಚುನಾವಣೆ ಪರಿಕಲ್ಪನೆಗೆ ಐಎನ್‌ಡಿಐಎ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಹಲವು ನಾಯಕರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಈ ನಡುವೆ ಪ್ರಶಾಂತ್ ಕಿಶೋರ್ ಅವರ ಹೇಳಿಕೆಯು ಅಚ್ಚರಿ ಉಂಟುಮಾಡಿದೆ.
ಏನಿದು ಒನ್ ನೇಷನ್, ಒನ್ ಎಲೆಕ್ಷನ್?
ಹಲವಾರು ಅಚ್ಚರಿ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಈಗ ‘ಒಂದು ದೇಶ, ಒಂದು ಚುನಾವಣೆ’ ನಡೆಸಲು ಮುಂದಾಗಿದೆ ಎಂಬ ಪ್ರಶ್ನೆ ಎದ್ದಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದಕ್ಕೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದು ಕರೆಯಲಾಗುತ್ತದೆ. ಇದು 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆಯ ಭಾಗವಾಗಿರುವ ಹಿನ್ನೆಲೆಯಲ್ಲಿ ಈ ವಿಶೇಷ ಅಧಿವೇಶನದ ಬಗ್ಗೆ ನಿರೀಕ್ಷೆ ಈಗ ಹೆಚ್ಚಾಗಿದೆ.
1967 ರವರೆಗೆ ಭಾರತದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿತ್ತು. ನಾಲ್ಕು ಚುನಾವಣೆಗಳು ಈ ರೀತಿ ನಡೆದಿದ್ದವು. 1968-69ರಲ್ಲಿ ಕೆಲವು ರಾಜ್ಯಗಳ ವಿಧಾನಸಭೆ ಅಕಾಲಿಕವಾಗಿ ವಿಸರ್ಜಿಸಲ್ಪಟ್ಟ ನಂತರ ಈ ಪದ್ಧತಿ ಸ್ಥಗಿತವಾಗಿದೆ. ಲೋಕಸಭೆಯು ಮೊದಲ ಬಾರಿಗೆ 1970 ರಲ್ಲಿ ನಿಗದಿತ ಅವಧಿಗಿಂತ ಒಂದು ವರ್ಷ ಮುಂಚಿತವಾಗಿ ವಿಸರ್ಜನೆಯಾಗಿತ್ತು ಮತ್ತು 1971 ರಲ್ಲಿ ಮಧ್ಯಂತರ ಚುನಾವಣೆಗಳು ನಡೆದಿತ್ತು. ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಸಾಕಾರಗೊಳಿಸಲು ಸಾಂವಿಧಾನಿಕ ತಿದ್ದುಪಡಿ ಮತ್ತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.
ಬೆಂಗಳೂರು: ಸನಾತನ ಧರ್ಮದ ಬಗ್ಗೆ ಮಾತನಾಡಿ ತುಷ್ಟೀಕರಣ ರಾಜಕೀಯ ಮಾಡುವುದು ಐಎನ್‌ಡಿಐಎ (INDIA) ಒಕ್ಕೂಟದ ಉದ್ದೇಶ ಎಂದು ಮಾಜಿ ಸಿಎಂ ಬೊಮ್ಮಾಯಿ (Basavaraj Bommai) ಉದಯ್ ಸ್ಟಾಲಿನ್ (Udhayanidhi Stalin) ಮತ್ತು ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯ್ ಸ್ಟಾಲಿನ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಉದಯ್ ಸ್ಟಾಲಿನ್ ಹೇಳಿಕೆ ನೋಡಿದ್ದೇನೆ. ಸನಾತನ ಧರ್ಮದ ಬಗ್ಗೆ ಅವರ ಹೇಳಿಕೆ ಅವರ ಮನಸ್ಥಿತಿ ತೋರಿಸುತ್ತದೆ. ಸನಾತನ ಧರ್ಮದ ಬಗ್ಗೆ ಅವರು ಹೀಗೆ ಮಾತಾಡಿದ್ದು ಸರಿಯಲ್ಲ. ಸನಾತನ ಧರ್ಮ ಸರ್ವ ಜನ ಸುಖಿನೋ ಭವಂತು ಅನ್ನೋ ಮೂಲ ತತ್ವ ಒಳಗೊಂಡಿದೆ. ಸಕಲ ಜೀವಿಗಳಿಗೆ ಒಳ್ಳೆಯದು ಆಗಲಿ ಅನ್ನೋದು ಸನಾತನ ಧರ್ಮದ ಮೂಲ. ಇದನ್ನು ಅವರು ಜಾತಿಗೆ ಹೋಲಿಸಿ, ಸನಾತನ ಧರ್ಮ ಕಿತ್ತು ಹಾಕಬೇಕು ಅಂತ ಹೇಳಿದ್ದಾರೆ. ಇದು ಹಿಟ್ಲರ್ ಮೈಂಡ್‌ಸೆಟ್ ಎಂದು ಕಿಡಿಕಾರಿದರು.
ಈ ಹೇಳಿಕೆ ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ. ಪ್ರಜಾಪ್ರಭುತ್ವದಲ್ಲಿ, ಸಂವಿಧಾನ ಪ್ರಕಾರವಾಗಿ ಯಾವುದೇ ಧರ್ಮ ವಿರೋಧ ಮಾಡುವ ಹಾಗೆ ಇಲ್ಲ. ಒಬ್ಬ ಸಚಿವನಾಗಿ ಹೀಗೆ ಮಾತಾಡೋದು ಸರಿಯಲ್ಲ. ಅವರನ್ನು ಕೂಡಲೇ ಸಚಿವ ಸ್ಥಾನದಿಂದ ತೆಗೆದುಹಾಕಬೇಕು ಎಂದು ಬೊಮ್ಮಾಯಿ ಆಗ್ರಹಿಸಿದರು. ಇದನ್ನೂ ಓದಿ: ನಿಮಗೆ ತಾಕತ್, ಧಮ್ ಇದ್ರೆ ಇಸ್ಲಾಂ ಧರ್ಮದ ಬಗ್ಗೆ ಮಾತಾಡಿ: ಆಂದೋಲ ಶ್ರೀ
ಇಂಡಿಯಾ ಒಕ್ಕೂಟದ ಬಗ್ಗೆ ಕಿಡಿಕಾರಿದ ಅವರು, ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳಿಗೂ ಸ್ಪಷ್ಟತೆ ಇಲ್ಲ. ಭಾರತ ದೇಶದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಅಕ್ಕಪಕ್ಕ ಅನೇಕ ದೇಶಗಳು ಹುಟ್ಟಿಕೊಂಡಿವೆ. ಬೇರೆ ದೇಶಗಳಲ್ಲಿ ಧರ್ಮ ಸಂಘರ್ಷ ಇದೆ. ಆದರೆ ನಮ್ಮಲ್ಲಿ ಇಲ್ಲ. ಎಲ್ಲಾ ಧರ್ಮಗಳಿಗೂ ನಮ್ಮಲ್ಲಿ ಅವಕಾಶ ಇದೆ. ಇಂಡಿಯಾ ಒಕ್ಕೂಟ ಅಧಿಕಾರ ಹಿಡಿಯುವ ಸಲುವಾಗಿ ದೇಶದ ಅಖಂಡತೆ, ಏಕತೆ ಹಾಳಾದರೂ ಪರವಾಗಿಲ್ಲ ಅಂತ ಇದ್ದಾರೆ ಎಂದು ಕಿಡಿಕಾರಿದರು.
ಸಮಾನತೆಯ ಸಾಮರಸ್ಯದ ಸಮಾಜವನ್ನು ಕದಡಿ ತುಷ್ಟೀಕರಣ ರಾಜಕೀಯ ಮಾಡುವ ಸಲುವಾಗಿ, ಅಧಿಕಾರ ಹಿಡಿಯುವ ಕೆಲಸ ಮಾಡಲು ಮುಂದಾಗಿದ್ದಾರೆ. ಇಂತಹವರನ್ನು ಸಪೋರ್ಟ್ ಮಾಡುತ್ತಾರೆ. ಇಂತಹ ಹೇಳಿಕೆ ಕೊಡುತ್ತಿದ್ದಾರೆ. ಭಾರತದ ಜನ ಇಂತಹದ್ದನ್ನು ಹಿಂದೆಲ್ಲಾ ನೋಡಿದ್ದಾರೆ. ಇದಕ್ಕೆಲ್ಲ ನಮ್ಮ ಜನ ಅವಕಾಶ ಕೊಡಲ್ಲ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ಇನ್ನೂ ಬಚ್ಚ – ಮುತಾಲಿಕ್ ಕಿಡಿ
ಬೆಂಗಳೂರು: ಐಎನ್‌ಡಿಐಎ (INDIA) ಒಕ್ಕೂಟದವರು ಎಷ್ಟೇ ಪ್ರಯತ್ನ ಪಟ್ಟರೂ, ಏನೇ ಮುಖವಾಡ ಧರಿಸಿದರೂ ಅವರ ರಾಷ್ಟ್ರವಿರೋಧಿ ಮಾನಸಿಕತೆ ಉದಯನಿಧಿ ಸ್ಟಾಲಿನ್ (Uday Stalin) ಮೂಲಕ ಬಹಿರಂಗವಾಗಿದೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಕಿಡಿ ಕಾರಿದ್ದಾರೆ.
ಸಹಸ್ರಾರು ವರ್ಷಗಳಿಂದ ಈ ರಾಷ್ಟ್ರದ ಬುನಾದಿಯಾಗಿರುವ ನಮ್ಮ ಸನಾತನ ಸಂಸ್ಕೃತಿಯನ್ನು ನಿರ್ಮೂಲನೆ ಮಾಡುತ್ತಾರಂತೆ. ಸನಾತನ ಧರ್ಮವನ್ನು ಅಳಿಸುವ ಪ್ರಯತ್ನ ಕಳೆದ 1 ಸಾವಿರ ವರ್ಷದಿಂದಲೂ ನಡೆಯುತ್ತಲೇ ಬಂದಿದೆ. ಉದಯ್ ಸ್ಟಾಲಿನ್ ರ ಈ ಮಾತು ಅದೇ ವಿಕೃತ ಮನಸ್ಥಿತಿಯನ್ನು ದರ್ಶಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ (Social Media) ಬರೆದುಕೊಂಡಿದ್ದಾರೆ.
ಸಹಸ್ರಾರು ವರ್ಷಗಳಿಂದ ಈ ರಾಷ್ಟ್ರದ ಬುನಾದಿಯಾಗಿರುವ ನಮ್ಮ ಸನಾತನ ಸಂಸ್ಕೃತಿಯನ್ನು ನಿರ್ಮೂಲನೆ ಮಾಡುತ್ತಾರಂತೆ !!
ಸನಾತನ ಧರ್ಮವನ್ನು ಅಳಿಸುವ ಪ್ರಯತ್ನ ಕಳೆದ 1 ಸಾವಿರ ವರ್ಷದಿಂದಲೂ ನಡೆಯುತ್ತಲೇ ಬಂದಿದೆ.
ಉದಯ್ ಸ್ಟಾಲಿನ್ ರ ಈ ಮಾತು ಅದೇ ವಿಕೃತ ಮನಸ್ಥಿತಿಯನ್ನು ದರ್ಶಿಸುತ್ತದೆ.
ಸನಾತನನ ಧರ್ಮವು (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (M.K.Stalin) ಅವರ ಪುತ್ರ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ನಾಐಕರು ಮುಗಿಬಿದ್ದು ಟೀಕಿಸುತ್ತಿದ್ದಾರೆ.
ಹಾಸನ: ಐಎನ್‌ಡಿಐಎ (INDIA) ಸದಸ್ಯರು ದಿನಕ್ಕೊಂದು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಚುನಾವಣೆಗೆ ಇನ್ನೂ 7-8 ತಿಂಗಳು ಸಮಯವಿದೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Deve Gowda) ಅಸಮಾಧಾನ ಹೊರಹಾಕಿದ್ದಾರೆ.
ಅವಧಿ ಪೂರ್ವ ಲೋಕಸಭಾ ಚುನಾವಣೆ (Lok Sabha Election) ನಡೆಸಲು ಬಿಜೆಪಿ ಪ್ಲ್ಯಾನ್ ಮಾಡಿದೆ ಎಂಬ ಮಮತಾ ಬ್ಯಾನರ್ಜಿ ಹೇಳಿಕೆ ವಿಚಾರವಾಗಿ ಐಎನ್‌ಡಿಐಎ ಮೈತ್ರಿ ಕೂಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹೆಚ್‌ಡಿಡಿ, ಮುಂಬೈಯಲ್ಲಿ 28 ಗುಂಪಿನ ಒಂದು ದೊಡ್ಡ ಮಹಾಸಭೆ ನಡೆಯಿತು. ಆಗಸ್ಟ್ 30 ರೊಳಗೆ ಎಲ್ಲಾ ಸೀಟ್ ನಿಗದಿ ಮಾಡುತ್ತೇವೆ ಎಂದು ಹೇಳಿದರು, ಏನಾಯ್ತು? ಒಂದು ಕಮಿಟಿ ಮಾಡಿದ್ದಾರೆ. ಅದರ ಲೀಡರ್ ಯಾರು? ಪ್ರಧಾನಮಂತ್ರಿ ಅಭ್ಯರ್ಥಿ ಯಾರೆಂದು ಹೇಳಿದ್ದಾರಾ? ಅಥವಾ ಒಕ್ಕೂಟದ ಸಂಚಾಲಕರು ಯಾರೆಂದು ಹೇಳಿದ್ದಾರಾ ಎಂದು ಪ್ರಶ್ನಿಸಿದರು.
ಒಂದು ಕಮಿಟಿ ಮಾಡಿದ್ದಾರೆ, ಆ ಕಮಿಟಿಯವರು ಕಾಮನ್ ಮಿನಿಮಮ್ ಪ್ರೋಗ್ರಾಂ ಮಾಡಬೇಕು. 2 ದಿನ ಮುಂಬೈನಲ್ಲಿ ಮೀಟಿಂಗ್ ನಡೆಯಿತು. ಚುನಾವಣೆಗೆ ಇನ್ನೂ 7-8 ತಿಂಗಳು ಇದೆ. ನೋಡೋಣ ಬನ್ನಿ ನಾನು ಬದುಕಿದ್ದೇನೆ ಎಂದು ನುಡಿದರು.
ಕಾವೇರಿ ನೀರಿನ ವಿವಾದದ ಬಗ್ಗೆ ಮಾತನಾಡಿದ ಅವರು, ಕಾವೇರಿ ನೀರಿನ ವಿಷಯದಲ್ಲಿ ನಾನು ನಿಮ್ಮ ಮುಂದೆ ಏನು ಹೇಳಲು ಶಕ್ತಿಯಿಲ್ಲ. ಕುಮಾರಸ್ವಾಮಿ ಸಿದ್ದರಾಮಯ್ಯ ಅವರು ಕರೆದ ಸಭೆಯಲ್ಲಿ ಮಾತನಾಡಿದ್ದಾರೆ. ಅದರ ಸಾರಾಂಶವನ್ನು ಎಲ್ಲಾ ಹೇಳಿದ್ದಾರೆ. ಒಂದು ಕಡೆ ಸುಪ್ರೀಂ ಕೋರ್ಟ್‌ನಲ್ಲಿ ತೀರ್ಮಾನ ಕೊಡಲಿಲ್ಲ. ಇನ್ನೊಂದು ಕಡೆ ಪ್ರಾಧಿಕಾರವು ತೀರ್ಮಾನ ಮಾಡಿಲ್ಲ. ಈ ಹಂತದಲ್ಲಿ ಮಂಡ್ಯದಲ್ಲಿ ಹೋರಾಟ ನಡೆಯುತ್ತಿದೆ. ನಾನು ಹೇಳಬೇಕಿರುವುದು ನನ್ನ ಜವಾಬ್ದಾರಿ. ನಾನು ಮಾತನಾಡುವ ಟೈಂ ಇನ್ನು ಬರಬೇಕು. ಟೈಂ ಬಂದಾಗ ನಾನು ಮಾತನಾಡುತ್ತೇನೆ. ಪ್ರಧಾನಮಂತ್ರಿಗಳ ಬಳಿ ನಾನೇ ಹೋಗಬೇಕು ಎನ್ನುವ ಸನ್ನಿವೇಶ ಬಂದಾಗ ನಾನೇ ಹೋಗುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: 5 ಬಾರಿ ಮರುಜನ್ಮ ಪಡೆದಿದ್ದೇನೆ, ನನ್ನ ಜೀವನದ ಬಗ್ಗೆ ಕನಿಕರದಿಂದ ನೋಡಿ: ಹೆಚ್‌ಡಿಕೆ ರಿಯಾಕ್ಷನ್
ತವರು ಜಿಲ್ಲೆಯಲ್ಲಿ ಟೆಂಪಲ್ ರನ್ ಮುಂದುವರಿಸಿದ ಮಾಜಿ ಪ್ರಧಾನಿ ಭಾನುವಾರ ಬೆಳಗ್ಗೆ ಪತ್ನಿ ಚೆನ್ನಮ್ಮ ಜೊತೆ ಹುಟ್ಟೂರು ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಹಾಸನ ತಾಲೂಕಿನ ಬೈಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಲಕ್ಷ್ಮಿ ಜನಾರ್ದನಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವೇಗೌಡ ದಂಪತಿಗೆ ಶಾಸಕ ಹೆಚ್‌ಪಿ ಸ್ವರೂಪ್ ಪ್ರಕಾಶ್ ಕೂಡಾ ಸಾಥ್ ನೀಡಿದ್ದಾರೆ.
ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನ ಅಸಿಂಧು ಎಂದು ತೀರ್ಪು ಬಂದ ದಿನದಿಂದ ಮಾಜಿ ಪ್ರಧಾನಿ ತವರು ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ತಮ್ಮ ಕುಟುಂಬದ ಎಲ್ಲಾ ಸದಸ್ಯರ ಹೆಸರಿನಲ್ಲಿ ಪೂಜೆ ಸಲ್ಲಿಸಿದ್ದಾರೆ. ದೊಡ್ಡಗೌಡರು 46 ಜನ ಕುಟುಂಬ ಸದಸ್ಯರ ಹೆಸರಿನಲ್ಲಿ ಪೂಜೆ ಸಲ್ಲಿಸಿದ್ದಾರೆ. ಪೂಜೆಗೂ ಮುನ್ನ ಅರ್ಚನೆಗಾಗಿ 46 ಜನರ ಹೆಸರಿನ ಪಟ್ಟಿ ಕೊಟ್ಟಿದ್ದಾರೆ. ಕೆಲವರ ಹೆಸರನ್ನು ತಾವೇ ಖುದ್ದು ಹೇಳಿ ಬಳಿಕ ಎಲ್ಲರ ಪಟ್ಟಿ ಕೊಟ್ಟಿದ್ದಾರೆ. ಕುಟುಂಬ ಸದಸ್ಯರ ಶ್ರೇಯಸ್ಸಿಗಾಗಿ ವಿಶೇಷ ಪೂಜೆ ನಡೆಸಿದ್ದಾರೆ. ಇದನ್ನೂ ಓದಿ: ಆರೋಗ್ಯದಲ್ಲಿ ಏರುಪೇರು – ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ನವದೆಹಲಿ: ಮುಂಬೈನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ‘INDIA’ ಸಭೆಗೆ ಮುನ್ನ ಬಿಜೆಪಿ ಇಂದು ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಅರ್ನಾಲ್ಡ್ ಶ್ವಾರ್ಜಿನೆಗ್ಗರ್ ಅಭಿನಯದ ‘ಟರ್ಮಿನೇಟರ್’ ಸಿನಿಮಾ ಫ್ರಾಂಚೈಸ್‌ನ ಕಾಲ್ಪನಿಕ ಸೈಬೋರ್ಗ್ ಪಾತ್ರ ಎಂದು ಬಿಂಬಿಸಿದೆ. ಪೋಸ್ಟರ್ ಅನ್ನು ಅವರ ಪ್ರಸಿದ್ಧ ಸಂಭಾಷಣೆಗೆ ಹೋಲಿಸಿ ಟ್ರೆಂಡ್ ಸೃಷ್ಟಿಸಿದೆ.
Opposition thinks PM Modi can be defeated. Dream on! The Terminator always wins. pic.twitter.com/IY3fYWMzbL
ʻ2024! ನಾನು ಮರಳಿ ಬರುತ್ತೇನೆ!ʼಎಂದು ಪೋಸ್ಟರ್ ಮೇಲೆ ಬರೆಯಲಾಗಿದೆ. ಈ ಮೂಲಕ 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಒಗ್ಗಟ್ಟಿನ ಹೋರಾಟ ನಡೆಸುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡುವ ಪ್ರಯತ್ನವನ್ನು ಬಿಜೆಪಿ ಮಾಡಿದೆ.
ಬಿಜೆಪಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಪೋಸ್ಟರ್‌ನ ಹಂಚಿಕೊಳ್ಳಲಾಗಿದೆ. ಪ್ರಧಾನಿ ಮೋದಿಯನ್ನು ಸೋಲಿಸಬಹುದು ಎಂದು ಪ್ರತಿಪಕ್ಷಗಳು ಭಾವಿಸುತ್ತಿವೆ. ಕನಸು ಕಾಣಿ! ಟರ್ಮಿನೇಟರ್ (Terminator) ಯಾವಾಗಲೂ ಗೆಲ್ಲುತ್ತಾನೆ’ ಎಂದು ಶೀರ್ಷಿಕೆಯನ್ನೂ ನೀಡಿದ್ದಾರೆ.
ಮುಂಬೈನಲ್ಲಿ ‘ಐಎನ್‌ಡಿಐಎ’ ಸಭೆ:
2024ರ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆಗಳು ಶುರುವಾಗಿವೆ. ತಾಲೀಮು ನಡೆಯುತ್ತಿದೆ. ಪ್ರತಿಪಕ್ಷ ‘ಭಾರತ’ ಬಣಗಳು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ಕಾರ್ಯತಂತ್ರದ ಸಭೆಗಳನ್ನು ನಡೆಸಲಿವೆ.