ಬೆಂಗಳೂರು: ನಗರದಲ್ಲಿ ಮಳೆಯ ಆರ್ಭಟ (Heavy Rain) ಮುಂದುವರಿದಿದೆ. ಶನಿವಾರ ರಾತ್ರಿ ಸುರಿದ ಮಳೆಗೆ 49 ಪ್ರದೇಶಗಳಲ್ಲಿ ಮಳೆಹಾನಿಯಾಗಿದೆ. 49 ಪ್ರದೇಶಗಳ ಪೈಕಿ 3ಕ್ಕೂ ಹೆಚ್ಚು ಪ್ರದೇಶಗಳಲ್ಲಿ 100ಕ್ಕೂ ಹೆಚ್ಚು ಮಿಲಿ ಮೀಟರ್ ಮಳೆಯಾಗಿದೆ. ಬಸವೇಶ್ವರ ನಗರದಲ್ಲಿ 109.50 ಮಿಮೀ, ನಾಗಪುರದಲ್ಲಿ 104 ಮಿಮೀ ಹಾಗೂ ಹಂಪಿನಗರದಲ್ಲಿ 102 ಮಿಮೀ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ರಾತ್ರಿ 9:45 ಗಂಟೆ ಬಳಿಕ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಿದೆ.
ಹಲವೆಡೆ ಅನಾಹುತ:
ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಭಾರೀ ಅನಾಹುತವನ್ನುಂಟು ಮಾಡಿದೆ. ನಗರದ ಬಿನ್ನಿಪೇಟೆಯಲ್ಲಿ ಕಾಂಪೌಡ್ ಕುಸಿದಿದ್ದು, ಹತ್ತಾರು ಗಾಡಿಗಳು ಜಖಂಗೊಂಡಿವೆ. 45 ಮನೆಗಳಿಗೆ ನೀರು ನುಗ್ಗಿದೆ.ಕಾಂಪೌಡ್ ಕುಸಿತ ಪರಿಣಾಮ 16 ಮನೆಗಳಿಗೆ ಜಲದಿಗ್ಭಂಧನ ಉಂಟಾಗಿದೆ. ಇದನ್ನೂ ಓದಿ: ಛತ್ತೀಸ್‌ಗಢ ಎನ್‌ಕೌಂಟರ್| 35 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಟ್ರಾಫಿಕ್ ಜಾಮ್ ಸಮಸ್ಯೆ:
ಒಂದಡೆ ಮಳೆ.. ಮತ್ತೊಂದಡೆ ಟ್ರಾಫಿಕ್ ಜಾಮ್… ಸಮಸ್ಯೆ ಏಕಕಾಲಕ್ಕೆ ಸಂಭವಿಸಿತ್ತು. ಬಳ್ಳಾರಿ ರಸ್ತೆ ಮಾರ್ಗ ಮಳೆಯಿಂದಾಗಿ ಸ್ಥಬ್ದವಾಗಿತ್ತು. ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರ ಪರಿಸ್ಥಿತಿ ಹೇಳತೀರದಾಗಿತ್ತು.
ಬೆಂಗಳೂರು: ಕಳೆದ 2-3 ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೆ ಮಳೆಯ ಆರ್ಭಟ (Heavy Rain) ಮುಂದುವರಿದಿದೆ. ಮಾರ್ಕೆಟ್, ಮೆಜೆಸ್ಟಿಕ್, ಮಲ್ಲೇಶ್ವರ, ಯಶವಂತಪುರ, ಎಲೆಕ್ಟ್ರಾನಿಕ್ ಸಿಟಿ, ಮಹದೇವಪುರ ವಲಯಗಳಲ್ಲಿ ಭಾರೀ ಮಳೆಯಾಗ್ತಿದೆ.
ಶನಿವಾರವೂ ವಿವಿಧೆಡೆ ಸುರಿದ ಮಳೆಗೆ ಬೆಂಗಳೂರು ತತ್ತರಿಸಿಹೋಗಿದೆ. ಮಳೆಯ ಹೊಡೆತಕ್ಕೆ ರಸ್ತೆ ಮೇಲೆಲ್ಲಾ ನೀರು ನಿಂತಿತ್ತು. ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ರಸ್ತೆ ತುಂಬೆಲ್ಲಾ ನೀರು ನಿಂತಿತ್ತು. ವಾಹನ ಸವಾರರು ಗಂಟೆಗಟ್ಟಲೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ವೀಕೆಂಡ್ ಮೂಡ್‌ನಲ್ಲಿದ್ದ ಜನರಿಗೆ ಮಳೆ ಎಫೆಕ್ಟ್ ತಟ್ಟಿದೆ. ಹಲವಡೆ ಸಂಜೆ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಹವಾಮಾನ ಇಲಾಖೆ ಅಕ್ಟೋಬರ್ ಮೊದಲ ವಾರದಲ್ಲೇ ಮಳೆ ಎಚ್ಚರಿಕೆ ನೀಡಿತ್ತು. ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಜೋರು ಮಳೆ ಆಗಿದೆ.
ಎಲೆಕ್ಟ್ರಾನಿಕ್ ಸಿಟಿ ಮತ್ತೆ ಜಲಾವೃತ:
ಬೆಂಗಳೂರಿನಲ್ಲಿ ಸುರಿದ ಸಣ್ಣ ಮಳೆಗೆ ಎಲೆಕ್ಟ್ರಾನಿಕ್ ಸಿಟಿ ಅಕ್ಷರಶಃ ತತ್ತರಿಸಿದೆ, ಐಟಿ ಬಿಟಿ ಮಂದಿ ಪರದಾಡುವ ಪರಿಸ್ಥಿತಿಯೂ ನಿರ್ಮಾಣವಾಗಿತ್ತು. ಹೊಸೂರು ಬೆಂಗಳೂರು ಮುಖ್ಯರಸ್ತೆಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸುಮಾರು ಅರ್ಧ ಕಿಮೀ ರಸ್ತೆ ವರೆಗೆ ಮಳೆ ನೀರು ತುಂಬಿಕೊಂಡಿತ್ತು. ಪುರಭವನ, ಬಿಬಿಎಂಪಿ ಸರ್ಕಲ್, ಕೆ.ಆರ್ ಮಾರ್ಕೇಟ್, ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಮಳೆಯಾಗಿದ್ದು, ರಸ್ತೆಗಳು ಕೆರೆಯಂತಾಗಿರುವ ವಾತಾವರಣ ಕಂಡುಬಂದಿತು. ಇದನ್ನೂ ಓದಿ: ಉತ್ತರ ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ – ಹಮಾಸ್ ಟಾಪ್ ಕಮಾಂಡರ್ ಹತ್ಯೆ
ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಟಿತ ITBT ಕಂಪನಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಆತಂಕ ಸೃಷ್ಟಿಸಿದೆ.
ಹೌದು. ಬೆಂಗಳೂರಿನ ಇಕೋ ಸ್ಪೇಸ್‌ನ IBDO ಅನ್ನೋ ಕಂಪನಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಕರೆ ಬಂದಿದೆ.
ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದು, ನಿಮ್ಮ ಕಂಪನಿಯಲ್ಲಿ ಬಾಂಬ್ ಇಟ್ಟಿದ್ದೀವಿ, ಸ್ವಲ್ಪ ಸಮಯದಲ್ಲೇ ಬ್ಲಾಸ್ಟ್ ಆಗುತ್ತೆ ಅಂತಾ ಹೆದರಿಸಿದ್ದಾನೆ.
ಕೂಡಲೇ ಕಂಪನಿಯಿಂದ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಬೆಳ್ಳಂದೂರು ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಐಎಸ್‌ಡಿ ಅಧಿಕಾರಿಗಳ ತಂಡವೂ ಸ್ಥಳಕ್ಕೆ ಧಾವಿಸಿದ್ದು, ತಪಾಸಣೆ ನಡೆಸಲಾಗಿದೆ. ಇದನ್ನೂ ಓದಿ:ಖ್ಯಾತ ಕಥೆಗಾರ ಟಿ.ಕೆ. ದಯಾನಂದ್ ಬರೆದ ಕಥೆಯೇ ‘ಟೋಬಿ’ ಸಿನಿಮಾ
ಹಳೆ ಉದ್ಯೋಗಿಯಿಂದಲೇ ಬೆದರಿಕೆ ಕರೆ: ಬೆಂಗಳೂರಿನ ಇಕೋ ಸ್ಪೇಸ್‌ನ IBDO ಅನ್ನೋ ಕಂಪನಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಕಂಪನಿಯ ಹಳೆ ಉದ್ಯೋಗಿಯಿಂದಲೇ ಅನ್ನೋದು ಗೊತ್ತಾಗಿದೆ. ಕೆಲವೇ ದಿನಗಳ ಹಿಂದೆ ಕೆಲಸ ಬಿಟ್ಟಿದ್ದ ವ್ಯಕ್ತಿಯಿಂದ ಹುಸಿ ಬಾಂಬ್ ಕರೆ ಮಾಡಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಪೊಲೀಸರು ಕಂಪೆನಿಯ ಮಾಜಿ ಉದ್ಯೋಗಿಗಾಗಿ ಹುಡುಕಾಟ ನಡೆಸಿದ್ದಾರೆ.
ಬೆಂಗಳೂರು: ಕೊರೊನಾ (Corona) ಕಾರಣಕ್ಕೆ ಬಿಎಂಟಿಸಿಯ ವೋಲ್ವೋ ಬಸ್‌ಗಳ (BMTC Volvo Bus) ದರವನ್ನು ಶೇ.34 ರಷ್ಟು ಕಡಿಮೆ ಮಾಡಿದ್ದ ಬಿಎಂಟಿಸಿ ಮತ್ತೆ ಹಳೆಯ ದರವನ್ನು ಜಾರಿಗೆ ತಂದಿದೆ.
ಕೊರೊನಾ ಸಮಯದಲ್ಲಿ ಐಟಿಬಿಟಿ (ITBT) ಸೆಕ್ಟರ್ ಕಡೆ ಹೆಚ್ಚು ಸಂಚಾರ ಮಾಡುತ್ತಿದ್ದ ವೋಲ್ವೋ ಬಸ್ ಗಳನ್ನ ಬೇರೆ ಬೇರೆ ಮಾರ್ಗಗಳಿಗೆ ಬಿಎಂಸಿಟಿ ನಿಯೋಜನೆ ಮಾಡಿತ್ತು. ಸಾರ್ವಜನಿಕರ ಹಿತಾಸಕ್ತಿಯಿಂದ ಶೇ.34 ರಷ್ಟು ದರವನ್ನ ಕಡಿಮೆ ಮಾಡಿ ಪ್ರಯಾಣಿಕರನ್ನ ವೋಲ್ವೋ ಬಸ್ ಗಳ ಕಡೆ ಸೆಳೆಯುವ ಕೆಲಸ ಮಾಡಿತ್ತು. ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಹೆಸ್ರು ಕೈತಪ್ಪಿದ್ಯಾ? – ನೀವೇ ಪರಿಶೀಲನೆ ಮಾಡಿ
ಬೆಂಗಳೂರು: ರಾಜ್ಯದಲ್ಲಿ 6 ಹೊಸ ನಗರಗಳ (New Cities) ನಿರ್ಮಾಣ ಮಾಡಲಾಗುತ್ತಿದೆ. ಕಲಬುರಗಿ, ಹುಬ್ಬಳ್ಳಿ (Hubballi) ಧಾರವಾಡ, ಮೈಸೂರು (Mysuru), ಮಂಗಳೂರು ಸುತ್ತ ಹೊಸ ನಗರಗಳು ಬರಲಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Bengaluru is very unique and special city with a rich legacy of great rulers, The Wodeyers, Mysore Maharajas, who were greatest pioneers of Science & Technology, education, empowerment of women & industrialization.#BengaluruTechSummitpic.twitter.com/W3FrDdJI04
ರಾಜ್ಯದಲ್ಲಿ 6 ಹೊಸ ನಗರಗಳ ನಿರ್ಮಾಣ ಮಾಡಲಾಗುತ್ತಿದೆ. ಕಲಬುರಗಿ, ಹುಬ್ಬಳ್ಳಿ ಧಾರವಾಡ, ಮೈಸೂರು, ಮಂಗಳೂರು ಸುತ್ತ ಹೊಸ ನಗರಗಳು ಬರಲಿವೆ. ಬೆಂಗಳೂರಿನ ಪಕ್ಕ ಹೊಸ ನಗರ ನಿರ್ಮಾಣ ಮಾಡಲಾಗುತ್ತದೆ. ಜ್ಞಾನ, ವಿಜ್ಞಾನ ಹಾಗೂ ಟೆಕ್ ಸಿಟಿ (Tech City) ನಿರ್ಮಾಣ ಮಾಡಲಾಗುತ್ತಿದ್ದು, ಇದು ವಿಮಾನ ನಿಲ್ದಾಣಕ್ಕೆ ಹತ್ತಿರವಿರಲಿದೆ. 6 ತಿಂಗಳೊಳಗೆ ಈ ನಗರ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಿದ್ದು, ಯೋಜನೆಯನ್ನು ರೂಪಿಸಲಾಗುವುದು. ಸ್ಟಾರ್ಟ್ ಅಪ್‌ಗಳನ್ನು (Startups) ಪ್ರೋತ್ಸಾಹಿಸಲು ಅನೇಕ ಕಾರ್ಯಕ್ರಮಗಳಿದ್ದು, ಸರ್ಕಾರದ (Government) ವತಿಯಿಂದ ಇನ್ನಷ್ಟು ಕಾರ್ಯಕ್ರಮ ರೂಪಿಸಬೇಕಿದೆ. ಸ್ಟಾರ್ಟ್ ಅಪ್ ಪಾರ್ಕ್ ನಿರ್ಮಾಣಕ್ಕೆ ತೀರ್ಮಾನಿಸಿದ್ದು ಇದೂ ಕೂಡ 6 ತಿಂಗಳಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು ಟೆಕ್ ಸಮ್ಮಿಟ್ ನ ರಜತ ಮಹೋತ್ಸವದ ತಮ್ಮ ಭಾಷಣವನ್ನು ಕನ್ನಡದಲ್ಲಿ ಆರಂಭಿಸಿ, ಕನ್ನಡ ನಾಡಿನ ಹಿರಿಮೆಯನ್ನು ಸಾರಿದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಸಮಸ್ತ ಕರುನಾಡಿನ ಪರವಾಗಿ ಧನ್ಯವಾದಗಳು.@narendramodi#BengaluruTeckSummitpic.twitter.com/KA7g27AAyN
ಸೃಜನಶೀಲತೆ ಹಲವಾರು ಆಯಾಮಗಳನ್ನು ಒಳಗೊಂಡಿದೆ. ನಾವು ಜಾಗತಿಕವಾಗಿ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಜಗತ್ತು ಸಮಸ್ಯೆಗಳಿಂದ ಮುಳುಗುತ್ತಿದೆ. ಹಣಕಾಸು ಮೂಲಗಳು ಪ್ರತಿ ಕ್ಷಣವೂ ಇಳಿಮುಖವಾಗುತ್ತಿದೆ. ನಾವು ಪರಿಹಾರ ಕಂಡುಕೊಳ್ಳದಿದ್ದರೆ ಭವಿಷ್ಯದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಉದ್ಯಮಿಗಳು ಆವಿಷ್ಕಾರ ಮಾಡುವುದರ ಜೊತೆಗೆ ಅಭಿವೃದ್ದಿಗೆ ಪೂರಕವಾದ ಕೆಲಸ ಮಾಡಿ ಸರ್ಕಾರಕ್ಕೂ ಆದಾಯ ತರುವ ಕೆಲಸ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು. ಇದನ್ನೂ ಓದಿ: ಬೆಂಗಳೂರು ತಂತ್ರಜ್ಞಾನ, ನಾವೀನ್ಯತೆ, ನಾಯಕತ್ವದ ತವರು: ಮೋದಿ
The greatest creator since time immemorial is none other than the God almighty, our own creator. His greatest creation is human beings. Hence our responsibility is to make the world a better place to live in eternally.#BengaluruTechSummitpic.twitter.com/1b65HW2Wjw
ನಮ್ಮ ಪೂರ್ವಜರು ವ್ಯವಸ್ಥಿತ ಜೀವನ ಮಾಡುತ್ತಿದ್ದರು. ನಾವು ನಮ್ಮ ಮಕ್ಕಳಿಗೂ ಉತ್ತಮ ಭವಿಷ್ಯ ನೀಡಬೇಕು. ಭವಿಷ್ಯದಿಂದ ಕಳ್ಳತನ ಮಾಡಬಾರದು. ಭವಿಷ್ಯಕ್ಕಾಗಿ ಭೂಮಿಯನ್ನು ಉಳಿಸಬೇಕು. ಭೂಮಿಯನ್ನು ಉಳಿಸುವ ನಿಟ್ಟಿನಲ್ಲಿ ಜಾಗತಿಕವಾಗಿ ಚಿಂತನೆ ಅಗತ್ಯ. ಯಾವುದೇ ತಂತ್ರಜ್ಞಾನ ಬಂದರೂ ಈ ಪರಿಸರ ಉಳಿಸುವ ಗುಣ ಹೊಂದಿರಬೇಕು. ಡಿಜಿಟಲ್ ಅಂತರ ಕಡಿಮೆ ಮಾಡುವತ್ತಲೂ ನಾವು ಗಮನಹರಿಸಬೇಕು. ಪರಿಸರ ಸ್ನೇಹಿ ವಾತಾವರಣ ಹೊಂದಬೇಕು ಎಂದು ಹತ್ತು ಹಲವು ಸಲಹೆ ನೀಡಿದರು.
This #BengaluruTechSummit must focus more on health sector. This is the right time to think about the malnutrition of child & mother. Working on this, our Hon’ble PM Modiji ensured 7 core households are connected with pure drinking water within one year. pic.twitter.com/695UoW0QPW
ಪರಿಸರ ಸ್ನೇಹಿ ತಂತ್ರಜ್ಞಾನ, ನಾವೀನ್ಯತೆ ಹಾಗೂ ಇಕೋ ಇಕನಾಮಿಕ್ಸ್ ಅನ್ನು ಸಾಧ್ಯವಾಗಿಸಬೇಕು. ಐಟಿ ಬಿಟಿ, ಕೃತಕ ಬುದ್ಧಿಮತ್ತೆ ನಮ್ಮ ಸಂಪನ್ಮೂಲಗಳನ್ನು ಉಳಿಸಿ ರಕ್ಷಣೆ ಮಾಡುವ ಸಾಧ್ಯತೆ ಇದೆ. ಮನುಕುಲಕ್ಕೆ ಯಾವುದು ಅನುಕೂಲವಾಗುತ್ತದೆ ಅನ್ನೊದನ್ನ ನೀವರ ಪರೀಕ್ಷಿಸಬೇಕು. ತಂತ್ರಜ್ಞಾನ ಮಾಹಿತಿಯ ಕಣಜವನ್ನೇ ನಮ್ಮ ಮುಂದಿರಿಸಿದೆ. ನವೀಕರಿಸಬಹುದಾದ ಇಂಧನ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು.
ಮೈಸೂರು ಮಹಾರಾಜರು ವಿಜ್ಞಾನ ತಂತ್ರಜ್ಞಾನಕ್ಕೆ, ಶಿಕ್ಷಣಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಂತರ ಉದ್ಯಮಕ್ಕೆ ಆದ್ಯತೆ ನೀಡಿದ್ದಾರೆ. ಈಗ ಐಟಿ, ಬಿಟಿ ಬಂದಿದೆ. ಬೆಂಗಳೂರಿಗೆ ಬಂದವರು ಐಟಿ-ಬಿಟಿ ಕಂಪನಿಗಳಿಗೆ ಭೇಟಿ ನೀಡುತ್ತಾರೆ. ಮೊದಲು ಸಂಪತ್ತು ಉಳ್ಳವರ ಕಾಲವಿತ್ತು. ಈಗ ಜ್ಞಾನ ಇರುವವರ ಕಾಲ. ಬೆಂಗಳೂರಿಗೆ ಪ್ರತಿದಿನ 5,000ಕ್ಕೂ ಹೆಚ್ಚು ಇಂಜಿನಿಯರ್‌ಗಳು ಬಂದು ಹೋಗುತ್ತಾರೆ. 400 ಆರ್ ಆಂಡ್ ಡಿ ಸೆಂಟರ್ ಇವೆ. ಬಿಯಾಂಡ್ ಬೆಂಗಳೂರು ಸಾಕಾರಗೊಳಿಸಲು ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದರು.
ಮೈಸೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಕಡೆಗಳಲ್ಲಿ ಐಟಿ ಉದ್ಯಮಕ್ಕೆ ಆದ್ಯತೆ ನೀಡುತ್ತೇವೆ. ಮುಂದಿನ 10 ವರ್ಷದಲ್ಲಿ ನಗರೀಕರಣ ಹೆಚ್ಚಳವಾಗಲಿದೆ. ಭಾರತದಲ್ಲಿ ಶೇ.40 ರಷ್ಟು ನಗರೀಕರಣವಾಗಲಿದೆ. ಹೀಗಾಗಿ ಐಟಿ-ಬಿಟಿ ಕಂಪನಿಗಳು ಸರಳ ನಗರೀಕರಣ ಜೀವನ ನಿರ್ವಹಣೆಗೆ ತಂತ್ರಜ್ಞಾನ ಅಭಿವೃದ್ದಿ ಪಡಿಸಬೇಕು ಎಂದು ಕರೆ ನೀಡಿದರು.
ಆರೋಗ್ಯ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕು. ದೇಶದಲ್ಲಿ ಒಂದು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 7 ಕೋಟಿ ಮನೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತಿದೆ. ನಮ್ಮ ಪ್ರಧಾನಿಗಳು ಬಿಐಎಎಲ್‌ನ 2 ನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಜಗತ್ತಿನಲ್ಲಿಯೇ ಅತ್ಯಂತ ಸುಂದರವಾದ ಟರ್ಮಿನಲ್ ಇದಾಗಿದೆ. ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯವಿದೆ. ತಂತ್ರಜ್ಞಾನಗಳೆಲ್ಲವೂ ವಿಶ್ವದ ಭವಿಷ್ಯಕ್ಕೆ ಮಾನವ ಅಭಿವೃದ್ಧಿ ಸಮಾವೇಶದ ಧ್ಯೇಯವಾಗಲಿ ಎಂದು ಶ್ಲಾಘಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜಕಾಲುವೆ (Rajkaluve) ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಕಟ್ಟಡ, ಮನೆ ಕಟ್ಟಿರುವವರು, ಜೊತೆಗೆ ಯಾರು ಕಾಲುವೆ ನೀರನ್ನು ಹರಿಸಲು ತೊಂದರೆ ಮಾಡಿದ್ದಾರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೆಲವರು ರಾಜಕಾಲುವೆಯನ್ನು (Rajkaluve) ಮುಚ್ಚಿದ್ದಾರೆ. ಮಳೆ ನೀರು ಚರಂಡಿಗೆ ಅಡ್ಡಿಯಾಗಿದ್ದರೆ, ಅವುಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ತೆರವಿಗೆ ನೋಟಿಸ್ ಕೊಡುವ ಅಗತ್ಯವಿಲ್ಲ: ಅಶೋಕ್
ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ (Court) ದಾಖಲಾಗಿ ನಿರ್ದೇಶನ ಪಡೆಯಲಾಗಿದೆ. ನ್ಯಾಯಾಲಯದಲ್ಲಿಯೂ ಗಂಭೀರವಾಗಿ ಇವುಗಳ ಬಗ್ಗೆ ಮಾಹಿತಿ ನೀಡಲಾಗುವುದು. ನ್ಯಾಯಾಲಯವೂ ಪ್ರವಾಹದ ಪ್ರಕರಣದಲ್ಲಿ ನಿರ್ದೇಶನಗಳನ್ನು ನೀಡಿದೆ. ಈ ಬಾರಿ ದೊಡ್ಡ ಪ್ರಮಾಣದಲ್ಲಿ ಅತಿಕ್ರಮಣ ತೆರೆವುಗೊಳಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಪಿಎಸ್‌ಐ ನೇಮಕಾತಿ: ಪಿಎಸ್‌ಐ (PSI) ಅಕ್ರಮ ನೇಮಕಾತಿ ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕರು ಮಾತನಾಡಿರುವ ವೀಡಿಯೊ (Video) ಬಿಡುಗಡೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆಡಿಯೋನೋ, ವೀಡಿಯೋನೋ ಗೊತ್ತಿಲ್ಲ. ಅದನ್ನು ಪರಿಶೀಲಿಸಲಾಗುವುದು. ಹಾಗೇನಾದರೂ ತಪ್ಪು ಕಂಡುಬಂದಲ್ಲಿ ತನಿಖೆಗೆ ಆದೇಶಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕಳೆದ ವಾರ ಸುರಿದ ಮಳೆಯಿಂದ `ಬ್ರ್ಯಾಂಡ್ ಬೆಂಗಳೂರು’ ಹೆಸರು ಸಹ ನೀರಿನಲ್ಲಿ ಕೊಚ್ಚಿ ಹೋಗ್ತಿದೆ. ಐಟಿ-ಬಿಟಿ ಸಿಟಿ ಎಂದೇ ಹೆಸರಾದ ಬೆಂಗಳೂರಿಗೆ ಐಟಿ ಕಂಪನಿಗಳು ವಲಸೆ ಎಚ್ಚರಿಕೆ ನೀಡಿ ಶಾಕ್ ಕೊಟ್ಟಿವೆ.
ಹೌದು. ಬೆಂಗಳೂರು ಅಂದ್ರೆ ಐಟಿ-ಬಿಟಿ ಹಬ್ ಎಂದೇ ಖ್ಯಾತಿ. ಆದರೀಗ ಒಂದು ದಿನದ ಮಳೆಗೆ ಬ್ರಾ÷್ಯಂಡ್ ಬೆಂಗಳೂರು ಹೆಸರೇ ಬರ್ಬಾದ್ ಆಗ್ತಿದ್ದು, ಬೆಂಗಳೂರಿನಿಂದ ಐಟಿ ಕಂಪನಿಗಳು ವಲಸೆ ಹೋಗುವ ಎಚ್ಚರಿಕೆ ನೀಡಿವೆ. ಹೊರವರ್ತುಲ ರಸ್ತೆ ಕಂಪನಿಗಳ ಅಸೋಸಿಯೇಷನ್ ಖುದ್ದು ಈ ಬಗ್ಗೆ ಸಿಎಂಗೆ ಪತ್ರ ಬರೆದಿದೆ. ಇದನ್ನೂ ಓದಿ: ಅನಧಿಕೃತ ಖಾಸಗಿ ಶಾಲೆಗಳ ತೆರವಿಗೆ ಕ್ರಮ- ಎಲ್ಲ ಶಾಲೆಗಳಿಗೂ ಈ ನಿಯಮ ಕಡ್ಡಾಯ
ಕಳೆದ ವಾರ ಸತತ ಮರ‍್ನಾಲ್ಕು ದಿನ ಸುರಿದ ಮಹಾಮಳೆಗೆ ಐಟಿ ಕಂಪನಿಗಳು ಭಾರೀ ನಷ್ಟ ಅನುಭವಿಸಿವೆ. ಅದ್ರಲ್ಲೂ ಆಗಸ್ಟ್ 30 ರಂದು ಸುರಿದ ಮಳೆಯಿಂದಾಗಿ 5 ಗಂಟೆ ಹೊರವರ್ತುಲದ ರಸ್ತೆಯಲ್ಲಿ ಟೆಕ್ಕಿಗಳು ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ರು. ಐಟಿ ಕಂಪನಿಗಳ ಒಳಭಾಗಕ್ಕೆಲ್ಲಾ ನೀರು ನುಗ್ಗಿತ್ತು. ಇವೆಲ್ಲದರ ಪರಿಣಾಮ 255 ಕೋಟಿ ರೂ ನಷ್ಟವಾಗಿದೆ. ಈ ಹೊರವರ್ತುಲ ರಸ್ತೆಯ ಕಳಪೆ ಕಾಮಗಾರಿ ನಿರ್ವಹಣೆ ಮೂಲ ಸೌಕರ್ಯಗಳ ಕೊರತೆ, ಮಳೆ ಬಂದಾಗ ಆಗುವ ಅವಾಂತರದಿಂದ ಕಂಪನಿಗಳಿಗೆ ಭಾರೀ ನಷ್ಟವಾಗಿದೆ. ಇದನ್ನೂ ಓದಿ: ʻಪೊನ್ನಿಯನ್ ಸೆಲ್ವನ್’ ಚಿತ್ರದ ಗಾಯಕ ಬಂಬಾ ಬಕ್ಯಾ ನಿಧನ
ಸಂಚಾರ ದಟ್ಟಣೆ ನಿರ್ವಹಣೆಗೆ ತೆಗೆದುಕೊಂಡ ಕ್ರಮ ಯಾವುದು? ದೀರ್ಘಕಾಲಿಕ, ತಾತ್ಕಾಲಿಕವಾಗಿ ಯಾವ ರೀತಿಯ ಕ್ರಮಗಳು ಆಗಿದೆ ಅಂತಾ ಪ್ರಶ್ನಿಸಿ ಪತ್ರ ಬರೆದಿದ್ದಾರೆ. ಅಲ್ಲದೇ ಐಟಿ ಕಂಪನಿಗಳು ಅನಿವಾರ್ಯವಾಗಿ ಬೇರೆ ಕಡೆ ವಲಸೆ ಹೋಗಬೇಕಾಗುತ್ತದೆ. ಜೊತೆಗೆ ತಮ್ಮ ಹೂಡಿಕೆಗಳನ್ನು ವಾಪಸ್ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ.
ಈ ಬಗ್ಗೆ ಮಾತನಾಡಿರುವ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಐಟಿ ಕಂಪನಿಯವರು ಪದೇ-ಪದೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಕ್ಕೆ ಬಹುದೊಡ್ಡ ಆದಾಯ ತರುವ ವಲಯವನ್ನ ನಿರ್ಲಕ್ಷ್ಯ ಮಾಡೋದು ಸರಿಯಲ್ಲ. ನಿಮ್ಮ ದುರಾಸೆ ಸಾಕು. ಕಳಪೆ ಕಾಮಗಾರಿಯಿಂದ ಬೆಂಗಳೂರಿಗೆ ಸಾಕಾಗಿದೆ ಅಂತಾ ಅಸಮಾಧಾನ ಹೊರಹಾಕಿದ್ದಾರೆ. ಐಟಿ ಉದ್ಯೋಗಿಗಳು ಕೂಡ ಸರ್ಕಾರದ ಆಕ್ರೋಶ ಹೊರಹಾಕಿದ್ದಾರೆ ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಐಟಿ ಕಂಪನಿಗಳ ಬೇಡಿಕೆಗಳೇನು?
ಕೆ.ಆರ್.ಪುರ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್ ಸುಧಾರಣೆ ಮಾಡಬೇಕು.
ಬಿಎಂಟಿಸಿಯಿಂದ ವೋಲ್ವೋ ಮತ್ತು ವಿದ್ಯುತ್ ಚಾಲಿತ ಬಸ್ ಸೌಲಭ್ಯ ಕಲ್ಪಿಸಬೇಕು.
ರಸ್ತೆ ಬದಿಗಳಲ್ಲಿ ಪಾರ್ಕಿಂಗ್ ನಿಷೇಧಿಸಬೇಕು.
ಪಾದಚಾರಿ ಮಾರ್ಗ ಮತ್ತು ಸೈಕಲ್ ಮಾರ್ಗ ನಿರ್ಮಿಸಬೇಕು.
ಪ್ರತಿ 500 ಮೀಟರ್‌ಗೊಂದು ಪಾದಚಾರಿ ಮೇಲ್ಸೇತುವೆ ನಿರ್ಮಿಸಬೇಕು.
ರಸ್ತೆ, ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಬೇಕು.
ಖಾಸಗಿ ಕಂಪನಿಗಳ ಬಸ್ ನಿಲ್ಲಿಸಲು ಅವಕಾಶ ಮಾಡಿಕೊಡಬೇಕು.
ಸರ್ಕಾರಕ್ಕೆ ನೀಡಿದ ಸಲಹೆಗಳೇನು?
ಐಟಿ ಕಾರಿಡಾರ್‌ನಲ್ಲಿ ಮೂಲಸೌಕರ್ಯ ಒದಗಿಸಿ.
ಟ್ರಾಫಿಕ್ ಸುಧಾರಣೆಗೆ ಅಂಡರ್‌ಪಾಸ್, ಮೇಲ್ಸೇತುವೆ ನಿರ್ಮಾಣ ಮಾಡಬಹುದು.
ಬೆಂಗಳೂರು: ಐಟಿಬಿಟಿ ರಂಗಕ್ಕೂ ಕೃಷಿ ಪ್ರವೇಶಿಸಿರುವುದು ಬಹಳ ದೊಡ್ಡ ಹೆಮ್ಮೆಯ ಸಂಗತಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಜಿಕೆವಿಕೆಯಲ್ಲಿ ಲಘು ಉದ್ಯಮ ಭಾರತ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ “ಟೆಕ್ ಭಾರತ್” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಯ ಮಹತ್ವ ಒಂದಲ್ಲ ಒಂದು ರೀತಿಯಲ್ಲಿ ಎಲ್ಲರಿಗೂ ಅರಿವಾಗುತ್ತಿದೆ. ಕೃಷಿಯಮೂಲ ಇಲ್ಲದಿದ್ದರೆ ಯಾವ ರಂಗವೂ ಇಲ್ಲ ಎಂಬುದು ತಿಳಿಯುತ್ತಿದೆ. ಮೇಕ್ ಇನ್ ಇಂಡಿಯಾ ಅಡಿ ಕೃಷಿ ಕಾರ್ಯಕ್ರಮಗಳು ಕಾರ್ಯಗತಗೊಳಿಸುತ್ತಿದೆ. ದೇಶದಲ್ಲಿ ಮೊದಲನೇ ಹಾಗೂ ಇಡೀ ವಿಶ್ವದಲ್ಲಿ ನಾಲ್ಕನೇ ಸ್ಥಾನದಲ್ಲಿ ನಮ್ಮ ಬೆಂಗಳೂರು ತಂತ್ರಜ್ಞಾನ ವಿಜ್ಞಾನ ಅಭಿವೃದ್ಧಿಯಲ್ಲಿ ಸ್ಥಾನ ಪಡೆದಿರುವುದು ಸಂತಸದ ಸಂಗತಿ ಎಂದರು. ಇದನ್ನೂ ಓದಿ: ಮೀನುಗಾರಿಕೆಗೆ ಬೆಂಬಲ – ಮತ್ಸ್ಯ ಸಿರಿ ಯೋಜನೆ ಆರಂಭ
1912 ರಲ್ಲಿಯೇ ಸರ್.ಎಂ.ವಿಶ್ವೇಶ್ವರಯ್ಯನವರು ನೀರಾವರಿ ಮತ್ತು ಕೈಗಾರಿಕಾಕರಣದಲ್ಲಿ ರೈತರ ಅಭಿವೃದ್ಧಿಯ ಚಿಂತನೆ ಹೊಂದಿದ್ದರು. 2014 ರಿಂದ 2018 ರವರೆಗೆ ದೇಶದಲ್ಲಿ ಸುಮಾರು 50 ಸಾವಿರ ಸ್ಟಾರ್ಟಪ್‍ಗಳು ಹುಟ್ಟಿವೆ. 2019 ಈ ಒಂದು ವರ್ಷದಲ್ಲಿಯೇ 9,300 ಅಗ್ರಿ ಸ್ಟಾರ್ಟಪ್‍ಗಳು ಆರಂಭವಾಗಿದ್ದು, ಅದರಲ್ಲಿ ಕೃಷಿಗಾಗಿಯೇ 474 ಸ್ಟಾರ್ಟಪ್‍ಗಳಾಗಿವೆ. ಇದುವರೆಗೂ ಬೆಂಗಳೂರಿನಲ್ಲಿ 4 ಸಾವಿರ ಸ್ಟಾರ್ಟಪ್‍ಗಳು ತಲೆಯೆತ್ತಿವೆ. ನಮ್ಮ ದೇಶದಲ್ಲಿ ಪ್ರತಿದಿನ 2ರಿಂದ 3 ಸ್ಟಾರ್ಟಪ್‍ಗಳು ಹುಟ್ಟುತ್ತಿವೆ. ಸುಮಾರು 40 ಸಾವಿರ ಉದ್ಯೊಗಗಳು ಸೃಷ್ಟಿಯಾಗುತ್ತಿದೆ ಎಂದರು.
ವಿದ್ಯಾವಂತ ಯುವಕರು ಪಟ್ಟಣದಿಂದ ಹಳ್ಳಿಕಡೆಗೆ ಕೃಷಿ ತಂತ್ರಜ್ಞಾನ ಅಳವಡಿಸಿಕೊಂಡು ಪುನಃ ಮುಖಮಾಡಿದ್ದಾರೆ. ವೃದ್ಧಾಶ್ರಮವಾಗಿದ್ದ ಹಳ್ಳಿಗಳೀಗ ಕೃಷಿಯತ್ತ ಆಸಕ್ತಿಯಿಂದ ಮತ್ತೆ ಕಳೆ ಹೊಂದುತ್ತಿವೆ. 2020-21ರಲ್ಲಿ ಕೋವಿಡ್ ಲಾಕ್-ಡೌನ್ ಸಂದರ್ಭದಲ್ಲಿಯೂ ಕೂಡ ಕರ್ನಾಟಕ 64 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆಯಾಗಿದೆ. ಇದರಲ್ಲಿ ಶೇ. 3 ಭಾಗ ಕರ್ನಾಟಕವೇ ಇಡೀ ದೇಶದಲ್ಲಿ ಆಹಾರ ಉತ್ಪಾದಿಸಿ ಕೊಡುಗೆ ನೀಡಿರುವುದು ಹೆಮ್ಮೆಯ ವಿಚಾರವಾಗಿದೆ. ಆಹಾರ ಸಂಸ್ಕರಣಾ ಘಟಕ ಮತ್ತು ಅಗ್ರಿ ಸ್ಟಾರ್ಟಪ್‍ಗಳಿಗೆ ಆತ್ಮನಿರ್ಭರ ಯೋಜನೆಯಡಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 10 ಸಾವಿರ ಕೋಟಿ ರೂ ಆಹಾರ ಸಂಸ್ಕರಣಾ ಘಟಕಗಳಿಗೆ ಹಾಗೂ 1 ಲಕ್ಷ ಕೋಟಿ ರೂ. ಅಗ್ರಿಕಲ್ಚರ್ ಇನ್ಫಟಾಸ್ಟ್ರ್‍ಕ್ಚರ್ ಗಳಿಗೆ ಇಟ್ಟಿದ್ದಾರೆ. 35% ರಾಜ್ಯ ಸರ್ಕಾರ ಉತ್ತೇಜನ 15 ಲಕ್ಷ ರೂ. ಸಬ್ಸಿಡಿ ಉತ್ತೇಜನ ನೀಡುತ್ತಿದೆ ಎಂದರು. ಇದನ್ನೂ ಓದಿ : ಏಳು ತಿಂಗಳ ಗರ್ಭಿಣಿಗೆ ಇದೆಂಥ ಟಾರ್ಚರ್? : ಶಾಕ್ ನಲ್ಲಿ ನಟಿ ಸಂಜನಾ
ಸರ್ಕಾರಿ ನೌಕರಿ ಮೇಲೆಯೇ ಅವಲಂಬಿತರಾಗದೇ ಯುವಕರು ಸ್ವ ಉದ್ಯೋಗಕ್ಕೆ ಹೆಚ್ಚು ಒತ್ತುಕೊಡಬೇಕು. ಟೀ ಕಾಫಿಯು ಆನ್-ಲೈನ್‍ನಲ್ಲಿ ಮನೆಗೆ ಸಿಗುವಂತಾಗಿದೆ ಎಂದರು.