Tag: ಐಟಿ ಉದ್ಯೋಗಿಗಳು

  • ಐಟಿ ಉದ್ಯೋಗಿಗಳಿಗೆ ಶಾಕಿಂಗ್‌ ಸುದ್ದಿ – 9 ಗಂಟೆಯಲ್ಲ, 14 ಗಂಟೆ ದುಡಿಯಬೇಕು

    ಐಟಿ ಉದ್ಯೋಗಿಗಳಿಗೆ ಶಾಕಿಂಗ್‌ ಸುದ್ದಿ – 9 ಗಂಟೆಯಲ್ಲ, 14 ಗಂಟೆ ದುಡಿಯಬೇಕು

    – ಕಾಯ್ದೆ ತಿದ್ದುಪಡಿಗೆ ಸರ್ಕಾರದಿಂದ ಚಿಂತನೆ

    ಬೆಂಗಳೂರು: ಕರ್ನಾಟಕದ (Karnataka) ಐಟಿ ಉದ್ಯೋಗಿಗಳಿಗೆ (IT Employees) ಬಿಗ್ ಶಾಕಿಂಗ್ ನ್ಯೂಸ್ ಕಾದಿದೆ. ಇನ್ಮುಂದೆ 9 ಗಂಟೆಯಲ್ಲ. ಸರ್ಕಾರ ತಿದ್ದುಪಡಿ ಮಾಡಿ ಕಾಯ್ದೆ ಜಾರಿಗೆ ಬಂದರೆ 14 ಗಂಟೆ ಕೆಲಸ ಮಾಡಬೇಕಾಗಬಹುದು.

    ಕರ್ನಾಟಕ ಶಾಪ್ಸ್ ಕಮರ್ಷಿಯಲ್ ಎಸ್ಟಾಬ್ಲಿಶ್ಮೆಂಟ್ 2024 ಕಾಯ್ದೆಗೆ ತಿದ್ದುಪಡಿ ತಂದು ಜಾರಿಗೆ ತರಲು ಸರ್ಕಾರದ ಮೇಲೆ ಕಂಪನಿಗಳು ಒತ್ತಡ ಹೇರುತ್ತಿವೆ. ಕಾರ್ಮಿಕ ಇಲಾಖೆಯೂ ಕಾನೂನು ಜಾರಿಗೆ ತರಲು ಚಿಂತನೆ ನಡೆಸಿದ್ದು, ಐಟಿ ಕಾರ್ಮಿಕರ ಅಸೋಸಿಯೇಷನ್ ಜೊತೆ ಸಭೆ ನಡೆಸಿದೆ. ಇದನ್ನೂ ಓದಿ: ಭಾರತವನ್ನು ಕಟ್ಟಲು ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು: ನಾರಾಯಣ ಮೂರ್ತಿ

    ಈ ಪ್ರಸ್ತಾವನೆಗೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. 14 ಗಂಟೆ ಕೆಲಸ ಮಾಡುವುದರಿಂದ ಮಾನಸಿಕ ಒತ್ತಡ ಉಂಟಾಗುತ್ತದೆ. ಜೊತೆಗೆ ಅದೇ ಸಂಬಳಕ್ಕೆ ಹೆಚ್ಚು ಸಮಯ ದುಡಿಯಬೇಕು ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

    ಬುಧವಾರ ಐಟಿ ಉದ್ಯೋಗಿಗಳ ಸಭೆ ಕರೆದಿದ್ದು, ಕಾಯ್ದೆ ಜಾರಿಯಾದರೆ ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಲು ಮುಂದಾಗಿದೆ.

    ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಪ್ರತಿಕ್ರಿಯಿಸಿ, ಯಾವುದೋ ಇಂಡಸ್ಟ್ರಿ ಕಡೆಯಿಂದ ಬೇಡಿಕೆ ಬಂದಿದೆ. ಈ ವಿಚಾರಕ್ಕೆ ಪರ-ವಿರೋಧ ಚರ್ಚೆ ಇದ್ದು,ಅಂತಿಮ ತೀರ್ಮಾನ ಮಾಡಬೇಕಿದೆ ಎಂದಿದ್ದಾರೆ.

  • ಐಟಿ ಉದ್ಯೋಗಿಗಳಿಗೆ ಗದ್ದೆಯಲ್ಲಿ ನಾಟಿ ಕಾರ್ಯಾಗಾರ

    ಐಟಿ ಉದ್ಯೋಗಿಗಳಿಗೆ ಗದ್ದೆಯಲ್ಲಿ ನಾಟಿ ಕಾರ್ಯಾಗಾರ

    ಮಡಿಕೇರಿ: ಐಟಿ ಕಂಪನಿ ಉದ್ಯೋಗಿಗಳು ಇಂದು ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

    ಸೋಮವಾರಪೇಟೆ ನಗರದ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಸಮೀಪದ ಕಿರಗಂದೂರು ಗ್ರಾ.ಪಂ. ವ್ಯಾಪ್ತಿಯ ತಾಕೇರಿ ಗ್ರಾಮದಲ್ಲಿ 3ನೇ ವರ್ಷದ ಗದ್ದೆ ನಾಟಿ ಕಾರ್ಯಕ್ರಮ ನಡೆಯಿತು. ಐಟಿ ಕಂಪನಿಯ ಉದ್ಯೋಗಿಗಳು ಸಂತಸದಿಂದ ಭಾಗವಹಿಸಿ ಭತ್ತ ನಾಟಿ ಮಾಡಿದರು. ನಾಟಿ ಮಾಡುವ ಕುರಿತು ಮಾಹಿತಿ ನೀಡುವ ಮೂಲಕ ಕೃಷಿ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸ್ಥಳೀಯವಾಗಿ ವರ್ಕ್ ಫ್ರಂ ಹೋಮ್‍ನಲ್ಲಿರುವ ಐಟಿ ಕಂಪನಿಗಳ ಉದ್ಯೋಗಿಗಳು, ವೈದ್ಯರು, ವಕೀಲರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ತಾಕೇರಿಯ ಜಿ.ಎಂ.ರಾಣಿ ಪಾಪಯ್ಯ ಅವರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಸ್.ಪಿ. ಪೊನ್ನಪ್ಪ, ಹೊರಭಾಗದಲ್ಲಿರುವ ಉದ್ಯೋಗಿಗಳು ಕೃಷಿ ಸಮಯದಲ್ಲಾರೂ ತಮ್ಮ ಗ್ರಾಮಕ್ಕೆ ಬಂದು ಗದ್ದೆ ಕೃಷಿ ಮಾಡಬೇಕು. ಹಾಗಾದಾಗ ಮಾತ್ರ ಕೃಷಿಯ ಬಗ್ಗೆ ಅರಿವು ಹಾಗೂ ಕೃಷಿಯ ಮಹತ್ವದ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ 82 ಲಕ್ಷ ರೂ. ಹವಾಲಾ ಹಣ ಜಪ್ತಿ

    ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಮಾತನಾಡಿ, ಸ್ಥಳೀಯ ಯುವ ಜನಾಂಗ ಕೃಷಿ ಕಾರ್ಯಗಳಲ್ಲಿ ಮನಸು ಮಾಡಿದರೆ ಕಾರ್ಮಿಕರ ಸಮಸ್ಯೆ ದೂರಾಗಲಿದೆ. ಗದ್ದೆ ಕೃಷಿಯ ಬಗ್ಗೆ ಬಹುತೇಕ ಐಟಿ ಉದ್ಯೋಗಿಗಳಿಗೆ ಮಾಹಿತಿ ಇರುವುದಿಲ್ಲ. ಭತ್ತ ಬೆಳೆಯುವ ವಿಧಾನವೂ ತಿಳಿದಿರುವುದಿಲ್ಲ. ಅಂತಹವರಿಗೆ ಗದ್ದೆ ನಾಟಿಯ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

    ಜಿ.ಪಂ. ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಕಾಫಿ ಮಂಡಳಿಯ ಅಧಿಕಾರಿ ಲಕ್ಷ್ಮೀಕಾಂತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಜನವರಿ 8ಕ್ಕೆ ರಾಷ್ಟ್ರವ್ಯಾಪಿ ಮುಷ್ಕರ- ಬೆಂಬಲ ಸೂಚಿಸಿ ಐಟಿ ಉದ್ಯೋಗಿಗಳಿಂದ ಬೈಕ್ ರ‍್ಯಾಲಿ

    ಜನವರಿ 8ಕ್ಕೆ ರಾಷ್ಟ್ರವ್ಯಾಪಿ ಮುಷ್ಕರ- ಬೆಂಬಲ ಸೂಚಿಸಿ ಐಟಿ ಉದ್ಯೋಗಿಗಳಿಂದ ಬೈಕ್ ರ‍್ಯಾಲಿ

    ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಜನವರಿ 8ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ ಸೂಚಿಸಿ ಇಂದು ಮಡಿವಾಳದಿಂದ ಕೋನಪ್ಪನ ಆಗ್ರಹಾರದವರೆಗೂ ನೂರಾರು ಮಂದಿ ಐಟಿ ಉದ್ಯೋಗಿಗಳು ಬೈಕ್ ರ‍್ಯಾಲಿ ನಡೆಸಿದರು.

    ಕೇಂದ್ರ ಸರ್ಕಾರದವು ಕಾರ್ಮಿಕ ವಿರೋಧಿ ನೀತಿ ರೂಪಿಸುತ್ತಿದ್ದು, ಮಲತಾಯಿ ಧೋರಣೆ ತೋರುತ್ತಿದೆ. ಜೊತೆಗೆ ಬಂಡವಾಳಶಾಹಿಗಳ ಪರವಾಗಿ ನೀತಿಗಳನ್ನು ರೂಪಿಸುತ್ತಿದೆ. ಅದನ್ನು ಕೂಡಲೇ ಬದಲಾಯಿಸಬೇಕು, ಕಾರ್ಮಿಕ ನೀತಿಗಳನ್ನು ರೂಪಿಸಬೇಕು ಎಂದು ಒತ್ತಾಯಿಸಲಾಯಿತು. ಇದರ ಜೊತೆಗೆ ಪೌರತ್ವ ತಿದ್ದುಪಡೆ ವಿರುದ್ಧವೂ ಇಂದು ಬೈಕ್ ರ‍್ಯಾಲಿ ಮುಖಾಂತರ ವಿರೋಧವನ್ನು ವ್ಯಕ್ತಪಡಿಸಲಾಯಿತು.

    ಕೇಂದ್ರ ಸರ್ಕಾರ ಕಾರ್ಮಿಕರ ಪರವಾಗಿರುವ ಯೋಜನೆಗಳನ್ನು ರೂಪಿಸಬೇಕು. ಕನಿಷ್ಠ ವೇತನ 21 ಸಾವಿರ ರೂ.ಗಳನ್ನ ಅಸಂಘಟಿತ ವಲಯದ ಕಾರ್ಮಿಕರಿಗೆ ನೀಡುವಂತಾಗಬೇಕು. ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಒತ್ತಾಯಿಸಲಾಯಿತು.

    ಈ ರ‍್ಯಾಲಿಯಲ್ಲಿ ಕರ್ನಾಟಕ ರಾಜ್ಯ ಐಟಿ ಮತ್ತು ಐಟಿಯೇತರ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಹಾಗೂ ಐಟಿ-ಬಿಟಿ ಉದ್ಯೋಗಿಗಳು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಿಐಟಿಯು ರಾಜ್ಯಘಟಕದ ಅಧ್ಯಕ್ಷೆ ವರಲಕ್ಷ್ಮಿ ಅವರು, ಭಾರತ ದೇಶ ಬಹಳ ದೊಡ್ಡ ಮಟ್ಟದ ಅರ್ಥಿಕ ಬಿಕ್ಕಟ್ಟಿನಿಂದ ನರಳುತ್ತಿದೆ. ನಮ್ಮ ದೇಶ ಅರ್ಥಿಕ ಬಿಕ್ಕಟ್ಟಿನಿಂದ ಹೊರಬರಬೇಕಾದರೆ ಕಾರ್ಮಿಕ ನೀತಿಗಳು ಬದಲಾಗಬೇಕಿದೆ. ಕೆಲ ಕಾರ್ಖಾನೆಗಳು ಮುಚ್ಚಿ ಹೋಗುತ್ತಿವೆ. ಪಬ್ಲಿಕ್ ಸೆಕ್ಟರ್ಸ್ ಸಹ ಬಂದ್ ಆಗುತ್ತಿದೆ. ಐಟಿ ಸೆಕ್ಟರ್ಸ್ ರಾತ್ರೋ ರಾತ್ರೋ ಬಂದ್ ಆಗುತ್ತಿವೆ ಎಂದು ಹೇಳಿದರು.

    ದೇಶ ಪ್ರೇಮ ಎನ್ನುವುದು ಹೆಸರಲ್ಲಿ ಕೇಂದ್ರ ಸರ್ಕಾರವು ಜನರಿಗೆ ಮೋಸ ಮಾಡುತ್ತಿದೆ. ನಾವು ವೇತನವಾಗಿ ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಾಗಿದೆ. ಇದರಿಂದಾಗಿ ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ ಎಂದು ಹೇಳಿದರು.