Tag: ಐಟಿ ಕಾಯ್ದೆ

  • ಮಕ್ಕಳ ಮೇಲಿನ ದೌರ್ಜನ್ಯ ದೃಶ್ಯ – ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಖಡಕ್ ಸೂಚನೆ

    ಮಕ್ಕಳ ಮೇಲಿನ ದೌರ್ಜನ್ಯ ದೃಶ್ಯ – ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಖಡಕ್ ಸೂಚನೆ

    ನವದೆಹಲಿ: ಯೂಟ್ಯೂಬ್ (YouTube), ಎಕ್ಸ್ ಸೇರಿದಂತೆ ಎಲ್ಲಾ ಸಾಮಾಜಿಕ ಮಾಧ್ಯಮಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಚಾರಗಳನ್ನು ತೆಗೆದುಹಾಕುವಂತೆ ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೂಚನೆ ನೀಡಿದೆ.

    ಈ ಬಗ್ಗೆ ಅಗತ್ಯ ಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಸಂಸ್ಥೆಗಳು ತೆಗೆದುಕೊಳ್ಳದಿದ್ದಲ್ಲಿ ಐಟಿ ಕಾಯಿದೆಯ (IT Act) ಸೆಕ್ಷನ್ 79ರ ಅಡಿಯಲ್ಲಿ ನೋಟಿಸ್ ನೀಡುವ ಎಚ್ಚರಿಕೆಯನ್ನು ನೀಡಲಾಗಿದೆ. ಅಲ್ಲದೇ ನಿಯಮಗಳನ್ನು ಅನುಸರಿಸದಿರುವುದು ಐಟಿ ಕಾಯ್ದೆ 2021ರ 3(1) (ಬಿ) ಮತ್ತು ನಿಯಮ 4 (4)ರ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಗಾಜಾಪಟ್ಟಿಯಿಂದ 5,000 ರಾಕೆಟ್ ದಾಳಿ – ಯುದ್ಧ ಘೋಷಿಸಿದ ಇಸ್ರೇಲ್

    ಐಟಿ ಕಾಯಿದೆಯ ಸೆಕ್ಷನ್ 66ಇ, 67ಎ ಮತ್ತು 67ರ ಅಡಿಯಲ್ಲಿ ಅಶ್ಲೀಲ ವಿಷಯವನ್ನು ಆನ್‍ಲೈನ್‍ನಲ್ಲಿ ಪ್ರಸಾರ ಮಾಡಿದರೆ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲಾಗುತ್ತದೆ. ಅಲ್ಲದೇ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಂತಹ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದೆ.

    ಅಪ್ರಾಪ್ತ ವಯಸ್ಕರಿಗೆ ಅಪಾಯವನ್ನುಂಟು ಮಾಡುವ ಯಾವುದೇ ರೀತಿಯ ವಿಷಯವನ್ನು ನಾವು ಸಹಿಸುವುದಿಲ್ಲ. ಆನ್‍ಲೈನ್‍ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಯ ವಿರುದ್ಧ ಹೋರಾಡಲು ನಾವು ತಂತ್ರಜ್ಞಾನ ಮತ್ತು ತಂಡಗಳ ಮೇಲೆ ಹೆಚ್ಚು ಹೂಡಿಕೆ ಮಾಡಿದ್ದೇವೆ. ಸಾಧ್ಯವಾದಷ್ಟು ಬೇಗ ಇದರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವಾಲಯ ತಿಳಿಸಿದೆ.

    ಈ ನಿಯಮದ ಉಲ್ಲಂಘನೆಗಾಗಿ ನಾವು 94,000 ಚಾನಲ್‍ಗಳು ಮತ್ತು 20.5 ಲಕ್ಷ ವೀಡಿಯೊಗಳನ್ನು ತೆಗೆದುಹಾಕಿದ್ದೇವೆ. ಅಪ್ರಾಪ್ತ ವಯಸ್ಕರು ಮತ್ತು ಕುಟುಂಬಗಳಿಗೆ ಸಾಧ್ಯವಾದಷ್ಟು ಉತ್ತಮ ರಕ್ಷಣೆಯನ್ನು ಒದಗಿಸಲು ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಯೂಟ್ಯೂಬ್ ವಕ್ತಾರರು ಸಚಿವಾಲಯದ ಸೂಚನೆಗೆ ಪ್ರತಿಕ್ರಿಯಿಸಿದ್ದಾರೆ.

    ಅಕ್ಟೋಬರ್ ಮೊದಲ ಐದು ದಿನಗಳಲ್ಲಿ 8,198 ಗುಂಪುಗಳು ಮತ್ತು ಚಾನೆಲ್‍ಗಳನ್ನು ನಿಷೇಧಿಸಲಾಗಿದೆ ಎಂದು ಟೆಲಿಗ್ರಾಮ್ ವಕ್ತಾರ ರೆಮಿ ವಾಘನ್ ತಿಳಿಸಿದ್ದಾರೆ. ಇದನ್ನೂ ಓದಿ: LAM ರೀಸರ್ಚ್, ಲಿಯೋ ಲ್ಯಾಬ್ಸ್, ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಎಂ.ಬಿ ಪಾಟೀಲ್‌ ಚರ್ಚೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್‍ನಲ್ಲಿ ಅಶ್ಲೀಲ ವೀಡಿಯೋ ಶೇರ್ ಮಾಡಿದ ಶಿಕ್ಷಕನ ಬಂಧನ

    ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್‍ನಲ್ಲಿ ಅಶ್ಲೀಲ ವೀಡಿಯೋ ಶೇರ್ ಮಾಡಿದ ಶಿಕ್ಷಕನ ಬಂಧನ

    ಚೆನ್ನೈ: ಶಾಲಾ ವಿದ್ಯಾರ್ಥಿಗಳ ವಾಟ್ಸಾಪ್ ಗುಂಪಿಗೆ ಅಶ್ಲೀಲ ವೀಡಿಯೋ ಹಂಚಿಕೊಂಡ ಘಟನೆ ಚೆನ್ನೈಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.

    ಅಂಬತ್ತೂರಿನ ಮತ್ತಿವನನ್ ಎಂಬಾತ ಅಶ್ಲೀಲ ವೀಡಿಯೋವನ್ನು ಹಂಚಿಕೊಂಡ ಗಣಿತ ಶಿಕ್ಷಕ. ಕೋವಿಡ್ ಸಾಂಕ್ರಾಮಿಕ ರೋಗದ ಸಮಯದಲ್ಲಿ ಆನ್‍ಲೈನ್ ತರಗತಿಗಳನ್ನು ನಡೆಸಲು ರಚಿಸಲಾದ ವಾಟ್ಸಾಪ್ ಗುಂಪಿನಲ್ಲಿ ಶಿಕ್ಷಕನು 12 ವಿದ್ಯಾರ್ಥಿಗಳಿರುವಂತಹ ಗುಂಪಿನಲ್ಲಿ ಅಶ್ಲೀಲತೆಯ ವಿಷಯವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಶಿವಾಜಿ ಪ್ರತಿಮೆಗೆ ಮಸಿ – ರಣಧೀರ ಪಡೆಯ 7 ಜನರ ಬಂಧನ

    ಮರುದಿನ ಬೆಳಗ್ಗೆ ವಿದ್ಯಾರ್ಥಿಗಳು ಸಂದೇಶವನ್ನು ನೋಡುವ ಸಂದರ್ಭದಲ್ಲಿ ವೀಡಿಯೋವನ್ನು ನೋಡಿ ಅಘಾತಗೊಳಗಾಗಿ ತಕ್ಷಣವೇ ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದರು. ಬಳಿಕ ಅವರನ್ನು ಮಂಡಳಿಯವರು ತನಿಖೆ ನಡೆಸಿದ್ದು ಮದ್ಯ ಸೇವನೆಯ ಅಮಲಿನಲ್ಲಿ ವೀಡಿಯೋ ಹಂಚಿಹೋಗಿದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮತ್ತಿವನನ್‍ನನ್ನು ಪೋಕ್ಸೊ ಮತ್ತು ಐಟಿ ಕಾಯ್ದೆಯ ಅಡಿಯಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

  • ಟ್ವಿಟ್ಟರ್‌ ಖಾತೆ ಮತ್ತೆ ಸಕ್ರಿಯ – ಸತ್ಯಮೇವ ಜಯತೇ ಎಂದ ಕಾಂಗ್ರೆಸ್‌

    ಟ್ವಿಟ್ಟರ್‌ ಖಾತೆ ಮತ್ತೆ ಸಕ್ರಿಯ – ಸತ್ಯಮೇವ ಜಯತೇ ಎಂದ ಕಾಂಗ್ರೆಸ್‌

    ನವದೆಹಲಿ: ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆ ಮತ್ತೆ ಸಕ್ರಿಯಗೊಂಡಿದೆ.

    ಅತ್ಯಾಚಾರಕ್ಕೀಡಾಗಿ ಕೊಲೆಯಾದ 9 ವರ್ಷದ ಬಾಲಕಿಯ ಕುಟುಂಬಸ್ಥರ ಫೋಟೋವನ್ನು ಶೇರ್ ಮಾಡಿ ಕಾನೂನನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣ ನೀಡಿ ರಾಹುಲ್ ಗಾಂಧಿಯವರ ಟ್ವಿಟ್ಟರ್ ಖಾತೆಯನ್ನು ಕಳೆದ ವಾರ ಬ್ಲಾಕ್ ಮಾಡಿತ್ತು. ಇದಾದ ಬಳಿಕ ಈಗ ಪಕ್ಷದ ಖಾತೆಯ ಜೊತೆಗೆ ಹಲವು ನಾಯಕರ ಮತ್ತು ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿತ್ತು.

    ಇಂದು ಕಾಂಗ್ರೆಸ್‌ ಪಕ್ಷದ ಟ್ವಿಟ್ಟರ್‌ ಖಾತೆ ಸಕ್ರಿಯಗೊಂಡಿದ್ದು, ಸತ್ಯಮೇವ ಜಯತೇ ಎಂದು ಬರೆದು ಟ್ವೀಟ್‌ ಮಾಡಿದೆ. ಎಲ್ಲ ಕಾಂಗ್ರೆಸ್‌ ಖಾತೆಯಗಳು ಅನ್‌ಲಾಕ್‌ ಆಗಿದೆ. ಅನ್‌ಲಾಕ್‌ ಆಗಲು ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ ಎಂದು ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥ ರೋಹನ್ ಗುಪ್ತ ತಿಳಿಸಿದ್ದಾರೆ.

    ಶನಿವಾರ ರಾಹುಲ್‌ ಗಾಂಧಿ ಟ್ವಿಟ್ಟರ್‌ ವಿರುದ್ಧ ಕಿಡಿ ಕಾರಿದ್ದರು. ‌ ಇದು ನಮ್ಮ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ನಮಗೆ ಸಂಸತ್‍ನಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಭರವಸೆ ಬೆಳಕಾಗಿ ಟ್ವಿಟ್ಟರ್ ಇದೆ ಎಂದು ಭಾವಿಸಿದ್ದೆ. ಆದರೆ ಟ್ವಿಟ್ಟರ್ ಆ ರೀತಿ ಇಲ್ಲ. ಸರ್ಕಾರದ ಪರವಾಗಿ ಟ್ವಿಟ್ಟರ್‌ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದರು.

    ಯಾರೆಲ್ಲ ಖಾತೆ ಬ್ಲಾಕ್ ಆಗಿತ್ತು?
    ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆ ಸಿ ವೇಣುಗೋಪಾಲ್, ಅಜಯ್ ಮಕೇನ್, ಪಕ್ಷದ ಸಚೇತಕ ಮಣಿಕ್ಕಮ್ ಠಾಕೋರ್, ಅಸ್ಸಾಂ ಕಾಂಗ್ರೆಸ್ ಉಸ್ತುವಾರಿ ಮತ್ತು ಕೇಂದ್ರದ ಮಾಜಿ ಸಚಿವ ಜಿತೇಂದ್ರ ಸಿಂಗ್ ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರ ಟ್ವಿಟ್ಟರ್ ಖಾತೆಗಳನ್ನು ಸಹ ಬ್ಲಾಕ್ ಮಾಡಲಾಗಿತ್ತು.

    ಕಳೆದ ವಾರ ರಾಹುಲ್ ಗಾಂಧಿ 9 ವರ್ಷದ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ಬಾಲಕಿಯ ಕುಟುಂಬಸ್ಥರ ಫೋಟೋವನ್ನು ಪ್ರಕಟಿಸಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ರಾಷ್ಟ್ರೀಯ ಮಕ್ಕಳ ಹಕ್ಕು ಆಯೋಗ ಟ್ವಿಟ್ಟರ್ ಸಂಸ್ಥೆಗೆ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿತ್ತು. ಈ ದೂರಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರ ಖಾತೆಯನ್ನು ಬ್ಲಾಕ್ ಮಾಡಲಾಗಿತ್ತು. ಇದನ್ನೂ ಓದಿ: ವಾಜಪೇಯಿ ಹೆವೀ ಡ್ರಿಂಕರ್ – ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    ಭಾರತದಲ್ಲಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ಫೋಟೋ, ಹೆಸರು, ಪೋಷಕರ ಫೋಟೋಗಳನ್ನು ಪ್ರಕಟಿಸುವಂತಿಲ್ಲ. ಇದು ಕಾನೂನಿನ ಉಲ್ಲಂಘನೆ. 2018ರಲ್ಲಿ ಜಮ್ಮು ಕಾಶ್ಮೀರ ಕಥುವಾದ 8 ವರ್ಷದ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಗುರುತನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಿತ್ತು.

    ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಡ ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಿ 12 ಮಾಧ್ಯಮ ಸಂಸ್ಥೆಗಳಿಗೆ ತಲಾ 10 ಲಕ್ಷ ರೂ. ದಂಡವನ್ನು ವಿಧಿಸಿತ್ತು.