Tag: ಐಟಿ ರೈಡ್

  • ಬೆಳಗಾವಿ| ಮಧ್ಯರಾತ್ರಿ ಮೈನಿಂಗ್ ಉದ್ಯಮಿ ಮನೆ, ಕಚೇರಿ ಮೇಲೆ ಐಟಿ ದಾಳಿ

    ಬೆಳಗಾವಿ| ಮಧ್ಯರಾತ್ರಿ ಮೈನಿಂಗ್ ಉದ್ಯಮಿ ಮನೆ, ಕಚೇರಿ ಮೇಲೆ ಐಟಿ ದಾಳಿ

    ಬೆಳಗಾವಿ: ಮೈನಿಂಗ್ ಉದ್ಯಮಿ (Mining Entrepreneur) ಮನೆ ಹಾಗೂ ಕಚೇರಿ ಮೇಲೆ ಮಧ್ಯರಾತ್ರಿ ಐಟಿ ಅಧಿಕಾರಿಗಳು (T Raid) ದಾಳಿ ನಡೆಸಿದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ವಿನೋದ್ ದೊಡ್ಡಣ್ಣವರ್, ಪುರುಷೋತ್ತಮ ದೊಡ್ಡಣ್ಣವರ್ ಒಡೆತನದ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೊಡ್ಡಣ್ಣವರ್ ಬ್ರದರ್ಸ್ ಮೈನಿಂಗ್ ಮತ್ತು ಸಕ್ಕರೆ ಕಾರ್ಖಾನೆ ಉದ್ಯಮಿಗಳಾಗಿದ್ದಾರೆ. ಒಟ್ಟು ಐದು ತಂಡಗಳಿಂದ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ಇಂದು ಸ್ವಗ್ರಾಮಕ್ಕೆ ಬಿಗ್ ಬಾಸ್ ವಿನ್ನರ್ ಹನುಮಂತ – ಅದ್ಧೂರಿ ಸ್ವಾಗತಕ್ಕೆ ಸ್ನೇಹಿತರು, ಗ್ರಾಮಸ್ಥರ ಸಿದ್ಧತೆ

    ಗೋವಾದಿಂದ ಆಗಮಿಸಿರುವ ಐಟಿ ಅಧಿಕಾರಿಗಳ ತಂಡ ಭಾಗ್ಯನಗರದ ನಿವಾಸ, ಉದ್ಯಮಭಾಗದಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ವಿವಾಹೇತರ ಸಂಬಂಧಕ್ಕೆ ಡೇಟಿಂಗ್‌ ಆಪ್‌ ಬಳಕೆ – ದೇಶದಲ್ಲೇ ಬೆಂಗಳೂರು ನಂ.1

  • ಕಾಂಗ್ರೆಸ್ಸಿನವ್ರು 70 ವರ್ಷದಿಂದ ಮಾಡಿದ್ದು, ಈಗ ಬಯಲಿಗೆ ಬರ್ತಾ ಇದೆ: ಶೆಟ್ಟರ್

    ಕಾಂಗ್ರೆಸ್ಸಿನವ್ರು 70 ವರ್ಷದಿಂದ ಮಾಡಿದ್ದು, ಈಗ ಬಯಲಿಗೆ ಬರ್ತಾ ಇದೆ: ಶೆಟ್ಟರ್

    ಹುಬ್ಬಳಿ: ಕಾಂಗ್ರೆಸ್ಸಿನವರು 60-70 ವರ್ಷಗಳ ಕಾಲ ದೇಶವನ್ನು ದರೋಡೆ ಮಾಡಿದ್ದಾರೆ. ಅದೆಲ್ಲವೂ ಈಗ ಬಯಲಿಗೆ ಬರುತ್ತಾ ಇದೆ ಎಂದು ಬೃಹತ್, ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕೈ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

    ಹುಬ್ಬಳ್ಳಿಯಲ್ಲಿಂದು ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಶೆಟ್ಟರ್, ಜೆಡಿಎಸ್ ಪಕ್ಷದಲ್ಲಿ ಸಾಕಷ್ಟು ಶಾಸಕರು ಅಸಮಧಾನಗೊಂಡಿದ್ದಾರೆ. ಶನಿವಾರ ಹಲವು ಶಾಸಕರು ಹೊರಟ್ಟಿಯವರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಜೆಡಿಎಸ್ ಶಾಸಕರು ಅಸಮಧಾನಗೊಂಡು ಮುಂದಿನ ತೀರ್ಮಾನ ಕೈಗೊಳ್ಳಲು ರೆಡಿಯಾಗಿದ್ದಾರೆ ಎಂದು ತಿಳಿಸಿದರು.

    ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಐಟಿ ದಾಳಿ ಬಗ್ಗೆ ನಾನು ಏನೂ ಹೇಳಲ್ಲ. ಪರಮೇಶ್ವರ್ ಸಹ ರಾಜಕೀಯ ಪ್ರೇರಿತವಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದರು.

    ಕಾಂಗ್ರೆಸ್ಸಿನವರು ಐಟಿ ದಾಳಿ ವಿಚಾರದಲ್ಲಿ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಾ ಇದ್ದಾರೆ. ರಮೇಶ್ ಆತ್ಮಹತ್ಯೆ ಪ್ರಕರಣ ತನಿಖೆ ನಡೆಯುತ್ತಿದೆ. ಮುಂದೆ ಎಲ್ಲವೂ ಬಯಲಿಗೆ ಬರಲಿದೆ ಎಂದು ಹೇಳುವ ಮೂಲಕ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಹೇಳಿದ ಕೈ ನಾಯಕರಿಗೆ ತಿರುಗೇಟು ನೀಡಿದರು.

  • ಪ್ರಮೋದ್ ಮಧ್ವರಾಜ್ ಬೆಂಬಲಿಗನ ಮನೆ ಮೇಲೆ ಐಟಿ ದಾಳಿ!

    ಪ್ರಮೋದ್ ಮಧ್ವರಾಜ್ ಬೆಂಬಲಿಗನ ಮನೆ ಮೇಲೆ ಐಟಿ ದಾಳಿ!

    ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಆಪ್ತನ ಮನೆ ಮೇಲೆ ಐಟಿ ರೈಡ್ ಆಗಿದೆ. ಕಾಂಗ್ರೆಸ್ ಕಟ್ಟಾಳು ಆಗಿರುವ ಉದ್ಯಾವರದ ಸದಾಶಿವ್ ಅಮೀನ್ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಸದಾಶಿವ ಅವರನ್ನು ಆದಾಯ ತೆರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ.

    ಉಡುಪಿ ತಾಲೂಕಿನ ಉದ್ಯಾವರ ಗ್ರಾಮದ ನಿವಾಸಿಯಾಗಿರುವ ಕಟ್ಟೆ ಗುಡ್ಡೆ ಸದಾಶಿವ್, ಫೈನಾನ್ಸ್ ಮ್ಯಾನೇಜರ್ ಆಗಿದ್ದಾರೆ. ಪ್ರಮೋದ್ ಮಧ್ವರಾಜ್ ಕಟ್ಟಾ ಬೆಂಬಲಿಗರಾಗಿರುವ ಅವರು ಮಧ್ವರಾಜ್ ಜೆಡಿಎಸ್ ನಿಂದ ಟಿಕೆಟ್ ಪಡೆದ ನಂತರ ಕೆಲ ದಿನ ಟೀಕಿಸಿದ್ದರೂ, ಸದ್ಯ ಚುನಾವಣಾ ಕಣಕ್ಕೆ ಬಿರುಸಿನಿಂದ ಧುಮುಕಿದ್ದರು ಎಂದು ಕಾಂಗ್ರೆಸ್ ಮೂಲಗಳು ಮಾಹಿತಿ ನೀಡಿದೆ.

    ಉದ್ಯಾವರ ಭಾಗದಲ್ಲಿ ಪ್ರಭಾವಿಯಾಗಿರುವ ಸದಾಶಿವ್ ಮೇಲೆ ಉಡುಪಿಯ ಸ್ಥಳೀಯ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಮನೆಯಲ್ಲೇ ಕೆಲವು ಗಂಟೆಗಳ ಕಾಲ ದಾಖಲೆ ಪರಿಶೀಲನೆ ಮಾಡಿರುವ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗೆ ಸದಾಶಿವರನ್ನು ಕಚೇರಿಗೆ ಕರೆದೊಯ್ದಿದ್ದಾರೆ. ಈ ವೇಳೆ ಐಟಿ ಅಧಿಕಾರಿಗಳ ಜೊತೆ ಉಡುಪಿ ತಹಶೀಲ್ದಾರ್ ಕೂಡ ಸ್ಥಳದಲ್ಲಿದ್ದರು. ಇಬ್ಬರ ಸಮ್ಮುಖದಲ್ಲಿ ವಿಚಾರಣೆ ನಡೆದಿದೆ. ಐಟಿ ಅಧಿಕಾರಿಗಳು ಚುನಾವಣೆಯ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದಾರೊ ಅಥವಾ ಸಹಜ ಪ್ರಕ್ರಿಯೆಯ ಐಟಿ ದಾಳಿಯೋ ಎಂಬ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

    ಸಂಶಯ ಬಾರದಂತೆ ಕೆಲ ಅಧಿಕಾರಿಗಳು ಚುನಾವಣಾ ಕರ್ತವ್ಯ ವಾಹನದಲ್ಲಿ ಕೂಡ ಸ್ಥಳಕ್ಕೆ ಬಂದಿದ್ದರು. ಆದ್ರೆ ಈ ಬಗ್ಗೆ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರನ್ನು ಕೇಳಿದ್ರೆ, ನನಗೇನು ಗೊತ್ತಿಲ್ಲ. ಐಟಿ ದಾಳಿಯಾಗಿದ್ಯಾ ಎಂದು ಮರು ಪ್ರಶ್ನೆ ಮಾಡುವ ಮೂಲಕ ನುಣುಚಿಕೊಂಡಿದ್ದಾರೆ.

  • ಹೆದರಿಸಿದರೆ ಡಿಕೆಶಿ ಹೆದರಲ್ಲ, ನನ್ನ ಹತ್ರನೂ ಕೆಲವರ ಡೈರಿಗಳಿವೆ : ಡಿಕೆ ಶಿವಕುಮಾರ್

    ಹೆದರಿಸಿದರೆ ಡಿಕೆಶಿ ಹೆದರಲ್ಲ, ನನ್ನ ಹತ್ರನೂ ಕೆಲವರ ಡೈರಿಗಳಿವೆ : ಡಿಕೆ ಶಿವಕುಮಾರ್

    ಬೆಂಗಳೂರು: ನಾನು ಕಾನೂನಿಗೆ ಬೆಲೆ ಕೊಡುವವನು. ನನ್ನನ್ನ ಹೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಹತ್ತಿರವೂ ಕೆಲವರ ಡೈರಿಗಳಿವೆ. ಈ ಕುರಿತು ಸಮಯ ಬಂದಾಗ ಕೊನೆಯಲ್ಲಿ ಏನೂ ಆಗಲ್ಲವೆಂದಾಗ ಬಹಿರಂಗ ಮಾಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಆರ್ಥಿಕ ಅಪರಾಧಗಳ ನ್ಯಾಯಾಲಯದಿಂದ ಸಮನ್ಸ್ ವಿಚಾರ ಕುರಿತು ವಿಧಾನಸೌಧದಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ನ್ಯಾಯಾಲಯದಿಂದ ಸಮನ್ಸ್ ಬರಬಹುದು. ಆದರೆ ಈಗ ಯಾವುದೋ ನೋಟಿಸ್ ಒಂದು ಬಂದಿದೆ. ಖುದ್ದಾಗಿ ವಿಚಾರಣೆಗೆ ಹಾಜರಾಗಬೇಕೆಂದು ನನಗೆ, ತಾಯಿ ಹಾಗೂ ಸಹೋದರನಿಗೆ ನೋಟಿಸ್ ಬಂದಿದೆ. ನ್ಯಾಯಾಲಯದಿಂದ ಸಮನ್ಸ್ ಇನ್ನೆರಡು ದಿನಗಳಲ್ಲಿ ಬರಬಹುದು. ಪೋಸ್ಟಲ್ ಮೂಲಕ ಸಮನ್ಸ್ ಬರಬಹುದು. ವಿಚಾರಣೆಗೆ ಹಾಜರಾಗುತ್ತೇವೆ. ನಮಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಹೇಳಿದರು.   ಇದನ್ನು ಓದಿ: ಹವಾಲ ವ್ಯವಹಾರದಲ್ಲಿ ಡಿಕೆ ಶಿವಕುಮಾರ್ ಭಾಗಿ?

    ಇದೇ ಐಟಿ ದಾಳಿ ವೇಳೆ ಸಿಕ್ಕ ಡೈರಿ ಕುರಿತು ಪ್ರತಿಕ್ರಿಯೆ ನೀಡಿ, ನನ್ನ ಬಳಿಯೂ ಕೆಲವರ ಡೈರಿಗಳಿವೆ. ಯಾರು? ಯಾರಿಗೆ? ಏನೇನು? ಬರೆದಿದ್ದಾರೆ ಎಂಬುವುದ ಸಹ ಗೊತ್ತಿದೆ. ಕೊನೆಯಲ್ಲಿ ಏನೂ ಆಗಲ್ಲವೆಂದಾಗ ಅದನ್ನು ಬಹಿರಂಗ ಮಾಡುತ್ತೇನೆ. ನನ್ನನ್ನ ಹೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಡಿಕೆ ಶಿವಕುಮಾರ್ ಯಾವುದಕ್ಕೂ ಹೆದರುವುದಿಲ್ಲ. ನಾನು ಕಾನೂನಿಗೆ ಬೆಲೆ ಕೊಡುವವನು. ಕೋರ್ಟ್ ನಲ್ಲಿ ಪ್ರಕರಣ ಇರುವ ಕಾರಣ ಈ ಕುರಿತು ಏನು ಹೇಳುವುದಿಲ್ಲ ಎಂದರು.

    https://www.youtube.com/watch?v=ZbAbYdv64Ik

    ನ್ಯಾಯಾಲಯದಲ್ಲಿ ಈ ಕುರಿತು ಪ್ರಕರಣ ನಡೆಯುತ್ತಿರುವುದರಿಂದ ಇದಲ್ಲವಾಗಿದ್ದರೆ ನಾನೇನು ಅನ್ನೋದನ್ನ ತೋರಿಸುತ್ತಿದ್ದೆ. ತಮ್ಮ ಆಪ್ತರಿಗೆ ಹಲವರು ಸಾಕಷ್ಟು ಸಮಸ್ಯೆ ನೀಡುತ್ತಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಿದ್ದಾರೆ. ಆದರೆ ಸಮನ್ಸ್ ಇನ್ನೂ ಯಾವುದು ಬಂದಿರುವ ಕುರಿತು ಮಾಹಿತಿ ಇಲ್ಲ. ಯಾರೋ ಏನೋ ಹೇಳಿಕೆ ನೀಡಿದ್ದಾರೆ ಎಂದ ತಕ್ಷಣ ನನ್ನನ್ನು ಪ್ರಕರಣದಲ್ಲಿ ಹೊಣೆ ಮಾಡಲು ಸಾಧ್ಯವಿಲ್ಲ. ಇದೆಲ್ಲಾ ಯಾಕೆ ಮಾಡುತ್ತಿದ್ದಾರೆ ಎಂಬುವುದು ನನಗೆ ಗೊತ್ತಿಗೆ ಎಂದು ಹೇಳಿದರು.

    ರಾಜೀನಾಮೆಗೆ ಒತ್ತಾಯ: ಬಿಜೆಪಿ ನಾಯಕರು ತಮ್ಮ ರಾಜೀನಾಮೆಗೆ ಒತ್ತಾಯ ಮಾಡಿದ್ದರೆ ಅವರ ನಾಯಕರ ಮೇಲೆ ಎಷ್ಟು ಪ್ರಕರಣಗಳಿದೆ ಎಂಬುವುದನ್ನು ಪ್ರಶ್ನೆ ಮಾಡಿದ್ದೀರಾ. ಅವರದ್ದೇ ಪಕ್ಷದ ಮುಖ್ಯಮಂತ್ರಿ ಆಗಿದ್ದವರ ಮೇಲೆ ಎಷ್ಟು ಕೇಸ್ ಗಳು ಇವೆ ಎಂಬುವುದು ಗೊತ್ತಿದೆ ಎಂದು ಹೇಳಿದ್ದಾರೆ.