Tag: ಐಡಿಎಫ್

  • ಗಾಜಾ ನಗರವನ್ನೇ ವಿಭಜಿಸಿದ ಇಸ್ರೇಲ್‌ – 2 ನಗರಗಳ ಮಧ್ಯೆ ಸಂಪರ್ಕ ಕಡಿತ

    ಗಾಜಾ ನಗರವನ್ನೇ ವಿಭಜಿಸಿದ ಇಸ್ರೇಲ್‌ – 2 ನಗರಗಳ ಮಧ್ಯೆ ಸಂಪರ್ಕ ಕಡಿತ

    ಟೆಲ್‌ ಅವೀವ್‌/ ಅಂಕಾರಾ: ಹಮಾಸ್ ಉಗ್ರರನ್ನು (Hamas Terrorist) ಸರ್ವನಾಶ ಮಾಡುವ ಗುರಿಯೊಂದಿಗೆ ಮುನ್ನುಗ್ಗುತ್ತಿರುವ ಇಸ್ರೇಲ್ (Israel) ಗಾಜಾ ಮೇಲೆ ಭೀಕರ ದಾಳಿಯನ್ನು ಮುಂದುವರೆಸಿದೆ. ಈ ಹೊತ್ತಲ್ಲಿಯೇ ಮಹತ್ವದ ಬೆಳವಣಿಗೆ ನಡೆದಿದ್ದು ಗಾಜಾ ನಗರವನ್ನು ಎರಡಾಗಿ ವಿಭಜಿಸಿರುವುದಾಗಿ (Split Gaza in Two) ಇಸ್ರೇಲ್ ಸೇನೆ ಘೋಷಿಸಿದೆ.

    ಇದು ಅತ್ಯಂತ ಪ್ರಮುಖ ಘಟ್ಟ. ನಾವು ಇನ್ನಷ್ಟು ಜೋರಾಗಿ ದಾಳಿ ಮಾಡಲಿದ್ದೇವೆ ಎಂದು ಪ್ರಕಟಿಸಿದೆ. ಈಗಾಗಲೇ ದಕ್ಷಿಣ ಗಾಜಾ ಪ್ರಾಂತ್ಯವನ್ನು ತಲುಪಿರುವ ಐಡಿಎಫ್ (IDF) ಮುಂದಿನ 48 ಗಂಟೆಯಲ್ಲಿ ಉತ್ತರ ದಿಕ್ಕಿನಿಂದಲೂ ಗಾಜಾವನ್ನು ಪ್ರವೇಶಿಸುವ ಸಾಧ್ಯತೆಯಿದೆ. ನಾವು ಗೆಲ್ಲುವವರೆಗೂ ಯುದ್ಧ ನಿಲ್ಲಿಸುವುದಿಲ್ಲ ಎಂದು ಎಂದು ಇಸ್ರೇಲ್ ಪ್ರಧಾನಿ ನೆತನ್ಯಾಹು ಘೋಷಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ರಿಯರ್‌ ಅಡ್ಮಿರಲ್‌ ಡೆನಿಯಲ್‌ ಹಗರಿ, ಇಸ್ರೇಲ್ ಸೇನೆಯು ಗಾಜಾ ನಗರವನ್ನು ಸುತ್ತುವರೆದಿದೆ. ಮುತ್ತಿಗೆ ಹಾಕಿದ ನಂತರ ಉತ್ತರ ಗಾಜಾ ಮತ್ತು ದಕ್ಷಿಣ ಗಾಜಾ ಎಂದು ವಿಭಜಿಸಲಾಗಿದೆ. ಎರಡು ನಗರಗಳ ಮಧ್ಯೆ ಸಂಪರ್ಕ ಕಡಿತ ಮಾಡಲಾಗಿದೆ. ಹಮಾಸ್‌ ವಿರುದ್ಧದ ಯುದ್ಧದಲ್ಲಿ ಇದು ಮಹತ್ವದ ಹಂತ ಎಂದು ಹೇಳಿದರು.

    ಇಸ್ರೇಲ್‌ ಮಾಧ್ಯಮಗಳ ಪ್ರಕಾರ ಮುಂದಿನ 48 ಗಂಟೆಯಲ್ಲಿ ಇಸ್ರೇಲ್‌ ಸೇನೆ ಗಾಜಾ ನಗರದ ಮೇಲೆ ದಾಳಿ ನಡೆಸಬಹುದು ಎಂದು ತಿಳಿಸಿದೆ. ಇದನ್ನೂ ಓದಿ: ಪತ್ನಿಗೆ 17 ಬಾರಿ ಇರಿದು, ದೇಹದ ಮೇಲೆ ಗಾಡಿ ಓಡಿಸಿದ್ದ ಕೇರಳದ ವ್ಯಕ್ತಿಗೆ ಅಮೆರಿಕದಲ್ಲಿ ಜೀವಾವಧಿ ಶಿಕ್ಷೆ

    ಟರ್ಕಿಯಲ್ಲಿ ದಾಳಿ: ಹಮಾಸ್-ಇಸ್ರೇಲ್ ಯುದ್ಧದ ಪ್ರಭಾವ ಟರ್ಕಿಯಲ್ಲಿ (Turkey) ಕಾಣಿಸತೊಡಗಿದೆ. ಟರ್ಕಿಯಲ್ಲಿ ಪ್ಯಾಲೆಸ್ತೇನ್ ಬೆಂಬಲಿಗರು ಅಮೆರಿಕಾದ ವಾಯುನೆಲೆ (USA Airbase) ಮೇಲೆ ದಾಳಿಗೆ ಯತ್ನಿಸಿದ್ದಾರೆ. ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಏರ್‌ಬೇಸ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

     

    ಬ್ಯಾರಿಕೇಡ್‌ಗಳನ್ನು ದಾಟಲು ಪ್ರಯತ್ನಿಸುತ್ತಾ, ಪೊಲೀಸರ ಮೇಲೆ ಕಲ್ಲು, ಕುರ್ಚಿಗಳನ್ನು ಎಸೆದಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಟಿಯರ್ ಗ್ಯಾಸ್, ಜಲಫಿರಂಗಿ ಬಳಸಿದ್ದಾರೆ. ಅಮೆರಿಕ ವಿದೇಶಾಂಗ ಮಂತ್ರಿ ಆಂಟನಿ ಬ್ಲಿಂಕನ್ ಅಂಕಾರಾಗೆ ಕಾಲಿಡುವ ಸಮಯದಲ್ಲೇ ಈ ಬೆಳವಣಿಗೆ ನಡೆದಿರುವುದು ವಿಶೇಷ.

  • ನಿಮ್ಮ ಜೀವ ಉಳಿಸಿಕೊಳ್ಳಲು ದಕ್ಷಿಣಕ್ಕೆ ತೆರಳಿ- ಗಾಝಾ ನಿವಾಸಿಗಳಿಗೆ ಇಸ್ರೇಲ್ ಮಹತ್ವದ ಸೂಚನೆ

    ನಿಮ್ಮ ಜೀವ ಉಳಿಸಿಕೊಳ್ಳಲು ದಕ್ಷಿಣಕ್ಕೆ ತೆರಳಿ- ಗಾಝಾ ನಿವಾಸಿಗಳಿಗೆ ಇಸ್ರೇಲ್ ಮಹತ್ವದ ಸೂಚನೆ

    ಟೆಲ್ ಅವಿವ್: ಇಸ್ರೇಲ್ ರಕ್ಷಣಾ ಪಡೆಗಳು (IDF) ವಿಶ್ವಸಂಸ್ಥೆಗೆ ನಿರ್ಣಾಯಕ ನಿರ್ದೇಶನವನ್ನು ತಿಳಿಸಿದೆ. ಉತ್ತರ ಗಾಝಾದಲ್ಲಿರುವ ಪ್ಯಾಲೆಸ್ತೀನ್ ನಿವಾಸಿಗಳು 24 ಗಂಟೆಗಳ ಒಳಗಾಗಿ ದಕ್ಷಿಣ ಗಾಝಾಕ್ಕೆ ಸ್ಥಳಾಂತರಗೊಳ್ಳುವಂತೆ ತಿಳಿಸಿದ್ದಾಗಿ ಇಸ್ರೇಲ್ (Israel) ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

    ಇಸ್ರೇಲ್ ಗಾಝಾ (Gaza) ನಿವಾಸಿಗಳಿಗೆ ನೀಡಿರುವ ಮಹತ್ವದ ಸೂಚನೆ ಭಾರೀ ಆಕ್ರಮಣದ ಸುಳಿವು ನೀಡಿದೆ. ಸರಿಸುಮಾರು 11 ಲಕ್ಷ ಪ್ಯಾಲೆಸ್ತೀನಿಯನ್ನರು ಗಾಝಾದ ಉತ್ತರ ಭಾಗದಲ್ಲಿ ನೆಲೆಸಿದ್ದಾರೆ. ಈ ಹಿನ್ನೆಲೆ ಅಲ್ಲಿನ ನಿವಾಸಿಗಳಿಗೆ ಪ್ರಾಣಾಪಾಯದಿಂದ ಪಾರಾಗಲು ಸ್ಥಳಾಂತರಕ್ಕೆ ಮಹತ್ವದ ಸೂಚನೆ ನೀಡಲಾಗಿದೆ. ಇದನ್ನೂ ಓದಿ: 60 ಉಗ್ರರ ಕೊಂದು 250 ಒತ್ತೆಯಾಳುಗಳನ್ನು ಸುರಕ್ಷಿತವಾಗಿ ರಕ್ಷಿಸಿದ ಇಸ್ರೇಲ್ ಸೈನಿಕರು

    ಗಾಝಾ ನಗರದ ಸುರಂಗಗಳಲ್ಲಿ ಹಮಾಸ್ ಉಗ್ರರು ಅಡಗಿರುವ ಹಿನ್ನೆಲೆ ಐಡಿಎಫ್ ನಾಗರಿಕರಿಗೆ ಸ್ಥಳಾಂತರದ ಸೂಚನೆ ನೀಡಿದೆ. ಗಾಝಾ ನಿವಾಸಿಗಳೇ, ನಿಮ್ಮ ವೈಯಕ್ತಿಕ ಸುರಕ್ಷತೆ ಮತ್ತು ನಿಮ್ಮ ಕುಟುಂಬಗಳಿಗಾಗಿ ದಕ್ಷಿಣಕ್ಕೆ ತೆರಳಿ. ನಿಮ್ಮನ್ನು ಮಾನವ ಗುರಾಣಿಯಾಗಿ ಬಳಸುತ್ತಿರುವ ಹಮಾಸ್ ಭಯೋತ್ಪಾದಕರಿಂದ ದೂರವಿರಿ. ಮುಂಬರುವ ದಿನಗಳಲ್ಲಿ ಐಡಿಎಫ್ ಗಾಝಾ ನಗರದಲ್ಲಿ ದೊಡ್ಡ ಕಾರ್ಯಾಚರಣೆ ನಡೆಸುವುದನ್ನು ಮುಂದುವರಿಸಲಿದೆ. ಈ ಹಿನ್ನೆಲೆ ನಾಗರಿಕರಿಗೆ ಹಾನಿಯಾಗುವುದನ್ನು ತಡೆಯಲು ಈ ಸೂಚನೆ ನೀಡಲಾಗುತ್ತಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿದೆ. ಇದನ್ನೂ ಓದಿ: Operation Ajay: ಇಸ್ರೇಲ್‌ನಿಂದ 230 ಮಂದಿ ಭಾರತೀಯರ ಆಗಮನ – ಕನ್ನಡಿಗರಿಗೆ ಟಿ.ಬಿ ಜಯಚಂದ್ರ ಆತ್ಮೀಯ ಸ್ವಾಗತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 60 ಉಗ್ರರ ಕೊಂದು 250 ಒತ್ತೆಯಾಳುಗಳನ್ನು ಸುರಕ್ಷಿತವಾಗಿ ರಕ್ಷಿಸಿದ ಇಸ್ರೇಲ್ ಸೈನಿಕರು

    60 ಉಗ್ರರ ಕೊಂದು 250 ಒತ್ತೆಯಾಳುಗಳನ್ನು ಸುರಕ್ಷಿತವಾಗಿ ರಕ್ಷಿಸಿದ ಇಸ್ರೇಲ್ ಸೈನಿಕರು

    ಟೆಲ್ ಅವಿವ್: ಹಮಾಸ್ (Hamas) ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿ ಒತ್ತೆಯಾಳಾಗಿದ್ದ ಸುಮಾರು 250 ಜನರನ್ನು ಶುಕ್ರವಾರ ಇಸ್ರೇಲ್‌ನ ರಕ್ಷಣಾ ಪಡೆಗಳು (IDF) ಸುರಕ್ಷಿತವಾಗಿ ರಕ್ಷಿಸಿದ್ದಾರೆ.

    ಗಾಝಾ (Gaza) ಭದ್ರತಾ ಬೇಲಿ ಪ್ರದೇಶದ ಬಳಿ 60ಕ್ಕೂ ಹೆಚ್ಚು ಹಮಾಸ್ ಭಯೋತ್ಪಾದಕರನ್ನು ಕೊಂದು ಒತ್ತೆಯಾಳುಗಳನ್ನು ಹೇಗೆ ರಕ್ಷಿಸಿದರು ಎಂಬುದನ್ನು ತೋರಿಸುವ ಹೆಡ್‌ಕ್ಯಾಮ್ ದೃಶ್ಯಗಳನ್ನು ಐಡಿಎಫ್ ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದೆ.

    ಈ ಬಗ್ಗೆ ಬರೆದಿರುವ ಐಡಿಎಫ್, ಫ್ಲೋಟಿಲ್ಲಾ 13 ಎಲೈಟ್ ಘಟಕವನ್ನು ಅಕ್ಟೋಬರ್ 7 ರಂದು ಸುಫಾ ಮಿಲಿಟರಿ ಪೋಸ್ಟ್‌ನ ನಿಯಂತ್ರಣವನ್ನು ಮರಳಿ ಪಡೆಯುವ ಜಂಟಿ ಪ್ರಯತ್ನದಲ್ಲಿ ಗಾಜಾ ಭದ್ರತಾ ಬೇಲಿಯ ಸುತ್ತಲಿನ ಪ್ರದೇಶಕ್ಕೆ ನಿಯೋಜಿಸಲಾಗಿದೆ.

    ಸೈನಿಕರು ಸುಮಾರು 250 ಒತ್ತೆಯಾಳುಗಳನ್ನು ಜೀವಂತವಾಗಿ ರಕ್ಷಿಸಿದ್ದಾರೆ. 60ಕ್ಕೂ ಹೆಚ್ಚು ಹಮಾಸ್ ಭಯೋತ್ಪಾದಕರನ್ನು ಕೊಲ್ಲಲಾಗಿದೆ ಮತ್ತು ಹಮಾಸ್ ದಕ್ಷಿಣ ನೌಕಾ ವಿಭಾಗದ ಉಪ ಕಮಾಂಡರ್ ಮುಹಮ್ಮದ್ ಅಬು ಅಲಿ ಸೇರಿದಂತೆ 26 ಮಂದಿಯನ್ನು ಬಂಧಿಸಲಾಗಿದೆ ಎಂದು ಐಡಿಎಫ್ ತಿಳಿಸಿದೆ.

    ಹಮಾಸ್ ಭಯೋತ್ಪಾದಕರು ಇಸ್ರೇಲ್ (Israel) ಮೇಲೆ ಮಾರಣಾಂತಿಕ ದಾಳಿ ನಡೆಸಿ ಅದರ ಭೂಪ್ರದೇಶಕ್ಕೆ ನುಸುಳಿದ ಕೂಡಲೇ ಐಡಿಫ್‌ನಿಂದ ಸೇನಾ ಕಾರ್ಯಾಚರಣೆ ನಡೆಸಲಾಯಿತು. ಹಮಾಸ್ ಉಗ್ರರನ್ನು ಎದುರಿಸಲು ಸುಮಾರು 13 ಸೈನಿಕರನ್ನು ಘಟನಾ ಸ್ಥಳಕ್ಕೆ ಹೆಲಿಕಾಪ್ಟರ್ ಮೂಲಕ ಕಳುಹಿಸಲಾಯಿತು. ಇದನ್ನೂ ಓದಿ: Operation Ajay: ಭಾರತ ಸರ್ಕಾರಕ್ಕೆ ಸಲಾಂ – ಇಸ್ರೇಲ್‌ ಯುದ್ಧ ಭೂಮಿಯ ಅನುಭವ ಬಿಚ್ಚಿಟ್ಟ ಕನ್ನಡಿಗರು

    ಸೈನಿಕರ ಹೆಡ್‌ಕ್ಯಾಮ್‌ನಲ್ಲಿ ಸೆರೆಯಾಗಿರುವ ವೀಡಿಯೋದಲ್ಲಿ ಫ್ಲೋಟಿಲ್ಲಾ 13 ಎಲೈಟ್ ಯುನಿಟ್ ಸಿಬ್ಬಂದಿ ಹಲವಾರು ಸುತ್ತು ಗುಂಡುಗಳನ್ನು ಹೊಡೆದು, ಭಯೋತ್ಪಾದಕರನ್ನು ಸೆರೆಹಿಡಿಯುವುದು ಕಂಡುಬಂದಿದೆ.

    ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್‌ನಲ್ಲಿ ಹಮಾಸ್ ಭಯೋತ್ಪಾದಕರ ದಾಳಿಗೆ ಸಾವನ್ನಪ್ಪಿರುವವರ ಸಂಖ್ಯೆ 1,300 ದಾಟಿದೆ. 3,300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹಮಾಸ್ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲ್‌ನಿಂದ ಜನರನ್ನು ಅಪಹರಿಸಿ, ಅವರನ್ನು ಗಾಜಾದಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡಿತು. ಇನ್ನು ಇಸ್ರೇಲ್‌ನ ಪಡೆಗಳು ಪ್ರತಿದಾಳಿ ನಡೆಸಿದ್ದು, ಇಸ್ರೇಲ್ ಹಾಗೂ ಗಡಿ ಪ್ರದೇಶದಲ್ಲಿ 1,500ಕ್ಕೂ ಹೆಚ್ಚು ಹಮಾಸ್ ಭಯೋತ್ಪಾದಕರ ಮೃತದೇಹಗಳು ಪತ್ತೆಯಾಗಿವೆ. ಇದನ್ನೂ ಓದಿ: Operation Ajay: ಇಸ್ರೇಲ್‌ನಿಂದ 230 ಮಂದಿ ಭಾರತೀಯರ ಆಗಮನ – ಕನ್ನಡಿಗರಿಗೆ ಟಿ.ಬಿ ಜಯಚಂದ್ರ ಆತ್ಮೀಯ ಸ್ವಾಗತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]