Tag: ಐಪಿಎಲ್‌ ಚಾಂಪಿಯನ್ಸ್‌

  • ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

    ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

    ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನ ಮುಡಿಗೇರಿಸಿಕೊಂಡಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್‌ಗಳು ಈ ಐತಿಹಾಸಿಕ ಕ್ಷಣವನ್ನು ಸಂಭ್ರಮಿಸುತ್ತಿದ್ದಾಗಲೇ ದುರಂತ ಸಂಭವಿಸಿದೆ. ಕಾಲ್ತುಳಿತದಲ್ಲಿ (Chinnaswamy Stampede) ಉಂಟಾದ ಅಭಿಮಾನಿಗಳ ಸಾವು-ನೋವಿಗೆ ಆರ್‌ಸಿಬಿ ಫ್ರಾಂಚೈಸಿ ಹಾಗೂ ಪೊಲೀಸ್‌ ಇಲಾಖೆಯ ವೈಫಲ್ಯವೇ ಕಾರಣ ಅನ್ನೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಹೌದು. ಮಂಗಳ ರಾತ್ರಿ 11:20ರ ಸುಮಾರಿಗೆ ಆರ್‌ಸಿಬಿ ವಿಜಯಶಾಲಿಯಾಗಿತ್ತು, ಇದರಿಂದ ರಾತ್ರಿಯಿಡೀ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಬುಧವಾರ ಸಹ ಬೆಂಗಳೂರು ನಗರದ ವಿವಿಧೆಡೆ ಅಭಿಮಾನಿಗಳು ಸಂಭ್ರಮಾಚರಣೆ ಕೈಗೊಂಡಿದ್ದರು. ಹೀಗಿರುವಾಗಲೇ ಬೆಳಗ್ಗೆ 7:01 ಗಂಟೆಗೆ ಆರ್‌ಸಿಬಿ ಫ್ರಾಂಚೈಸಿ ಇಂದು 3:30ರ ಬಳಿಕ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ವರೆಗೆ ವಿಕ್ಟರಿ ಪೆರೇಡ್‌ ನಡೆಸೋದಾಗಿ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿತ್ತು. ಆದ್ರೆ ಘೋಷಣೆಗೂ ಮುನ್ನ ಯಾವುದೇ ಪೊಲೀಸ್‌ (Bengaluru Police Department) ಅನುಮತಿ ಪಡೆದಿರಲಿಲ್ಲ. ಪೊಲೀಸರು ಸಹ ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಮ್ಯಾನೇಜ್ಮೆಂಟ್‌ಗೂ ಸರಿಯಾದ ಸೂಚನೆ ಕೊಡದೇ 11 ಗಂಟೆಯಾದ್ರೂ ಸಭೆ ಮಾಡುವುದರಲ್ಲೇ ಕಾಲ ಕಳೆದರು. ನಿರಂತರ ಸಭೆ ನಡೆಸುತ್ತಿದ್ದ ಪೊಲೀಸರು 12 ಗಂಟೆ ಕಳೆದರೂ ಸರಿಯಾದ ತೀರ್ಮಾನಕ್ಕೆ ಬರೋದ್ರಲ್ಲಿ ವಿಫಲರಾಗಿದ್ದರು. ಇದನ್ನೂ ಓದಿ: ಮಾತೇ ಬರುತ್ತಿಲ್ಲ, ತುಂಬಾ ದುಃಖವಾಗಿದೆ: ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ

    ಈ ನಡುವೆ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿದ್ದರಿಂದ ಸ್ಟೇಡಿಯಂಗಿಂತ ವಿಧಾನಸೌಧ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿತ್ತು. ಅಲ್ಲಿ ಅತಿಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಇದಾದ ಬಳಿಕ ಪೊಲೀಸರು ಮಧ್ಯಾಹ್ನ 2 ಗಂಟೆ ವೇಳೆಗೆ ಟಿಕೆಟ್‌, ಪಾಸ್‌ ಇದ್ದವರಿಗೆ ಮಾತ್ರ ಅವಕಾಶ ಅಂತ ಪ್ರೆಸ್‌ನೋಟ್‌ ಹೊರಡಿಸಿದ್ದರು. ಆದ್ರೆ ಟಿಕೆಟ್‌ ಎಲ್ಲಿ ಸಿಗುತ್ತೆ ಅನ್ನೋದನ್ನ ಫ್ರಾಂಚೈಸಿ ಸ್ಪಷ್ಟಪಡಿಸಿರಲಿಲ್ಲ, ಪೊಲೀಸರು ಇದನ್ನ ಪ್ರಶ್ನೆ ಮಾಡಲಿಲ್ಲ. ಅಲ್ಲದೇ ಮಧ್ಯಾಹ್ನ 3:30ರ ಸುಮಾರಿಗೆ ಫ್ರೀ ಪಾಸ್‌ ಸಿಗುತ್ತೆ ಅಂತ ತನ್ನ ವೆಬ್‌ಸೈಟ್‌ ಮತ್ತು ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿತ್ತು. ಸಂಜೆ 5 ರಿಂದ 6 ಗಂಟೆ ವರೆಗೆ ಪೆರೇಡ್‌ ನಡೆಯಲಿದೆ ಅಂತ ಪೋಸ್ಟ್‌ ಹಂಚಿಕೊಂಡಿತ್ತು. ಆದ್ರೆ ಅಷ್ಟರಲ್ಲಾಗಲೇ ಸ್ಟೇಡಿಯಂ ಬಳಿ ಲಕ್ಷಾಂತರ ಜನ ಜಮಾಯಿಸಿದ್ದರು. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ; ಫ್ಯಾನ್ಸ್‌ ಸಾವು-ನೋವಿಗೆ ಆರ್‌ಸಿಬಿ ಶೋಕ

    ಈ ನಡುವೆ ಗೃಹಸಚಿವ ಪರಮೇಶ್ವರ್‌ ಅವರು ವಿಕ್ಟರಿ ಪೆರೇಡ್ ಇಲ್ಲ, ವಿಧಾನಸೌಧಕ್ಕೆ ಎಂಟ್ರಿ ಇಲ್ಲ, ಸ್ಟೇಡಿಯಂಗೆ ಹೋಗಿ ಅಂದುಬಿಟ್ಟರು. ಮಾಹಿತಿ ತಿಳಿದ ಜನ ಸ್ಟೇಡಿಯಂಗೆ ನುಗ್ಗಲು ಯತ್ನಿಸಿದ್ರು ಈ ಎಲ್ಲ ಬೆಳವಣಿಗೆಯಿಂದ ಅಭಿಮಾನಿಗಳ ಸಾವು ನೋವಾಗಿದೆ. ಇದನ್ನೂ ಓದಿ: ಟೀಂ ಇಂಡಿಯಾದ್ದು 5 ದಿನ, ಸಿಎಸ್‌ಕೆ 3 ದಿನದ ನಂತರ ಆಚರಣೆ ಮಾಡಿದ್ರೆ ಒಂದೇ ದಿನದಲ್ಲಿ ವಿಜಯೋತ್ಸವ ಆಚರಿಸಿದ್ದು ಯಾಕೆ? – ಜೆಡಿಎಸ್‌ ಆಕ್ರೋಶ

    ದುರಂತಕ್ಕೆ ಪ್ರಮುಖ ಕಾರಣಗಳೇನು?
    * ವಿಕ್ಟರಿ ಪೆರೇಡ್‌ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಪೊಲೀಸರು ತಡ ಮಾಡಿದ್ದು
    * ಆಡಳಿತ ಮಂಡಳಿಗೆ ಖಡಕ್ ಸೂಚನೆ ಕೊಡೋದಕ್ಕೆ ಹಿಂದೇಟು ಹಾಕಿದ್ದು
    * ಟಿಕೆಟ್ ಮತ್ತು ಪಾಸ್ ಬಗ್ಗೆ ಪೊಲೀಸರಿಗೆ ಮಾಹಿತಿಯೇ ಇರಲಿಲ್ಲ
    * ಜನಕ್ಕೆ ಮಾಹಿತಿ ನೀಡೋದಕ್ಕೆ ಪೊಲೀಸರಿಗೆ ಆಸಕ್ತಿಯೇ ಇರಲ್ಲಿಲ್ಲ
    * ಕಾರ್ಯಕ್ರಮ ಬೇಡ ಅನ್ನೋದಕ್ಕೆ ಪೊಲೀಸರ ಮೇಲೆ ಇದ್ದ ಒತ್ತಡ
    * ವಿಧಾನಸೌದದ ಕಾರ್ಯಕ್ರಮ, ಪೆರೇಡ್ ಎರಡೂ ಬೇಡ ಅಂದಿದ್ದ ಆಯುಕ್ತರು
    * ಪೊಲೀಸ್ ನಿಯೋಜನೆಯಲ್ಲಿ ನಿರಂತರವಾಗಿ ಯಡವಟ್ಟು
    * ಗೇಟ್ ತೆಗೆಯಲು ಹಿಂದೆಟು

  • ಬೆಂಗಳೂರಿಗೆ ʻರಾಯಲ್‌ʼ ಆಗಿ ಎಂಟ್ರಿ ಕೊಟ್ಟ ಆರ್‌ಸಿಬಿ ತಂಡ

    ಬೆಂಗಳೂರಿಗೆ ʻರಾಯಲ್‌ʼ ಆಗಿ ಎಂಟ್ರಿ ಕೊಟ್ಟ ಆರ್‌ಸಿಬಿ ತಂಡ

    ಬೆಂಗಳೂರು: ಐಪಿಎಲ್ 2025ರ ಫೈನಲ್ (IPL 2025 Final) ಪಂದ್ಯದಲ್ಲಿ ಕಪ್ ಗೆದ್ದ ಆರ್‌ಸಿಬಿ (RCB) ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸಲು ತವರಿಗೆ ಬಂದಿಳಿದಿದೆ. ಹೆಚ್‌ಎಎಲ್‌ಗೆ ವಿಶೇಷ ವಿಮಾನದಲ್ಲಿ ಆರ್‌ಸಿಬಿ ಆಟಗಾರರು ಬಂದಿಳಿದಿದ್ದು, ಜೊತೆಗೆ ಎಬಿಡಿ ಹಾಗೂ ಕ್ರಿಸ್ ಗೇಲ್ ಸಹ ಬಂದಿದ್ದಾರೆ. ಕೊಹ್ಲಿಯವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಬಾವುಟ ನೀಡಿ ಸ್ವಾಗತ ಕೋರಿದ್ದಾರೆ.

    ಅಹಮದಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಆರ್‌ಸಿಬಿ ಆಟಗಾರರು ಹೊರಟು ಮಧ್ಯಾಹ್ನ 2:10ಕ್ಕೆ ಬೆಂಗಳೂರು ಹೆಚ್‌ಎಎಲ್ ವಿಮಾನ ನಿಲ್ದಾಣ ತಲುಪಿದ್ದಾರೆ. ಇಲ್ಲಿಂದ ಆರ್‌ಸಿಬಿ ತಂಡ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ತೆರಳಲಿದೆ. ಇಲ್ಲಿ ವಿಶ್ರಾಂತಿ ಪಡೆದ ಬಳಿಕ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಟ್ರೋಫಿ ನೀಡಲಿದೆ. ಇದನ್ನೂ ಓದಿ: ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

    ಸಿಎಂ ಭೇಟಿ ಬಳಿಕ 5 ಗಂಟೆಗೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ (Chinnaswamy Stadium) ತೆರಳಿ, ಆರ್‌ಸಿಬಿ ತಂಡದ ಪರೇಡ್ ನಡೆಯಲಿದೆ. 6 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

    ಅಧಿಕೃತ ಟಿಕೆಟ್‌ ಮತ್ತು ಪಾಸ್‌ ಹೊಂದಿದವರಿಗೆ ಮಾತ್ರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ (Chinnaswamy Stadium) ಆರ್‌ಸಿಬಿ (RCB) ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ. ಚಿನ್ನಸ್ವಾಮಿ ಕ್ರೀಡಾಂಗಣದತ್ತ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಮಾರ್ಚ್‌ನಲ್ಲಿ ಸ್ಕ್ರಿಪ್ಟ್‌ ಬರೆದು ಜೂನ್‌ನಲ್ಲಿ ‘ಪಿಕ್ಚರ್‌’ ತೆಗೆದ ಜಿತೇಶ್‌ ಶರ್ಮಾ!

  • ಮಧ್ಯಾಹ್ನ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ ವಿಜಯೋತ್ಸವ ಮೆರವಣಿಗೆ | ಎಷ್ಟು ಗಂಟೆಗೆ ಏನು?

    ಮಧ್ಯಾಹ್ನ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ ವಿಜಯೋತ್ಸವ ಮೆರವಣಿಗೆ | ಎಷ್ಟು ಗಂಟೆಗೆ ಏನು?

    ಬೆಂಗಳೂರು: ಐಪಿಎಲ್ 2025 ಫೈನಲ್ (IPL 2025 Final) ಪಂದ್ಯದಲ್ಲಿ ಗೆದ್ದು ಕಪ್ ಎತ್ತಿಹಿಡಿದ ಆರ್‌ಸಿಬಿ (RCB) ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸುವ ಸಲುವಾಗಿ ತವರೂರು ಬೆಂಗಳೂರಿಗೆ (Bengaluru) ಆಗಮಿಸಲಿದೆ. ಅಹಮದಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಆರ್‌ಸಿಬಿ ಆಟಗಾರರು ಹೊರಟು ಮಧ್ಯಾಹ್ನ 1:30ರ ವೇಳೆಗೆ ಬೆಂಗಳೂರು ಹೆಚ್‌ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.

    ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಆರ್‌ಸಿಬಿ ತಂಡ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ತೆರಳಲಿದೆ. ಇಲ್ಲಿ ವಿಶ್ರಾಂತಿ ಪಡೆದ ಬಳಿಕ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಟ್ರೋಫಿ ನೀಡಲಿದೆ. ಸಿಎಂ ಭೇಟಿ ಬಳಿಕ 5 ಗಂಟೆಗೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ (Chinnaswamy Stadium) ಓಪನ್-ಟಾಪ್ ಬಸ್ ಮೂಲಕ ಆರ್‌ಸಿಬಿ ತಂಡದ ಪರೇಡ್ ನಡೆಯಲಿದೆ. ಸುಮಾರು 1 ಕಿ.ಮೀ ವಿಜಯಯಾತ್ರೆ ನಡೆಸಲು ಸಿದ್ಧತೆ ನಡೆದಿದೆ. ಇದನ್ನೂ ಓದಿ: ಕೊಹ್ಲಿಗೆ ಎಚ್ಚರಿಕೆ ನೀಡದ ಅಂಪೈರ್‌ ವಿರುದ್ಧ ಗವಾಸ್ಕರ್ ಗರಂ

    ಸಾರ್ವಜನಿಕ ಮೆರವಣಿಗೆ ಬಳಿಕ 6 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

  • ನಮ್ಮ ಬೆಂಗಳೂರು ಕಾಯುತ್ತಿದೆ… ಕಪ್‌ ಗೆದ್ದ ಸಂಭ್ರಮವನ್ನ ಅಭಿಮಾನಿಗಳೊಟ್ಟಿಗೆ ಆನಂದಿಸಬೇಕು – ಬೆಂಗ್ಳೂರು ಮರೆಯದ ಕೊಹ್ಲಿ

    ನಮ್ಮ ಬೆಂಗಳೂರು ಕಾಯುತ್ತಿದೆ… ಕಪ್‌ ಗೆದ್ದ ಸಂಭ್ರಮವನ್ನ ಅಭಿಮಾನಿಗಳೊಟ್ಟಿಗೆ ಆನಂದಿಸಬೇಕು – ಬೆಂಗ್ಳೂರು ಮರೆಯದ ಕೊಹ್ಲಿ

    ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2025) ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯ ಚಾಂಪಿಯನ್ ಆಗಿ ಹೊರಹೊಮ್ಮಿತು. ಈ ವೇಳೆ ವಿರಾಟ್ ಕೊಹ್ಲಿ (Virat Kohli) ಅವರು, ಎಬಿಡಿ ವಿಲಿಯರ್ಸ್, ಕ್ರಿಸ್ ಗೇಲ್ ಅವರೊಡನೆ ʻಈ ಸಲ ಕಪ್ ನಮ್ದುʼ ಎಂದು ಹೇಳಿಸಿದ ಕ್ಷಣ ಅಭಿಮಾನಿಗಳಲ್ಲಿ ರೋಮಾಂಚನ ಮೂಡಿಸಿತು.

    ಹೌದು. 20ನೇ ಓವರ್‌ನ 2ನೇ ಎಸೆತವನ್ನು ಮೇಡಿನ್‌ ಮಾಡುತ್ತಿದ್ದಂತೆ ಆರ್‌ಸಿಬಿಗೆ ಗೆಲುವು ಪಕ್ಕಾ ಎಂದು ಗೊತ್ತಾಯಿತು. ಇದು ತಿಳಿಯುತ್ತಿದ್ದಂತೆ ವಿರಾಟ್‌ ಕೊಹ್ಲಿ ಅವರು ಮೈದಾನದಲ್ಲಿ ಗಳಗಳನೆ ಅಳಲು ಶುರು ಮಾಡಿದ್ದರು. 18 ವರ್ಷಗಳ ನೆನಪನ್ನು ಒಮ್ಮೆಲೆ ನೆನೆದು ಭಾವುಕರಾದರು. ಅಲ್ಲದೇ ಪಂದ್ಯ ಮುಕ್ತಾಯಗೊಳ್ಳುತ್ತಿದ್ದಂತೆ ಹಳೆಯ ಟೀಮ್‌ಮೆಟ್‌ ಎಬಿಡಿ ವಿಲಿಯರ್ಸ್‌ ಮಗುವಿನಂತೆ ಓಡಿ ಬಂದು ಕೊಹ್ಲಿಯನ್ನ ಅಪ್ಪಿಕೊಂಡು ಭಾವುಕರಾದರು. ಇದೇ ವೇಳೆ ಪತ್ನಿ ಅನುಷ್ಕಾ ಶರ್ಮಾ ಸಹ ಕೊಹ್ಲಿಯನ್ನ ಅಪ್ಪಿಕೊಂಡು ಭಾವುಕರಾದರು ಇದು ಅಭಿಮಾನಿಗಳನ್ನೂ ಕಣ್ಣೀರ ಕಡಲಲ್ಲಿ ತೇಲುವಂತೆ ಮಾಡಿತ್ತು. ಇದನ್ನೂ ಓದಿ: IPL 2025; ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಎದ್ದು ಕುಣಿದು ಕುಪ್ಪಳಿಸಿದ ಬ್ರಿಟನ್‌ ಮಾಜಿ ಪ್ರಧಾನಿ

    18 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಿದ ಆರ್‌ಸಿಬಿ ಅಭಿಮಾನಿಗಳ ಕೋಟೆಯ ಸಾಮ್ರಾಟ ಬೆಂಗಳೂರನ್ನು ಮರೆಯಲ್ಲಿಲ್ಲ. ಸಂದರ್ಶನವೊಂದರಲ್ಲಿ ಮಾತನಾಡುತ್ತಾ… ಕಪ್‌ ಗೆದ್ದ ಸಂಭ್ರಮವನ್ನ ಅಭಿಮಾನಿಗಳ ಜೊತೆಗೆ ಆನಂದಿಸಬೇಕು. ನಮ್ಮ ನಗರ ಸಂಭ್ರಮಿಸಲು ಕಾಯುತ್ತಿದೆ ಅಂತ ನೆನಪಿಸಿಕೊಂಡರು. ಇದನ್ನೂ ಓದಿ: IPL Champions | 18 ವರ್ಷದಲ್ಲಿ ಆರ್‌ಸಿಬಿಯ ಟಾಪ್‌ ದಾಖಲೆಗಳ ಬಗ್ಗೆ ನೀವು ತಿಳಿಯಲೇಬೇಕು..

    ಯಾರೋ ಒಬ್ಬರು ಬೆಂಗಳೂರಿನ ಒಂದು ವಿಡಿಯೋ ಕಳಿಸಿದ್ರು, ಇಡೀ ನಗರ ಪಟಾಕಿ ಸಿಡಿಸಿ ಸಂಭ್ರಮಿಸುತ್ತು. ಆ ಅನುಭವವೇ ಬೇರೆ ಅದನ್ನು ಹೇಳಲು ಆಗುವುದಿಲ್ಲ, ಅನುಭವಿಸಬೇಕು ಅಂತ ಹೇಳಿದ್ರು. ಈ ಮೂಲಕ ಬೆಂಗಳೂರಿನಲ್ಲಿ ಸಂಭ್ರಮಾಚಣೆ ನಡೆಸುವ ಸುಳಿವುಕೊಟ್ಟರು. ಇದನ್ನೂ ಓದಿ: 18 ಆವೃತ್ತಿಗಳಲ್ಲಿ ಆರೆಂಜ್‌, ಪರ್ಪಲ್‌ ಕ್ಯಾಪ್‌ ವಿನ್ನರ್‌ಗಳ ಕಂಪ್ಲೀಟ್‌ ಲಿಸ್ಟ್‌ ನೋಡಿ…

  • ಚೊಚ್ಚಲ ಟ್ರೋಫಿ ಗೆದ್ದ ಆರ್‌ಸಿಬಿಗೆ ಸಿಕ್ಕ ಬಹುಮಾನ ಎಷ್ಟು..? – ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌…

    ಚೊಚ್ಚಲ ಟ್ರೋಫಿ ಗೆದ್ದ ಆರ್‌ಸಿಬಿಗೆ ಸಿಕ್ಕ ಬಹುಮಾನ ಎಷ್ಟು..? – ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌…

    18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಚೊಚ್ಚಲ ಚಾಂಪಿಯನ್‌ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಐಪಿಎಲ್‌ ಟ್ರೋಫಿ ಗೆದ್ದ ತಂಡಕ್ಕೆ ಬರೋಬ್ಬರಿ 20 ಕೋಟಿ ರೂಪಾಯಿ ಬಹುಮಾನ ಬಾಚಿಕೊಂಡಿದೆ. ಮೊದಲ ಐಪಿಎಲ್‌ನಲ್ಲಿ ಗೆದ್ದ ತಂಡಕ್ಕೆ 4.8 ಕೋಟಿ ರೂಪಾಯಿ ಸಿಗುತ್ತಿತ್ತು. ಅದು ಈಗ 20 ಕೋಟಿ ರೂಪಾಯಿಗೆ ಬಂದು ನಿಂತಿದೆ. ಇದು ಪ್ರಶಸ್ತಿ ಮೊತ್ತ ಮಾತ್ರ, ಇದರ ಜೊತೆ ಐಪಿಎಲ್‌ ಗೆದ್ದ ತಂಡಕ್ಕೆ ಹಣದ ಹೊಳೆಯೇ ಹರಿದು ಬರುತ್ತದೆ.

    ಗೆದ್ದ ತಂಡಕ್ಕೆ 20 ಕೋಟಿ ರೂಪಾಯಿ ಬಹುಮಾನ (Prize Money) ಇದ್ದರೆ, ರನ್ನರ್‌ ಅಪ್‌ ಆದ ತಂಡಕ್ಕೆ 13 ಕೋಟಿ ರೂಪಾಯಿ ಬಹುಮಾನ ಸಿಗಲಿದೆ. ಬಹುಮಾನಕ್ಕಿಂತ ಹೆಚ್ಚಿನ ಹಣಕ್ಕೆ ಹಲವು ಆಟಗಾರರನ್ನು ಫ್ರಾಂಚೈಸಿಗಳು ಖರೀದಿಸಿವೆ. ಬಹುಮಾನ ಹಲವು ಮಾರ್ಗದ ಮೂಲಕ ಹಣವನ್ನು ಸಂಪಾದಿಸುತ್ತವೆ. ಅದರಲ್ಲೂ ಐಪಿಎಲ್‌ ಗೆದ್ದ ತಂಡ ಸ್ವಲ್ಪ ಜಾಸ್ತಿಯೇ ಹಣವನ್ನು ಗಳಿಸಲಿದೆ. ಈ ಮಧ್ಯೆ ಕೆಲವರು ವೈಯಕ್ತಿಕ ಪ್ರಶ್ತಿಗಳನ್ನೂ ಬಾಚಿಕೊಂಡಿದ್ದಾರೆ. ಅವುಗಳ ಪಟ್ಟಿಯನ್ನೊಮ್ಮೆ ನೋಡಿಬಿಡೋಣ…

    ಪ್ರಶಸ್ತಿ ವಿಜೇತರು ಮತ್ತು ಬಹುಮಾನ ಪಡೆದ ಲಿಸ್ಟ್‌ ಇಲ್ಲಿದೆ..

    ಚಾಂಪಿಯನ್ಸ್‌ – ರಾಯಲ್ ಚಾಲೆಂಜರ್ಸ್ ಬೆಂಗಳೂರು – 20 ಕೋಟಿ ರೂ.
    ರನ್ನರ್ಸ್ ಅಪ್ – ಪಂಜಾಬ್ ಕಿಂಗ್ಸ್ – 12.5 ಕೋಟಿ ರೂ.
    ಆರೆಂಜ್ ಕ್ಯಾಪ್ – ಸಾಯಿ ಸುದರ್ಶನ್ (ಗುಜರಾತ್ ಟೈಟಾನ್ಸ್) – 10 ಲಕ್ಷ ರೂ.
    ಪರ್ಪಲ್ ಕ್ಯಾಪ್ – ಪ್ರಸಿದ್ಧ್ ಕೃಷ್ಣ (ಗುಜರಾತ್ ಟೈಟಾನ್ಸ್) – 10 ಲಕ್ಷ ರೂ.
    ಮೋಸ್ಟ್‌ ವ್ಯಾಲ್ಯುಯೆಬಲ್‌ ಪ್ಲೇಯರ್‌ – ಸೂರ್ಯಕುಮಾರ್ ಯಾದವ್ (ಮುಂಬೈ ಇಂಡಿಯನ್ಸ್) – 15 ಲಕ್ಷ ರೂ.
    ಆವೃತ್ತಿಯ ಸೂಪರ್ ಸ್ಟ್ರೈಕರ್ – ವೈಭವ್ ಸೂರ್ಯವಂಶಿ (ರಾಜಸ್ಥಾನ್ ರಾಯಲ್ಸ್) – 10 ಲಕ್ಷ ರೂ. + ಟಾಟಾ ಕರ್ವ್
    ಹೆಚ್ಚಿನ ಡಾಟ್ ಬಾಲ್ – ಮೊಹಮ್ಮದ್ ಸಿರಾಜ್ (ಗುಜರಾತ್ ಟೈಟಾನ್ಸ್) – 10 ಲಕ್ಷ ರೂ.
    ಉದಯೋನ್ಮುಖ ಆಟಗಾರ (ಎಮರ್ಜಿಂಗ್‌ ಪ್ಲೇಯರ್‌) – ಸಾಯಿ ಸುದರ್ಶನ್ (ಗುಜರಾತ್ ಟೈಟಾನ್ಸ್) – 10 ಲಕ್ಷ ರೂ.
    ಫ್ಯಾಂಟಸಿ ಕಿಂಗ್ – ಸಾಯಿ ಸುದರ್ಶನ್ (ಗುಜರಾತ್ ಟೈಟಾನ್ಸ್) – 10 ಲಕ್ಷ ರೂ.
    ಸೂಪರ್ ಸಿಕ್ಸರ್ಸ್‌ – ನಿಕೋಲಸ್ ಪೂರನ್ (ಲಕ್ನೋ ಸೂಪರ್ ಜೈಂಟ್ಸ್) – 10 ಲಕ್ಷ ರೂ.
    ಸಿರೀಸ್‌ನಲ್ಲಿ ಅತಿಹೆಚ್ಚು ಫೋರ್ಸ್‌ – ಸಾಯಿ ಸುದರ್ಶನ್ (ಗುಜರಾತ್ ಟೈಟಾನ್ಸ್) – 10 ಲಕ್ಷ ರೂ.
    ಕ್ಯಾಚ್‌ ಆಫ್‌ ದಿ ಸೀಸನ್‌ – ಕಮಿಂಡು ಮೆಂಡಿಸ್ (ಸನ್‌ರೈಸರ್ಸ್ ಹೈದರಾಬಾದ್) – 10 ಲಕ್ಷ ರೂ.
    ಫೇರ್‌ಪ್ಲೇ ಪ್ರಶಸ್ತಿ – ಚೆನ್ನೈ ಸೂಪರ್ ಕಿಂಗ್ಸ್ – 10 ಲಕ್ಷ ರೂ.
    ಪಿಚ್ ಮತ್ತು ಗ್ರೌಂಡ್ – ಡಿಡಿಸಿಎ (ಡೆಲ್ಲಿ ಕ್ಯಾಪಿಟಲ್ಸ್‌ ಹೋಮ್ ಗ್ರೌಂಡ್) – 50 ಲಕ್ಷ ರೂ.

    ಆರ್‌ಸಿಬಿ vs ಪಂಜಾಬ್‌ ಫೈನಲ್‌ನಲ್ಲಿ ಪ್ರಶಸ್ತಿ ಗೆದ್ದವರು ಇವರೇ…
    ಪಂದ್ಯ ಶ್ರೇಷ್ಠ ಪ್ರಶಸ್ತಿ – ಕೃನಾಲ್ ಪಾಂಡ್ಯ (ರಾಯಲ್ ಚಾಲೆಂಜರ್ಸ್ ಬೆಂಗಳೂರು) – 5 ಲಕ್ಷ ರೂ.
    ಸೂಪರ್ ಸ್ಟ್ರೈಕರ್ – ಜಿತೇಶ್ ಶರ್ಮಾ – 1 ಲಕ್ಷ ರೂ.
    ಅತಿ ಹೆಚ್ಚು ಡಾಟ್ ಬಾಲ್ಸ್‌ – ಕೃನಾಲ್ ಪಾಂಡ್ಯ – 1 ಲಕ್ಷ ರೂ.
    ಅತಿ ಹೆಚ್ಚು ಫೋರ್‌ಗಳು – ಪ್ರಿಯಾಂಶ್ ಆರ್ಯ – 1 ಲಕ್ಷ ರೂ.
    ಫ್ಯಾಂಟಸಿ ಕಿಂಗ್ – ಶಶಾಂಕ್ ಸಿಂಗ್ – 1 ಲಕ್ಷ ರೂ.
    ಅತಿ ಹೆಚ್ಚು ಸಿಕ್ಸರ್ಸ್‌ – ಶಶಾಂಕ್ ಸಿಂಗ್ – 1 ಲಕ್ಷ ರೂ.

    ಮೀಡಿಯಾ ರೈಟ್ಸ್‌ನಲ್ಲಿ ಪಾಲು
    ಐಪಿಎಲ್ ತಂಡಗಳು ತಮ್ಮ ಆದಾಯದ ಗಣನೀಯ ಭಾಗವನ್ನು ಲೀಗ್‌ನ ಮೀಡಿಯಾ ರೈಟ್ಸ್‌ನಿಂದ ಅಂದ್ರೇ ಪ್ರಸಾರದ ಹಕ್ಕುಗಳಿಂದ ಗಳಿಸುತ್ತವೆ. 2023 ರಿಂದ 2027ರ ಐದು ಐಪಿಎಲ್‌ನ ಮೀಡಿಯಾ ರೈಟ್ಸ್‌ ಅನ್ನು ಬಿಸಿಸಿಐ ಬರೋಬ್ಬರಿ 48,390 ಕೋಟಿ ರೂ.ಗೆ ಮಾರಾಟ ಮಾಡಿದೆ. ಈ ಆದಾಯದಲ್ಲಿ ಸರಿ ಸುಮಾರು 45% ಪಾಲು ಫ್ರಾಂಚೈಸಿಗಳ ಪಾಲಾಗಲಿದೆ. ಈ ಆದಾಯವನ್ನ ತಂಡದ ಪ್ರದರ್ಶನ, ಎಷ್ಟು ಫಾಲೋವರ್ಸ್‌ ಅನ್ನು ಹೊಂದಿದೆ ಎನ್ನುವುದರ ಮೇಲೆ ವಿತರಿಸಲಾಗುತ್ತದೆ. ಲೀಗ್‌ನಲ್ಲೇ ಹೊರಬಿದ್ದ ತಂಡಗಳಿಗೆ ಕಡಿಮೆ ಆದಾಯ ಬಂದ್ರೆ, ಫ್ಲೇಆಫ್‌ ಹಂತದಲ್ಲಿ ಅಭಿಯಾನ ಮುಗಿಸಿದ ತಂಡಗಳು ಅದಕ್ಕಿಂತ ಸ್ವಲ್ಪ ಹೆಚ್ಚು ಪಾಲನ್ನು ಪಡೆಯಲಿವೆ. ಈ ಆದಾಯದಲ್ಲಿ ವಿಜೇತ ತಂಡವೇ ಹೆಚ್ಚಿನ ಪಾಲನ್ನು ಪಡೆಯಲಿದೆ ಎಂದು ಹೇಳಲಾಗಿದೆ.

    ಸ್ಪಾನ್ಸರ್‌ಶಿಪ್‌ ಮತ್ತು ಬ್ರಾಂಡ್‌ ಪಾಲು!
    ಇನ್ನೂ ಜೆರ್ಸಿ ಸ್ಪಾನ್ಸರ್‌ಶಿಫ್‌, ಟೈಟಲ್‌ ಸ್ಪಾನ್ಸರ್‌ಶಿಪ್‌ ಹಾಗೂ ಡಿಜಿಟಲ್‌ ಪಾರ್ಟನರ್ಸ್‌ ಸೇರಿ ಹಲವು ವಿಚಾರಕ್ಕೆ ಕಂಪನಿಗಳ ಜೊತೆ ಫ್ರಾಂಚೈಸಿ ಒಪ್ಪಂದ ಮಾಡಿಕೊಂಡಿರುತ್ತದೆ. ಗೆದ್ದ ಬೆನ್ನಲ್ಲೇ ತಂಡದ ಮೌಲ್ಯ ಕೂಡ ವೃದ್ಧಿಯಾಗಲಿದ್ದು, ಹೆಚ್ಚಿನ ಹಣ ಹರಿದುಬರಲಿದೆ. ಮೈದಾನದಲ್ಲಿನ ಯಶಸ್ಸು ತಂಡದ ಬ್ರಾಂಡ್‌ ಮೌಲ್ಯವನ್ನು ಹೆಚ್ಚಿಸುತ್ತದೆ.

  • IPL 2025 | ಈವರೆಗೆ ಚುಟುಕು ಕದನದಲ್ಲಿ ಟ್ರೋಫಿ ಗೆದ್ದ ಚಾಂಪಿಯನ್ಸ್‌ ಯಾರು?

    IPL 2025 | ಈವರೆಗೆ ಚುಟುಕು ಕದನದಲ್ಲಿ ಟ್ರೋಫಿ ಗೆದ್ದ ಚಾಂಪಿಯನ್ಸ್‌ ಯಾರು?

    18ನೇ ಆವೃತ್ತಿಯ ಐಪಿಎಲ್‌ಗೆ ದಿನಗಣನೆ ಶುರುವಾಗಿದ್ದು, ಇದೇ ಮಾರ್ಚ್ 22ರಿಂದ ಮೆಗಾ ಟೂರ್ನಿ ಆರಂಭಗೊಳ್ಳಲಿದೆ. 2025ರ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಕೆಕೆಆರ್ ತಂಡಗಳ ನಡುವೆ ನಡೆಯಲಿದೆ. ಇನ್ನೂ ಮೊದಲ ಸೂಪರ್‌ ಸಂಡೇನಲ್ಲಿ ತಲಾ 5 ಬಾರಿ ಚಾಂಪಿಯನ್‌ಗಳಾಗಿರುವ ಸಿಎಸ್‌ಕೆ ಹಾಗೂ ಮುಂಬೈ ಇಂಡಿಯನ್ಸ್‌ ಮುಖಾಮುಖಿಯಾಗಲಿವೆ. ಇದೀಗ 17 ವರ್ಷಗಳನ್ನೂ ಪೂರೈಸಿರುವ ವಿಶ್ವದ ಶ್ರೀಮಂತ ಟೂರ್ನಿ 18ನೇ ವರ್ಷಕ್ಕೆ ಕಾಲಿಟ್ಟಿದೆ. ಹೀಗಿರುವಾಗ ಈವರೆಗೆ ಯಾವೆಲ್ಲಾ ತಂಡಗಳು ಚಾಂಪಿಯನ್ ಪಟ್ಟ ಅಲಂಕರಿಸಿವೆ? ಇದುವರೆಗೂ ಟ್ರೋಫಿ ಗೆಲ್ಲದ ತಂಡ ಯಾವುದು? ಎಂಬ ವಿವರ ಇಲ್ಲಿದೆ…

    2008ರಲ್ಲಿ ಆರಂಭಗೊಂಡ ಐಪಿಎಲ್‌ ಟೂರ್ನಿ 2024ರ ವರೆಗೆ 17 ಆವೃತ್ತಿಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಇದೀಗ 18ನೇ ಆವೃತ್ತಿಗೆ ಸಜ್ಜಾಗಿದೆ. ಪ್ರಸ್ತುತ ಆಡುತ್ತಿರುವ ತಂಡಗಳು ಮತ್ತು ನಿಷ್ಕ್ರಿಯ ತಂಡಗಳು ಸೇರಿ ಒಟ್ಟು 15 ತಂಡಗಳು ಈವರೆಗೆ ಐಪಿಎಲ್‌ನಲ್ಲಿ ಆಡಿವೆ ಮತ್ತು ಆಡುತ್ತಿವೆ. ಆದರೆ ಟ್ರೋಫಿ ಗೆದ್ದಿರುವ ತಂಡಗಳು ಮಾತ್ರ 7 ಮಾತ್ರ. ಉಳಿದಂತೆ ಪ್ರಸ್ತುತ ಆಡುತ್ತಿರುವ ನಾಲ್ಕು ಸೇರಿ ಒಟ್ಟು 8 ತಂಡಗಳು (ನಿಷ್ಕ್ರಿಯ ತಂಡಗಳು ಸೇರಿ) ಪ್ರಶಸ್ತಿ ಜಯಿಸಿಲ್ಲ ಎಂಬಹುದು ಗಮನಾರ್ಹ.

    ರಾಜಸ್ಥಾನ್‌ ರಾಯಲ್ಸ್‌ ಚೊಚ್ಚಲ ಚಾಂಪಿಯನ್ಸ್‌
    2008ರ ಇಂಡಿಯನ್ ಪ್ರೀಮಿಯರ್ ಲೀಗ್ ಉದ್ಘಾಟನಾ ಆವೃತ್ತಿಯಲ್ಲಿ ರಾಜಸ್ಥಾನ್‌ ರಾಯಲ್ಸ್ ಟ್ರೋಫಿ ಗೆದ್ದುಕೊಂಡಿತು. ಚುಟುಕು ಪಂದ್ಯಾವಳಿಗೆ ಹುಮ್ಮಸು ತುಂಬಿದ್ದ ಈ ಟೂರ್ನಿಯ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿ ರಾಜಸ್ಥಾನ್‌ ರಾಯಲ್ಸ್‌ ಚೊಚ್ಚಲ ಚಾಂಪಿಯನ್‌ ಕಿರೀಟವನ್ನು ಮುಡಿಗೇರಿಸಿಕೊಂಡಿತ್ತು. ಶೇನ್‌ ವಾರ್ನ್‌ ತಂಡದ ನಾಯಕತ್ವ ವಹಿಸಿದ್ದರು.

    2009ರಲ್ಲಿ ಡೆಕ್ಕನ್‌ ಚಾರ್ಜಸ್‌ಗೆ ಕಿರೀಟ
    2009ರ ಐಪಿಎಲ್‌ ಟೂರ್ನಿಯ ಫೈನಲ್‌ ಪಂದ್ಯ ಅತ್ಯಂತ ರೋಚಕವಾಗಿತ್ತು. ಆಗಲೇ ಜನಮನ ಗೆದ್ದಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಪದಾರ್ಪಣೆ ಮಾಡಿದ 2ನೇ ಆವೃತ್ತಿಯಲ್ಲೇ ಫೈನಲ್‌ ತಲುಪಿತ್ತು. ಆದ್ರೆ ಫೈನಲ್‌ನಲ್ಲಿ ಆಡಂ ಗಿಲ್ಕ್ರಿಸ್ಟ್ ನಾಯಕತ್ವದಲ್ಲಿದ್ದ ಡೆಕ್ಕನ್‌ ಚಾರ್ಜಸ್‌ ತಂಡದ ವಿರುದ್ಧ ಸೋತು ನಿರಾಸೆ ಅನುಭವಿಸಿತು. 6 ರನ್‌ಗಳ ರೋಚಕ ಗೆಲುವು ಸಾಧಿಸಿದ ಡೆಕ್ಕನ್‌ ಪ್ರಶಸ್ತಿ ಗೆದ್ದುಕೊಂಡಿತು.

    5 ಬಾರಿ ಚೆನ್ನೈ ʻಸೂಪರ್‌ʼ ಚಾಂಪಿಯನ್‌
    ಐಪಿಎಲ್‌ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್‌ ಹೊರತುಪಡಿಸಿದ್ರೆ ಅತಿಹೆಚ್ಚು ಬಾರಿ ಚಾಂಪಿಯನ್ಸ್‌ ಪಟ್ಟ ಧಕ್ಕಿಸಿಕೊಂಡ ತಂಡವೆಂದರೆ ಅದು ಚೆನ್ನೈ ಸೂಪರ್‌ ಕಿಂಗ್ಸ್‌. ಇದರ ಖ್ಯಾತಿಯೂ ಸಹ ಚೆನ್ನೈ ತಂಡದ ಜೀವಾಳವೇ ಆಗಿರುವ ಕೂಲ್‌ ಕ್ಯಾಪ್ಟನ್‌ ಎಂ.ಎಸ್‌ ಧೋನಿ ಅವರಿಗೆ ಸಲ್ಲುತ್ತದೆ. ಧೋನಿ ನಾಯಕತ್ವದಲ್ಲಿ ಸಿಎಸ್‌ಕೆ 2010, 2011, 2018, 2021, 2023ರಲ್ಲಿ ಪ್ರಶಸ್ತಿ ಗೆದ್ದಿದೆ. ಪ್ರಸ್ತುತ ಋತುರಾಜ್‌ ಗಾಯಕ್ವಾಡ್ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

    ಮುಂಬೈಗೂ 5 ಬಾರಿ ಕಿರೀಟ:
    ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಂತೆ ಮುಂಬೈ ಇಂಡಿಯನ್ಸ್‌ ಸಹ 5 ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ 2013, 2015, 2017, 2019, 2020ರಲ್ಲಿ ಪ್ರಶಸ್ತಿ ಗೆದ್ದಿದೆ. ಪ್ರಸ್ತುತ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ನಾಯಕನಾಗಿದ್ದಾರೆ.

    ಹಾಲಿ ಚಾಂಪಿಯನ್‌ ಕೆಕೆಆರ್‌ಗೆ 3 ಬಾರಿ ಪಟ್ಟ:
    2024ರ ಆವೃತ್ತಿಯಲ್ಲಿ ಪ್ರಶಸ್ತಿ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಹಾಲಿ ಚಾಂಪಿಯನ್ಸ್‌ ಆಗಿದೆ. 2012, 2014 ಗೌತಮ್‌ ಗಂಭೀರ್‌ ನಾಯಕತ್ವದಲ್ಲಿ ಪ್ರಶಸ್ತಿ ಗೆದ್ದಿದ್ದ ಕೆಕೆಆರ್‌, 2024 ರಲ್ಲಿ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಟ್ರೋಫಿ ಗೆದ್ದಿದೆ ವಿಶೇಷವೆಂದ್ರೆ ಆಗಲೂ ಕೆಕೆಆರ್‌ಗೆ ಮೆಂಟರ್‌ ಆಗಿದ್ದು ಗೌತಮ್‌ ಗಂಭೀರ್‌ ಅವರೇ. ಅಜಿಂಕ್ಯ ರಹಾನೆ ಪ್ರಸ್ತುತ ನಾಯಕನಾಗಿ ಆಯ್ಕೆಯಾಗಿದ್ದಾರೆ.

    ಸನ್‌ ರೈಸರ್ಸ್‌ 2016ರ ಚಾಂಪಿಯನ್
    2016ರ ರೋಚಕ ಫೈನಲ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಟ್ರೋಫಿ ಗೆದ್ದಿತ್ತು. ರೋಚಕ ಫೈನಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 8 ರನ್‌ಗಳಿಂದ ಸೋಲಿಸಿತ್ತು. ಅಂದು ಡೇವಿಡ್‌ ವಾರ್ನರ್‌ ತಂಡದ ನಾಯಕತ್ವ ವಹಿಸಿದ್ದರು.

    ಪದಾರ್ಪಣೆ ಆವೃತ್ತಿಯಲ್ಲೇ ಪ್ರಶಸ್ತಿ ಗೆದ್ದ ಟೈಟಾನ್ಸ್‌
    ಇನ್ನೂ 2022ರಲ್ಲಿ ಟೂರ್ನಿಯಲ್ಲಿ ಆಗಷ್ಟೇ ಪದಾರ್ಪಣೆ ಮಾಡಿದ ಗುಜರಾತ್‌ ಟೈಟಾನ್ಸ್‌ ತಂಡ ಚೊಚ್ಚಲ ಆವೃತ್ತಿಯಲ್ಲೇ ಟ್ರೋಫಿಗೆ ಮುತ್ತಿಟ್ಟಿತು. ಹಾರ್ದಿಕ್ ಪಾಂಡ್ಯ ನೇತೃತ್ವದ ಜಿಟಿ ತಂಡವು ರಾಜಸ್ಥಾನ್‌ ರಾಯಲ್ಸ್ ತಂಡವನ್ನು ಪ್ರಶಸ್ತಿ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಸೋಲಿಸಿತ್ತು.

    ಈವರೆಗೆ ಮೂರು ಬಾರಿ ಫೈನಲ್ ಪ್ರವೇಶಿಸಿರುವ ಆರ್‌ಸಿಬಿ ಜೊತೆಗೆ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ರಶಸ್ತಿಗೆ ಮುತ್ತಿಕ್ಕಿಲ್ಲ. ನಿಷ್ಕ್ರಿಯಗೊಂಡ ತಂಡಗಳ ಪೈಕಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್, ಪುಣೆ ವಾರಿಯರ್ಸ್, ಗುಜರಾತ್ ಲಯನ್ಸ್, ಕೊಚ್ಚಿ ಟಸ್ಕಸ್ ಕೇರಳ ತಂಡಗಳು ಟ್ರೋಫಿ ಗೆದ್ದಿಲ್ಲ.

  • Photos Gallery: ಚಾಂಪಿಯನ್ಸ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ ಸಂಭ್ರಮಿಸಿದ ಕ್ಷಣ ಹೀಗಿತ್ತು…

    Photos Gallery: ಚಾಂಪಿಯನ್ಸ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ ಸಂಭ್ರಮಿಸಿದ ಕ್ಷಣ ಹೀಗಿತ್ತು…

    17ನೇ ಆವೃತ್ತಿಯ ಐಪಿಎಲ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕೋಲ್ಕತ್ತಾ ನೈಟ್ ರೈರ‍್ಸ್ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. 2012 ಮತ್ತು 2014ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡ 10 ವರ್ಷಗಳ ಬಳಿಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಂಣದಲ್ಲಿ ಸೂಪರ್ ಸಂಡೇ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಕೆಕೆಆರ್ ಗೆದ್ದ ಬಳಿಕ ಇಡೀ ಕ್ರೀಡಾಂಗಣದ ತುಂಬ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು. ಕ್ರೀಡಾಳುಗಳು ಕುಣಿದು ಕುಪ್ಪಳಿಸಿದರು. ಟ್ರೋಫಿ ಎತ್ತಿ ಮುದ್ದಾಡಿದರು, ಒಬ್ಬರನ್ನೊಬ್ಬರು ಅಪ್ಪಿಕೊಂಡು ಭಾವುಕರಾದರು. ಈ ಸಂಭ್ರಮದ ಪ್ರತಿಯೊಂದು ಕ್ಷಣವೂ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ. ಅವುಗಳನ್ನು ಕಣ್ತುಂಬಿಕೊಳ್ಳಲು ಮುಂದೆ ನೋಡಿ…

  • ಅಂದು ಕ್ಯಾಪ್ಟನ್, ಇಂದು ಮೆಂಟರ್‌ ಆಗಿ ಟ್ರೋಫಿ‌ ಗೆದ್ದುಕೊಟ್ಟ ಗಂಭೀರ್‌; ಹಣೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡ ಬಾದ್‌ ಷಾ

    ಅಂದು ಕ್ಯಾಪ್ಟನ್, ಇಂದು ಮೆಂಟರ್‌ ಆಗಿ ಟ್ರೋಫಿ‌ ಗೆದ್ದುಕೊಟ್ಟ ಗಂಭೀರ್‌; ಹಣೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡ ಬಾದ್‌ ಷಾ

    ಚೆನ್ನೈ: 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) ತಂಡವು ನೂತನ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಆದ್ರೆ ಕೆಕೆಆರ್‌ ಗೆಲುವಿನ ಹಿಂದೆ ಟೂರ್ನಿಯುದ್ಧಕ್ಕೂ ಕೋಚ್‌ ಗೌತಮ್‌ ಗಂಭೀರ್‌ (Gautam Gambhir) ಅವರ ಪಾತ್ರ ಅಷ್ಟೇ ಪ್ರಮುಖವಾಗಿದೆ.

    ಹೌದು. ಮೊದಲಿನಿಂದಲೂ ಕೆಕೆಆರ್‌ ತಂಡದೊಂದಿಗೆ (KKR Team) ಅವಿನಾಭಾವ ಸಂಬಂಧ ಹೊಂದಿರುವ ಗೌತಮ್‌ ಗಂಭೀರ್‌ 2022, 2023ರಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಕೋಚ್‌ ಆಗಿ ಕಾರ್ಯನಿರ್ವಹಿಸಿದ್ದರು. 2024ರಲ್ಲಿ ಮತ್ತೆ ತವರು ತಂಡಕ್ಕೆ ಮೆಂಟರ್‌ ಆಗಿ ಮರಳಿದ ಗಂಭೀರ್‌ ಟ್ರೋಫಿ ಗೆಲ್ಲಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಕೆಕೆಆರ್‌ ತಂಡದ ನಾಯಕನಾಗಿ ಮತ್ತು ಕೋಚ್‌ ಆಗಿ ಕೆಕೆಆರ್‌ ತಂಡಕ್ಕೆ ಮೂರು ಟ್ರೋಫಿ ಗೆದ್ದುಕೊಟ್ಟಿರುವುದು ಮತ್ತೊಂದು ವಿಶೇಷ.

    2012 ಮತ್ತು 2014ರಲ್ಲಿ ಗೌತಮ್‌ ಗಂಭೀರ್‌ ತಮ್ಮ ನಾಯಕತ್ವದಲ್ಲಿ ಕೆಕೆಆರ್‌ ತಂಡವನ್ನು ಚಾಂಪಿಯನ್‌ ಆಗಿ ಮಾಡಿದ್ದರು. ಇದೀಗ 10 ವರ್ಷಗಳ ಬಳಿಕ ಕೋಚ್‌ ಆಗಿ ತಂಡವನ್ನು ಮುನ್ನಡೆಸಿದ ಗಂಭೀರ್‌ ತಂಡವನ್ನು ಚಾಂಪಿಯನ್‌ ಆಗಿ ಮಾಡಿದ್ದಾರೆ. ಇದನ್ನೂ ಓದಿ: ಕೆಕೆಆರ್‌ ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ – ನೂತನ ಚಾಂಪಿಯನ್ಸ್‌ಗೆ ದೀದಿ ವಿಶ್‌

    ಹಣೆಗೆ ಮುತ್ತಿಟ್ಟ ಶಾರುಖ್‌:
    ಕೆಕೆಆರ್‌ ಗೆಲುವಿನ ಸಂಭ್ರಮಾಚರಣೆ ವೇಳೆ ಫ್ರಾಂಚೈಸಿ ಮಾಲೀಕರೂ ಆದ ನಟ ಶಾರುಖ್ ಖಾನ್, ಕೆಕೆಆರ್‌ ತಂಡದ ಮೆಂಟರ್‌ ಗೌತಮ್‌ ಗಂಭೀರ್‌ ಅವರ ಹಣೆಗೆ ಮುತ್ತಿಟ್ಟು ಅಭಿನಂದನೆ ಸಲ್ಲಿಸಿದ್ದಾರೆ. ಕೆಕೆಆರ್‌ ತಂಡ ಗೆಲುವು ಸಾಧಿಸುತ್ತಿದ್ದಂತೆ ಮೈದಾನಕ್ಕೆ ಧುಮುಕಿದ ಬಾದ್‌ ಶಾ, ಅಭಿಮಾನಿಗಳೊಂದಿಗೆ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ. ಬಳಿಕ ತಂಡದ ಪ್ರತಿಯೊಬ್ಬ ಆಟಗಾರರಿಗೂ ಪ್ರೀತಿಯ ಅಪ್ಪುಗೆ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮತ್ತೆ ತವರಿಗೆ ಮರಳಿ ಚಾಂಪಿಯನ್‌ ಕಿರೀಟ ಗೆದ್ದುಕೊಟ್ಟ ಗೌತಮ್‌ ಗಂಭೀರ್‌ ಅವರ ಗಣೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡಿದ್ದಾರೆ.

    ಐಪಿಎಲ್‌ನಲ್ಲಿ ಗೌತಮ್‌ ಗಂಭೀರ್‌ ಸಾಧನೆ:
    ಐಪಿಎಲ್‌ನಲ್ಲಿ ಗೌತಮ್‌ ಗಂಭೀರ್‌ ಅವರು ತಮ್ಮದೇ ವಿಶೇಷ ಸಾಧನೆ ಮಾಡಿದ್ದಾರೆ. ತಂಡವೊಂದರ ನಾಯಕನಾಗಿ 2 ಬಾರಿ ಹಾಗೂ ತಂಡವೊಂದರ ಕೋಚ್‌ ಆಗಿ 1 ಬಾರಿ ಐಪಿಎಲ್‌ ಟ್ರೋಫಿ ಗೆದ್ದುಕೊಟ್ಟಿದ್ದಾರೆ. ನಾಯಕನಾಗಿ 3 ಬಾರಿ ಪ್ಲೇ ಆಫ್‌ ವರೆಗೆ ತಂಡವನ್ನು ಮುನ್ನಡೆಸಿದ್ದರೆ, ಕೋಚ್‌ ಆಗಿಯೂ ಮೂರು ಬಾರಿ ತಂಡವೊಂದನ್ನು ಮುನ್ನಡೆಸಿದ ಕೀರ್ತಿ ಇವರ ಹೆಸರಿಗಿದೆ.

    2022ರ ಆವೃತ್ತಿಯಲ್ಲಿ ಐಪಿಎಲ್‌ ಪ್ರವೇಶಿಸಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಗೌತಮ್‌ ಗಂಭೀರ್‌ ಅವರ ನೇತೃತ್ವದಲ್ಲಿ ಮೊದಲ ಎರಡೂ ಆವೃತ್ತಿಗಳಲ್ಲಿ ಪ್ಲೇ ಆಫ್‌ ಪ್ರವೇಶಿಸಿತ್ತು. ಇದನ್ನೂ ಓದಿ:  IPL 2024 Champions: 10 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್‌! 

  • ಕೆಕೆಆರ್‌ ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ – ನೂತನ ಚಾಂಪಿಯನ್ಸ್‌ಗೆ ದೀದಿ ವಿಶ್‌

    ಕೆಕೆಆರ್‌ ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ – ನೂತನ ಚಾಂಪಿಯನ್ಸ್‌ಗೆ ದೀದಿ ವಿಶ್‌

    ಚೆನ್ನೈ: 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಚಾಂಪಿಯನ್‌ (IPL 2024 Champions) ಪಟ್ಟ ಮುಡಿಗೇರಿಸಿಕೊಂಡ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee )ಅಭಿನಂದನೆ ಸಲ್ಲಿಸಿದ್ದಾರೆ.

    ಕೆಕೆಆರ್‌ ತಂಡ ಗೆಲುವು ಸಾಧಿಸುತ್ತಿದ್ದಂತೆ ಮಮತಾ ಬ್ಯಾನರ್ಜಿ ತಮ್ಮ ಎಕ್ಸ್‌ ಖಾತೆ ಮೂಲಕ ವಿಜೇತ ತಂಡಕ್ಕೆ ತುಂಬು ಹೃದಯದ ಅಭಿನಂದನೆ ಸಲ್ಲಿಸಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ. ಐಪಿಎಲ್‌ನ ಈ ಋತುವಿನಲ್ಲಿ ದಾಖಲೆಯ ಪ್ರದರ್ಶನ ನೀಡಿದ್ದಕ್ಕಾಗಿ ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಫ್ರಾಂಚೈಸಿಗೆ ನಾನು ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಮುಂಬರುವ ವರ್ಷಗಳಲ್ಲಿ ಇನ್ನಷ್ಟು ಇಂತಹ ಮೋಡಿಮಾಡುವ ಗೆಲುವು ಸಿಗಲೆಂದು ಹಾರೈಸುತ್ತೇನೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಶುಭ ಹಾರೈಸಿದ್ದಾರೆ.

    10 ವರ್ಷಗಳ ಬಳಿಕ ಐಪಿಎಲ್‌ ಕಿರೀಟ:
    17ನೇ ಆವೃತ್ತಿಯ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿದೆ. 2012 ಮತ್ತು 2014ರಲ್ಲಿ ಗೌತಮ್‌ ಗಂಭೀರ್‌ (Gautam Gambhir) ನಾಯಕತ್ವದಲ್ಲಿ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 10 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ಅವರ ನಾಯಕತ್ವದಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಅಲ್ಲದೇ ಹಿಂದೆ ತಂಡದ ನಾಯಕನಾಗಿ ಟ್ರೋಫಿ ಗೆದ್ದುಕೊಟ್ಟಿದ್ದ ಗೌತಮ್‌ ಗಂಭೀರ್‌ ಈ ಬಾರಿ ತಂಡದ ಕೋಚ್‌ ಆಗಿ ಟ್ರೋಫಿ ತಂದುಕೊಟ್ಟಿರುವುದು ವಿಶೇಷ.

    ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ 18.3 ಓವರ್‌ಗಳಲ್ಲಿ 113 ರನ್‌ಗಳಿಗೆ ಸರ್ವಪತನ ಕಂಡಿತ್ತು. ಅಲ್ಪ ಮೊತ್ತ ಗುರಿ ಪಡೆದ ಕೆಕೆಆರ್‌ ಕೇವಲ 10.3 ಓವರ್‌ಗಳಲ್ಲೇ 114 ರನ್‌ ಗಳಿಸಿ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

  • IPL 2024: ನಿವೃತ್ತಿ ಬಗ್ಗೆ ಮಹತ್ವದ ಸುಳಿವು ಕೊಟ್ಟ ಮಹಿ – ಅಭಿಮಾನಿಗಳಿಗೆ ಬಿಗ್‌ ಶಾಕ್‌!

    IPL 2024: ನಿವೃತ್ತಿ ಬಗ್ಗೆ ಮಹತ್ವದ ಸುಳಿವು ಕೊಟ್ಟ ಮಹಿ – ಅಭಿಮಾನಿಗಳಿಗೆ ಬಿಗ್‌ ಶಾಕ್‌!

    ಮುಂಬೈ: 16ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಬಳಿಕ ನಿವೃತ್ತಿ (Dhoni Retirement) ಸುಳಿವು ನೀಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡದ ನಾಯಕ ಎಂ.ಎಸ್‌ ಧೋನಿ 2024ರ ಐಪಿಎಲ್‌ನಲ್ಲಿ ಪಾಲ್ಗೊಳ್ಳುವ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.

    ಪ್ರಸಕ್ತ ವರ್ಷದ ಐಪಿಎಲ್‌ನಲ್ಲಿ ಸಿಎಸ್‌ಕೆ ಚಾಂಪಿಯನ್‌ ಆಗಿ ಹೊರಹೊಮ್ಮಿತು. ಐಪಿಎಲ್‌ ಬಳಿಕ ಧೋನಿ ಮೊಣಕಾಲು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿರುವ ಧೋನಿ, 2024ರ ಐಪಿಎಲ್‌ ಕುರಿತು ಮಾತನಾಡಿದ್ದಾರೆ. ಮಿನಿ ಹರಾಜಿಗೂ ಮುನ್ನ ಆಟಗಾರರ ಪಟ್ಟಿ ಸಲ್ಲಿಸುವಂತೆ ನವೆಂಬರ್‌ 15ರ ವರೆಗೆ ಗಡುವು ನೀಡಲಾಗಿದೆ. ಈ ನಡುವೆ ಮತ್ತೊಮ್ಮೆ ಧೋನಿ ತಮ್ಮ ನಿವೃತ್ತಿ ಬಗ್ಗೆ ಸುಳಿವು ಕೊಟ್ಟಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿರುವ ಮಹಿ, ನನಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಯಾಗಿದೆ (Knee Surgery). ಎಲ್ಲವೂ ಅಂದುಕೊಂಡಂತೆ ನಡೆದರೆ, ನಾನು ಒಂದು ವರ್ಷ ಐಪಿಎಲ್‌ ಆಡುವುದನ್ನು ನೋಡುತ್ತೀರಿ. ಇಲ್ಲದಿದ್ದರೆ ಅಭಿಮಾನಿಗಳೊಂದಿಗೆ ಕುಳಿತು ಪಂದ್ಯವನ್ನು ವೀಕ್ಷಣೆ ಮಾಡುತ್ತೇನೆ ಎಂದು ಮುಗುಳ್ನಕ್ಕಿದ್ದಾರೆ. ಇದನ್ನೂ ಓದಿ: ಪಾಕ್‌ ತಂಡಕ್ಕೆ ಇನ್ಮುಂದೆ ಬಿರಿಯಾನಿ ಬಂದ್‌ – ಆನ್‌ಲೈನ್‌ನಲ್ಲಿ ಬುಕ್‌ ಮಾಡಿ ಸಿಕ್ಕಿಬಿದ್ದ ಆಟಗಾರರು

    ಧೋನಿ ಟೀಂ ಇಂಡಿಯಾ (Team India) ಬಳಿಕ ಅತೀ ಹೆಚ್ಚು ಭಾವನಾತ್ಮಕವಾಗಿ ಸಂಬಂಧ ಹೊಂದಿರುವ ತಂಡವೆಂದರೆ ಅದು ಚೆನ್ನೈ ಸೂಪರ್ ಕಿಂಗ್ಸ್ ತಂಡ. ಐಪಿಎಲ್ 2008ರಲ್ಲಿ ಆರಂಭವಾದ ಬಳಿಕ ಚೆನ್ನೈ ಪರ ಆಡುತ್ತಿರುವ ಧೋನಿ ವಿಶೇಷವಾದ ಸಂಬಂಧ ಚೆನ್ನೈ ತಂಡ ಮತ್ತು ತಮಿಳುನಾಡಿನ ಜನರೊಂದಿಗೆ ಹೊಂದಿದ್ದಾರೆ. 16ನೇ ಐಪಿಎಲ್‌ ಆವೃತ್ತಿಯಲ್ಲೇ ಮಹಿ ನಿವೃತ್ತಿ ಘೋಷಣೆ ಮಾಡುವ ಎಲ್ಲ ಸುಳಿವು ನೀಡಿದ್ದರು. 5ನೇ ಬಾರಿ ಟ್ರೋಫಿ ಗೆದ್ದ ಬಳಿಕ ಮಹಿ 2024ರ ಐಪಿಎಲ್‌ನಲ್ಲೂ ಆಡುವುದಾಗಿ ಘೋಷಣೆ ಮಾಡಿದರು. ಇದನ್ನೂ ಓದಿ: ವಿಶ್ವಕಪ್‌ನ ಟಾಪ್‌ 7 ತಂಡಗಳು 2025 ರ ಚಾಂಪಿಯನ್ಸ್‌ ಟ್ರೋಫಿಗೆ – ಪಾಕಿಸ್ತಾನ ಡೈರೆಕ್ಟ್‌ ಎಂಟ್ರಿ

    ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡ 2010, 2011, 2018, 2021 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2023ರ ಆವೃತ್ತಿಯಲ್ಲಿ ಚಾಂಪಿಯನ್‌ ಆಗಿದ್ದ ಗುಜರಾತ್‌ ಟೈಟಾನ್ಸ್‌ ತಂಡವನ್ನು ಬಗ್ಗು ಬಡಿದು ಚೆನ್ಮೈ 5ನೇ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿತು. ಅಲ್ಲದೇ 2008, 2012, 2013, 2015, 2019ರಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದೆ. ಇದನ್ನೂ ಓದಿ: IPL Champions: ಗುಡ್‌ನ್ಯೂಸ್‌ – ಸದ್ಯಕ್ಕಿಲ್ಲ ನಿವೃತ್ತಿ, ಮುಂದಿನ IPLನಲ್ಲೂ ಕಣಕ್ಕಿಳಿಯಲಿದ್ದಾರೆ ಮಹಿ

    16ನೇ ಆವೃತ್ತಿ ಐಪಿಎಲ್‌ ಬಳಿಕ ಮಹಿ, ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ ನಿವೃತ್ತಿ ಘೋಷಿಸಲು ಇದು ನನಗೆ ಉತ್ತಮ ಸಮಯವಾಗಿದೆ. ಈ ವರ್ಷ ನಾನು ಎಲ್ಲೇ ಹೋಗಿದ್ದರು ನನ್ನ ಮೇಲೆ ಪ್ರೀತಿ ಮತ್ತು ವಾತ್ಸಲ್ಯ ತೋರಿಸಿದರು. ಎಲ್ಲರಿಗೂ ತುಂಬಾ ಧನ್ಯವಾದಗಳು ಎಂದು ಹೇಳುವುದು ಸುಲಭದ ವಿಷಯ. ಆದ್ರೆ ಕಠಿಣ ವಿಷಯವೆಂದರೆ ಇನ್ನೂ 9 ತಿಂಗಳು ಕಷ್ಟಪಟ್ಟು ಮುಂದಿನ ಐಪಿಎಲ್ ಆಡುವುದು. ಇದು ನನ್ನ ದೈಹಿಕ ಸಾಮರ್ಥ್ಯಕ್ಕೆ ಸುಲಭವಲ್ಲ. ಆದ್ರೆ ಅಭಿಮಾನಿಗಳಿಗೆ ಉಡುಗೊರೆಯಾಗಲಿದೆ ಎಂದು ತಿಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]