Tag: ಐಪಿಎಲ್ ವೇಳಾಪಟ್ಟಿ

  • ಐಪಿಎಲ್‌ ಸಂಪೂರ್ಣ ಲೀಗ್‌ ಭಾರತದಲ್ಲೇ ನಡೆಯುತ್ತೆ – ಜಯ್‌ ಶಾ ಸ್ಪಷ್ಟನೆ

    ಐಪಿಎಲ್‌ ಸಂಪೂರ್ಣ ಲೀಗ್‌ ಭಾರತದಲ್ಲೇ ನಡೆಯುತ್ತೆ – ಜಯ್‌ ಶಾ ಸ್ಪಷ್ಟನೆ

    ಮುಂಬೈ: ಈ ಬಾರಿ ಲೋಕಸಭಾ ಚುನಾವಣೆ ಹೊರತಾಗಿಯೂ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಟೂರ್ನಿಯನ್ನು ವಿದೇಶಕ್ಕೆ ಸ್ಥಳಾಂತರಿಸುವುದಿಲ್ಲ. ಸಂಪೂರ್ಣ ಲೀಗ್‌ ಭಾರತದಲ್ಲೇ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ (Jay Shah) ಸ್ಪಷ್ಟನೆ ನೀಡಿದ್ದಾರೆ.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೊದಲ 21 ಪಂದ್ಯಗಳು ಭಾರತದಲ್ಲಿ ನಡೆಯಲಿದ್ದು, ಉಳಿದ ಪಂದ್ಯಗಳು ದುಬೈಗೆ ಸ್ಥಳಾಂತರಿಸಲಾಗುತ್ತದೆ ಎಂಬ ಸುದ್ದಿ ಸೋಶಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿತ್ತು. ಈ ಬೆನ್ನಲ್ಲೇ ಜಯ್‌ ಶಾ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: RCB – CSK ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ – ಸೋಮವಾರದಿಂದಲೇ ಟಿಕೆಟ್‌ ಮಾರಾಟ ಶುರು, ದರ ಎಷ್ಟು?

    ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಈ ಹಿಂದೆ ಮಾಡಿದಂತೆ ಟೂರ್ನಿಯನ್ನು ಸ್ಥಳಾಂತರಿಸುವುದಿಲ್ಲ. ಈ ಬಾರಿ ಸಂಪೂರ್ಣ ಐಪಿಎಲ್‌ ಭಾರತದಲ್ಲೇ ನಡೆಯಲಿದೆ. ಯಾವುದೇ ಕಾರಣಕ್ಕೂ ಸ್ಥಳಾಂತರಿಸುವುದಿಲ್ಲ. ಚುನಾವಣೆಗೂ ಸಮಸ್ಯೆಯಾಗದಂತೆ ಉಳಿದ ವೇಳಾಪಟ್ಟಿ ಸಿದ್ಧಪಡಿಸುವ ಕಾರ್ಯದಲ್ಲಿ ಬಿಸಿಸಿಐ ಮಂಡಳಿ ತೊಡಗಿದೆ. ಶೀಘ್ರವೇ ಅದನ್ನು ಸಾರ್ವಜನಿಕಗೊಳಿಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: WPL 2024: ಅಂಪೈರ್‌ ಎಡವಟ್ಟು – ಫಿಕ್ಸಿಂಗ್‌ ಹಣೆಪಟ್ಟಿ ಕಟ್ಟಿಕೊಂಡ ಮುಂಬೈ ಇಂಡಿಯನ್ಸ್‌

    ಐಪಿಎಲ್‌ ಆರಂಭ ಯಾವಾಗ?
    ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ ಇದೇ ಮಾರ್ಚ್‌ 22 ರಿಂದ ಆರಂಭವಾಗಲಿದೆ. ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆ ಮೊದಲ 15 ದಿನಗಳು ಕಾಲ ನಡೆಯುವ 21 ಪಂದ್ಯಗಳ ವೇಳಾಪಟ್ಟಿ ಸದ್ಯಕ್ಕೆ ಪ್ರಕಟಿಸಲಾಗಿದೆ. ಮಾ. 22ರಿಂದ ಏಪ್ರಿಲ್ 7ರ ತನಕ 21 ಪಂದ್ಯಗಳು ನಡೆಯಲಿದ್ದು, ಈ ಪೈಕಿ 4 ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ. ಉದ್ಘಾಟನಾ ಪಂದ್ಯವು ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಉಳಿದ ಪಂದ್ಯಗಳು ಸಂಜೆ 7.30ಕ್ಕೆ ಪ್ರಾರಂಭವಾಗಲಿವೆ. ಡಬಲ್ ಹೆಡ್ಡರ್ ದಿನದಂದು ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.

    ಯಾರ ನಡುವೆ, ಯಾವ ದಿನ, ಎಲ್ಲಿ ಪಂದ್ಯ?
    1. ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಮಾರ್ಚ್ 22 ಚೆನ್ನೈ,
    2. ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 23, ಮೊಹಾಲಿ,
    3. ಕೋಲ್ಕತ್ತಾ ನೈಟ್​ ರೈಡರ್ಸ್ vs ಸನ್​ರೈಸರ್ಸ್ ಹೈದರಾಬಾದ್, ಮಾರ್ಚ್ 23, ಕೋಲ್ಕತ್ತಾ
    4. ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಮಾರ್ಚ್ 24, ಜೈಪುರ
    5. ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್, ಮಾರ್ಚ್ 24, ಅಹಮದಾಬಾದ್
    6. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್, ಮಾರ್ಚ್ 25, ಬೆಂಗಳೂರು
    7. ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್, ಮಾರ್ಚ್ 26, ಚೆನ್ನೈ
    8. ಸನ್​ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್, ಮಾರ್ಚ್ 27, ಹೈದರಾಬಾದ್
    9. ಆರ್‌ಆರ್‌ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 28 ಜೈಪುರ
    10. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್​ ರೈಡರ್ಸ್, ಮಾರ್ಚ್ 29 ಬೆಂಗಳೂರು
    11. ಲಕ್ನೋ ಸೂಪರ್ ಜೈಂಟ್ಸ್ vs ಪಂಜಾಬ್ ಕಿಂಗ್ಸ್, ಮಾರ್ಚ್ 30, ಲಕ್ನೋ
    12. ಗುಜರಾತ್ ಟೈಟಾನ್ಸ್ vs ಸನ್​ರೈಸರ್ಸ್ ಹೈದರಾಬಾದ್, ಮಾರ್ಚ್ 31, ಅಹಮದಾಬಾದ್
    13. ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಮಾರ್ಚ್ 31, ವಿಶಾಖಪಟ್ಟಣಂ
    14. ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್, ಏಪ್ರಿಲ್ 1, ಮುಂಬೈ
    15. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್, ಏಪ್ರಿಲ್ 2, ಬೆಂಗಳೂರು
    16. ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್​ ರೈಡರ್ಸ್, ಏಪ್ರಿಲ್ 3, ವಿಶಾಖಪಟ್ಟಣಂ
    17. ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್, ಏಪ್ರಿಲ್ 4, ಅಹಮದಾಬಾದ್
    18. ಸನ್​ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್, ಏಪ್ರಿಲ್ 5, ಹೈದರಾಬಾದ್
    19. ರಾಜಸ್ಥಾನ್ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಏಪ್ರಿಲ್ 6, ಜೈಪುರ
    20. ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಏಪ್ರಿಲ್ 7, ಮುಂಬೈ
    21. ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟಾನ್ಸ್, ಏಪ್ರಿಲ್ 7, ಲಕ್ನೋ

  • ಮಾ.22 ರಿಂದ IPL ಶುರು; ಉದ್ಘಾಟನಾ ಪಂದ್ಯದಲ್ಲೇ ಚೆನ್ನೈ-ಆರ್‌ಸಿಬಿ ನಡುವೆ ಹೈವೋಲ್ಟೇಜ್‌ ಕದನ!

    ಮಾ.22 ರಿಂದ IPL ಶುರು; ಉದ್ಘಾಟನಾ ಪಂದ್ಯದಲ್ಲೇ ಚೆನ್ನೈ-ಆರ್‌ಸಿಬಿ ನಡುವೆ ಹೈವೋಲ್ಟೇಜ್‌ ಕದನ!

    – ಚೆನ್ನೈ ತವರು ಕ್ರೀಡಾಂಗಣದಲ್ಲಿ ಗೆದ್ದು ಬೀಗುತ್ತಾ ಆರ್‌ಸಿಬಿ?
    – ಈ ಸಲ ಕಪ್‌ ಯಾರದ್ದು?

    ಚೆನ್ನೈ: ಕ್ರಿಕೆಟ್‌ ಪ್ರೇಮಿಗಳಿಗೆ ಬಿಸಿಸಿಐ (BCCI) ಸಿಹಿ ಸುದ್ದಿ ಕೊಟ್ಟಿದ್ದು, ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ ವೇಳಾಪಟ್ಟಿಯನ್ನು (IPL 2024 Schedule) ಪ್ರಕಟಿಸಿದೆ.

    ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆ ಮೊದಲ 15 ದಿನಗಳು ಕಾಲ ನಡೆಯುವ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಮುಂದಿನ ವೇಳಾಪಟ್ಟಿ ಪ್ರಕಟಿಸುವುದಾಗಿ ಬಿಸಿಸಿಐ (BCCI) ಸ್ಪಷ್ಟಪಡಿಸಿದೆ. 2019ರ ಲೋಕಸಭಾ ಚುನಾವಣೆ ಅವಧಿಯಲ್ಲೂ ಇದೇ ವಿಧಾನ ಅನುಸರಿ ಎರಡು ಹಂತಗಳಲ್ಲಿ ಟೂರ್ನಿಯನ್ನು ನಡೆಸಲಾಗಿತ್ತು. ಇದನ್ನೂ ಓದಿ: 2024ರ ಐಪಿಎಲ್‌ ಟೂರ್ನಿಯಿಂದಲೇ ಶಮಿ ಔಟ್‌ – ಗುಜರಾತ್‌ ಟೈಟಾನ್ಸ್‌ಗೆ ಭಾರೀ ಆಘಾತ

    2024ರ ಐಪಿಎಲ್​ ಟೂರ್ನಿ ಮಾರ್ಚ್​ 22ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲೇ ಹಾಲಿ ಚಾಂಪಿಯನ್ಸ್‌ ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಸೆಣಸಾಟ ನಡೆಯಲಿದೆ. ಚೆನ್ನೈನ ಚಿದಂಬರಂ (ಚೆಪಾಕ್) ಕ್ರಿಕೆಟ್​ ಕ್ರೀಡಾಂಗಣದಲ್ಲಿ ಇತ್ತಂಡಗಳು ನಡುವೆ ಕಾದಾಟ ನಡೆಸಲಿವೆ. ಇದನ್ನೂ ಓದಿ: ಫೋಟೋ ಶೂಟ್‌ನಲ್ಲಿ ಮಿಂಚಿದ RCB ಸ್ಟಾರ್ಸ್‌ – ʻಈ ಸಲ ಕಪ್‌ ನಮ್ದೇʼ ಮತ್ತೆ ಶುರುವಾಯ್ತು ಟ್ರೆಂಡ್‌!

    ಸದ್ಯ ಮಾ. 22ರಿಂದ ಏಪ್ರಿಲ್ 7ರ ತನಕ 21 ಪಂದ್ಯಗಳು ನಡೆಯಲಿದ್ದು, ಈ ಪೈಕಿ 4 ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ. ಉದ್ಘಾಟನಾ ಪಂದ್ಯವು ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಉಳಿದ ಪಂದ್ಯಗಳು ಸಂಜೆ 7.30ಕ್ಕೆ ಪ್ರಾರಂಭವಾಗಲಿವೆ. ಡಬಲ್ ಹೆಡ್ಡರ್ ದಿನದಂದು ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ. ಇದನ್ನೂ ಓದಿ: 10,000 ರನ್‌ ಪೂರೈಸಿ ದಾಖಲೆ; ಬಾಬಾರ್‌ ಸ್ಫೋಟಕ ಆಟಕ್ಕೆ ಗೇಲ್‌, ವಿರಾಟ್‌ ಕೊಹ್ಲಿ ದಾಖಲೆ ಉಡೀಸ್‌

    ಯಾರ ನಡುವೆ, ಯಾವ ದಿನ, ಎಲ್ಲಿ ಪಂದ್ಯ?
    1. ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಮಾರ್ಚ್ 22 ಚೆನ್ನೈ,
    2. ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 23, ಮೊಹಾಲಿ,
    3. ಕೋಲ್ಕತ್ತಾ ನೈಟ್​ ರೈಡರ್ಸ್ vs ಸನ್​ರೈಸರ್ಸ್ ಹೈದರಾಬಾದ್, ಮಾರ್ಚ್ 23, ಕೋಲ್ಕತ್ತಾ
    4. ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಮಾರ್ಚ್ 24, ಜೈಪುರ
    5. ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್, ಮಾರ್ಚ್ 24, ಅಹಮದಾಬಾದ್
    6. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್, ಮಾರ್ಚ್ 25, ಬೆಂಗಳೂರು
    7. ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್, ಮಾರ್ಚ್ 26, ಚೆನ್ನೈ
    8. ಸನ್​ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್, ಮಾರ್ಚ್ 27, ಹೈದರಾಬಾದ್
    9. ಆರ್‌ಆರ್‌ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 28 ಜೈಪುರ
    10. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್​ ರೈಡರ್ಸ್, ಮಾರ್ಚ್ 29 ಬೆಂಗಳೂರು
    11. ಲಕ್ನೋ ಸೂಪರ್ ಜೈಂಟ್ಸ್ vs ಪಂಜಾಬ್ ಕಿಂಗ್ಸ್, ಮಾರ್ಚ್ 30, ಲಕ್ನೋ
    12. ಗುಜರಾತ್ ಟೈಟಾನ್ಸ್ vs ಸನ್​ರೈಸರ್ಸ್ ಹೈದರಾಬಾದ್, ಮಾರ್ಚ್ 31, ಅಹಮದಾಬಾದ್
    13. ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಮಾರ್ಚ್ 31, ವಿಶಾಖಪಟ್ಟಣಂ
    14. ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್, ಏಪ್ರಿಲ್ 1, ಮುಂಬೈ
    15. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್, ಏಪ್ರಿಲ್ 2, ಬೆಂಗಳೂರು
    16. ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್​ ರೈಡರ್ಸ್, ಏಪ್ರಿಲ್ 3, ವಿಶಾಖಪಟ್ಟಣಂ
    17. ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್, ಏಪ್ರಿಲ್ 4, ಅಹಮದಾಬಾದ್
    18. ಸನ್​ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್, ಏಪ್ರಿಲ್ 5, ಹೈದರಾಬಾದ್
    19. ರಾಜಸ್ಥಾನ್ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಏಪ್ರಿಲ್ 6, ಜೈಪುರ
    20. ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಏಪ್ರಿಲ್ 7, ಮುಂಬೈ
    21. ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟಾನ್ಸ್, ಏಪ್ರಿಲ್ 7, ಲಕ್ನೋ

  • ವಿದೇಶದಲ್ಲಿ ಅಲ್ಲ, ಈ ಬಾರಿಯೂ ಭಾರತದಲ್ಲೇ IPL – ಯಾವಾಗಿನಿಂದ ಶುರು?

    ವಿದೇಶದಲ್ಲಿ ಅಲ್ಲ, ಈ ಬಾರಿಯೂ ಭಾರತದಲ್ಲೇ IPL – ಯಾವಾಗಿನಿಂದ ಶುರು?

    ಮುಂಬೈ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 17ನೇ ಆವೃತ್ತಿ IPLನ ಕೆಲ ಪಂದ್ಯಗಳು ವಿದೇಶದಲ್ಲಿ ನಡೆಯಲಿವೆ ಎಂಬ ಊಹಾಪೋಹಗಳಿಗೆ ಐಪಿಎಲ್ ಮುಖ್ಯಸ್ಥ ಅರುಣ್‌ ಧುಮಾಲ್ (Arun Dhumal) ತೆರೆ ಎಳೆದಿದ್ದಾರೆ. ಈ ಬಾರಿ ಐಪಿಎಲ್ ಭಾರತದಲ್ಲೇ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಈ ಬಾರಿ ಐಪಿಎಲ್‌ ಭಾರತದಲ್ಲೇ ನಡೆಯಲಿದೆ. ಈ ಬಗ್ಗೆ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಲೋಕಸಭೆ ಚುನಾವಣೆಗೆ (Lok Sabha Elections) ವೇಳಾಪಟ್ಟಿ ಪ್ರಕಟಗೊಳ್ಳಲು ಕಾಯುತ್ತಿದೇವೆ. ಆ ಬಳಿಕ ಐಪಿಎಲ್ ವೇಳಾಪಟ್ಟಿ ಅಂತಿಮಗೊಳಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ 3ನೇ ಟೆಸ್ಟ್‌ ಪಂದ್ಯಕ್ಕೆ ಜಡ್ಡು ಇನ್‌ – ಕೆ.ಎಲ್‌ ರಾಹುಲ್‌ ಬದಲಿಗೆ ಮತ್ತೊಬ್ಬ ಕನ್ನಡಿಗನಿಗೆ ಚಾನ್ಸ್‌

    ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್ ಅಂತ್ಯದ ವೇಳೆಗೆ ಟೂರ್ನಿ ಆರಂಭಗೊಳ್ಳುವ ನಿರೀಕ್ಷೆಯಿದೆ. ಏಪ್ರಿಲ್‌ನಲ್ಲಿ ಚುನಾವಣೆ ನಡೆಯಬಹುದು. ಹೀಗಾಗಿ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ. ಜೊತೆಗೆ ಎಲ್ಲಾ ಪಂದ್ಯಗಳು ಭಾರತದಲ್ಲಿ ನಡೆಯುವಂತೆ ನೋಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 1,078 ತಂಡಗಳು, 16,100 ಆಟಗಾರರು – ಮೋದಿ ತವರಲ್ಲಿ ʻಲೋಕಸಭಾ ಪ್ರೀಮಿಯರ್‌ ಲೀಗ್‌ʼಗೆ ಚಾಲನೆ

    ಐಪಿಎಲ್‌ ಯಾವಾಗಿನಿಂದ ಶುರು?
    17ನೇ ಆವೃತ್ತಿಯ ಐಪಿಎಲ್‌ ಮಾರ್ಚ್‌ 22 ರಿಂದ ಆರಂಭವಾಗಿ ಮೇ 26ರ ವರೆಗೆ ನಡೆಯುವ ಸಾಧ್ಯತೆಗಳಿವೆ. ಚುನಾವಣಾ ವೇಳಾಪಟ್ಟಿ ನಿಗದಿಪಡಿಸಿದ ನಂತರ ಐಪಿಎಲ್‌ ದಿನಾಂಕ ಘೋಷಣೆ ಮಾಡುವ ಸಾಧ್ಯತೆಗಳಿವೆ. ಐಪಿಎಲ್‌ಗೂ ಮುನ್ನ ಮಹಿಳಾ ಪ್ರೀಮಿಯರ್‌ ಲೀಗ್‌ ಸಹ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 8 ತಿಂಗಳಲ್ಲಿ ಆಸ್ಟ್ರೇಲಿಯಾ ವಿರುದ್ಧವೇ 3 ವಿಶ್ವಕಪ್‌ ಟ್ರೋಫಿ ಕಳೆದುಕೊಂಡ ಭಾರತ!

    ಲೋಕಸಭೆ ಚುನಾವಣೆ ವರ್ಷದಲ್ಲಿ ಭಾರತದ ಐಪಿಎಲ್‌ ಟೂರ್ನಿ ನಡೆಯುತ್ತಿರುವುದು ಇದು ನಾಲ್ಕನೇ ಬಾರಿ. ಈ ಹಿಂದೆಯೂ 2009, 2014 ಮತ್ತು 2019 ರಲ್ಲಿಯೂ ಲೋಕಸಭಾ ಚುನಾವಣಾ ವರ್ಷದಲ್ಲೇ ಐಪಿಎಲ್‌ ನಡೆದಿತ್ತು. ಅಲ್ಲದೇ 2009 ಮತ್ತು 2014ರಲ್ಲಿ ದೇಶದ ಹೊರಗೆ ಐಪಿಎಲ್ ಅನ್ನು ಸ್ಥಳಾಂತರಿಸಲಾಗಿತ್ತು. ಆದ್ರೆ 2019ರಲ್ಲಿ ಭಾರತದಲ್ಲಿಯೇ ನಡೆದಿತ್ತು.

  • ಕೊನೆಗೂ ಐಪಿಎಲ್ ಶೆಡ್ಯೂಲ್ ಬಿಡುಗಡೆಗೆ ಮುಹೂರ್ತ ಫಿಕ್ಸ್

    ಕೊನೆಗೂ ಐಪಿಎಲ್ ಶೆಡ್ಯೂಲ್ ಬಿಡುಗಡೆಗೆ ಮುಹೂರ್ತ ಫಿಕ್ಸ್

    ಮುಂಬೈ: ಬಹುನಿರೀಕ್ಷಿತ 2020ರ ಐಪಿಎಲ್ ಆವೃತ್ತಿ ಸೆ.19 ರಿಂದ ಆರಂಭವಾಗುತ್ತಿದ್ದು, ಆದರೆ ಇದುವರೆಗೂ ಟೂರ್ನಿಯ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿಲ್ಲ. ಸದ್ಯ ಈ ಕುರಿತು ಮಾತನಾಡಿರುವ ಬಿಸಿಸಿಐ ಅಧ್ಯಕ್ಷ ಗಂಗೂಲಿ, ಟೂರ್ನಿಯ ಶೆಡ್ಯೂಲ್ ಬಿಡುಗಡೆಯಾಗುವ ದಿನಾಂಕವನ್ನು ತಿಳಿಸಿದ್ದಾರೆ.

    ಗಂಗೂಲಿ ಟೂರ್ನಿಯ ಶೆಡ್ಯೂಲ್ ಬಿಡುಗಡೆ ಕುರಿತು ಎಬಿಪಿ ನ್ಯೂಸ್‍ನೊಂದಿಗೆ ಮಾತನಾಡಿದ್ದು, ಬಿಸಿಸಿಐ ಟೂರ್ನಿಯ ವೇಳಾಪಟ್ಟಿಯನ್ನು ಸೆ.4ರ ಶುಕ್ರವಾರದಂದು ಬಿಡುಗಡೆ ಮಾಡಲಿದೆ ಎಂದಿದ್ದಾರೆ.

    ಮಾಧ್ಯಮ ವರದಿಗಳ ಅನ್ವಯ ಟೂರ್ನಿಯ ವೇಳಾಪಟ್ಟಿಯನ್ನು ಈ ಹಿಂದೆಯೇ ಬಿಡುಗಡೆ ಮಾಡಲು ಬಿಸಿಸಿಐ ಸಿದ್ಧತೆ ನಡೆಸಿತ್ತು. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ 12 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಶೆಡ್ಯೂಲ್ ಬಿಡುಗಡೆಯನ್ನು ಮುಂದೂಡಿತ್ತು. ಆದರೆ ಸದ್ಯ ಸಿಎಸ್‍ಕೆ ತಂಡದ ಸದಸ್ಯರು ಕೊರೊನಾದಿಂದ ಚೇತರಿಸಿಕೊಳ್ಳುತ್ತಿದ್ದು, ಶೆಡ್ಯೂಲ್ ಬಿಡುಗಡೆಗೆ ಮುಹೂರ್ತ ನಿಗದಿ ಮಾಡಿದೆ.

    ಆದರೆ ಬಿಸಿಸಿಐ ಇಡೀ ಟೂರ್ನಿಯ ಶೆಡ್ಯೂಲ್ ಬಿಡುಗಡೆ ಮಾಡಲಿದೇಯಾ ಅಥವಾ ಹಂತ ಹಂತದಲ್ಲಿ ವೇಳಾಪಟ್ಟಿ ಬಿಡುಗಡೆ ಮಾಡುತ್ತಾ ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ಲಭಿಸಿಲ್ಲ. ಇತ್ತ ಅಭಿಮಾನಿಗಳು ತಮ್ಮ ನೆಚ್ಚಿನ ತಂಡ ಯಾವ ದಿನಾಂಕದಲ್ಲಿ ಕಣಕ್ಕಿಳಿಯಲಿದೆ ಎಂದು ತಿಳಿದುಕೊಳ್ಳಲು ಕಾತುರರಾಗಿದ್ದಾರೆ.