Tag: ಐಪಿಎಲ್

  • ಆರ್‌ಸಿಬಿ ಹಿಂದಿ ಒಲವಿಗೆ ಕನ್ನಡ ಅಭಿಮಾನಿಗಳ ಆಕ್ರೋಶ

    ಆರ್‌ಸಿಬಿ ಹಿಂದಿ ಒಲವಿಗೆ ಕನ್ನಡ ಅಭಿಮಾನಿಗಳ ಆಕ್ರೋಶ

    ಬೆಂಗಳೂರು: ಐಪಿಎಲ್‌ನಲ್ಲಿ (IPL) ಬೆಂಗಳೂರನ್ನು (Bengaluru) ಪ್ರತಿನಿಧಿಸುತ್ತಿರುವ ಆರ್‌ಸಿಬಿಗೂ (RCB) ಕನ್ನಡ-ಹಿಂದಿ ಭಾಷಾ ಬಿಸಿ ತಟ್ಟಿದೆ.

    ಸೀಸನ್ 18 ಹರಾಜಿನ ವೇಳೆ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಹಿಂದಿ ಸೋಷಿಯಲ್ ಮೀಡಿಯಾ ಓಪನ್ ಮಾಡಿದೆ. ವಿರಾಟ್ ಕೊಹ್ಲಿ ಹಿಂದಿಯಲ್ಲಿ ಆರ್‌ಸಿಬಿ ಬಗ್ಗೆ ಮಾತಾಡಿರುವ ವಿಡಿಯೋವನ್ನು ಹಂಚಿಕೊಂಡಿದೆ. ಆರ್‌ಸಿಬಿ ಹಿಂದಿ (Hindi) ಪ್ರೀತಿಗೆ ಕನ್ನಡ ಫ್ಯಾನ್ಸ್ ಸಿಡಿದೆದ್ದಿದ್ದಾರೆ.

    ಇದು ಬೆಂಗಳೂರಿನ ಕನ್ನಡ (Kannada) ಸಂಸ್ಕೃತಿಗೆ ಮಾಡಿರುವ ಅವಮಾನ. ಈ ಕ್ಷಣವೇ ಹಿಂದಿ ಪೇಜ್ ಅನ್ನು ರದ್ದು ಮಾಡಿ ಡಿಲೀಟ್ ಮಾಡಿ ಎಂದು ಆಗ್ರಹಿಸಿದ್ದಾರೆ. ಆದರೆ ಆರ್‌ಸಿಬಿ ಕನ್ನಡ ಅಭಿಮಾನಿಗಳ ಆಕ್ಷೇಪಕ್ಕೆ ಇತರೇ ಭಾಷಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.


    ವಿವಾದದ ಬೆನ್ನಲ್ಲೇ ಬಳಿಕ ಎಚ್ಚೆತ್ತ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಸ್ಪಷ್ಟನೆ ಕೊಟ್ಟಿದೆ. ಮತ್ತಷ್ಟು ಜನರನ್ನು ತಲುಪುವ ಗುರಿ ಹೊಂದಿದ್ದು, ಕನ್ನಡ, ಹಿಂದಿ ಪೇಜ್ ಓಪನ್ ಮಾಡಿದ್ದೇವೆ. ಜೊತೆಗೆ ಮತ್ತಷ್ಟು ಭಾಷೆಗಳಲ್ಲೂ ಸೋಷಿಯಲ್ ಮೀಡಿಯಾ ಪೇಜ್ ಆರಂಭಿಸುತ್ತೇವೆ ಎಂದು ಸ್ಪಷ್ಟನೆ ಕೊಟ್ಟಿದೆ.  ಇದನ್ನೂ ಓದಿ: ನನ್ನ ಪ್ರೀತಿಯ RCBಗೆ…: ತಂಡದಿಂದ ಕೈಬಿಟ್ಟ ಆರ್‌ಸಿಬಿಗೆ ಸಿರಾಜ್‌ ಭಾವುಕ ವಿದಾಯ

    ಆರ್‌ಸಿಬಿ ಮ್ಯಾನೇಜ್‌ಮೆಂಟ್ ಸಮರ್ಥನೆಗೂ ಅಭಿಮಾನಿಗಳು ಕಿಡಿಕಾರಿದ್ದಾರೆ. ಬೇರೆ ತಂಡಗಳು ಕನ್ನಡದಲ್ಲಿ ಪೇಜ್ ಓಪನ್ ಮಾಡುತ್ತಾರಾ? ಸಂವಹನಕ್ಕೆ ಬೇಕಾದರೆ ಕನ್ನಡ-ಇಂಗ್ಲಿಷ್ ಸಾಲದೇ ಅಂತ ಪ್ರಶ್ನಿಸಿದ್ದಾರೆ.

    ಇನ್ನು ಕೆಲವರು ಆರ್‌ಸಿಬಿ ಏನು ರಣಜಿ ಟೀಮ್ ಅಲ್ಲ, ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದೆ. ಹಿಂದಿ ಸೇರಿದಂತೆ ಬೇರೆ ಭಾಷೆಗಳಲ್ಲಿ ಪೋಸ್ಟ್ ಮಾಡಿದರೆ ತಪ್ಪಲ್ಲ. ಕೆಎಂಎಫ್‌ನವರು (KMF) ನಂದಿನಿ ಹಾಲಿನ (Nandini Milk) ಬಗ್ಗೆ ದೆಹಲಿಯಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದರೆ ಇದಕ್ಕೆ ಆಕ್ಷೇಪಿಸ್ತೀರಾ ಎಂದು ವಾದಿಸುತ್ತಿದ್ದಾರೆ.

  • ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿ – 13ನೇ ವರ್ಷದಲ್ಲೇ ಕೋಟ್ಯಧಿಪತಿ

    ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿ – 13ನೇ ವರ್ಷದಲ್ಲೇ ಕೋಟ್ಯಧಿಪತಿ

    ಜೆಡ್ಡಾ: 13 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi) ಐಪಿಎಲ್‌ ಹರಾಜಿನಲ್ಲಿ (IPL Mega Auction) ಇತಿಹಾಸ ಸೃಷ್ಟಿಸಿದ್ದಾರೆ. ಎರಡನೇ ದಿನದಂದು 1.10 ಕೋಟಿ ರೂ.ಗೆ ಮಾರಾಟವಾಗುವ ಮೂಲಕ ಐಪಿಎಲ್‌ನಲ್ಲಿ ಮಾರಾಟವಾದ ಅತಿ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

    ರಾಜಸ್ಥಾನ ರಾಯಲ್ಸ್‌ (Rajasthan Royals) ಬಿಹಾರದ ಕಿರಿಯ ಆಟಗಾರ ಸೂರ್ಯವಂಶಿಯನ್ನು 1.10 ಕೋಟಿ ರೂ. ನೀಡಿ ಖರೀದಿಸಿತು. 30 ಲಕ್ಷ ರೂ. ಮೂಲ ಬೆಲೆಯನ್ನು ಹೊಂದಿದ್ದ ಆಟಗಾರನನ್ನು ಖರೀದಿಸಲು ದೆಹಲಿ ಕ್ಯಾಪಿಟಲ್ಸ್‌ ಪ್ರಯತ್ನಿಸಿತ್ತು.

    5ನೇ ವಯಸ್ಸಿನಲ್ಲೇ ಕ್ರಿಕೆಟ್ ಅಭ್ಯಾಸ ಶುರು ಮಾಡಿದ್ದ ವೈಭವ್, 12ನೇ ವಯಸ್ಸಿಗೆ ಪ್ರಥಮ ದರ್ಜೆ ಪಂದ್ಯವಾಡಿದ್ದರು. ಈಗಾಗಲೇ ರಣಜಿ ಟ್ರೋಫಿ, ಹೇಮಂತ್ ಟ್ರೋಫಿ, ಕೂಚ್ ಬಿಹಾರ್ ಟ್ರೋಫಿ ಮತ್ತು ವಿನೂ ಮಂಕಡ್ ಟೂರ್ನಿಗಳಲ್ಲಿ ಆಡಿದ್ದಾರೆ. 13ನೇ ವಯಸ್ಸಿನೊಳಗೆ ಭಾರತ ಅಂಡರ್-19 ತಂಡದಲ್ಲೂ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: 10.75 ಕೋಟಿ ಬಿಡ್‌ – ಅಭಿಮಾನಿಗಳ ಮನವಿಗೆ ಭುವಿ ಖರೀದಿ ಎಂದ ಆರ್‌ಸಿಬಿ


    2023 ರಲ್ಲಿ ರಣಜಿ ಟೂರ್ನಿಗೆ ಪಾದಾರ್ಪಣೆ ಮಾಡಿದ್ದ ಸೂರ್ಯವಂಶಿ, ಆ ಬಳಿಕ ಬಿಹಾರ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ರಣಧೀರ್ ವರ್ಮಾ ಅಂಡರ್ 19 ಏಕದಿನ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ತ್ರಿಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಕಳೆದ ತಿಂಗಳು ಆಸ್ಟ್ರೇಲಿಯಾದ ಅಂಡರ್-19 ತಂಡದ ವಿರುದ್ಧ 64 ಎಸೆತಗಳಲ್ಲಿ 104 ರನ್ ಸಿಡಿಸಿ ಮಿಂಚಿದ್ದರು. ಈ ವೇಳೆ ಅವರು ಕೇವಲ 58 ಎಸೆತಗಳಲ್ಲಿ ಶತಕ ಪೂರೈಸಿ, ಅಂಡರ್-19 ಟೆಸ್ಟ್‌ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಿದ್ದಾರೆ.

    ಸೂರ್ಯವಂಶಿ ಈವರೆಗೆ ಒಟ್ಟು 49 ಶತಕಗಳನ್ನು ಸಿಡಿಸಿದ್ದಾರೆ. ಇದರಿಂದಲೇ ವೈಭವ್ ಹೆಸರು ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು.

     

  • 10.75 ಕೋಟಿ ಬಿಡ್‌ – ಅಭಿಮಾನಿಗಳ ಮನವಿಗೆ ಭುವಿ ಖರೀದಿ ಎಂದ ಆರ್‌ಸಿಬಿ

    10.75 ಕೋಟಿ ಬಿಡ್‌ – ಅಭಿಮಾನಿಗಳ ಮನವಿಗೆ ಭುವಿ ಖರೀದಿ ಎಂದ ಆರ್‌ಸಿಬಿ

    ಜೆಡ್ಡಾ: ಭುವನೇಶ್ವರ್‌ ಕುಮಾರ್‌ (Bhuvneshwar Kumar) ಮರಳಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ತಂಡವನ್ನು ಸೇರಿದ್ದಾರೆ. ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆದ ಐಪಿಎಲ್‌ ಹರಾಜು (IPL Mega Auction) ಪ್ರಕ್ರಿಯೆಯಲ್ಲಿ ವೇಗಿ ಭುವನೇಶ್ವರ್‌ ಕುಮಾರ್‌ ಅವರನ್ನು ಆರ್‌ಸಿಬಿ 10.75 ಕೋಟಿ ರೂ. ನೀಡಿ ಖರೀದಿಸಿದೆ.

    ಭುವನೇಶ್ವರ್‌ ಕುಮಾರ್‌ ಅವರನ್ನು ಖರೀದಿಸಲು ಮುಂಬೈ ಇಂಡಿಯನ್ಸ್‌ ಮತ್ತು ಲಕ್ನೋ ಪೈಪೋಟಿ ನಡೆಸಿತ್ತು. ಆದರೆ ಬಿಡ್‌ ಮೌಲ್ಯ 10 ಕೋಟಿ ರೂ. ದಾಟುತ್ತಿದ್ದಂತೆ ಎರಡು ತಂಡಗಳು ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿದರು.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಆರ್‌ಸಿಬಿ , ಅಭಿಮಾನಿಗಳು ಮನವಿ ಮಾಡಿದ್ದಕ್ಕೆ ಭುವನೇಶ್ವರ್‌ ಕುಮಾರ್‌ ಅವರನ್ನು ಖರೀದಿಸಿದ್ದೇವೆ ಎಂದು ತಿಳಿಸಿದೆ.

    ಹಾಗೆ ನೋಡಿದರೆ ಭುವನೇಶ್ವರ್‌ ಕುಮಾರ್‌ ಐಪಿಎಲ್‌ ಪ್ರಯಾಣ ಆರಂಭಿಸಿದ್ದೇ ಆರ್‌ಸಿಬಿಯಿಂದ. 2009 ರಲ್ಲಿ ಆರ್‌ಸಿಬಿ ಸೇರಿದ್ದ ಭುವನೇಶ್ವರ್‌ ಕುಮಾರ್‌ ಎರಡು ಆವೃತ್ತಿಗಳ ಕಾಲ ತಂಡದಲ್ಲಿದ್ದರು. ನಂತರ 2011 ರಲ್ಲಿ ಪುಣೆ ವಾರಿಯರ್ಸ್‌ ತಂಡವನ್ನು ಸೇರಿದ್ದರು. ಇದನ್ನೂ ಓದಿ: ಆರ್‌ಸಿಬಿಗೆ ಫಿಲ್‌ ಸಾಲ್ಟ್‌, ಜಿತೇಶ್‌ ಶರ್ಮಾ, ಹ್ಯಾಜಲ್‌ವುಡ್‌

    ಪುಣೆ ವಾರಿಯರ್ಸ್‌ ತಂಡವನ್ನು ವಿಸರ್ಜಿಸಿದ ಬಳಿಕ 2014ರ ಐಪಿಎಲ್‌ ಹರಾಜಿನಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ (SRH) ತಂಡ 4.5 ಕೋಟಿ ರೂ. ನೀಡಿ ಭುವಿಯನ್ನು ಖರೀದಿಸಿತ್ತು. 2016ರಲ್ಲಿ ಎಸ್‌ಆರ್‌ಹೆಚ್‌ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು. ಈ ವೇಳೆ ಭುವಿ 23 ವಿಕೆಟ್‌ ಪಡೆಯುವ ಮೂಲಕ ಪರ್ಪಲ್‌ ಕ್ಯಾಪ್‌ ಪಡೆದಿದ್ದರು. 2018 ರಲ್ಲಿ ಭುವನೇಶ್ವರ್‌ ಕುಮಾರ್‌ ಅವರನ್ನು ಉಪನಾಯಕನಾಗಿ ನೇಮಿಸಲಾಯಿತು. ಇದನ್ನೂ ಓದಿ: IPL 2025 Auction: ಐಪಿಎಲ್‌ ಇತಿಹಾಸದಲ್ಲೇ ದಾಖಲೆ ಮೊತ್ತಕ್ಕೆ ಪಂತ್‌ ಸೇಲ್‌ – 27 ಕೋಟಿಗೆ ಲಕ್ನೋ ಪಾಲು

    2022ರ ಹರಾಜಿನಲ್ಲಿ ಹೈದರಾಬಾದ್‌ 4.2 ಕೋಟಿ ರೂ. ನೀಡಿ ಭುವಿಯನ್ನು ಖರೀದಿಸಿದ್ದ ಹೈದರಾಬಾದ್‌ ಈ ವರ್ಷ ತಂಡದಿಂದ ಬಿಡುಗಡೆ ಮಾಡಿತ್ತು.

  • ಮುಂದಿನ 3 ಐಪಿಎಲ್ ಸೀಸನ್‌ಗಳ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

    ಮುಂದಿನ 3 ಐಪಿಎಲ್ ಸೀಸನ್‌ಗಳ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

    ನವದೆಹಲಿ: ಈ ಬಾರಿಯ ಐಪಿಎಲ್ ಸೀಸನ್ ಸೇರಿದಂತೆ 2026 ಹಾಗೂ 2027ರ ಸೀಸನ್‌ಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದೆ.

    ಇಂದು (ನ.22) ಭಾರತೀಯ ಕ್ರಿಕೆಟ್ ಮಂಡಳಿಯು (Board of Control for Cricket in India) 2025ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (Indian Premier League) ವೇಳಾಪಟ್ಟಿ ಪ್ರಕಟಿಸಿದ್ದು, ಜೊತೆಗೆ 2026 ಹಾಗೂ 2027ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸಾಮಾನ್ಯವಾಗಿ ಬಿಸಿಸಿಐ ಪಂದ್ಯಗಳು ಸಮೀಪಿಸುತ್ತಿದ್ದಂತೆ ವೇಳಾಪಟ್ಟಿಯನ್ನು ಪ್ರಕಟಿಸುತ್ತದೆ. ಆದರೆ ಈ ಬಾರಿ ಮೂರು ಸೀಸನ್‌ಗಳ ವೇಳಾಪಟ್ಟಿಯನ್ನು ಒಟ್ಟಿಗೆ ಬಿಡುಗಡೆ ಮಾಡುವ ಮೂಲಕ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಸಚಿವರೊಬ್ಬರ ತಲೆದಂಡಕ್ಕೆ ಸಿದ್ಧತೆ!

    2025ರ ಐಪಿಎಲ್ ಟೂರ್ನಿಯು ಮಾರ್ಚ್ 14ರಂದು ಪ್ರಾರಂಭವಾಗಿ ಮೇ 25ರವರೆಗೆ ನಡೆಯಲಿದೆ. ಇನ್ನೂ ಈ ಬಾರಿಯ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ಇದೇ ತಿಂಗಳ 24 ಹಾಗೂ 25 ರಂದು ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆಯಲಿದೆ.

    ಬಿಸಿಸಿಐ ಪ್ರಕಟಿಸಿದ ವೇಳಾಪಟ್ಟಿಯಂತೆ 2026ರ ಟೂರ್ನಿಯು ಮಾರ್ಚ್ 15 ರಂದು ಪ್ರಾರಂಭವಾಗಿ ಮೇ 31 ರವರೆಗೆ ನಡೆಯಲಿದೆ ಹಾಗೂ 2027ರ ಟೂರ್ನಿಯು ಮಾರ್ಚ್ 14 ರಂದು ಪ್ರಾರಂಭವಾಗಿ ಮೇ 30 ರವರೆಗೆ ನಡೆಯಲಿದೆ ಎಂದು ತಿಳಿಸಿದೆ.

    ವೇಳಾಪಟ್ಟಿ ಪ್ರಕಟಣೆಯಿಂದಾಗಿ ಫ್ರ್ಯಾಂಚೈಸಿಗಳು ಹಾಗೂ ಆಟಗಾರರು ಹರಾಜು ಪ್ರಕ್ರಿಯೆಗಾಗಿ ಯೋಜನೆಯನ್ನು ಹಾಕಿಕೊಳ್ಳಲು ಸಹಕಾರಿಯಾಗುತ್ತದೆ. ಮುಂದಿನ ಮೂರು ಐಪಿಎಲ್ ಸೀಸನ್‌ಗಳಿಗೆ ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೋಫ್ರಾ ಆರ್ಚರ್ ಲಭ್ಯತೆಯನ್ನು ಬಿಸಿಸಿಐ ದೃಢಪಡಿಸಿದೆ.ಇದನ್ನೂ ಓದಿ: ಭಾರತದ ಒತ್ತಡಕ್ಕೆ ಮಣಿದ ಕೆನಡಾ – ಮೋದಿ ಹೆಸರನ್ನು ಉಲ್ಲೇಖಿಸಿ ಮಾಧ್ಯಮ ವರದಿಯನ್ನು ತಿರಸ್ಕರಿಸಿದ ಸರ್ಕಾರ

  • IPL Retention | ಹೊಸ ಮುಖಗಳಿಗೆ ಪಂಜಾಬ್‌ ಕಿಂಗ್ಸ್‌ ಮಣೆ – ಸ್ಟಾರ್‌ ಆಟಗಾರರು ಹೊರಕ್ಕೆ

    IPL Retention | ಹೊಸ ಮುಖಗಳಿಗೆ ಪಂಜಾಬ್‌ ಕಿಂಗ್ಸ್‌ ಮಣೆ – ಸ್ಟಾರ್‌ ಆಟಗಾರರು ಹೊರಕ್ಕೆ

    ಮುಂಬೈ: 2024ರ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದರೂ ವಿರೋಚಿತ ಸೋಲುಗಳಿಂದಲೇ ಪ್ಲೇ ಆಫ್‌ ನಿಂದ ದೂರ ಉಳಿದ ಪಂಜಾಬ್‌ ಕಿಂಗ್ಸ್‌ (PBKS) ಈ ಬಾರಿ ಕೇವಲ ಇಬ್ಬರು ಆಟಗಾರರನ್ನು ಮಾತ್ರ ಉಳಿಸಿಕೊಂಡಿದೆ.

    ಶಶಾಂಕ್‌ ಸಿಂಗ್‌ (Shashank Singh) ಅವರನ್ನು 5.5 ಕೋಟಿ ರೂ.ಗೆ ಹಾಗೂ ಆರಂಭಿಕ ಆಟಗಾರ ಪ್ರಭ್‌ಸಿಮ್ರನ್‌ ಸಿಂಗ್‌ (Prabhsimran Singh) ಅವರನ್ನು 4 ಕೋಟಿ ರೂ.ಗೆ ಧಾರಣೆ ಮಾಡಿಕೊಂಡಿದೆ. ಉಳಿದೆಲ್ಲ ಸ್ಟಾರ್‌ ಆಟಗಾರರನ್ನ ಹೊರದಬ್ಬಿದೆ. ಇದರಿಂದ ಪರ್ಸ್‌ನಲ್ಲಿ 110 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಇದನ್ನೂ ಓದಿ: IPL Retention | ಸಂಭಾವನೆ ಹೆಚ್ಚಿಸಿಕೊಂಡ ಕ್ಲಾಸೆನ್‌ – ಬರೋಬ್ಬರಿ 23 ಕೋಟಿ ರೂ.ಗೆ ರೀಟೆನ್‌

    ದಾಖಲೆ ಬೆಲೆಯ ಆಟಗಾರ ಔಟ್‌: 
    2023ರ ಐಪಿಎಲ್‌ಗೆ ನಡೆದ ಮಿನಿ ಹರಾಜಿನಲ್ಲಿ ಪಂಜಾಬ್‌ ಕಿಂಗ್ಸ್‌ ಆವೃತ್ತಿಗೆ 18.50 ಕೋಟಿ ರೂ.ಗೆ ಬಿಕರಿಯಾಗಿದ್ದ ಆಲ್‌ರೌಂಡರ್‌ ಸ್ಯಾಮ್‌ ಕರ್ರನ್‌ (Sam Curran) ರಿಟೇನ್‌ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳಲು ವಿಫಲರಾಗಿದ್ದಾರೆ.

    2022ರ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಆಲ್‌ರೌಂಡರ್‌ ಪ್ರದರ್ಶನ ನೀಡಿ ಗಮನ ಸೆಳೆದಿದ್ದ ಸ್ಯಾಮ್‌ ಕರ್ರನ್‌ ಅವರನ್ನು ಪಂಜಾಬ್‌ ಕಿಂಗ್ಸ್‌ 18.50 ಕೋಟಿ ರೂ.ಗೆ ಖರೀದಿ ಮಾಡಿತ್ತು. ಇದನ್ನೂ ಓದಿ: IPL Retention | ಕೆಕೆಆರ್‌ನಿಂದ ಸ್ಟಾರ್ಕ್‌, ಶ್ರೇಯಸ್‌ ಔಟ್‌ – ರಿಂಕು ಸಂಭಾವನೆ ಕೋಟಿ ಕೋಟಿ ಏರಿಕೆ!

    2025 ರಿಂದ 2027ರ ಐಪಿಎಲ್‌ ಆವೃತ್ತಿಗಳಿಗೆ ಹೊಸ ನಿಯಮ ಘೋಷಣೆ ಮಾಡಿರುವ ಬಿಸಿಸಿಐ, ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಮೆಗಾ ಹರಾಜು ನಡೆಸಲು ತೀರ್ಮಾನಿಸಿದೆ. ಇದನ್ನೂ ಓದಿ: IPL Retention | ಲಕ್ನೋದಿಂದ ರಾಹುಲ್‌ ಔಟ್‌ – ಪೂರನ್‌, ರಾಕೆಟ್‌ ವೇಗಿ ಮಯಾಂಕ್‌ಗೆ ಬಂಪರ್‌ ಗಿಫ್ಟ್‌

  • IPL Retention | 2025ರ ಐಪಿಎಲ್‌ಗೆ ಲೆಜೆಂಡ್‌ ಮಹಿ ಫಿಕ್ಸ್‌ – ರುತುರಾಜ್‌, ಜಡ್ಡುಗೆ ಬಂಪರ್‌

    IPL Retention | 2025ರ ಐಪಿಎಲ್‌ಗೆ ಲೆಜೆಂಡ್‌ ಮಹಿ ಫಿಕ್ಸ್‌ – ರುತುರಾಜ್‌, ಜಡ್ಡುಗೆ ಬಂಪರ್‌

    – 20 ಲಕ್ಷಕ್ಕೆ ಬಿಕರಿಯಾಗಿದ್ದ ಪಥಿರಣ ಈಗ 13 ಕೋಟಿ ಒಡೆಯ

    ಮುಂಬೈ: ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡದ ಉಸಿರು ಆಗಿರುವ ಲೆಜೆಂಡ್‌ ಕ್ರಿಕೆಟಿಗ ಎಂ.ಎಸ್‌ ಧೋನಿ (MS Dhoni) 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆವೃತ್ತಿಯಲ್ಲಿ ಮುಂದುವರಿಯುವುದು ಪಕ್ಕಾ ಆಗಿದೆ. ನಿರೀಕ್ಷೆಯಂತೆ ಎಂ.ಎಸ್‌ ಧೋನಿ ಅವರನ್ನ ಅನ್‌ಕ್ಯಾಪ್ಡ್‌ ಪ್ಲೇಯರ್‌ ಆಗಿ ಸಿಎಸ್‌ಕೆ ಫ್ರಾಂಚೈಸಿ ಉಳಿಸಿಕೊಂಡಿದ್ದು, ಧೋನಿ ಅಭಿಮಾನಿಗಳು ಫುಲ್‌ಖುಷ್‌ ಆಗಿದ್ದಾರೆ.

    ನಾಯಕ ರುತುರಾಜ್‌, ಜಡ್ಡುಗೆ ಬಂಪರ್‌:
    2024ರ ಐಪಿಎಲ್‌ ಆವೃತ್ತಿಯಲ್ಲಿ ಅಲ್ಪ ಮೊತ್ತಕ್ಕೆ ತಂಡದಲ್ಲಿ ಉಳಿದುಕೊಂಡಿದ್ದ ಸಿಎಸ್‌ಕೆ ಕ್ಯಾಪ್ಟನ್‌ ರುತುರಾಜ್‌ ಗಾಯಕ್ವಾಡ್‌ (Ruturaj Gaikwad), ಮತೀಶ ಪಥಿರಣ, ಶಿವಂ ದುಬೆ, ರವೀಂದ್ರ ಜಡೇಜಾ (Ravindra Jadeja) ಅವರ ಸಂಭಾವನೆಯಲ್ಲಿ ಭಾರಿ ಏರಿಕೆ ಕಂಡಿದೆ.

    ನಿರೀಕ್ಷೆಗೂ ಮೀರಿದಂತೆ ನಾಯಕ ರುತುರಾಜ್‌ ಗಾಯಕ್ವಾಡ್‌ ಹಾಗೂ ರವೀಂದ್ರ ಜಡೇಜಾ ಅವರನ್ನು ತಲಾ 18 ಕೋಟಿ ರೂ.ಗಳಿಗೆ ಚೆನ್ನೈ ತಂಡ ಉಳಿಸಿಕೊಂಡಿದೆ. ಇನ್ನುಳಿದಂತೆ ಮತೀಶ ಪಥಿರಣ 13 ಕೋಟಿ ರೂ., ಶಿವಂ ದುಬೆ 12 ಕೋಟಿ ರೂ.ಗೆ ರಿಟೇನ್‌ ಆದ್ರೆ, ಎಂ.ಎಸ್‌ ಧೋನಿ ಅನ್‌ಕ್ಯಾಪ್ಡ್‌ ಪ್ಲೇಯರ್‌ ಆಗಿ ಕೇವಲ 4 ಕೋಟಿ ರೂ.ಗಳಿಗೆ ರೀಟೇನ್‌ ಆಗಿದ್ದಾರೆ.

    ಕಳೆದ ಆವೃತ್ತಿಯಲ್ಲಿ ಸಿಎಸ್‌ಕೆ ನಾಯಕ ರುತುರಾಜ್‌ 6 ಕೋಟಿ ರೂ., ಮತೀಶ ಪಥಿರಣ 20 ಲಕ್ಷ ರೂ., ರವೀಂದ್ರ ಜಡೇಜಾ 16 ಕೋಟಿ ರೂ., ಶಿವಂ ದುಬೆ 4 ಕೋಟಿ ರೂ. ಹಾಗೂ ಎಂ.ಎಸ್‌ ಧೋನಿ 12 ಕೋಟಿ ರೂ. ಸಂಭಾವನೆ ಪಡೆದಿದ್ದರು.

    ಯಾರ ಸಂಭಾವನೆ ಎಷ್ಟು?
    * ರುತುರಾಜ್‌ ಗಾಯಕ್ವಾಡ್‌ – 18 ಕೋಟಿ ರೂ.
    * ರವೀಂದ್ರ ಜಡೇಜಾ – 18 ಕೋಟಿ ರೂ.
    * ಮತೀಶ ಪಥಿರಣ – 13 ಕೋಟಿ ರೂ.
    * ಶಿವಂ ದುಬೆ – 12 ಕೋಟಿ ರೂ.
    * ಎಂ.ಎಸ್‌ ಧೋನಿ – 4 ಕೋಟಿ ರೂ. (ಅನ್‌ಕ್ಯಾಪ್ಡ್‌ ಪ್ಲೇಯರ್‌)

    ಮಹಿ ಏಕೆ ಅನ್‌ಕ್ಯಾಪ್ಡ್‌ ಪ್ಲೇಯರ್‌?
    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ 5 ವರ್ಷ ಪೂರೈಸಿದ ಆಟಗಾರರನ್ನು ಅನ್‌ಕ್ಯಾಪ್ಡ್‌ ಪ್ಲೇಯರ್‌ ಎಂದು ಪರಿಗಣಿಸಲಾಗುತ್ತದೆ. ಇದರಿಂದ ಅವರು ನಿಯಮದಂತೆ 4 ಕೋಟಿ ರೂ. ಮಾತ್ರವೇ ಸಂಭಾವನೆ ಪಡೆಯಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.

    ಮುಂದಿನ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಮೆಗಾ ಹರಾಜು ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಉಳಿಸಿಕೊಳ್ಳಬಹುದಾದ ಆಟಗಾರರ ಪಟ್ಟಿಯನ್ನು ಎಲ್ಲಾ ಫ್ರಾಂಚೈಸಿಗಳು ಬಿಡುಗಡೆ ಮಾಡಿವೆ.

  • IPLನಲ್ಲಿ ಡೆಲ್ಲಿ ಟೀಂ ಬಿಟ್ಟು ಬೇರೆ ತಂಡದ ಕ್ಯಾಪ್ಟನ್ ಆಗ್ತಾರಾ ರಿಷಬ್ ಪಂತ್?

    IPLನಲ್ಲಿ ಡೆಲ್ಲಿ ಟೀಂ ಬಿಟ್ಟು ಬೇರೆ ತಂಡದ ಕ್ಯಾಪ್ಟನ್ ಆಗ್ತಾರಾ ರಿಷಬ್ ಪಂತ್?

    ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ನಾಯಕ ರಿಷಬ್ ಪಂತ್ (Rishabh Pant) ಭವಿಷ್ಯ ಸದ್ಯಕ್ಕೆ ತೂಗುಯ್ಯಾಲೆಯಲ್ಲಿದೆ. ಐಪಿಎಲ್‌ನಲ್ಲಿ ಡೆಲ್ಲಿ ಟೀಂ ಬಿಟ್ಟು ಬೇರೆ ತಂಡಕ್ಕೆ ರಿಷಬ್‌ ಪಂತ್‌ ಕ್ಯಾಪ್ಟನ್‌ ಆಗ್ತಾರಾ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

    2025 ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮೆಗಾ ಹರಾಜಿನ ಮೊದಲು ಪಂತ್ ತಂಡಕ್ಕೆ ಆದ್ಯತೆಯ ಧಾರಣ ಎಂದು DC ಸಹ-ಮಾಲೀಕ ಪಾರ್ಥ್ ಜಿಂದಾಲ್ ಈ ಹಿಂದೆ ಭರವಸೆ ನೀಡಿದ್ದರು. ತಮ್ಮ ಫ್ರಾಂಚೈಸಿ ಖಂಡಿತವಾಗಿಯೂ ಪಂತ್‌ ಅವರನ್ನು ಉಳಿಸಿಕೊಳ್ಳುತ್ತದೆ ಎಂದಿದ್ದರು. ಅದರೆ, ಈಗ ಅವರನ್ನು ಉಳಿಸಿಕೊಳ್ಳುವ ಬಗ್ಗೆ ಯಾವುದೇ ಖಚಿತತೆ ಇಲ್ಲ. ಇದನ್ನೂ ಓದಿ: ಲಕ್ನೋ ತಂಡದಿಂದ ಕೆ.ಎಲ್ ರಾಹುಲ್ ರಿಲೀಸ್ – ಆರ್‌ಸಿಬಿ ಸೇರ್ತಾರಾ ಕನ್ನಡಿಗ?

    DC ಫ್ರಾಂಚೈಸಿ, ಪಂತ್ ಅವರನ್ನು ಉಳಿಸಿಕೊಳ್ಳಲು ಉತ್ಸುಕವಾಗಿದೆ. ಆದರೆ, JSW ಮತ್ತು GMR ಐಪಿಎಲ್‌ಗಾಗಿ ಜವಾಬ್ದಾರಿಗಳನ್ನು ವಿಭಜಿಸುವುದರಿಂದ ಬದಲಾವಣೆ ಆಗಬಹುದು ಎನ್ನಲಾಗಿದೆ. GMR ಮತ್ತು JSW ತಲಾ ಎರಡು ವರ್ಷಗಳ ಕಾಲ ದೆಹಲಿ ಕ್ಯಾಪಿಟಲ್ಸ್ ಅನ್ನು ನಿರ್ವಹಿಸುತ್ತವೆ ಎಂದು ಘೋಷಿಸಿದ ನಂತರ ಈ ಚರ್ಚೆ ಹುಟ್ಟುಕೊಂಡಿದೆ.

    ಒಪ್ಪಂದದ ಪ್ರಕಾರ, GMR 2025 ಮತ್ತು 2026ರ ಐಪಿಎಲ್‌ ಋತುಗಳಿಗಾಗಿ ಡೆಲ್ಲಿ ಕ್ಯಾಪಿಟಲ್ಸ್‌ ಅನ್ನು ನಿರ್ವಹಿಸುತ್ತದೆ. ಈ ಬದಲಾವಣೆಗಳಿಗೆ ಅನುಗುಣವಾಗಿ, ವೇಣುಗೋಪಾಲ್ ರಾವ್ ಮತ್ತು ಹೇಮಂಗ್ ಬದಾನಿ ಅವರನ್ನು ಕ್ರಮವಾಗಿ ಕ್ರಿಕೆಟ್ ನಿರ್ದೇಶಕ ಮತ್ತು ಡಿಸಿ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ. ಇದನ್ನೂ ಓದಿ: ನಾನು ಅವರ ಹಾಸಿಗೆಯ ಮೇಲೆ ಕುಳಿತಿದ್ದೆ – ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮತ್ತೆ ಸಾಕ್ಷಿ ಮಲಿಕ್‌ ಆರೋಪ

    ಏತನ್ಮಧ್ಯೆ, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಸೇರಿದಂತೆ ಇತರ ಐಪಿಎಲ್ ತಂಡಗಳು ಪಂತ್ ಅವರನ್ನು ನಾಯಕನನ್ನಾಗಿ ಮಾಡಲು ಆಸಕ್ತಿ ತೋರಿಸಿವೆ. ಇದು ಅವರ ಧಾರಣೆಗೆ ಕರೆ ತೆಗೆದುಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್‌ ಮೇಲೆ ಮತ್ತಷ್ಟು ಒತ್ತಡವನ್ನು ಉಂಟುಮಾಡುತ್ತದೆ.

  • ಆರ್‌ಸಿಬಿ ಸೇರುವಂತೆ ರೋಹಿತ್‌ಗೆ ಆಫರ್‌ – ಹಿಟ್‌ಮ್ಯಾನ್‌ಗೆ ಆಫರ್‌ ಕೊಟ್ಟಿದ್ಯಾರು?

    ಆರ್‌ಸಿಬಿ ಸೇರುವಂತೆ ರೋಹಿತ್‌ಗೆ ಆಫರ್‌ – ಹಿಟ್‌ಮ್ಯಾನ್‌ಗೆ ಆಫರ್‌ ಕೊಟ್ಟಿದ್ಯಾರು?

    ಮುಂಬೈ: 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವನ್ನು ಸೇರಿಕೊಳ್ಳುವಂತೆ ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ (Rohit Sharma) ಅವರಿಗೆ ವಿಶೇಷ ಆಹ್ವಾನ ಬಂದಿದೆ. ಆದ್ರೆ ಇದು ಆರ್‌ಸಿಬಿ ಫ್ರಾಂಚೈಸಿ ನೀಡಿದ ಆಹ್ವಾನವಲ್ಲ. ಹಾಗಿದ್ದರೆ, ಮತ್ತ್ಯಾರು ಅನ್ನೋ ಕುತೂಹಲ ನಿಮಗಿದ್ದರೆ ಮುಂದೆ ಓದಿ…

    ಹೌದು. ನವೆಂಬರ್‌ 30ರಂದು ದುಬೈನಲ್ಲಿ 2025ರ ಐಪಿಎಲ್‌ಗೆ ಮೆಗಾ ಹರಾಜು ನಡೆಸಲು ಈಗಾಗಲೇ ಬಿಸಿಸಿಐ ಸಕಲ ತಯಾರಿ ನಡೆಸಿದೆ. ಅದಕ್ಕಾಗಿ ಲ್ಲಾ ಫ್ರಾಂಚೈಸಿಗಳು ತಮ್ಮ ತಂಡದ ರಿಟೇನ್‌ ಆಟಗಾರರ ಪಟ್ಟಿಯನ್ನು ಅ.31ರ ಒಳಗೆ ಪ್ರಕಟಿಸುವಂತೆ ಬಿಸಿಸಿಐ (BCCI) ಡೆಡ್‌ಲೈನ್‌ ಫಿಕ್ಸ್‌ ಮಾಡಿದೆ. ಈ ಹಿನ್ನೆಲೆಯಲ್ಲಿ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರ ಸಂಭಾವ್ಯ ಪಟ್ಟಿಯನ್ನು ಈಗಾಗಲೇ ಸಿದ್ಧ ಮಾಡಿಕೊಂಡಿವೆ.

    ಮತ್ತೊಂದೆಡೆ ರೋಹಿತ್‌ ಶರ್ಮಾ ಅವರು ಮುಂಬೈ ಇಂಡಿಯನ್ಸ್‌ನಲ್ಲೇ ಉಳಿಯುತ್ತಾರೆ ಎನ್ನಲಾಗುತ್ತಿದೆಯಾದರೂ ಆರ್‌ಸಿಬಿ ಬಲೆ ಬೀಸಿದೆ ಎಂಬ ಸುದ್ದಿ ಮತ್ತೊಂದೆಡೆ ಹರಿದಾಡುತ್ತಿದೆ. ಇದನ್ನೂ ಓದಿ: IPL Mega Auction | ಹಿಟ್‌ಮ್ಯಾನ್ ರೋಹಿತ್‌ ಇನ್‌ – ಡುಪ್ಲೆಸಿ ಔಟ್‌ – ಆರ್‌ಸಿಬಿಗೆ ಆನೆ ಬಲ

    ಸದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್‌ ವಿರುದ್ಧ ಟೆಸ್ಟ್‌ ಪಂದ್ಯದಲ್ಲಿ ರೋಹಿತ್‌ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ರೋಹಿತ್‌ ಗ್ರೌಂಡ್‌ನಿಂದ ಡ್ರೆಸ್ಸಿಂಗ್‌ ರೂಮಿನತ್ತ ತೆರಳುತ್ತಿದ್ದಾಗ ಅಭಿಮಾನಿಯೊಬ್ಬರು ʻರೋಹಿತ್‌ ಭಾಯ್‌ ನೆಕ್ಸ್ಟ್‌ ಐಪಿಎಲ್‌ನಲ್ಲಿ ಯಾವ ಟೀಂ?ʼ ಎಂದು ಕೇಳಿದ್ದಾರೆ. ಅದಕ್ಕೆ ರೋಹಿತ್‌ ʻಯಾವ್‌ ಟೀಂಗೆ ಬರಬೇಕು ಹೇಳು?ʼ ಎನ್ನುತ್ತಾ ಮುಂದಕ್ಕೆ ಹೋಗುವಾಗ ʻಆರ್‌ಸಿಬಿಗೆ ಬನ್ನಿ ಭಾಯ್‌, ಲವ್‌ ಯು ಭಾಯ್‌ʼ ಎಂದು ಕೇಳಿಕೊಂಡಿದ್ದಾರೆ. ಈ ಕುರಿತ ವೀಡಿಯೋ ತುಣುಕೊಂದು ಎಕ್ಸ್‌ ಖಾತೆಯಲ್ಲಿ ಹರಿದಾಡುತ್ತಿದೆ.

    2013ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಸೇರಿದ ರೋಹಿತ್‌ ಶರ್ಮಾ, ತಂಡಕ್ಕಾಗಿ 5 ಬಾರಿ ಟ್ರೋಫಿ ಗೆದ್ದುಕೊಟ್ಟಿದ್ದಾರೆ. ಆದ್ರೆ ಕಳೆದ ಆವೃತ್ತಿಯಲ್ಲಿ ಹಾರ್ದಿಕ್‌ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಮುಂಬೈ ಲೀಗ್‌ ಸುತ್ತಿನಲ್ಲೇ ಹೀನಾಯವಾಗಿ ಸೋತು ಹೊರಬಿದ್ದಿತ್ತು. ಇತ್ತ 17 ಆವೃತ್ತಿ ಕಳೆದರೂ ಒಂದು ಬಾರಿಯೂ ಟ್ರೋಫಿ ಗೆಲ್ಲದ ಆರ್‌ಸಿಬಿ ಹಿಟ್‌ ಮ್ಯಾನ್‌ ಅವರನ್ನು ತಂಡಕ್ಕೆ ಕರೆತರುವ ಪ್ರಯತ್ನ ಮಾಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ: IND vs NZ Test | 4ನೇ ದಿನವೂ ಮಳೆಯಾಟ – ಸೋಲಿನ ಸುಳಿಯಲ್ಲಿ ಭಾರತ

    10 ಫ್ರಾಂಚೈಸಿಗಳ ಸಂಭಾವ್ಯ ಪಟ್ಟಿ ಹೀಗಿದೆ…
    * ಚೆನ್ನೈ ಸೂಪರ್ ಕಿಂಗ್ಸ್:
    ರುತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಶಿವಂ ದುಬೆ, ಡೇರಿಲ್‌ ಮಿಚೆಲ್, ಮತೀಶ ಪತಿರಣ, ಎಂ.ಎಸ್ ಧೋನಿ

    * ಮುಂಬೈ ಇಂಡಿಯನ್ಸ್:
    ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಅನ್ಶುಲ್ ಕಾಂಬೋಜ್

    * ರಾಯಲ್ ಚಾಲೆಂಜರ್ಸ್ ಬೆಂಗಳೂರು:
    ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಯಶ್ ದಯಾಳ್

    * ರಾಜಸ್ಥಾನ್ ರಾಯಲ್ಸ್:
    ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಾಲ್, ಸಂದೀಪ್ ಶರ್ಮಾ

    * ಕೋಲ್ಕತ್ತಾ ನೈಟ್ ರೈಡರ್ಸ್:
    ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಫಿಲ್ ಸಾಲ್ಟ್, ಸುನಿಲ್ ನರೈನ್, ಆಂಡ್ರೆ ರಸೆಲ್, ಹರ್ಷಿತ್ ರಾಣಾ

    * ಗುಜರಾತ್ ಟೈಟಾನ್ಸ್:
    ಶುಭಮನ್ ಗಿಲ್, ರಶೀದ್ ಖಾನ್, ಡೇವಿಡ್ ಮಿಲ್ಲರ್, ಸಾಯಿ ಸುದರ್ಶನ್, ಮೊಹಮ್ಮದ್ ಶಮಿ, ರಾಹುಲ್ ತೆವಾಟಿಯಾ

    * ಲಕ್ನೋ ಸೂಪರ್ ಜೈಂಟ್ಸ್:
    ಕೆ.ಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಮಾರ್ಕಸ್ ಸ್ಟೊಯಿನಿಸ್, ಮಯಾಂಕ್ ಯಾದವ್

    * ಡೆಲ್ಲಿ ಕ್ಯಾಪಿಟಲ್ಸ್‌:
    ರಿಷಬ್ ಪಂತ್, ಟ್ರಿಸ್ಟಾನ್ ಸ್ಟಬ್ಸ್, ಮಿಚೆಲ್ ಮಾರ್ಷ್, ಜೇಕ್ ಫ್ರೇಸರ್-ಮೆಕ್‌ ಗಾರ್ಕ್‌, ಅಕ್ಷರ್‌ ಪಟೇಲ್, ಅಭಿಷೇಕ್ ಪೊರೆಲ್

    * ಪಂಜಾಬ್ ಕಿಂಗ್ಸ್:
    ಸ್ಯಾಮ್ ಕುರ್ರಾನ್, ಅರ್ಷ್‌ದೀಪ್‌ ಸಿಂಗ್, ಕಗಿಸೊ ರಬಾಡ, ಲಿಯಾಮ್ ಲಿವಿಂಗ್‌ಸ್ಟೋನ್‌, ಶಶಾಂಕ್ ಸಿಂಗ್, ಅಶುತೋಷ್ ಶರ್ಮಾ

    * ಸನ್‌ರೈಸರ್ಸ್ ಹೈದರಾಬಾದ್:
    ಪ್ಯಾಟ್ ಕಮಿನ್ಸ್, ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಹೆನ್ರಿಚ್ ಕ್ಲಾಸೆನ್, ಟಿ. ನಟರಾಜನ್, ನಿತೀಶ್ ಕುಮಾರ್ ರೆಡ್ಡಿ.

  • ಜಿಯೋದಲ್ಲಿ ಐಪಿಎಲ್‌ ಬರಲ್ಲ, ಇನ್ನು ಮುಂದೆ ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರ!

    ಜಿಯೋದಲ್ಲಿ ಐಪಿಎಲ್‌ ಬರಲ್ಲ, ಇನ್ನು ಮುಂದೆ ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರ!

    ಮುಂಬೈ: ಇನ್ನು ಮುಂದೆ ಐಪಿಎಲ್‌ (IPL) ಸೇರಿದಂತೆ ಜಿಯೋ ಸಿನಿಮಾದಲ್ಲಿ (Jio Cinema) ಪ್ರಸಾರವಾಗುತ್ತಿದ್ದ ಎಲ್ಲಾ ಕ್ರೀಡೆಗಳ ನೇರ ಪ್ರಸಾರ ಹಾಟ್‌ಸ್ಟಾರ್‌ನಲ್ಲಿ (Disney+ Hotstar) ಮಾತ್ರ ಪ್ರಸಾರವಾಗಲಿದೆ.

    ಡಿಸ್ನಿ-ರಿಲಯನ್ಸ್ (Disney Reliance Joint Venture) ವಿಲೀನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಎಲ್ಲಾ ಲೈವ್‌ಸ್ಟ್ರೀಮ್‌ಗಳು (Stream Live Sports) ಹಾಟ್‌ಸ್ಟಾರ್‌ನಲ್ಲಿ ಮಾತ್ರ ಪ್ರಸಾರವಾಗಲಿದೆ ಎಂದು ಮೂಲಗಳನ್ನುಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಈ ವಿಚಾರದ ಬಗ್ಗೆ ಎರಡೂ ಕಂಪನಿಗಳು ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ.

    ಮುಂದಿನ ಜನವರಿಯಲ್ಲಿ ವಿಲೀನ ಪ್ರಕ್ರಿಯೆ ಪೂರ್ಣವಾಗಲಿದೆ. ವಿಲೀನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಜಿಯೋ ಸಿನಿಮಾದಲ್ಲಿರುವ ಕ್ರೀಡೆಗಳ ವಿಡಿಯೋಗಳು ಹಾಟ್‌ಸ್ಟಾರ್‌ನಲ್ಲಿ ಇರುತ್ತಾ ಅಥವಾ ಜಿಯೋ ಸಿನಿಮಾದಲ್ಲೇ ಇರುತ್ತಾ ಎನ್ನುವುದು ದೃಢಪಟ್ಟಿಲ್ಲ.

    ಕಳೆದ ಫೆಬ್ರವರಿಯಲ್ಲಿ ವಯಾಕಾಮ್ 18 ಮೀಡಿಯಾ ಪ್ರೈವೆಟ್‌ ಲಿಮಿಟೆಡ್ ಮತ್ತು ವಾಲ್ಟ್ ಡಿಸ್ನಿ ಕಂಪನಿ 70 ಸಾವಿರ ಕೋಟಿ ರೂ. ಮೊತ್ತದ ಜಂಟಿ ಉದ್ಯಮಕ್ಕೆ ಸಹಿ ಹಾಕಿದ್ದವು. ಈ ವಹಿವಾಟಿನ ಭಾಗವಾಗಿ ವಯಾಕಾಮ್ 18ಕ್ಕೆ ಸೇರಿದ ಮಾಧ್ಯಮ ಸಂಸ್ಥೆಗಳನ್ನು ಕೋರ್ಟ್ ಅನುಮೋದಿತ ವ್ಯವಸ್ಥೆ ಮೂಲಕ ಸ್ಟಾರ್ ಇಂಡಿಯಾ ಪ್ರೈವೆಟ್ ಲಿಮಿಟೆಡ್‌ನಲ್ಲಿ ವಿಲೀನಗೊಳಿಸಲು ಅನುಮತಿ ಸಿಕ್ಕಿತ್ತು.

    ರಿಲಯನ್ಸ್ ಇಂಡಸ್ಟ್ರೀಸ್‌, ವಯಾಕಾಮ್ 18 ಮೀಡಿಯಾ ಪ್ರೈವೆಟ್‌ ಲಿಮಿಟೆಡ್ ಮತ್ತು ವಾಲ್ಟ್ ಡಿಸ್ನಿ ಕಂಪನಿಯ ವಿಲೀನದ ಭಾಗವಾಗಿ ಪರವಾನಗಿಯನ್ನು ಸ್ಟಾರ್ ಇಂಡಿಯಾಗೆ ವರ್ಗಾಯಿಸಲು ಕೇಂದ್ರ ಸರ್ಕಾರ ಸೆಪ್ಟೆಂಬರ್‌ 27 ರಂದು ಅನುಮೋದನೆ ನೀಡಿತ್ತು. ಪರವಾನಗಿ ಹಸ್ತಾಂತರಕ್ಕೆ ಅನುಮೋದನೆ ನೀಡಿದ್ದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಇದು ಭಾರತೀಯ ಸ್ಪರ್ಧಾತ್ಮಕ ಆಯೋಗವು (CCI) ವಿಧಿಸಿದ ಷರತ್ತುಗಳಿಗೆ ಒಳಪಟ್ಟಿರುತ್ತದೆ ಎಂದು ಆದೇಶದಲ್ಲಿ ತಿಳಿಸಿತ್ತು. ಇದನ್ನೂ ಓದಿ: ಟ್ರೋಫಿ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌ – ನೂತನ ಮುಖ್ಯಕೋಚ್‌ ಆಗಿ ಹೇಮಂಗ್‌ ಬದಾನಿ ನೇಮಕ

    ಡಿಸ್ನಿ ಮತ್ತು ರಿಲಯನ್ಸ್ ನಡುವಿನ ವಿಲೀನ ಒಪ್ಪಂದದಿಂದಾಗಿ 120 ಟಿವಿ ಚಾನೆಲ್‌ಗಳು ಮತ್ತು ಎರಡು ಸ್ಟ್ರೀಮಿಂಗ್ ಅಪ್ಲಿಕೇಶನ್‌ಗಳೊಂದಿಗೆ ಭಾರತದ ಅತಿದೊಡ್ಡ ಮನರಂಜನಾ ಕಂಪನಿಯಾಗಿ ಹೊರಹೊಮ್ಮಿದೆ.

    ರಿಲಯನ್ಸ್‌ ಜಿಯೋ ಸಿನಿಮಾ ಐಪಿಎಲ್‌ ಕ್ರಿಕೆಟ್‌, ಚಳಿಗಾಲದ ಒಲಿಂಪಿಕ್ಸ್‌, ಇಂಡಿಯನ್ ಸೂಪರ್ ಲೀಗ್ ಫುಟ್‌ಬಾಲ್‌ ಹಕ್ಕು ಹೊಂದಿದೆ. ಡಿಸ್ನಿ ಹಾಟ್‌ಸ್ಟಾರ್‌ ಐಸಿಸಿ ಆಯೋಜಿಸುವ ಕ್ರಿಕೆಟ್‌ ಪಂದ್ಯಗಳು, ಇಂಗ್ಲಿಷ್ ಪ್ರೀಮಿಯರ್ ಲೀಗ್, ದೇಶೀಯ ಪ್ರೊ ಕಬಡ್ಡಿ ಲೀಗ್‌ನ ಹಕ್ಕುಗಳನ್ನು ಹೊಂದಿದೆ.

    2017-22ರ ಅವಧಿಯ ಐಪಿಎಲ್‌ ಟಿವಿ ಮತ್ತು ಡಿಜಿಟಲ್‌ ರೈಟ್ಸ್‌ ಅನ್ನು ಡಿಸ್ನಿ ಹಾಟ್‌ಸ್ಟಾರ್‌ 16,347 ಕೋಟಿ ರೂ. ನೀಡಿ ಪಡೆದುಕೊಂಡಿತ್ತು. 2023ರಲ್ಲಿ ಟಿವಿ ಮತ್ತು ಡಿಜಿಟಲ್‌ ರೈಟ್ಸ್‌ ವಿಂಗಡನೆ ಮಾಡಲಾಗಿತ್ತು. 2023-27ರ 410 ಪಂದ್ಯಗಳಿಗೆ ಡಿಜಿಟಲ್‌ ಹಕ್ಕುಗಳನ್ನು ವಯಾಕಾಮ್ 18 23,758 ಕೋಟಿ ರೂ.ಗೆ ಪಡೆದುಕೊಂಡಿದ್ದರೆ, ಟಿವಿ ಹಕ್ಕುಗಳನ್ನು ವಾಲ್ಟ್ ಡಿಸ್ನಿ ಕಂಪನಿ 23,575 ಕೋಟಿ ರೂ. ನೀಡಿ ಖರೀದಿಸಿತ್ತು.

    ಹಾಟ್‌ಸ್ಟಾರ್‌ನಲ್ಲಿ ಐಪಿಎಲ್‌ ಕ್ರಿಕೆಟ್‌ ವೀಕ್ಷಸಬೇಕಾದರೆ ಸಬ್‌ಸ್ಕ್ರೈಬ್‌ ಆಗಬೇಕಿತ್ತು. ಆದರೆ 2023 ರಲ್ಲಿ ಜಿಯೋ ರೈಟ್ಸ್‌ ಪಡೆದ ನಂತರ ಐಪಿಎಲ್‌ ಲೈವ್‌ ಸ್ಟ್ರೀಮಿಂಗ್‌ ಉಚಿತವಾಗಿ ನೀಡಿತ್ತು. ಇದರಿಂದಾಗಿ ಐಪಿಎಲ್‌ ವೀಕ್ಷಕರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿತ್ತು.

     

  • ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಮಹೇಲಾ ಜಯವರ್ಧನೆ ಮರುನೇಮಕ

    ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಮಹೇಲಾ ಜಯವರ್ಧನೆ ಮರುನೇಮಕ

    ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿ ಮುಂಬೈ ಇಂಡಿಯನ್ಸ್ ಭಾನುವಾರ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ (Mahela Jayawardene) ಅವರನ್ನು ಮುಖ್ಯ ಕೋಚ್ ಆಗಿ ಮರುನೇಮಕ ಮಾಡಿದೆ.

    47 ವರ್ಷ ವಯಸ್ಸಿನ ಜಯವರ್ಧನೆ ಈ ಹಿಂದೆ 2017-2022 ರವರೆಗೆ ಇದೇ ತಂಡಕ್ಕೆ ಕೋಚ್‌ ಆಗಿದ್ದರು. ಈ ಅವಧಿಯಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ಮೂರು IPL ಟ್ರೋಫಿಗಳನ್ನು ಗೆದ್ದಿದೆ. 2022 ರಲ್ಲಿ ಜಯವರ್ಧನೆ ಅವರನ್ನು ಮುಖ್ಯ ತರಬೇತುದಾರನ ಸ್ಥಾನದಿಂದ MI ಫ್ರಾಂಚೈಸ್‌ಗಾಗಿ ಗ್ಲೋಬಲ್ ಹೆಡ್ ಆಫ್ ಕ್ರಿಕೆಟ್‌ಗೆ ವರ್ಗಾಯಿಸಲಾಗಿತ್ತು. ಇದನ್ನೂ ಓದಿ: ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಸಿರಾಜ್‌ – ಪೊಲೀಸ್‌ ಡ್ರೆಸ್‌ನಲ್ಲಿ ವೇಗಿ

    ಮಹೇಲಾ ಅವರು ಮುಂಬೈ ಇಂಡಿಯನ್ಸ್‌ನ ಮುಖ್ಯ ಕೋಚ್ ಆಗಿ ಮರಳಿ ಬಂದಿರುವುದಕ್ಕೆ ನಾವು ರೋಮಾಂಚನಗೊಂಡಿದ್ದೇವೆ. ನಮ್ಮ ಜಾಗತಿಕ ತಂಡಗಳು ತಮ್ಮ ಪರಿಸರ ವ್ಯವಸ್ಥೆಯಲ್ಲಿ ತಮ್ಮ ನೆಲೆಯನ್ನು ಕಂಡುಕೊಂಡಿದ್ದರಿಂದ, ಅವರನ್ನು MI ಗೆ ಮರಳಿ ಕರೆತರುವ ಅವಕಾಶ ಸಿಕ್ಕಿದೆ. ಅವರ ನಾಯಕತ್ವ, ಜ್ಞಾನ ಮತ್ತು ಆಟದ ಮೇಲಿನ ಉತ್ಸಾಹವು ಯಾವಾಗಲೂ MI ಗೆ ಪ್ರಯೋಜನವನ್ನು ನೀಡುತ್ತದೆ ಎಂದು ಫ್ರಾಂಚೈಸಿ ಮಾಲೀಕ ಆಕಾಶ್ ಅಂಬಾನಿ ಪ್ರತಿಕ್ರಿಯಿಸಿದ್ದಾರೆ.

    ಕಳೆದೆರಡು ಋತುಗಳಲ್ಲಿ ಜಯವರ್ಧನೆ ಅನುಪಸ್ಥಿತಿಯಲ್ಲಿ ಪಾತ್ರ ವಹಿಸಿದ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮಾರ್ಕ್ ಬೌಚರ್ ಅವರ ಸೇವೆಗಳನ್ನು ಇದೇ ವೇಳೆ ಅಂಬಾನಿ ಶ್ಲಾಘಿಸಿದ್ದಾರೆ. ಕಳೆದ ಎರಡು ಋತುಗಳಲ್ಲಿ ಮಾರ್ಕ್ ಬೌಚರ್ ಅವರು ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಪರಿಣತಿ ಮತ್ತು ಸಮರ್ಪಣೆಯು ಪ್ರಮುಖವಾಗಿತ್ತು. ಈಗ MI ಕುಟುಂಬದ ಅವಿಭಾಜ್ಯ ಸದಸ್ಯರಾಗಿದ್ದಾರೆ ಎಂದು ಆಕಾಶ್‌ ಅಂಬಾನಿ ತಿಳಿಸಿದ್ದಾರೆ. ಇದನ್ನೂ ಓದಿ: ನನಗೆ ಐಪಿಎಲ್‌ಗಿಂತಲೂ ಟೆಸ್ಟ್‌ ಕ್ರಿಕೆಟ್‌ ಮುಖ್ಯ: ಬಿಸಿಸಿಐ ಹೊಸ ನಿಯಮದ ಕುರಿತು ಕಮ್ಮಿನ್ಸ್‌ ರಿಯಾಕ್ಷನ್‌

    ಮುಂಬೈ ಇಂಡಿಯನ್ಸ್‌, ಐಪಿಎಲ್‌ 2023 ರಲ್ಲಿ ಪ್ಲೇಆಫ್‌ಗೆ ತಲುಪಿತ್ತು. 2024 ರ ಋತುವಿನಲ್ಲಿ ಬೌಚರ್ ಕೋಚ್‌ ಆಗಿದ್ದಾಗ, 10 ನೇ ಸ್ಥಾನಕ್ಕೆ ಕುಸಿದಿತ್ತು. ಈ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರು. 2013 ರಿಂದ 2023 ರವರೆಗೆ MI ಅನ್ನು ಮುನ್ನಡೆಸಿದ್ದ ರೋಹಿತ್‌ ಶರ್ಮಾ, ತಂಡಕ್ಕೆ ಐದು ಟ್ರೋಫಿಗಳನ್ನು ತಂದುಕೊಟ್ಟಿದ್ದರು.