Tag: ಐಪಿಎಸ್ ಅಧಿಕಾರಿ

  • IPS ಅಧಿಕಾರಿ ಮನೆ ಮೇಲೆ ದಾಳಿ ಮಾಡಿದ ಸಿಬಿಐಗೆ ಶಾಕ್‌ – 5 ಕೋಟಿ ಹಣ, ಮರ್ಸಿಡಿಸ್‌, ಆಡಿ ಕಾರು ವಶಕ್ಕೆ

    IPS ಅಧಿಕಾರಿ ಮನೆ ಮೇಲೆ ದಾಳಿ ಮಾಡಿದ ಸಿಬಿಐಗೆ ಶಾಕ್‌ – 5 ಕೋಟಿ ಹಣ, ಮರ್ಸಿಡಿಸ್‌, ಆಡಿ ಕಾರು ವಶಕ್ಕೆ

    ಚಂಡೀಗಢ: ಪಂಜಾಬ್‌ನ ರೋಪರ್ ರೇಂಜ್‌ನಲ್ಲಿ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಆಗಿ ನೇಮಕಗೊಂಡ ಹಿರಿಯ ಐಪಿಎಸ್ ಅಧಿಕಾರಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ. ಐಪಿಎಸ್ ಅಧಿಕಾರಿ ಮನೆಯಿಂದ 5 ಕೋಟಿ ರೂ. ನಗದು, ಮರ್ಸಿಡಿಸ್, ಆಡಿ ಕಾರು ವಶಕ್ಕೆ ಪಡೆದಿದ್ದಾರೆ.

    8 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಪ್ರಕರಣ ತನಿಖೆ ವೇಳೆ ಸಿಬಿಐಗೆ ಶಾಕ್‌ ಎದುರಾಗಿದೆ. ಐಪಿಎಸ್‌ ಅಧಿಕಾರಿ ಮನೆಯಲ್ಲಿ 5 ಕೋಟಿ ರೂ. ನಗದು, ಐಷಾರಾಮಿ ವಾಹನಗಳು, ಆಭರಣಗಳು ಮತ್ತು ಉನ್ನತ ದರ್ಜೆಯ ವಾಚ್‌ಗಳು ಸೇರಿದಂತೆ ಅಪಾರ ಸಂಪತ್ತು ಪತ್ತೆಯಾಗಿದೆ.

    2009 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಡಿಐಜಿ ಹರ್‌ಚರಣ್ ಸಿಂಗ್ ಭುಲ್ಲರ್ ಮತ್ತು ಅವರ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಕೃಷ್ಣ ಎಂಬ ವ್ಯಕ್ತಿಯನ್ನು ಬಂಧಿಸಲಾಯಿತು. ಸ್ಥಳೀಯ ಉದ್ಯಮಿಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಇತ್ಯರ್ಥಗೊಳಿಸಲು, ಹರ್‌ಚರಣ್‌ ಈ ಮಧ್ಯವರ್ತಿಯ ಮೂಲಕ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ ಎಂದು ಸಿಬಿಐ ತಿಳಿಸಿದೆ.

    ಪಂಜಾಬ್‌ನ ಫತೇಘರ್ ಸಾಹಿಬ್‌ನಲ್ಲಿರುವ ಆಕಾಶ್ ಬಟ್ಟಾ ಎಂಬ ವ್ಯಾಪಾರಿ ಐದು ದಿನಗಳ ಹಿಂದೆ ಸಲ್ಲಿಸಿದ ಲಿಖಿತ ದೂರಿನ ಮೇರೆಗೆ ಸಿಬಿಐ ಈ ಪ್ರಕರಣ ದಾಖಲಿಸಿತ್ತು. ಡಿಐಜಿ ಭುಲ್ಲರ್ ಅವರು ಆರಂಭಿಕ ಲಂಚವಾಗಿ 8 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಪ್ರಕರಣ ಇತ್ಯರ್ಥಗೊಳಿಸಿದ ನಂತರ ಉಳಿದ ಹಣ ನೀಡದಿದ್ದರೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದರೆಂದು ದೂರಲಾಗಿತ್ತು.

    ಸಿಬಿಐನ ಎಫ್‌ಐಆರ್ ಪ್ರಕಾರ, ಭುಲ್ಲರ್ ತನ್ನ ಸಹಚರ ಕೃಷ್ಣ ಮೂಲಕ ಲಂಚಕ್ಕೆ ಒತ್ತಾಯಿಸಿದ್ದಾರೆ. ಕೃಷ್ಣ ಪದೇ ಪದೇ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ.

  • IPS ಅಧಿಕಾರಿ ಪೂರನ್‌ ಆತ್ಮಹತ್ಯೆ ಕೇಸ್‌ ತನಿಖೆ ಮಾಡುತ್ತಿದ್ದ ಪೊಲೀಸ್‌ ಅಧಿಕಾರಿ ಕೂಡ ಸೂಸೈಡ್‌

    IPS ಅಧಿಕಾರಿ ಪೂರನ್‌ ಆತ್ಮಹತ್ಯೆ ಕೇಸ್‌ ತನಿಖೆ ಮಾಡುತ್ತಿದ್ದ ಪೊಲೀಸ್‌ ಅಧಿಕಾರಿ ಕೂಡ ಸೂಸೈಡ್‌

    ಚಂಡೀಗಢ: ಹರಿಯಾಣ (Haryana IPS Officer) ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಮತ್ತೊಂದು ಶಾಕಿಂಗ್‌ ಸುದ್ದಿ ಎದುರಾಗಿದೆ. ಇದೇ ಪ್ರಕರಣದ ತನಿಖೆಯಲ್ಲಿದ್ದ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ರೋಹ್ಟಕ್‌ನ ಸೈಬರ್ ಸೆಲ್‌ನಲ್ಲಿ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಆಗಿ ಕರ್ತವ್ಯನಿರ್ವಹಿಸುತ್ತಿದ್ದ ಸಂದೀಪ್ ಕುಮಾರ್, ವೈ.ಪೂರನ್ ಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದರು. ಅವರು‌, ‘ಸತ್ಯಕ್ಕಾಗಿ’ ತಮ್ಮ ಪ್ರಾಣವನ್ನೇ ತ್ಯಾಗ ಮಾಡುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಜಾತಿ ಕಿರುಕುಳಕ್ಕೆ ಬೇಸತ್ತು IPS ಅಧಿಕಾರಿ ಸಾವು – IAS ಪತ್ನಿ ದೂರು ನೀಡಿದ್ರೂ FIR ದಾಖಲಿಸದ ಪೊಲೀಸರು

    ರೋಹ್ಟಕ್‌ನ ಹೊಲವೊಂದರಲ್ಲಿ ಸಂದೀಪ್ ಕುಮಾರ್ ತನ್ನ ಸೇವಾ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ವೀಡಿಯೊ ಮತ್ತು ಮೂರು ಪುಟಗಳ ಡೆತ್‌ನೋಟ್‌ ಬಿಟ್ಟು ಹೋಗಿದ್ದಾರೆ. ವೈ.ಪೂರನ್ ಕುಮಾರ್ ಒಬ್ಬ ‘ಭ್ರಷ್ಟ ಪೊಲೀಸ್’ ಆಗಿದ್ದರು. ತಮ್ಮ ಭ್ರಷ್ಟಾಚಾರ ಬಯಲಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡರು ಎಂದು ಸಂದೀಪ್ ಕುಮಾರ್ ಆರೋಪಿಸಿದ್ದಾರೆ.

    ಭ್ರಷ್ಟಾಚಾರದ ಆರೋಪಗಳು ಬೆಳಕಿಗೆ ಬಂದ ನಂತರ ವೈ ಪೂರನ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು ಎಂದು ಪೊಲೀಸ್ ಅಧಿಕಾರಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಪೂರನ್ ಕುಮಾರ್ ಅವರ ಗನ್‌ಮ್ಯಾನ್ ಮದ್ಯ ಗುತ್ತಿಗೆದಾರರಿಂದ 2.5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಸಂದೀಪ್ ಕುಮಾರ್ ಅವರನ್ನು ಹಿಡಿದಿದ್ದರು ಎಂದು ತಿಳಿದುಬಂದಿದೆ. ಗ್ಯಾಂಗ್‌ಸ್ಟರ್ ಬೆದರಿಕೆ ಹಾಕಿದ ನಂತರ ಗುತ್ತಿಗೆದಾರ ಪೂರನ್ ಅವರನ್ನು ಭೇಟಿಯಾಗಿದ್ದ. ಲಂಚದ ಆರೋಪಗಳು ಬೆಳಕಿಗೆ ಬಂದಾಗ, ಐಪಿಎಸ್ ಅಧಿಕಾರಿ ಅದಕ್ಕೆ ಜಾತಿ ಬಣ್ಣ ನೀಡಲು ಪ್ರಯತ್ನಿಸಿದ್ದರು. ಕೊನೆಗೆ ಭ್ರಷ್ಟಾಚಾರ ಬೆಳಕಿಗೆ ಬರುತ್ತೆಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿದೆ.

    ಪೂರನ್‌ ಅವರನ್ನು ರೋಹ್ಟಕ್ ವ್ಯಾಪ್ತಿಯಲ್ಲಿ ನಿಯೋಜಿಸಿದ ನಂತರ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳನ್ನು ಭ್ರಷ್ಟ ಅಧಿಕಾರಿಗಳಾಗಿ ಬದಲಾಯಿಸಿದರು. ಇವರೆಲ್ಲ ಈ ಜನರು ಫೈಲ್‌ಗಳನ್ನು ನಿರ್ಬಂಧಿಸಿದರು. ಅರ್ಜಿದಾರರಿಗೆ ಕರೆ ಮಾಡಿ ಹಣ ಕೇಳುವ ಮೂಲಕ ಮಾನಸಿಕವಾಗಿ ಹಿಂಸೆ ನೀಡಿದರು. ವರ್ಗಾವಣೆಗೆ ಪ್ರತಿಯಾಗಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲಾಯಿತು ಎಂದು ಸಂದೀಪ್‌ ತಮ್ಮ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಗುಂಡು ಹಾರಿಸಿಕೊಂಡು ಎಡಿಜಿಪಿ ಆತ್ಮಹತ್ಯೆ – ಜಪಾನ್‌ ಪ್ರವಾಸದಲ್ಲಿರೋ ಪತ್ನಿ ಐಎಎಸ್‌ ಅಧಿಕಾರಿ

    ಅವರ ಭ್ರಷ್ಟಾಚಾರದ ಬೇರುಗಳು ತುಂಬಾ ಆಳವಾಗಿ ಬೇರೂರಿವೆ. ತಮ್ಮ ವಿರುದ್ಧದ ದೂರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆಸ್ತಿಗಳ ತನಿಖೆಯಾಗಬೇಕು. ಇದು ಜಾತಿ ಸಮಸ್ಯೆಯಲ್ಲ. ಸತ್ಯ ಹೊರಬರಬೇಕು. ಅವರು ಭ್ರಷ್ಟರಾಗಿದ್ದರು ಎಂದು ಸಂದೀಪ್‌ ಗಂಭೀರ ಆರೋಪ ಮಾಡಿದ್ದಾರೆ.

    ನಾನು ಈ ಸತ್ಯಕ್ಕಾಗಿ ನನ್ನ ಪ್ರಾಣವನ್ನೇ ತ್ಯಾಗ ಮಾಡುತ್ತಿದ್ದೇನೆ. ನಾನು ಪ್ರಾಮಾಣಿಕತೆಯೊಂದಿಗೆ ನಿಲ್ಲುತ್ತೇನೆ ಎಂದು ನನಗೆ ಹೆಮ್ಮೆ ಇದೆ. ದೇಶವನ್ನು ಜಾಗೃತಗೊಳಿಸಲು ಇದು ಮುಖ್ಯವಾಗಿದೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಐಪಿಎಸ್‌ ಅಧಿಕಾರಿಯಾಗಿದ್ದ ವೈ.ಪೂರನ್‌ ಆತ್ಮಹತ್ಯೆಗೂ ಮುನ್ನ ಆರೋಪ ಮಾಡಿದ್ದ 10 ಪೊಲೀಸ್‌ ಅಧಿಕಾರಿಗಳ ಪೈಕಿ ರೋಹ್ಟಕ್‌ ಪೊಲೀಸ್‌ ಮುಖ್ಯಸ್ಥ ನರೇಂದ್ರ ಬಿಜಾರ್ನಿಯಾ ಹೆಸರು ಕೂಡ ಇತ್ತು. ನರೇಂದ್ರ ಅವರನ್ನು ಸಂದೀಪ್‌ ಹೊಗಳಿದ್ದಾರೆ.

  • ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ `ಮಹಾ’ ಡಿಸಿಎಂ ಅಜಿತ್ ಪವಾರ್ ವಾಗ್ವಾದ – ವಿಡಿಯೋ ವೈರಲ್

    ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ `ಮಹಾ’ ಡಿಸಿಎಂ ಅಜಿತ್ ಪವಾರ್ ವಾಗ್ವಾದ – ವಿಡಿಯೋ ವೈರಲ್

    ಮುಂಬೈ: ಸೋಲಾಪುರದಲ್ಲಿ ಅಕ್ರಮವಾಗಿ ಮಣ್ಣು ಅಗೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಡಿಸಿಎಂ (Maharashtra DCM) ಅಜಿತ್ ಪವಾರ್ (Ajit Pawar) ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ ತೀವ್ರ ವಾಗ್ವಾದ ನಡೆಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಿವೆ.

    ಆ.31ರಂದು ಮಹಿಳಾ ಐಪಿಎಸ್ ಅಧಿಕಾರಿ ಅಂಜನಾ ಕೃಷ್ಣ ಅವರು ರಸ್ತೆ ನಿರ್ಮಾಣಕ್ಕಾಗಿ ಅಕ್ರಮವಾಗಿ ಮಣ್ಣು ಅಗೆಯುತ್ತಿದ್ದ ಸೋಲಾಪುರದ (Solapur) ಕುರ್ದು ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಐಪಿಎಸ್ ಅಧಿಕಾರಿಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರೆ ಮಾಡಿ, ವಾಗ್ವಾದ ನಡೆಸಿರುವುದು ವೈರಲ್ ಆದ ವಿಡಿಯೋದಲ್ಲಿ ಕಂಡುಬಂದಿದೆ.ಇದನ್ನೂ ಓದಿ: 14 ಪಾಕಿಸ್ತಾನಿ ಉಗ್ರರು, 400 ಕೆಜಿ RDX, 34 ಮಾನವ ಬಾಂಬ್ ಸ್ಫೋಟ ನಡೆಯಲಿದೆ; ಮುಂಬೈಗೆ ಉಗ್ರ ಬೆದರಿಕೆ

    ಎರಡು ನಿಮಿಷಗಳ ಈ ವಿಡಿಯೋದಲ್ಲಿ, ನಾನು ಉಪಮುಖ್ಯಮಂತ್ರಿ ಅಜಿತ್ ಪವಾರ್. ಮಣ್ಣು ಅಗೆಯುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ನಿಮ್ಮ ಮೇಲಾಧಿಕಾರಿಗಳಿಗೆ ತಿಳಿಸಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ. ಆದರೆ ಈ ವೇಳೆ ಐಪಿಎಸ್ ಅಧಿಕಾರಿ, ಅಜಿತ್ ಪವಾರ್ ಅವರನ್ನು ಗುರುತಿಸದೇ ನನ್ನ ಮೊಬೈಲ್‌ಗೆ ಕರೆ ಮಾಡಿ ಎಂದು ಹೇಳಿದ್ದಾರೆ.

    ಆಗ ಅಜಿತ್ ಪವಾರ್ ಅವರು, ನೀವು ನನ್ನನ್ನು ನೋಡ್ಬೇಕು ಅಲ್ವಾ? ನನಗೆ ನಿಮ್ಮ ಮೊಬೈಲ್ ನಂಬರ್ ಕೊಡಿ ಅಥವಾ ನನಗೆ ವಾಟ್ಸಾಪ್‌ನಲ್ಲಿ ಕರೆ ಮಾಡಿ. ಆಗ ನಾನು ಯಾರು ಅಂತ ಗೊತ್ತಾಗುತ್ತೆ? ನಾನು ಹೇಳಿದರೂ ಕೇಳುವುದಿಲ್ಲ ಎಂದರೆ ನಿಮಗೆ ಎಷ್ಟು ಧೈರ್ಯ? ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಬೆಳಗಾವಿ ಸುವರ್ಣ ಸೌಧ| ಬಿಲ್‌ ಪಾವತಿಸದಿದ್ದರೆ ವಿದ್ಯುತ್‌ ಸಂಪರ್ಕ ಕಡಿತ – ಹೆಸ್ಕಾಂ ಎಚ್ಚರಿಕೆ

  • ಬಿಟ್‌ಕಾಯಿನ್‌ ಕೇಸ್‌ ತನಿಖೆ IPS ಅಧಿಕಾರಿ ಬುಡಕ್ಕೆ – ಸಂದೀಪ್ ಪಾಟೀಲ್‌ಗೆ ನೋಟಿಸ್!

    ಬಿಟ್‌ಕಾಯಿನ್‌ ಕೇಸ್‌ ತನಿಖೆ IPS ಅಧಿಕಾರಿ ಬುಡಕ್ಕೆ – ಸಂದೀಪ್ ಪಾಟೀಲ್‌ಗೆ ನೋಟಿಸ್!

    ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೊಲೀಸರೇ ಹಗರಣದ ದಿಕ್ಕು ತಪ್ಪಿಸಿದ್ದಲ್ಲದೇ ಬಿಟ್‌ಕಾಯಿನ್ ಹಗರಣದಲ್ಲಿ (Bit Coin Case) ಭಾಗಿಯಾಗಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಕಾಂಗ್ರೆಸ್ ಸರ್ಕಾರ (Congress Government) ಬಿಟ್‌ಕಾಯಿನ್‌ ತನಿಖೆಯ ಹೊಣೆಯನ್ನು ಎಸ್‌ಐಟಿ ವಹಿಸಿದ್ದು, ಇದೀಗ ಬಿಟ್‌ಕಾಯಿನ್‌ ತನಿಖೆ ಹಿರಿಯ ಐಪಿಎಸ್ ಅಧಿಕಾರಿಯ ವಿಚಾರಣೆ ಹಂತಕ್ಕೆ ತಲುಪಿದೆ.

    ಬಿಟ್‌ಕಾಯಿನ್ (Bit Coin) ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ. ಈತನನ್ನು ಸಿಸಿಬಿ ಅಧಿಕಾರಿಗಳು (CCB Officers) ಪದೇ ಪದೇ ವಿಚಾರಣೆ ನಡೆಸಿದ್ದಾರೆ. ಎಸ್‌ಐಟಿ ಸಹ ತನಿಖೆಯ ಜವಾಬ್ದಾರಿ ವಹಿಸಿದ ಮೇಲೆ ಶ್ರೀಕಿಯ ವಿಚಾರಣೆಯನ್ನು ಮಾಡಿತ್ತು. ಇದೀಗ ಬಿಟ್‌ಕಾಯಿನ್ ಹಗರಣ ತನಿಖೆಗೆ ಹಾಜರಾಗುವಂತೆ ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್‌ಗೆ ಎಸ್‌ಐಟಿ ನೊಟೀಸ್ ನೀಡಿದೆ.

    ಇನ್ನೂ ಬಿಟ್‌ಕಾಯಿನ್ ಹಗರಣದ ತನಿಖೆ ಎಸ್‌ಐಟಿ ಕೈಗೊಳ್ಳುತ್ತಿದ್ದಂತೆ ಇನ್ಸ್‌ಪೆಕ್ಟರ್ ಪ್ರಶಾಂತ್ ಬಾಬು, ಸಂತೋಷ್‌ರನ್ನು ವಿಚಾರಣೆ ಮಾಡಿ ಬಂಧಿಸಲಾಗಿತ್ತು. ಈ ಹಗರಣ ನಡೆದ ವೇಳೆ ಸಿಸಿಬಿಯ ಮುಖ್ಯಸ್ಥರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್‌ಗೂ ಹಲವು‌ ಮಾಹಿತಿಗಳು ನೀಡಲಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದವ್ಳು ಪರಪುರುಷನ ಜೊತೆ ಡೇಟಿಂಗ್- ರೊಚ್ಚಿಗೆದ್ದ ಪತಿ ಮಚ್ಚಿನಿಂದ ಅಟ್ಯಾಕ್

    ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್‌ ಅವರ ಹೇಳಿಕೆ ಪಡೆಯುವ ಉದ್ದೇಶದಿಂದ ನೊಟೀಸ್ ನೀಡಲಾಗಿದೆ. ಬಿಟ್‌ಕಾಯಿನ್‌ನ ಸತ್ಯಾಂಶ ಏನು ಅನ್ನೋದು ಹೊರಬರಬೇಕಿದೆ. ಇದನ್ನೂ ಓದಿ: 84,000 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ಕಣ್ಣೀರಿಟ್ಟ ಮಹಿಳಾ ಅಧಿಕಾರಿ

  • ಸ್ಥಳೀಯ ಪೊಲೀಸರನ್ನು ಟೆಸ್ಟ್ ಮಾಡಲು ಸಂತ್ರಸ್ತೆ ವೇಷ ತೊಟ್ಟ ಐಪಿಎಸ್ ಅಧಿಕಾರಿ – ನೆಟ್ಟಿಗರಿಂದ ಮೆಚ್ಚುಗೆ

    ಸ್ಥಳೀಯ ಪೊಲೀಸರನ್ನು ಟೆಸ್ಟ್ ಮಾಡಲು ಸಂತ್ರಸ್ತೆ ವೇಷ ತೊಟ್ಟ ಐಪಿಎಸ್ ಅಧಿಕಾರಿ – ನೆಟ್ಟಿಗರಿಂದ ಮೆಚ್ಚುಗೆ

    ಲಕ್ನೋ: ಸಾಮಾನ್ಯ ನಾಗರಿಕ ವೇಷ ಧರಿಸಿ ಉತ್ತರ ಪ್ರದೇಶದ (Uttar Pradesh) ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಸ್ಥಳೀಯ ಪೊಲೀಸರ ಕಾರ್ಯ ವೈಖರಿಯನ್ನು ಪರೀಕ್ಷಿಸಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಗುರುವಾರ, ಔರೈಯಾ ಜಿಲ್ಲೆಯ ಐಪಿಎಸ್ (ಭಾರತೀಯ ಪೊಲೀಸ್ ಸೇವೆ) ಅಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರಾಗಿರುವ ಚಾರು ನಿಗಮ್ ಅವರು, ದುಪಟ್ಟಾವನ್ನು ತಲೆಯ ಮೇಲೆ ಸುತ್ತಿಕೊಂಡು, ಸನ್ ಗ್ಲಾಸ್ ಹಾಗೂ ಮಾಸ್ಕ್ ಧರಿಸಿ ಮುಖವನ್ನು ಸಂಪೂರ್ಣವಾಗಿ ಮಾರೆಮಾಚಿಕೊಂಡು ಬಂದಿದ್ದರು. ಇದನ್ನೂ ಓದಿ: ಈ ಹೊತ್ತಲ್ಲಿ ಯಾಕೋ ಬಂದಿದ್ದೀಯಾ ಅಂತಾ ಚಂದ್ರುನನ್ನು ವಿನಯ್ ಗುರೂಜಿ ಪ್ರಶ್ನಿಸಿದ್ರು: ಆಶ್ರಮದ ಸಿಬ್ಬಂದಿ

    ಸುಲಿಗೆಗೆ ಒಳಗಾದ ಸಂತ್ರಸ್ತೆ ರೀತಿ ನಟಿಸಿದ ಚಾರು ನಿಗಮ್ ಅವರು, 112ಗೆ ಕರೆ ಮಾಡಿ ನನ್ನ ಹೆಸರು ಸರಿತಾ ಚೌಹಾಣ್, ದರೋಡೆಕೋರರರು ನನ್ನನ್ನು ಹಿಂಬಾಲಿಸಿಕೊಂಡು ಬಂದು ದರೋಡೆ ಮಾಡಿದ್ದಾರೆ. ಎಲ್ಲಿದ್ದರೂ ಐದು ನಿಮಿಷದಲ್ಲಿ ಬಂದು ಸಹಾಯ ಮಾಡುವಂತೆ ಮನವಿ ಮಾಡಿದರು. ಕೂಡಲೇ ಕರೆಗೆ ಸ್ಪಂದಿಸಿ ಮೂವರು ಪೊಲೀಸರು ಸಹಾಯ ಮಾಡಲು ಸ್ಥಳಕ್ಕೆ ಧಾವಿಸಿದರು. ಮತ್ತು ಘಟನೆ ಸಂಬಂಧ ಮಹಿಳೆಯನ್ನು ವಿಚಾರಣೆ ನಡೆಸಿದರು. ಆದರೆ ಆ ಮಹಿಳೆ ತಮ್ಮ ಬಾಸ್ ಎಂಬುವುದು ಪೊಲೀಸರಿಗೆ ತಿಳಿದಿರಲಿಲ್ಲ. ಸುಮಾರು ಒಂದು ಗಂಟೆಗಳ ಕಾಲ ವಾಹನಗಳನ್ನು ತಪಾಸಣೆಗೆ ಒಳಪಡಿಸಿದ ನಂತರ ಸಂತ್ರಸ್ತ ಮಹಿಳೆ, ತಾವು ಹಿರಿಯ ಅಧಿಕಾರಿ ಎಂಬ ಸತ್ಯ ತಿಳಿದು ಸ್ಥಳೀಯ ಪೊಲೀಸರ ತಂಡ ಶಾಕ್ ಆಗಿದ್ದಾರೆ.

    ಸ್ಥಳೀಯ ಪೊಲೀಸರ ಕಾರ್ಯ ವೈಖರಿಯನ್ನು ಪರಿಶೀಲನೆ ನಡೆಸಲು ಬಂದಿದ್ದ ಚಾರು ನಿಗಮ್ ಅವರು, ಅವರ ಚಲನವಲನ, ಸಮಯಪ್ರಜ್ಞೆಯನ್ನು ನೋಡಿ ಸಮಾಧಾನರಾಗಿದ್ದಾರೆ. ಈ ವೀಡಿಯೋವನ್ನು ಔರೈಯಾ ಪೊಲೀಸರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ನಿರ್ಜನ ರಸ್ತೆಯಲ್ಲಿ ಚಾರು ನಿಗಮ್ ಫೋನ್‍ನಲ್ಲಿ ಮಾತನಾಡುತ್ತಿರುವ ಫೋಟೋ ಹಾಗೂ ವೀಡಿಯೋವನ್ನು ಕಾಣಬಹುದಾಗಿದೆ.

    ಪರೀಕ್ಷೆ ನಡೆಸಲು ಸರಿಯಾದ ಸ್ಥಳವನ್ನು ಹುಡುಕುತ್ತಿರುವ ಅಧಿಕಾರಿ ಬೈಕ್‍ನಲ್ಲಿ ಸವಾರಿ ಮಾಡುತ್ತಿರುವ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಈ ವೀಡಿಯೋಗೆ ನೆಟ್ಟಿಗರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಬಿಹಾರವನ್ನು ಪಾಕಿಸ್ತಾನ ಮಾಡಬೇಡಿ – ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ಗರಂ

    Live Tv
    [brid partner=56869869 player=32851 video=960834 autoplay=true]

  • ಆತ್ಮೀಯ ಸಾವೇ, ನನ್ನ ಜೀವನದಲ್ಲಿ ಬಾ – IPS ಅಧಿಕಾರಿ ಹತ್ಯೆ ಆರೋಪಿ ಡೈರಿಯಲ್ಲಿತ್ತು ನೋವಿನ ಸಾಲು

    ಆತ್ಮೀಯ ಸಾವೇ, ನನ್ನ ಜೀವನದಲ್ಲಿ ಬಾ – IPS ಅಧಿಕಾರಿ ಹತ್ಯೆ ಆರೋಪಿ ಡೈರಿಯಲ್ಲಿತ್ತು ನೋವಿನ ಸಾಲು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಐಪಿಎಸ್‌ ಅಧಿಕಾರಿ (IPS officer) ಲೋಹಿಯಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ.

    ಹಿರಿಯ ಪೊಲೀಸ್‌ ಅಧಿಕಾರಿ ಹೇಮಂತ್‌ ಕುಮಾರ್‌ ಲೋಹಿಯಾ ಅವರ ಕತ್ತು ಸೀಳಿ ಹತ್ಯೆ ಮಾಡಲಾಗಿತ್ತು. ಲೋಹಿಯಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯಾಸಿರ್‌ ಅಹ್ಮದ್‌ (Yasir Ahmed) ಪೊಲೀಸರು ಬಂಧಿಸಿದ್ದಾರೆ. ಯಾಸಿರ್ ಈ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎಂದು‌ ಹೇಳಲಾಗಿದೆ. ಇದನ್ನೂ ಓದಿ: ಮನೆಯಲ್ಲಿ ಕತ್ತು ಸೀಳಿ ಐಪಿಎಸ್‌ ಅಧಿಕಾರಿ ಹತ್ಯೆ

    ಕೊಲೆಯ ನಂತರ ಯಾಸಿರ್ ಪರಾರಿಯಾಗಿದ್ದ. ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಯಾಸಿರ್ ಅಹ್ಮದ್ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದ ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ.

    ಹತ್ಯೆಗೂ ಮುನ್ನ ಅಧಿಕಾರಿ ಲೋಹಿಯಾ ಅವರು ತಮ್ಮ ಕಾಲಿಗೆ ಎಣ್ಣೆಯನ್ನು ಹಚ್ಚುತ್ತಿದ್ದರು. ನಂತರ ಒಡೆದ ಬಾಟಲ್‌ನಿಂದ ಅವರ ಕತ್ತನ್ನು ಸೀಳಿ ಹತ್ಯೆ ಮಾಡಲಾಗಿದೆ. ಕೊಲೆ ಬಳಿಕ ಶಂಕಿತ ಆರೋಪಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    POLICE JEEP

    ಯಾಸಿರ್‌ ಅಹ್ಮದ್ ಸುಮಾರು ಆರು ತಿಂಗಳಿನಿಂದ ಲೋಹಿಯಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಆತ ಖಿನ್ನತೆಯಿಂದ ಬಳಲುತ್ತಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಟಿವಿ, ವೆಬ್‍ಸೈಟ್‍ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಮಾಡಬೇಡಿ: ಕೇಂದ್ರ ಖಡಕ್ ಸೂಚನೆ

    ಯಾಸಿರ್ ಮಾನಸಿಕ ಸ್ಥಿತಿಯನ್ನು ಪ್ರತಿಬಿಂಬಿಸುವ ಡೈರಿ ಸೇರಿದಂತೆ ಕೆಲವು ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ʼಆತ್ಮೀಯ ಸಾವೇ.. ನನ್ನ ಜೀವನದಲ್ಲಿ ಬಾʼ ಎಂದು ಒಂದು ಟಿಪ್ಪಣಿ ಬರೆಯಲಾಗಿದೆ. ʼಕ್ಷಮಿಸಿ, ನಾನು ಕೆಟ್ಟ ದಿನ, ವಾರ, ತಿಂಗಳು, ವರ್ಷ, ಜೀವನವನ್ನು ಹೊಂದಿದ್ದೇನೆʼ ಎಂದು ಡೈರಿಯಲ್ಲಿ ಬರೆದಿದೆ.

    ನನ್ನ ಜೀವನವನ್ನು ದ್ವೇಷಿಸುತ್ತೇನೆ. ಜೀವನವು ಕೇವಲ ದುಃಖ ಎಂದು ಬರೆಯಲಾಗಿದೆ. ಅಲ್ಲದೇ ಫೋನ್‌ ಬ್ಯಾಟರಿಯ ರೇಖಾಚಿತ್ರವನ್ನು ಬಿಡಿಸಿ ಅದರಲ್ಲಿ, ಪ್ರೀತಿ 0%, ಉದ್ವೇಗ 90%, ದುಃಖ 99% , ಹುಸಿನಗು 100% ಎಂದಿದೆ.

    Live Tv
    [brid partner=56869869 player=32851 video=960834 autoplay=true]

  • ಮನೆಯಲ್ಲಿ ಕತ್ತು ಸೀಳಿ ಐಪಿಎಸ್‌ ಅಧಿಕಾರಿ ಹತ್ಯೆ

    ಮನೆಯಲ್ಲಿ ಕತ್ತು ಸೀಳಿ ಐಪಿಎಸ್‌ ಅಧಿಕಾರಿ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕಾರಾಗೃಹದ ಹಿರಿಯ ಅಧಿಕಾರಿ ಹೇಮಂತ್ ಲೋಹಿಯಾ ಅವರನ್ನು ನಿವಾಸದಲ್ಲಿ ಕತ್ತು ಸೀಳಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    1992ರ ಬ್ಯಾಚ್‌ನ ಐಪಿಎಸ್ (IPS officer) ಅಧಿಕಾರಿಯಾಗಿದ್ದ 57 ವರ್ಷದ ಲೋಹಿಯಾ ಅವರು ಜಮ್ಮುವಿನ ಹೊರವಲಯದಲ್ಲಿರುವ ಉದಯವಾಲಾ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕತ್ತು ಸೀಳಿ ಅವರನ್ನು ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ

    ಅವರನ್ನು ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಜೈಲುಗಳ ಮಹಾನಿರ್ದೇಶಕರಾಗಿ ನೇಮಿಸಲಾಗಿತ್ತು. ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಮಾತನಾಡಿ, ಮನೆಯ ಸಹಾಯಕ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.

    ತನಿಖಾ ಪ್ರಕ್ರಿಯೆ ನಡೆಯುತ್ತಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಕುಟುಂಬವು ತಮ್ಮ ಹಿರಿಯ ಅಧಿಕಾರಿಯ ಸಾವಿನ ಬಗ್ಗೆ ದುಃಖಿತರಾಗಿದ್ದೇವೆ ಎಂದು ಸಿಂಗ್‌ ವಿಷಾದಿಸಿದ್ದಾರೆ. ಇದನ್ನೂ ಓದಿ: JEE Mains ಪರೀಕ್ಷೆಯಲ್ಲಿ ಅಕ್ರಮ – ಲ್ಯಾಂಡ್ ಆದ ಕೂಡಲೇ ರಷ್ಯಾ ಪ್ರಜೆ ಅರೆಸ್ಟ್

    ಗೃಹ ಸಚಿವ ಅಮಿತ್ ಶಾ ಕಾಶ್ಮೀರದಲ್ಲಿದ್ದ ದಿನದಲ್ಲಿ ಈ ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬರಿಗಾಲಲ್ಲಿ ಕಲ್ಲಿನಕೋಟೆ ಏರಿದ IPS ಅಧಿಕಾರಿ- ವೀಡಿಯೋ ವೈರಲ್

    ಬರಿಗಾಲಲ್ಲಿ ಕಲ್ಲಿನಕೋಟೆ ಏರಿದ IPS ಅಧಿಕಾರಿ- ವೀಡಿಯೋ ವೈರಲ್

    ಚಿತ್ರದುರ್ಗ: ಐಪಿಎಸ್ ಅಧಿಕಾರಿಯೊಬ್ಬರು ಬರಿಗಾಲಲ್ಲಿ ಚಿತ್ರದುರ್ಗ ಜಿಲ್ಲೆಯ ಕಲ್ಲಿನಕೋಟೆ ಏರಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

    ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಕಲ್ಲಿನಕೋಟೆ ಏರಿದ ಅಧಿಕಾರಿ. ಶಶಿಕುಮಾರ್ ಅವರು ಕೋತಿರಾಜನ ಮಾದರಿಯಲ್ಲಿ ಕಲ್ಲಿನ ಗೋಡೆ ಏರಿ ಗಮನ ಸೆಳೆದರು. ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಪಿಟ್ಲಾಲಿ ಗ್ರಾಮದ ನಿವಾಸಿ ಆಗಿದ್ದಾರೆ. ಇವರು ಕೋತಿರಾಜ್ ಸಲಹೆಯೊಂದಿಗೆ ಕೋಟೆ ಏರಿದ್ದಾರೆ. ಇದನ್ನೂ ಓದಿ: ಉಕ್ರೇನ್‍ ಮೇಲೆ ರಷ್ಯಾ ಕ್ಷಿಪಣಿ ದಾಳಿ- 16 ಮಂದಿ ಸಾವು

    ಇದೀಗ ಕೋಟೆ ಏರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಮ್ಮ ಚಿತ್ರದುರ್ಗ ನಮ್ಮ ಹೆಮ್ಮೆ ಎಂಬ ಬರಹದೊಂದಿಗೆ ಅಧಿಕಾರಿ ಶಶಿಕುಮಾರ್ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಹಾಕಿಕೊಂಡಿದ್ದಾರೆ. ಇದನ್ನೂ ಓದಿ: 41,652 ಮಂದಿಗೆ ಲಸಿಕೆ – 767 ಡಿಸ್ಚಾರ್ಜ್

    Live Tv

  • ಮೊಸಳೆ ಬಾಯಿಂದ ಜಸ್ಟ್ ಮಿಸ್ ಆಯ್ತು ಕೋಳಿ – ವೀಡಿಯೋ ವೈರಲ್

    ಮೊಸಳೆ ಬಾಯಿಂದ ಜಸ್ಟ್ ಮಿಸ್ ಆಯ್ತು ಕೋಳಿ – ವೀಡಿಯೋ ವೈರಲ್

    ನಾವು ಪ್ರಾಣಿಗಳು ಮಾಡುವ ಅವಿವೇಕತನ, ಚೇಷ್ಟೆ ಹೀಗೆ ಹಲವು ರೀತಿಯ ಹಾಸ್ಯಮಯವಾದ ವೀಡಿಯೋಗಳನ್ನು ನೋಡಿರುತ್ತೇವೆ. ಆದರೆ ಕೋಳಿಯೊಂದು ಮೊಸಳೆ ಮೇಲೆ ಆರಾಮವಾಗಿ ಕುಳಿತುಕೊಂಡು ನದಿ ದಾಟುವುದರ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಈ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

    ಹೌದು, ವೈರಲ್ ಆಗಿರುವ 10 ಸೆಕೆಂಡ್ ವೀಡಿಯೋದಲ್ಲಿ ಕೋಳಿಯು ಮೊಸಳೆಯ ತಲೆ ಮೇಲೆ ಕುಳಿತು ನದಿಯನ್ನು ದಾಟಿದೆ. ಮೊಸಳೆಯು ಕೋಳಿಯನ್ನು ತನ್ನ ತಲೆಯ ಇರಿಸಿಕೊಂಡು ನಿಧಾನವಾಗಿ ಸಮಾಧಾನದಿಂದ ಯಾವುದೇ ತೊಂದರೆಯಾಗದಂತೆ ನದಿಯ ದಡಕ್ಕೆ ಹೋಗುತ್ತದೆ. ಈ ವೇಳೆ ನದಿಯ ಅಂಚಿಗೆ ತಲುಪಿದ ನಂತರ ಕೋಳಿ ಮೊಸಳೆಯ ತಲೆ ಮೇಲಿಂದ ಕೆಳಗೆ ಇಳಿಯುತ್ತಿದ್ದಂತೆ ಮೊಸಳೆ ತನ್ನ ಬೃಹತ್ ಬಾಯಿಯನ್ನು ತೆರೆದು ಕೋಳಿಯನ್ನು ತಿನ್ನಲು ಹೋಗುತ್ತದೆ. ಆದರೆ ಚಾಣಾಕ್ಷ ಕೋಳಿ ಮೊಸಳೆ ಮೇಲಿಂದ ಇಳಿಯುತ್ತಿದ್ದಂತೆಯೇ ಮೊಸಳೆಗೆ ಹೆದರಿ ವೇಗವಾಗಿ ಓಡಿ ಹೋಗುತ್ತದೆ.

    ಈ ವೀಡಿಯೋವನ್ನು ಐಪಿಎಸ್ ಅಧಿಕಾರಿ ದೀಪಂಶು ಕಬ್ರಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘2020 ರಿಂದ 2021.. ಮತ್ತೆ 2021ರ ಆರಂಭ.. ಹಾಗೇ ಸುಮ್ಮನೆ’ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ 13.4 ಸಾವಿರ ವಿವ್ಸ್ ಪಡೆದುಕೊಂಡಿದ್ದು, ಹಲವಾರು ಕಮೆಂಟ್‍ಗಳು ಹರಿದು ಬಂದಿದೆ.

    ಅದರಲ್ಲಿ ಕೆಲವರು ಮೊಸಳೆ ಕೋಳಿಯನ್ನು ತಿಂದು ಬಿಡುತ್ತದೆ ಎಂದುಕೊಂಡಿದ್ದೇವು ಎಂದು ಕಮೆಂಟ್ ಮಾಡಿದರೆ, ಇನ್ನೂ ಕೆಲವರು ವೀಡಿಯೋ ಕೊನೆಯ ಭಾಗ ನೋಡಿ ಭಯಭೀತರಾದೆವು ಎಂದು ಕಮೆಂಟ್ ಮಾಡಿದ್ದಾರೆ.

  • ಐಪಿಎಸ್ ಅಧಿಕಾರಿ ಜೀವನವನ್ನೇ ನಾಶ ಮಾಡಿದ್ರು – ಆತ್ಮಹತ್ಯೆಗೆ ಶರಣಾದ ಯುವಕ

    ಐಪಿಎಸ್ ಅಧಿಕಾರಿ ಜೀವನವನ್ನೇ ನಾಶ ಮಾಡಿದ್ರು – ಆತ್ಮಹತ್ಯೆಗೆ ಶರಣಾದ ಯುವಕ

    – ಐಪಿಎಸ್ ಅಧಿಕಾರಿಯೇ ನನ್ನ ಸಾವಿಗೆ ಕಾರಣ

    ಲಕ್ನೋ: ಐಪಿಎಸ್ ಅಧಿಕಾರಿ ಪ್ರಾಚಿ ಸಿಂಗ್ ವಿರುದ್ಧ ಪತ್ರ ಬರೆದು ಯುವಕನೋರ್ವ ಆತ್ಮಗತ್ಯೆಗೆ ಶರಣಾಗಿದ್ದಾರೆ. ಲಕ್ನೋ ನಗರದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಚಿ ಸಿಂಗ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಆದ್ರೆ ಪೊಲೀಸ್ ಕಮಿಷನರ್ ಮೃತ ಯುವಕನ ಕುಟುಂಬಸ್ಥರ ಆರೋಪ ನಿರಾಧಾರ ಎಂದು ಹೇಳಿದ್ದಾರೆ.

    ಚಂದಗಂಜ್ ನಿವಾಸಿಯಾಗಿದ್ದ ವಿಶಾಲ್ (26) ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡಿಕೊಂಡಿದ್ದರು. ಆದ್ರೆ ವೇಶ್ಯಾವಾಟಿಕೆಯ ದಂಧೆಯಲ್ಲಿ ವಿಶಾಲ್ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿತ್ತು. ಮಾರ್ಚ್ 21ರಂದು ಜಾಮೀನು ಪಡೆದು ವಿಶಾಲ್ ಹೊರ ಬಂದಿದ್ದರು. ಈ ಘಟನೆಯಿಂದಾಗಿ ವಿಶಾಲ್ ಮಾನಸಿಕವಾಗಿ ನೊಂದಿದ್ದರಿಂದ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಫೆಬ್ರವರಿ 13ರಂದು ವಿಶಾಲ್ ರಸ್ತೆ ಬದಿಯ ಅಂಗಡಿಯಲ್ಲಿ ತಿಂಡಿ ಮಾಡುತ್ತಿದ್ದನು. ಅಲ್ಲೇ ಪಕ್ಕದಲ್ಲಿದ್ದ ಮಸಾಜ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಹಲವರನ್ನ ಬಂಧಿಸಿದ್ದರು. ಪಕ್ಕದಲ್ಲಿಯೇ ತಿಂಡಿ ಮಾಡುತ್ತಿದ್ದ ವಿಶಾಲ್ ನನ್ನು ಸಹ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದರು. 20 ದಿನಗಳ ನಂತ್ರ ನ್ಯಾಯಾಲಯ ಜಾಮೀನು ನೀಡಿತ್ತು. ಆದ್ರೆ ಈ ಎಲ್ಲ ಬೆಳವಣಿಗೆಯಿಂದ ಮಗ ಅವಮಾನಿತನಾಗಿದ್ದನು ಎಂದು ವಿಶಾಲ್ ತಂದೆ ಅರ್ಜುನ್ ಹೇಳಿದ್ದಾರೆ.

    ಬುಧವಾರ ಬೆಳಗ್ಗೆ 9 ಗಂಟೆಗೆ ವಿಶಾಲ್ ಕೆಲಸಕ್ಕೆ ಹೋಗುವದಾಗಿ ಹೇಳಿ ಮನೆಯಿಂದ ಹೊರ ಬಂದಿದ್ದಾನೆ. ಆದ್ರೆ ಕೆಲಸಕ್ಕೆ ಹೋಗದೇ ಬೆಳಗ್ಗೆ 11 ಗಂಟೆಗೆ ರೈದಾಸ್ ಕ್ರಾಸಿಂಗ್ ಬಳಿ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅರ್ಜುನ್ ಕಣ್ಣೀರು ಹಾಕುತ್ತಾರೆ.