Tag: ಐಪಿಸಿ

  • ಪ್ರಿಯಕರನಿಗೆ 15 ಬಾರಿ ಕರೆ ಮಾಡಿ ಟೆಕ್ಕಿ ಸುಂದರಿ ಆತ್ಮಹತ್ಯೆ

    ಪ್ರಿಯಕರನಿಗೆ 15 ಬಾರಿ ಕರೆ ಮಾಡಿ ಟೆಕ್ಕಿ ಸುಂದರಿ ಆತ್ಮಹತ್ಯೆ

    ಭುವನೇಶ್ವರ: ಒಡಿಶಾದಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ ಯುವತಿಯೊಬ್ಬಳು ಪ್ರಿಯಕರನಿಂದ ಬ್ಲ್ಯಾಕ್‌ಮೇಲ್‌ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಸಾಫ್ಟ್‌ವೇರ್‌ ಎಂಜಿನಿಯರ್ ಶ್ವೇತಾ ಉತ್ಕಲ್ ಕುಮಾರಿ ಎಂಬಾಕೆಯೇ ತನ್ನನ್ನು ಉಸಿರುಗಟ್ಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಇದು ಗೊತ್ತಾಗಿದ್ದು, ಯುವತಿ ಕುಟುಂಬಸ್ಥರು ಪ್ರಿಯಕರ ಸೌಮ್ಯಜಿತ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಯುವತಿಯ ದೇಹದ ಮೇಲೆ ಯಾವುದೇ ಗಾಯದ ಗುರುತುಗಳೂ ಇರಲಿಲ್ಲ ಎಂದು ವರದಿ ಹೇಳಿದೆ. ಇದನ್ನೂ ಓದಿ: ಒಪ್ಪಿಗೆಯಿಲ್ಲದೇ ಅಪ್ರಾಪ್ತೆಯೊಂದಿಗೆ ಸೆಕ್ಸ್ ನಡೆಸಿದ ವ್ಯಕ್ತಿಗೆ 100 ವರ್ಷ ಜೈಲು!

    ಏನಿದು ಟೆಕ್ಕಿ ಸುಂದರಿಯ ಕಹಾನಿ?
    ಭುವನೇಶ್ವರದ ಪ್ರತಿಷ್ಠಿತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶ್ವೇತಾ, ಸೌಮ್ಯಜಿತ್ ಎಂಬಾತನನ್ನು ಪ್ರೀತಿಸುತ್ತಿದ್ದರು. ಆಗಾಗ್ಗೆ ಇಬ್ಬರೂ ಹೊರಗೆ ಸುತ್ತಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಸೌಮ್ಯಜಿತ್, ಶ್ವೇತಾಳ ಖಾಸಗಿ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದನು. ಇಬ್ಬರ ನಡುವೆ ಮದುವೆ ಮಾತುಕತೆ ನಡೆದಾಗ ಪಬ್‌ವೊಂದರಲ್ಲಿ ಜಗಳ ಮಾಡಿಕೊಂಡಿದ್ದರು. ವರದಕ್ಷಿಣೆಗಾಗಿ ಸೌಮ್ಯಜಿತ್ 30 ಲಕ್ಷ ರೂ. ಬೇಡಿಕೆಯಿಟ್ಟದ್ದನು. ಇದನ್ನು ನಿರಾಕರಿಸಿದ ನಂತರ ಶ್ವೇತಾಳ ಖಾಸಗಿ ಫೋಟೋಗಳನ್ನು ತೋರಿಸಿ ಸೌಮ್ಯಜಿತ್ ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡಲು ಶುರು ಮಾಡಿದ್ದಾನೆ. ಹಣ ಕೊಡದೇ ಇದ್ದರೇ ಖಾಸಗಿ ಫೋಟೋಗಳನ್ನು ಜಾಲತಾಣಗಳಲ್ಲಿ ಹರಿಯಬಿಡುವುದಾಗಿಯೂ ಬೆದರಿಕೆ ಹಾಕಿದ್ದನು. ಇದನ್ನೂ ಓದಿ: ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

    ಇದರಿಂದ ಮನನೊಂದ ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸೌಮ್ಯಜಿತ್‌ಗೆ 15 ಬಾರಿ ಕರೆ ಮಾಡಿದ್ದರು. ಆದರೆ ಸೌಮ್ಯಜಿತ್ ಫೋನ್ ರಿಸೀವ್ ಮಾಡಿಲ್ಲ ಎಂಬುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಚಂದ್ರಶೇಖರಪುರದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

    ಶ್ವೇತಾಳ ಫೋನ್ ಕರೆಗಳು ಹಾಗೂ ಡೈರಿ ಪರಿಶೀಲಿಸಿದಾಗ ಗೆಳೆಯನ ಬಗ್ಗೆ ಮಾಹಿತಿ ಸಿಕ್ಕಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ‘ಬಿಗ್ ಬಾಸ್’ ಸ್ಪರ್ಧಿ ಸೊನಾಲಿ ಕೊಲೆಯಾಗಿದ್ದಾಳೆ: ಸಹೋದರ ರಿಂಕು ಆರೋಪ

    ಸದ್ಯ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ ಅಥವಾ ದುಷ್ಪ್ರೇರಣೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಸೆರೆಹಿಡಿಯಲು ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಟೋಲ್‌ಬೂತ್‌ನಲ್ಲಿದ್ದ ಮಹಿಳಾ ಉದ್ಯೋಗಿಗೆ ಕಪಾಳಮೋಕ್ಷ ಮಾಡಿದ ವಾಹನ ಸವಾರ

    ಟೋಲ್‌ಬೂತ್‌ನಲ್ಲಿದ್ದ ಮಹಿಳಾ ಉದ್ಯೋಗಿಗೆ ಕಪಾಳಮೋಕ್ಷ ಮಾಡಿದ ವಾಹನ ಸವಾರ

    ಭೋಪಾಲ್: ಟೋಲ್ ನೀಡದಿದ್ದಕ್ಕೆ ವಾಹನ ಬಿಡಲಿಲ್ಲವೆಂದು ವ್ಯಕ್ತಿಯೊಬ್ಬ ಟೋಲ್‌ಬೂತ್‌ನಲ್ಲಿದ್ದ ಮಹಿಳಾ ಉದ್ಯೋಗಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಇಲ್ಲಿನ ರಾಜಗಢ-ಭೋಪಾಲ್ ರಸ್ತೆಯಲ್ಲಿರುವ ಕಚ್ನಾರಿಯಾ ಟೋಲ್ ಪ್ಲಾಜಾದಲ್ಲಿ ಘಟನೆ ನಡೆದಿದೆ. ಸ್ಥಳೀಯ ವ್ಯಕ್ತಿಯೇ ಟೋಲ್‌ಬೂತ್‌ನಲ್ಲಿದ್ದ ಮಹಿಳಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾನೆ. ಬಳಿಕ ಮಹಿಳೆ ಚಪ್ಪಲಿ ಹಿಡಿದು ಪ್ರತಿದಾಳಿ ನಡೆಸಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಈ ದೃಶ್ಯಾವಳಿಗಳು ಈಗ ಜಾಲತಾಣದಲ್ಲಿ ಹರಿದಾಡುತ್ತಿವೆ.

    ಸ್ಥಳೀಯ ನಿವಾಸಿ ರಾಜ್‌ಕುಮಾರ್ ಗುರ್ಜರ್ ಎಂಬ ವ್ಯಕ್ತಿಯ ಕಾರಿಗೆ ಟೋಲ್ ಪಾವತಿಸಲು ಫಾಸ್ಟ್‌ಟ್ಯಾಗ್‌ ಎಲೆಕ್ಟ್ರಾನಿಕ್‌ ಪಾವತಿ ವ್ಯವಸ್ಥೆಯನ್ನು ಒಳಗೊಂಡಿರಲಿಲ್ಲ. ಆದರೆ ಮಹಿಳೆ ಟೋಲ್ ಪಾವತಿಸದೇ ವಾಹನ ಹೋಗಲು ಬಿಡುವುದಿಲ್ಲ ಎಂದಿದ್ದಾರೆ. ಇದರಿಂದ ವಾಗ್ವಾದಕ್ಕಿಳಿದ ವ್ಯಕ್ತಿ ತಾನು ಸ್ಥಳೀಯನಾಗಿದ್ದು ಟೋಲ್‌ನಿಂದ ವಿನಾಯ್ತಿ ನೀಡಬೇಕು ಎಂದು ಹೇಳಿದ್ದಾನೆ. ಆದರೆ ಸ್ಥಳೀಯನೆಂದು ಗುರುತಿಸಲು ಯಾವುದೇ ದಾಖಲೆಗಳೂ ಇರಲಿಲ್ಲ. ಮಾತಿನ ಚಕಮಕಿ ನಡೆಯುತ್ತಲೇ ಮಹಿಳೆ ಮೇಲೆ ದಾಳಿಗೆ ಮುಂದಾಗಿದ್ದಾನೆ.ಇದನ್ನೂ ಓದಿ: ವೈದ್ಯನ ಮೇಲೆ ಹಲ್ಲೆ ನಡೆಸಿದ ಮಿಜೋರಾಂ ಸಿಎಂ ಪುತ್ರಿ – ತಂದೆಯಿಂದಲೇ ಸಾರ್ವಜನಿಕವಾಗಿ ಕ್ಷಮೆ

    ಈ ಕುರಿತು ಪ್ರತಿಕ್ರಿಯೆ ನೀಡಿದ ಮಹಿಳೆ ಅನುರಾಧಾ ಡಂಗಿ, ಅವನು ಸ್ಥಳೀಯನೆಂದು ಹೇಳಿದ. ಆದರೆ ನನಗೆ ಆತನ ಪರಿಚಯವೇ ಇರಲಿಲ್ಲ. ನಂತರ ನನ್ನ ಮೇಲ್ವಿಚಾರಕರಿಗೆ ಈ ವಿಷಯ ತಿಳಿಸಿ, ಆತ ಪರಿಚಯವಿಲ್ಲವೆಂದೂ ಹೇಳಿದೆ. ಅವನು ವಾಹನದಿಂದ ಇಳಿದು ನಿಂದನೆ ಮಾಡಲು ಶುರು ಮಾಡಿದ. ಮಾತಿಗೆ ಮಾತು ನೀಡುತ್ತಾ ಕಪಾಳಕ್ಕೆ ಹೊಡೆದ. ನಾನು ಚಪ್ಪಲಿ ಹಿಡಿದು ಪ್ರತಿದಾಳಿ ಮಾಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪುಟಿನ್‌ ಬ್ರೈನ್‌ ಎಂದೇ ಹೆಸರಾಗಿದ್ದ ರಷ್ಯಾ ನಾಯಕನ ಪುತ್ರಿ ಕಾರ್‌ ಬಾಂಬ್‌ ಸ್ಫೋಟದಿಂದ ಸಾವು

    ಘಟನೆ ಸಂಬಂಧ ಟೋಲ್ ಪ್ಲಾಸಾದ ಮಹಿಳೆಯರು ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೇ ಹಲ್ಲೆಗೊಳಗಾದ ಮಹಿಳೆ ಅನುರಾಧಾ, ವ್ಯಕ್ತಿ ವಿರುದ್ಧ ಲಿಖಿತ ದೂರು ಸಲ್ಲಿಸಿದ್ದಾರೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 354, 323, 506 ಹಾಗೂ ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಸೆಕ್ಷನ್ – 3ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸ್ ಅಧಿಕಾರಿ ರಾಮಕುಮಾರ್ ರಘುವಂಶಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 55ರ ಮಹಿಳೆಯೊಂದಿಗೆ 29ರ ಯುವಕ ರೊಮ್ಯಾನ್ಸ್ – ಮದುವೆ ಎಂದೊಡನೇ ಯುವಕ ಎಸ್ಕೇಪ್

    55ರ ಮಹಿಳೆಯೊಂದಿಗೆ 29ರ ಯುವಕ ರೊಮ್ಯಾನ್ಸ್ – ಮದುವೆ ಎಂದೊಡನೇ ಯುವಕ ಎಸ್ಕೇಪ್

    ನವದೆಹಲಿ: ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಿದೇಶಿ ಮಹಿಳೆಯೊಂದಿಗೆ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ ಯುವಕ ಮದುವೆ ವಿಷಯ ಪ್ರಸ್ತಾಪಿಸಿದ ಕೂಡಲೇ ಮಹಿಳೆಯ ನಂಬರ್ ಬ್ಲಾಕ್ ಮಾಡಿ ಎಸ್ಕೇಪ್ ಆಗಿದ್ದಾನೆ.

    ದೆಹಲಿಯ ಸಮೀಪದಲ್ಲೇ ಇರುವ ಗುರುಗ್ರಾಮದಲ್ಲಿ ತೈವಾನ್ ಮೂಲದ ಮಹಿಳೆಯೊಂದಿಗೆ ರವೀಂದ್ರ ವಿಶ್ವಕರ್ಮ ಎಂಬ ವ್ಯಕ್ತಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಮದುವೆ ವಿಷಯ ಪ್ರಸ್ತಾಪಿಸಿದಾಗ ಆಕೆಯ ನಂಬರ್ ಬ್ಲಾಕ್ ಮಾಡಿ, ಎಸ್ಕೇಪ್ ಆಗಿದ್ದಾನೆ. ಇದರಿಂದ ಮದುವೆಯ ನೆಪದಲ್ಲಿ ಯುವಕ ಅತ್ಯಾಚಾರ ಎಸಗಿರುವುದಾಗಿ ಮಹಿಳೆ ಆರೋಪಿಸಿ ದೂರು ದಾಖಲಿಸಿದ್ದಾಳೆ. ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಸ್ಕಾಂನಿಂದ ಗ್ರಾಹಕ ಸ್ನೇಹಿ ಡಿಜಿಟಲ್ ಮೀಟರ್ ಅಳವಡಿಕೆ

    2017ರಲ್ಲಿ ಭಾರತಕ್ಕೆ ಬಂದ ತೈವಾನ್ ಮೂಲದ 55 ವರ್ಷದ ಮಹಿಳೆ ಅಂದಿನಿಂದ ದೆಹಲಿಯ ಗುರುಗ್ರಾಮ್‌ನ ಸೆಕ್ಟರ್-52ನಲ್ಲಿ ವಾಸಿಸುತ್ತಿದ್ದರು. ಎನ್‌ಜಿಒ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ನಡುವೆ ತನಗೆ 29 ವರ್ಷದ ರವೀಂದ್ರ ವಿಶ್ವಕರ್ಮ ಎಂಬ ವ್ಯಕ್ತಿಯೊಂದಿಗೆ ಸ್ನೇಹವಾಗಿತ್ತು. ಇಬ್ಬರ ಗೆಳೆತನ ಪ್ರೀತಿಗೆ ತಿರುಗಿ ರವೀಂದ್ರ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಇದೇ ನೆಪದಲ್ಲಿ ಹಲವು ಬಾರಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ನಂತರ ಮಹಿಳೆ ಅವನನ್ನು ಮದುವೆಯಾಗುವುದಾಗಿ ಕೇಳಿದಾಗ ಅವನು ಹಿಂದೇಟು ಹಾಕಿದ್ದಾನೆ. ಕೂಡಲೇ ಆಕೆಯ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಾನೆ. ಇದರಿಂದ ವಿಚಲಿತಳಾದ ಮಹಿಳೆ ಆರೋಪಿ ರವೀಂದ್ರ ವಿರುದ್ಧ ಸೆಕ್ಟರ್-53 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ ಎಂದು ಎಂದು ಸಹಾಯಕ ಪಿಎಸ್‌ಐ ಚಂದ್ರಕಾಂತ್ ತಿಳಿಸಿದ್ದಾರೆ.

    ಆರೋಪಿ ರವೀಂದ್ರ ವಿಶ್ವಕರ್ಮ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ಆರು ತಿಂಗಳ ಹಿಂದೆ ಇಬ್ಬರೂ ಭೇಟಿಯಾಗಿದ್ದರು. ಮಹಿಳೆಯ ಮನೆಯ ಸಮೀಪವೇ ರವೀಂದ್ರ ವಾಸವಾಗಿದ್ದ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏಷ್ಯಾದಲ್ಲಿ ಭಾರತ ಹೊರತು ಪಡಿಸಿ 13 ದೇಶಗಳಲ್ಲಿ ಆರ್ಥಿಕ ಹಿಂಜರಿತ ಸಾಧ್ಯತೆ

    ರವೀಂದ್ರ ವಿಶ್ವಕರ್ಮ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ತನ್ನ ವಿರುದ್ಧದ ಆರೋಪ ಒಪ್ಪಿಕೊಂಡಿದ್ದಾನೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದೂ ಅವರು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಾರ್ನ್ ಮಾಡಿದರೂ ಸ್ಕೂಟರ್‌ಗೆ ಅಡ್ಡ ಬಂದನೆಂದು ಕಿವುಡನನ್ನು ಚಾಕುವಿನಿಂದ ಇರಿದು ಕೊಂದ ಬಾಲಕಿ

    ಹಾರ್ನ್ ಮಾಡಿದರೂ ಸ್ಕೂಟರ್‌ಗೆ ಅಡ್ಡ ಬಂದನೆಂದು ಕಿವುಡನನ್ನು ಚಾಕುವಿನಿಂದ ಇರಿದು ಕೊಂದ ಬಾಲಕಿ

    ರಾಯಪುರ: ಹಾರ್ನ್ ಮಾಡಿದರೂ ತನ್ನ ಸ್ಕೂಟರ್‌ಗೆ ಅಡ್ಡ ಬಂದನೆಂದು ಕಿವುಡ ಹಾಗೂ ಮೂಕನಾಗಿದ್ದ ವ್ಯಕ್ತಿಯನ್ನು 16 ವರ್ಷದ ಬಾಲಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಛತ್ತೀಸ್‌ಗಡದಲ್ಲಿ ನಡೆದಿದೆ.

    ಛತ್ತೀಸ್‌ಗಡದ ರಾಜಧಾನಿ ರಾಯ್‌ಪುರದ ಕಂಕಾಲಿಪಾರಾ ಪ್ರದೇಶದ ಆಜಾದ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಈ ಘಟನೆ ನಡೆದಿದೆ. ಇದನ್ನೂ ಓದಿ: ನಮ್ಮ ನಾಯಕರಾಗಿದ್ದ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರೇ ಅಪಮಾನ ಮಾಡ್ತಿದ್ದಾರೆ – ಸಚಿವ ಸುಧಾಕರ್

    ಸ್ಕೂಟರ್‌ನಲ್ಲಿ ಶಾಲೆಗೆ ಹೋಗುತ್ತಿದ್ದ ಮಂದಿರ್ ಅಸಾದ್ ಪ್ರದೇಶದ 16 ವರ್ಷದ ಬಾಲಕಿ ರಸ್ತೆಯಲ್ಲಿ ಅಡ್ಡ ಬಂದ ವ್ಯಕ್ತಿಗೆ ಹಾರ್ನ್ ಮಾಡಿದ್ದಾಳೆ. ಆದರೆ ಆ ವ್ಯಕ್ತಿ ದೂರ ಸರಿಯದಿದ್ದರಿಂದ ಬ್ಯಾಗ್‌ನಲ್ಲಿದ್ದ ಚಾಕುವನ್ನು ತೆಗೆದು ಆತನ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾಳೆ. ಹತ್ಯೆಯಾದ 36 ವರ್ಷದ ವ್ಯಕ್ತಿ ಕಿವುಡ ಹಾಗೂ ಮೂಕನಾಗಿದ್ದ ಎಂದು ಎಸ್‌ಪಿ ಡಿ.ಸಿ.ಪಟೇಲ್ ತಿಳಿಸಿದ್ದಾರೆ. ಇದನ್ನೂ ಓದಿ: ಮರಳು ಮೂಟೆ ಅಳವಡಿಸಿದ ನಂತರ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನ ಸಂಚಾರ: ಬಿ.ಸಿ.ನಾಗೇಶ್

    ಘಟನೆಗೆ ಸಂಬಂಧಿಸಿದಂತೆ ಬಾಲಕಿಯನ್ನು ಬಂಧಿಸಲಾಗಿದ್ದು ಸೋಮವಾರ ಬಾಲ ನ್ಯಾಯಮಂಡಳಿ ಮುಂದೆ ಅವಳನ್ನು ಹಾಜರು ಪಡಿಸಲಾಗುವುದು. ಬಾಲಕಿ ವಿರುದ್ಧ ಐಪಿಸಿ ಸೆಕ್ಷನ್ 302 (ಹತ್ಯೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪಟೇಲ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅರ್ಧರಾತ್ರಿಯಲ್ಲಿ ಅತೃಪ್ತ ಶಾಸಕರ ಬಗ್ಗೆ ಕೈ ನಾಯಕರಿಗೆ ಮಾಹಿತಿ ಕೊಡ್ತಿದೆ – ಮುಂಬೈ ರಹಸ್ಯ ಬಿಚ್ಚಿಟ್ಟ ನವ್ಯಶ್ರೀ

    ಅರ್ಧರಾತ್ರಿಯಲ್ಲಿ ಅತೃಪ್ತ ಶಾಸಕರ ಬಗ್ಗೆ ಕೈ ನಾಯಕರಿಗೆ ಮಾಹಿತಿ ಕೊಡ್ತಿದೆ – ಮುಂಬೈ ರಹಸ್ಯ ಬಿಚ್ಚಿಟ್ಟ ನವ್ಯಶ್ರೀ

    ಬೆಳಗಾವಿ: ಅತೃಪ್ತ ಶಾಸಕರು ಮುಂಬೈನಲ್ಲಿದ್ದಾಗ ನಾನೂ ಮುಂಬೈಗೆ ತೆರಳಿದ್ದೆ. ಕಾಂಗ್ರೆಸ್ ನಾಯಕರೊಬ್ಬರಿಗೆ ಅರ್ಧರಾತ್ರಿಯಲ್ಲಿ ಅತೃಪ್ತ ಶಾಸಕರ ಬಗ್ಗೆ ಮಾಹಿತಿ ಕೊಡ್ತಿದ್ದೆ ಎಂದು ನವ್ಯಶ್ರೀ ಆರ್. ರಾವ್ ಹೊಸ ಬಾಂಬ್ ಸಿಡಿಸಿದ್ದಾರೆ.

    ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅತೃಪ್ತ ಶಾಸಕರು ಮುಂಬೈನಲ್ಲಿ ಇದ್ದಾಗ ನಾನೂ ಮುಂಬೈಗೆ ತೆರಳಿದ್ದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ನನಗೆ ಮುಂಬೈಗೆ ಹೋಗಲು ಸೀಕ್ರೆಟ್ ಟಾಸ್ಕ್ ನೀಡಿದ್ದರು. ಅದು ಅತೃಪ್ತ ಶಾಸಕರ ಚಲನವಲನ ನೋಡಿಕೊಳ್ಳುವ ಸೀಕ್ರೆಟ್ ಟಾಸ್ಕ್ ಆಗಿತ್ತು. ಅದಕ್ಕಾಗಿ ಬೇರೆ-ಬೇರೆ ಫ್ಲೈಟ್‌ಗಳಿಂದ ಮುಂಬೈಗೆ ಹೋಗಿದ್ದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಕಷ್ಟಕ್ಕೆ ಸ್ಪಂದಿಸಿ ಮನೆಯಲ್ಲಿ ಇಟ್ಕೋತೀನಿ ಅಂದಿದ್ದೆ – ಆದ್ರೆ ನವ್ಯಶ್ರೀ 50ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು: ಟಾಕಳೆ ಆರೋಪ

    ನಾನು ಮುಂಬೈನ ಸುಫಿಯೋಟೆಲ್ ಹೋಟೆಲ್‌ನಲ್ಲಿ ತಂಗಿದ್ದೆ. ನನ್ನ ಜೊತೆ ಮೂವರು ಮಹಿಳೆಯರು ಬಂದಿದ್ದರು. ಹೋಟೆಲ್‌ಗೆ ಹೋಗಿ ಶಾಸಕರ ಚಲನವಲನ ನೋಡಿಕೊಳ್ಳುತ್ತಿದ್ದೆ. ನಂತರ ಕಾಂಗ್ರೆಸ್ ನಾಯಕರಿಗೆ ಅರ್ಧರಾತ್ರಿ ವಾಟ್ಸಪ್ ಮೂಲಕ ಅತೃಪ್ತ ಶಾಸಕರ ಮಾಹಿತಿ ಕೊಡ್ತಿದ್ದೆ. ಆ ಸೀಕ್ರೆಟ್ ಟಾಸ್ಕ್ ನಾನು ಯಶಸ್ವಿಯಾಗಿ ನಿಭಾಯಿಸಿದ್ದೇನೆ ಎಂದು ಮುಂಬೈ ರಹಸ್ಯ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಕಿಡ್ನಾಪ್ ಮಾಡಿ ಗಣೇಶಪುರದ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ: ನವ್ಯಶ್ರೀ

    2023ಕ್ಕೆ ಚುನಾವಣೆಗೆ ನಿಲ್ಲಬೇಕೆಂದಿದ್ದೆ: ನಾನು ದೆಹಲಿಮಟ್ಟದ, ರಾಜ್ಯಮಟ್ಟದ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ಇರೋದು ನಿಜ. 2023ಕ್ಕೆ ಬೆಳಗಾವಿಯಿಂದ ಚುನಾವಣೆಗೆ ನಿಲ್ಲಬೇಕೆಂದಿದ್ದೆ. ಆದರೆ ಈಗ ರಾಜಕಾರಣ ಹೊರತುಪಡಿಸಿ ವೈಯಕ್ತಿಕ ಬದುಕು ಸರಿಪಡಿಸಿಕೊಳ್ಳಬೇಕಿದೆ. ಈ ಕೃತ್ಯಕ್ಕೆ ಸಹಕಾರ ಕೊಟ್ಟ ಮಹಾನಾಯಕ ಯಾರು ಎಂಬುದನ್ನು ಶೀಘ್ರದಲ್ಲೇ ಹೇಳುತ್ತೇನೆ. ಆತನ ಮುಂದಿನ ಜೀವನ ಮುಳ್ಳಾಗುವಂತೆ ಮಾಡ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಕಾಂಗ್ರೆಸ್ ನನ್ನನ್ನ ಸಸ್ಪೆಂಡ್ ಮಾಡಲಿ: ಕಾಂಗ್ರೆಸ್ ನಿಂದ ನನ್ನ ಇನ್ನೂ ಸಸ್ಪೆಂಡ್ ಮಾಡುವ ಲೆಟರ್ ಬಂದಿಲ್ಲ. ಬೇಕಾದರೆ ನನ್ನ ಸಸ್ಪೆಂಡ್ ಮಾಡಲಿ. ನಾನು ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆ ಇದ್ದೇನೆ, ಯಾವ ಪೋಸ್ಟ್ ಅಂತಾ ಹೇಳಲ್ಲ. ಇದನ್ನು ರಾಜಕೀಯವಾಗಿ ತಿರುಚುವ ಉದ್ದೇಶವೂ ನನಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಿಡ್ನಾಪ್ ಮಾಡಿ ಗಣೇಶಪುರದ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ: ನವ್ಯಶ್ರೀ

    ಕಿಡ್ನಾಪ್ ಮಾಡಿ ಗಣೇಶಪುರದ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ: ನವ್ಯಶ್ರೀ

    ಬೆಳಗಾವಿ: ತೋಟಗಾರಿಕೆ ಇಲಾಖೆ ನಿರ್ದೇಶಕ ರಾಜಕುಮಾರ ಟಾಕಳೆ ನನ್ನನ್ನು ಕಿಡ್ನಾಪ್ ಮಾಡಿ ರೌಡಿಗಳ ಸರ್ಪಗಾವಲಿನೊಂದಿಗೆ ಗಣೇಶಪುರದ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ ಎಂದು ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ಆರ್.ರಾವ್ ಆರೋಪಿಸಿದ್ದಾರೆ.

    ರಾಜಕುಮಾರ ಟಾಕಳೆ ಅವರು ನೀಡಿರುವ ದೂರಿನ ವಿಚಾರವಾಗಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆಯೇ ನನ್ನನ್ನು ಕಿಡ್ನಾಪ್ ಮಾಡಿ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ. ನನ್ನಿಂದ ಬಲವಂತವಾಗಿ ಹೇಳಿಕೆ ಪಡೆದು, ಅದನ್ನೂ ಮಾರಿಕೊಂಡಿದ್ದಾನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತನ್ನ ಹೆಸರಲ್ಲಿ ಹೋಟೆಲ್ ರಿಜಿಸ್ಟರ್ ಮಾಡಿಲ್ಲ ಅಂತಾ ಅಪ್ಪ-ಅಮ್ಮನ ತಲೆಗೆ ಗುಂಡಿಕ್ಕಿ ಕೊಂದ

    ಟಾಕಳೆ ವಿರುದ್ಧ ನಾನು ಸಿಇಎನ್ ಠಾಣೆಯಲ್ಲಿ ದೂರು ನೀಡುತ್ತಿದ್ದೇನೆ. ಮದುವೆಯಾಗಿ ಪತ್ನಿಯಿದ್ದರೂ ಮೋಸದಿಂದ ಮದುವೆಯಾಗಿರುವುದಕ್ಕಾಗಿ ವಂಚನೆ ಪ್ರಕರಣ, ಮಾವಿನ ತೋಪಿನಲ್ಲಿ ಕೂಡಿಹಾಕಿ ಬಲವಂತದಿಂದ ಹೇಳಿಕೆ ಪಡೆದಿದ್ದಕ್ಕಾಗಿ ಕಿಡ್ನಾಪ್ ಪ್ರಕರಣ, ನನ್ನ ಚಾರಿತ್ರ್ಯ ಹರಣ ಮಾಡಲು ಅಶ್ಲೀಲ ವೀಡಿಯೋಗಳನ್ನು ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವೆಬ್‌ಸೈಟ್‌ಗಳಿಗೆ ಮಾರಿಕೊಂಡಿದ್ದಕ್ಕಾಗಿ ಸೈಬರ್ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರು ನೀಡಲಿದ್ದೇನೆ. ಮುಖ್ಯವಾಗಿ ನನ್ನನ್ನು ಹನಿಟ್ರ್ಯಾಪ್‌ ಮಾಡಿ, ಹಣ ಪೀಕಿದಕ್ಕಾಗಿ ಹನಿಟ್ರ್ಯಾಪ್‌ ಪ್ರಕರಣದ ಅಡಿಯಲ್ಲೂ ದೂರು ದಾಖಲಿಸಲಿದ್ದೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕೊಡಲಿಲ್ಲವೆಂದು ಮದುವೆಯಾದ ಮರುದಿನವೇ ವಾಟ್ಸಾಪ್‌ನಲ್ಲೇ ತಲಾಖ್ ನೀಡಿ ಪರಾರಿಯಾದ

    ಈಗಾಗಲೇ ಸುಳ್ಳು ದೂರಿನ ಮೇರೆಗೆ ನನ್ನ ಮೇಲೆ ದಾಖಲಾದ ಎಫ್‌ಐಆರ್ ಸ್ಕ್ವಾಷ್‌ ಮಾಡಲು ನ್ಯಾಯಾಲಯಕ್ಕೆ ಕೋರಿದ್ದೇನೆ. ಆ ವೀಡಿಯೋ ಇರೋದು ಬೆಂಗಳೂರಿನ ಕುಮಾರ ಕೃಪಾ ಗೆಸ್ಟ್‌ಹೌಸ್‌ನದ್ದು, ಅದಕ್ಕಾಗಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಗೂ ದೂರು ನೀಡಿದ್ದೇನೆ. ಸೋಮವಾರ ರಾತ್ರಿ ಬೆಳಗಾವಿ ನಗರ ಪೊಲೀಸ್ ಆಯುಕ್ತರು, ಡಿಸಿಪಿ ಸ್ನೇಹಾ ಅವರನ್ನು ಭೇಟಿಯಾಗಿ ಸಾಕ್ಷಿ ಸಮೇತ ಎಲ್ಲ ವಿಚಾರಗಳನ್ನು ಮುಂದಿಟ್ಟಿದ್ದೇನೆ. ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಕೊಡಿಸಲು ಕೇಳಿಕೊಂಡಿದ್ದೇನೆ ಎಂದು ನವ್ಯಶ್ರೀ ಹೇಳಿದ್ದಾರೆ.

    ನಾನು ಅವನೊಂದಿಗೆ ಸೆಕ್ಸ್‌ಮೆಟ್‌ ತರಹ ಇರಬೇಕು ಅನ್ನೋದು ಟಾಕಳೆ ಉದ್ದೇಶ. ಅದಕ್ಕಾಗಿ ನನ್ನನ್ನು ಬೆಳಗಾವಿಯ ಶಿವಬಸವ ನಗರದ ಮಹಿಳಾ ಪಿಜಿಯಲ್ಲಿ ಇರಿಸಿದ್ದ. ಅಲ್ಲಿ ಯಾರೂ ಗಂಡಸರು ಬರಲ್ಲ ಅಂತಾ ಇರಿಸಿದ್ದ. ಆ ಆಡಿಯೋ ಕ್ಲಿಪ್‌ನಲ್ಲಿ ಮಾತನಾಡಿದ ಮೇಲೆಯೇ ನಾನು ಆತನ ಮನೆಗೆ ಬಂದಿದ್ದೆ. ಈತ ನನ್ನ ಜೊತೆ ಇದ್ದ ವೀಡಿಯೋಗಳನ್ನ ವೈರಲ್ ಮಾಡಿದ್ದಾನೆ. ನಾನು ಅವನ ವಿರುದ್ಧ ದೂರು ನೀಡುತ್ತೇನೆ ಎಂದಿದ್ದಾರೆ.

    ಸದ್ಯ ನನಗೆ ಈಗ ಬಂದಿರುವ ಮಾಹಿತಿಗಳೆಲ್ಲವೂ 2ನೇ ವ್ಯಕ್ತಿಯಿಂದ. ಇನ್ನೂ ಈ ತನಿಖೆಯಿಂದೆ ಯಾರಿದ್ದಾರೆ ಎಂಬುದೆಲ್ಲವನ್ನೂ ಪೊಲೀಸ್ ತನಿಖೆಯಿಂದಲೇ ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತೇನೆ.

    ಏನಿದು ಪ್ರಕರಣ?
    ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಚನ್ನಪಟ್ಟಣ ಮೂಲದ ನವ್ಯಶ್ರೀ ರಾಮಚಂದ್ರ ರಾವ್ ಹಾಗೂ ಆಪ್ತ ತಿಲಕ್ ವಿರುದ್ಧ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಎಫ್‌ಐಆರ್ ದಾಖಲಾಗಿತ್ತು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ನೀಡಿದ ದೂರಿನ ಮೇರೆಗೆ ನವ್ಯಶ್ರೀ ವಿರುದ್ಧ ಐಪಿಸಿ ಸೆಕ್ಷನ್ 384, 448, 504, 506, 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಜೀವ ಬೆದರಿಕೆ, ಮಾನಸಿಕ ಚಿತ್ರಹಿಂಸೆ ಆರೋಪ – ಕಾಂಗ್ರೆಸ್ ನಾಯಕಿ ವಿರುದ್ಧ FIR

    ಜೀವ ಬೆದರಿಕೆ, ಮಾನಸಿಕ ಚಿತ್ರಹಿಂಸೆ ಆರೋಪ – ಕಾಂಗ್ರೆಸ್ ನಾಯಕಿ ವಿರುದ್ಧ FIR

    ಬೆಳಗಾವಿ: ತನಗೆ ಜೀವ ಬೆದರಿಕೆ ಹಾಕುತ್ತಿರುವುದಾಗಿ ಇಲ್ಲಿನ ತೋಟಗಾರಿಕೆ ಇಲಾಖೆ ಅಧಿಕಾರಿ ಕಾಂಗ್ರೆಸ್ ನಾಯಕಿ ವಿರುದ್ಧ ತಡರಾತ್ರಿಯೇ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

    ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಚನ್ನಪಟ್ಟಣ ಮೂಲದ ನವ್ಯಶ್ರೀ ರಾಮಚಂದ್ರ ರಾವ್ ಹಾಗೂ ಆಪ್ತ ತಿಲಕ್ ವಿರುದ್ಧ ತಡರಾತ್ರಿಯೇ ದೂರು ನೀಡಲಾಗಿದ್ದು, ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ನೀಡಿದ ದೂರಿನ ಮೇರೆಗೆ ನವ್ಯಶ್ರೀ ವಿರುದ್ಧ IPC ಸೆಕ್ಷನ್ 384, 448, 504, 506, 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    ನವ್ಯಶ್ರೀ ನನಗೆ ಮಾನಸಿಕ ಚಿತ್ರಹಿಂಸೆ ನೀಡುತ್ತಿದ್ದಾರೆ, ಸುಳ್ಳುಕೇಸ್ ನೀಡಿ ಮಾನಹಾನಿ ಮಾಡಿ ಜೈಲಿಗೆ ಕಳುಹಿಸುವುದಾಗಿ ಹೆದರಿಸುತ್ತಿದ್ದಾರೆ. ಜೊತೆಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಅವರಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪುರುಷನೊಂದಿಗೆ ಸಂಬಂಧ ಹದಗೆಟ್ಟ ಬಳಿಕ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್

    ಪುರುಷನೊಂದಿಗೆ ಸಂಬಂಧ ಹದಗೆಟ್ಟ ಬಳಿಕ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್

    ನವದೆಹಲಿ: ಪುರುಷನೊಂದಿಗೆ ಸಂಬಂಧವಿಟ್ಟುಕೊಂಡು ಆತನೊಂದಿಗೆ ಸ್ವ-ಇಚ್ಛೆಯಿಂದ ವಾಸಿಸುತ್ತಿದ್ದ ಮಹಿಳೆ ಆ ಸಂಬಂಧ ಹದಗೆಟ್ಟ ಬಳಿಕ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ಅತ್ಯಾಚಾರ, ಅಸಹಜ ಅಪರಾಧಗಳು ಹಾಗೂ ಕ್ರಿಮಿನಲ್ ಬೆದರಿಕೆ ಆರೋಪ ಎದುರಿಸುತ್ತಿದ್ದ ಅನ್ಸಾರ್ ಮೊಹಮ್ಮದ್ ಅವರ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ವಿಕ್ರಮ್ ನಾಥ್ ಅವರಿದ್ದ ದ್ವೀ-ಸದಸ್ಯ ಪೀಠವು ಅನ್ಸಾರ್‌ಗೆ ಜಾಮೀನು ನೀಡಿದೆ. ಇದನ್ನೂ ಓದಿ: 2025ರ ವೇಳೆಗೆ ಕಾಂಡೋಮ್ ಮಾರುಕಟ್ಟೆ ಶತಕೋಟಿ ಡಾಲರ್‌ಗಳಷ್ಟು ವಿಸ್ತಾರ

    ಈ ಪ್ರಕರಣದಲ್ಲಿ ಮೇಲ್ಮನವಿದಾರನಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ರಾಜಸ್ಥಾನ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. ದೂರುದಾರೆ ಮಹಿಳೆ ಸ್ವಇಚ್ಛೆಯಿಂದ ಮೇಲ್ಮನವಿದಾರ ಅನ್ಸಾರ್ ಜೊತೆ ಇದ್ದು ಆತನೊಂದಿಗೆ ಸಂಬಂಧ ಹೊಂದಿದ್ದರು. ಈಗ ಸಂಬಂಧ ಹದಗೆಟ್ಟಿದ್ದರೆ ಅದು ಐಪಿಸಿ ಸೆಕ್ಷನ್ 376 (2) (ಎನ್) ಅಡಿ ಪ್ರಕರಣ ದಾಖಲಿಸಲು ಆಧಾರವಾಗುವುದಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: ದೇಗುಲದ ಅರ್ಚಕರ ತಲೆ ಕಡಿಯೋದಾಗಿ ಬೆದರಿಕೆ ಪತ್ರ – ಉದಯಪುರ ಮತ್ತೆ ಉದ್ವಿಗ್ನ

    ಅನ್ಸಾರ್ ಜೊತೆ ದೂರುದಾರೆ ಕಳೆದ 4 ವರ್ಷಗಳಿಂದಲೂ ಸಂಬಂಧ ಹೊಂದಿದ್ದು ಆಕೆ ಮತ್ತು ಅನ್ಸಾರ್ ನಡುವೆ ಸಂಬಂಧ ಬೆಳೆದಾಗ ಮಹಿಳೆಗೆ 21 ವರ್ಷ ವಯಸ್ಸಾಗಿತ್ತು ಎಂಬುದನ್ನೂ ದೂರುದಾರೆ ಒಪ್ಪಿಕೊಂಡಿದ್ದಾರೆ. ಈ ಅಂಶವನ್ನು ಗಮನಿಸಿದ ನ್ಯಾಯಾಲಯವು ಅನ್ಸಾರ್‌ಗೆ ನಿರೀಕ್ಷಣಾ ಜಾಮೀನು ನೀಡಲು ನಿರ್ಧರಿಸಿತು.

    Live Tv
    [brid partner=56869869 player=32851 video=960834 autoplay=true]

  • 8 ವರ್ಷಗಳಿಂದ ಲಿವಿಂಗ್ ರಿಲೇಷನ್, 14 ಬಾರಿ ಗರ್ಭಪಾತ – ಮಹಿಳೆ ಆತ್ಮಹತ್ಯೆ, ಟೆಕ್ಕಿ ವಿರುದ್ಧ FIR

    8 ವರ್ಷಗಳಿಂದ ಲಿವಿಂಗ್ ರಿಲೇಷನ್, 14 ಬಾರಿ ಗರ್ಭಪಾತ – ಮಹಿಳೆ ಆತ್ಮಹತ್ಯೆ, ಟೆಕ್ಕಿ ವಿರುದ್ಧ FIR

    ನವದೆಹಲಿ: ಕಳೆದ 8 ವರ್ಷಗಳಿಂದ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದು, 14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆ ಕೊನೆಗೆ ಆತ್ಮಹತ್ಯೆ ಮಾಡಿ ಕೊಂಡಿದ್ದಾಳೆ. ಜುಲೈ 5 ರಂದು ಆಗ್ನೇಯ ದೆಹಲಿಯ ಜೈತ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಕಳೆದ ಎಂಟು ವರ್ಷಗಳ ಅವಧಿಯಲ್ಲಿ 33 ವರ್ಷದ ಮಹಿಳೆಯೊಬ್ಬರು ಗೆಳೆಯನ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದು 14 ಬಾರಿ ಗರ್ಭಪಾತಕ್ಕೆ ಒಳಗಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 6 ಜನ ಮಕ್ಕಳ ಮುಂದೆಯೇ ಪತ್ನಿ ಹತ್ಯೆಗೈದು ಕಡಾಯಿಲ್ಲಿ ಬೇಯಿಸಿದ ಕ್ರೂರಿ ಗಂಡ!

    CRIME

    ಮದುವೆಯ ಭರವಸೆಯ ಮೇರೆಗೆ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದ, ಕೊನೆಗೆ ಮದುವೆಯಾಗಲು ನಿರಾಕರಿಸಿದ್ದಾನೆ. ಹೀಗಾಗಿ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಆಕೆ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.

    ಮಹಿಳೆ ತನ್ನ ಪತಿಯಿಂದ ಸುಮಾರು 7-8 ವರ್ಷಗಳಿಂದ ದೂರವಾಗಿದ್ದಳೆಂದು ಬಳಿಕ ಆರೋಪಿಯೊಂದಿಗೆ ಕಳೆದ 8 ವರ್ಷಗಳಿಂದ ಲಿವಿಂಗ್ ರಿಲೇಷನ್‌ನಲ್ಲೇ ಇದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ನೋಯ್ಡಾದ ಸಾಫ್ಟ್ ವೇರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಆರೋಪಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪತ್ತೆಗಾಗಿ ಬಲೆ ಬೀಸಲಾಗಿದೆ. ಇದನ್ನೂ ಓದಿ: ಜೇಮ್ಸ್ ವೆಬ್ ಟೆಲಿಸ್ಕೋಪ್‍ನಲ್ಲಿ ಸೆರೆ ಸಿಕ್ಕ ಗುರು-ಚಂದ್ರನ ಬೆರಗುಗೊಳಿಸುವ ಫೋಟೋ

    ಬಿಹಾರದ ಮುಜಾಫರ್‌ಪುರದಲ್ಲಿ ನೆಲೆಸಿರುವ ಆಕೆಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ), 376 (ಅತ್ಯಾಚಾರ) ಮತ್ತು 313 (ಮಹಿಳೆಯ ಒಪ್ಪಿಗೆಯಿಲ್ಲದೆ ಗರ್ಭಪಾತಕ್ಕೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • 14 ವರ್ಷದ ಬಾಲಕಿ ಮೇಲೆ 2 ತಿಂಗಳ ಕಾಲ ಪದೇ-ಪದೇ ಅತ್ಯಾಚಾರ ಮಾಡಿದ್ದ ಪಾಪಿ

    14 ವರ್ಷದ ಬಾಲಕಿ ಮೇಲೆ 2 ತಿಂಗಳ ಕಾಲ ಪದೇ-ಪದೇ ಅತ್ಯಾಚಾರ ಮಾಡಿದ್ದ ಪಾಪಿ

    ಗುರುಗ್ರಾಮ: 14 ವರ್ಷದ ಬಾಲಕಿ ಮೇಲೆ ನೆರೆ ಮನೆಯ ವ್ಯಕ್ತಿಯೊಬ್ಬ ಎರಡು ತಿಂಗಳ ಕಾಲ ಪದೇ-ಪದೇ ಅತ್ಯಾಚಾರವೆಸಗಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.

    ಆರೋಪಿಯು ನಾಲ್ಕು ದಿನಗಳ ಹಿಂದೆ ಬಾಲಕಿಯನ್ನು ಅಪಹರಿಸಿದ್ದಾನೆ. ನಂತರ ಬಾಲಕಿಯ ಕುಟುಂಬಸ್ಥರು ಆಕೆಯನ್ನು ಹುಡುಕುತ್ತಿದ್ದು, ಬುಧವಾರ ತಡರಾತ್ರಿ ದೆಹಲಿ-ಜೈಪುರ ಹೆದ್ದಾರಿಯ ಬಿಲಾಸ್‍ಪುರ ಚೌಕ್ ಬಳಿ ಪತ್ತೆ ಮಾಡಿದ್ದಾರೆ. ಬಾಲಕಿ ತನ್ನ ಕುಟುಂಬ ಸದಸ್ಯರಿಗೆ ತನಗಾದ ಸಮಸ್ಯೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದಾಳೆ. ಈ ಹಿನ್ನೆಲೆ ಬಾಲಕಿ ತಂದೆ ಪೊಲೀಸರಿಗೆ ದೂರು ಕೊಟ್ಟಿದ್ದು, ಇದರ ಆಧಾರದ ಮೇರೆಗೆ ಬಿಲಾಸ್‍ಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಉತ್ತರ ಕೊರಿಯಾದೊಂದಿಗಿನ ಸಂಬಂಧವನ್ನು ಕಡಿತಗೊಳಿಸಿದ ಉಕ್ರೇನ್ 

    ನಡೆದಿದ್ದೇನು?
    ಆರೋಪಿಯು ಬಿಲಾಸ್‍ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹಳ್ಳಿಯೊಂದರಲ್ಲಿ ಬಾಲಕಿ ನೆರೆಮನೆಯಲ್ಲಿ ವಾಸಿಸುತ್ತಿದ್ದನು. ಬಾಲಕಿಯು 8ನೇ ತರಗತಿ ಓದುತ್ತಿದ್ದಳು. ಆಕೆಗೆ ಮದುವೆ ಮಾಡಿಕೊಳ್ಳುವುದಾಗಿ ಆಮಿಷವೊಡ್ಡಿ ಎರಡು ತಿಂಗಳ ಕಾಲ ಪದೇ ಪದೇ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

    ಜುಲೈ 8 ರಂದು ಆರೋಪಿಗಳು ನನ್ನನ್ನು ಅಪಹರಿಸಿದ್ದರು. ಈ ವೇಳೆ ಅವರು ನನ್ನ ಮೇಲೆ ಅತ್ಯಾಚಾರ ಎಸಗಿದ್ದು, ನನ್ನ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಾಲಕಿ ತಿಳಿಸಿದ್ದಾಳೆ. ಇದನ್ನೂ ಓದಿ:  ಬಿಜೆಪಿ MLAಗೆ ಮಣ್ಣಿನ ಸ್ನಾನ ಮಾಡಿಸಿದ ಮಹಿಳೆಯರ ಗುಂಪು – ಕಾರಣ ಕೇಳಿ ನೆಟ್ಟಿಗರು ಶಾಕ್ 

    ಬಿಲಾಸ್‍ಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ(ಎಸ್‍ಎಚ್‍ಒ) ಅಜಯ್ ಕುಮಾರ್ ಈ ಕುರಿತು ಮಾತನಾಡಿದ್ದು, ಐಪಿಸಿ ಸೆಕ್ಷನ್ 363(ಅಪಹರಣಕ್ಕೆ ಶಿಕ್ಷೆ), 366 ಎ(ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕೃತ್ಯ) ಮತ್ತು 506(ಅಪರಾಧದ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(POCSO) ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಆರೋಪಿಗಳಿಗಾಗಿ ತೀವ್ರ ತನಿಖೆ ನಡೆಯುತ್ತಿದೆ ಎಂದು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]