Tag: ಐಬಿ

  • 3 ಲಕ್ಷ ರೂ. ಕರೆಂಟ್ ಬಿಲ್ ಬಾಕಿ – ಕತ್ತಲಲ್ಲಿ ಉಡುಪಿ ಪ್ರವಾಸಿ ಮಂದಿರ

    3 ಲಕ್ಷ ರೂ. ಕರೆಂಟ್ ಬಿಲ್ ಬಾಕಿ – ಕತ್ತಲಲ್ಲಿ ಉಡುಪಿ ಪ್ರವಾಸಿ ಮಂದಿರ

    ಉಡುಪಿ: ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಚುನಾವಣೆಗೆ ಮುನ್ನ ಘೋಷಣೆ ಮಾಡಿದ ಭಾಗ್ಯಗಳು ಈಗ ಸರ್ಕಾರಕ್ಕೆ ಬಿಸಿ ತುಪ್ಪವಾಗಿದೆ. ಯೋಜನೆಗಳನ್ನು ನಿಲ್ಲಿಸುವಂತಿಲ್ಲ, ಮುಂದುವರಿಸುವಂತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದೀಗ ಸರ್ಕಾರಿ ಕಟ್ಟಡಗಳಿಗೆ ಕರೆಂಟ್ ಬಿಲ್ (Electricity Bill) ಕಟ್ಟುವುದಕ್ಕೂ ಕಷ್ಟವಾಗಿದೆ.

    ಉಡುಪಿ (Udupi) ನಗರದ ಪ್ರವಾಸಿ ಮಂದಿರದ ದೃಶ್ಯ ಇದು. ಕಳೆದ ಎರಡು ದಿನಗಳಿಂದ ಐಬಿಗೆ (Inspection Bungalow) ಕರೆಂಟ್ ಇಲ್ಲ. ಮೆಸ್ಕಾಂನವರು (MESCOM) ಟ್ರಾನ್ಸ್‌ಫಾರ್ಮರ್ ಕಂಬದಿಂದ ವಿದ್ಯುತ್ ಸ್ಥಗಿತ ಮಾಡಿದ್ದಾರೆ. ಉಡುಪಿಗೆ ಬಂದ ಸರ್ಕಾರಿ ಅಧಿಕಾರಿಗಳು ಕತ್ತಲಲ್ಲೇ ಕಾಲ ಕಳೆಯುವಂತಾಗಿದೆ. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಐಬಿಗೆ ಭೇಟಿ ಕೊಟ್ಟು ಸಮಸ್ಯೆ ಬಗ್ಗೆ ಮಾಹಿತಿ ಪಡೆದುಕೊಂಡರು.‌  ಇದನ್ನೂ ಓದಿ: ಇಸ್ರೇಲ್‌ ರಾಕೆಟ್‌ ದಾಳಿಗೆ ಲೆಬನಾನ್‌ ಛಿದ್ರ ಛಿದ್ರ – ಸಾವಿನ ಸಂಖ್ಯೆ 492ಕ್ಕೆ ಏರಿಕೆ!

    ಸುಮಾರು ಒಂದು ವರ್ಷಗಳಿಂದ ಪ್ರವಾಸಿ ಮಂದಿರದ 3 ಲಕ್ಷ ರೂ. ವಿದ್ಯುತ್ ಬಿಲ್ ಪಾವತಿ ಮಾಡಿಲ್ಲ. ಮೂರ್ನಾಲ್ಕು ಬಾರಿ ನೋಟಿಸ್ ಕೊಟ್ಟ ಬೆಸ್ಕಾಂ ನೇರವಾಗಿ ಟ್ರಾನ್ಸ್‌ಫಾರ್ಮರ್ ಕಂಬದಿಂದ ವಿದ್ಯುತ್ ಸ್ಥಗಿತ ಮಾಡಿದೆ. ಈ ಬೆಳವಣಿಗೆ ವಿಚಾರದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಚಟುವಟಿಕೆಗಳು ಸ್ಥಗಿತವಾಗಿದ್ದು ಸರ್ಕಾರಿ ಕಟ್ಟಡಗಳ ವಿದ್ಯುತ್ ಬಿಲ್ ಪಾವತಿಯಷ್ಟು ಕೂಡ ಸರ್ಕಾರದ ಬಳಿ ಹಣ ಇಲ್ವಾ ಎಂದು ಪ್ರಶ್ನೆಮಾಡಿದ್ದಾರೆ. ಇದನ್ನೂ ಓದಿ: ನಿಮ್ಮ ಕೈಯಲ್ಲಿರೋ ಸ್ಮಾರ್ಟ್‌ಫೋನ್‌ ಹ್ಯಾಕ್‌ ಮಾಡಿ ಸ್ಫೋಟಿಲು ಸಾಧ್ಯವೇ? ಹ್ಯಾಕಿಂಗ್‌ ತಪ್ಪಿಸಲು ಏನು ಮಾಡ್ಬೇಕು?

    ಒಟ್ಟಾರೆ ಸರ್ಕಾರಿ ಅಧಿಕಾರಿಗಳು, ನ್ಯಾಯಾಧೀಶರು ಜನಪ್ರತಿನಿಧಿಗಳು ಬಂದು ಉಳಿದುಕೊಳ್ಳುವ ಐಬಿಯ ಪರಿಸ್ಥಿತಿ ಹೀಗಾಗಿದೆ. ಮೂರು ದಿನಗಳಿಂದ ಯಾರಿಗೂ ಐಬಿಯಲ್ಲಿ ಕೊಠಡಿಗಳನ್ನು ಕೊಡುತ್ತಿಲ್ಲ. ಸಮಸ್ಯೆ ಬಗ್ಗೆ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆದಿದ್ದು, ಸದ್ಯದ ಆರ್ಥಿಕ ಪರಿಸ್ಥಿತಿಯನ್ನು ವಿವರಿಸಲಾಗಿದೆ. ಸರ್ಕಾರ ಯಾವಾಗ ಹಣ ಬಿಡುಗಡೆ ಮಾಡುತ್ತದೋ ಕಾದು ನೋಡಬೇಕು. ಇದನ್ನೂ ಓದಿ: ಮೈಸೂರಿನಲ್ಲಿ ಮಹಿಷ ದಸರಾ ಫೈಟ್ – ಈ ಬಾರಿ `ಮಹಿಷ ಮಂಡಲೋತ್ಸವ’!

  • ವಿ.ಸೋಮಣ್ಣಗೆ ಬಿಗ್ ಶಾಕ್ – ಸಂಸದರ ಕಚೇರಿ ವಾಪಸ್ ಪಡೆದ ಸರ್ಕಾರ

    ವಿ.ಸೋಮಣ್ಣಗೆ ಬಿಗ್ ಶಾಕ್ – ಸಂಸದರ ಕಚೇರಿ ವಾಪಸ್ ಪಡೆದ ಸರ್ಕಾರ

    ತುಮಕೂರು: ಉದ್ಘಾಟನೆಗೆ ಸಿದ್ಧವಾಗಿದ್ದ ನೂತನ ಸಂಸದರ ಕಚೇರಿ ವಾಪಸ್ ಪಡೆದು ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣಗೆ (V Somanna) ರಾಜ್ಯ ಸರ್ಕಾರ ಶಾಕ್ ನೀಡಿದೆ.

    ತುಮಕೂರಿನ ರೈಲ್ವೆ ನಿಲ್ದಾಣ ಬಳಿ ಇರುವ ಹಳೆಯ ಪರಿವೀಕ್ಷಣಾ ಮಂದಿರವನ್ನು (Inspection Bungalow) ಸೋಮಣ್ಣ ಅವರಿಗೆ ಸರ್ಕಾರ ನೀಡಿತ್ತು. ಆ.18 ಭಾನುವಾರದಂದು ನೂತನ ಕಚೇರಿ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳಲಾಗಿತ್ತು.

    ಸೋಮಣ್ಣ ಅವರು ನೂತನ ಕಚೇರಿಯಲ್ಲಿ ಟೇಬಲ್ ಹಾಗೂ ಕುರ್ಚಿಗಳನ್ನು ಹಾಕಿಸಿದ್ದರು. ವಿ.ಸೋಮಣ್ಣ, ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರು ಭಾರತ ಸರ್ಕಾರ ಲೋಕಸಭಾ ಸದಸ್ಯರ ಕಚೇರಿ, ತುಮಕೂರು ಎಂದು ನಾಮಫಲಕ ಕೂಡ ಹಾಕಲಾಗಿತ್ತು. ಆದರೆ ರಾಜ್ಯ ಸರ್ಕಾರ ಯಾವುದೇ ಕಾರಣ ನೀಡದೇ ನೂತನ ಸಂಸದರ ಕಚೇರಿ ವಾಪಸ್ ಪಡೆದಿದೆ. ಇದನ್ನೂ ಓದಿ: ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ

    ಕಚೇರಿ ಉಪಯೋಗಕ್ಕೆ ನೀಡಿದ ಅನುಮೋದನೆಯು ಈ ಕೂಡಲೇ ಹಿಂಪಡೆಯಲಾಗಿರುವ ಬಗ್ಗೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿ, ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜಶೇಖರ ಸೂಚಿಸಿದ್ದಾರೆ. ಇದನ್ನೂ ಓದಿ: ಪ್ರಶಸ್ತಿಯನ್ನು ಪುನೀತ್‌ ರಾಜ್‌ಕುಮಾರ್‌, ದೈವಕ್ಕೆ, ದೈವ ನರ್ತಕರಿಗೆ ಅರ್ಪಣೆ ಮಾಡುತ್ತೇನೆ- ರಿಷಬ್ ಶೆಟ್ಟಿ

    ರಾಜ್ಯ ಸರ್ಕಾರದ ನಡೆಗೆ ತುಮಕೂರು ನಗರ ಬಿಜೆಪಿ ಶಾಸಕ ಜಿ.ಬಿ ಜ್ಯೋತಿ ಗಣೇಶ್ (Jyothi Ganesh) ಕಿಡಿಕಾರಿದ್ದಾರೆ. ಇಲ್ಲಿ ಇಷ್ಟು ವರ್ಷ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಕ್ಷುಲ್ಲಕ ರಾಜಕಾರಣ ಮಾಡಬಾರದು. ಈ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವ ಮಾತೇ ಇಲ್ಲ. ಯಾರು ಏನು ಮಾಡುತ್ತಾರೋ ನೋಡೋಣ. ಈ ಭಾನುವಾರ ಕಚೇರಿ ಉದ್ಘಾಟನೆ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಜಿಲ್ಲೆಯ ಎಲ್ಲಾ ಮುಖಂಡರಿಗೆ ಆಹ್ವಾನ ನೀಡಲಾಗಿತ್ತು. ಈಗ ಏಕಾಏಕಿ ರದ್ದು ಮಾಡಿ ಆದೇಶ ಮಾಡಿದ್ದಾರೆ. ಈ ರೀತಿಯ ನಡೆ ಸರಿಯಲ್ಲ ಎಂದು ಸಿಟ್ಟು ಹೊರಹಾಕಿದ್ದಾರೆ.

  • ಆಕಸ್ಮಿಕವಾಗಿ ಕುಸಿದು ಬಿದ್ದು ಐಬಿ ಅಧಿಕಾರಿ ಸಾವು

    ಆಕಸ್ಮಿಕವಾಗಿ ಕುಸಿದು ಬಿದ್ದು ಐಬಿ ಅಧಿಕಾರಿ ಸಾವು

    ಹೈದರಾಬಾದ್: ತೆಲಂಗಾಣದ ಪ್ರದೇಶವೊಂದರಲ್ಲಿ ನೇಮಕಗೊಂಡ ಗುಪ್ತಚರ ಇಲಾಖೆಯ (ಐಬಿ) ಅಧಿಕಾರಿಯೊಬ್ಬರು ಕರ್ತವ್ಯದಲ್ಲಿದ್ದಾಗ ಆಕಸ್ಮಿಕವಾಗಿ ಬಿದ್ದ ಪರಿಣಾಮ ಗಾಯಗೊಂಡು ಸಾವನ್ನಪ್ಪಿದ್ದಾರೆ.

    police (1)

    ಐಬಿ ಸಹಾಯಕ ನಿರ್ದೇಶಕ ಅಮರೀಶ್ (51) ಮೃತ ಅಧಿಕಾರಿ. ಅಮರೀಶ್ ಅವರು ಬುಧವಾರ ಮಧ್ಯಾಹ್ನ ಹೈದರಾಬಾದ್‍ನ ಮಾದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿಲ್ಪ ಕಲಾ ವೇದಿಕೆಯಲ್ಲಿ ಭದ್ರತಾ ತಪಾಸಣೆ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದಿದ್ದಾರೆ. ಇದನ್ನೂ ಓದಿ: ಬಾಕ್ಸಿಂಗ್ ರಿಂಗ್‍ನಲ್ಲಿಯೇ ಹೃದಯಾಘಾತ – ಚಾಂಪಿಯನ್ ಮೂಸಾ ಯಮಕ್ ವಿಧಿವಶ

    ಪ್ರಮುಖ ವ್ಯಕ್ತಿಯೊಬ್ಬರ ಭೇಟಿಗಾಗಿ ಸಭಾಂಗಣದಲ್ಲಿ ಭದ್ರತಾ ತಪಾಸಣೆ ನಡೆಸುತ್ತಿದ್ದ ಅವರು ಆಕಸ್ಮಿಕವಾಗಿ ಮೆಟ್ಟಿಲುಗಳಿಂದ ಜಾರಿಬಿದ್ದು ತಲೆಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಮಥುರಾ ಶ್ರೀಕೃಷ್ಣ ಜನ್ಮಭೂಮಿ ವಿವಾದ – ಅರ್ಜಿ ವಿಚಾರಣೆಗೆ ಗ್ರೀನ್‌ ಸಿಗ್ನಲ್‌

    ಈ ವೇಳೆ ಅಧಿಕಾರಿಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವು ಬದುಕಿನ ನಡುವೆ ಹೋರಾಡಿ ಸಾವನ್ನಪ್ಪಿದ್ದಾರೆ.