Tag: ಐರಾವತ ಬಸ್

  • ಟೆಂಪೋಗೆ  ಡಿಕ್ಕಿ ಹೊಡೆದ ಐರಾವತ ಬಸ್‍ – ಮೂವರಿಗೆ ಗಂಭೀರ ಗಾಯ

    ಟೆಂಪೋಗೆ ಡಿಕ್ಕಿ ಹೊಡೆದ ಐರಾವತ ಬಸ್‍ – ಮೂವರಿಗೆ ಗಂಭೀರ ಗಾಯ

    ಕಾರವಾರ: ಟೆಂಪೋ (Tempo)  ಮತ್ತು ಐರಾವತ (Airavata) ಬಸ್ (Bus) ನಡುವೆ ಡಿಕ್ಕಿಯಾದ ಪರಿಣಾಮ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ (Uttara Kannada), ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಭಟ್ಕಳ ತಾಲೂಕಿನ ಶಿರಾಲಿ ಬಳಿ ನಡೆದಿದೆ.

    ಕಾರವಾರದಿಂದ ಮಂಗಳೂರು ಕಡೆ ಹೊರಟಿದ್ದ ಐರಾವತ ಬಸ್‍ ಟೆಂಪೋ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಬಸ್‍ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್‍ನ ಮುಂಭಾಗದ ಸೀಟ್‍ನಲ್ಲಿ ಕುಳಿತ ಮೂವರಿಗೆ ಗಂಭೀರ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಮತ್ತೆ ಸಿಪಿವೈ Vs ಎಚ್‌ಡಿಕೆ – ಕಲ್ಲು, ಮೊಟ್ಟೆ ಎಸೆತ, ಲಾಠಿ ಚಾರ್ಜ್‌, ಜೆಡಿಎಸ್‌ ಕಾರ್ಯಕರ್ತರು ವಶಕ್ಕೆ

    ಗಾಯಾಳುಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೈಕೋರ್ಟ್ ವಕೀಲ ಆತ್ಮಹತ್ಯೆ- ಕೋರ್ಟ್ ಕೊಠಡಿ ಧ್ವಂಸ

    Live Tv
    [brid partner=56869869 player=32851 video=960834 autoplay=true]

  • ಕೆಟಿಎಂ ಬೈಕ್ ಸ್ಕಿಡ್ ಆಗಿ ಬಿದ್ದ ಸವಾರರ ಮೇಲೆ ಹರಿದ ಐರಾವತ ಬಸ್

    ಕೆಟಿಎಂ ಬೈಕ್ ಸ್ಕಿಡ್ ಆಗಿ ಬಿದ್ದ ಸವಾರರ ಮೇಲೆ ಹರಿದ ಐರಾವತ ಬಸ್

    ಬೆಂಗಳೂರು: ಐರಾವತ ಬಸ್ ಹರಿದು ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣಕ್ಕಿಡಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬಾಣಮಾಕನಹಳ್ಳಿ ಗೇಟ್ ಬಳಿ ಸಂಭವಿಸಿದೆ.

    ಕೆ.ಆರ್.ಪುರಂನ ಎ.ನಾರಾಯಣಪುರದ ನಿವಾಸಿಗಳಾದ ನಾಗೇಶ್ (23) ಹಾಗೂ ತೇಜಸ್ (22) ಮೃತ ದುರ್ದೈವಿಗಳು. ಕೆಟಿಎಂ ಬೈಕ್‍ನಲ್ಲಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

    ನಾಗೇಶ್ ಹಾಗೂ ತೇಜಸ್ ಕೆಟಿಎಂ ಬೈಕ್‍ನಲ್ಲಿ ತೆರಳುತ್ತಿದ್ದರು. ಈ ವೇಳೆ ಬಾಣಮಾಕನಹಳ್ಳಿ ಗೇಟ್ ಬಳಿ ಬೈಕ್ ಏಕಾಏಕಿ ಸ್ಕಿಡ್ ಆಗಿ ಬೀದ್ದಿದೆ. ಆದರೆ ಹಿಂದೆ ಬರುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿದ ಐರಾವತ ಬಸ್, ಓರ್ವ ಸವಾರನ ತಲೆ ಹಾಗೂ ಮತ್ತೊಬ್ಬನ ಸೊಂಟದ ಮೇಲೆ ಹರಿದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ನಂದಗುಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸವಾರರ ಮೃತದೇಹಗಳನ್ನು ಮರಣೋತ್ತರ ಪರಿಕ್ಷೇ ಕಳುಹಿಸಿದ್ದಾರೆ.

  • 32 ಮಂದಿ ಪ್ರಯಾಣಿಕರಿದ್ದ ಐರಾವತ ಬಸ್ ನಲ್ಲಿ ಬೆಂಕಿ

    32 ಮಂದಿ ಪ್ರಯಾಣಿಕರಿದ್ದ ಐರಾವತ ಬಸ್ ನಲ್ಲಿ ಬೆಂಕಿ

    ಚಿಕ್ಕಬಳ್ಳಾಪುರ: ಐರಾವತ ಬಸ್ಸಿನ ಇಂಜಿನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ.

    ಈ ಅವಘಡ ದೇವನಹಳ್ಳಿ ಪಟ್ಟಣದ ಹೊರವಲಯದ ರಾಣಿಕ್ರಾಸ್ ಬಳಿ ಸಂಭವಿಸಿದೆ. ಕೆಎ 57 ಎಫ್ 212 ಸಂಖ್ಯೆಯ ಐರಾವತ ಬಸ್ಸಿನಲ್ಲಿ ಬೆಂಕಿ ಕಾಣಿಕೊಂಡಿರುವುದು. ಈ ಬಸ್ 32 ಮಂದಿ ಪ್ರಯಾಣಿಕರನ್ನ ಬೆಂಗಳೂರಿನಿಂದ ಹೈದರಾಬಾದ್ ಗೆ ಕರೆದುಕೊಂಡು ಹೋಗುತ್ತಿತ್ತು.

    ಬಸ್ ರಾಣಿಕ್ರಾಸ್ ಬಳಿ ಹೋಗುತ್ತಿದ್ದಂತೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಚಾಲಕ ಗಮನಿಸಿದ್ದಾರೆ. ಕೂಡಲೇ ಬಸ್ ನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ನಂತರ ಬಸ್ಸಿನ ತುಂಬಾ ದಟ್ಟ ಹೊಗೆ ಆವರಿಸಿಕೊಂಡಿದೆ. ಬಳಿಕ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ.

    ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನ ಮುಂಜಾಗ್ರತೆಯಿಂದ ಭಾರಿ ಅನಾಹುತ ತಪ್ಪಿದೆ. ಚಾಲಕನ ಸಮಯಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಡಿವೈಡರ್‍ಗೆ ಬೈಕ್ ಡಿಕ್ಕಿ- ರಸ್ತೆಗೆ ಬಿದ್ದಿದ್ದ ಯುವತಿ ಮೇಲೆ ಹರಿದ ಐರಾವತ ಬಸ್

    ಡಿವೈಡರ್‍ಗೆ ಬೈಕ್ ಡಿಕ್ಕಿ- ರಸ್ತೆಗೆ ಬಿದ್ದಿದ್ದ ಯುವತಿ ಮೇಲೆ ಹರಿದ ಐರಾವತ ಬಸ್

    ಮಂಡ್ಯ: ರಸ್ತೆ ಡಿವೈಡರಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಯುವತಿ ಪಕ್ಕದ ರಸ್ತೆಗೆ ಬಿದ್ದು, ಆಕೆಯ ಮೇಲೆ ಐರಾವತ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಬಳಿ ನಡೆದಿದೆ.

    ಶ್ವೇತಾ (24) ಎಂಬವರೇ ಅಪಘಾತದಲ್ಲಿ ಸಾವನ್ನಪ್ಪಿದ ಯುವತಿ. ಬೈಕ್ ಸವಾರ ಮಹೇಶ್ (26) ಎಂಬವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಮಹೇಶ್ ಮತ್ತು ಶ್ವೇತಾ ಇಬ್ಬರೂ ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಬೈಕ್‍ನಲ್ಲಿ ಬೆಂಗಳೂರಿನಿಂದ ಮೈಸೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ ಸುಮಾರು ಬೆಳಗ್ಗೆ 7 ಗಂಟೆಗೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂದೆ ಕುಳಿತಿದ್ದ ಶ್ವೇತಾ ಡಿವೈಡರ್ ಹಾರಿ ಪಕ್ಕದ ರಸ್ತೆಗೆ ಬಿದ್ದಿದ್ದಾರೆ. ಇದೇ ಸಮಯಕ್ಕೆ ಎದುರುಗಡೆಯಿಂದ ಬರುತ್ತಿದ್ದ ಐರಾವತ ಬಸ್ ಶ್ವೇತಾ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಘಟನೆಯಲ್ಲಿ ಗಾಯಗೊಂಡ ಮಹೇಶ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.