ಕನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದಿರುವ ಹೃದಯ ಶಿವ (Hrudayashiva) ನಿರ್ದೇಶನದ ‘ಬಿಸಿಲು ಕುದುರೆ’ (Bisilu kudure) ಚಿತ್ರ ಕಳೆದ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು. ಚಿತ್ರ ಈಗ ಐವತ್ತು ದಿನಗಳನ್ನು (Fifty days) ಪೂರೈಸಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು.
ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಈ ಚಿತ್ರವನ್ನು ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಚಿತ್ರ ಒಂದೇ ಚಿತ್ರಮಂದಿರದಲ್ಲಿ ಐವತ್ತು ದಿನ ಪೂರೈಸಿಲ್ಲ. ರಾಜ್ಯದ ವಿವಿಧ ಕಡೆ ಬಿಡುಗಡೆಯಾಗಿ ಪ್ರದರ್ಶನ ಕಂಡು ಈಗ ಐವತ್ತನೇ ದಿನ ಪೂರೈಸಿದೆ. ಸದ್ಯದಲ್ಲೇ ಸಿನಿಮಾ ಓಟಿಟಿಯಲ್ಲೂ ಬರಲಿದೆ. ಇದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಸದ್ಯದಲ್ಲೇ ನನ್ನ ನಿರ್ದೇಶನದಲ್ಲಿ ಎರಡು ಹೊಸ ಚಿತ್ರಗಳು ಆರಂಭವಾಗಲಿದೆ. ಅದರಲ್ಲಿ ಒಂದು ಬಿಗ್ ಬಜೆಟ್ ಚಿತ್ರವಾಗಿರಲಿದೆ ಎಂದರು ನಿರ್ದೇಶಕ ಹೃದಯ ಶಿವ.
ನಾನು ಚಿತ್ರದ ಕುರಿತು ಬಿಡುಗಡೆ ಪೂರ್ವದಲ್ಲೇ ಸಾಕಷ್ಟು ಮಾತನಾಡಿದ್ದೇನೆ. ಈಗ ಐವತ್ತನೇ ದಿನದ ಸಂತೋಷವನ್ನು ಸಂಭ್ರಮಿಸುತ್ತಿದ್ದೇನೆ ಎಂದು ನಟ ಸಂಪತ್ ಮೈತ್ರೇಯ (Sampat Maitreya)ತಿಳಿಸಿದರು. ಚಿತ್ರದಲ್ಲಿ ನಟಿಸಿರುವ ಸುನೀತಾ, ಕರಿಸುಬ್ಬು, ವಿಕ್ಚರಿ ವಾಸು, ಸಂಗೀತ ನಿರ್ದೇಶಕ ಇಮ್ತಿಯಾಜ್ ಸುಲ್ತಾನ್, ಛಾಯಾಗ್ರಾಹಕ ನಾಗಾರ್ಜುನ, ಸಂಕಲನಕಾರ ಕೆಂಪರಾಜ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಸಿನಿಮಾದ ಯಶಸ್ಸಿನ ಬಗ್ಗೆ ಮಾತನಾಡಿದರು. ಹೃದಯ ಶಿವ ಚಿತ್ರತಂಡದವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಹೊಂಬಾಳೆ ಫಿಲಂಸ್ ಬ್ಯಾನರ್ನಡಿ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿ, ರಿಷಭ್ ಶೆಟ್ಟಿ ಅಭಿನಯಿಸಿ-ನಿರ್ದೇಶಿಸಿರುವ ‘ಕಾಂತಾರ’ ಚಿತ್ರವು ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ. ಸೆ. 30ರಂದು ಬಿಡುಗಡೆಯಾದ ಚಿತ್ರವು ರಾಜ್ಯದ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲದೆ, ವಿದೇಶಗಳಲ್ಲೂ ಹಲವು ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಮುಗಿಸಿ, 100ನೇ ದಿನದತ್ತ ದಾಪುಗಾಲಿಟ್ಟಿದೆ. ಬರೀ ಕನ್ನಡವಷ್ಟೇ ಅಲ್ಲ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂಗೆ ಡಬ್ ಆಗಿರುವ ‘ಕಾಂತರ’, ಅಲ್ಲೂ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದು, ಸದ್ಯದಲ್ಲೇ ಅಲ್ಲೂ 50 ದಿನಗಳನ್ನು ಪೂರೈಸಲಿದೆ.
‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದು ಹೊಂಬಾಳೆ ಫಿಲಂಸ್. ಈಗ ಅದೇ ಸಂಸ್ಥೆಯಿಂದ ನಿರ್ಮಾಣವಾಗಿರುವ ‘ಕಾಂತಾರ’ ಚಿತ್ರವನ್ನು ಮನೆ ಮಂದಿಯೆಲ್ಲಾ ನೋಡಿ ಇಷ್ಟಪಟ್ಟಿದ್ದಾರೆ. ಹಿರಿಯರಿಂದ ಕಿರಿಯರವರೆಗೂ ಎಲ್ಲರೂ ಮೆಚ್ಚಿಕೊಂಡಿರುವ ಈ ಚಿತ್ರ ಎಲ್ಲರಿಗೂ ಇಷ್ಟವಾಗುವುದಕ್ಕೆ ಕಾರಣ ಚಿತ್ರದ ಕಥೆ ಮತ್ತು ಮೇಕಿಂಗ್. ಹೊಂಬಾಳೆ ಫಿಲಂಸ್ ಮೊದಲಿನಿಂದಲೂ ಕಥೆಗೆ ವಿಶೇಷವಾದ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಈಗಾಗಲೇ ‘ರಾಜ್ಕುಮಾರ’, ‘ಯುವರತ್ನ’, ‘ಕೆಜಿಎಫ್’ ಮುಂತಾದ ಚಿತ್ರಗಳು ಈ ವಿಷಯವನ್ನು ನಿರೂಪಿಸಿದೆ. ಈಗ ‘ಕಾಂತಾರ’ ಸಹ ಇದೇ ನಿಟ್ಟಿನಲ್ಲಿ ಸಾಗಿರುವುದಷ್ಟೇ ಅಲ್ಲ, ‘ಕೆಜಿಎಫ್’ ಸರಣಿಯ ನಂತರ ಒಂದೇ ಸಂಸ್ಥೆಯ ಇನ್ನೊಂದು ಚಿತ್ರ ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿರುವುದು ವಿಶೇಷ. ಇದನ್ನೂ ಓದಿ:`ಕಾಂತಾರ’ ಮುಂದೆ ಬೆದರಿದ ಬಾಲಿವುಡ್: ಥಿಯೇಟರ್‌ಗೆ `ಗುಡ್ ಬೈ’ ಹೇಳಿದ ರಶ್ಮಿಕಾ ಚಿತ್ರ
ಬರೀ ಕನ್ನಡವಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಒಟ್ಟು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಯು ಹಲವು ಚಿತ್ರಗಳನ್ನು ನಿರ್ಮಿಸುತ್ತಿದೆ. ಒಂದೇ ಸಂಸ್ಥೆಯಿಂದ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ.
ಈಗಾಗಲೇ ಕನ್ನಡದಲ್ಲಿ ಜಗ್ಗೇಶ್ ಅಭಿನಯದಲ್ಲಿ ಸಂತೋಷ್ ಆನಂದರಾಮ್ ನಿರ್ದೇಶಿಸುತ್ತಿರುವ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಶ್ರೀಮುರಳಿ ಅಭಿನಯದಲ್ಲಿ ಡಾ. ಸೂರಿ ನಿರ್ದೇಶಿಸುತ್ತಿರುವ ‘ಬಘೀರ’ ಚಿತ್ರವು ಚಿತ್ರೀಕರಣ ಹಂತದಲ್ಲಿದೆ. ರಕ್ಷಿತ್ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆಂಟೋನಿ’ ಮತ್ತು ಯುವ ರಾಜ್ಕುಮಾರ್ಗಾಗಿ ಸಂತೋಷ್ ಆನಂದರಾಮ್ ನಿರ್ದೇಶಿಸಲಿರುವ ಹೊಸ ಚಿತ್ರಗಳು ಸದ್ಯದಲ್ಲೇ ಶುರುವಾಗಲಿವೆ.
ಬೇರೆ ಭಾಷೆಯ ಚಿತ್ರಗಳ ವಿಷಯಕ್ಕೆ ಬಂದರೆ, ತೆಲುಗಿನಲ್ಲಿ ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, 2023ರ ಸೆಪ್ಟೆಂಬರ್ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ತಮಿಳಿನಲ್ಲಿ ಎರಡು ಚಿತ್ರಗಳನ್ನು ಹೊಂಬಾಳೆ ನಿರ್ಮಿಸುತ್ತಿದ್ದು, ಈ ಪೈಕಿ ಒಂದು ಚಿತ್ರವನ್ನು ‘ಸೂರರೈ ಪೊಟ್ರು’ ಖ್ಯಾತಿಯ ಸುಧಾ ಕೊಂಗರಾ ನಿರ್ದೇಶನ ಮಾಡಿದರೆ, ಇನ್ನೊಂದರ ಘೋಷಣೆ ಶೀಘ್ರದಲ್ಲೇ ಆಗಲಿದೆ. ಮಲಯಾಳಂನಲ್ಲೂ ಹೊಂಬಾಳೆ ಫಿಲಂಸ್ ವತಿಯಿಂದ ಎರಡು ಚಿತ್ರ ನಿರ್ಮಾಣವಾಗುತ್ತಿವೆ. ಫಹಾದ್ ಫಾಸಿಲ್ ಅಭಿನಯದ ‘ಧೂಮಂ’ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದರೆ, ಪೃಥ್ವಿರಾಜ್ ಸುಕುಮಾರನ್ ನಟಿಸಿ-ನಿರ್ದೇಶಿಸಲಿರುವ ‘ಟೈಸನ್’ ಚಿತ್ರವು ಮುಂದಿನ ವರ್ಷ ಪ್ರಾರಂಭವಾಗಲಿದೆ. ಹಿಂದಿ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯಲಿದ್ದು ಸದ್ಯದಲ್ಲೇ ಅಧಿಕೃತ ಘೋಷಣೆಯಾಗಲಿದೆ.
Live Tv
[brid partner=56869869 player=32851 video=960834 autoplay=true]
ನಿನ್ನೆಯಷ್ಟೇ ಕಾಂತಾರ (Kantara) ಸಿನಿಮಾ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಉಡುಪಿಯ ಕಾಪು ಬೀಚ್ ನಲ್ಲಿ ಕಾಂತಾರ 50ರ (Fifty Days) ಸಂಭ್ರಮದ ಮರಳುಶಿಲ್ಪವನ್ನು ರೆಡಿ ಮಾಡಿದ್ದಾರೆ ಸ್ಯಾಂಡ್ ಆರ್ಟ್ ಕಲಾವಿದರು. ಅದರಲ್ಲೂ ಪಂಜುರ್ಲಿ ಕಲಾಕೃತಿಯನ್ನೇ ಮರಳು ಶಿಲ್ಪ ಮಾಡಲು ಕಲಾವಿದರು ಆಯ್ಕೆ ಮಾಡಿಕೊಂಡಿದ್ದಾರೆ. ನಿನ್ನೆಯಿಂದ ಉಡುಪಿಯ ಕಾಪು ಬೀಚ್ ನಲ್ಲಿ ಕಾಂತಾರ ಮರಳು ಶಿಲ್ಪ (Sand Sculpture) ಆಸಕ್ತರನ್ನು ಕೈ ಬೀಸಿ ಕರೆಯುತ್ತಿದೆ.
ಮುನ್ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕಾಂತಾರ ಸಿನಿಮಾ ಐವತ್ತು ದಿನಗಳ ಪ್ರದರ್ಶನ ಕಂಡಿದ್ದು, ಬಹುತೇಕ ಚಿತ್ರಮಂದಿರಗಳು ಹೌಸ್ ಫುಲ್ ಪ್ರದರ್ಶನಕ್ಕೆ ಇನ್ನೂ ಸಾಕ್ಷಿ ಆಗುತ್ತಿವೆ. ದೇಶ ವಿದೇಶದಲ್ಲೂ 50ನೇ ದಿನದ ಸಂಭ್ರಮವನ್ನು ಅನೇಕ ಚಿತ್ರಮಂದಿರಗಳು ಆಚರಿಸಿವೆ. ಇದೇ ಹೊತ್ತಿನಲ್ಲೇ ಮಣಿಪಾಲದ ಸ್ಯಾಂಡ್ ಆರ್ಟ್ ಕಲಾವಿದರು ಕಾಪು ಬೀಚ್ ನಲ್ಲಿ ಇಂಥದ್ದೊಂದು ಕಲಾಕೃತಿಯನ್ನು ಮಾಡುವ ಮೂಲಕ ಶುಭ ಹಾರೈಸಿದ್ದಾರೆ. ಇದನ್ನೂ ಓದಿ:`ಬನಾರಸ್’ ಚಿತ್ರದ ಬೆನ್ನಲ್ಲೇ ಝೈದ್ ಖಾನ್‌ಗೆ ಬಂತು ಬಿಗ್ ಆಫರ್
ಪಂಜುರ್ಲಿ ದೈವದ ಮುಖವರ್ಣಿಕೆಯ ಕಲರ್ ಫುಲ್ ಕಲಾಕೃತಿಯನ್ನು ಸ್ಯಾಂಡ್ ಆರ್ಟ್ ಹೆಸರಿನಲ್ಲಿ ತಂಡ ಕಟ್ಟಿರುವ ಶ್ರೀನಾಥ್ ಮಣಿಪಾಲ್, ರವಿ ಹಿರೇಬೆಟ್ಟು ಮತ್ತು ವೆಂಕಿ ಪಲಿಮಾರು ಮೂವರು ಒಂದು ದಿನ ಟೈಮ್ ತಗೆದುಕೊಂಡು ರಚಿಸಿದ್ದು, ಇದೀಗ ಕಾಪು ಬೀಚ್ ಗೆ ಸಾವಿರಾರು ಜನರು ಈ ಕಲಾಕೃತಿಯನ್ನು ನೋಡುವುದಕ್ಕೆ ಬರುತ್ತಿದ್ದಾರಂತೆ. ಕಾಂತರ ಸಿನಿಮಾದ ಬಗ್ಗೆ ಅನೇಕರು ಗುಣಗಾನ ಕೂಡ ಮಾಡುತ್ತಿದ್ದಾರೆ.
ಒಂದು ಕಡೆ ಮರುಳುಶಿಲ್ಪದ ಸಂಭ್ರಮವಾದರೆ, ಮತ್ತೊಂದು ಕಡೆ ಸೂಪರ್ ಸ್ಟಾರ್ ರಜನಿಕಾಂತ್ ಎರಡು ಮೂರು ವಾರಗಳ ಹಿಂದೆಯಷ್ಟೇ ಕಾಂತಾರ ಸಿನಿಮಾ ನೋಡಿ, ರಿಷಬ್ ಶೆಟ್ಟಿ ಅವರನ್ನು ತಮ್ಮ ಮನೆಗೆ ಕರೆಯಿಸಿಕೊಂಡಿದ್ದರು. ತಮ್ಮ ಮನೆಯ ಗೇಟ್ ವರೆಗೂ ಬಂದು, ರಿಷಬ್ (Rishabh Shetty) ಅವರನ್ನು ಬರಮಾಡಿಕೊಂಡಿದ್ದರು. ಬರೋಬ್ಬರಿ ಒಂದು ಗಂಟೆಗೂ ಹೆಚ್ಚು ಕಾಲ ರಿಷಬ್ ಜೊತೆ ಮಾತನಾಡಿ, ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಈ ನಡುವೆ ರಿಷಬ್ ಅವರನ್ನು ಬೀಳ್ಕೊಡುವಾಗ ಚಿನ್ನದ ಸರ ಮತ್ತು ಬಾಬಾ ಇರುವಂತಹ ಲಾಕೆಟ್ ಕೊಟ್ಟಿದ್ದಾರೆ.
ರಜನಿ ತಮ್ಮ ಗುರುಗಳಾದ ಬಾಬಾ ಅವರನ್ನು ಅತೀ ಹೆಚ್ಚು ಪೂಜಿಸುತ್ತಾರೆ. ಬಾಬಾ ಅವರ ಕೈ ಬೆರಳಿನ ಸಿಂಬಲ್ ಇರುವಂತಹ ಲಾಕೆಟ್ ಗಳನ್ನು ರೆಡಿ ಮಾಡಿಸಿಕೊಂಡು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಯಾರಾದರೂ ಮೆಚ್ಚುವಂತಹ ಕೆಲಸ ಮಾಡಿದಾಗ, ಅವರನ್ನು ಕರೆದು ಲಾಕೆಟ್ ನೀಡುತ್ತಾರೆ. ಈಗ ಲಾಕೆಟ್ ಪಡೆಯುವಂತಹ ಅದೃಷ್ಟ ರಿಷಬ್ ಪಾಲಾಗಿದೆ. ಬಾಬಾ ಇರುವಂತಹ ಚಿನ್ನದ ಲಾಕೆಟ್ ರಿಷಬ್ ಕೊರಳನ್ನು ಅಲಂಕರಿಸಿದೆ.
Live Tv
[brid partner=56869869 player=32851 video=960834 autoplay=true]
ಯಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಕೆಜಿಎಫ್ 2 ಸಿನಿಮಾ ಐವತ್ತು ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಚಿತ್ರತಂಡವು ಭರ್ಜರಿ ಪಾರ್ಟಿಯೊಂದನ್ನು ಆಯೋಜನೆ ಮಾಡಿತ್ತು. ಈ ಸಂತೋಷ ಕೂಟದಲ್ಲಿ ತೆಲುಗಿನ ಹೆಸರಾಂತ ನಟ ಪ್ರಭಾಸ್ ಕೂಡ ಆಗಮಿಸಿದ್ದರು. ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲಿ ನಟಿಸುತ್ತಿರುವ ಪ್ರಭಾಸ್ ಬೆಂಗಳೂರಿಗೆ ಬಂದು ಹೊಂಬಾಳೆ ಫಿಲ್ಮ್ಸ್ ಸದಸ್ಯರಿಗೆ ಶುಭಾಶಯ ಹೇಳಿದರು. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ
ಐವತ್ತು ದಿನಗಳ ಈ ಸಂಭ್ರಮವನ್ನು ದೊಡ್ಡಮಟ್ಟದಲ್ಲಿ ಮಾಡುತ್ತಾರೆ ಎಂಬ ನಿರೀಕ್ಷೆ ಅಭಿಮಾನಿಗಳಿಗೆ ಇತ್ತು. ಆದರೆ, ಸಿನಿಮಾ ತಂಡ ತಮಗೆ ಮಾತ್ರ ಸೀಮಿತ ಮಾಡಿಕೊಂಡು ಕೇಕ್ ಕತ್ತರಿಸುವ ಮೂಲಕ ಸಂಭ್ರಮ ಆಚರಿಸಿದೆ. ಐವತ್ತು ದಿನಗಳ ಸಂಭ್ರಮಕ್ಕೆ ಯಶ್, ನಿರ್ದೇಶಕ ಪ್ರಶಾಂತ್ ನೀಲ್, ನಿರ್ಮಾಪಕ ವಿಜಯ ಕಿರಗಂದೂರು ಸೇರಿದಂತೆ ಚಿತ್ರ ತಂಡ ಭಾಗಿ ಆಗಿತ್ತು. ಇದನ್ನೂ ಓದಿ : ಕೆಜಿಎಫ್ 2 ಐವತ್ತು ದಿನ ಪೂರೈಸಿದ ಬೆನ್ನಲ್ಲೆ ಮತ್ತೊಂದು ಹೊಸ ಸಿನಿಮಾ ರಿಲೀಸ್ ಘೋಷಣೆ
400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಐವತ್ತು ದಿನ ಪೂರೈಸಿರುವ ಕೆಜಿಎಫ್ 2 ಈಗಾಗಲೇ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ. ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿದೆ. ಬಾಲಿವುಡ್ ಮಂದಿಯನ್ನು ನಿದ್ದೆಗೆಡಿಸುವಂತೆ ಮಾಡಿದೆ. ಈಗಲೂ ಒಳ್ಳೆಯ ಗಳಿಕೆಯಲ್ಲೇ ಚಿತ್ರ ಸಾಗುತ್ತಿದೆ. ಬಹುಶಃ ನೂರು ದಿನಗಳನ್ನು ಪೂರೈಸಿದಾಗ ದೊಡ್ಡ ಮಟ್ಟದಲ್ಲಿ ಸಂಭ್ರಮಾಚಾರಣೆ ಮಾಡಬಹುದು ಎಂಬ ನಿರೀಕ್ಷೆ ಅಭಿಮಾನಿಗಳದ್ದು.