Tag: ಐವನ್ ಡಿಸೋಜಾ

  • ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಪ್ರಕರಣ – ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರ ಬಂಧನ

    ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಪ್ರಕರಣ – ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರ ಬಂಧನ

    ಮಂಗಳೂರು: ಐವನ್ ಡಿಸೋಜಾ (Ivan D’Souza) ಮನೆಗೆ ಕಲ್ಲು ತೂರಾಟ ಪ್ರಕರಣದಲ್ಲಿ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರ ಬಂಧನವಾಗಿದೆ.

    ಕಲ್ಲಡ್ಕದ (Kalladka) ದಿನೇಶ್ (20) ಮತ್ತು ಭರತ್ (24) ಬಂಧಿತ ಆರೋಪಿಗಳು. ಬಂಧಿತರಿಬ್ಬರೂ ವಿಹೆಚ್‌ಪಿ, ಬಜರಂಗದಳದ ಕಾರ್ಯಕರ್ತರಾಗಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ರಾಜ್ಯಪಾಲರ ಕುರಿತು ಎಂಎಲ್‌ಸಿ ಐವನ್ ಡಿಸೋಜಾ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಐವನ್ ಡಿಸೋಜಾ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದನ್ನೂ ಓದಿ: ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿ ಭಾವಚಿತ್ರ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ

    ಆಗಸ್ಟ್ 20 ರ ತಡರಾತ್ರಿ ಐವನ್ ಡಿಸೋಜಾ ಅವರ ಮನೆಗೆ ಕಲ್ಲು ತೂರಾಟ ನಡೆದಿತ್ತು. ಬೈಕ್‌ನಲ್ಲಿ ಬಂದ ಇಬ್ಬರು ಐವನ್ ಮನೆ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದರು ಪ್ರಕರಣದ ಕುರಿತು ತನಿಖೆ ನಡೆಸಿ ಇಬ್ಬರನ್ನು ಪಾಂಡೇಶ್ವರ (Pandeshwara) ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: PMLA ಪ್ರಕರಣಗಳಲ್ಲೂ ಜಾಮೀನು ಒಂದು ನಿಯಮ, ಜೈಲು ಒಂದು ವಿನಾಯಿತಿ – ಸುಪ್ರೀಂಕೋರ್ಟ್

  • ರಾಜ್ಯ ಸರ್ಕಾರ ಉಚಿತ ಲಸಿಕೆ ನೀಡಲು ವಿಫಲ-ಐವನ್ ಡಿಸೋಜಾ ನೇತೃತ್ವದಲ್ಲಿ ಪ್ರತಿಭಟನೆ

    ರಾಜ್ಯ ಸರ್ಕಾರ ಉಚಿತ ಲಸಿಕೆ ನೀಡಲು ವಿಫಲ-ಐವನ್ ಡಿಸೋಜಾ ನೇತೃತ್ವದಲ್ಲಿ ಪ್ರತಿಭಟನೆ

    ಮಂಗಳೂರು: ರಾಜ್ಯ ಸರ್ಕಾರ ಉಚಿತ ಲಸಿಕೆ ನೀಡುತ್ತೇವೆಂದು ಜನರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೆಳಗ್ಗೆ 4.30 ರಿಂದ ಸಾಲಿನಲ್ಲಿ ನಿಲ್ಲುವ 500 ಜನರಲ್ಲಿ ಕೇವಲ 150 ಜನರಿಗೆ ಟೋಕನ್ ಗಳನ್ನು ನೀಡಲಾಗುತ್ತದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರಗಳಲ್ಲಿ ಜನರನ್ನು ಸಂಕಟಕ್ಕೀಡು ಮಾಡುತ್ತಿರುವುದನ್ನು ವಿರೋಧಿಸಿ ಮಾಜಿ ಶಾಸಕ ಐವನ್ ಡಿಸೋಜರವರು ಇಂದು ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಮ್ಮ ತಂಡದೊಂದಿಗೆ ಭೇಟಿ ನೀಡಿ ಪ್ರತಿಭಟನೆಯನ್ನು ನಡೆಸಿದರು.

    ಸರ್ಕಾರ ಜನರ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ. ಖಾಸಗಿಯಲ್ಲಿ ಲಸಿಕೆ ಸಿಗುತ್ತಿದ್ದು, ಸರ್ಕಾರದ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆಗೆ ರೇಷನ್ ರೀತಿಯಲ್ಲಿ ನೀಡುತ್ತಿರುವುದು ಖಂಡನೀಯ. ಜನರು ಲಸಿಕೆ ಇಲ್ಲದೆ ಸಾಯುತ್ತಿದ್ದರೂ ಬಿಜೆಪಿ ಮಾತ್ರ ವ್ಯಾಪಾರ ಮಾಡುತ್ತಿದೆ. ಸಂಭ್ರಮ ಆಚರಣೆ ಮಾಡುತ್ತಿದೆ. ಬಿಜೆಪಿಗೆ ಜನ ಬುದ್ಧಿ ಕಲಿಸುತ್ತಾರೆ ಜನರನ್ನು ನಿರ್ಲಕ್ಷಿಸಿದರೆ ಜನರು ಸುಮ್ಮನೆ ಇರುವುದಿಲ್ಲ. ನಮಗೆ ಜನರ ಪ್ರಾಣ ಮುಖ್ಯ ಎಂದು ಐವನ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

    ಪ್ರತಿಭಟನಾ ವೇಳೆ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕಾರ್ಪೊರೇಟರ್ ನವೀನ್ ಡಿಸೋಜ,ಮಾಜಿ ಕಾರ್ಪೊರೇಟರ್ ರಜನೀಶ್, ಪ್ರಕಾಶ್ ಸಾಲಿಯನ್, ಅಪ್ಪಿ, ಅಶೋಕ್ ಡಿ.ಕೆ, ಮಹಮ್ಮದ್ ಕುಂಜತಬೈಲ್, ಭಾಸ್ಕರ್ ರಾವ್, ರಾಜ್ಯ ಯುವ ಕಾಂಗ್ರೆಸ್ಸಿನ ಕಾರ್ಯದರ್ಶಿ ಆಶಿತ್ ಪಿರೇರಾ, ಜಿಲ್ಲಾ ಯುವ ಕಾಂಗ್ರೆಸ್ಸಿನ ಕಾರ್ಯದರ್ಶಿ ದೀಕ್ಷಿತ್ ಅತ್ತಾವರ್, ಅಲಿಸ್ತಿನ್ ಡಿ’ಕುನಾ, ಸ್ಥಳೀಯರು ಉಪಸ್ಥಿತರಿದ್ದರು.

  • ಎಂ.ಬಿ ಪಾಟೀಲ್, ಪೇಜಾವರ ಶ್ರೀಗಳ ಪರ ಐವನ್ ಡಿಸೋಜಾ ಬ್ಯಾಟಿಂಗ್!

    ಎಂ.ಬಿ ಪಾಟೀಲ್, ಪೇಜಾವರ ಶ್ರೀಗಳ ಪರ ಐವನ್ ಡಿಸೋಜಾ ಬ್ಯಾಟಿಂಗ್!

    ಮಂಗಳೂರು: ಡಿಸಿಎಂ, ಸಚಿವ ಸ್ಥಾನಕ್ಕಾಗಿ ರಂಪಾಟ ಮಾಡ್ತಿರೋ ಮಾಜಿ ಸಚಿವ ಎಂ.ಬಿ ಪಾಟೀಲ್ ಪರವಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಬ್ಯಾಟಿಂಗ್ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾಟೀಲರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತಾಡಿಲ್ಲ. ಈಗಿನ ವ್ಯವಸ್ಥೆ ವಿರುದ್ಧ ಅಷ್ಟೇ ಮಾತಾಡುತ್ತಿದ್ದಾರೆ. ಹಿಂದಿನ ಸರಕಾರದಲ್ಲಿ ಸಚಿವರಾಗಿದ್ದರಿಂದ ಡಿಸಿಎಂ ಹುದ್ದೆ ಕೇಳುತ್ತಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ. ಸಿದ್ದರಾಮಯ್ಯ ಎಂ.ಬಿ ಪಾಟೀಲ್ ಜೊತೆಗೆ ಮಾತನಾಡಿದ್ದು ಅವಕಾಶ ಮಾಡಿಕೊಡುವುದಾಗಿ ಹೇಳಿದ್ದಾರೆ ಅಂತಾ ಸಮಜಾಯಿಷಿ ನೀಡಿದ್ದಾರೆ.

    ಆ ಮೂಲಕ ಎಂ.ಬಿ ಪಾಟೀಲ್ ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿರೋದನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ತನಗೆ ಸಚಿವ ಸ್ಥಾನ ಕೊಟ್ಟರೆ ತೆಗೆದುಕೊಳ್ಳುತ್ತೇನೆ. ಮಂತ್ರಿ ಸ್ಥಾನಕ್ಕಾಗಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಮಂತ್ರಿ ಸ್ಥಾನ ಸಿಕ್ಕರೆ ಅನುಕೂಲವಾಗತ್ತೆ ಎಂದಿದ್ದಾರೆ.

    ಇದೇ ವೇಳೆ, ಪೇಜಾವರ ಶ್ರೀಗಳು ಕೇಂದ್ರ ಸರಕಾರದ ಸಾಧನೆ ಬಗ್ಗೆ ಪ್ರಶ್ನೆ ಮಾಡಿದ್ದನ್ನು ಐವನ್ ಡಿಸೋಜ ಸಮರ್ಥನೆ ಮಾಡಿದ್ದಾರೆ. ಅಚ್ಚೇ ದಿನ ಬಂದಿಲ್ಲ. ಕಪ್ಪು ಹಣ ತಂದಿಲ್ಲವೆಂದು ಶ್ರೀಗಳು ಪ್ರಶ್ನಿಸಿದ್ದಾರೆ. ಸಮಾಜದ ಬಗ್ಗೆ ಕಾಳಜಿ ಇರುವುದರಿಂದ ಈ ಪ್ರಶ್ನೆ ಎತ್ತಿದ್ದಾರೆ. ಅವರೇನು ಸುಳ್ಳು ಹೇಳುತ್ತಿದ್ದಾರೆಯೇ ಅಂತಾ ಡಿಸೋಜ ಮರು ಪ್ರಶ್ನೆ ಹಾಕಿದ್ರು.

  • ಇವತ್ಯಾಕೆ ಬಂದೆ..ನೀನ್ ಹೋಗು ಮೊದ್ಲು, ಚೆಕ್ ಬೇಡ ಏನು ಬೇಡ – ಶಾಸಕ ಬಾವಾಗೆ ದೀಪಕ್ ಕುಟುಂಬಸ್ಥರ ಬೈಯ್ಗುಳ

    ಇವತ್ಯಾಕೆ ಬಂದೆ..ನೀನ್ ಹೋಗು ಮೊದ್ಲು, ಚೆಕ್ ಬೇಡ ಏನು ಬೇಡ – ಶಾಸಕ ಬಾವಾಗೆ ದೀಪಕ್ ಕುಟುಂಬಸ್ಥರ ಬೈಯ್ಗುಳ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಸರತ್ಕಲ್ ನ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ದೀಪಕ್ ರಾವ್ ಮನೆಗೆ ಇಂದು ದ.ಕ ಜಿಲ್ಲೆಯ ಸುರತ್ಕಲ್ ಶಾಸಕ ಮೊಯ್ದೀನ್ ಬಾವಾ ಭೇಟಿ ನೀಟಿದ್ರು.

    ಬಾವಾ ಅವರು ದೀಪಕ್ ಮನೆಗೆ ಭೇಟಿ ನೀಡುತ್ತಿದ್ದಂತೆಯೇ ಮೃತನ ಕುಟುಂಬಸ್ಥರು, ನಿನ್ನೆ, ಮೊನ್ನೆ ಎಲ್ಲಿದ್ರಿ? ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಈ ವೇಳೆ ದೀಪಕ್ ಅವರ ತಾಯಿ ಪ್ರೇಮಾ ರಾವ್, ಮಗನನ್ನು ಕೊಂದವರಿಗೆ ಹೀಗೆಯೇ ಶಿಕ್ಷೆಯಾಗಬೇಕು. ಅವರಿಗೆ ಯಾರೂ ರಕ್ಷಣೆ ಕೊಡಬಾರದು ಅಂತ ಒತ್ತಾಯಿಸಿ ಶಾಸಕರ ಎದುರು ಕಣ್ಣೀರು ಹಾಕಿದ್ರು. ಈ ವೇಳೆ ದೀಪಕ್ ತಾಯಿಗೆ ಸಾಂತ್ವಾನ ಹೇಳಿದ ಬಾವಾ, ಭಗವಂತನಲ್ಲಿ ನಿಮ್ಮ ಕುಟಂಬಕ್ಕೆ ಪ್ರಾರ್ಥನೆ ಮಾಡುತ್ತೇನೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ನಾನು ಮಸೀದಿಯಲ್ಲಿ ನಮಾಜ್ ಸಂದರ್ಭ ಬೇಡುತ್ತೇನೆ. ದೀಪಕ್ ಕೊಲೆಯ ನಾಲ್ವರು ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಅಂದ್ರು.

    ಚೆಕ್ ನಿರಾಕರಣೆ: ಸಾಂತ್ವಾನ ಹೇಳಿದ ಬಳಿಕ ಬಾವಾ ಅವರು ದೀಪಕ್ ತಾಯಿಗೆ ಒತ್ತಾಯಪೂರ್ವಕವಾಗಿ ಚೆಕ್ ನೀಡಲು ಮುಂದಾದ್ರು. ಈ ವೇಳೆ ಪ್ರೇಮಾ ಅವರು ಚೆಕ್ ಬೇಡವೇ ಬೇಡ ಎಂದು ದೂರ ತಳ್ಳಿದ್ರು.

    ಈ ಸಂದರ್ಭದಲ್ಲಿ ನೆರೆದಿದ್ದ ದೀಪಕ್ ಕುಟುಂಬಸ್ಥರು ಹಾಗೂ ಸ್ಥಳೀಯರು ಶಾಸಕ ಅವರಿಗೆ ಬೈಗುಳದ ಸುರಿಮಳೆಗೈದ್ರು. ಅಲ್ಲದೇ ನಂತ್ರ ಮನೆಯಿಂದ ಹೊರ ಕಳುಹಿಸಿದ್ರು. ಶಾಸಕರ ಜೊತೆ ದಕ್ಷಿಣ ಕನ್ನಡ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕೂಡ ಆಗಮಿಸಿದ್ದರು.

    https://www.youtube.com/watch?v=TmFE1kqWa2w

  • ಕರಾವಳಿ ಕಾಂಗ್ರೆಸ್‍ನಲ್ಲಿ ಭಿನ್ನಮತ ಸ್ಫೋಟ-ಸಿಎಂ ಎದುರೇ ಐವಾನ್, ಜೈನ್ ವಾರ್!

    ಕರಾವಳಿ ಕಾಂಗ್ರೆಸ್‍ನಲ್ಲಿ ಭಿನ್ನಮತ ಸ್ಫೋಟ-ಸಿಎಂ ಎದುರೇ ಐವಾನ್, ಜೈನ್ ವಾರ್!

    ಮಂಗಳೂರು: ಕರಾವಳಿಯಲ್ಲಿ ಕಾಂಗ್ರೆಸ್‍ನ ಭಿನ್ನಮತ ಶಮನವಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಮುಂದೆಯೇ ಪಕ್ಷದ ಸಚೇತಕ ಐವಾನ್ ಡಿಸೋಜ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ವಾಗ್ವಾದ ನಡೆಸಿದ್ದಾರೆ.

    ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿಗೆ ಭೇಟಿ ನೀಡುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಈ ವೇಳೆ ಸಿದ್ದರಾಮಯ್ಯನವರನ್ನು ಸ್ವಾಗತಿಸಲು ಐವಾನ್ ಡಿಸೋಜಾ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಬೆಂಬಲಿಗರು ಬಂದಿದ್ರು.

    ಆದರೆ ಐವನ್ ಬೆಂಬಲಿಗರು ಭಿತ್ತಿಪತ್ರ ಹಿಡಿದು ಜಯಕಾರ ಕೂಗಿದ್ದನ್ನು ಶಾಸಕ ಅಭಯಚಂದ್ರ ಜೈನ್ ಆಕ್ಷೇಪಿಸಿದ್ದಾರೆ. ಈ ವೇಳೆ, ಉಭಯ ನಾಯಕರ ಬೆಂಬಲಿಗರ ಮಧ್ಯೆ ವಾಗ್ವಾದ ನಡೆಯಿತು. ಆ ಬಳಿಕ ಸಿಎಂ ಸಿದ್ದರಾಮಯ್ಯ ಆಗಮಿಸಿದಾಗ ಸ್ವತಃ ಶಾಸಕ ಅಭಯಚಂದ್ರ ಜೈನ್, ಮುಖ್ಯ ಸಚೇತಕ ಐವನ್ ಡಿಸೋಜರನ್ನು ದುರುಗುಟ್ಟಿದ್ದಲ್ಲದೆ ಕೈಯಿಂದ ಎಳೆದಾಡಿದ ಘಟನೆ ನಡೆಯಿತು.

    ಐವನ್ ಡಿಸೋಜ ಅವರು ಸಿಎಂ ಹತ್ತಿರ ಹೋಗದಂತೆ ಜೈನ್ ಬೆಂಬಲಿಗರು ತಳ್ಳಿದ ವಿದ್ಯಮಾನ ಸಿಎಂ ಸಮ್ಮುಖದಲ್ಲಿಯೆ ನಡೆದಿದ್ದು ಭಿನ್ನಮತಕ್ಕೆ ಸಾಕ್ಷಿಯಾಯ್ತು. ಇದ್ರಿಂದ ಸಿಎಂ ಸಿದ್ದರಾಮಯ್ಯ ತೀವ್ರ ಮುಜುಗರಕ್ಕೊಳಗಾದ್ರು. ಈಗಾಗ್ಲೆ ಮೂಡುಬಿದಿರೆ ಕ್ಷೇತ್ರದಲ್ಲಿ ಟಿಕೆಟ್ ಪಡೆಯಲು ಐವನ್ ಡಿಸೋಜ ಕಸರತ್ತು ಆರಂಭಿಸಿದ್ದು ಇದೇ ವೇಳೆ ಇಂತಹ ಘಟನೆ ನಡೆದಿರುವುದು ಹೊಸ ರಾಜಕೀಯ ಸ್ವರೂಪ ಪಡೆಯುವ ಸಾಧ್ಯತೆಯಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸುಮಾರು 252.50 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಆಗಮಿಸಿದ್ದರು. ಮಿನಿ ವಿಧಾನಸೌಧ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, 100 ಹಾಸಿಗೆಗಳ ಹೊಸ ಆಸ್ಪತ್ರೆ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳನ್ನು ಉದ್ಘಾಟಿಸಲಿದ್ದಾರೆ.