Tag: ಐವಿ ದ್ರಾವಣ

  • ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂ.1 ಆಗಿದೆ – ಆರ್‌. ಅಶೋಕ್

    ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂ.1 ಆಗಿದೆ – ಆರ್‌. ಅಶೋಕ್

    – 28 ಔಷಧಿಗಳು ಕಳಪೆ ಅಂದ್ಮೇಲೂ ಅದೇ ಕಂಪನಿಯಿಂದ ಔಷಧ ಖರೀದಿ
    – ಮಕ್ಕಳ, ತಾಯಂದಿರನ್ನು ಉಳಿಸದೇ ನೂರು ಸಮಾವೇಶ ಮಾಡಿದ್ರೂ ವ್ಯರ್ಥ
    – ಸರ್ಕಾರಕ್ಕೆ ಜನರ ಶಾಪ ತಟ್ಟಲಿದೆ ಎಂದು ವಿಪಕ್ಷ ನಾಯಕ ಕಿಡಿ

    ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್‌ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೇ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashoka) ಆಕ್ರೋಶ ಹೊರಹಾಕಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರೋಗ್ಯ ಇಲಾಖೆ (Health Department) ಅನಾರೋಗ್ಯ ಇಲಾಖೆಯಾಗಿ ಬದಲಾಗಿದೆ. ಬಳ್ಳಾರಿ ಆಸ್ಪತ್ರೆಯಲ್ಲಿ ಐವಿ ದ್ರಾವಣದಿಂದಾಗಿ ತಾಯಂದಿರು ಸತ್ತಿದ್ದಾರೆ. ನಾನು ಹೋಗಿ ಎಚ್ಚರಿಕೆ ನೀಡಿದ ನಂತರವೂ ತಾಯಂದಿರು ಸತ್ತಿದ್ದಾರೆ. ಹತ್ತು ತಿಂಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 111 ನವಜಾತ ಶಿಶುಗಳು ಹಾಗೂ ಎಂಟು ತಿಂಗಳಲ್ಲಿ ಸುಮಾರು 28 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು ತಾಯಂದಿರ ಸಾವಿಗೆ ನ್ಯಾಯ ಕೊಡಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ನಿಯಮ ಸಡಿಲ – ಶೇ.25ರಷ್ಟು ವಿದ್ಯಾರ್ಥಿಗಳಿದ್ದರೂ ಮಾನ್ಯತೆ!

    ಕೋವಿಡ್‌ ಸಮಯದಲ್ಲಿ ರಾಹುಲ್‌ ಗಾಂಧಿ, ಡಿ.ಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ, ಜನರ ಬಳಿಗೆ ಹೋಗಿ ಟವೆಲ್‌ನಲ್ಲಿ ಕಣ್ಣೀರು ಒರೆಸಿಕೊಂಡರು. ಈಗ ತಾಯಂದಿರು ಸತ್ತಿರುವಾಗ ಜನಕಲ್ಯಾಣ ಸಮಾವೇಶ ಮಾಡಿದ್ದಾರೆ. ಆ ಸಮಾವೇಶದಲ್ಲಿ ರಾಜಕೀಯ ಮಾತಾಡುವುದು ಬಿಟ್ಟರೆ, ಜನರ ಪರವಾಗಿ ಮಾತಾಡಿಲ್ಲ. 28 ಔಷಧಿಗಳು ಕಳಪೆ ಎಂದಮೇಲೂ ಅದೇ ಕಂಪನಿಯಿಂದ ಔಷಧಿ ಖರೀದಿಸಲಾಗಿದೆ. ಮಕ್ಕಳನ್ನು ಉಳಿಸುವ ಕೆಲಸ ಮಾಡದೆ ನೂರು ಸಮಾವೇಶ ಮಾಡಿದರೂ ಶಾಪ ಹಾಗೂ ಪಾಪ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಿದ ನಂತರವೂ ತಾಯಂದಿರು ಸಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗೆ ಸರ್ಕಾರದಲ್ಲಿ ಹಿಡಿತವಿಲ್ಲ ಎಂದರ್ಥ. ಈ ಸಾವಿನ ಹೊಣೆಯನ್ನು ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಕಾಂಗ್ರೆಸ್‌ ನಾಯಕರು ಜನರ ಹಿತ ಕಡೆಗಣಿಸಿ ವಿರೋಧ ಪಕ್ಷಗಳನ್ನು ಬಗ್ಗುಬಡಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ:  ಬಿಜೆಪಿಯದ್ದು ಮನೆಯೊಂದು ಮೂರು ಬಾಗಿಲಾದ್ರೆ, ಕಾಂಗ್ರೆಸ್‌ನದ್ದು ಊರು ಬಾಗಿಲು: ಅಶೋಕ್‌ ಲೇವಡಿ

    ನಾನು ಈಗಾಗಲೇ ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದೇನೆ. ಈ ಕುರಿತು ಲೋಕಾಯುಕ್ತಕ್ಕೆ ಪತ್ರ ಕೂಡ ಬರೆಯುತ್ತೇನೆ. ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡದೆ ಬಿಡುವುದಿಲ್ಲ. ಸಿಎಂ ಸಿದ್ದರಾಮಯ್ಯ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ. ಜಿಡಿಪಿಯಲ್ಲಿ ನಂಬರ್‌ 1 ಎನ್ನುವ ಸಿಎಂ ಸಿದ್ದರಾಮಯ್ಯ ಬಾಣಂತಿಯರ ಸಾವಿನಲ್ಲೂ ನಂಬರ್‌ 1 ಎಂದು ಹೇಳಲಿ ಎಂದರು.

  • ಬಿಜೆಪಿಯದ್ದು ಮನೆಯೊಂದು ಮೂರು ಬಾಗಿಲಾದ್ರೆ, ಕಾಂಗ್ರೆಸ್‌ನದ್ದು ಊರು ಬಾಗಿಲು: ಅಶೋಕ್‌ ಲೇವಡಿ

    ಬಿಜೆಪಿಯದ್ದು ಮನೆಯೊಂದು ಮೂರು ಬಾಗಿಲಾದ್ರೆ, ಕಾಂಗ್ರೆಸ್‌ನದ್ದು ಊರು ಬಾಗಿಲು: ಅಶೋಕ್‌ ಲೇವಡಿ

    – ಬಾಣಂತಿಯರ ಸಾವಿನ ಹೊಣೆ ಹೊತ್ತು ಸಿಎಂ ರಾಜೀನಾಮೆಗೆ ಆಗ್ರಹ
    – ಹಾಸನ ಸಮಾವೇಶಕ್ಕೆ 20 ಕೋಟಿ ಎಲ್ಲಿಂದ ಬಂತು ಎಂದು ಪ್ರಶ್ನೆ

    ಬೆಂಗಳೂರು: ಬಿಜೆಪಿಯದ್ದು (BJP) ಮನೆಯೊಂದು ಮೂರುಬಾಗಿಲು ಅಂತಾರಲ್ಲ, ಕಾಂಗ್ರೆಸ್‌ನವರದ್ದು ಊರು ಬಾಗಿಲಾಗಿದೆಯಲ್ಲ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ (R Ashoka) ಲೇವಡಿ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ (Congress) ಪವರ್‌ ಶೇರಿಂಗ್‌ ಫೈಟ್‌ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಉತ್ತರ ಪ್ರದೇಶದ ಪಿಲಿಭಿತ್, ಚಿತ್ರಕೂಟ್‌ನಲ್ಲಿ ರಸ್ತೆ ಅಪಘಾತ – 10 ಸಾವು, 12 ಮಂದಿ ಸ್ಥಿತಿ ಗಂಭೀರ

    ಪರಮೇಶ್ವರ್ (Parameshwar) ಈಗ ಮಾತಾಡಿದ್ದಾರಲ್ಲ, ಮೊದಲು ಸಿಎಂ ಆಗೋದಿಕ್ಕೆ ಅವರಿಗೇ ಆದ್ಯತೆ ಸಿಗಬೇಕು. ಅದಕ್ಕೇ ಅವರು ಮೊನ್ನೆ ಡಿಮ್ಯಾಂಡ್ ಇಟ್ಟಿದ್ದು. ಪರಮೇಶ್ವರ್ ಎರಡು ಸಲ ಅಧ್ಯಕ್ಷ ಆಗಿದ್ದವರು. ಸಿಎಂ ಆಗ್ತಾರೆ ಅಂತ ಅವರನ್ನು ಕಳೆದ ಸಲ ಸೋಲಿಸಲಾಯ್ತು. ಸಿಎಂ ಪೋಸ್ಟ್ ಬಿಟ್ಟುಕೊಡಲ್ಲ ಅಂತ ಸಿದ್ದರಾಮಯ್ಯ (Siddaramaiah) ಅವರೇ ಹೇಳಿದ್ದಾರಲ್ಲ, ಡಿಕೆಶಿಗೆ ಪೆನ್ನು ಪೇಪರ್ ಇನ್ನೆಲ್ಲಿ ಸಿಗುತ್ತೆ? ಬಿಜೆಪಿಯದ್ದು ಮನೆಯೊಂದು ಮೂರು ಬಾಗಿಲು ಅಂತಾರಲ್ಲ, ಕಾಂಗ್ತೆಸ್‌ನವ್ರದ್ದು ಊರು ಬಾಗಿಲಾಗಿದೆಯಲ್ಲ ಎಂದು ಲೇವಡಿ ಮಾಡಿದರು.

    ಸಿಎಂ ರಾಜೀನಾಮೆಗೆ ಆಗ್ರಹ:
    ಮುಂದುವರಿದು, ಬಾಣಂತಿಯರ ಸಾವಿನ ಹೊಣೆ ಸಿಎಂ ಹೊತ್ತು ಸಿಎಂ ರಾಜೀನಾಮೆ ಕೊಡಬೇಕು. ಪುಡಿಗಳ ರಾಜೀನಾಮೆ ಬೇಡ. ಅಲ್ಲದೇ ಬಾಣಂತಿಯರ ಸಾವಿನ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು. ನಮ್ಮ ಪಕ್ಷದಿಂದ, ಲೋಕಾಯುಕ್ತಕ್ಕೆ ದೂರು ನೀಡಲಿದ್ದೇವೆ ಎಂದು ಹೇಳಿದರು.

    ಇನ್ನೂ ಸೆಂಟ್ರಲ್ ಲ್ಯಾಬ್‌ನಲ್ಲಿ ದ್ರಾವಣ ಬಳಕೆಗೆ ಯೋಗ್ಯ ಅಂತ ವರದಿ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ಇವ್ರು ಯಾವ ಸ್ಯಾಂಪಲ್ ಕಳಿಸಿದರು ಅಂತ ಬೇಕಲ್ಲ. ಕೇಂದ್ರದ ಯಾವುದೇ ಅಧಿಕಾರಿ ತಪ್ಪು ಮಾಡಿದರೂ ಕ್ರಮ ಆಗಲಿ, ಡ್ರಗ್ ಮಾಫಿಯಾ ಕೇಂದ್ರದ ಸಂಸ್ಥೆಗಳನ್ನು ಬಿಟ್ಟಿಲ್ಲ. ರಾಜ್ಯದಲ್ಲಿ ಕಳಪೆ ದ್ರಾವಣ ಖರೀದಿ ಹಿಂದೆ ಮೆಡಿಕಲ್ ಮಾಫಿಯಾ ಕೈವಾಡ ಇದೆ, ಈ ಸರ್ಕಾರದವರ ಕೈವಾಡ ಇದೆ ಎಂದು ಆರೋಪಿಸಿದರು.

    ರಾಜ್ಯ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆ ಆಗಿದೆ. ಬಳ್ಳಾರಿ ಆಸ್ಪತ್ರೆಗೆ ನಾನೂ ಕೂಡ ಭೇಟಿ ಕೊಟ್ಟಿದ್ದೆ. ಐವಿ ದ್ರಾವಣ ಕಳಪೆಯಾಗಿತ್ತು, ಆದ್ದರಿಂದ ಬಾಣಂತಿಯರ ಸಾವಾಗಿದೆ. ಒಂದೇ ಗಂಟೆಯಲ್ಲಿ ಕಿಡ್ನಿ, ಲಿವರ್ ಫೇಲ್ ಆಗಿ ಸತ್ತಿದ್ದಾರೆ ಅಂತ ವೈದ್ಯರು ಹೇಳಿದ್ರು. ಮತ್ತೆ ಒಬ್ಬರು ಬಾಣಂತಿಯರ ಸಾವಾಗಿದೆ. ರಾಜ್ಯದಲ್ಲಿ ಕಳೆದ ತಿಂಗಳಲ್ಲಿ 111 ನವಜಾತ ಶಿಶುಗಳು, 29 ಬಾಣಂತಿಯರ ಸಾವಾಗಿದೆ. ಈ ಸಾವುಗಳಿಗೆ ನ್ಯಾಯ ಕೊಡೋರು ಯಾರು? ಅಂತ ಪ್ರಶ್ನೆ ಮಾಡಿದರು.

    ಬಾಣಂತಿ ಸಾವಾದ ದಿನವೇ ಹಾಸನ ಸಮಾವೇಶ:
    ಬಿಜೆಪಿ ಅವಧಿಯಲ್ಲಿ ಕೋವಿಡ್ ವೇಳೆ ಸಾವಾಗಿದೆ ಅಂತ ಆರೋಪ ಮಾಡೋ ಕಾಂಗ್ರೆಸ್‌ನವರು ಈಗ ಬಾಣಂತಿಯರ ಸಾವಿನ ಬಗ್ಗೆ ಏನಂತಾರೆ? ಬಾಣಂತಿ ಸಾವಾದ ದಿನವೇ ಹಾಸನ ಸಮಾವೇಶ ಮಾಡಿದ್ದೀರಿ, ಸಾವಿಗೆ ಒಂದು ಹನಿ ಕಣ್ಣಲ್ಲಿ ನೀರು ಹಾಕಿಲ್ಲ. ಸಮಾವೇಶದಲ್ಲಿ ವಿಪಕ್ಷಗಳನ್ನು ಬೈಯೋದು ಬಿಟ್ಟು, ಬಾಣಂತಿಯರ ಸಾವಿನ ಬಗ್ಗೆ ಒಂದು ಮಾತು ಆಡಲಿಲ್ಲ ಸಿಎಂ. 6 ತಿಂಗಳ ಹಿಂದೆಯೇ ಡ್ರಗ್ ಇಲಾಖೆ ಕಳಪೆ ದ್ರಾವಣ ಅಂತ ವರದಿ ಕೊಟ್ಟಿತ್ತು, ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಹಸೆಮಣೆ ಏರಿದ ‘ಸಿಂಗಾರ ಸಿರಿಯೇ’ ಖ್ಯಾತಿಯ ಪ್ರಮೋದ್ ಮರವಂತೆ

    20 ಕೋಟಿ ಎಲ್ಲಿಂದ ಬಂತು?
    ಸಿದ್ದರಾಮಯ್ಯಗೆ ಕಿಂಚಿತ್ ಕರುಣೆ ಬೇಡವಾ? ಮಕ್ಕಳು, ಬಾಣಂತಿಯರನ್ನು ಉಳಿಸೋ ಕೆಲಸ ಮಾಡದೇ ಇಂಥ ನೂರು ಸಮಾವೇಶ ಮಾಡಿದರೂ ವ್ಯರ್ಥ. ಪಾಪ, ಶಾಪದಲ್ಲೇ ನಿಮ್ಮ ಸರ್ಕಾರ ಸತ್ತು ಹೋಗಲಿದೆ. ಹಾಸನ ಸಮಾವೇಶಕ್ಕೆ 20 ಕೋಟಿ ಕರ್ಚಾಗಿದೆ, ಎಲ್ಲಿಂದ ಬಂತು, ಯಾರು ಕೊಟ್ರು? ಅಂತಲೂ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಮುಸ್ಲಿಮರನ್ನು ಅವರಂತೆ ಹೆದರಿಸದಿದ್ರೆ ಜಗತ್ತಿನ ಎಲ್ಲಾ ಸಂಸ್ಕೃತಿಗಳು ನಾಶವಾಗಲಿವೆ: ಸಿ.ಟಿ ರವಿ

    ಕಾಂಗ್ರೆಸ್‌ನದ್ದು ಊರು ಬಾಗಿಲು:
    ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್‌ ಫೈಟ್‌ ವಿಚಾರ ಕುರಿತು ಮಾತನಾಡಿದ ಅಶೋಕ್‌, ಪರಮೇಶ್ವರ್ ಮಾತಾಡಿದ್ದಾರಲ್ಲ, ಮೊದಲು ಸಿಎಂ ಆಗೋದಿಕ್ಕೆ ಅವರಿಗೇ ಆದ್ಯತೆ ಸಿಗಬೇಕು. ಅದಕ್ಕೇ ಅವರು ಮೊನ್ನೆ ಡಿಮ್ಯಾಂಡ್ ಇಟ್ಟಿದ್ದು. ಪರಮೇಶ್ವರ್ ಎರಡು ಸಲ ಅಧ್ಯಕ್ಷ ಆಗಿದ್ದವರು. ಸಿಎಂ ಆಗ್ತಾರೆ ಅಂತ ಅವರನ್ನು ಕಳೆದ ಸಲ ಸೋಲಿಸಲಾಯ್ತು. ಸಿಎಂ ಪೋಸ್ಟ್ ಬಿಟ್ಟುಕೊಡಲ್ಲ ಅಂತ ಸಿದ್ದರಾಮಯ್ಯ ಅವರೇ ಹೇಳಿದ್ದಾರಲ್ಲ, ಡಿಕೆಶಿಗೆ ಪೆನ್ನು ಪೇಪರ್ ಇನ್ನೆಲ್ಲಿ ಸಿಗುತ್ತೆ? ಬಿಜೆಪಿಯದ್ದು ಮನೆಯೊಂದು ಮೂರು ಬಾಗಿಲು ಅಂತಾರಲ್ಲ, ಕಾಂಗ್ತೆಸ್‌ನವ್ರದ್ದು ಊರು ಬಾಗಿಲಾಗಿದೆಯಲ್ಲ ಎಂದು ಲೇವಡಿ ಮಾಡಿದರು.

  • Ballari | ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ತಾಕೀತು

    Ballari | ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ತಾಕೀತು

    ಬೆಂಗಳೂರು: ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ (Ballari District Hospital) ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

    ಬೆಂಗಳೂರಿನ (Bengaluru) ವಿಕಾಸ ಸೌಧದಲ್ಲಿಂದು ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಐವಿ ದ್ರಾವಣದ 22 ಬ್ಯಾಚ್‌ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಕಂಪನಿಯ ವಿರುದ್ಧ ಕೇಸ್ ದಾಖಲಿಸಿ ಎಂದು ಸೂಚಿಸಿದರು. ಇದನ್ನೂ ಓದಿ: ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ

    ಈ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು, ರಾಜ್ಯದ ಡ್ರಗ್ ಕಂಟ್ರೋಲ್ ನೀಡಿದ 22 ಬ್ಯಾಚ್ ಗಳ NSQ ವರದಿಯಲ್ಲಿ 13 ಬ್ಯಾಚ್‌ಗಳ ವರದಿ ಪ್ರಶ್ನಿಸಿ ಕಂಪನಿಯವರು ಸೆಂಟ್ರಲ್ ಡ್ರಗ್ ಲ್ಯಾಬರೋಟಿರಿ ಮೆಟ್ಟಿಲೇರಿದ್ದಾರೆ. ಅದರಲ್ಲಿ 4 ಬ್ಯಾಚ್‌ಗಳು ಗುಣಮಟ್ಟ ಹೊಂದಿವೆ ಎಂದು ಸೆಂಟ್ರಲ್ ಡ್ರಗ್ ಲ್ಯಾಬ್ ವರದಿ ನೀಡಿದೆ. ಅಲ್ಲದೇ 13 ಬ್ಯಾಚ್ ಗಳ ಬಗ್ಗೆ ಸೆಂಟ್ರಲ್ ಡ್ರಗ್ ಲ್ಯಾಬ್ ನಿಂದ ವರದಿ ಬರಬೇಕಿದೆ ಎಂದು ಸ್ಪಷ್ಟನೆ ನೀಡಿದರು. ಉಳಿದ 9 ಬ್ಯಾಚ್ ಗಳ ವಿಚಾರವಾಗಿ ಕಂಪನಿಯವರನ್ನ ಪ್ರಾಸಿಕ್ಯೂಷನ್‌ಗೆ ಒಳಪಡಿಸಬಹುದಲ್ಲ ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

    ಅಲ್ಲದೇ ರಾಜ್ಯದ ಡ್ರಗ್ ಕಂಟ್ರೋಲ್ ಟೆಸ್ಟಿಂಗ್‌ನಲ್ಲಿ NSQ ವರದಿ ಬಂದ ಮೇಲೆ ಸೆಂಟ್ರಲ್ ಡ್ರಗ್ ಲ್ಯಾಬ್ ನಲ್ಲಿ ಹೇಗೆ SQ ವರದಿ ಬರಲು ಸಾಧ್ಯ ಎಂಬುದರ ಕುರಿತು ಕುಲಂಕುಶವಾಗಿ ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಔಷಧಿ ನಿಯಂತ್ರಣ ಅಧಿಕಾರಿಗೆ ಸಚಿವರು ಸೂಚನೆ ನೀಡಿದರು. ಸಮಯಕ್ಕೆ ಸರಿಯಾಗಿ ಔಷಧಿಗಳನ್ನ ಸೂಕ್ತ ರೀತಿಯಲ್ಲಿ ಟೆಸ್ಟಿಂಗ್ ನಡೆಸಿ. ಜನರ ಜೀವದ ಜೊತೆ ಚೆಲ್ಲಾಟ ಆಡಬೇಡಿ. ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಟೆಸ್ಟಿಂಗ್ ನಡೆಸುವ ಅಧಿಕಾರಿಗಳಿಗೆ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತರಾಟೆ ತೆಗೆದುಕೊಂಡರು. ಇದನ್ನೂ ಓದಿ: ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು – ದಿನೇಶ್‌ ಗುಂಡೂರಾವ್ ವಜಾಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

    ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ಐವಿ ದ್ರಾವಣ ಕೂಡ ಒಂದು ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ರೀತಿಯ ವರದಿಗಳಿರುವಾಗ ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳು ಏನು ಕ್ರಮ ವಹಿಸಿದ್ದಾರೆ. ಟೆಸ್ಟಿಂಗ್ ವರದಿಗಳನ್ನ ಶೀಘ್ರದಲ್ಲಿ ಕೊಡಬೇಕು. ಟೆಸ್ಟಿಂಗ್ ವರದಿಗಳನ್ನ ನೀಡಲು ವಿಳಂಭ ನೀತಿ ಏಕೆ? ಅಲ್ಲದೇ ಸೆಂಟ್ರಲ್ ಲ್ಯಾಬ್ ನಿಂದ ಕೂಡಾ ಟೆಸ್ಟಿಂಗ್ ವರದಿಗಳು ಬರುವುದು ವಿಳಂಭವಾಗುತ್ತಿರುವುದು ಏಕೆ? ನಿಮಗೆ ಜವಾಬ್ದಾರಿ ಇಲ್ಲವೇ ಎಂದು ಅಧಿಕಾರಿಗಳ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಗರಂ ಆದರು.

    ಐವಿ ರಿಂಗರ್ ಲ್ಯಾಕ್ಟೇಟ್‌ನ 192 ಬ್ಯಾಚ್‌ಗಳಲ್ಲಿ ಟೆಸ್ಟಿಂಗ್‌ಗೆ ಬಾಕಿ ಇರುವ ಬ್ಯಾಚ್‌ಗಳ ವರದಿ ಶೀಘ್ರದಲ್ಲೇ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ತಾಕೀತು ಮಾಡಿದರು. ಅಲ್ಲದೇ NABL ಲ್ಯಾಬ್‌ನಲ್ಲಿ 192 ಬ್ಯಾಚ್‌ಗಳು ಐವಿ ದ್ರಾವಣ ಪಾಸಿಟಿವ್ ರಿಪೋರ್ಟ್ ಬಂದಿದ್ದು ಹೇಗೆ ಎಂದು ಪ್ರಶ್ನಿಸಿದ ಸಚಿವರು ಈ ಬಗ್ಗೆ ಪರಿಶೀಲನೆ ನಡೆಸಿ ಎಂದರು. ಇದನ್ನೂ ಓದಿ: ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ವೈದ್ಯರ ನಿರ್ಲಕ್ಷ್ಯದಿಂದಲ್ಲ – ದಿನೇಶ್ ಗುಂಡೂರಾವ್

    ರಾಜ್ಯದ ಡ್ರಗ್ ಕಂಟ್ರೋಲ್ ನೀಡಿದ ವರದಿಯಲ್ಲಿ 22 ಬ್ಯಾಚ್ ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂದು ವರದಿಯಿದೆ. ಇದರಲ್ಲಿ ಸೆಂಟ್ರಲ್ ಲ್ಯಾಬ್ ನವರು 4 ಬ್ಯಾಚ್ ಗಳಿಗೆ ಮಾತ್ರ ಗುಣಮಟ್ಟ ಹೊಂದಿದೆ ಎಂದು ವರದಿ ನೀಡಿದ್ದಾರೆ. ಆದರೆ NABL ಲ್ಯಾಬ್‌ನವರು 192 ಬ್ಯಾಚ್‌ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿದೆ ಎಂದು ವರದಿ ನೀಡಿದ್ದಾರೆ. ಇದು ಹೇಗೆ ಸಾಧ್ಯ? ಈ ಬಗ್ಗೆ ಪರಿಶೀಲನೆ ನಡೆಸಿ. ಲ್ಯಾಬ್‌ನವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಔಷಧಿ ಸರಬರಾಜು ನಿಗಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.