Tag: ಐಶ್ವರ್ಯಾ

  • ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್‌ನಲ್ಲಿ ರಜನಿಕಾಂತ್ ದಂಪತಿ

    ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್‌ನಲ್ಲಿ ರಜನಿಕಾಂತ್ ದಂಪತಿ

    ಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರು ಇದೀಗ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್‌ನಲ್ಲಿದ್ದಾರೆ. ಶನಿವಾರ ಫೆ.18ರಂದು ತಲೈವಾ ಶಿವರಾತ್ರಿ ಹಬ್ಬವನ್ನು ಚಿಕ್ಕಬಳ್ಳಾಪುರದ ಆದಿಯೋಗಿಯಲ್ಲಿ ಆಚರಣೆ ಮಾಡಿದ್ದರು. ಈಗ ಬೆಂಗಳೂರಿಗೆ ಬಂದಿದ್ದಾರೆ.

    ಮೂರು ದಿನಗಳ ಶೂಟಿಂಗ್‌ಗಾಗಿ ನಟ ರಜನಿಕಾಂತ್ (Rajanikanth) ಮಂಗಳೂರಿಗೆ ಬಂದಿಳಿದಿದ್ದರು. ಈ ವೇಳೆ ಶಿವಣ್ಣ ಕೂಡ ಸಾಥ್ ನೀಡಿದ್ದರು. ಮಂಗಳೂರಿನ ಶೂಟಿಂಗ್ ಮುಗಿಸಿಕೊಂಡು ಅವರು ನೇರವಾಗಿ ಬೆಂಗಳೂರಿಗೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಆವಲಗುರ್ಕಿ ಗ್ರಾಮದ ಬಳಿ ಇರುವ ಇಶಾ ಫೌಂಡೇಶನ್‌ಗೆ ಭೇಟಿ ನೀಡಿ ಆದಿಯೋಗಿಯ (Adiyogi) ದರ್ಶನ ಪಡೆದ ಬಳಿಕ ಇದೀಗ ಪತ್ನಿ ಲತಾ ಜೊತೆ ರಜನಿಕಾಂತ್ ಆರ್ಟ್ ಆಫ್ ಲಿವಿಂಗ್‌ನಲ್ಲಿದ್ದಾರೆ. ಇದನ್ನೂ ಓದಿ: ಸದ್ದಿಲ್ಲದೇ ಆದಿಯೋಗಿ ಶಿವನ ದರ್ಶನ ಪಡೆದ ರಜನಿಕಾಂತ್

    ರಜನಿಕಾಂತ್ ಯಾವಾಗಲೂ ಹೀಗೆ ಅನಿರೀಕ್ಷಿತ ಭೇಟಿ ಕೊಡುತ್ತಲೇ ಇರುತ್ತಾರೆ. ಆಧ್ಯಾತ್ಮಿಕ ಜೀವಿಯೂ ಆಗಿರುವ ಅವರು ಅನೇಕ ದೇವಸ್ಥಾನಗಳಿಗೆ ಹೀಗೆ ಭೇಟಿ ನೀಡುತ್ತಲೇ ಇರುತ್ತಾರೆ. ಅದರಲ್ಲೂ ಹಿಮಾಲಯಕ್ಕೆ ಅವರು ಆಗಾಗ್ಗೆ ಹೋಗುತ್ತಾರೆ. ಅದರಲ್ಲೂ ಐಶ್ವರ್ಯಾ- ಧನುಷ್ (Aishwarya- Dhanush) ಡಿವೋರ್ಸ್ ನಂತರ ರಜನಿಕಾಂತ್ ಮಗಳ ಜೀವನ್ ಬಗ್ಗೆ ಚಿಂತೆಯಲ್ಲಿದ್ದಾರೆ. ಹಾಗಾಗಿ ಸಿನಿಮಾ ಜೊತೆಗೆ ಟೆಂಪಲ್ ರನ್ ಅಂತಾ ತಲೈವಾ ಬ್ಯುಸಿಯಾಗಿದ್ದಾರೆ. ಸದ್ಯ ಆರ್ಟ್ ಆಫ್ ಲಿವಿಂಗ್‌ನಲ್ಲಿ (Art Of Living) ಪತ್ನಿ ಜೊತೆ ಕುಳಿತಿರುವ ಫೋಟೋ  ಎಲ್ಲೆಡೆ ವೈರಲ್ ಆಗುತ್ತಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟ ಧನುಷ್‍ ಖಾತೆಗಳನ್ನು ಅನ್ ಫಾಲೋ ಮಾಡಿದ ರಜನಿಕಾಂತ್ ಪುತ್ರಿ ಐಶ್ವರ್ಯಾ

    ನಟ ಧನುಷ್‍ ಖಾತೆಗಳನ್ನು ಅನ್ ಫಾಲೋ ಮಾಡಿದ ರಜನಿಕಾಂತ್ ಪುತ್ರಿ ಐಶ್ವರ್ಯಾ

    ಮಿಳಿನ ಸೂಪರ್ ಹಿಟ್ ಜೋಡಿ ಸಮಂತಾ ಅವರು ಮಾಜಿ ಪತಿ ನಾಗಚೈತನ್ಯ ಅವರ ಇನ್‍ಸ್ಟಾಗ್ರಾಮ್ ಖಾತೆಯನ್ನು ಅನ್‍ಫಾಲೋ ಮಾಡಿದ ಬೆನ್ನಲ್ಲೇ, ಅದೇ ಚಿತ್ರೋದ್ಯಮದ ಮತ್ತೊಂದು ಪಾಪ್ಯುಲರ್ ಜೋಡಿ ಇಂತಹ ಕೆಲಸ ಮಾಡಿದೆ. ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರು, ಟ್ವಿಟ್ಟರ್ ಮತ್ತು ಇನ್‍ಸ್ಟಾಗ್ರಾಮ್‍ನಿಂದ ಧನುಷ್‍ನನ್ನು ಆನ್‍ಫಾಲೋವ್ ಮಾಡಿದ್ದಾರೆ.

    ನಟ ಧನುಷ್ ಹಾಗೂ ಐಶ್ವರ್ಯ ಅವರು ಜನವರಿ 17ರಂದು ವಿಚ್ಛೇದನ ನೀಡುವ ಮೂಲಕ ತಮ್ಮ 18 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದರು. ಈ ವಿಚಾರ ಸಾಕಷ್ಟು ಅಭಿಮಾನಿಗಳಿಗೆ ಆಘಾತವನ್ನುಂಟುಮಾಡಿತು. ಇದನ್ನೂ ಓದಿ : ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ

    ಮತ್ತೆ ಇವರಿಬ್ಬರನ್ನೂ ಒಂದು ಮಾಡಲು ರಜನಿಕಾಂತ್ ಸಾಕಷ್ಟು ಹರಸಾಹಸಪಟ್ಟರು. ಅಲ್ಲದೇ ಧನುಷ್ ಅವರ ತಂದೆ ಕಸ್ತೂರಿ ರಾಜಾ ಕೂಡ ‘ಇದು ಕೇವಲ ಕೌಟುಂಬಿಕ ಕಲಹ’ ಎಂದಿದ್ದರು. ಅಲ್ಲದೇ ಧನುಷ್, ಐಶ್ವರ್ಯಾ ಮತ್ತೆ ಒಂದಾಗುವ ಸಾಧ್ಯತೆ ಇದೆ ಎಂಬ ಸುಳಿವನ್ನು ನೀಡಿದ್ದರು. ಆದರೆ ಇದೀಗ ಐಶ್ವರ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಧನುಷ್ ಅವರನ್ನು ಅನ್‍ಪಾಲೋ ಮಾಡುವ ಮೂಲಕ ತಮ್ಮ ಪುನರ್ ಮಿಲನ ವದಂತಿಗಳಿಗೆ ಫುಲ್ ಸ್ಟಾಪ್ ಇಟ್ಟಿದ್ದಾರೆ.

    ಇತ್ತೀಚೆಗೆಷ್ಟೇ ಐಶ್ವರ್ಯ ಅವರು ತಮ್ಮ ಮ್ಯೂಸಿಕ್ ವೀಡಿಯೋ ಪಯಾನಿ ಯನ್ನು ವಿವಿಧ ಭಾಷೆಗಳಲ್ಲಿ ಬಿಡುಗಡೆಗೊಳಿಸಿದರು. ಧನುಷ್ ಅವರು ಈ ಮ್ಯೂಸಿಕ್ ವೀಡಿಯೋ ಕುರಿತಂತೆ ಧನುಷ್ ಅವರು ಐಶ್ವರ್ಯಾ ಅವರಿಗೆ ವಿಶ್ ಕೂಡ ಮಾಡಿದ್ದರು. ಜೊತೆಗೆ ಫ್ರೆಂಡ್ ಎಂದು ಐಶ್ವರ್ಯಾ ಅವರನ್ನು ಕರೆದಿದ್ದರು. ಇದಕ್ಕೆ ಪ್ರತಿಯಾಗಿ ಐಶ್ವರ್ಯ ಕೂಡ ಧನ್ಯವಾದ ತಿಳಿಸಿದ್ದರು. ಇದನ್ನೂ ಓದಿ : ಮುನುಸ್ವಾಮಿ ಬಲಿ ಪಡೆದ ಕಾಲಿವುಡ್ ಖ್ಯಾತ ನಟ ಸಿಂಬು ಕಾರು

    ಧನುಷ್ ಹಾಗೂ ಐಶ್ವಯಾ ಅವರಿಗೆ ಯಾತ್ರಾ ಮತ್ತು ಲಿಂಗ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಅಲ್ಲದೇ ಈಗಲೂ ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೋ ಅಥವಾ ಇಲ್ಲವೋ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.

  • ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಕೋವಿಡ್ ಪಾಸಿಟಿವ್

    ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಕೋವಿಡ್ ಪಾಸಿಟಿವ್

    ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ರಜನಿಕಾಂತ್ ಅವರ ಮಗಳಾದ ಐಶ್ವರ್ಯಾರವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಐಶ್ವರ್ಯಾರವರಿಗೆ ಮಂಗಳವಾರ ಕೋವಿಡ್ ಪರಿಕ್ಷೆ ಮಾಡಲಾಗಿತ್ತು. ಈ ಕುರಿತು ಅವರು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಪಾಸಿಟಿವ್ ಬಂದ ವಿಚಾರವನ್ನು ತಿಳಿಸಿದ್ದಾರೆ. ಇದನ್ನೂ ಓದಿ:  ಕಟೌಟ್ ಡ್ರೆಸ್‍ನಲ್ಲಿ ನೋರಾ ಫತೇಹಿ ಸಖತ್ ಹಾಟ್

    ಕೋವಿಡ್ ವಿರುದ್ಧದ ಎಲ್ಲಾ ಮುನ್ನೆಚ್ಚರಿಕೆ ವಹಿಸಿದರೂ ಸಹ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ದಯವಿಟ್ಟು ಎಲ್ಲರೂ ಮಾಸ್ಕ್ ಅಪ್ ಮಾಡಿ, ಲಸಿಕೆ ಹಾಕಿಸಿಕೊಳ್ಳಿ ಮತ್ತು ಸುರಕ್ಷಿತವಾಗಿರಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮೋದಿಯವರು ದೇವರ ಸ್ವರೂಪ: ಶಿವರಾಜ್ ಸಿಂಗ್ ಚೌಹಾಣ್

    ದಯವಿಟ್ಟು ನೀವು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಅಭಿಮಾನಿಗಳು ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಶುಭ ಹಾರೈಸಿದ್ದಾರೆ.

    ಕಳೆದ ತಿಂಗಳು ಐಶ್ವರ್ಯಾ ಮತ್ತು ಧನುಷ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಪರಸ್ಪರ ಒಮ್ಮತದ ವಿಚ್ಛೇದನ ಪಡೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದರು.

  • ಡಿವೋರ್ಸ್ ಬಳಿಕ ಧನುಷ್-ಐಶ್ವರ್ಯಾ ಒಂದೇ ಹೊಟೇಲಿನಲ್ಲಿ ವಾಸ!

    ಡಿವೋರ್ಸ್ ಬಳಿಕ ಧನುಷ್-ಐಶ್ವರ್ಯಾ ಒಂದೇ ಹೊಟೇಲಿನಲ್ಲಿ ವಾಸ!

    ಹೈದರಾಬಾದ್: ಕಾಲಿವುಡ್ ನಟ ಧನುಷ್ ಹಾಗೂ ರಜಿನಿಕಾಂತ್ ಪುತ್ರಿ ಐಶ್ವರ್ಯಾ ಪರಸ್ಪರ ದೂರಾಗುತ್ತಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ 18 ವರ್ಷಗಳ ವೈವಾಹಿಕ ಜೀವನ ಅಂತ್ಯಗೊಂಡಂತಾಗಿದೆ. ಆದರೆ ಈ ಜೋಡಿ ಹೈದರಾಬಾದ್‍ನ ಐಷಾರಾಮಿ ಹೋಟೆಲ್‍ವೊಂದರಲ್ಲಿ ಇಬ್ಬರು ತಂಗಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.

    ರಾಮೋಜಿ ಫಿಲ್ಮ್ ಸಿಟಿಯಲ್ಲಿರುವ ಐಷಾರಾಮಿ ಹೋಟೆಲ್‍ವೊಂದರಲ್ಲಿ ಧನುಷ್ ಮತ್ತು ಐಶ್ವರ್ಯಾ ಇದ್ದಾರೆ. ಹಾಗಂದ ಮಾತ್ರಕ್ಕೆ ಇಬ್ಬರು ಒಟ್ಟಿಗೆ ಇದ್ದಾರೆ ಎಂದೇನಲ್ಲ. ವೃತ್ತಿ ಕಾರಣದಿಂದಾಗಿ ಹೈದಾರಾಬಾದ್‍ನಲ್ಲಿ ಬೀಡುಬಿಟ್ಟಿರುವ ಈ ಮಾಜಿ ದಂಪತಿ ಒಂದೇ ಹೋಟೆಲ್‍ನಲ್ಲಿ ಇದ್ದಾರೆ ಅಷ್ಟೇ. ಸದ್ಯ ಇಂಥದ್ದೊಂದು ಮಾಹಿತಿ ಸಿಕ್ಕಿದೆ. ಅಧಿಕೃತವಾಗಿ ವಿಚ್ಛೇದನ ಘೋಷಣೆ ಮಾಡಿರುವ ಇಬ್ಬರು, ಅದನ್ನೇ ಯೋಚಿಸುತ್ತ ಕುಳಿತಿಲ್ಲ. ಬದಲಾಗಿ, ವೃತ್ತಿ ಬದುಕಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

    ಸಾಮಾನ್ಯವಾಗಿ ವಿಚ್ಛೇದನ ಪಡೆದ ನಂತರದಲ್ಲಿ ಒಬ್ಬರ ಮುಖವನ್ನು ಒಬ್ಬರು ನೋಡಿಕೊಳ್ಳೋಕೆ ಇಷ್ಟಪಡುವುದಿಲ್ಲ. ಆದರೆ ಸೆಲೆಬ್ರಿಟಿ ವಲಯದಲ್ಲಿ ಹಾಗಾಗುವುದಿಲ್ಲ. ಒಂದೇ ಇಂಡಸ್ಟ್ರಿಯಲ್ಲಿ ಇದ್ದರೆ ಪರಸ್ಪರ ಭೇಟಿ ಆಗುವ ಸಂದರ್ಭ ಒದಗಿ ಬರುತ್ತದೆ. ಈಗ ಧನುಷ್ ಹಾಗೂ ಐಶ್ವರ್ಯಾಗೆ ಹೀಗೆಯೇ ಆಗಿದೆ ಎನ್ನಲಾಗುತ್ತಿದೆ. ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

    ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ಅವರು ತಮ್ಮ 18 ವರ್ಷಗಳ ಸುದೀರ್ಘ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದಾರೆ. ಜನವರಿ 17ರಂದು ಅಧಿಕೃತವಾಗಿ ಈ ವಿಚಾರವನ್ನು ಇಬ್ಬರು ಕೂಡ ಘೋಷಣೆ ಮಾಡಿದ್ದರು. ಇದು ಧನುಷ್, ರಜನಿಕಾಂತ್ ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿತ್ತು.ಇದನ್ನೂ ಓದಿ: ನಟ ಧನುಷ್, ಐಶ್ವರ್ಯಾ ಡಿವೋರ್ಸ್- 18 ವರ್ಷದ ವೈವಾಹಿಕ ಸಂಬಂಧಕ್ಕೆ ಗುಡ್‍ಬೈ

    ನಾವಿಬ್ಬರು 18 ವರ್ಷಗಳಿಂದ ಸ್ನೇಹಿತರಾಗಿ, ಪ್ರೇಮಿಗಳಾಗಿ, ದಂಪತಿಯಾಗಿ , ಪೋಷಕರಾಗಿ, ಪರಸ್ಪರ ಒಳ್ಳೆಯದನ್ನು ಬಯಸುತ್ತಾ, ಅರ್ಥಮಾಡಿಕೊಳ್ಳುತ್ತಾ, ಸಹಕರಿಸುತ್ತಾ ಜೀವನ ನಡೆಸಿದ್ದೇವೆ. ಒಬ್ಬರಿಗೆ ಒಬ್ಬರು ಆಸರೆಯಾಗಿದ್ದೇವೆ. ಇಂದು ನಮ್ಮಿಬ್ಬರ ದಾರಿ ಬೇರೆ ಬೇರೆಯಾಗಿದೆ. ನಾನು ಹಾಗೂ ಐಶ್ವರ್ಯಾ ಸಮಯ ತೆಗೆದುಕೊಂಡು ಕೊನೆಗೆ ತೀರ್ಮಾನಿಸಿ ಪರಸ್ಪರ ಒಪ್ಪಿ ದಾಂಪತ್ಯ ಜೀವನದಿಂದ ದೂರಾಗುತ್ತಿದ್ದೇವೆ. ನಮ್ಮ ನಿರ್ಧಾರಕ್ಕೆ ನಿಮ್ಮ ಬೆಂಬಲ ಹಾಗೂ ಸಹಕಾರ ಇರಲಿ ಎಂದು ಆಶಿಸುತ್ತೇನೆ . ದಯಮಾಡಿ ನಮ್ಮ ಖಾಸಗಿ ನಿರ್ಧಾರವನ್ನು ಗೌರವಿಸಿ ಎಂದು ಧನುಷ್ ಟ್ವೀಟ್ ಮಾಡಿದ್ದಾರೆ. ಅದೇ ಪೋಸ್ಟ್ ಅನ್ನು ಹೆಸರು ಬದಲಾಯಿಸಿ, ಐಶ್ವರ್ಯಾ ಕೂಡ ಶೇರ್ ಮಾಡಿಕೊಂಡಿದ್ದರು.

  • ಗಂಡ-ಹೆಂಡ್ತಿ ಜಗಳ ಅಷ್ಟೇ, ವಿಚ್ಛೇದನ ಅಲ್ಲ: ನಟ ಧನುಷ್ ತಂದೆ

    ಗಂಡ-ಹೆಂಡ್ತಿ ಜಗಳ ಅಷ್ಟೇ, ವಿಚ್ಛೇದನ ಅಲ್ಲ: ನಟ ಧನುಷ್ ತಂದೆ

    ನವದೆಹಲಿ: ಇತ್ತೀಚೆಗಷ್ಟೇ ಕಾಲಿವುಡ್ ನಟ ಧನುಷ್ ಹಾಗೂ ರಜನಿಕಾಂತ್ ಪುತ್ರಿ ಐಶ್ವರ್ಯಾ ವಿಚ್ಛೇದನ ವಿಚಾರ ಭಾರೀ ಸುದ್ದಿಯಾಗಿತ್ತು. ಬರೋಬ್ಬರಿ 18 ವರ್ಷಗಳ ದಾಂಪತ್ಯದಲ್ಲಿನ ಬಿರುಕು ಕಂಡು ಅಭಿಮಾನಿಗಳೇ ದಂಗಾಗಿದ್ದರು. ಆ ಬಳಿಕ ವಿಚ್ಛೇದನ ವಿಚಾರ ಸಂಬಂಧ ಹಲವಾರು ಊಹಾಪೋಹಗಳು ಹರಿದಾಡತೊಡಗಿದವು. ಇದೀಗ ಸ್ವತಃ ನಟ ಧನುಷ್ ತಂದೆ ಕಸ್ತೂರಿ ರಾಜಾ ಅವರು ಮಗನ ವಿಚ್ಛೇದನ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

    ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಮಗನ ವಿಚ್ಛೇದನದ ಕುರಿತು ಹೇಳಿಕೆ ನೀಡಿದರು. ಇದು ಮಾಮೂಲಿ ಗಂಡ-ಹೆಂಡತಿ ನಡುವೆ ನಡೆದ ಜಗಳ ಅಷ್ಟೇ. ಕೆಲವೊಂದು ವಿಚಾರಗಳಲ್ಲಿ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯಗಳು ಮೂಡಿದೆ. ಆದರೆ ಇದು ವಿಚ್ಛೇದನ ಅಲ್ಲ. ಸದ್ಯ ಅವರು ಚೆನ್ನೈನಲ್ಲಿ ಇಲ್ಲ ಹೈದರಾಬಾದ್ ನಲ್ಲಿ ನೆಲೆಸಿದ್ದಾರೆ. ವಿಚ್ಛೇದನ ನೀಡಿದ್ದಾರೆ ಎಂಬ ವಿಚಾರ ತಿಳಿದ ಕೂಡಲೇ ನಾನು ಮಗನಿಗೆ ಕರೆ ಮಾಡಿ ಮಾತನಾಡಿದ್ದೇನೆ. ಅಲ್ಲದೆ ಕೆಲವೊಂದು ಸಲಹೆಗಳನ್ನು ಕೂಡ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಟ ಧನುಷ್, ಐಶ್ವರ್ಯಾ ಡಿವೋರ್ಸ್- 18 ವರ್ಷದ ವೈವಾಹಿಕ ಸಂಬಂಧಕ್ಕೆ ಗುಡ್‍ಬೈ

    ಕಳೆದ ಮೂರು ದಿನಗಳ ಹಿಂದೆಯಷ್ಟೇ, ನಾವಿಬ್ಬರು 18 ವರ್ಷಗಳಿಂದ ಸ್ನೇಹಿತರಾಗಿ, ಪ್ರೇಮಿಗಳಾಗಿ, ದಂಪತಿಯಾಗಿ, ಪೋಷಕರಾಗಿ, ಪರಸ್ಪರ ಒಳ್ಳೆಯದನ್ನು ಬಯಸುತ್ತಾ, ಅರ್ಥಮಾಡಿಕೊಳ್ಳುತ್ತಾ, ಸಹಕರಿಸುತ್ತಾ ಜೀವನ ನಡೆಸಿದ್ದೇವೆ. ಒಬ್ಬರಿಗೆ ಒಬ್ಬರು ಆಸರೆಯಾಗಿದ್ದೇವೆ. ಇಂದು ನಮ್ಮಿಬ್ಬರ ದಾರಿ ಬೇರೆ ಬೇರೆಯಾಗಿದೆ. ನಾನು ಹಾಗೂ ಐಶ್ವರ್ಯಾ ಸಮಯ ತೆಗೆದುಕೊಂಡು ಕೊನೆಗೆ ತೀರ್ಮಾನಿಸಿ ಪರಸ್ಪರ ಒಪ್ಪಿ ದಾಂಪತ್ಯ ಜೀವನದಿಂದ ದೂರಾಗುತ್ತಿದ್ದೇವೆ. ನಮ್ಮ ನಿರ್ಧಾರಕ್ಕೆ ನಿಮ್ಮ ಬೆಂಬಲ ಹಾಗೂ ಸಹಕಾರ ಇರಲಿ ಎಂದು ಆಶಿಸುತ್ತೇನೆ. ದಯಮಾಡಿ ನಮ್ಮ ಖಾಸಗಿ ನಿರ್ಧಾರವನ್ನು ಗೌರವಿಸಿ ಎಂದು ಧನುಷ್ ಟ್ವೀಟ್ ಮಾಡಿ ಅಚ್ಚರಿ ಹುಟ್ಟಿಸಿದ್ದರು.

    ಇದೀಗ ಧನುಷ್ ತಂದೆ ನೀಡಿರುವ ಹೇಳಿಕೆಯಿಂದ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಕೊಂಡಿದೆ. ಧನುಷ್- ಐಶ್ವರ್ಯಾ ಮತ್ತೆ ಒಂದಾಗುತ್ತಾರಾ ಹಾಗೂ ಮನೆಯ ಹಿರಿಯರು ಕೂತು ಮಾತುಕತೆ ನಡೆಸಿ ಜೋಡಿಯನ್ನು ಒಂದಾಗಿಸುತ್ತಾರಾ ಎಂಬ ಕ್ಯೂರಿಯಾಸಿಟಿ ಹುಟ್ಟಿದೆ.

  • ಓದಿಲ್ಲದೇ ಬದುಕಲಾರೆ ಕ್ಷಮಿಸಿ- ಐಎಎಸ್ ಕನಸು ಕಂಡಿದ್ದ ಟಾಪರ್ ವಿದ್ಯಾರ್ಥಿನಿ ಆತ್ಮಹತ್ಯೆ

    ಓದಿಲ್ಲದೇ ಬದುಕಲಾರೆ ಕ್ಷಮಿಸಿ- ಐಎಎಸ್ ಕನಸು ಕಂಡಿದ್ದ ಟಾಪರ್ ವಿದ್ಯಾರ್ಥಿನಿ ಆತ್ಮಹತ್ಯೆ

    – ಲ್ಯಾಪ್‍ಟಾಪ್ ಇಲ್ಲದೇ ಆನ್‍ಲೈನ್ ಕ್ಲಾಸ್ ತಪ್ಪಿದ್ದಕ್ಕೆ ನೊಂದಿದ್ದ ವಿದ್ಯಾರ್ಥಿನಿ
    – ಲಾಕ್‍ಡೌನ್‍ನಿಂದ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದ ಕುಟುಂಬ
    – ಶೇ.98.5 ಅಂಕ ಪಡೆದಿದ್ದ ಐಶ್ವರ್ಯಾಗೆ ಸಿಗದ ಸ್ಕಾಲರ್ ಶಿಪ್

    ಹೈದರಾಬಾದ್: ಓದಿಲ್ಲದೇ ನಾನು ಬದುಕಲಾರೆ, ಅಪ್ಪ-ಅಮ್ಮ ಕ್ಷಮಿಸಿ ಎಂದು ಡೆತ್ ನೋಟ್ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಧ್‍ನಗರದಲ್ಲಿ ನಡೆದಿದೆ.

    ನವೆಂಬರ್ 2ರಂದು 19 ವರ್ಷದ ಐಶ್ವರ್ಯಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಮುನ್ನ ಐಶ್ವರ್ಯಾ ಡೆತ್ ನೋಟ್ ಬರೆದು, ತನ್ನ ಈ ನಿರ್ಧಾರಕ್ಕೆ ಬಡತನವೇ ಕಾರಣ ಎಂಬುದನ್ನ ಪರೋಕ್ಷವಾಗಿ ಹೇಳಿದ್ದಾಳೆ. ನನ್ನ ಸಾವಿಗೆ ಯಾರು ಕಾರಣರಲ್ಲ. ನನ್ನಿಂದಾಗಿ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ಇನ್ನು ನಾನು ಓದದೇ ಬದುಕಲಾರೆ. ಈ ಸಮಸ್ಯೆಗೆ ಆತ್ಮಹತ್ಯೆಯೇ ಪರಿಹಾರ ಎಂದು ಅನ್ನಿಸುತ್ತಿದೆ. ನಾನು ನಿಮಗೆ ಒಳ್ಳೆಯ ಮಗಳು ಆಗಲು ಸಾಧ್ಯವಾಗಲಿಲ್ಲ. ಅಪ್ಪ-ಅಮ್ಮ ದಯವಿಟ್ಟು ಕ್ಷಮಿಸಿ ಎಂದು ಐಶ್ವರ್ಯಾ ಪತ್ರದಲ್ಲಿ ಬರೆದಿದ್ದಾಳೆ.

    ಐಶ್ವರ್ಯಾಳ ತಂಗಿ ಏಳನೇ ಕ್ಲಾಸ್ ನಲ್ಲಿ ಓದುತ್ತಿದ್ದಾಳೆ. ಲಾಕ್‍ಡೌನ್ ನಿಂದಾಗಿ ಐಶ್ವರ್ಯಾ ಕುಟುಂಬ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿತ್ತು. 12ನೇ ತರಗತಿಯಲ್ಲಿ ಶೇ.98.5 ಅಂಕ ಗಳಿಸಿದ್ದ ಐಶ್ವರ್ಯಾ ಮೆರಿಟ್ ಆಧಾರದ ಮೇಲೆ ದೆಹಲಿಯ ಲೇಡಿ ಶ್ರೀರಾಮ ಕಾಲೇಜಿನಲ್ಲಿ ಭರ್ತಿ ಪಡೆದಿದ್ದಳು. ತಂದೆ ಮೋಟರ್ ಸೈಕಲ್ ಮೆಕಾನಿಕ್ ಆಗಿದ್ದು, ತಾಯಿ ಮನೆಯಲ್ಲಿಯೇ ಟೈಲರಿಂಗ್ ಮಾಡುತ್ತಿದ್ದರು. ಇಬ್ಬರ ಸಂಪಾದನೆಯಿಂದ ಇಡೀ ಕುಟುಂಬದ ದೋಣಿ ಸಾಗುತ್ತಿತ್ತು. ಲಾಕ್‍ಡೌನ್ ಬಿರುಗಾಳಿಗೆ ಸಿಲುಕಿದ್ದ ದೋಣಿಯ ಪಯಣ ದಿಕ್ಕು ತಪ್ಪಿತ್ತು. ಹಾಗಾಗಿ ಐಶ್ವರ್ಯಾ ಮುಂದಿನ ವಿದ್ಯಾಭ್ಯಾಸ ಪ್ರಶ್ನಾರ್ಥಕವಾಗಿತ್ತು.

    ರಜೆ ಹಿನ್ನೆಲೆ ಫೆಬ್ರವರಿಯಲ್ಲಿ ಐಶ್ವರ್ಯಾ ಊರಿಗೆ ಬಂದಿದ್ದಳು. ತದನಂತರ ಲಾಕ್‍ಡೌನ್ ನಿಂದಾಗಿ ಗ್ರಾಮದಲ್ಲಿಯೇ ಉಳಿದುಕೊಂಡಿದ್ದಳು. ಕೆಲ ದಿನಗಳ ಹಿಂದೆ ಶಿಷ್ಯವೇತನ 80 ಸಾವಿರ ಸಿಗಲಿದೆ ಎಂದು ಮಗಳು ಹೇಳಿದ್ದಳು. ಆದ್ರೆ ಕೊರೊನಾದಿಂದಾಗಿ ಹಣ ಜಮೆ ಆಗಿರಲಿಲ್ಲ. ಬಿಎಸ್‍ಸಿ ಯಲ್ಲಿ ಗಣಿತ ವಿಷಯ ಆಯ್ಕೆ ಮಾಡಿಕೊಂಡಿದ್ದ ಐಶ್ವರ್ಯಾಗೆ ಮೊಬೈಲಿನಲ್ಲಿ ಆನ್‍ಲೈನ್ ಕ್ಲಾಸ್ ಸರಿಯಾಗುತ್ತಿರಲಿಲ್ಲ ಎಂದು ಐಶ್ವರ್ಯಾ ತಂದೆ ಶ್ರೀನಿವಾಸ್ ರೆಡ್ಡಿ ಹೇಳುತ್ತಾರೆ.

    ದೆಹಲಿಯಲ್ಲಿ ಸೀಟ್ ಸಿಕ್ಕಾಗ ಇದ್ದ ಮನೆಯನ್ನ ಅಡವಿಟ್ಟು 2 ಲಕ್ಷ ರೂ. ಸಾಲ ಪಡೆದು ಮಗಳನ್ನ ಕಾಲೇಜಿಗೆ ಕಳುಹಿಸಿದೆ. ಇನ್ನೂ ಆ ಸಾಲಕ್ಕೆ ಬಡ್ಡಿ ಪಾವತಿಸುತ್ತಿದ್ದೇನೆ. ಆನ್‍ಲೈನ್ ಕ್ಲಾಸ್ ಗಾಗಿ ಸೆಕೆಂಡ್ ಹ್ಯಾಂಡ್ ಲ್ಯಾಪ್‍ಟಾಪ್ ಕೊಡಿಸುವಂತೆ ಮಗಳು ಹೇಳಿದ್ದಳು. ಸ್ವಲ್ಪ ದಿನಗಳ ನಂತರ ಕೊಡಿಸುವೆ ಎಂದು ಹೇಳಿದ್ದೆ. ಆದ್ರೆ ಮತ್ತೆ ಯಾವತ್ತು ಐಶ್ವರ್ಯಾ ಲ್ಯಾಪ್‍ಟ್ಯಾಪ್ ಕೇಳಿರಲಿಲ್ಲ. ಪದವಿ ಬಳಿಕ ಐಎಎಸ್ ಆಗಬೇಕೆಂದ ಕನಸು ಕಂಡಿದ್ದಳು ಎಂದು ತಂದೆ ಕಣ್ಣೀರು ಹಾಕುತ್ತಾರೆ.

  • ಅರ್ಜುನ್ ಸರ್ಜಾ ಮಗಳು ಐಶ್ವರ್ಯಾಗೆ ಕೊರೊನಾ ಪಾಸಿಟಿವ್

    ಅರ್ಜುನ್ ಸರ್ಜಾ ಮಗಳು ಐಶ್ವರ್ಯಾಗೆ ಕೊರೊನಾ ಪಾಸಿಟಿವ್

    ಚೆನ್ನೈ: ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಪುತ್ರಿ ಐಶ್ವರ್ಯಾ ಅರ್ಜುನ್‍ಗೆ ಕೊರೊನಾ ಪಾಸಿಟಿವ್ ಬಂದಿದೆ.

    ಇತ್ತೀಚೆಗಷ್ಟೆ ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾಗೆ ಕೊರೊನಾ ದೃಢವಾಗಿತ್ತು. ತಕ್ಷಣ ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ಸಾಗಿ ಕ್ವಾರಂಟೈನ್ ಆಗಿದ್ದಾರೆ. ಇದೀಗ ಐಶ್ವರ್ಯಾಗೂ ಕೊರೊನಾ ಸೋಂಕು ದೃಢವಾಗಿದ್ದು, ಈ ಬಗ್ಗೆ ಸ್ವತಃ ಐಶ್ವರ್ಯಾ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

    “ನಾನು ಇತ್ತೀಚೆಗೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನಾನು ಈಗ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ಅಲ್ಲದೇ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ” ಎಂದು ಕೊರೊನಾ ಇರುವ ಬಗ್ಗೆ ತಿಳಿಸಿದ್ದಾರೆ.

    ಅಷ್ಟೇ ಅಲ್ಲದೇ “ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ. ಎಲ್ಲರೂ ಮನೆಯಲ್ಲಿಯೇ ಸುಕ್ಷಿತವಾಗಿರಿ. ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಶ್ರೀಘದಲ್ಲೇ ನಾನು ಗುಣಮುಖವಾಗುತ್ತೇನೆ” ಎಂದು ಐಶ್ವರ್ಯಾ ಹೇಳಿದ್ದಾರೆ.

    ಜುಲೈ 15 ರಂದು ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾಗೆ ದೃಢವಾಗಿತ್ತು. ತಕ್ಷಣ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ತಮ್ಮ ಜೊತೆ ಸಂಪರ್ಕ ಹೊಂದಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು. ಇಬ್ಬರಿಗೂ ಕೊರೊನಾ ಗುಣಲಕ್ಷಣ ಕಡಿಮೆ ಇದ್ದುದ್ದರಿಂದ ವೈದ್ಯರು ಮನೆಯಲ್ಲಿಯೇ ಕ್ವಾರಂಟೈನ್ ಆಗುವಂತೆ ಸೂಚಿಸಿದ್ದಾರೆ. ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಇಬ್ಬರು ಮನೆಯಲ್ಲಿದ್ದಾರೆ.

    ನಟ ಧ್ರುವ ಡಿಸ್ಚಾರ್ಜ್ ಆದ ದಿನವೇ ಇನ್‍ಸ್ಟಾಗ್ರಾಂನಲ್ಲಿ ಲೈವ್ ಬರುವ ಮೂಲಕ ಅಭಿಮಾನಿಗಳ ಜೊತೆ ಮಾತನಾಡಿದ್ದರು. “ನಾನು ಮತ್ತು ಪ್ರೇರಣಾ ಆರೋಗ್ಯವಾಗಿದ್ದೇವೆ. ಕ್ಯಾಲರಿ ಕರಗಿಸಬೇಕಾಗಿದೆ. ಹೀಗಾಗಿ ಮನೆಯಲ್ಲಿಯೇ ಟ್ರೆಡ್‍ಮಿಲ್ ಇತ್ತು ಹಾಗಾಗಿ ವರ್ಕೌಟ್ ಮಾಡುತ್ತಿದ್ದೀನಿ. ಆರಂಭದಲ್ಲಿ ಸ್ವಲ್ಪ ಸುಸ್ತಾಗುತ್ತೆ ಅಷ್ಟೆ. ಪ್ರೇರಣಾ ಅವರಿಗೂ ವರ್ಕೌಟ್ ಮಾಡಿಸಬೇಕು ಎಂದು ಹೇಳಿದ್ದರು.

  • ಡಿಕೆಶಿ ಕುಟುಂಬಕ್ಕೆ ಬಲೆ ಬೀಸಿದ ಇಡಿ- ಡಿಕೆಶಿ ಫ್ಯಾಮಿಲಿಯ ಹಣಕಾಸು ವ್ಯವಹಾರವೇ ಸೋಜಿಗ!

    ಡಿಕೆಶಿ ಕುಟುಂಬಕ್ಕೆ ಬಲೆ ಬೀಸಿದ ಇಡಿ- ಡಿಕೆಶಿ ಫ್ಯಾಮಿಲಿಯ ಹಣಕಾಸು ವ್ಯವಹಾರವೇ ಸೋಜಿಗ!

    ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರರಕಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ಮತ್ತಷ್ಟು ವಿಚಾರಣೆಗೆ ನಡೆಸಿರುವ ಇಡಿ ಸದ್ಯ ಡಿಕೆಶಿ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೂ ನೋಟಿಸ್ ಜಾರಿ ಮಾಡಿದೆ.

    ಡಿಕೆ ಶಿವಕುಮಾರ್ ಅವರ ಕುಟುಂಬವನ್ನು ಬಿಟ್ಟು ಬಿಡದಂತೆ ಕಾಡುತ್ತಿರುವ ಇಡಿ ಅಧಿಕಾರಿಗಳು ನಾಳೆಯೇ ವಿಚಾರಣೆ ಹಾಜರಾಗುವಂತೆ ತಾಯಿ ಗೌರಮ್ಮ ಅವರಿಗೆ ಸೂಚಿಸಿದ್ದಾರೆ. ಉಷಾ ಅವರಿಗೆ ನೀಡಲಾಗಿರುವ ನೋಟಿಸ್‍ನಲ್ಲಿ ಗುರುವಾರ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕುಟುಂಬ ಸದಸ್ಯರಿಗೆ ನೋಟಿಸ್ ಜಾರಿ ಮಾಡಲು ಕುಟುಂಬ ಸದಸ್ಯರ ನಡುವೆ ನಡೆದಿರುವ ಹಣದ ವ್ಯವಹಾರವೇ ಕಾರಣ ಎನ್ನಲಾಗಿದ್ದು, ತಾಯಿ-ಮಗನಿಗೆ, ಮಗ-ತಾಯಿಗೆ, ಪತಿ-ಪತ್ನಿಗೆ, ಮಾವನಿಂದ ಸೊಸೆಗೆ ಸಾಲದ ವ್ಯವಹಾರ ನಡೆದಿರುವ ಕುರಿತು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

    ಅಜ್ಜಿ-ಮೊಮ್ಮಗಳ ವ್ಯವಹಾರ: ಡಿಕೆಶಿ ಕುಟುಂಬದಲ್ಲಿ ನಡೆದಿರುವ ಹಣಕಾಸಿನ ವ್ಯವಹಾರ ಬಗ್ಗೆ ಇಡಿ ಅಧಿಕಾರಿಗಳು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದು, ಡಿಕೆಶಿ ತಾಯಿ ಗೌರಮ್ಮ ಅವರು ಮೊಮ್ಮಗಳ ನಡುವೆ ಕೋಟಿ ರೂ. ವ್ಯವಹಾರ ನಡೆದಿದೆ. ಮೊದಲಿಗೆ ಮೊಮ್ಮಗಳು ಐಶ್ವರ್ಯ ಅವರ ಖಾತೆಗೆ 2018 ಜೂನ್ ತಿಂಗಳಿನಲ್ಲಿ ಅಜ್ಜಿ ಗೌರಮ್ಮ ಅವರು 3 ಕೋಟಿ ರೂ.ಗಳನ್ನು ಜಮೆ ಮಾಡಿದ್ದಾರೆ. ಅಲ್ಲದೇ ಐಶ್ವರ್ಯಾ ಹೆಸರಿಗೆ 2001 ರಲ್ಲಿ ಉತ್ತರಹಳ್ಳಿಯಲ್ಲಿದ್ದ 3 ಎಕ್ರೆ ಭೂಮಿಯನ್ನು ಗಿಫ್ಟ್ ನೀಡಿ ಬರೆದುಕೊಟ್ಟಿದ್ದರು. ಆ ಬಳಿಕ 2002ರಲ್ಲಿ ಹೊಸಕೆರೆಹಳ್ಳಿಯ 3 ಎಕರೆ ಭೂಮಿಯನ್ನು ಗಿಫ್ಟ್ ನೀಡಿದ್ದರು. ಇದರ ನಡುವೆಯೇ ಐಶ್ವರ್ಯಾಗೆ ಮೂರು ನಿವೇಶನಗಳನ್ನ ಗೌರಮ್ಮ ನೀಡಿದ್ದರು. ಒಟ್ಟು 193 ಕೋಟಿ ರೂ.ಗಳನ್ನು ಐಶ್ವರ್ಯಾ ಅವರ ಖಾತೆಗೆ ಜಮೆ ಮಾಡಿದ್ದರು.

    ಅಮ್ಮ-ಮಕ್ಕಳ ನಡುವಿನ ವ್ಯವಹಾರ: ಮೊಮ್ಮಗಳಿಗೆ ಭೂಮಿ ಹಾಗೂ ಹಣವನ್ನು ನೀಡಿದ್ದ ಗೌರಮ್ಮ ಅವರು ಪುತ್ರ ಡಿಕೆ ಶಿವಕುಮಾರ್ ಅವರಿಂದ ಎರಡು ಹಂತದಲ್ಲಿ 22.11 ಕೋಟಿ ರೂ. ಹಾಗೂ 15 ಕೋಟಿ ರೂ. ಸಾಲ ಪಡೆದಿದ್ದಾರೆ. ಆದರೆ ಮತ್ತೆ ಡಿಕೆಶಿ ಅವರಿಗೆ 35 ಲಕ್ಷ ರೂ. ಗಳನ್ನು ಗೌರಮ್ಮ ಸಾಲ ನೀಡಿದ್ದಾರೆ. ಅಲ್ಲದೇ ಮತ್ತೊಬ್ಬ ಪುತ್ರ ಡಿಕೆ ಸುರೇಶ್‍ರಿಂದ ಗೌರಮ್ಮ ಅವರಿಗೆ 4.89 ಕೋಟಿ ರೂ. ಸಾಲ ನೀಡಲಾಗಿದೆ.

    ಬೇನಾಮಿ ಆಸ್ತಿ ತನಿಖೆ: ಕುಟುಂಬದ ಸದಸ್ಯರ ನಡುವೆಯೇ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆ ತನಿಖೆ ನಡೆಸಿದಿದೆ. ಅಲ್ಲದೇ ಇಡಿ ಅಧಿಕಾರಿಗಳಿಗೆ ಗೌರಮ್ಮರ ಹೆಸರಲ್ಲಿ 273 ಕೋಟಿ ರೂ. ಬೇನಾಮಿ ಆಸ್ತಿ ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಡಿಕೆಶಿ, ಡಿಕೆ ಸುರೇಶ್, ಗೌರಮ್ಮ ನಡುವೆ ಒಟ್ಟು 43 ಕೋ. ರೂ. ಸಾಲ ವ್ಯವಹಾರ ನಡೆದಿದೆ. 2005ರಲ್ಲಿ ಹೊಸಕೆರೆಹಳ್ಳಿಯಲ್ಲಿ 1 ಕೋಟಿ ರೂ. ಗಳಿಗೆ 4.9 ಗುಂಟೆ ಜಮೀನುನನ್ನು ಗೌರಮ್ಮ ಹೆಸರಲ್ಲಿ ಖರೀದಿ ಮಾಡಲಾಗಿದ್ದು, ಆದರೆ ಆದಾದ 2ನೇ ವರ್ಷದಲ್ಲಿ ಅಂದರೆ 2007ರಲ್ಲಿ ಇದೇ ಜಮೀನನ್ನು 11 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ. ಉಳಿದಂತೆ ಗೌರಮ್ಮ ಅವರ ಹೆಸರಿನಲ್ಲಿ ಯಲಹಂಕದಲ್ಲಿ 20 ಎಕರೆ 9 ಗುಂಟೆ ಜಮೀನು, ಉತ್ತರಹಳ್ಳಿಯಲ್ಲಿ 1.7 ಗುಂಟೆ ಜಮೀನು, ಕನಕಪುರದಲ್ಲಿ 3 ಕಲ್ಲಿನ ಕ್ವಾರಿ, 23 ಗ್ರಾನೈಟ್ ಬ್ಯುಸಿನೆಸ್ ಸಂಸ್ಥೆಗಳಿಗೆ.

    ಡಿಕೆಶಿ ಪತ್ನಿ ಉಷಾಗೆ ಸಮನ್ಸ್ ಯಾಕೆ?
    ಮೊಮ್ಮಗಳು ಹಾಗೂ ಇಬ್ಬರ ಪುತ್ರರ ನಡುವೆ ತಾಯಿ ಗೌರಮ್ಮ ಅವರು ನಡೆಸಿರುವ ವ್ಯವಹಾರದಂತೆಯೇ ಡಿಕೆಶಿ ಪತ್ನಿ ಉಷಾ ಅವರ ಹೆಸರಿನಲ್ಲೂ ಹಣದ ವ್ಯವಹಾರ ನಡೆದಿದೆ. ಪತಿ ಡಿಕೆ ಶಿವಕುಮಾರ್ ಅವರಿಗೆ ಪತ್ನಿ ಉಷಾ ಅವರು 2.60 ಕೋಟಿ ರೂ. ಸಾಲ ನೀಡಿದ್ದಾರೆ. ಮಾವ ಕೆಂಪೇಗೌಡರಿಂದ 5.42 ಕೋಟಿ ರೂ. ಹಾಗೂ ಅತ್ತೆ ಗೌರಮ್ಮರಿಂದ 15.86 ಕೋಟಿ ಸಾಲ ಪಡೆದಿದ್ದಾರೆ.

    ಉಳಿದಂತೆ ಪುತ್ರಿ ಐಶ್ವರ್ಯಾ ಅವರಿಗೆ 2.70 ಕೋಟಿ ರೂ. ಹಾಗೂ ಪತಿಯ ಸಹೋದರ ಡಿಕೆ ಸುರೇಶ್‍ಗೆ 11 ಕೋಟಿ ಸಾಲ ನೀಡಿದ್ದಾರೆ. ಅಲ್ಲದೇ 13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಖರೀದಿಯನ್ನು ಉಷಾ ಅವರು ಮಾಡಿದ್ದು, ಶ್ರೀರಾಮ್ ಪ್ರಾಪರ್ಟೀಸ್‍ನಿಂದ ದಾಖಲೆ ಇಲ್ಲದ 5 ಕೋಟಿ ರೂ, ಹಣವನ್ನು ಸ್ವೀಕಾರ ಮಾಡಿದ್ದಾರೆ. ಶೋಭಾ ಡೆವಲಪರ್ಸ್, ಇಂದ್ರಪ್ರಸ್ತ ಡೆವಲಪರ್ಸ್ ನಲ್ಲಿ ಶೇ.40ರಷ್ಟು ಷೇರು ಖರೀದಿ ಸೇರಿದಂತೆ ಸಲಾರ್‍ಪುರಿಯಾ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ಪಾಲು ಹೊಂದಿದ್ದಾರೆ. ಉಳಿದಂತೆ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಮನೆ ನಿರ್ಮಾಣಕ್ಕೆ ಫೆಡರಲ್ ಬ್ಯಾಂಕ್‍ನಲ್ಲಿ 7.61 ಕೋಟಿ ರೂ. ಹಾಗೂ ಆರ್.ಟಿ.ನಗರ ಫೆಡರಲ್ ಬ್ಯಾಂಕ್‍ನಲ್ಲಿ 4 ಕೋಟಿ 25 ಲಕ್ಷ ಮನೆ ಸಾಲ. ಶೋಭಾ ಡೆವಲಪರ್ಸ್‍ನಿಂದ 8.48 ಕೋಟಿ ರೂ.ಗಳನ್ನು ಉಷಾ ಅವರು ಸಾಲ ಪಡೆದಿದ್ದಾರೆ. ಈ ಹಣಕಾಸಿನ ವ್ಯವಹಾರ ಬಗ್ಗೆಯೂ ಇಡಿ ಅಧಿಕಾರಿಗಳು ವಿಚಾರಣೆ ವೇಳೆ ಮಾಹಿತಿ ಪಡೆಯುವ ಸಾಧ್ಯತೆ ಇದೆ.

  • ಒಕ್ಕಲಿಗರಿಗೆ ಜಮೀನು ಹೆಚ್ಚಿರುತ್ತದೆ, ಮೌಲ್ಯ ಹೆಚ್ಚಾಗಿದ್ದರಿಂದ ಅಕ್ರಮ ಹೇಗಾಗುತ್ತೆ – ಸಿಂಘ್ವಿ ವಾದ

    ಒಕ್ಕಲಿಗರಿಗೆ ಜಮೀನು ಹೆಚ್ಚಿರುತ್ತದೆ, ಮೌಲ್ಯ ಹೆಚ್ಚಾಗಿದ್ದರಿಂದ ಅಕ್ರಮ ಹೇಗಾಗುತ್ತೆ – ಸಿಂಘ್ವಿ ವಾದ

    ನವದೆಹಲಿ: ನ್ಯಾಯಾಂಗ ಬಂಧನದಲ್ಲಿರುವ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆಯಾಗಿದೆ.

    ಇಂದು ಮಧ್ಯಾಹ್ನ 3.30ಕ್ಕೆ ರೋಸ್ ಅವೆನ್ಯೂ ನ್ಯಾಯಾಲಯ ಸಮುಚ್ಚಯದ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಬೇಕಿತ್ತು. ಆದರೆ ಇಡಿ ಪರ ವಕೀಲ ಹೆಚ್ಚುವರಿ ಸಾಲಿಸಿಟರ್ ಜನರಲ್ ನಟರಾಜ್ ಸರಿಯಾದ ಸಮಯಕ್ಕೆ ಆಗಮಿಸಿರಲಿಲ್ಲ. ಕೊನೆಗೆ ನಟರಾಜ್ ಗೈರಲ್ಲಿ ಮಧ್ಯಾಹ್ನ 3.45ಕ್ಕೆ ಜಾಮೀನು ಅರ್ಜಿಯ ವಿಚಾರಣೆ ಆರಂಭವಾಯಿತು.

    ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ, ಮಗಳು ಐಶ್ವರ್ಯ ಹೆಸರಿನಲ್ಲಿರುವ 108 ಕೋಟಿ ಆಸ್ತಿ ಸಾಲದಲ್ಲಿದೆ. ಸ್ನೇಹಿತರ ಜೊತೆ ಬ್ಯಾಂಕ್ ಗಳು ಇದಕ್ಕೆ ಸಾಲ ನೀಡಿವೆ. ಇದನ್ನು ಅಕ್ರಮ ಹಣ ಎಂದು ಹೇಗೆ ಹೇಳುತ್ತೀರಿ. ಚುನಾವಣಾ ಆಯೋಗಕ್ಕೆ ಶಿವಕುಮಾರ್ ಈ ಎಲ್ಲ ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ತಪ್ಪು ಮಾಹಿತಿ ನೀಡಿದರೆ ಶಾಸಕ ಸ್ಥಾನದಿಂದ ಅನರ್ಹರಾಗುತ್ತಾರೆ. ಮಾರುಕಟ್ಟೆ ಮೌಲ್ಯ ಹೆಚ್ಚಳವಾದ ಹಿನ್ನೆಲೆಯಲ್ಲಿ ಆಸ್ತಿ ಮೌಲ್ಯ ಹೆಚ್ಚಾಗಿದೆ ಎಂದು ಕೋರ್ಟ್ ಗಮನಕ್ಕೆ ತಂದರು.

    ಶಿವಕುಮಾರ್ ಒಕ್ಕಲಿಗ ಸಮುದಾಯದವರಾಗಿದ್ದು, ಕರ್ನಾಟಕದಲ್ಲಿ ಸಾಧಾರಣವಾಗಿ ಒಕ್ಕಲಿಗರಿಗೆ ಜಮೀನು ಹೆಚ್ಚಾಗಿರುತ್ತದೆ. ಒಕ್ಕಲಿಗರಿಗೆ ಕೃಷಿಯೇ ಪ್ರಧಾನವಾದ ಉದ್ಯೋಗವಾಗಿದೆ. ಈ ಕಾರಣಕ್ಕೆ ಕೃಷಿ ಆದಾಯ ಹೆಚ್ಚಿದ್ದು, ಜಮೀನು ಮೌಲ್ಯ ಹೆಚ್ಚಾಗುತ್ತಾ ಹೋಗುತ್ತದೆ. ಇದನ್ನು ಅಕ್ರಮ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಈ ವೇಳೆ ದೆಹಲಿ ಸುತ್ತಮುತ್ತಲಿನ ಪ್ರದೇಶಗಳ ಮೌಲ್ಯಗಳ ಹೆಚ್ಚಳದ ಬಗ್ಗೆ ಉದಾಹರಣೆ ನೀಡಿದ ಅವರು ಮೊದಲು ಮೌಲ್ಯ ಲಕ್ಷದಲ್ಲಿತ್ತು. ಆಮೇಲೆ 8 ಕೋಟಿಗೆ ಏರಿಕೆ ಆಗಿದ್ದು, ಇನ್ನು ಮತ್ತಷ್ಟು ಏರಿಕೆ ಆಗಬಹುದು ಎಂದು ತಿಳಿಸಿದರು.

    ಶರ್ಮಾ ಟ್ರಾವೆಲ್ಸ್ 50 ವರ್ಷದ ಹಳೆಯದಾಗಿದ್ದು, ಶರ್ಮಾ ಅವರ ಸಾವಿನ ಬಳಿಕ ಸುನೀಲ್ ಶರ್ಮಾ ವ್ಯವಹಾರ ನಡೆಸುತ್ತಿದ್ದಾರೆ. ಸುನಿಲ್ ಶರ್ಮಾ ಅವರ ಚಾಲಕ ರಾಜೇಂದ್ರ ಮನೆಗೆ ದಾಳಿಯಾದಾಗ ಸಿಕ್ಕಿದ ಡೈರಿಯಲ್ಲಿ ಅಂಕಿ ಅಂಶ ಸಿಕ್ಕಿರಬಹುದು. ಆದರೆ ಆ ಡೈರಿಯಲ್ಲಿ ಉಲ್ಲೇಖಿಸಲಾದ ಹಣ ಅಕ್ರಮಲ್ಲ. ಶರ್ಮಾ ಅವರ ಬಳಿ 150-200 ಬಸ್ಸುಗಳು ಇದೆ. ವ್ಯವಹಾರದ ರೂಪದಲ್ಲಿ ಬರೆಯಲಾದ ಅಂಕಿ ಸಂಖ್ಯೆಗಳನ್ನು ಡಿಕೆ ಶಿವಕುಮಾರ್ ಅವರ ಅಕ್ರಮ ಹಣ ಎಂದು ಪರಿಗಣಿಸಲು ಸಾಧ್ಯವಿಲ್ಲ. ಸಚಿನ್ ನಾರಾಯಣ್ ಮತ್ತು ಸುನಿಲ್ ಶರ್ಮಾ ಇಬ್ಬರೂ ತೆರಿಗೆ ಕಟ್ಟುತ್ತಾರೆ. ಸಚಿನ್ ನಾರಾಯಣ್ ಉದ್ಯಮಿಯಾಗಿ ಪ್ರಸಿದ್ಧಿ ಪಡೆದಿದ್ದು 30 ಮದ್ಯದ ಅಂಗಡಿಗಳಿವೆ ಎಂದು ತಿಳಿಸಿದರು.

    ವಿಚಾರಣೆಗೆ ನಟರಾಜ್ ಅವರು ಗೈರಾದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಬೇಕೆಂದು ಇಡಿ ಪರ ವಕೀಲರು ಮನವಿ ಮಾಡಿದರು. ಈ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದ ಸಿಂಘ್ವಿ ವಿಚಾರಣೆಯನ್ನು ಮುಂದೂಡಬಾರದು ಎಂದು ಕೇಳಿಕೊಂಡರು. ಕೊನೆಗೆ ನ್ಯಾ. ಅಜಯ್ ಕುಮಾರ್ ಕುಹಾರ್ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.

    ವಿಚಾರಣೆ ಮುಂದೂಡಿದ ಬಳಿಕ 4.16ರ ವೇಳೆಗೆ ಕೋರ್ಟ್ ಹಾಲ್ ನತ್ತ ಇಡಿ ಪರ ವಕೀಲ ಕೆ.ಎಂ ನಟರಾಜ್ ಆಗಮಿಸಿದರು. ಈ ವೇಳೆ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆಯಾದ ವಿಚಾರವನ್ನು ಇಡಿ ಅಧಿಕಾರಿಗಳು ನಟರಾಜ್ ಅವರಿಗೆ ತಿಳಿಸಿದರು.

    ನಿನ್ನೆ ನ್ಯಾ. ಅಜಯ್ ಕುಮಾರ್ ಕುಹಾರ್ ಅವರು ಡಿಕೆ ಶಿವಕುಮಾರ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದ್ದರು. ತಮ್ಮ ಆದೇಶದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ಕೂಡಲೇ ಆರ್‍ಎಂಎಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಬೇಕು. ವೈದ್ಯರು ಗುಣಮುಖರಾಗಿದ್ದಾರೆ ಎಂದು ತಿಳಿಸಿದರೆ ಶಿವಕುಮಾರ್ ಅವರನ್ನು ತಿಹಾರ್ ಜೈಲಿಗೆ ಕಳುಹಿಸಬಹುದು ಎಂದು ಸೂಚಿಸಿದ್ದರು.

  • ಐಶ್ವರ್ಯಾ ಖಾತೆಯಿಂದ 108 ಕೋಟಿ ವರ್ಗಾವಣೆ – ಕೋರ್ಟಿಗೆ ಇಡಿ ಮಾಹಿತಿ

    ಐಶ್ವರ್ಯಾ ಖಾತೆಯಿಂದ 108 ಕೋಟಿ ವರ್ಗಾವಣೆ – ಕೋರ್ಟಿಗೆ ಇಡಿ ಮಾಹಿತಿ

    ನವದೆಹಲಿ: ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಖಾತೆಯಿಂದ 108 ಕೋಟಿ ರೂ. ಹಣ ವರ್ಗಾವಣೆಯಾಗಿದೆ ಎನ್ನುವ ಸ್ಫೋಟಕ ವಿಚಾರ ಡಿಕೆಶಿ ಜಾಮೀನು ಅರ್ಜಿಯ ವೇಳೆ ತಿಳಿದು ಬಂದಿದೆ.

    ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ರಾಮ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಕುಮಾರ್ ಅವರನ್ನು ಸಂಜೆ 4 ಗಂಟೆಗೆ ಇಡಿ ಅಧಿಕಾರಿಗಳು ರೋಸ್ ಅವೆನ್ಯೂ ನ್ಯಾಯಾಲಯ ಸಮುಚ್ಚಯದ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

    ಡಿಕೆ ಶಿವಕುಮಾರ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಬೇಕೆಂದು ಅಭಿಷೇಕ್ ಮನು ಸಿಂಘ್ವಿ, ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರೆ ಜಾರಿ ನಿರ್ದೇಶನಾಲಯದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ನಟರಾಜ್ ವಾದಿಸಿದರು. ಎರಡು ಕಡೆಯ ವಾದ ಆಲಿಸಿದ ನ್ಯಾ. ಅಜಯ್ ಕುಮಾರ್ ಕುಹಾರ್ ಅ.1ರವರೆಗೆ ನ್ಯಾಯಾಂಗ ಬಂಧನ ವಿಧಿಸಿದರು. ತಮ್ಮ ಆದೇಶದಲ್ಲಿ ಕೂಡಲೇ ಡಿಕೆಶಿಯನ್ನು ಆಸ್ಪತ್ರೆಗೆ ದಾಖಲಿಸಬೇಕು. ಒಂದು ವೇಳೆ ಆರೋಗ್ಯ ಸರಿ ಇದ್ದು ಡಿಸ್ಚಾರ್ಜ್ ಮಾಡಲು ವೈದ್ಯರು ಅನುಮತಿ ನೀಡಿದರೆ ತಿಹಾರ್ ಜೈಲಿಗೆ ಕಳುಹಿಸಬೇಕು ಎಂದು ಸೂಚಿಸಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದರು. ಇದನ್ನು ಓದಿ: ಡಿಕೆಶಿ ಆಪ್ತೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ಗೆ ಇಡಿಯಿಂದ ಸಮನ್ಸ್

    ಇಡಿ ವಾದ ಏನಿತ್ತು?
    ಐಶ್ವರ್ಯ ಖಾತೆಯಿಂದ 108 ಕೋಟಿ ರೂ. ವರ್ಗಾವಣೆ ಆಗಿದೆ. ಪುತ್ರಿಗೆ 24-25 ವರ್ಷವಾಗಿದ್ದರಿಂದ ಇದು ನಂಬಲೂ ಸಾಧ್ಯವಿಲ್ಲ. ಆದರೂ ಈ ಸತ್ಯವನ್ನು ನಂಬಲೇಬೇಕು. ಚಿಕ್ಕ ವಯಸ್ಸಿನಲ್ಲಿ ಈ ಮಟ್ಟದ ಆರ್ಥಿಕ ವ್ಯವಹಾರ ಹೇಗೆ ಸಾಧ್ಯ? ಇದು ಕೇವಲ ಬರೀ 41 ಲಕ್ಷ ರೂ.ಗೆ ಸಂಬಂಧಿಸಿದಲ್ಲ ಸಾಕಷ್ಟು ಆಳವಾಗಿ ತನಿಖೆ ಮಾಡಬೇಕು. ಬೇರೆ ಬೇರೆ ಖಾತೆಯಿಂದ ಸಾಕಷ್ಟು ದೊಡ್ಡ ಪ್ರಮಾಣದ ಹಣ ವರ್ಗಾವಣೆ ಆಗಿದೆ. 800 ಕೋಟಿ ಅಕ್ರಮ ಹಣ ವರ್ಗಾವಣೆಯಾಗಿದೆ. ಇದು ಅಕ್ರಮ ಹಣ ವರ್ಗಾವಣೆಯ ಕರಳತೆಯನ್ನು ತೋರಿಸುತ್ತದೆ. ಹೀಗಾಗಿ ಜಾಮೀನು ಮಂಜೂರು ಮಾಡಬಾರದು ಎಂದು ನಟರಾಜ್ ವಾದಿಸಿದರು.

    143 ಕೋಟಿ ರೂ. ದಾಖಲೆ ಇಲ್ಲದ ನಗದು ಹಣ ಪತ್ತೆಯಾಗಿದೆ. ಇದು ಕಾನೂನು ಬಾಹಿರ ಹಣವಾಗಿದ್ದು ಅಕ್ರಮವಾಗಿ ವರ್ಗಾವಣೆಯಾಗಿದೆ. ಈ ಹಣ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿದೆ. ಬ್ಯಾಂಕ್ ವಿವರಗಳನ್ನು ಸಂಗ್ರಹಿಸಿದಾಗ 317 ಬ್ಯಾಂಕ್ ಖಾತೆಗಳಲ್ಲಿ ಅವವ್ಯಹಾರ ನಡೆದಿರುವುದು ತಿಳಿಯುತ್ತದೆ ಎಂದಾಗ ಈ ದಾಖಲೆಗಳನ್ನು ನಮಗೆ ನೀಡಿಲ್ಲ ಎಂದು ಸಿಂಘ್ವಿ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ನಟರಾಜ್ ಅವರು, ಈಗ ಎಲ್ಲ ದಾಖಲೆಗಳು, ವಿವರಗಳನ್ನು ಬಹಿರಂಗಪಡಿಸಲು ಇದು ಟ್ರಯಲ್ ಕೋರ್ಟ್ ಅಲ್ಲ ಎಂದು ಉತ್ತರಿಸಿದರು. ಇದನ್ನು ಓದಿ: ಡಿಕೆಶಿ 317 ಖಾತೆ, 800 ಕೋಟಿ ಆಸ್ತಿ ಪತ್ತೆ

    ಈ ಪ್ರಕರಣಕ್ಕೆ ಸಾಕಷ್ಟು ಮಹತ್ವ ಇದ್ದು, ಗಿಫ್ಟ್ ಡಿಡ್ ಮೂಲಕ ಪಡೆದು ಮತ್ತೊಬ್ಬರಿಗೆ ವರ್ಗಾವಣೆಯಾಗಿದೆ. ಒಂದು ಕಡೆಯಿಂದ ಪಡೆದು ಮತ್ತೊಂದು ಕಡೆ ಖಾತೆಗಳ ಮೂಲಕ ಹಣ ವರ್ಗಾವಣೆಯಾಗಿದೆ. ಸೆ.13 ರಂದು ನಾವು 4 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದೇವು. ನಮ್ಮ ಕಸ್ಟಡಿಗೆ ನೀಡಿದ್ದರೂ ಶಿವಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದರಿಂದ ವಿಚಾರಣೆ ನಡೆಸಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಬೇಡಿ ಎಂದು ನಟರಾಜ್ ಮನವಿ ಮಾಡಿಕೊಂಡರು.

    ಡಿಕೆಶಿ ಪರ ವಕೀಲರ ವಾದ ಹೀಗಿತ್ತು:
    15 ಕ್ಕಿಂತ ಹೆಚ್ಚು ದಿನ ಪೋಲಿಸ್ ಕಸ್ಟಡಿಯಲ್ಲಿ ಕೊಡಲು ಸಾಧ್ಯವಿಲ್ಲ. ಅವರ ಆರೋಗ್ಯ ಅಪಾಯದಲ್ಲಿದೆ. ವಿಚಾರಣೆ ಸಾಧ್ಯವಾಗಿಲ್ಲ ಎಂದು ನ್ಯಾಯಾಂಗ ಬಂಧನ ಕೇಳುವುದು ಸರಿಯಲ್ಲ. ಇಡಿ ಕಸ್ಟಡಿಯಲ್ಲಿ ವಿಚಾರಣೆ ನಡೆಸದವರು ನ್ಯಾಯಾಂಗ ಬಂಧನದಲ್ಲಿ ವಿಚಾರಣೆ ನಡೆಸುತ್ತಾರಾ? ಆರೋಗ್ಯ ಸಮಸ್ಯೆ ಆಧಾರದ ಮೇಲೆ ಜಾಮೀನು ನೀಡಬೇಕು. 41 ಲಕ್ಷ ರೂ. ಹಣವನ್ನು ಕಕ್ಷಿದಾರರಿಂದ ವಶ ಪಡಿಸಿಕೊಂಡಿದ್ದು ಇದಕ್ಕೆ ಶಿವಕುಮಾರ್ ಉತ್ತರ ನೀಡಿದ್ದಾರೆ.

    ಬೇರೆಯವರ ಬಳಿ ಸಿಕ್ಕ ಹಣಕ್ಕೂ ಡಿಕೆ ಶಿವಕುಮಾರ್ ಅವರನ್ನು ಸೇರಿಸಲಾಗುತ್ತಿದೆ. 8.59 ಕೋಟಿ ಹಣ ಶಿವಕುಮಾರ್ ಅವರದಲ್ಲ. 41 ಲಕ್ಷ ಹೊರತು ಯಾವ ಹಣವೂ ಡಿಕೆ ಶಿವಕುಮಾರ್ ಅವರದ್ದಲ್ಲ. ಇಡಿ ಪೂರ್ವಗ್ರಹ ಪೀಡಿತವಾಗಿ ತನಿಖೆ ನಡೆಸುತ್ತಿದೆ. ನಾಲ್ಕು ಕೋಟಿ ಹೆಚ್ಚುವರಿ ಹಣ ಬಗ್ಗೆ ಹಿಂದೆ ಹೇಳಿರಲಿಲ್ಲ. 50 ಸಾಕ್ಷಿಗಳು ವಿಚಾರಣೆ ನಡೆಸಿದೆ ಎಂದು ಹೇಳಿದೆ. ಆದರೆ ಅವರ ಹೆಸರುಗಳನ್ನು ಬಹಿರಂಗ ಮಾಡುತ್ತಿಲ್ಲ.

    ಶಿವಕುಮಾರ್ 317 ಖಾತೆಗಳು ಹೊಂದಿದ್ದಾರೆ ಎಂದು ಇಡಿ ಆರೋಪ ಮಾಡಿದೆ. ಆದರೆ ಕಳೆದ 10 ವರ್ಷದಿಂದ 20 ಖಾತೆಗಳ ಮೂಲಕ 64 ಲಕ್ಷ ರೂ. ಮಾತ್ರ ವ್ಯವಹಾರ ನಡೆದಿದೆ. 3 ಖಾತೆ ಮೂಲಕ 200 ಕೋಟಿ ವ್ಯವಹಾರ ಆರೋಪ ಆಧಾರ ರಹಿತ. ಮಗಳ ಖಾತೆಯಲ್ಲಿ 65 ಸಾವಿರ ಮಾತ್ರ ಇತ್ತು. 10 ವರ್ಷದಲ್ಲಿ 70 ಲಕ್ಷ ಹಣ ಡಿಕೆ ಸುರೇಶ್ ಖಾತೆಯಲ್ಲಿದೆ. ತಂದೆಯಿಂದ ಆಸ್ತಿ ವರ್ಗಾವಣೆಯಾಗಿದೆ. ಹಿಂದೆ ಇದ್ದ ಆಸ್ತಿಯ ಬೆಲೆ ಈಗ ಹೆಚ್ಚಾಗಿದೆ. ಇದನ್ನು ಅಕ್ರಮ ಆಸ್ತಿ ಎಂದು ಕರೆಯುವುದು ಎಷ್ಟು ಸರಿ? ಆಸ್ತಿ ಬೆಲೆ ಏರಿಕೆ ಯಿಂದ ಸಂಪತ್ತು ಹೆಚ್ಚಾಗಿದೆ.

    ಎರಡು ವರ್ಷದ ಹಿಂದೆ ನಡೆದ ದಾಳಿ ವೇಳೆ 41 ಲಕ್ಷ ರೂ.ಸಿಕ್ಕಿದ್ದು ಅದಕ್ಕೆ ದಾಖಲೆ ನೀಡಲಾಗಿದೆ. ಈಗ ಜೈಲಿನಲ್ಲಿ ಯಾಕೆ ಕೂರಬೇಕು? ಅನಾರೋಗ್ಯ ಸರಿ ಇಲ್ಲದ ಪರಿಣಾಮ ಜಾಮೀನು ನೀಡಲು ಇದು ಅರ್ಹವಾದ ಪ್ರಕರಣವಾಗಿದೆ. ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಬಹುದು. ಏಳು ಬಾರಿ ಶಾಸಕರಾಗಿರುವ ಶಿವಕುಮಾರ್ ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿದ್ದು ಒಂದು ಪಕ್ಷದ ಜೊತೆ ಗುರುತಿಸಿಕೊಂಡಿದ್ದಾರೆ. ಅವರ ಟ್ರ್ಯಾಕ್ ರೆಕಾರ್ಡ್ ನೋಡಿದರೆ ಅವರ ಮೇಲೆ ಯಾವುದೇ ಗುರುತರ ಆರೋಪ ಇಲ್ಲ. ಪ್ರತಿ ವರ್ಷವೂ ತೆರಿಗೆ ಕಟ್ಟಿಕೊಂಡು ಬಂದಿದ್ದಾರೆ. ನಾಲ್ಕು ಕೇಸ್ ನಲ್ಲಿ ಮೂರು ಪ್ರಕರಣ ವಜಾಗೊಂಡಿದ್ದು ವ್ಯಕ್ತಿಯು ಅನಾರೋಗ್ಯ ಪೀಡಿತರಾಗಿದ್ದಾರೆ. ಹೀಗಾಗಿ ಯಾವುದೇ ಷರತ್ತುಗಳನ್ನು ಹಾಕಿ ಜಾಮೀನು ನೀಡಬಹುದು ಎಂದು ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲೇಖಿಸಿದರು.