Tag: ಐಶ್ವರ್ಯ ಮಹದೇವ್

  • ಸಿದ್ದು ಆಪ್ತರ ಪುತ್ರಿ ಎಐಸಿಸಿ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ನೇಮಕ

    ಸಿದ್ದು ಆಪ್ತರ ಪುತ್ರಿ ಎಐಸಿಸಿ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ನೇಮಕ

    ಮೈಸೂರು: ಎಐಸಿಸಿ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರ ಪುತ್ರಿ ಐಶ್ವರ್ಯ ಮಹದೇವ್ ನೇಮಕಗೊಂಡಿದ್ದಾರೆ.

    ಮೈಸೂರು ಜಿಲ್ಲೆಯ ಕೆ.ಆರ್ ನಗರದ ನಿವಾಸಿಯಾಗಿರುವ ಐಶ್ವರ್ಯ ಮಹದೇವ್, ಮಾಜಿ ಶಾಸಕ ದಿ. ಮಂಚನಹಳ್ಳಿ ಮಹದೇವ್ ಅವರ ಪುತ್ರಿ. ಅತಿ ಕಿರಿಯ ವಯಸ್ಸಿನಲ್ಲೇ ಐಶ್ವರ್ಯ ಅವರು ಎಐಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಪಟ್ಟಕ್ಕೇರಿದ್ದಾರೆ.

    ಈ ಹಿಂದೆ ಸಿದ್ದರಾಮಯ್ಯ ಜೊತೆಗೂ ಐಶ್ವರ್ಯ ಮಹದೇವ್ ಗುರುತಿಸಿಕೊಂಡಿದ್ದಾರೆ. ಮಹಿಳಾ ಘಟಕದ ಅಧ್ಯಕ್ಷೆ ಸುಶ್ಮಿತಾ ದೇವ್ ಅವರು ಐಶ್ವರ್ಯ ಮಹದೇವ್ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಬಗ್ಗೆ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪತ್ರಿಕಾ ಪ್ರಕಟಣೆಯನ್ನೂ ಹೊರಡಿಸಿದೆ.