Tag: ಐಶ್ವರ್ಯ ರಾಜೇಶ್

  • ಕನ್ನಡಕ್ಕೆ ಎಂಟ್ರಿ ಕೊಟ್ಟ ದಕ್ಷಿಣ ಭಾರತದ ನಟಿ ಐಶ್ವರ್ಯ ರಾಜೇಶ್

    ಕನ್ನಡಕ್ಕೆ ಎಂಟ್ರಿ ಕೊಟ್ಟ ದಕ್ಷಿಣ ಭಾರತದ ನಟಿ ಐಶ್ವರ್ಯ ರಾಜೇಶ್

    ಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯ ರಾಜೇಶ್ (Aishwarya Rajesh) ಉತ್ತರಕಾಂಡ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಉತ್ತರಕಾಂಡ ಒಂದು ಬಹು ನಿರೀಕ್ಷಿತ ಚಿತ್ರವಾಗಿದ್ದು, ಚಿತ್ರದಲ್ಲಿ ಡಾ. ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ ಐಶ್ವರ್ಯ ಚಿತ್ರದಲ್ಲಿ ಧನಂಜಯ ಅವರ ಜೋಡಿಯಾಗಿ ‘ದುರ್ಗಿ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಆರುಷಿ ಶರ್ಮಾ

    ದಿ ಗ್ರೇಟ್ ಇಂಡಿಯನ್ ಕಿಚನ್, ದಿ ವರ್ಲ್ಡ್ ಫೇಮಸ್ ಲವರ್, ವಡಾ ಚೆನ್ನೈ, ಕಾಕ ಮುತ್ತೈ, ಜೋಮೋಂಟೇ ಸುವಿಶೇಷಂಗಳ್, ಟಕ್ ಜಗದೀಶ್, ವಾನಂ ಕೊಟ್ಟಾಟುಂ ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳಲ್ಲಿ ಐಶ್ವರ್ಯ ತಮ್ಮ ಅಭಿನಯದ ಮೂಲಕ ಛಾಪನ್ನು ಮೂಡಿಸಿ ಇದೀಗ ಕನ್ನಡದ ‘ಉತ್ತರಕಾಂಡ’ (Uttarakaanda Film) ಸಿನಿಮಾಗೆ ಎಂಟ್ರಿ ನೀಡಿದ್ದಾರೆ.

     

    View this post on Instagram

     

    A post shared by KRG Studios (@krgstudios)

    ಪ್ರಸ್ತುತ ಚಿತ್ರದ ಪ್ರಥಮ ಶೆಡ್ಯೂಲ್ ಚಿತ್ರೀಕರಣ ವಿಜಯಪುರದಲ್ಲಿ ನಡೆಯುತ್ತಿದ್ದು, ಈ ಆ್ಯಕ್ಷನ್ ಡ್ರಾಮಾಗೆ ರೋಹಿತ್ ಪದಕಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಕೆ.ಆರ್.ಜಿ.ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ. ಮಲಯಾಳಂ ನಟ ವಿಜಯ್ ಬಾಬು, ರಂಗಾಯಣ ರಘು, ಚೈತ್ರ ಜೆ ಆಚಾರ್, ಉಮಾಶ್ರೀ, ಯೋಗರಾಜ್ ಭಟ್, ದಿಗಂತ್ ಮಂಚಾಲೆ, ಗೋಪಾಲಕೃಷ್ಣ ದೇಶಪಾಂಡೆ ಸೇರಿದಂತೆ ಬಹು ದೊಡ್ಡ ತಾರಾಬಳಗವನ್ನು ಚಿತ್ರ ಹೊಂದಿದೆ.

    ಬಾಲಿವುಡ್ ಗಾಯಕ ಹಾಗೂ ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ ಹಾಗೂ ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿರುತ್ತಾರೆ.

  • ಕಾಲೆಳೆದ ನಟಿಗೆ ಸ್ನೇಹದ ಹಸ್ತಚಾಚಿದ ರಶ್ಮಿಕಾ ಮಂದಣ್ಣ

    ಕಾಲೆಳೆದ ನಟಿಗೆ ಸ್ನೇಹದ ಹಸ್ತಚಾಚಿದ ರಶ್ಮಿಕಾ ಮಂದಣ್ಣ

    ನ್ನಡದ ನಟಿ ರಶ್ಮಿಕಾ ಮಂದಣ್ಣಗೆ ‘ಫರ್ಹಾನ್’ (Farhan) ಚಿತ್ರ ಖ್ಯಾತಿಯ ಟಾಲಿವುಡ್ ನಟಿ ಐಶ್ವರ್ಯಾ ರಾಜೇಶ್ (Aishwarya Rajesh) ಕಾಲೆಳೆಯುವಂತೆ ಮಾತನಾಡಿದ್ದರು ಎನ್ನಲಾದ ವಿಡಿಯೋ ಭಾರೀ ವೈರಲ್ ಆಗಿತ್ತು. ಪುಷ್ಪ (Pushpa) ಸಿನಿಮಾದ ಶ್ರೀವಲ್ಲಿ ಪಾತ್ರವನ್ನು ರಶ್ಮಿಕಾಗಿಂತಲೂ ತಾವು ಅದ್ಭುತವಾಗಿ ನಟಿಸುತ್ತಿದ್ದೆ ಎಂದು ಹೇಳಲಾದ ವಿಡಿಯೋ ಅದಾಗಿತ್ತು. ಈ ವಿಷಯವಾಗಿ ರಶ್ಮಿಕಾ ಸುಮ್ಮನಿದ್ದರೂ, ಅವರ ಫ್ಯಾನ್ಸ್ ಮಾತ್ರ ಐಶ್ವರ್ಯಾ ರಾಜೇಶ್ ಮೇಲೆ ಮುಗಿಬಿದ್ದಿದ್ದರು. ಹಾಗಾಗಿ ಐಶ್ವರ್ಯಾ ತಾವು ಹಾಗೆ ಹೇಳಿಲ್ಲ ತಮ್ಮ ಮಾತುಗಳನ್ನು ತಿರುಚಲಾಗಿದೆ ಎಂದು ಪತ್ರ ಬರೆದಿದ್ದರು.

    ಈ ವಿಷಯವನ್ನು ಗಮನಿಸಿದ ರಶ್ಮಿಕಾ ಮಂದಣ್ಣ (Rashmika Mandanna), ಕಾಲೆಳೆದ ನಟಿಗೆ ಸ್ನೇಹದ ಹಸ್ತ ಚಾಚಿ, ಫರ್ಹಾನ್ ಸಿನಿಮಾ ದಾಖಲೆ ರೀತಿಯಲ್ಲಿ ಯಶಸ್ವಿ ಆಗಲಿ ಎಂದು ಹಾರೈಸಿದ್ದಾರೆ. ‘ಹಾಯ್ ಲವ್ ಎಂದು ಶುರು ಮಾಡಿ, ನಾವಿಬ್ಬರೂ ಏನು ಎನ್ನುವುದು ನಮಗೆ ಗೊತ್ತಿದೆ. ನಿಮ್ಮ ಬಗ್ಗೆ ನನಗೆ ಪ್ರೀತಿ ಹಾಗೂ ಗೌರವವಿದೆ. ನೀವು ಏನು ಹೇಳಿದ್ದೀರಿ ಎನ್ನುವುದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ನಿಮ್ಮ ಫರ್ಹಾನ್ ಚಿತ್ರಕ್ಕೆ ಶುಭವಾಗಲಿ’ ಎಂದು ಎದ್ದಿದ್ದ ವಿವಾದಕ್ಕೆ ರಶ್ಮಿಕಾ ತೆರೆ ಎಳೆದಿದ್ದಾರೆ.

    ನಿನ್ನೆಯಷ್ಟೇ ತಮ್ಮ ಮಾತಿಗೆ ಸ್ಪಷ್ಟನೆ ನೀಡಿದ್ದರು ಐಶ್ವರ್ಯಾ. ತಾವು ಆ ರೀತಿ ಮಾತೇ ಆಡಿಲ್ಲ. ಎಲ್ಲವೂ ಕಪೋಕಲ್ಪಿತ ಎಂದು ಅವರು ವಿವರಣೆ ನೀಡಿದ್ದರು. ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅವರು, ‘ಪುಷ್ಪ ಸಿನಿಮಾದ ಶ್ರೀವಲ್ಲಿ (Srivalli) ಪಾತ್ರವನ್ನು ರಶ್ಮಿಕಾ ಮಂದಣ್ಣಕ್ಕಿಂತಲೂ ಚೆನ್ನಾಗಿ ಮಾಡುತ್ತಿದ್ದೆ’ ಎಂದು ಹೇಳಿದ್ದಾರೆ ಎನ್ನಲಾಗಿತ್ತು. ಅದಕ್ಕಾಗಿ ಅವರು ಸಾಕಷ್ಟು ಟ್ರೋಲ್ ಗೆ ಒಳಗಾಗಿದ್ದರು. ಇದನ್ನೂ ಓದಿ:‘ಆದಿಪುರುಷ್‌’ ಪೋಸ್ಟರ್‌ನಲ್ಲಿ ಮತ್ತೆ ಎಡವಟ್ಟು- ಚಿತ್ರತಂಡ ವಿರುದ್ಧ ಫ್ಯಾನ್ಸ್ ಗರಂ

    ಈ ಕುರಿತು ಐಶ್ವರ್ಯಾ ರಾಜೇಶ್ ಅವರ ಪಿ.ಆರ್ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ, ‘ಇದೊಂದು ತಪ್ಪು ಕಲ್ಪನೆಯಿಂದ ಆದ ಪ್ರಮಾದ. ಯಾವುದೇ ಕಾರಣಕ್ಕೂ ಐಶ್ವರ್ಯಾ ಅವರು ಆ ರೀತಿ ಮಾತುಗಳನ್ನು ಆಡಿಲ್ಲ. ‘ನಿಮ್ಮ ನೆಚ್ಚಿನ ಪಾತ್ರ ಯಾವುದು? ಯಾವ ರೀತಿಯ ಪಾತ್ರದಲ್ಲಿ ಕಾಣಲು ಬಯಸುತ್ತೀರಿ’ ಎಂದು ಕೇಳಲಾದ ಪ್ರಶ್ನೆಗೆ ‘ಪುಷ್ಪ ಸಿನಿಮಾದ ಶ್ರೀವಲ್ಲಿ ರೀತಿಯ ಪಾತ್ರಗಳು ಎಂದರೆ ನನಗೆ ಇಷ್ಟೆ. ಆ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತೇನೆ ಎಂದು ಹೇಳಿದ್ದೆ’ ಎಂದಿದ್ದರು.

    ಐಶ್ವರ್ಯಾ ರಾಜೇಶ್ ಆಡಿದ್ದಾರೆ ಎನ್ನಲಾದ ಮಾತುಗಳು ಸಖತ್ ಟ್ರೋಲ್ ಆಗಿದ್ದವು. ರಶ್ಮಿಕಾ ಮಂದಣ್ಣ ಫ್ಯಾನ್ಸ್ ಕೂಡ ಐಶ್ವರ್ಯಾ ಮೇಲೆ ಮುಗಿ ಬಿದ್ದದ್ದರು. ಕೆಟ್ಟ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದರು. ಇದೆಲ್ಲವನ್ನೂ ಗಮನಿಸಿದ ಐಶ್ವರ್ಯಾ ಅದನ್ನು ತಿಳಿ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ತಾವು ಆ ರೀತಿಯಲ್ಲಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

  • ‘ಫಾರ್ಹಾನ್’ ಸಿನಿಮಾ ನಟಿ ಐಶ್ವರ್ಯ ರಾಜೇಶ್ ಗೆ ಪೊಲೀಸ್ ಭದ್ರತೆ

    ‘ಫಾರ್ಹಾನ್’ ಸಿನಿಮಾ ನಟಿ ಐಶ್ವರ್ಯ ರಾಜೇಶ್ ಗೆ ಪೊಲೀಸ್ ಭದ್ರತೆ

    ಳೆದ ವಾರವಷ್ಟೇ ದೇಶದಾದ್ಯಂತ ರಿಲೀಸ್ ಆಗಿರುವ ತಮಿಳಿನ ಫರ್ಹಾನ್ (Farhan) ಸಿನಿಮಾಗೆ ತಮಿಳುನಾಡಿನಲ್ಲಿ (Tamil Nadu) ಭಾರಿ ವಿರೋಧ ವ್ಯಕ್ತವಾಗಿದೆ. ಮುಸ್ಲಿಂ ಸಮುದಾಯಕ್ಕೆ ಈ ಸಿನಿಮಾದಲ್ಲಿ ಅವಮಾನ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ಅಲ್ಲಿನ ಮುಸ್ಲಿಂ ಸಂಘಟನೆಗಳು ಸಿನಿಮಾವನ್ನು ವಿರೋಧಿಸಿವೆ. ಹಾಗಾಗಿ ಚಿತ್ರದಲ್ಲಿ ಪ್ರಮುಖ ಪಾತ್ರಮಾಡಿದ್ದ ನಟಿ ಐಶ್ವರ್ಯ ರಾಜೇಶ್ (Aishwarya Rajesh) ಅವರಿಗೆ ಪೊಲೀಸ್ ಭದ್ರತೆ  (Police Security)ನೀಡಲಾಗಿದೆ. ಅತ್ತ ದಿ ಕೇರಳ ಸ್ಟೋರಿ ನಟಿ ಅದಾ ಶರ್ಮಾಗೂ ಕೂಡ ಭದ್ರತೆ ನೀಡಲಾಗಿದೆಯಂತೆ.

    ಏನಿದು ವಿವಾದ?

    ವಿವಾದದ ನಡುವೆಯೂ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ, ಹಲವು ಚಿತ್ರಗಳಿಗೆ ಸ್ಫೂರ್ತಿಯಾಗುತ್ತಿದೆ. ತಮಿಳಿನಲ್ಲೂ ಇಂಥದ್ದೇ ಮಾದರಿಯ ಚಿತ್ರವೊಂದು ರೆಡಿಯಾಗಿದ್ದು, ಈ ಚಿತ್ರ ಕೂಡ ವಿವಾದಕ್ಕೆ ಕಾರಣವಾಗಿದೆ. ಆ ಚಿತ್ರವನ್ನು ತಡೆಯಬೇಕು ಎಂದು ಮುಸ್ಲಿಂ ಸಮುದಾಯ ಆಗ್ರಹಿಸಿದೆ. ಇದನ್ನೂ ಓದಿ:ಲವ್ ಮಿ OR ಹೇಟ್ ಮಿ ಅಂತಿದ್ದಾರೆ ಬಿಗ್‌ ಬಾಸ್‌ ರೂಪೇಶ್ ಶೆಟ್ಟಿ

    ಕೆಲವು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿರುವ ತಮಿಳಿನ ಫರ್ಹಾನಾ ಸಿನಿಮಾ ಕೂಡ ಮುಸ್ಲಿಂ ವಿರೋಧ ಧೋರಣೆಯನ್ನು ತೋರುತ್ತಿದೆ. ಹಾಗಾಗಿ ಮೂಲಭೂತವಾದಿಗಳು ಚಿತ್ರವನ್ನು ವಿರೋಧಿಸುತ್ತಿದ್ದಾರೆ. ಹಾಗಂತ ಇದು ಉಗ್ರರ ಕುರಿತಾದ ಸಿನಿಮಾವಲ್ಲ, ಮುಸ್ಲಿಂ ಮಹಿಳೆಯ ಮತ್ತೊಂದು ಮುಖವನ್ನು ಇದು ಅನಾವರಣ ಮಾಡಿದೆ.

    ಮುಸ್ಲಿಂ ಮಹಿಳೆಯೊಬ್ಬರು ಬಡತನದ ಕಾರಣದಿಂದಾಗಿ ಲೈಂಗಿಕತೆ ಕುರಿತಾಗಿ ಮಾತನಾಡುವ ಕಾಲ್ ಸೆಂಟರ್ ಸೇರಿಕೊಳ್ಳುತ್ತಾಳೆ. ಅಲ್ಲಿಂದ ಆಕೆ ವೃತ್ತಿಗೆ ಸಂಬಂಧಿಸಿದ ಸಂಕಟಗಳು ಏನು, ಬ್ಲಾಕ್ ಮೇಲರ್ ಒಬ್ಬನ ಕಿರುಕುಳದಿಂದ ಆಕೆ ಹೇಗೆ ಪಾರಾಗುತ್ತಾಳೆ ಹೀಗೆ ಕಥೆಯನ್ನು ಒಳಗೊಂಡಿದೆ. ಈ ಕಥೆಗೆ ಇಂಡಿಯನ್ ನ್ಯಾಷನಲ್ ಲೀಗ್ ಮತ್ತು ಕೆಲ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿವೆ.

    ನಾವು ಯಾರ ಮನಸ್ಸಿಗೂ ನೋವನ್ನುಂಟು ಮಾಡಿಲ್ಲ. ಉತ್ತಮವಾದ ಸಂದೇಶವನ್ನು ಹೊಂದಿರುವ ಸಿನಿಮಾ ಇದಾಗಿದೆ. ಯಾರ ವಿರುದ್ಧವೂ ನಾವು ಕಥೆಯನ್ನು ಹೇಳಿಲ್ಲ ಎಂದು ಚಿತ್ರತಂಡ ಹೇಳಿಕೊಂಡಿದ್ದರೂ, ಮುಸ್ಲಿಂ ಸಂಘಟನೆಗಳು ಮಾತ್ರ ಕಿವಿಗೊಟ್ಟಿಲ್ಲ. ಅಂದಹಾಗೆ ಈ ಸಿನಿಮಾವನ್ನು ನೆಲ್ಸನ್ ವೆಂಕಟೇಷನ್ ನಿರ್ದೇಶನ ಮಾಡಿದ್ದರೆ, ಐಶ್ವರ್ಯ ರಾಜೇಶ್ ಮುಖ್ಯಪಾತ್ರ ನಿರ್ವಹಿಸಿದ್ದಾರೆ.

  • ದಿ ಕೇರಳ ಸ್ಟೋರಿ ನಂತರ ವಿವಾದಕ್ಕೆ ಗುರಿಯಾಯ್ತು ತಮಿಳಿನ ಚಿತ್ರ

    ದಿ ಕೇರಳ ಸ್ಟೋರಿ ನಂತರ ವಿವಾದಕ್ಕೆ ಗುರಿಯಾಯ್ತು ತಮಿಳಿನ ಚಿತ್ರ

    ವಿವಾದದ ನಡುವೆಯೂ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ, (The Kerala Story) ಹಲವು ಚಿತ್ರಗಳಿಗೆ ಸ್ಫೂರ್ತಿಯಾಗುತ್ತಿದೆ. ತಮಿಳಿನಲ್ಲೂ (Tamil) ಇಂಥದ್ದೇ ಮಾದರಿಯ ಚಿತ್ರವೊಂದು ರೆಡಿಯಾಗಿದ್ದು, ಈ ಚಿತ್ರ ಕೂಡ ವಿವಾದಕ್ಕೆ ಕಾರಣವಾಗಿದೆ. ಆ ಚಿತ್ರವನ್ನು ತಡೆಯಬೇಕು ಎಂದು ಮುಸ್ಲಿಂ ಸಮುದಾಯ ಆಗ್ರಹಿಸಿದೆ.

    ಕೆಲವು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿರುವ ತಮಿಳಿನ ಫರ್ಹಾನಾ (Farhana) ಸಿನಿಮಾ ಕೂಡ ಮುಸ್ಲಿಂ ವಿರೋಧ ಧೋರಣೆಯನ್ನು ತೋರುತ್ತಿದೆ. ಹಾಗಾಗಿ ಮೂಲಭೂತವಾದಿಗಳು ಚಿತ್ರವನ್ನು ವಿರೋಧಿಸುತ್ತಿದ್ದಾರೆ. ಹಾಗಂತ ಇದು ಉಗ್ರರ ಕುರಿತಾದ ಸಿನಿಮಾವಲ್ಲ, ಮುಸ್ಲಿಂ ಮಹಿಳೆಯ ಮತ್ತೊಂದು ಮುಖವನ್ನು ಇದು ಅನಾವರಣ ಮಾಡಿದೆ. ಇದನ್ನೂ ಓದಿ:ಲವ್ಲಿ ಸ್ಟಾರ್ ಪ್ರೇಮ್- ಜ್ಯೋತಿ ದಾಂಪತ್ಯಕ್ಕೆ 25ರ ಸಂಭ್ರಮ

    ಮುಸ್ಲಿಂ ಮಹಿಳೆಯೊಬ್ಬರು ಬಡತನದ ಕಾರಣದಿಂದಾಗಿ ಲೈಂಗಿಕತೆ ಕುರಿತಾಗಿ ಮಾತನಾಡುವ ಕಾಲ್ ಸೆಂಟರ್ ಸೇರಿಕೊಳ್ಳುತ್ತಾಳೆ. ಅಲ್ಲಿಂದ ಆಕೆ ವೃತ್ತಿಗೆ ಸಂಬಂಧಿಸಿದ ಸಂಕಟಗಳು ಏನು, ಬ್ಲಾಕ್ ಮೇಲರ್ ಒಬ್ಬನ ಕಿರುಕುಳದಿಂದ ಆಕೆ ಹೇಗೆ ಪಾರಾಗುತ್ತಾಳೆ ಹೀಗೆ ಕಥೆಯನ್ನು ಒಳಗೊಂಡಿದೆ. ಈ ಕಥೆಗೆ ಇಂಡಿಯನ್ ನ್ಯಾಷನಲ್ ಲೀಗ್ ಮತ್ತು ಕೆಲ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿವೆ.

    ನಾವು ಯಾರ ಮನಸ್ಸಿಗೂ ನೋವನ್ನುಂಟು ಮಾಡಿಲ್ಲ. ಉತ್ತಮವಾದ ಸಂದೇಶವನ್ನು ಹೊಂದಿರುವ ಸಿನಿಮಾ ಇದಾಗಿದೆ. ಯಾರ ವಿರುದ್ಧವೂ ನಾವು ಕಥೆಯನ್ನು ಹೇಳಿಲ್ಲ ಎಂದು ಚಿತ್ರತಂಡ ಹೇಳಿಕೊಂಡಿದ್ದರೂ, ಮುಸ್ಲಿಂ ಸಂಘಟನೆಗಳು ಮಾತ್ರ ಕಿವಿಗೊಟ್ಟಿಲ್ಲ. ಅಂದಹಾಗೆ ಈ ಸಿನಿಮಾವನ್ನು ನೆಲ್ಸನ್ ವೆಂಕಟೇಷನ್ ನಿರ್ದೇಶನ ಮಾಡಿದ್ದರೆ, ಐಶ್ವರ್ಯ ರಾಜೇಶ್  (Aishwarya Rajesh) ಮುಖ್ಯಪಾತ್ರ ನಿರ್ವಹಿಸಿದ್ದಾರೆ.

  • ಸಾಮಿ ಸ್ಕ್ವೇರ್ ನಿಂದ ತ್ರಿಶಾ ಔಟ್ – ಚಿಯಾನ್ ವಿಕ್ರಂಗೆ ಸಿಕ್ಕಿದ್ದು ಐಶ್ವರ್ಯ!

    ಸಾಮಿ ಸ್ಕ್ವೇರ್ ನಿಂದ ತ್ರಿಶಾ ಔಟ್ – ಚಿಯಾನ್ ವಿಕ್ರಂಗೆ ಸಿಕ್ಕಿದ್ದು ಐಶ್ವರ್ಯ!

    ಬೆಂಗಳೂರು: ‘ಸಾಮಿ ಸ್ಕ್ವೇರ್’ ಯಾವುದೋ ಹಾಲಿವುಡ್, ಬಾಲಿವುಡ್ ಸಿನಿಮಾ ಎಂದು ಕನ್ಫ್ಯೂಸ್ ಆಗಬೇಡಿ! 2003ರಲ್ಲಿ ಸಂಚಲನ ಸೃಷ್ಟಿಸಿದ್ದ ವಿಕ್ರಮ್ ನಾಯಕನಾಗಿದ್ದ ‘ಸಾಮಿ’ ಚಿತ್ರದ ಭಾಗ 2 ಈ ಚಿತ್ರ. ಕೆಟ್ಟಾ ಕೊಳಕಾಗಿ ಬೈಯುವ ಖಡಕ್ ಪೊಲೀಸ್ ಅಧಿಕಾರಿ ಆಗಿದ್ದ ವಿಕ್ರಮ್ ‘ಸಾಮಿ ಸ್ಕ್ವೇರ್’ನಲ್ಲೂ ಅದನ್ನೇ ಮುಂದುವರೆಸಿದ್ದಾರೆ. ಹಿಟ್ ಜೋಡಿ ಆಗಿ ನಾಯಕ ವಿಕ್ರಂ ಹಾಗೂ ನಿರ್ದೇಶಕ ಹರಿ ಅವರೇ ಇರಲಿದ್ದು, ‘ಆಫೀಸರ್ ಆರು ಸಾಮಿ’ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

    ಆ್ಯಕ್ಷನ್ ಚಿತ್ರದಲ್ಲಿ ವಿಕ್ರಂ ಎದುರು ರಾಷ್ಟ್ರ ಪ್ರಶಸ್ತಿ ವಿಜೇತ ನಟ ಬಾಬಿ ಸಿಂಹ ನಟಿಸಿದ್ದು, ಭಾಗ 2ರಲ್ಲಿ ಮೊದಲ ನಾಯಕ ತ್ರಿಶಾ ಔಟ್ ಆಗಿದ್ದಾರೆ. ಅವರ ಸ್ಥಾನದಲ್ಲಿ ‘ಸಾಮಿ ಸ್ಕ್ವೇರ್’ಗೆ ನಟಿ ಐಶ್ವರ್ಯ ರಾಜೇಶ್ ಆಯ್ಕೆಯಾಗಿದ್ದು, ಚಿತ್ರ ಆಗಸ್ಟ್ 31 ಅಥವಾ ಸೆಪ್ಟೆಂಬರ್ 13ಕ್ಕೆ ರಿಲೀಸ್ ಆಗಲಿದೆ ಎನ್ನಲಾಗಿದೆ.

    ಟೀಸರ್ ಬಿಡುಗಡೆಯಾದ ತಿಂಗಳಲ್ಲೇ 11 ಮಿಲಿಯನ್ ವ್ಯೂಗಳನ್ನು ಯುಟ್ಯೂಬ್‍ನಲ್ಲಿ ಪಡೆದಿರುವ ಚಿತ್ರ ಕುತೂಹಲ ಹುಟ್ಟಿಸಿರುವುದಂತೂ ಸುಳ್ಳಲ್ಲ. ತೆಲುಗಿನ ಖ್ಯಾತ ರಾಕ್ ಸ್ಟಾರ್ ಗಾಯಕ ದೇವಿಶ್ರೀ ಪ್ರಸಾದ್ (ಡಿಎಸ್‍ಪಿ) ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದು ಪ್ಲಸ್ ಪಾಯಿಂಟ್ ಆಗುವುದು ಖಂಡಿತ. ಚಿತ್ರದ ಇನ್ನೋರ್ವ ನಾಯಕಿಯಾಗಿ ಕೀರ್ತಿ ಸುರೇಶ್ ಆಯ್ಕೆ ಆಗಿದ್ದು, ಐಶ್ವರ್ಯ ರಾಜೇಶ್‍ಗೆ ಸ್ಪರ್ಧೆ ಹೆಚ್ಚಿಸಿದೆ. ತನ್ನ ಪಾತ್ರದ ಬಗ್ಗೆ ಥ್ರಿಲ್ ಆಗಿರುವ ಐಶ್ವರ್ಯ ತಾನು ಪ್ರಸ್ತುತ ಪ್ರಯೋಗಾತ್ಮಕ ಪಾತ್ರಗಳಿಗೆ ಒಡ್ಡಿಕೊಂಡಿದ್ದೇನೆಂದು ಹೇಳಿಕೊಂಡಿದ್ದಾರೆ. ತೆರೆಗೆ ಬರಲಿರುವ ‘ಕಾನಾ’ ಚಿತ್ರದಲ್ಲಿ ತಾಪ್ಸಿ ಪನ್ನು ಜೊತೆ ತೆರೆ ಹಂಚಿಕೊಂಡಿರುವ ಐಶ್ವರ್ಯ ಮಹಿಳಾ ಕ್ರಿಕೆಟರ್ ಆಗಿ ನಟಿಸಿದ್ದಾರೆ. ‘ಚೆಕ್ಕಾ ಚಿವಂತವನಂ’ನಲ್ಲಿ ಕ್ಲಾಸ್ ಪಾತ್ರ ಮಾಡಿರುವ ಐಶ್ವರ್ಯ ‘ಧ್ರುವ ನಕ್ಷತ್ರಂ’ನಲ್ಲಿ ಜರ್ನಲಿಸ್ಟ್ ಆಗಿದ್ದಾರೆ.

    ‘ಸಾಮಿ’ ಮಾಡಿದ್ದ ಗಲ್ಲಾ ಪೆಟ್ಟಿಗೆ ರೆಕಾರ್ಡ್‍ಗಳನ್ನು ‘ಸಾಮಿ ಸ್ಕ್ವೇರ್’ ಚಿಂದಿ ಉಡಾಯಿಸಿ ಹೊಸ ದಾಖಲೆಗಳನ್ನು ಬರೆಯಲಿದೆ ಎಂಬುದು ತಮಿಳು ಚಿತ್ರ ಪಂಡಿತರ ಹಾಗೂ ಸಿನಿ ರಸಿಕರ ಅಂಬೋಣ!