Tag: ಐಸಿಸಿ ಏಕದಿನ ರ‍್ಯಾಂಕಿಂಗ್

  • ಬಾಬರ್‌ ಇಳಿಸಿ ನಂ.1 ಪಟ್ಟ ಏರಿದ ಗಿಲ್‌

    ಬಾಬರ್‌ ಇಳಿಸಿ ನಂ.1 ಪಟ್ಟ ಏರಿದ ಗಿಲ್‌

    ನವದೆಹಲಿ: ಪಸ್ತುತ ನಡೆಯುತ್ತಿರುವ 2023 ರ ಐಸಿಸಿ ವಿಶ್ವಕಪ್‌ನಲ್ಲಿ ಭಾರತದ ಬ್ಯಾಟರ್ ಶುಭಮನ್ ಗಿಲ್ (Shubman Gill) ವಿಶ್ವದ ನಂ. 1 ODI ಬ್ಯಾಟರ್ ಆಗಿ, ಬಾಬರ್ ಅಜಂರನ್ನು (Babar Azam) ಸಿಂಹಾಸನದಿಂದ ಕೆಳಗಿಳಿಸಿದ್ದಾರೆ.

    ಬುಧವಾರ ಐಸಿಸಿ ಪುರುಷರ ODI ಬ್ಯಾಟಿಂಗ್ ಶ್ರೇಯಾಂಕ ಪಟ್ಟಿ ಪ್ರಕಟಿಸಿದ್ದು, ಮೆನ್ ಇನ್ ಬ್ಲೂ ಓಪನರ್ ಪಾಕಿಸ್ತಾನದ ನಾಯಕನ ಸ್ಥಾನವನ್ನು ಅಲಂಕರಿಸಿದ್ದಾರೆ. ಶುಭಮನ್ ಅವರು ಒಟ್ಟು 830 ರೇಟಿಂಗ್ ಪಾಯಿಂಟ್‌ ಹೊಂದಿದ್ದಾರೆ. ಆ ಮೂಲಕ ಬಾಬರ್ ಅವರನ್ನು ಹಿಂದಿಕ್ಕಿದ್ದಾರೆ. ಬಾಬರ್‌ 824 ರೇಟಿಂಗ್‌ನೊಂದಿಗೆ ನಂ. 2 ಸ್ಥಾನಕ್ಕೆ ಕುಸಿದಿದ್ದಾರೆ. 24 ವರ್ಷದ ಭಾರತದ ಆರಂಭಿಕ ಆಟಗಾರ ಗಿಲ್ ನವೆಂಬರ್ 2 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಉತ್ತಮ ಫಾರ್ಮ್ ಪ್ರದರ್ಶಿಸಿದರು.‌ ಅದರೊಟ್ಟಿಗೆ ಭಾರತದ ಗೆಲುವಿಗೆ ಕೊಡುಗೆ ನೀಡಿದರು. ಇದನ್ನೂ ಓದಿ: ಪತಿಯ ಆಟ ನೋಡಲು ಬೆಂಗಳೂರಿಗೆ ಬಂದಿಳಿದ ಅನುಷ್ಕಾ

    ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಯುವ ತಾರೆ ರೆಡ್-ಹಾಟ್ ಫಾರ್ಮ್‌ನಲ್ಲಿದ್ದಾರೆ. ರನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರು ಈ ವರ್ಷ 26 ODIಗಳಲ್ಲಿ 63.00 ಸರಾಸರಿಯಲ್ಲಿ 1,149 ರನ್ ಗಳಿಸಿದ್ದಾರೆ. 103.72 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

    ಬಲಗೈ ಆಟಗಾರ ಶ್ರೀಲಂಕಾ ವಿರುದ್ಧ 92 ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ 23 ರನ್ ಗಳಿಸಿದ್ದಾರೆ. ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಇದುವರೆಗೆ ಆರು ಇನ್ನಿಂಗ್ಸ್‌ಗಳಿಂದ ಗಿಲ್ 219 ರನ್ ಗಳಿಸಿದ್ದಾರೆ. ಪಾಕಿಸ್ತಾನದ ನಾಯಕ ವಿಶ್ವಕಪ್‌ನಲ್ಲಿ ಎಂಟು ಪಂದ್ಯಗಳಿಂದ 282 ರನ್‌ಗಳನ್ನು ಗಳಿಸಿದ್ದಾರೆ. ಕಳೆದ 2 ವರ್ಷಗಳಿಂದ ಬಾಬರ್‌ ಮೊದಲ ಸ್ಥಾನದಲ್ಲಿದ್ದರು. ಇದನ್ನೂ ಓದಿ: ಮ್ಯಾಕ್ಸಿ ಬೆಂಕಿ ಆಟಕ್ಕೆ ಹಲವು ದಾಖಲೆಗಳು ಭಸ್ಮ – ವಿಶ್ವದಾಖಲೆಯ ಪಟ್ಟಿ ಓದಿ

    ಏತನ್ಮಧ್ಯೆ, ದ.ಆಫ್ರಿಕಾ ಬ್ಯಾಟರ್‌ ಕ್ವಿಂಟನ್‌ ಡಿ ಕಾಕ್‌ ಮೂರನೇ ಸ್ಥಾನ ಪಡೆದಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ರ‍್ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಡೇವಿಡ್‌ ವಾರ್ನರ್‌ 5 ಮತ್ತು ಭಾರತ ತಂಡದ ಹಾಲಿ ಕ್ಯಾಪ್ಟನ್‌ ರೋಹಿತ್‌ ಶರ್ಮಾ 6 ನೇ ಸ್ಥಾನ ಪಡೆದಿದ್ದಾರೆ.

    ಗಿಲ್ ತನ್ನ ಅತ್ಯುತ್ತಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಅಗ್ರಸ್ಥಾನ ಪಡೆದಿದ್ದಾರೆ. ಭಾರತದ ಬ್ಯಾಟರ್ ಶ್ರೇಯಸ್ ಅಯ್ಯರ್ ಏಕದಿನ ಬ್ಯಾಟರ್‌ಗಳ ಪಟ್ಟಿಯಲ್ಲಿ 18 ನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಆರಂಭಿಕ ಆಟಗಾರ ಫಖರ್ ಜಮಾನ್ ಮೂರು ಸ್ಥಾನ ಏರಿಕೆಯಾಗಿದ್ದು, 11ನೇ ಸ್ಥಾನ ಮತ್ತು ಅಫ್ಘಾನಿಸ್ತಾನದ ಇಬ್ರಾಹಿಂ ಝದ್ರಾನ್ 12ನೇ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ನೋವಿನಲ್ಲೂ ಮ್ಯಾಕ್ಸಿ ಬೆಂಕಿ ಆಟಕ್ಕೆ ಅಫ್ಘಾನ್‌ ಧೂಳಿಪಟ – ಸೆಮೀಸ್‌ಗೆ ಆಸೀಸ್‌ ಗ್ರ್ಯಾಂಡ್‌ ಎಂಟ್ರಿ

  • ICC ರ‍್ಯಾಂಕಿಂಗ್‌ನಲ್ಲಿ ಕೊಹ್ಲಿಯನ್ನು ಹಿಂದಿಕ್ಕಿದ ಗಿಲ್

    ICC ರ‍್ಯಾಂಕಿಂಗ್‌ನಲ್ಲಿ ಕೊಹ್ಲಿಯನ್ನು ಹಿಂದಿಕ್ಕಿದ ಗಿಲ್

    ದುಬೈ: ಐಸಿಸಿ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್ (ICC ODI Rankings) ಪಟ್ಟಿಯಲ್ಲಿ ಟೀಂ ಇಂಡಿಯಾ (Team India) ಕ್ರಿಕೆಟಿಗ ಶುಭಮನ್ ಗಿಲ್ (Shubman Gill), ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಅವರನ್ನ ಹಿಂದಿಕ್ಕಿದ್ದಾರೆ. ಆದರೆ ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ನಂ.1 ಸ್ಥಾನದಲ್ಲೇ ಮುಂದುವರಿದಿದ್ದಾರೆ.

    ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ (Gujarat Taitans) ತಂಡದಲ್ಲಿ ಆಡುತ್ತಿರುವ ಶುಭಮನ್ ಗಿಲ್ ಏಕದಿನ ಕ್ರಿಕೆಟ್, ಟಿ20 ಹಾಗೂ ಟೆಸ್ಟ್ ಕ್ರಿಕೆಟ್ ಫಾರ್ಮ್ಯಾಟ್‌ಗಳಲ್ಲಿ ಉತ್ತಮ ಫಾರ್ಮ್ ಕಂಡುಕೊಂಡಿದ್ದಾರೆ. ಬುಧವಾರ ಪ್ರಕಟವಾದ ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಶುಭಮನ್ ಗಿಲ್, ವಿರಾಟ್ ಕೊಹ್ಲಿ ಅವರನ್ನ ಹಿಂದಿಕ್ಕಿದ್ದಾರೆ. 738 ಅಂಕ ಗಳಿಸಿರುವ ಗಿಲ್ 4ನೇ ಸ್ಥಾನದಲ್ಲಿದ್ದರೆ, 719 ಅಂಕಗಳನ್ನ ಗಳಿಸಿರುವ ಕಿಂಗ್ ಕೊಹ್ಲಿ 6ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: 3rd T20I: ಶತಕ ಸಿಡಿಸಿ ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್‍ನಲ್ಲಿ ನೂತನ ದಾಖಲೆ ಬರೆದ ಗಿಲ್

    ಟಾಪ್-10ನಲ್ಲಿ ಮೂವರು ಭಾರತೀಯರು: ಬುಧವಾರ ಐಸಿಸಿ ಬಿಡುಗಡೆ ಮಾಡಿದ ಏಕದಿನ ಕ್ರಿಕೆಟಿಗರ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೂವರು ಭಾರತೀಯರು ಸ್ಥಾನ ಪಡೆದುಕೊಂಡಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ 887 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ 777  ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ಇಮಾಮ್ ಉಲ್ ಹಕ್ (740 ಅಂಕ), ಶುಭಮನ್ ಗಿಲ್ (738 ಅಂಕ),  ಡೇವಿಡ್ ವಾರ್ನರ್ (726 ಅಂಕ), ವಿರಾಟ್ ಕೊಹ್ಲಿ (719 ಅಂಕ), ಕ್ವಿಂಟನ್ ಡಿ ಕಾಕ್ (718 ಅಂಕ), ರೋಹಿತ್ ಶರ್ಮಾ (707 ಅಂಕ), ಸ್ಟೀವ್ ಸ್ಮಿತ್ (707 ಅಂಕ), ಹಾಗೂ ಫಖರ್ ಜಮಾನ್ (699 ಅಂಕ) ಕ್ರಮವಾಗಿ 3 ರಿಂದ 10ನೇ ಸ್ಥಾನಗಳಲ್ಲಿದ್ದಾರೆ. ಇದನ್ನೂ ಓದಿ: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ – ಚೆನ್ನೈಗೆ ಗುನ್ನ ಕೊಟ್ಟ ಗುಜರಾತ್‌; ಹಾಲಿ ಚಾಂಪಿಯನ್ಸ್‌ಗೆ ರೋಚಕ ಜಯ

    ಈ ವರ್ಷದ ಆರಂಭದಿಂದ ನಡೆದ ಸರಣಿಗಳಲ್ಲೂ ಶುಭಮನ್ ಗಿಲ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್‌ನಲ್ಲಿ ಭರ್ಜರಿ ದ್ವಿಶತಕ ಸಿಡಿಸಿದ ಗಿಲ್, ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಅಜೇಯ 126 ರನ್ ಚಚ್ಚಿ ದಾಖಲೆ ಬರೆದಿದ್ದಾರೆ. ಅಲ್ಲದೇ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲೂ ಶತಕ ಸಿಡಿಸಿದ್ದರು. ಇದೀಗ 16ನೇ ಆವೃತ್ತಿ ಐಪಿಎಲ್‌ನ ಆರಂಭಿಕ ಪಂದ್ಯದಲ್ಲೇ ಭರ್ಜರಿ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ.