Tag: ಒಂದು ರಾಷ್ಟ್ರ ಒಂದು ಚುನಾವಣೆ

  • ʻಒಂದು ದೇಶ, ಒಂದು ಚುನಾವಣೆʼ ಮಸೂದೆ ಲೋಕಸಭೆಯಲ್ಲಿ ಮಂಡನೆ – ಮೊದಲ ಬಾರಿಗೆ ಇ-ವೋಟಿಂಗ್‌ ಸಿಸ್ಟಂ ಬಳಕೆ!

    ʻಒಂದು ದೇಶ, ಒಂದು ಚುನಾವಣೆʼ ಮಸೂದೆ ಲೋಕಸಭೆಯಲ್ಲಿ ಮಂಡನೆ – ಮೊದಲ ಬಾರಿಗೆ ಇ-ವೋಟಿಂಗ್‌ ಸಿಸ್ಟಂ ಬಳಕೆ!

    – ವಿಪಕ್ಷಗಳಿಂದ ವಿರೋಧ – ಮಸೂದೆ ಮಂಡನೆ ಪರ 269, ವಿರುದ್ಧ 198 ಮತ

    ನವದೆಹಲಿ: ಇಡೀ ದೇಶವೇ ಕುತೂಹಲದಿಂದ ನೋಡುತ್ತಿದ್ದ ʻಒಂದು ರಾಷ್ಟ್ರ ಒಂದು ಚುನಾವಣೆʼ ಮಸೂದೆಯನ್ನು (One Nation, One Election Bill) ಕೇಂದ್ರ ಸರ್ಕಾರ ಲೋಕಸಭೆಯಲ್ಲಿ (Lok Sabha) ಮಂಡಿಸಿದೆ. ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.

    ಮಸೂದೆ ಮಂಡನೆ ಬಳಿಕ ಉಭಯ ಸದನಗಳ ಪರಾಮರ್ಷೆಗಾಗಿ ಜಂಟಿ ಸಂಸದೀಯ ಸಮಿತಿಗೆ (JPC) ಕಳುಹಿಸಲಾಗಿದೆ. ಆದರೆ, ಇದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇದನ್ನೂ ಓದಿ: Delhi Assembly Election | ಚುನಾವಣಾ ಆಯೋಗದಿಂದ ಪೂರ್ವಸಿದ್ಧತಾ ಸಭೆ – ಮುಂದಿನ ವಾರವೇ ದಿನಾಂಕ ಪ್ರಕಟ ಸಾಧ್ಯತೆ

    ಹೊಸ ಸಂಸತ್‌ ಭವನದಲ್ಲಿ ಮಸೂದೆ ಮಂಡನೆಗೆ ಇದೇ ಮೊದಲ ಬಾರಿಗೆ ಎಲೆಕ್ಟ್ರಾನಿಕ್‌ ವೋಟಿಂಗ್‌ (E Voting) ವ್ಯವಸ್ಥೆ ಬಳಕೆ ಮಾಡಲಾಯಿತು. 269 ಸದಸ್ಯರು ಪರವಾಗಿ ಮತ ಚಲಾಯಿಸಿದ್ರೆ, 198 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ನಂತರ ಕಲಾಪವನ್ನು 1 ಗಂಟೆಗೂ ಹೆಚ್ಚು ಕಾಲ ಮುಂದೂಡಲಾಯಿತು. ನಂತರ ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌, ಸರ್ಕಾರದ ಕೇಂದ್ರಾಡಳಿತ ಪ್ರದೇಶಗಳ ಕಾಯ್ದೆ, 1963, ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ಪ್ರದೇಶದ ಕಾಯ್ದೆ, 1991 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019 ಅನ್ನು ದಿನದ ವೇಳಾಪಟ್ಟಿಯಂತೆ ತಿದ್ದುಪಡಿ ಮಸೂದೆ ಮಂಡಿಸಿದರು.

    ಒಂದು ದೇಶ – ಒಂದು ಚುನಾವಣೆ ಅಂದ್ರೆ ಏನು?
    ಪ್ರಮುಖವಾಗಿ ಒಂದು ದೇಶ, ಒಂದು ಚುನಾವಣೆ ಅಂದ್ರೆ ಏನು ಎಂಬುದನ್ನು ನೋಡುವುದಾದರೆ, ಹೆಸರೇ ಹೇಳುವಂತೆ ಒನ್‌ ನೇಷನ್‌ ಒನ್‌ ಎಲೆಕ್ಷನ್‌ ಅಂದ್ರೆ ರಾಷ್ಟ್ರದ ಎಲ್ಲ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಪ್ರಯತ್ನ. ಈಗ ರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬೇರೆ ಬೇರೆ ಅವಧಿಯಲ್ಲಿ ನಡೆಯುತ್ತಿದ್ದು, ಅವುಗಳನ್ನು ಏಕಕಾಲದಲ್ಲಿ ನಡೆಸಬೇಕು ಎನ್ನುವ ಉದ್ದೇಶ ಈ ಮಸೂದೆಯ ಹಿಂದಿದೆ.

    ಸ್ವಾತಂತ್ರ್ಯ ಬಂದಾಗಿನಿಂದ ವಿಧಾನಸಭೆ, ಲೋಕಸಭೆ ಸೇರಿ ಭಾರತದಲ್ಲಿ ಸುಮಾರು 400 ಚುನಾವಣೆಗಳು ನಡೆದಿವೆ. ಇದರಿಂದ ಭಾರೀ ಹಣ ಖರ್ಚಾಗುತ್ತಿದೆ. ಜೊತೆಗೆ ಪ್ರತಿ ಚುನಾವಣೆಗೂ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಹಿನ್ನೆಲೆ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಈ ಕಾರಣಕ್ಕಾಗಿ ಒಂದು ದೇಶ, ಒಂದು ಚುನಾವಣೆ ತರಬೇಕು ಎಂದು ಕೇಂದ್ರ ಸರ್ಕಾರ ಮುಂದಾಗಿದೆ. ಅದರಲ್ಲೂ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೂ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರುತ್ತೇವೆ ಎಂದು ಭರವಸೆಯನ್ನು ಕೂಡ ನೀಡಿದ್ದು, ಅದರಂತೆ ಲೋಕಸಭೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಮಂಡನೆಯಾಗಿದೆ.

    ವಿಧೇಯಕ ಮಂಡಿಸಲು ನಡೆದ ಮತದಾನದಲ್ಲಿ 461 ಸದಸ್ಯರು ಪಾಲ್ಗೊಂಡಿದ್ದರು. ಈ ಪೈಕಿ ಬಹುಮತಕ್ಕೆ 3ನೇ ಎರಡರಷ್ಟು ಅಂದ್ರೆ, 307 ಮತಗಳ ಅಗತ್ಯವಿತ್ತು. ಆದ್ರೆ ಎನ್‌ಡಿಎ 269 ಮತಗಳನ್ನು ಪಡೆದುಕೊಂಡು, ಪ್ರತಿಪಕ್ಷಗಳು 198 ಮತ ಗಳಿಸಿಕೊಂಡವು. ಇದರಿಂದ ಬಬಹುಮತ ಗಳಿಸುವಲ್ಲಿ ಸರ್ಕಾರ ವಿಫಲವಾಯಿತು. ಈ ಕುರಿತ ಇ-ವೋಟಿಂಗ್‌ನ ಸ್ಕ್ರೀನ್‌ಶಾಟ್‌ ಚಿತ್ರವೊಂದನ್ನು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 2ನೇ ತ್ರೈಮಾಸಿಕದಲ್ಲಿ ದೇಶದ ಬೆಳವಣಿಗೆ ದರವು 5.4% ರಷ್ಟಿದೆ – ನಿರ್ಮಲಾ ಸೀತಾರಾಮನ್

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಸಂಸದ ಶಶಿ ತರೂರ್‌, ಈ ಮತದಾನದ ಮೂಲಕ ಬಿಜೆಪಿಯವರು ಹೆಚ್ಚುಕಾಲ ಉಳಿಬಾರದು ಎಂಬ ಸಂದೇಶ ಸ್ಪಷ್ಟವಾಗಿದೆ. ಈ ಮಸೂದೆಗೆ ಸ್ಪಷ್ಟ ಬೆಂಬಲ ಸಿಕ್ಕಿಲ್ಲ. ಅನೇಕ ಪಕ್ಷಗಳು ಇದರ ವಿರುದ್ಧವಾಗಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ಯಾಲೆಸ್ತೀನ್ ಬಳಿಕ ಬಾಂಗ್ಲಾ ಅಲ್ಪಸಂಖ್ಯಾತರ ಪರ ಪ್ರಿಯಾಂಕಾ ಧ್ವನಿ

  • ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿ: ಮೋದಿ

    ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿ: ಮೋದಿ

    – ಏಕತಾ ದಿನದಂದು ಪ್ರಧಾನಿ ಭಾಷಣ

    ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು.

    ಗುಜರಾತ್‌ನ (Gujarat) ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು. ರಾಷ್ಟ್ರೀಯ ಏಕತೆಗೆ ಕರೆ ನೀಡಿದ ಪ್ರಧಾನಿ ಮೋದಿ, ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವಲ್ಲಿ ಅದರ ಮೌಲ್ಯವನ್ನು ಒತ್ತಿ ಹೇಳಿದರು.ಇದನ್ನೂ ಓದಿ: ಮಗನನ್ನು ನೋಡಲು ವಿಜಯಲಕ್ಷ್ಮಿ ಮನೆಗೆ ಆಗಮಿಸಿದ ಮೀನಾ ತೂಗುದೀಪ

    ಬಳಿಕ ಮಾತನಾಡುತ್ತಾ, ರಾಷ್ಟ್ರೀಯ ಏಕತಾ ದಿವಸ್ ಹಾಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಪ್ರಪಂಚದ ಹಲವಾರು ದೇಶಗಳಲ್ಲಿ ದೀಪಾವಳಿ ಆಚರಿಸಲಾಗುತ್ತಿದೆ. ಈ ಹಬ್ಬವು ಭಾರತವನ್ನು ಇಡೀ ವಿಶ್ವದೊಂದಿಗೆ ಜೋಡಿಸಿದೆ. ದೇಶಗಳಲ್ಲಿ ಇದನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲಾಗುತ್ತಿದೆ. ಈ ಹೊತ್ತಿನಲ್ಲೇ ಏಕತಾ ದಿವಸ್ ಆಚರಣೆ ಮಾಡುತ್ತಿರುವುದು ವಿಶಿಷ್ಟ ಸಂಗತಿ ಎಂದು ಶ್ಲಾಘಿಸಿದರು.

    ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಯನ್ನು ಈಗಾಗಲೇ ಈ ವರ್ಷದ ಆರಂಭದಲ್ಲಿ ಕ್ಯಾಬಿನೆಟ್‌ನಲ್ಲಿ ಅಂಗೀಕರಿಸಲಾಗಿದ್ದು, ಮುಂದಿನ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು. ಸದ್ಯ ನಾವು ಇದಕ್ಕೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಇದು ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಜೊತೆಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಧಿಸುವಲ್ಲಿ ಸಹಕಾರಿಯಗುತ್ತದೆ ಎಂದರು.

    2019ರಲ್ಲಿ ಆರ್ಟಿಕಲ್ 370 ರದ್ದತಿ ಬಗ್ಗೆ ಮಾತನಾಡಿದ್ದ ಪ್ರಧಾನಿ, ಇದೀಗ ಅದನ್ನು ಶಾಶ್ವತವಾಗಿ ಸಮಾಧಿ ಮಾಡಲಾಗಿದೆ. ಭಾರತಕ್ಕೆ ಸ್ವಾತಂತ್ರ‍್ಯ ಬಂದು 70 ವರ್ಷಗಳ ನಂತರ ದೇಶದಲ್ಲಿ ಒಂದೇ ಸಂವಿಧಾನ ಎಂಬ ಸಂಕಲ್ಪ ಈಡೇರಿದೆ ಎಂದರು.ಇದನ್ನೂ ಓದಿ: ಶಕ್ತಿ ಯೋಜನೆ ಪರಿಷ್ಕರಣೆ ಇಲ್ಲ – ಡಿಕೆಶಿ ಸ್ಪಷ್ಟನೆ

  • ಮೋದಿ 3.0 ಅವಧಿಯಲ್ಲೇ ಒಂದು ದೇಶ, ಒಂದು ಚುನಾವಣೆ ಜಾರಿ?

    ಮೋದಿ 3.0 ಅವಧಿಯಲ್ಲೇ ಒಂದು ದೇಶ, ಒಂದು ಚುನಾವಣೆ ಜಾರಿ?

    ನವದೆಹಲಿ: ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯೊಂದನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ ಸರ್ಕಾರ ಅನುಷ್ಠಾನಕ್ಕೆ ತರಲು ಹೊರಟಿದೆ. ಒಂದು ದೇಶ ಒಂದು ಚುನಾವಣೆ (One Nation, One Election) ಬಿಲ್ ಅನ್ನು ಮುಂಬರುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ‌.

    ಕಳೆದ ಮಾರ್ಚ್‌ನಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಒಂದು ದೇಶ ಒಂದು ಚುನಾವಣೆ ಕಾರ್ಯಸಾಧ್ಯತೆ ಬಗ್ಗೆ ವರದಿಯನ್ನು ನೀಡಿತ್ತು. ಯಾವಗಿಂದ ಆರಂಭಿಸಬೇಕು ಎಂದು ತಿಳಿಸದೇ ಈ ಇದನ್ನು ಹೇಗೆ ಅನುಷ್ಠಾನಕ್ಕೆ ತರಬಹುದು ಎಂದು ವರದಿಯಲ್ಲಿ ವಿವರಿಸಿತ್ತು. ಸದ್ಯ ವರದಿಯನ್ನು ಅಧ್ಯಯನ ಮಾಡಿರುವ ಸರ್ಕಾರ ಇದನ್ನು ಬಿಲ್ ಮೂಲಕ ಸಂಸತ್‌ನಲ್ಲಿ ಮಂಡಿಸಲು ಸಿದ್ಧತೆ ಆರಂಭಿಸಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಭಾರತದ ನಂ.1 ಭಯೋತ್ಪಾದಕ: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ

    ಕಳೆದ ಆಗಸ್ಟ್ 15 ರಂದು ಕೆಂಪು ಕೋಟೆಯಿಂದ ಭಾಷಣ ಮಾಡಬೇಕಿದ್ದಾಗಲೂ ಪ್ರಧಾನಿ ಮೋದಿ, ಒಂದು ದೇಶ ಒಂದು ಚುನಾವಣೆಯ ಅಗತ್ಯವನ್ನು ಒತ್ತಿ ಹೇಳಿದ್ದರು. ಒಂದು ದೇಶ ಒಂದು ಚುನಾವಣೆಯ ಜೊತೆಗೆ ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಬಿಲ್ ಕೂಡಾ ಮಂಡನೆಯಾಗಲಿದೆ ಎನ್ನಲಾಗಿದೆ.

  • One Nation One Election: ಸಂವಿಧಾನದ 5 ಆರ್ಟಿಕಲ್‌ಗಳಿಗೆ ಮಾಡಬೇಕಾಗುತ್ತೆ ತಿದ್ದುಪಡಿ

    One Nation One Election: ಸಂವಿಧಾನದ 5 ಆರ್ಟಿಕಲ್‌ಗಳಿಗೆ ಮಾಡಬೇಕಾಗುತ್ತೆ ತಿದ್ದುಪಡಿ

    ಒಂದು ರಾಷ್ಟ್ರ, ಒಂದು ಚುನಾವಣೆ (One Nation, One Election) ಸಾಧ್ಯತೆ ಕುರಿತು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ (Ram nath Kovind) ಅವರ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ. ಕೇಂದ್ರ ನಡೆಸುತ್ತಿರುವ ಈ ಅಭಿಯಾನಕ್ಕೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಜಕೀಯ ಪರಿಸ್ಥಿತಿ, ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನದಲ್ಲಿ ಆಗಬೇಕಾದ ತಿದ್ದುಪಡಿ ಹೀಗೆ ಅನೇಕ ವಿಚಾರಗಳ ಸುತ್ತ ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಗಿರಕಿ ಹೊಡೆಯುತ್ತಿದೆ. ಅದೇನು ಎಂಬುದರ ಬಗ್ಗೆ ಇಲ್ಲಿ ವಿಸ್ತೃತವಾಗಿ ಚರ್ಚಿಸಲಾಗಿದೆ.

    ಏನಿದು ಒಂದು ರಾಷ್ಟ್ರ, ಒಂದು ಚುನಾವಣೆ?
    ದೇಶಾದ್ಯಂತ ಏಕಕಾಲಕ್ಕೆ ಚುನಾವಣೆಗಳನ್ನು ನಡೆಸುವುದೇ ಒಂದು ರಾಷ್ಟ್ರ, ಒಂದು ಚುನಾವಣೆ ಎಂಬುದರ ಪರಿಕಲ್ಪನೆ. ಅಂದರೆ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲೇ ಚುನಾವಣೆ ನಡೆಸುವುದು. ದೇಶದಲ್ಲಿ ಇದುವರೆಗೆ ಸಾಮಾನ್ಯವಾಗಿ ಸಂಸದ ಹಾಗೂ ಶಾಸಕರ ಸ್ಥಾನಗಳಿಗಾಗಿ ಚುನಾವಣೆಗಳು ಪ್ರತ್ಯೇಕವಾಗಿ ನಡೆಯುತ್ತವೆ. ಆದರೆ ಈ ಪರಿಕಲ್ಪನೆಯಡಿ ಎರಡೂ ಸ್ಥಾನಗಳಿಗೆ ಏಕಕಾಲದಲ್ಲೇ ಚುನಾವಣೆ ನಡೆಸುವುದಾಗಿದೆ. ಇದನ್ನೂ ಓದಿ: ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೇನು? – ಪರಿಹಾರವೇನು? 

    ಇದು ಹೊಸ ಪರಿಕಲ್ಪನೆಯೇ?
    ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಹೊಸದೇನಲ್ಲ. ಭಾರತ ಸ್ವತಂತ್ರಗೊಂಡ ಆರಂಭದಿಂದಲೂ ಈ ಪರಿಕಲ್ಪನೆಯಲ್ಲೇ ಚುನಾವಣೆಗಳು ನಡೆಯುತ್ತಿದ್ದವು. 1952ರ ಮೊದಲ ಚುನಾವಣೆಯಿಂದ ಹಿಡಿದು 1967ರ ನಾಲ್ಕನೇ ಸಾರ್ವತ್ರಿಕ ಚುನಾವಣೆವರೆಗೆ ಲೋಕಸಭೆ ಹಾಗೂ ಎಲ್ಲಾ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲಾಗಿತ್ತು. 1968 ಮತ್ತು 1969 ರಲ್ಲಿ ಹಲವು ವಿಧಾನಸಭೆಗಳ ಅವಧಿ ಪೂರ್ವ ವಿಸರ್ಜನೆಯಾಯಿತು. ಅಲ್ಲದೇ 1970 ರಲ್ಲಿ ಲೋಕಸಭೆ ಅವಧಿಪೂರ್ವ ವಿಸರ್ಜನೆಯಾದ ಕಾರಣ ಏಕಕಾಲದ ಚುನಾವಣೆ ಪ್ರಕ್ರಿಯೆ ಏರುಪೇರಾಯಿತು.

    ಪರ ವಾದ ಏನು?
    ಇಡೀ ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆದರೆ ಭಾರೀ ಪ್ರಮಾಣದ ವೆಚ್ಚಕ್ಕೆ ಕಡಿವಾಣ ಹಾಕಬಹುದು ಎಂಬುದು ಈ ವ್ಯವಸ್ಥೆ ಪರವಾಗಿ ಇರುವವರ ವಾದ. ಈಗಿರುವ ಲೆಕ್ಕಾಚಾರದ ಪ್ರಕಾರ, ದೇಶದಲ್ಲಿ ಚುನಾವಣೆ ಪ್ರಕ್ರಿಯೆಗಾಗಿ 50 ರಿಂದ 60 ಸಾವಿರ ಕೋಟಿ ರೂ. ವೆಚ್ಚವಾಗುತ್ತದೆ. ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ಬಂದಲ್ಲಿ ದೇಶದ ಬೊಕ್ಕಸಕ್ಕೆ ಆಗುವ ಬಹುದೊಡ್ಡ ಹೊರೆಯನ್ನು ತಪ್ಪಿಸಬಹುದು ಎನ್ನಲಾಗುತ್ತಿದೆ. ಅಷ್ಟೇ ಅಲ್ಲ, ಚುನಾವಣೆಗಳ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತಿದ್ದ ನೀತಿ ಸಂಹಿತೆ ಕಿರಿಕಿರಿಗೂ ಇದರಿಂದ ಮುಕ್ತಿ ಸಿಗಬಹುದು ಎಂಬ ವಾದವೂ ಇದೆ. ಅಲ್ಲದೇ ಏಕಕಾಲದ ಚುನಾವಣೆಗಳು ಮತದಾನದ ಪ್ರಮಾಣವನ್ನೂ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಭೂಮಿ ನಿರ್ನಾಮ ಹಂತ ತಲುಪಿದ್ರೆ ಮುಂದೇನು?

    ವಿರೋಧ ಯಾಕೆ?
    ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಗೆ ಕಾಂಗ್ರೆಸ್ ಸೇರಿದಂತೆ ಅನೇಕ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಏಕಕಾಲದ ಚುನಾವಣೆಯಿಂದ ಪ್ರಾದೇಶಿಕ ಪಕ್ಷಗಳು ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಇದೆ. ಭಾರತದಂತಹ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ದೇಶದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಕಾರ್ಯಗತಗೊಳಿಸಲು ಸಾಧ್ಯವಿಲ್ಲ. ಏಕೆಂದರೆ ನಮ್ಮ ವ್ಯವಸ್ಥೆಯ ಮಧ್ಯದಲ್ಲಿಯೇ ಬಹುಮತ ಕಳೆದುಕೊಂಡು ಸರ್ಕಾರವೊಂದು ಅಧಿಕಾರದಿಂದ ಕೆಳಗಿಳಿಯಬಹುದು ಮತ್ತು ಹೊಸ ಸರ್ಕಾರ ರಚನೆಯಾಗಬಹುದು. ಆದರೆ ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಯಾದರೆ ಇಂತಹ ಪರಿಸ್ಥಿತಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆ. ಇದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದೆ ಎನ್ನುವುದು ಮತ್ತೊಂದು ವಾದವಾಗಿದೆ.

    ಈ ಪರಿಕಲ್ಪನೆಯಲ್ಲಿ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ರಾಷ್ಟ್ರಪತಿ ಆಳ್ವಿಕೆಗೆ ಬದಲಾಗುತ್ತಿದ್ದೇವೆ ಎಂದರ್ಥ. ಇದು ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದೆ. ರಾಷ್ಟ್ರಪತಿ ಆಡಳಿತ ವ್ಯವಸ್ಥೆಗೆ ಬದಲಾಯಿಸಲು ಸಂವಿಧಾನದ ಹಲವಾರು ತಿದ್ದುಪಡಿಗಳ ಅಗತ್ಯವಿದೆ ಎನ್ನಲಾಗಿದೆ.

    ಸಂವಿಧಾನಕ್ಕೆ ಮಾಡಬೇಕಾದ ತಿದ್ದುಪಡಿ ಏನು?
    ಕೇಂದ್ರ ಸರ್ಕಾರ ಹಾಗೂ ವಿಧಾನಸಭೆಗಳ ಅವಧಿ ವಿಸ್ತರಿಸುವುದು ಅಥವಾ ಕಡಿತಗೊಳಿಸುವ ಮಹತ್ವದ ಸಂವಿಧಾನ ತಿದ್ದುಪಡಿಗಳನ್ನು ಮಾಡಬೇಕಿದೆ. ಅದು ಈ ಕೆಳಕಂಡಂತಿದೆ.

    ಆರ್ಟಿಕಲ್ 83 (2): ಲೋಕಸಭೆಯ ಅವಧಿಯು ಐದು ವರ್ಷಗಳನ್ನು ಮೀರಬಾರದು ಎಂದು ಅದು ಹೇಳುತ್ತದೆ. ಆದರೆ ಅದನ್ನು ಶೀಘ್ರದಲ್ಲೇ ವಿಸರ್ಜಿಸಬಹುದು.

    ಆರ್ಟಿಕಲ್ 85 (2): ವಿಸರ್ಜನೆಯು ಅಸ್ತಿತ್ವದಲ್ಲಿರುವ ಸದನದ ಅವಧಿಯನ್ನು ಕೊನೆಗೊಳಿಸುತ್ತದೆ. ಸಾರ್ವತ್ರಿಕ ಚುನಾವಣೆಯ ನಂತರ ಹೊಸ ಸದನವನ್ನು ರಚಿಸಲಾಗುತ್ತದೆ.

    ಆರ್ಟಿಕಲ್ 172 (1): ರಾಜ್ಯ ವಿಧಾನಸಭೆಗಳ ಅವಧಿ ವಿಸ್ತರಿಸುವುದು ಅಥವಾ ಕಡಿತಗೊಳಿಸುವುದು. ಇದನ್ನೂ ಓದಿ: ಚೀನಾಗೆ ಭಾರತದ ಮೇಲೆ ಕಣ್ಣು ಯಾಕೆ?

    ಆರ್ಟಿಕಲ್ 174 (2) (ಬಿ): ಸಂಪುಟದ ನೆರವು ಮತ್ತು ಸಲಹೆ ಮೇರೆಗೆ ವಿಧಾನಸಭೆ ವಿಸರ್ಜಿಸುವ ಅಧಿಕಾರ ರಾಜ್ಯಪಾಲರಿಗೆ ಇದೆ. ಬಹುಮತ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಯಿAದ ತಿಳಿದು ಬಂದಾಗ ರಾಜ್ಯಪಾಲರು ತಮ್ಮ ಅಧಿಕಾರ ಚಲಾಯಿಸಬಹುದು.

    ಆರ್ಟಿಕಲ್ 356: ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದು.

    ಒಂದು ರಾಷ್ಟ್ರ ಒಂದು ಚುನಾವಣೆ ಜಾರಿ ಹೇಗೆ?
    ಸಾಂವಿಧಾನಿಕ ತಿದ್ದುಪಡಿಗಾಗಿ, ಸಂಸತ್ತಿನ ಮೂರನೇ ಎರಡರಷ್ಟು ಸದಸ್ಯರು ಮತದಾನಕ್ಕೆ ಹಾಜರಿರಬೇಕು. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳ ಒಮ್ಮತದ ಅಗತ್ಯವಿದೆ. ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಿದ ನಂತರ, ಅದನ್ನು ಭಾರತದ ಅರ್ಧದಷ್ಟು ರಾಜ್ಯಗಳು ತಮ್ಮ ಅಸೆಂಬ್ಲಿಗಳಲ್ಲಿ ನಿರ್ಣಯಗಳ ಮೂಲಕ ಅನುಮೋದಿಸಬೇಕಾಗುತ್ತದೆ.

    ಇದಕ್ಕೂ ಬೇಕು ಅಪಾರ ಸಂಪನ್ಮೂಲ
    ಏಕಕಾಲಕ್ಕೆ ಲೋಕಸಭೆ ಮತ್ತು ರಾಜ್ಯ ಚುನಾವಣೆಗಳನ್ನು ನಡೆಸಲು ಸಂವಿಧಾನಕ್ಕೆ ತಿದ್ದುಪಡಿ ತಂದರೂ ಅಪಾರ ಸಂಪನ್ಮೂಲ ಬೇಕಾಗುತ್ತದೆ. ಮತದಾನ ನಡೆಸಲು 25 ಲಕ್ಷಕ್ಕೂ ಹೆಚ್ಚು ಇವಿಎಂ ಮತ್ತು 25 ಲಕ್ಷ ವಿವಿಪ್ಯಾಟ್‌ಗಳು ಬೇಕಾಗಬಹುದು. ಚುನಾವಣಾ ಆಯೋಗವು ಈಗ ಕೇವಲ 12 ಲಕ್ಷ ಇವಿಎಂಗಳನ್ನು ಮಾತ್ರ ಹೊಂದಿದೆ. ಇದನ್ನೂ ಓದಿ: ದೇಶಕ್ಕೆ ಭಾರತ ಎಂಬ ಹೆಸರೇಕೆ ಬಂತು? ಇಂಡಿಯಾ ಹೆಸರು ಹೇಗೆ ಬಂತು?

    2014ರಲ್ಲಿ ಬಿಜೆಪಿ ನೀಡಿದ್ದ ಭರವಸೆ ಏನು?
    ಬಿಜೆಪಿ ತನ್ನ 2014 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಭರವಸೆ ನೀಡಿತ್ತು. ದಕ್ಷಿಣ ಆಫ್ರಿಕಾದಲ್ಲಿ ರಾಷ್ಟ್ರೀಯ ಮತ್ತು ಪ್ರಾಂತೀಯ ಶಾಸಕಾಂಗಗಳಿಗೆ ಐದು ವರ್ಷಗಳ ಬಳಿಕ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುತ್ತದೆ. ಎರಡು ವರ್ಷಗಳ ನಂತರ ಪುರಸಭೆಯ ಚುನಾವಣೆಗಳನ್ನು ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ಸ್ವೀಡನ್‌ನಲ್ಲಿ, ರಾಷ್ಟ್ರೀಯ ಶಾಸಕಾಂಗ (ರಿಕ್ಸ್ಡಾಗ್) ಮತ್ತು ಪ್ರಾಂತೀಯ ಶಾಸಕಾಂಗ/ಕೌAಟಿ ಕೌನ್ಸಿಲ್ (ಲ್ಯಾಂಡ್‌ಸ್ಟಿಂಗ್) ಮತ್ತು ಸ್ಥಳೀಯ ಸಂಸ್ಥೆಗಳು/ಮುನ್ಸಿಪಲ್ ಅಸೆಂಬ್ಲಿಗಳಿಗೆ ಚುನಾವಣೆಗಳನ್ನು ನಿಗದಿತ ದಿನಾಂಕದಂದು ನಡೆಸಲಾಗುತ್ತದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಂದು ರಾಷ್ಟ್ರ, ಒಂದು ಚುನಾವಣೆ – ಉದ್ದೇಶ ಒಳ್ಳೆಯದಿದ್ದರೆ ಬೆಂಬಲ ಎಂದ ಪ್ರಶಾಂತ್ ಕಿಶೋರ್

    ಒಂದು ರಾಷ್ಟ್ರ, ಒಂದು ಚುನಾವಣೆ – ಉದ್ದೇಶ ಒಳ್ಳೆಯದಿದ್ದರೆ ಬೆಂಬಲ ಎಂದ ಪ್ರಶಾಂತ್ ಕಿಶೋರ್

    ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಸ್ತಾಪಿಸಿರುವ `ಒಂದು ರಾಷ್ಟ್ರ, ಒಂದು ಚುನಾವಣೆ’ (One Nation One Election) ಪರಿಕಲ್ಪನೆಗೆ ಐಎನ್‌ಡಿಐಎ (INDIA) ಮೈತ್ರಿಕೂಟ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ನಡುವೆ ಚುನಾವಣಾ ಚಾಣಕ್ಯ, ರಾಜಕೀಯ ತಂತ್ರಗಾರ ಎಂದೇ ಹೆಸರಾಗಿರುವ ಪ್ರಶಾಂತ್ ಕಿಶೋರ್ (Prashant Kishor) ಈ ಪರಿಕಲ್ಪನೆಯ ಉದ್ದೇಶ ಒಳ್ಳೆಯದಾಗಿದ್ದರೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಶಾಂತ್ ಕಿಶೋರ್, ಈ ಹಿಂದೆಯೂ ಇಂತಹ ಚುನಾವಣಾ ಪದ್ಧತಿ ದೇಶದಲ್ಲಿ ಜಾರಿಯಲ್ಲಿತ್ತು. ಏಕಕಾಲದಲ್ಲಿ ಚುನಾವಣೆ ನಡೆದರೆ ಸಮಯ ಮತ್ತು ಹಣ ಉಳಿತಾಯವಾಗುತ್ತದೆ. ಜೊತೆಗೆ 5 ವರ್ಷದ ಅಧಿಕಾರವಧಿಯಲ್ಲಿ ಸರ್ಕಾರ ಪದೇ-ಪದೇ ಚುನಾವಣೆಗಳನ್ನ (Elections) ಎದುರಿಸುವ ಗೋಜಲು ತಪ್ಪಿಸಬಹುದು ಎಂದು ಸಲಹೆ ಕೊಟ್ಟಿದ್ದಾರೆ.

    ಒಂದು ರಾಷ್ಟ್ರ ಒಂದು ಚುನಾವಣೆ ಪರಿಕಲ್ಪನೆ ಭಾರತದಂತಹ ದೊಡ್ಡ ದೇಶದಲ್ಲಿ ಅನುಷ್ಠಾನಕ್ಕೆ ತರಲು ಸಾಧ್ಯವೇ ಎಂಬುದನ್ನ ಗಮನಿಸಬೇಕು. ಏಕೆಂದರೆ ದೇಶದಲ್ಲಿ ಪ್ರತಿ ವರ್ಷ 25% ಜನರು ಚುನಾವಣೆಯಲ್ಲಿ ಮತದಾನ ಮಾಡುತ್ತಲೇ ಇರುತ್ತಾರೆ. ಸರ್ಕಾರಗಳು ಕೂಡ 5 ವರ್ಷದಲ್ಲಿ ಹಲವು ಬಾರಿ ಚುನಾವಣೆಗಳನ್ನ ಎದುರಿಸುತ್ತವೆ. ಇದರ ಬದಲಿಗೆ 1 ಅಥವಾ 2 ಬಾರಿ ಚುನಾವಣೆ ನಡೆಸಿದರೆ ಉತ್ತಮ. ಇದು ವೆಚ್ಚ ತಗ್ಗಿಸುವುದರ ಜೊತೆಗೆ ಜನರು ಒಂದೇ ಬಾರಿಗೆ ಯಾವ ಸರ್ಕಾರ ಬೇಕೆಂಬುದನ್ನು ನಿರ್ಧರಿಸಲು ಅವಕಾಶ ಸಿಗಲಿದೆ. ಈ ಪರಿಕಲ್ಪನೆ ಒಳ್ಳೆಯ ಉದ್ದೇಶ ಹೊಂದಿದ್ದರೆ ಅಥವಾ 4-5 ವರ್ಷಗಳ ಪರಿವರ್ತನೆಯ ಹಂತವಿದ್ದರೆ ಅದು ದೇಶಕ್ಕೆ ಹಿತಾಸಕ್ತಿಯಾಗುತ್ತದೆ. ಈ ಬಗ್ಗೆ ಜನರೇ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ರಾತ್ರೋ ರಾತ್ರಿ ಬದಲಾವಣೆ ತರಲು ಪ್ರಯತ್ನಿಸಿದರೆ ಸಮಸ್ಯೆಗಳೂ ಉಂಟಾಗುತ್ತವೆ ಎಂದು ಎಚ್ಚರಿಸಿದ್ದಾರೆ.

    ಏಕಾಏಕಿ ಪರಿವರ್ತನೆ ತರಲು ಸಾಧ್ಯವಿಲ್ಲ. ಇದರಿಂದ ಸಮಸ್ಯೆಗಳೇ ಹೆಚ್ಚಾಗುತ್ತವೆ. ಸರ್ಕಾರ ಒಂದೇ ಬಾರಿಗೆ ಚುನಾವಣೆ ನಡೆಸುವ ಮಸೂದೆ ತರುತ್ತಿದೆ. ಅದು ಮೊದಲು ಜಾರಿಗೆ ಬರಲಿ. ಇದನ್ನು ಸರ್ಕಾರ ಒಳ್ಳೆಯ ಉದ್ದೇಶದಿಂದ ತಂದಿದ್ದೇ ಆದಲ್ಲಿ, ದೇಶಕ್ಕೆ ಒಳಿತಾಗುತ್ತದೆ ಎಂದರೆ ಬೆಂಬಲ ನೀಡೋಣ. ಆದರೆ ಸರ್ಕಾರವು ಯಾವ ಉದ್ದೇಶದಿಂದ ಅದನ್ನ ತರುತ್ತಿದೆ ಎಂಬುದರ ಮೇಲೆ ಪ್ರತಿಕ್ರಿಯೆ ಅವಲಂಬಿತವಾಗಿರುತ್ತದೆ ಎಂದು ಹೇಳಿದ್ದಾರೆ.

    ಒಂದು ರಾಷ್ಟ್ರ-ಒಂದು ಚುನಾವಣೆ ಪರಿಕಲ್ಪನೆಗೆ ಐಎನ್‌ಡಿಐಎ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಹಲವು ನಾಯಕರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಈ ನಡುವೆ ಪ್ರಶಾಂತ್ ಕಿಶೋರ್ ಅವರ ಹೇಳಿಕೆಯು ಅಚ್ಚರಿ ಉಂಟುಮಾಡಿದೆ.

    ಏನಿದು ಒನ್ ನೇಷನ್, ಒನ್ ಎಲೆಕ್ಷನ್?
    ಹಲವಾರು ಅಚ್ಚರಿ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಈಗ ‘ಒಂದು ದೇಶ, ಒಂದು ಚುನಾವಣೆ’ ನಡೆಸಲು ಮುಂದಾಗಿದೆ ಎಂಬ ಪ್ರಶ್ನೆ ಎದ್ದಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದಕ್ಕೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದು ಕರೆಯಲಾಗುತ್ತದೆ. ಇದು 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆಯ ಭಾಗವಾಗಿರುವ ಹಿನ್ನೆಲೆಯಲ್ಲಿ ಈ ವಿಶೇಷ ಅಧಿವೇಶನದ ಬಗ್ಗೆ ನಿರೀಕ್ಷೆ ಈಗ ಹೆಚ್ಚಾಗಿದೆ.

    1967 ರವರೆಗೆ ಭಾರತದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿತ್ತು. ನಾಲ್ಕು ಚುನಾವಣೆಗಳು ಈ ರೀತಿ ನಡೆದಿದ್ದವು. 1968-69ರಲ್ಲಿ ಕೆಲವು ರಾಜ್ಯಗಳ ವಿಧಾನಸಭೆ ಅಕಾಲಿಕವಾಗಿ ವಿಸರ್ಜಿಸಲ್ಪಟ್ಟ ನಂತರ ಈ ಪದ್ಧತಿ ಸ್ಥಗಿತವಾಗಿದೆ. ಲೋಕಸಭೆಯು ಮೊದಲ ಬಾರಿಗೆ 1970 ರಲ್ಲಿ ನಿಗದಿತ ಅವಧಿಗಿಂತ ಒಂದು ವರ್ಷ ಮುಂಚಿತವಾಗಿ ವಿಸರ್ಜನೆಯಾಗಿತ್ತು ಮತ್ತು 1971 ರಲ್ಲಿ ಮಧ್ಯಂತರ ಚುನಾವಣೆಗಳು ನಡೆದಿತ್ತು. ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಸಾಕಾರಗೊಳಿಸಲು ಸಾಂವಿಧಾನಿಕ ತಿದ್ದುಪಡಿ ಮತ್ತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • One Nation, One Election – ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದಲ್ಲಿ ಸಮಿತಿ ರಚನೆ

    One Nation, One Election – ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದಲ್ಲಿ ಸಮಿತಿ ರಚನೆ

    ನವದೆಹಲಿ: ಹಲವಾರು ಅಚ್ಚರಿ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಈಗ ʼಒಂದು ದೇಶ, ಒಂದು ಚುನಾವಣೆʼ ನಡೆಸಲು ಮುಂದಾಗಿದ್ಯಾ ಎಂಬ ಪ್ರಶ್ನೆ ಎದ್ದಿದೆ.

    ಒಂದು ರಾಷ್ಟ್ರ, ಒಂದು ಚುನಾವಣೆ (One Nation, One Election) ಪರಿಕಲ್ಪನೆಯ ಸಾಧಕ, ಬಾಧಕ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind.) ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದ್ದರಿಂದ ಈಗ ಈ ಪ್ರಶ್ನೆ ಎದ್ದಿದೆ.

    ಸಮಿತಿಯ ಸದಸ್ಯರ ಬಗ್ಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಚುನಾವಣೆ ಕಲ್ಪನೆಯ ಬಗ್ಗೆ ಜನರ ಅಭಿಪ್ರಾಯ ಏನು? ಪಕ್ಷಗಳ ನಿಲುವು ಏನು? ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ? ಒವುಗಳ ಬಗ್ಗೆ ಸಮಿತಿ ಅಧ್ಯಯನ ನಡೆಸಲಿದೆ. ಇದನ್ನೂ ಓದಿ: ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದ ಭಾರತ – ಯಾವ ದೇಶದ್ದು ಎಷ್ಟು?

    ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ (Special Session of the Parliament) ನಡೆಸಲಾಗುತ್ತದೆ ಎಂದು ಘೋಷಣೆ ಮಾಡಿದ ಮರು ದಿನ ಕೇಂದ್ರದಿಂದ ಈ ಅಚ್ಚರಿಯ ನಿರ್ಧಾರ ಪ್ರಕಟವಾಗಿದೆ. ಅಧಿವೇಶನದಲ್ಲಿ ʼಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಮಸೂದೆಯನ್ನು ಮಂಡಿಸಲು ಸರ್ಕಾರ ಮುಂದಾಗಿದೆ ಎಂಬ ಮಾತು ಕೇಳಿ ಬಂದಿದೆ. ಆದರೆ ಇಲ್ಲಿಯವರೆಗೆ ಸರ್ಕಾರದಿಂದ ಯಾರೂ ಇದನ್ನು ಖಚಿತಪಡಿಸಿಲ್ಲ.

    ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು (Election) ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದಕ್ಕೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದು ಕರೆಯಲಾಗುತ್ತದೆ.  ಬಿಜೆಪಿ (BJP) ಮತ್ತು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹಲವಾರು ಸಂದರ್ಭಗಳಲ್ಲಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಇದು 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆಯ ಭಾಗವಾಗಿರುವ ಹಿನ್ನೆಲೆಯಲ್ಲಿ ಈ ವಿಶೇಷ ಅಧಿವೇಶನದ ಬಗ್ಗೆ ನಿರೀಕ್ಷೆ ಈಗ ಹೆಚ್ಚಾಗಿದೆ.

    1967 ರವರೆಗೆ ಭಾರತದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿತ್ತು. ನಾಲ್ಕು ಚುನಾವಣೆಗಳು ಈ ರೀತಿ ನಡೆದಿದ್ದವು. 1968-69ರಲ್ಲಿ ಕೆಲವು ರಾಜ್ಯಗಳ ವಿಧಾನಸಭೆ ಅಕಾಲಿಕವಾಗಿ ವಿಸರ್ಜಿಸಲ್ಪಟ್ಟ ನಂತರ ಈ ಪದ್ಧತಿ ಸ್ಥಗಿತವಾಗಿದೆ. ಲೋಕಸಭೆಯು ಮೊದಲ ಬಾರಿಗೆ 1970 ರಲ್ಲಿ ನಿಗದಿತ ಅವಧಿಗಿಂತ ಒಂದು ವರ್ಷ ಮುಂಚಿತವಾಗಿ ವಿಸರ್ಜನೆಯಾಗಿತ್ತು ಮತ್ತು 1971 ರಲ್ಲಿ ಮಧ್ಯಂತರ ಚುನಾವಣೆಗಳು ನಡೆದಿತ್ತು.

    2016ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಮಾತನಾಡಿದ್ದ ಪ್ರಧಾನಿ ಮೋದಿ, 2019ರ ಲೋಕಸಭೆ ಚುನಾವಣೆ ಬಳಿಕ ಈ ವಿಷಯದ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದರು. ಸಭೆಯನ್ನು ಹಲವು ವಿರೋಧ ಪಕ್ಷಗಳು ವಿರೋಧಿಸಿದ್ದವು.  ಇದನ್ನೂ ಓದಿ: ಗೃಹಬಳಕೆಯ ಬೆನ್ನಲ್ಲೇ ವಾಣಿಜ್ಯ ಬಳಕೆಯ LPG ಬೆಲೆ 158 ರೂ. ಇಳಿಕೆ

    ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಸಾಕಾರಗೊಳಿಸಲು ಸಾಂವಿಧಾನಿಕ ತಿದ್ದುಪಡಿ ಮತ್ತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ  ನವೆಂಬರ್-ಡಿಸೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮುಂದಿನ ವರ್ಷ ಮೇ ಆಸುಪಾಸಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.

    ಪ್ರಧಾನಿ ಮೋದಿ ಈ ಹಿಂದೆ ಹಲವು ಬಾರಿ ವಿವಿಧ ಕಾರ್ಯಕ್ರಮಗಳಲ್ಲಿ ʼಒಂದು ದೇಶ, ಒಂದು ಚುನಾವಣೆʼಯ ಪರ ಬ್ಯಾಟಿಂಗ್‌ ಮಾಡಿದ್ದರು. ಈ ಚುನಾವಣೆ ಪರಿಕಲ್ಪನೆ ಕೇವಲ ಚರ್ಚೆಯ ವಿಷಯವಲ್ಲ. ಅದು ದೇಶದ ಪರಿಕಲ್ಪನೆಯಾಗಿದೆ. ಪ್ರತಿ ಕೆಲ ತಿಂಗಳುಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತಿರುತ್ತವೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತವೆ. ಇದು ನಿಮಗೆ ತಿಳಿದಿರುವ ವಿಚಾರವೇ ಆಗಿದೆ. ಆದ್ದರಿಂದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಹಾಗೂ ಚರ್ಚೆ ನಡೆಸುವ ಅಗತ್ಯವಿದೆ ಎಂದಿದ್ದರು.

    ಒಂದೇ ಮತದಾರರ ಪಟ್ಟಿಯನ್ನು ಲೋಕಸಭಾ, ವಿಧಾನಸಭಾ ಹಾಗೂ ಇತರ ಚುನಾವಣೆ ಬಳಸಿಕೊಳ್ಳಬೇಕು. ಸರ್ಕಾರದ ದುಡ್ಡು ಅಂದರೆ ಅದು ಜನರದ್ದೇ ದುಡ್ಡು. ಎರಡು ಬಾರಿ ಚುನಾವಣೆ ಮಾಡಿ ಸಮಯ ಹಾಗೂ ಹಣವನ್ನು ಯಾಕೆ ವ್ಯರ್ಥ ಮಾಡಬೇಕು? ಎಲ್ಲ ಚುನಾವಣೆಗಳಿಗೂ ಒಂದೇ ಮತದಾರರ ಪಟ್ಟಿ ಇರಬೇಕು. ಆಗಾಗ ನಡೆಯುವ ಮತದಾನದಿಂದಾಗಿ  ತಿಂಗಳಿಗೊಮ್ಮೆ ಅಭಿವೃದ್ಧಿ ಕಾರ್ಯಗಳ ಮೇಲೆ ಹೇರುವ ಚುನಾವಣಾ ನೀತಿ ಸಂಹಿತೆಯ ಅಡ್ಡಿಯನ್ನು ತಡೆಯಬೇಕು ಎಂದು  ಪ್ರತಿಪಾದಿಸಿದ್ದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೆ ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಪ್ರಧಾನಿ ಮೋದಿ ಮಾತು

    ಮತ್ತೆ ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಪ್ರಧಾನಿ ಮೋದಿ ಮಾತು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ ಒನ್ ನೇಷನ್, ಒನ್ ಎಲೆಕ್ಷನ್ ಬಗ್ಗೆ ಮಾತನಾಡಿದ್ದು, ಎಲ್ಲ ಚುನಾವಣೆಗಳಿಗೂ ಒಂದೇ ಮತದಾರರ ಪಟ್ಟಿ ಇರಬೇಕು. ಇದರಿಂದ ಆಗಾಗ್ಗೆ ನಡೆಯುವ ಮತದಾನದಿಂದಾಗಿ ಪ್ರತಿ ಕೆಲ ತಿಂಗಳಿಗೊಮ್ಮೆ ಅಭಿವೃದ್ಧಿ ಕಾರ್ಯಗಳ ಮೇಲೆ ಚುನಾವಣಾ ನೀತಿ ಸಂಹಿತೆಯ ಅಡ್ಡಿಯನ್ನು ತಡೆಯಬೇಕು ಎಂದು ಹೇಳಿದ್ದಾರೆ.

    ಅಖಿಲ ಭಾರತ ಅಧಿಕಾರಿಗಳ 80ನೇ ಸಮಾವೇಶದ ಅಂತಿಮ ದಿನವಾದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಒಂದು ರಾಷ್ಟ್ರ, ಒಂದು ಚುನಾವಣೆ ಮಾತ್ರವಲ್ಲದೆ ಶಾಸನ ಪುಸ್ತಕಗಳ ಭಾಷೆಯನ್ನು ಸರಳೀಕರಿಸಿ ಸಾಮಾನ್ಯರಿಗೆ ಮನದಟ್ಟಾಗುವಂತೆ ಹಾಗೂ ಅನಗತ್ಯ ಕಾನೂನುಗಳನ್ನು ತೆಗೆದು ಸುಲಭ ಪ್ರಕ್ರಿಯೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

    ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಕೇವಲ ಚರ್ಚೆಯ ವಿಷಯವಲ್ಲ. ಅದು ದೇಶದ ಪರಿಕಲ್ಪನೆಯಾಗಿದೆ. ಪ್ರತಿ ಕೆಲ ತಿಂಗಳುಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತವೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತವೆ. ಇದು ನಿಮಗೆ ತಿಳಿದಿರುವ ವಿಚಾರವೇ ಆಗಿದೆ. ಆದ್ದರಿಂದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಹಾಗೂ ಚರ್ಚೆ ನಡೆಸುವ ಅಗತ್ಯವಿದೆ ಎಂದು ಕರೆ ನೀಡಿದ್ದಾರೆ.

    ಒಂದೇ ಮತದಾರರ ಪಟ್ಟಿಯನ್ನು ಲೋಕಸಭಾ, ವಿಧಾನಸಭಾ ಹಾಗೂ ಇತರ ಚುನಾವಣೆ ಬಳಸಿಕೊಳ್ಳಬೇಕು. ಇದಕ್ಕಾಗಿ ಸಮಯ ಹಾಗೂ ಹಣವನ್ನು ಯಾಕೆ ವ್ಯರ್ಥ ಮಾಡುತ್ತಿದ್ದೇವೆ ಎಂದು ಪ್ರಶ್ನಿಸಿದರು.

    ಇದೇ ವೇಳೆ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಮೂರೂ ವಿಭಾಗಗಳ ನಡುವೆ ಸಮನ್ವಯದ ಅಗತ್ಯವಿದೆ. ಅವರ ಪಾತ್ರ ಹಾಗೂ ಕೆಲಸದ ಬಗ್ಗೆ ಸಂವಿಧಾನದಲ್ಲಿ ವಿವರಿಸಲಾಗಿದೆ ಎಂದು ಒತ್ತಿ ಹೇಳಿದರು.