Tag: ಒಎಸ್‌ಸಿ

  • ಖಾಸಗಿ ಫೋಟೋ ಇಟ್ಕೊಂಡು ಬ್ಲ್ಯಾಕ್‌ಮೇಲ್ ವಿದೇಶಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ – ಆರೋಪಿಗಾಗಿ ಪೊಲೀಸರ ಶೋಧ

    ಮುಂಬೈ: ವಿದೇಶಿ ಮಹಿಳೆಯ (Foreign Woman) ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ (Rape) ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಮುಂಬೈ (Mumbai) ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಆರೋಪಿ ಮನೀಶ್ ಗಾಂಧಿ (Manish Gandhi) ಎಂದು ಗುರುತಿಸಲಾಗಿದೆ. ಈತ 2016ರಿಂದ 2022ರ ನಡುವೆ ಪೋಲೆಂಡ್‌ನ (Poland) ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಆಕೆಯ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಅಲ್ಲದೇ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಲಾಗಿದೆ. ಈ ವಿಚಾರವನ್ನು ಯಾರೊಂದಿಗಾದರೂ ಹೇಳಿಕೊಂಡರೆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಿದೇಶಿ ಮಹಿಳೆಗೆ ಹುಟ್ಟಿದಾತ ದೇಶಭಕ್ತನಾಗಲು ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಪ್ರಜ್ಞಾ ಠಾಕೂರ್ ಟಾಂಗ್

    ಈ ಕುರಿತು ಪೊಲೀಸರು ಆತನ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸುವ ಸಲುವಾಗಿ ಶೋಧ ನಡೆಸುತ್ತಿದ್ದಾರೆ.

    ಈ ರೀತಿಯಾದ ಘಟನೆ ಪಂಜಾಬ್‌ನಲ್ಲಿಯೂ (Punjab) ನಡೆದಿದ್ದು, ವ್ಯಕ್ತಿಯೋರ್ವ ವಿಕಲಚೇತನ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿದ್ದ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಕಳೆದ ಐದು ತಿಂಗಳಿನಿಂದ ನಿರಂತರ ಅತ್ಯಾಚಾರವೆಸಗಿದ್ದ. ಸಖಿ ಒನ್ ಸ್ಟಾಪ್ ಸೆಂಟರ್ (ಒಎಸ್‌ಸಿ) ತಂಡವು ಅತ್ಯಾಚಾರಕ್ಕೊಳಗಾದ 26 ವರ್ಷದ ಸಂತ್ರಸ್ತೆಯನ್ನು ರಕ್ಷಿಸಿ, ಅಪರಾಧಿಯನ್ನು ಬಂಧಿಸಿದ್ದಾರೆ. ಅಲ್ಲದೇ ಸಂತ್ರಸ್ತೆಯನ್ನು ಸ್ಥಳೀಯ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: Special- ‘ಆಸ್ಕರ್’ ಪ್ರಶಸ್ತಿ ಮೌಲ್ಯ ಕೇವಲ ರೂ.82: ಅಚ್ಚರಿಯಾದರೂ ಸತ್ಯ

    ಒಎಸ್‌ಸಿ (OSC) ಯೋಜನೆಯು 2015-16ರಲ್ಲಿ ಪಂಜಾಬ್‌ನಲ್ಲಿ ಜಾರಿಗೆ ಬಂತು. ಈ ಯೋಜನೆಯಡಿಯಲ್ಲಿ ಸರ್ಕಾರವು ಖಾಸಗಿ ಮತ್ತು ಸಾರ್ವಜನಿಕ ವಲಯದಲ್ಲಿ ಯಾವುದೇ ರೀತಿಯ ದೌರ್ಜನ್ಯದಿಂದ ನೊಂದ ಮಹಿಳೆಯರಿಗೆ ಸಮಗ್ರ ಬೆಂಬಲ ಮತ್ತು ಸಹಾಯವನ್ನು ನೀಡುತ್ತದೆ. ಸರ್ಕಾರದ ಈ ಯೋಜನೆಯಡಿಯಲ್ಲಿ ಪಂಜಾಬ್ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಒಎಸ್‌ಸಿ ಸಂಸ್ಥೆಯನ್ನು ತೆರೆಯಲಾಗಿದೆ. ಇದನ್ನೂ ಓದಿ: ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ ಆಗಮನ – ಮಂಡ್ಯ, ಧಾರವಾಡದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ