Tag: ಒಕ್ಕಲಿಗರು

  • ಒಕ್ಕಲಿಗ ನಾಯಕತ್ವಕ್ಕಾಗಿ ಚಿಲ್ರೆ ಕೆಲ್ಸ ಮಾಡಿದ್ರೆ ಆಗಲ್ಲ: ಡಿವಿಎಸ್‌

    ಒಕ್ಕಲಿಗ ನಾಯಕತ್ವಕ್ಕಾಗಿ ಚಿಲ್ರೆ ಕೆಲ್ಸ ಮಾಡಿದ್ರೆ ಆಗಲ್ಲ: ಡಿವಿಎಸ್‌

    – ರಾಜಕೀಯ ಲಾಭಕ್ಕಾಗಿ ಪೆನ್‌ಡ್ರೈವ್‌ ರಿಲೀಸ್‌ ಮಾಡಿದ್ದಾರೆ
    – ವಿಲನ್‌ ಯಾರು ಅನ್ನೋದು ಕೊನೆಯಲ್ಲಿ ಗೊತ್ತಾಗುತ್ತೆ

    ಬೆಂಗಳೂರು: ಬಹಳ ವರ್ಷಗಳಿಂದ ಒಕ್ಕಲಿಗ (Vokkaliga) ನಾಯಕತ್ವಕ್ಕಾಗಿ ಸಂಘರ್ಷ ನಡೆಯುತ್ತಿದೆ. ಒಕ್ಕಲಿಗ ನಾಯಕತ್ವ ವಹಿಸಿಕೊಳ್ಳಲು ಈ ಚಿಲ್ಲರೆ ಕೆಲಸ ಮಾಡಿದರೆ ಆಗುವುದಿಲ್ಲ ಎಂದು ಸಂಸದ ಡಿವಿ ಸದಾನಂದ ಗೌಡ (DV Sadananda gowda) ಹೇಳಿದ್ದಾರೆ.

    ಪ್ರಜ್ವಲ್‌ ರೇವಣ್ಣ (Prajwal Revanna) ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪೆನ್‌ಡ್ರೈವ್, ಸಿಡಿ ಬಿಡುವಂಥ ನೀಚ ಕೆಲಸದಿಂದ ಯಾರೂ ಒಕ್ಕಲಿಗ ನಾಯಕರಾಗುವುದಿಲ್ಲ. ರಾಜಕೀಯ ಲಾಭಕ್ಕಾಗಿ ಎಷ್ಟೋ ಮನೆಗಳನ್ನು ಪೆನ್‌ಡ್ರೈವ್ ರಿಲೀಸ್ ಮಾಡಿ ಹಾಳು ಮಾಡಿದ್ದಾರೆ. ದೇವರು ಇದ್ದಾನೋ ಇಲ್ವೋ ಅನ್ನುವಷ್ಟರ ಮಟ್ಟಿಗೆ ಸಂತ್ರಸ್ತರ ವಿಚಾರದಲ್ಲಿ ಕೆಟ್ಟ ಬೆಳವಣಿಗೆ ಆಗಿದೆ. ಪ್ರಜ್ವಲ್ ಪರಾರಿಯಲ್ಲಿ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಇದೆ ಎಂದು ದೂರಿದರು.

    ಸಾವಿರಾರು ಪೆನ್‌ಡ್ರೈವ್‌ಗಳಿವೆ. ಇಷ್ಟೆಲ್ಲ ಮಾಡಲು ಎಷ್ಟು ಸಮಯ, ಎಷ್ಟು ಹಣ ಬೇಕಾಗುತ್ತೆ? ಕಳೆದ ಆರು ತಿಂಗಳಿನಿಂದ ಈ ಪೆನ್‌ಡ್ರೈವ್ ಸಿದ್ಧತೆ ನಡೆಯುತ್ತಿರಬಹುದು. ಪ್ರಜ್ವಲ್ ಪ್ರಕರಣದಲ್ಲಿ ಸೂಕ್ತ ತನಿಖೆಯಾಗಿ ಸತ್ಯ ಹೊರಗೆ ಬರಬೇಕು. ಪ್ರಕರಣದಲ್ಲಿ ರಾಜಕೀಯ ಪ್ರವೇಶವಾಗಿದೆ ಎಂದರು.

    ಯಾವುದೇ ಸಂದರ್ಭದಲ್ಲೂ ಇಷ್ಟು ದೊಡ್ಡ ಗಂಭೀರ ಆರೋಪ ಯಾರ ಮೇಲೂ ಬಂದಿರಲಿಲ್ಲ. ಆರೋಪ ಬಂದಾಗಲೇ ವಿದೇಶಕ್ಕೆ ಪ್ರಜ್ವಲ್ ಹೋಗಿದ್ದಾರೆ. ಮೇಲ್ನೋಟಕ್ಕೆ ಪ್ರಜ್ವಲ್ ಮೇಲೆ ಸಂಶಯವಿದೆ. ಹಾಗಂತ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಟಾರ್ಗೆಟ್ ಮಾಡಿ ಬಲಿಪಶು ಮಾಡುವ ಕೆಲಸ ಆಗುತ್ತಿದೆ. ಒಬ್ಬ ರಾಜಕಾರಣಿಯನ್ನು ಬಲಿಪಶು ಮಾಡುವ ಅತ್ಯಂತ ನೀಚ ಕೆಲಸ ಅಂದ್ರೆ ಸಿಡಿ, ಪೆನ್‌ಡ್ರೈವ್ ಬಿಡುವುದು. ಯಾರು ಪೆನ್‌ಡ್ರೈವ್ ರಿಲೀಸ್ ಮಾಡಿದ್ದಾರೋ ಅವರನ್ನ ಹಿಡಿದು ಶಿಕ್ಷೆ ಕೊಡಿಸುವ ಕೆಲಸ ಆಗಬೇಕು. ಸಿಡಿ, ಪೆನ್‌ಡ್ರೈವ್ ಡೈನಮೈಟ್ ಇದ್ದಂತೆ. ಪರದೆಯ ಹಿಂದೆ ಸಿಎಂ, ಡಿಸಿಎಂ ಇದ್ದಾರೆ. ರಿಮೋಟ್ ಕಂಟ್ರೋಲ್‌ ಮೂಲಕ ಎಲ್ಲವನ್ನೂ ಅವರು ನಿಯಂತ್ರಿಸುತ್ತಿದ್ದಾರೆ. ಒಂದು ಮಟ್ಟಿಗೆ ಪ್ರಜ್ವಲ್ ಪ್ರಕರಣ ಬಿಜೆಪಿಗೆ ಮುಜುಗರ ತಂದು ಡ್ಯಾಮೇಜ್‌ ಆಗಿತ್ತು. ಇವತ್ತು ಆ ಡ್ಯಾಮೇಜ್ ಬೌನ್ಸ್ ಬ್ಯಾಕ್ ಆಗಿದೆ ಎಂದು ಹೇಳಿದರು.

     

    ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮತ್ತು ಡಿಕೆ ಶಿವಕುಮಾರ್‌ (DK Shivakumar) ಮಧ್ಯೆ ಮೊದಲಿಂದಲೂ ಸಂಘರ್ಷ ಇದೆ. ಇಬ್ಬರೂ ನಾವು ಜೋಡೆತ್ತುಗಳು ಎನ್ನುತ್ತಿದ್ದರು. ಜೋಡೆತ್ತುಗಳು ಪರಸ್ಪರ ಹಾಯುವುದನ್ನೂ ನೋಡಿದ್ದೇವೆ. ಇಬ್ಬರೂ ಕಥಾ ನಾಯಕ ಅಂದುಕೊಂಡಿದ್ದಾರೆ. ಆದರೆ ಕಥಾನಾಯಕನಷ್ಟೇ ಬಲಿಷ್ಟ ವಿಲನ್ ಇರುತ್ತಾನೆ. ಆದರೆ ವಿಲನ್ ಯಾರು ಅಂತ ಆರಂಭದಲ್ಲಿ ಗೊತ್ತಾಗುವುದಿಲ್ಲ. ಕೊನೆಗೆ ವಿಲನ್‌ ಯಾರು ಅನ್ನೋದು ಗೊತ್ತಾಗುತ್ತದೆ ಎಂದರು.

    ಲೋಕಸಭೆ ಚುನಾವಣೆಯಲ್ಲಿ (Lok Sabha Election) ನಮ್ಮ ಪರ ವಾತಾವರಣ ಇದೆ. ಕಳೆದ ಹತ್ತು ವರ್ಷಗಳಿಂದ ನಿರಂತರ ಕೆಲಸ ಮಾಡಿದ್ದೇವೆ, ಕಾರ್ಯಕ್ರಮ ಮಾಡಿದ್ದೇವೆ. ಕಾಂಗ್ರೆಸ್‌ನವರಲ್ಲಿ ಫೋರ್ಸ್ ಇಲ್ಲ. ಕಾಂಗ್ರೆಸ್‌ನವರು ಹಗಲಲ್ಲಿ ಚುನಾವಣೆ ಮಾಡುವುದಿಲ್ಲ. ಅವರದ್ದು ಏನಿದ್ದರೂ ರಾತ್ರಿ ಚುನಾವಣೆ ಮಾತ್ರ. ಅವರು ರಾತ್ರಿ ಹೋಗಿ ಯಾರ್ಯಾರಿಗೆ ಪೆಟ್ಟಿಗೆ ಕೊಡಬೇಕೋ ಅಂತ ರಾತ್ರಿ ರಾಜಕಾರಣ ಮಾಡುತ್ತಾರೆ. ನಾವು ಸಾಧನೆಗಳ ಮೂಲಕ ನಿರಂತರವಾಗಿ ಜನರ ಕೆಲಸ ಮಾಡುತ್ತಾ ಬರುತ್ತಿದ್ದೇವೆ ಎಂದು ಹೇಳಿದರು.

     

  • ಯಾವುದೇ ಕಾರಣಕ್ಕೂ ಜಾತಿ ಗಣತಿ ವರದಿ ಒಪ್ಪಬಾರದು: ಒಕ್ಕಲಿಗರ ಸಭೆಯಲ್ಲಿ ನಿರ್ಣಯ

    ಯಾವುದೇ ಕಾರಣಕ್ಕೂ ಜಾತಿ ಗಣತಿ ವರದಿ ಒಪ್ಪಬಾರದು: ಒಕ್ಕಲಿಗರ ಸಭೆಯಲ್ಲಿ ನಿರ್ಣಯ

    ಬೆಂಗಳೂರು: ಸಿಎಂ ಸಿದ್ದರಾಮಯ್ಯನವರಿಗೆ (CM Siddaramaiah) ಜಾತಿ ಗಣತಿ ರೂಪದಲ್ಲಿ ಅಸಲಿ ಸವಾಲು ಈಗ ಶುರುವಾಗಿದೆ. ಕರ್ನಾಟಕದಲ್ಲಿ ಜಾತಿ ಗಣತಿ (Caste Survey) ಮಂಡನೆಗೆ ಪ್ರಬಲ ಸಮುದಾಯಗಳ ವಿರೋಧ ವ್ಯಕ್ತವಾಗುತ್ತಿದೆ. ಪ್ರಮುಖವಾಗಿ ಲಿಂಗಾಯತ – ಒಕ್ಕಲಿಗ ಸಮುದಾಯಗಳು (Lingayat Vokkaliga Community) ಆಕ್ಷೇಪ ವ್ಯಕ್ತವಾಗುತ್ತಿದೆ.

    ಹೊಸದಾಗಿ ಜಾತಿಗಣತಿ ನಡೆಸಬೇಕೆಂದು ಆದಿಚುಂಚನಗಿರಿ ಶ್ರೀಗಳು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಇವತ್ತು ನಿರ್ಮಲಾನಂದನಾಥ ಶ್ರೀ, ನಂಜಾವದೂತ ಶ್ರೀಗಳ ನೇತೃತ್ವದಲ್ಲಿ ಪಕ್ಷಾತೀತವಾಗಿ ಒಕ್ಕಲಿಗ ಸಮುದಾಯದ ಚಿಂತನ ಮಂಥನ ಸಭೆ ನಡೆದಿದೆ. ಸಭೆಯಲ್ಲಿ ಡಿಸಿಎಂ ಡಿಕೆಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ಮಾಜಿ ಡಿಸಿಎಂ ಅಶ್ವತ್ಥನಾರಾಯಣ್, ಮಾಜಿ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದರು. ಇದನ್ನೂ ಓದಿ: 48 ವರ್ಷಗಳಲ್ಲೇ ಮೊದಲು! ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಬುಮ್ರಾ

    ಕಾಂತರಾಜು ವರದಿ (Kantharaju Report) ವಿರೋಧಿಸಿ ಈ ಸಭೆಯಲ್ಲಿ 8 ಅಂಶಗಳ ನಿರ್ಣಯ ಕೈಗೊಳ್ಳಲಾಗಿದೆ. ಸಭೆ ಬಳಿಕ ಮಾತಾಡಿದ ನಿರ್ಮಲಾನಂದ ಶ್ರೀ, ಜಾತಿ ಜನಗಣತಿ ವಾಸ್ತವ ನೆಲೆಗಟ್ಟಿನಲ್ಲಿ ವರದಿ ತಯಾರಾಗಿಲ್ಲ.ಸಾಕಷ್ಟು ದೋಷಗಳಿದ್ದು, ಜಾತಿ ಜನಗಣತಿ ಬಿಡುಗಡೆ ಮಾಡಬೇಕಾದರೆ ಹೊಸದಾಗಿ ಗಣತಿ ಮಾಡಬೇಕು ಎಂದು ಒತ್ತಾಯಿಸಿದರು. ಆದರೆ ಸರ್ಕಾರದ ಭಾಗವಾಗಿರುವ ಡಿಸಿಎಂ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿ ಸ್ವಾಮೀಜಿಗಳು ಮಾತನಾಡುತ್ತಾರೆ ಎಂದು ಹೇಳಿ ಹೊರಟರು.

    ಮಾಜಿ ಡಿಸಿಎಂ ಅಶ್ವತ್ಥನಾರಾಯಣ್ ಸಹ ಜಾತಿಗಣತಿಯಲ್ಲಿ ಲೋಪ ಇದೆ, ಒಪ್ಪಲು ಸಾಧ್ಯವಿಲ್ಲ ಎಂದರೆ ಸಚಿವರಾದ ಚಲುವರಾಯಸ್ವಾಮಿ, ಜಾತಿ ಗಣತಿಯಲ್ಲಿ ಲೋಪ ಇದೆ, ಸರಿಪಡಿಸಲು ಸಿಎಂ ಗಮನಕ್ಕೆ ತರುತ್ತೇವೆ ಎಂದರು.

     

    ಒಕ್ಕಲಿಗರ ಸಂಘದ ಸಭೆಯ ನಿರ್ಣಯ ಏನು?
    – ಯಾವ ಕಾರಣಕ್ಕೂ ಕಾಂತರಾಜು ಕಮಿಟಿ ವರದಿ ಒಪ್ಪಬಾರದು. ಜಾತಿ ಜನಗಣತಿ ಮಾಡುವುದಾದರೆ ಹೊಸದಾಗಿ ಜಾತಿ ಆಧಾರಿತವಾಗಿ ಮಾಡಲಿ
    – ಕಾಂತರಾಜು ವರದಿಯನ್ನು ಶೈಕ್ಷಣಿಕ, ಸಾಮಾಜಿಕ ಗಣತಿ ಅಂತ ಮಾತ್ರ ಒಪ್ಪಬಹುದು. ಸರ್ಕಾರ ಸಮಯದಾಯದ ಜೊತೆ ಮಾತನಾಡುವುದಾದ್ರೆ ಶ್ರೀಗಳ ಸಮ್ಮುಖದಲ್ಲಿ ಸಭೆ ನಡೆಸಲಿ.
    – ಕಾಂಗ್ರೆಸ್‌ನ ಒಕ್ಕಲಿಗ ಶಾಸಕರು ಹಾಗೂ ಸಚಿವರು ಸರ್ಕಾರದ ಮಟ್ಟದಲ್ಲಿ ವಿರೋಧಿಸಬೇಕು. ಯಾವುದೇ ಪಕ್ಷ ಇರಲಿ ಸಮುದಾಯದ ಎಲ್ಲಾ ಶಾಸಕರು, ಸಂಸದರು ಒಂದಾಗಬೇಕು.
    – ಜಾತಿ ಗಣತಿ ಅಂಕಿ ಅಂಶ ಬಿಡುಗಡೆ ಮಾಡುವುದಾದರೆ ಮೊದಲು ಸಮುದಾಯದ ಗಮನಕ್ಕೆ ತರಬೇಕು. ಹೋರಾಟ ಅನಿವಾರ್ಯವಾದರೆ ಪಕ್ಷಾತೀತವಾಗಿ ಎಲ್ಲರೂ ಸಮುದಾಯದ ಪರ ನಿಲ್ಲಬೇಕು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಕ್ಕಲಿಗರ ಮತಗಳು ಬಿಜೆಪಿಗೆ ವಾಲುತ್ತಿರುವುದು ಹೆಚ್‌ಡಿಕೆಗೆ ಆತಂಕ ಹೆಚ್ಚಿಸಿದೆ – ಸಿ.ಪಿ.ಯೋಗೇಶ್ವರ್

    ಒಕ್ಕಲಿಗರ ಮತಗಳು ಬಿಜೆಪಿಗೆ ವಾಲುತ್ತಿರುವುದು ಹೆಚ್‌ಡಿಕೆಗೆ ಆತಂಕ ಹೆಚ್ಚಿಸಿದೆ – ಸಿ.ಪಿ.ಯೋಗೇಶ್ವರ್

    ರಾಮನಗರ: ಕೆಂಪೇಗೌಡರ ಪ್ರತಿಮೆ (Kempegowda Statue) ಬಗ್ಗೆ ರಾಜಕೀಯ ಚರ್ಚೆ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy), ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D.K.Shivakumar) ವಿರುದ್ಧ ಮಾಜಿ ಸಚಿವ ಸಿ.ಪಿ.ಯೋಗೀಶ್ವರ್‌ (C.P.Yogeshwara) ಕಿಡಿಕಾರಿದ್ದಾರೆ.

    ಕೆಂಪೇಗೌಡರ ಪ್ರತಿಮೆ ಜಾತಿ, ಪಕ್ಷಕ್ಕೆ ಮೀರಿದ ವಿಚಾರ. ಚುನಾವಣಾ ವರ್ಷ ಆಗಿರುವುದರಿಂದ ಕಾಂಗ್ರೆಸ್-ಜೆಡಿಎಸ್ (Congress-JDS) ಈ ರೀತಿ ಚರ್ಚೆ ಮಾಡ್ತಿದ್ದಾರೆ. ನಾವು ಮಾಡದ ಕೆಲಸವನ್ನ ಬಿಜೆಪಿ ಮಾಡಿದೆ ಎಂಬ ಕೀಳರಿಮೆ ಅವರಿಗಿದೆ ಎಂದು ಯೋಗೇಶ್ವರ್‌ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹಳೇ ಮೈಸೂರಿನ ಭದ್ರಕೋಟೆ ಗಟ್ಟಿ ಮಾಡಲು ಎಚ್‌ಡಿಕೆ ಪ್ಲಾನ್‌

    ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರನ್ನೂ ಆಹ್ವಾನಿಸಲಾಗಿದೆ. ಸ್ವತಃ ಅಶ್ವತ್ಥ ನಾರಾಯಣ ಅವರೇ ಹೋಗಿ ಆಹ್ವಾನ‌ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಕರೆ ಮಾಡಿ ಆಹ್ವಾನಿಸಿದ್ದಾರೆ. ಆದರೆ ಕುಮಾರಸ್ವಾಮಿಗೆ ರಾಜಕೀಯ ಆತಂಕ ಇದೆ. ಒಕ್ಕಲಿಗರ ಮತಗಳು ಬಿಜೆಪಿಗೆ ವಾಲುತ್ತಿರುವ ಆತಂಕ ಹೆಚ್ಚಾಗಿದೆ. ಒಕ್ಕಲಿಗರ ಮತ ಬ್ಯಾಂಕ್‌ ಅನ್ನು ಯಾರೂ ಜೆಡಿಎಸ್‌ಗೆ ಗುತ್ತಿಗೆ ಕೊಟ್ಟಿಲ್ಲ. ಬಿಜೆಪಿ ಕೂಡ ಕೆಂಪೇಗೌಡರ ದೂರದೃಷ್ಟಿಯಂತೆ ಆಡಳಿತ ನೀಡುತ್ತಿದೆ ಎಂದಿದ್ದಾರೆ.‌

    ಹೆಚ್‌.ಡಿ.ಕುಮಾರಸ್ವಾಮಿ ಎರಡು ಬಾರಿ ವಿಫಲವಾಗಿರುವ ನಾಯಕ. ಕುಮಾರಸ್ವಾಮಿಯವರನ್ನು ಜನ ತಿರಸ್ಕಾರ ಮಾಡ್ತಿದ್ದಾರೆ. ಆ ಪ್ರಕ್ರಿಯೆ 2023ಕ್ಕೂ ಮುಂದುವರಿಯಲಿದೆ‌. ಅವರು ಅಧಿಕಾರ ಇದ್ದಾಗ ಕೆಲಸ ಮಾಡಲಿಲ್ಲ. ಕೇವಲ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡ್ತಿದ್ದಾರೆ. ಹಾಗಾಗಿ ಒಕ್ಕಲಿಗ ಸಮಾಜ ಕೂಡ ಬಿಜೆಪಿ ಪರ ಒಲವು ತೋರಿದೆ. ಜೆಡಿಎಸ್ ಒಕ್ಕಲಿಗ ಸಮುದಾಯದ ಮತಗಳ ಮೇಲೆ ಡಿಪೆಂಡ್ ಆಗಿದೆ. ಬೇರೆ ಸಮುದಾಯದ ಸಪೋರ್ಟ್ ಸಿಗ್ತಿಲ್ಲ. ಅವರು 2023ಕ್ಕೂ ಸಕ್ಸಸ್ ಆಗೋದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೆಲ್ಲುವ ವಿಶ್ವಾಸ ಇಲ್ಲದೆ ಸಿದ್ದರಾಮಯ್ಯ ಜಾಗ ಹುಡುಕಾಟ: ಯಡಿಯೂರಪ್ಪ ವ್ಯಂಗ್ಯ

    Live Tv
    [brid partner=56869869 player=32851 video=960834 autoplay=true]

  • ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿದ ಕೂಡಲೇ ಒಕ್ಕಲಿಗರು ಬಿಜೆಪಿ ಹಿಂದೆ ಹೋಗೋದಿಲ್ಲ: ಕುಮಾರಸ್ವಾಮಿ

    ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿದ ಕೂಡಲೇ ಒಕ್ಕಲಿಗರು ಬಿಜೆಪಿ ಹಿಂದೆ ಹೋಗೋದಿಲ್ಲ: ಕುಮಾರಸ್ವಾಮಿ

    ಬೆಂಗಳೂರು: ಕೆಂಪೇಗೌಡರ ಪ್ರತಿಮೆ (KempegowdaStatue) ಸ್ಥಾಪನೆ ಮಾಡಿದ ಕೂಡಲೇ ಒಕ್ಕಲಿಗರ (Okkaligas) ಮತ ಬಿಜೆಪಿಗೆ (BJP) ಹೋಗುವುದಿಲ್ಲ. ಅಂತಹ ಭ್ರಮೆಯಿಂದ ಬಿಜೆಪಿ ಹೊರಗೆ ಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕೆಂಪೇಗೌಡರ ಪ್ರತಿಮೆ, ಪ್ರಧಾನಿ ನರೇಂದ್ರ ಮೋದಿ (Narendra Modi) ಕಾರ್ಯಕ್ರಮದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಬರುತ್ತಾರೆ ಹೋಗುತ್ತಾರೆ ಅಷ್ಟೆ. ಕೆಂಪೇಗೌಡ ಪ್ರತಿಮೆ ಅನಾವರಣ ಒಂದು ಭಾಗ. ಈಗಾಗಲೇ ರಾಜ್ಯದ ಹಲವಾರು ಭಾಗದಲ್ಲಿ ಕೆಂಪೇಗೌಡ ಪ್ರತಿಮೆಗಳು ನಿತ್ಯ ಒಂದಲ್ಲ ಒಂದು ಭಾಗದಲ್ಲಿ ಅನಾವರಣ ಆಗುತ್ತಿವೆ. ಇದು ಬಿಜೆಪಿಯ ನಿಯೋಜಿತ ಕಾರ್ಯಕ್ರಮ ಅಷ್ಟೆ. ಅದಕ್ಕೆ ನಾನು ಹೆಚ್ಚಿನ ಮಹತ್ವ ಕೊಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ದೆಹಲಿಯ ರಹಸ್ಯ ಸ್ಥಳದಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್

    ಕೆಂಪೇಗೌಡರ ಕನಸು ನನಸಾದಾಗ ನಾವು ಕೆಂಪೇಗೌಡರಿಗೆ ಗೌರವ ಕೊಟ್ಟ ಹಾಗೆ. ಬೆಂಗಳೂರು ನಗರ ಇಷ್ಟು ದೊಡ್ಡದಾಗಿ ಬೆಳೆದಿದೆ. ಬೆಂಗಳೂರಿನಲ್ಲಿ ನಿರುದ್ಯೋಗ ಹೆಚ್ಚಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳು ಬೆಂಗಳೂರಿನಲ್ಲಿ ದೊಡ್ಡ ಅನಾಹುತ ಮಾಡಿವೆ. ಅದನ್ನು ಸರಿಪಡಿಸುವ ಕೆಲಸ ಮಾಡಿ ಕೆಂಪೇಗೌಡರಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 5,000 ಕೋಟಿ ವೆಚ್ಚದ ಬೆಂಗಳೂರು ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಫೋಟೋ ಬಿಡುಗಡೆ

    ಕೆಂಪೇಗೌಡ ಪ್ರತಿಮೆಯಿಂದ ಬಿಜೆಪಿಗೆ ಒಕ್ಕಲಿಗರ ಮತ ಹೋಗುತ್ತದೆ ಎಂಬ ಭ್ರಮೆ ಬೇಡ. ಕೆಂಪೇಗೌಡ ಪ್ರತಿಮೆ ಮಾಡಿ, ಮೋದಿ ಕೈಯಲ್ಲಿ ಉದ್ಘಾಟನೆ ಮಾಡಿಸಿದರೆ ಒಕ್ಕಲಿಗರು ಮತ್ತು ಕನ್ನಡಿಗರು ಬಿಜೆಪಿ ಹಿಂದೆ ಹೋಗುವುದಿಲ್ಲ. ಅಂತಹ ಭ್ರಮೆಯಲ್ಲಿ ಬಿಜೆಪಿ ಅವರು ಇದ್ದರೆ, ಆ ಭ್ರಮೆಯಿಂದ ಜನರೇ ಅವರನ್ನು ಹೊರಗೆ ತರುತ್ತಾರೆ ಎಂದು ಟಾಂಗ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನನಗೆ ಸಂಬಂಧ ಇಲ್ಲದ ವಿಷಯ- ಡಿಸಿಎಂ ಗೋವಿಂದ ಕಾರಜೋಳ

    ನನಗೆ ಸಂಬಂಧ ಇಲ್ಲದ ವಿಷಯ- ಡಿಸಿಎಂ ಗೋವಿಂದ ಕಾರಜೋಳ

    ಬೆಂಗಳೂರು: ನನಗೆ ಸಂಬಂಧ ಇಲ್ಲ ವಿಷಯವಾಗಿದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ನಾನು ಪ್ರತಿಯಿಸಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಡಿಕೆ.ಶಿವಕುಮಾರ್ ಬಂಧನ ಖಂಡಿಸಿ ಇಂದು ರಾಜಧಾನಿ ಬೆಂಗಳೂರಿನಲ್ಲಿ ಒಕ್ಕಲಿಗರ ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ನಾನು ಮಾತನಾಡಲ್ಲ. ಅದು ನನಗೆ ಸಂಬಂಧ ಇಲ್ಲದ ವಿಷಯ. ದೇಶದಲ್ಲಿ ಕಾನೂನು ಕ್ರಮಗಳು ನಡೆಯುತ್ತಿರುತ್ತವೆ. ಅದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದು ತಿಳಿಸಿದರು.

    ಇಂದು ಡಿಸಿಎಂ ಅವರು ನೆಲಮಂಗಲಕ್ಕೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ವರ್ಗಕ್ಕೆ ಬಿಸಿ ಮುಟ್ಟಿಸಿದ್ದಾರೆ. ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು. ವಿದ್ಯಾರ್ಥಿ ನಿಲಯದ ಸ್ವಚ್ಛತೆ, ಊಟ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಣೆ ನಡೆಸಿದರು.

    ವಿಶೇಷವೆಂದರೆ ನೆಲಮಂಗಲ ತಾಲೂಕು ಮಟ್ಟದ ಯಾವೊಬ್ಬ ಅಧಿಕಾರಿಗೂ ಮಾಹಿತಿ ನೀಡದೆ ದಿಢೀರ್ ಭೇಟಿ ನೀಡುವ ಮೂಲಕ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿದ್ದಾರೆ. ಕಸ ನಿರ್ವಹಣೆಯಲ್ಲಿ ನೆಲಮಂಗಲ ಪುರಸಭೆ ವೈಫಲ್ಯವನ್ನು ಕಂಡ ಡಿಸಿಎಂ, ಪುರಸಭೆ ಅಧಿಕಾರಿಗಳ ಕಾರ್ಯ ವೈಖರಿಗೆ ಡಿಸಿಎಂ ಗೋವಿಂದ ಕಾರಜೋಳ ಬೇಸರ ವ್ಯಕ್ತಪಡಿಸುದ್ದಾರೆ.

  • ನನ್ನಷ್ಟು ದೊಡ್ಡ ಒಕ್ಕಲಿಗ ಯಾರು ಇಲ್ಲ, ನಿಜವಾದ ಒಕ್ಕಲಿಗ ನಾನು: ವೀರಪ್ಪ ಮೊಯ್ಲಿ

    ನನ್ನಷ್ಟು ದೊಡ್ಡ ಒಕ್ಕಲಿಗ ಯಾರು ಇಲ್ಲ, ನಿಜವಾದ ಒಕ್ಕಲಿಗ ನಾನು: ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರ: ನಾನು ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯ ಜಿಲ್ಲೆಯ ಒಕ್ಕಲಿಗ ಸಮುದಾಯದ ಮೂವರನ್ನು ಮಂತ್ರಿ ಮಾಡಿದ್ದೆ. ಹಾಸನದಲ್ಲೂ ಒಕ್ಕಲಿಗರಿಗೆ ಪ್ರಾತಿನಿಧ್ಯ ನೀಡಿದ್ದೆ. ಅಷ್ಟು ಮಟ್ಟದಲ್ಲಿ ಒಕ್ಕಲಿಗ ಶಾಸಕರನ್ನು ಸಚಿವರನ್ನಾಗಿ ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

    ಚಿಕ್ಕಬಳಾಪುರ ವಿಧಾನಸಭಾ ಕ್ಷೇತ್ರದ ಮಂಚನಬಲೆ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ ಸೇರಿದಂತೆ ಎಲ್ಲಾ ಕಡೆ ಒಕ್ಕಲಿಗರನ್ನ ಮಂತ್ರಿ ಮಾಡಿದ್ದು ನಾನೇ. ಶಾಸಕ ಡಾ.ಸುಧಾಕರ್ ಅವರನ್ನು ಸಹ ಮಂತ್ರಿ ಮಾಡುವುದು ನಾನೇ. ಹೀಗಾಗಿ ಒಕ್ಕಲಿಗ ಸಮುದಾಯಕ್ಕೆ ಅತಿ ಹೆಚ್ಚು ಕೊಡುಗೆ ಕೊಟ್ಟ ನಾನು ನಿಜವಾದ ಒಕ್ಕಲಿಗ. ನನ್ನಷ್ಟು ದೊಡ್ಡ ಒಕ್ಕಲಿಗ ಯಾರು ಇಲ್ಲ ಎಂದು ಹೇಳಿದರು.

    ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಜಾತಿ ಹೆಸರಲ್ಲಿ ನನಗೆ ಮತ ನೀಡದಂತೆ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ನೀವು ಜಾತಿ ನೋಡದೇ ನನಗೆ ಮತ ನೀಡಿ. ಈ ಬಾರಿಯೂ ಗೆಲ್ಲಿಸುತ್ತೀರಿ ಎನ್ನುವ ವಿಶ್ವಾಸವಿದೆ ಎಂದು ಮತದಾರರ ಮನವೊಲಿಸಿದರು.

    ಈ ಭಾಗಕ್ಕೆ ಎತ್ತಿನಹೊಳೆ ನೀರು ಹರಿಸಿಯೇ ನಾನು ಪ್ರಾಣ ಬಿಡುತ್ತೇನೆ ಎಂದು ಪುನರುಚ್ಚರಿಸಿದ ಸಂಸದರು, ಇದಕ್ಕೆ ಅನೇಕ ಮಂದಿ ವಿರೋಧಿಸಿದರು. ಆದರೆ ನಾನು ಹೆದರುವುದಿಲ್ಲ. ಈ ಭಾಗಕ್ಕೆ ನೀರು ಹರಿಸದೆ ಸಾಯುವುದಿಲ್ಲ. ಎತ್ತಿನಹೊಳೆ ಯೋಜನೆಯಿಂದ ಕರಾವಳಿ ಭಾಗದ ಜನರು ನನಗೆ ಕಪ್ಪು ಪತಾಕೆ ಹಾರಿಸಿದರು. ನಾನು ಅವರ ವಿರೋಧ ಕಟ್ಟಿಕೊಂಡೆ. ಯಾಕೆ ಸ್ವಂತ ಊರಿನವರ ವಿರೋಧ ಕಟ್ಟಿಕೊಳ್ಳುತ್ತಿಯಾ ಅಂತ ನನ್ನ ಕೆಲ ಹಿತೈಷಿಗಳು ಹೇಳಿದರು. ಆದರೆ ಎತ್ತಿನಹೊಳೆ ನೀರನ್ನು ಈ ಭಾಗಕ್ಕೆ ಹರಿಸುತ್ತೇನೆ ಎಂದು ಚಿಕ್ಕಬಳ್ಳಾಪುರ ಜನರಿಗೆ ಮಾತುಕೊಟ್ಟಿದ್ದೇನೆ. ಹೀಗಾಗಿ ಎತ್ತಿನಹೊಳೆ ಕಾಮಗಾರಿ ಐದು ವರ್ಷದಿಂದ ಭರದಿಂದ ಸಾಗುತ್ತಿದೆ. ಅದಕ್ಕೆ ಅಡ್ಡಿಪಡಿಸುವ ಕೆಲಸವನ್ನು ಈಗಲೂ ಮಾಡುತ್ತಿದ್ದಾರೆ. ನಾನು ಧರ್ಮಸ್ಥಳದ ಮಂಜುನಾಥನ ಪಾದ ತೊಳೆಯುವ ಪರಿಶುದ್ಧವಾದಂತಹ ಎತ್ತಿನಹೊಳೆ ನೀರನ್ನು ಹರಿಸಿಯೇ ಸಿದ್ಧ ಎಂದರು.