Tag: ಒಡಿಒಪಿ ಬ್ರಾಂಡ್ ಅಂಬಾಸೀಡರ್

  • ಉತ್ತರ ಪ್ರದೇಶ ಸರ್ಕಾರದ ಯೋಜನೆಯ ರಾಯಭಾರಿಯಾದ ಕಂಗನಾ

    ಉತ್ತರ ಪ್ರದೇಶ ಸರ್ಕಾರದ ಯೋಜನೆಯ ರಾಯಭಾರಿಯಾದ ಕಂಗನಾ

    ಲಕ್ನೋ: ಉತ್ತರ ಪ್ರದೇಶ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ಒಂದು ಜಿಲ್ಲೆ-ಒಂದು ಉತ್ಪನ್ನ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಹೆಸರನ್ನು ಘೋಷಿಸಿದೆ. ಇದನ್ನೂ ಓದಿ: ಗಾಂಧಿ ಜಯಂತಿ ವಿಶೇಷ – ವಿಜಯಪುರದ ಗ್ರಾಮ ಸಭೆ ವೀಕ್ಷಣೆ ಮಾಡಲಿದ್ದಾರೆ ಮೋದಿ

    ಶುಕ್ರವಾರ ನಟಿ ಕಂಗನಾ ರಣಾವತ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮನೆಗೆ ಭೇಟಿ ನೀಡಿದ್ದರು. ರಾಜ್ಯದ 75 ಜಿಲ್ಲೆಗಳಾದ್ಯಂತ ಉತ್ಪನ್ನ – ನಿರ್ದಿಷ್ಟ ಸಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರ ಒಂದು ಜಿಲ್ಲೆ-ಒಂದು ಉತ್ಪನ್ನ(ಒಡಿಒಪಿ) ಕಾರ್ಯಕ್ರಮವನ್ನು ಆರಂಭಿಸಿದೆ.

    ಈ ಕುರಿತಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಲ್ ಟ್ವಿಟ್ಟರ್‍ನಲ್ಲಿ, ಖ್ಯಾತ ನಟಿ ಕಂಗನಾ ರಣಾವತ್ ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಭೇಟಿಯಾದರು. ಅವರಿಗೆ ಒಡಿಒಪಿ ಉತ್ಪನ್ನವನ್ನು ನೀಡಿದರು. ಕಂಗನಾ ಅವರು ಒಡಿಒಪಿಗೆ ನಮ್ಮ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪತಿ ಇಲ್ಲದ ಮೇಲೆ ಬದುಕಿ ಪ್ರಯೋಜನವಿಲ್ಲ – ಡೆತ್‍ನೋಟ್ ಬರೆದು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

    ಇದೇ ವೇಳೆ ಕಂಗನಾ ರಣಾವತ್ ಯೋಗಿ ಆದಿತ್ಯನಾಥ್ ಅವರು ಮಾಡುತ್ತಿರುವ ಕೆಲಸಗಳ ಕುರಿತಂತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಂತರ ಯೋಗಿ ಆದಿತ್ಯನಾಥ್ ಅವರು ಕೂಡ ಅಯೋಧ್ಯೆ ಮಂದಿರಕ್ಕೆ ಭೇಟಿ ನೀಡುವಂತೆ ಕಂಗನಾಗೆ ವಿನಂತಿಸಿದರು.