Tag: ಒಡಿಶಾ ರೈಲು ದುರಂತ

  • ಒಡಿಶಾ ರೈಲು ದುರಂತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ

    ಒಡಿಶಾ ರೈಲು ದುರಂತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ

    ನವದೆಹಲಿ: ಒಡಿಶಾ ರೈಲು ದುರಂತಕ್ಕೆ ಕಾರಣರಾದವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

    ರೈಲು ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿದ ನಂತರ ಮಾತನಾಡಿದ ಪ್ರಧಾನಿ ಮೋದಿ, ಇದೊಂದು ನೋವಿನ ಘಟನೆ. ಗಾಯಾಳುಗಳ ಚಿಕಿತ್ಸೆಗೆ ಸರ್ಕಾರ ನೆರವು ನೀಡಲಿದೆ. ಇದೊಂದು ಗಂಭೀರ ಘಟನೆಯಾಗಿದ್ದು, ಪ್ರತಿಯೊಂದು ಕೋನದಿಂದ ತನಿಖೆಗೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ರೈಲ್ವೆ ಹಳಿಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ನಾನು ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

    ಆಸ್ಪತ್ರೆ ಭೇಟಿಗೂ ಮುನ್ನ ಪ್ರಧಾನಿ ಮೋದಿ ಅವರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕನಿಷ್ಠ 288 ಜನರು ಸಾವನ್ನಪ್ಪಿದ ಮತ್ತು 800 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಸ್ಥಳದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಮೋದಿ ಅವರು ಫಕೀರ್ ಮೋಹನ್ ಆಸ್ಪತ್ರೆ ಬಾಲಾಸೋರ್‌ಗೆ ಭೇಟಿ ನೀಡಿದ್ದರು.

    ಶುಕ್ರವಾರ ಸಂಜೆ ನಡೆದ ಒಡಿಶಾ ರೈಲು ದುರಂತಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಶನಿವಾರ ಅಪಘಾತದ ಕುರಿತು ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಅಪಘಾತದ ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದರು. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಟ್ವಿಟ್ಟರ್‌ನಲ್ಲಿ ಮೋದಿ ಹೇಳಿದ್ದರು.

    ಸಂತ್ರಸ್ತ ಕುಟುಂಬಗಳಿಗೆ ಯಾವುದೇ ತೊಂದರೆ ಆಗದಂತೆ, ಅವರು ಅಗತ್ಯವಿರುವ ಸಹಾಯವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ವಿಶೇಷ ಕಾಳಜಿ ವಹಿಸಲಾಗುವುದು ಎಂದು ಮೋದಿ ತಿಳಿಸಿದ್ದಾರೆ.

  • ರೈಲು ಸಿಗದೆ ಪರದಾಡಿದ್ದ ವಾಲಿಬಾಲ್ ಕ್ರೀಡಾಪಟುಗಳು ವಿಮಾನದ ಮೂಲಕ ರಾಜ್ಯಕ್ಕೆ ಆಗಮನ

    ರೈಲು ಸಿಗದೆ ಪರದಾಡಿದ್ದ ವಾಲಿಬಾಲ್ ಕ್ರೀಡಾಪಟುಗಳು ವಿಮಾನದ ಮೂಲಕ ರಾಜ್ಯಕ್ಕೆ ಆಗಮನ

    ಚಿಕ್ಕಬಳ್ಳಾಪುರ: ಒಡಿಶಾ ರೈಲು ದುರಂತ (Odisha Train Tragedy) ಪ್ರಕರಣದ ಪರಿಣಾಮದ ಹಿನ್ನೆಲೆ ಪಶ್ಚಿಮ ಬಂಗಾಳ, ಒಡಿಶಾ, ಕರ್ನಾಟಕ ರೈಲು ಮಾರ್ಗ ಸಂಚಾರ ರದ್ದಾಗಿದೆ. ಇದರಿಂದಾಗಿ ಪಶ್ಚಿಮ ಬಂಗಾಳದ (West Bengal) ಹೌರಾದಿಂದ ಬೆಂಗಳೂರಿಗೆ (Bengaluru) ಬರಲು ರೈಲು ಸಿಗದೆ ಪರದಾಡಿದ್ದ ಕ್ರೀಡಾಪಟುಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಸಹಾಯ ಹಸ್ತ ಚಾಚಿದೆ.

    ರೈಲು ಸಂಚಾರ ರದ್ದಾದ ಹಿನ್ನೆಲೆ ಕರ್ನಾಟಕ ಸರ್ಕಾರ ವಿಮಾನದ ಮೂಲಕ ಕ್ರೀಡಾಪಟುಗಳನ್ನು ರಾಜ್ಯಕ್ಕೆ ಕರೆತಂದಿದೆ. ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಗಾಗಿ 16 ವರ್ಷದ ಒಳಗಿನ ಬಾಲಕರ ಹಾಗೂ ಬಾಲಕಿಯರ ತಂಡ ಸೇರಿದಂತೆ ಒಟ್ಟು 24 ಆಟಗಾರರು ಮತ್ತು 6 ಮಂದಿ ಕೋಚ್‌ಗಳು ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರಲು ರೈಲು ಸಿಗದ ಹಿನ್ನೆಲೆ ವಿಡಿಯೋ ಮೂಲಕ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ನಾವು ಸೇಫ್ ಆಗಿದ್ದೇವೆ; ಸುರಕ್ಷಿತವಾಗಿ ಸುಮೇದ್ ಸಿಖರ್ಜಿ ತಲುಪಿದ 110 ಕನ್ನಡಿಗರು

    ಈ ವಿಡಿಯೋ ತಲುಪಿದ ತಕ್ಷಣ ಕಾರ್ಯಪ್ರವೃತ್ತರಾದ ಸಚಿವರು ಮತ್ತು ಅಧಿಕಾರಿಗಳು ಕ್ರೀಡಾಪಟುಗಳನ್ನು ಬೆಂಗಳೂರಿಗೆ ಕರೆತರಲು ವಿಮಾನದ ವ್ಯವಸ್ಥೆ ಮಾಡಿದ್ದರು. ಅಲ್ಲದೇ ಸೂಕ್ತ ವಸತಿ ಮತ್ತು ಊಟದ ವ್ಯವಸ್ಥೆಯನ್ನೂ ಮಾಡಿದ್ದರು. ಇದೀಗ ಇಂಡಿಗೋ ವಿಮಾನದ ಮೂಲಕ ಕ್ರೀಡಾಪಟುಗಳು (Volleyball Players) ಮತ್ತು ಕೋಚ್‌ಗಳು (Coach) ಸುರಕ್ಷಿತವಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಮಾತನಾಡಿದ ಕೋಚ್‌ಗಳಾದ ಮಮತಾ ಶೆಟ್ಟಿ ಮತ್ತು ತೇಜಸ್ವಿನಿ, ದೇವರ ದಯೆಯಿಂದ ನಾವೂ ಸಹ ಬದುಕಿ ಬಂದಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂದೂ ನಡೆಯಲಿದೆ ಶೈಕ್ಷಣಿಕ ಮೇಳ ವಿದ್ಯಾಪೀಠ- ಮಿಸ್ ಮಾಡದೇ ಬನ್ನಿ

  • ನಾವು ಸೇಫ್ ಆಗಿದ್ದೇವೆ; ಸುರಕ್ಷಿತವಾಗಿ ಸುಮೇದ್ ಸಿಖರ್ಜಿ ತಲುಪಿದ 110 ಕನ್ನಡಿಗರು

    ನಾವು ಸೇಫ್ ಆಗಿದ್ದೇವೆ; ಸುರಕ್ಷಿತವಾಗಿ ಸುಮೇದ್ ಸಿಖರ್ಜಿ ತಲುಪಿದ 110 ಕನ್ನಡಿಗರು

    ಚಿಕ್ಕಮಗಳೂರು: ಒಡಿಶಾ ರೈಲು ದುರಂತದಿಂದ (Odisha Train Accident) ಸಂಕಷ್ಟಕ್ಕೆ ಸಿಲುಕಿದ್ದ 110 ಜನ ಕನ್ನಡಿಗರು ಸುರಕ್ಷಿತವಾಗಿ ಜಾರ್ಖಂಡ್‌ನ (Jharkhand) ಸುಮೇದ್ ಸಿಖರ್ಜಿಗೆ ತಲುಪಿದ್ದಾರೆ. ಅಲ್ಲದೇ ತಾವು ಸೇಫ್ ಆಗಿದ್ದೇವೆ ಎಂದು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ.

    ಹೌರಾ ರೈಲಿನಲ್ಲಿ ಚಿಕ್ಕಮಗಳೂರಿನ (Chikkamagaluru) ಕಳಸ, ಸಂಸೆ, ಹೊರನಾಡು, ಕುದುರೆಮುಖದ ಸುಮಾರು 110 ಜನರು ಜೈನ ಕ್ಷೇತ್ರಗಳ ದರ್ಶನಕ್ಕೆ ತೆರಳಿದ್ದರು. ಈ ವೇಳೆ ರೈಲು ಅಪಘಾತಗೊಂಡಿತ್ತು. ಈಗ ಎಲ್ಲಾ ಯಾತ್ರಿಕರು ಕೋಲ್ಕತ್ತಾ (Kolkata) ರೈಲು ನಿಲ್ದಾಣದಿಂದ ಮೂರು ಬಸ್‍ಗಳ ಮೂಲಕ ಯಾತ್ರಾ ಸ್ಥಳಕ್ಕೆ ತಲುಪಿದ್ದಾರೆ ಎಂಬ ಮಾಹಿತಿ ಬಂದಿದೆ. ಇದನ್ನೂ ಓದಿ: ದುರಂತಕ್ಕೂ ಮುಂಚೆ ಮಾಡಿದ್ದು ಎನ್ನಲಾದ ವೀಡಿಯೋ ವೈರಲ್‌ – ರೈಲು ಬೋಗಿಗಳಲ್ಲಿ ಕಿಕ್ಕಿರಿದು ತುಂಬಿದ್ರು ಪ್ರಯಾಣಿಕರು

    ಈಗಾಗಲೇ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿರುವ ಯಾತ್ರಿಕರು, ತಾವು ಸೇಫ್ ಆಗಿದ್ದೇವೆ ಎಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಅಪಘಾತದಲ್ಲಿ ಯಾರಿಗೂ ತೊಂದರೆಯಾಗಿಲ್ಲ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತದಿಂದ ಪಾರಾಗಿ ಬಂದಿದ್ದವರು ಹೊರಟಿದ್ದ ಬಸ್ ಅಪಘಾತ- ಹಲವರ ಸ್ಥಿತಿ ಗಂಭೀರ

  • ದುರಂತಕ್ಕೂ ಮುಂಚೆ ಮಾಡಿದ್ದು ಎನ್ನಲಾದ ವೀಡಿಯೋ ವೈರಲ್‌ – ರೈಲು ಬೋಗಿಗಳಲ್ಲಿ ಕಿಕ್ಕಿರಿದು ತುಂಬಿದ್ರು ಪ್ರಯಾಣಿಕರು

    ದುರಂತಕ್ಕೂ ಮುಂಚೆ ಮಾಡಿದ್ದು ಎನ್ನಲಾದ ವೀಡಿಯೋ ವೈರಲ್‌ – ರೈಲು ಬೋಗಿಗಳಲ್ಲಿ ಕಿಕ್ಕಿರಿದು ತುಂಬಿದ್ರು ಪ್ರಯಾಣಿಕರು

    ಭುವನೇಶ್ವರ: ಒಡಿಶಾ (Odisha Train Tragedy) ರೈಲು ಅಪಘಾತ ಸಂಭವಿಸಿದ ನಂತರ ಈ ದುರಂತ ಕುರಿತು ನಾನಾ ಚರ್ಚೆಗಳು ನಡೆಯುತ್ತಿವೆ. ಈ ನಡುವೆ, ದುರಂತಕ್ಕೂ ಮುಂಚೆ ರೆಕಾರ್ಡ್‌ ಮಾಡಲಾಗಿದ್ದು ಎನ್ನಲಾದ ವೀಡಿಯೋ ವೈರಲ್‌ ಆಗಿದೆ.

    ದುರಂತಕ್ಕೀಡಾದ ರೈಲೊಂದರ ಜನರಲ್‌ ಬೋಗಿಗಳಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದರು. ರೈಲು ದುರಂತ ಸಂಭವಿಸಿದಾಗ ಅಪಾರ ಪ್ರಮಾಣದಲ್ಲಿ ಸಾವು-ನೋವಾಗಲು ಇದೇ ಕಾರಣ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: PublicTV Explainer: ರಕ್ಷಾ ‘ಕವಚ’ ಇದ್ದಿದ್ರೆ ಒಡಿಶಾ ರೈಲು ದುರಂತ ತಪ್ಪಿಸಬಹುದಿತ್ತೆ?

    ದುರಂತಕ್ಕೀಡಾದ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ ಜನರಲ್ ಬೋಗಿಗಳು ಫುಲ್ ರಶ್ ಆಗಿದ್ದವು. ಪ್ರಯಾಣದ ವೇಳೆ ಫುಲ್ ರಶ್ ಆದ ವೀಡಿಯೋ ಮಾಡಿಕೊಂಡಿದ್ದ ಕೆಲ ಪ್ರಯಾಣಿಕರು ಅದನ್ನು ತಮ್ಮ ಸ್ನೇಹಿತರು, ಇತರರಿಗೆ ಶೇರ್ ಮಾಡಿದ್ದರು. ಆ ವೀಡಿಯೋ ಈಗ ಎಲ್ಲೆಡೆ ವೈರಲ್‌ ಆಗುತ್ತಿದೆ.

    ಒಡಿಶಾದಲ್ಲಿ 3 ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇದುವರೆಗೆ 288 ಮಂದಿ ಮೃತಪಟ್ಟಿದ್ದಾರೆ. 803 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದುರಂತಕ್ಕೆ ಜಾಗತಿಕ ನಾಯಕರು ಮರುಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತದಿಂದ ಪಾರಾಗಿ ಬಂದಿದ್ದವರು ಹೊರಟಿದ್ದ ಬಸ್ ಅಪಘಾತ- ಹಲವರ ಸ್ಥಿತಿ ಗಂಭೀರ

    ಚೆನ್ನೈ-ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲುಗಳ ನಡುವೆ ಶುಕ್ರವಾರ ಸಂಜೆ ಅಪಘಾತ ಸಂಭವಿಸಿತ್ತು. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ದುರಂತ ಜರುಗಿತ. 12841 ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ, ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ.

  • ಒಡಿಶಾ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ: ಸಿಎಂ ಸಿದ್ದರಾಮಯ್ಯ

    ಒಡಿಶಾ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ನಾವು ಒಡಿಶಾ ಸರ್ಕಾರ (Odisha Government) ದ ಜೊತೆ ಸಂಪರ್ಕದಲ್ಲಿ ಇದ್ದೇವೆ. ಕರ್ನಾಟಕದ ಬಗ್ಗೆ ಮಾಹಿತಿ ಕೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕ ಸಚಿವ ಸಂತೋಷ್ ಲಾಡ್ (Santhosh Lad) ಅವರನ್ನ ಕಳಿಸಿದ್ದೇನೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಯಾವತ್ತೂ ಆಗಿರಲಿಲ್ಲ. ದೊಡ್ಡ ಪ್ರಮಾಣದ ಅಪಘಾತ. ಕರ್ನಾಟಕದವರ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಸಂತೋಷ್ ಲಾಡ್ 3 ಗಂಟೆ ಫ್ಲೈಟ್‍ಗೆ ಹೋಗಿದ್ದಾರೆ ಎಂದರು.

    ಕೇಂದ್ರ ರೈಲ್ವೆ ಇಲಾಖೆ ಮತ್ತು ಒಡಿಶಾ ಸರ್ಕಾರದ ಜೊತೆ ಸಂಪರ್ಕದಲ್ಲಿ ಇದ್ದೇವೆ. ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.  ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಸಿಗ್ನಲ್ ಕಾರಣ- ಪ್ರಾಥಮಿಕ ವರದಿ

    ಒಡಿಶಾ ರೈಲು ದುರಂತ ಸಂಬಂಧ ಯಶವಂತಪುರ ರೈಲ್ವೆ ನಿಲ್ದಾಣ (Yeshwantpura Railway Station) ದಲ್ಲಿಯೂ ಹೆಲ್ಪ್ ಡೆಸ್ಕ್ ಕಾರ್ಯಾರಂಭ ಮಾಡಲಾಗಿದೆ. ಸಾರ್ವಜನಿಕರ ಮಾಹಿತಿಗಾಗಿ ಹೆಲ್ಪ್ ಡೆಸ್ಕ್ ಕಾರ್ಯ ನಡೆಯುತ್ತಿದೆ. ಕರ್ನಾಟಕದವರಿಗೆ ಯಾವುದೇ ಹಾನಿ ಆಗಿರೋ ಬಗ್ಗೆ ಮಾಹಿತಿ ಇಲ್ಲ. ಇಲ್ಲಿಂದ ಜನ ಪ್ರಯಾಣ ಮಾಡಿರೋ ಬಗ್ಗೆ ಮಾಹಿತಿ ಇದೆ ಎಂದು ಹೇಳಿದರು.

     

  • ರೈಲು ದುರಂತ – ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

    ರೈಲು ದುರಂತ – ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

    ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ (Odisha Train Accident) ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ (Santosh Lad) ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನಿಯೋಜಿಸಿದ್ದಾರೆ.

    ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ದೊಡ್ಡಮಟ್ಟದ ಸದ್ದು ಕೇಳಿಬಂತು; ದುರಂತದ ಘನಘೋರ ದೃಶ್ಯ ಬಿಚ್ಚಿಟ್ಟ ಕನ್ನಡಿಗ

    ಸಂತೋಷ್ ಲಾಡ್ ಅವರ ಜೊತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ. ಇದನ್ನೂ ಓದಿ: Odisha Train Tragedy; ಪುಣ್ಯಕ್ಷೇತ್ರಕ್ಕೆ ಹೊರಟಿದ್ದ ಚಿಕ್ಕಮಗಳೂರಿನ 110 ಮಂದಿ ಯಾತ್ರಾರ್ಥಿಗಳು ಸೇಫ್ 

  • ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ದೊಡ್ಡಮಟ್ಟದ ಸದ್ದು ಕೇಳಿಬಂತು; ದುರಂತದ ಘನಘೋರ ದೃಶ್ಯ ಬಿಚ್ಚಿಟ್ಟ ಕನ್ನಡಿಗ

    ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ದೊಡ್ಡಮಟ್ಟದ ಸದ್ದು ಕೇಳಿಬಂತು; ದುರಂತದ ಘನಘೋರ ದೃಶ್ಯ ಬಿಚ್ಚಿಟ್ಟ ಕನ್ನಡಿಗ

    ಬೆಂಗಳೂರು: ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತ (Odisha Train Accident) ಸಂಚಲನ ಸೃಷ್ಟಿಸಿದ್ದು, ಅಪಘಾತಕ್ಕೀಡಾದ ಮೂರು ರೈಲುಗಳ ಪೈಕಿ ಒಂದರಲ್ಲಿ ಪ್ರಯಾಣಿಸುತ್ತಿದ್ದ ಕನ್ನಡಿಗರು ಸೇಫ್ ಆಗಿದ್ದಾರೆ.

    ದಕ್ಷಿಣಕಾಶಿ ಎಂದೇ ಕರೆಯಲ್ಪಡುವ ಕಳಸಾದಿಂದ ಪ್ರವಾಸಕ್ಕೆ ಹೊರಟಿದ್ದವರಿಂದ (Kalasa Tourists) ವೀಡಿಯೋ ಒಂದು ಬಿಡುಗಡೆಯಾಗಿದೆ. ಅಪಘಾತ ನಡೆದ ರೈಲಿನಲ್ಲಿಯೇ ಸಂಚಾರ ಮಾಡ್ತಿದ್ದ ಕನ್ನಡಿಗರು ತಾವು ಸೇಫ್ ಆಗಿದ್ದೇವೆ ಎಂದು ಹೇಳಿಕೊಂಡಿದ್ದು, ಟ್ರೇನ್‌ನಲ್ಲೇ ವೀಡಿಯೋ ಮಾಡಿ ದುರಂತದ ಘನಘೋರ ದೃಶ್ಯವನ್ನು ಬಿಚ್ಚಿಟ್ಟಿದ್ದಾರೆ.

    ಹೆಸರು ಹೇಳದ ಪ್ರವಾಸಿಗರೊಬ್ಬರು, ನಾವು ಕಳಸಾದಿಂದ ಪ್ರವಾಸ ಹೊರಟಿದ್ದೆವು. ಇನ್ನೇನು ಒಡಿಶಾ ಗಡಿ ದಾಟಿ, ಕೋಲ್ಕತ್ತಾಗೆ ತಲುಪಬೇಕು ಎನ್ನುವಷ್ಟರಲ್ಲೇ ದೊಡ್ಡಮಟ್ಟದ ಸದ್ದು ಕೇಳಿಬಂತು. ತಕ್ಷಣಕ್ಕೆ ಏನಾಯ್ತು ಎಂದು ನೋಡಿದಾಗ ರೈಲು ಅಪಘಾತವಾಗಿರುವುದು ಕಂಡುಬಂದಿತು. ಸಮೀಪಕ್ಕೆ ಹೋಗಿ ನೋಡಿದಾಗ ನಮ್ಮ ರೈಲಿನಲ್ಲೇ ರಿಸರ್ವ್ S5 ಮತ್ತು ಇನ್ನುಳಿದ 2 ಜನರಲ್ ಬೋಗಿಗಳಿಗೆ ಹಾನಿಯಾಗಿತ್ತು. ಕೆಲವರು ತೀವ್ರವಾಗಿ ಗಾಯಗೊಂಡಿದ್ದರು, ಕೆಲವರು ಮೃತಪಟ್ಟಿದ್ದರು. ಇದನ್ನೂ ಓದಿ: ಒಡಿಶಾ ರೈಲು ದುರಂತ ಹೇಗಾಯ್ತು..? ಘಟನೆಗೆ ಕಾರಣ ಏನು..?

    ರಾತ್ರಿ ಸುಮಾರು 8:30ರ ವೇಳೆಗೆ ರೈಲು ಅಪಘಾತ ನಡೆದಿತ್ತು. ಬಳಿಕ ಅಲ್ಲಿಗೆ ಧಾವಿಸಿದ ಸ್ಥಳೀಯ ಜಿಲ್ಲಾಧಿಕಾರಿಗಳು ನಮಗೆ ಪರ್ಯಾಯ ರೈಲು ವ್ಯವಸ್ಥೆ ಮಾಡಿಕೊಟ್ಟರು. ನಾವು ಸೇಫ್ ಆಗಿದ್ದೇವೆ. ಉಳಿದವರೂ ಸೇಫ್ ಆಗಬೇಕಿತ್ತು. ಇದು ಅಚಾನಕ್ಕಾಗಿ ನಡೆದಿರುವ ಘಟನೆ. ಸದ್ಯ ನಮ್ಮ ಪ್ರಯಾಣ ಮುಂದುವರಿಸಿದ್ದೇವೆ. ನಿಮ್ಮೆಲ್ಲರ ಆಶೀರ್ವಾದಿಂದ ಸೇಫ್ ಆಗಿಯೇ ಹಿಂದಿರುಗಲಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: Odisha Train Tragedy; ಪುಣ್ಯಕ್ಷೇತ್ರಕ್ಕೆ ಹೊರಟಿದ್ದ ಚಿಕ್ಕಮಗಳೂರಿನ 110 ಮಂದಿ ಯಾತ್ರಾರ್ಥಿಗಳು ಸೇಫ್

    ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ ರೈಲು ದುರಂತದಲ್ಲಿ 233 ಮಂದಿ ಬಲಿಯಾಗಿದ್ದು, ಗಾಯಗೊಂಡವರ ಸಂಖ್ಯೆ 900ಕ್ಕೆ ಏರಿದೆ.

  • ಒಡಿಶಾ ರೈಲು ದುರಂತ ಹೇಗಾಯ್ತು..? ಘಟನೆಗೆ ಕಾರಣ ಏನು..?

    ಒಡಿಶಾ ರೈಲು ದುರಂತ ಹೇಗಾಯ್ತು..? ಘಟನೆಗೆ ಕಾರಣ ಏನು..?

    ಭುವನೇಶ್ವರ: ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ದುರಂತದಲ್ಲಿ ಈವರೆಗೆ 233 ಮಂದಿ ಬಲಿಯಾಗಿದ್ದು, ಗಾಯಗೊಂಡವರ ಸಂಖ್ಯೆ 900ಕ್ಕೆ ಏರಿದೆ. ಈ ನಡುವೆ ಭೀಕರ ರೈಲು ದುರಂತ (Train Accident) ಹೇಗಾಯ್ತು ಅನ್ನೋ ಸ್ಫೋಟಕ ಮಾಹಿತಿ ಹೊರಬಿದ್ದಿದೆ.

    ಹೌದು.. ಘಟನಾ ಸ್ಥಳದಲ್ಲಿ 3 ರೈಲು ಮಾರ್ಗಗಳಿದ್ದವು‌. ಈ ವೇಳೆ ಕೋಲ್ಕತ್ತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈನ್‌ನಲ್ಲಿ ಸಂಜೆ 7:30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌ (ಸಂಖ್ಯೆ: 12841) (Coromandel Express) ಒಡಿಶಾದ ಬಹನಗಾ ಬಜಾರ್ ಸ್ಟೇಷನ್ ಬಳಿ ಹಳಿ ತಪ್ಪಿದೆ. ಇದರಿಂದಾಗಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಮೊದಲು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕೋರಮಂಡಲ್ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿ ತಪ್ಪಿ 3ನೇ ರೈಲು ಮಾರ್ಗದ ಮೇಲೆ ಬಿದ್ದಿವೆ. ಇದನ್ನೂ ಓದಿ: Odisha Train Accident; ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆ – 233 ಮಂದಿ ಬಲಿ, 900 ಮಂದಿಗೆ ಗಾಯ

    ಕೆಲವು ಸಮಯದ ಬಳಿಕ ಇದೇ ಮಾರ್ಗವಾಗಿ ಮತ್ತೊಂದು ಹಳಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಬೆಂಗಳೂರಿನ ಹೌರ ಎಕ್ಸ್‌ಪ್ರೆಸ್‌ (ಸಂಖ್ಯೆ: 12864) ಕೋರಮಂಡಲ್‌ನ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ಕು ಬೋಗಿಗಳು ಹಳಿ ತಪ್ಪಿವೆ. ಬೆಂಗಳೂರು – ಹೌರಾ ಎಕ್ಸ್‌ಪ್ರೆಸ್‌ ಬೈಯಪ್ಪನಹಳ್ಳಿಯ ಎಸ್‌ಎಂವಿಟಿ ರೈಲು ನಿಲ್ದಾಣದಿಂದ ಹೊರಟಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಒಡಿಶಾದಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ – ಹಲವರ ಸಾವಿನ ಶಂಕೆ

    ಈಗಾಗಲೇ ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೆ ಇಲಾಖೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ, ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣ ಗಾಯಗಳಾದ ಪ್ರಯಾಣಿಕರಿಗೆ 50,000 ರೂ. ಪರಿಹಾರ ಘೋಷಿಸಿದೆ.