Tag: ಒನ್ ವೇ

  • ಎಕ್ಸ್‌ಪ್ರೆಸ್‌ವೇಯಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ಹುಚ್ಚಾಟಕ್ಕೆ ಬೈಕ್ ಸವಾರ ಬಲಿ

    ಎಕ್ಸ್‌ಪ್ರೆಸ್‌ವೇಯಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ಹುಚ್ಚಾಟಕ್ಕೆ ಬೈಕ್ ಸವಾರ ಬಲಿ

    ಬೆಂಗಳೂರು: ಟೋಲ್ (Toll) ಕಟ್ಟುವುದನ್ನು ತಪ್ಪಿಸಲು ಹೋಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ (Bengaluru-Mysuru Expressway) ಒನ್ ವೇಯಲ್ಲಿ (One Way) ಬಂದ ಕೆಎಸ್‌ಆರ್‌ಟಿಸಿ (KSRTC) ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆಂಗೇರಿಯಲ್ಲಿ (Kengeri) ನಡೆದಿದೆ.

    ಈ ಘಟನೆ ಮೈಸೂರು ರೋಡ್ ರಾಜರಾಜೇಶ್ವರಿ ಆಸ್ಪತ್ರೆ ಬಳಿ ನಡೆದಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅಜಾಗರುಕತೆಗೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್‌ನಲ್ಲಿದ್ದ ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದು ಆತನನ್ನು ರಾಜರಾಜೇಶ್ವರಿ ಆಸ್ಪತ್ರೆಗೆ (Rajarajeshwari Hospital) ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಎನ್‍ಹೆಚ್‍ಎಮ್ ಒಳಗುತ್ತಿಗೆ ನೌಕರರ ಪ್ರತಿಭಟನೆ – ಎಸ್ಮಾ ಜಾರಿ ಮಾಡಿದ ಆರೋಗ್ಯ ಇಲಾಖೆ

    ಬೆಂಗಳೂರಿನಿಂದ ಮೈಸೂರಿಗೆ ಕೆಎಸ್‌ಆರ್‌ಟಿಸಿ ಬಸ್ ಹೊರಟಿತ್ತು. ಕಣಿಮಿಣಿಕೆ ಬಳಿ ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಮತ್ತೆ ವಾಪಸ್ ಬೆಂಗಳೂರು ಕಡೆಗೆ ಬರುತ್ತಿದ್ದಾಗ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಕುಂಬಳಗೋಡು ಠಾಣೆಯಲ್ಲಿ (Kumbalagodu Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಖಾಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಪರಾರಿ – ಪಂಜಾಬ್‌ ಹಲವೆಡೆ ಇಂಟರ್‌ನೆಟ್‌ ಸ್ಥಗಿತ

  • ಫೋನಿನಲ್ಲಿ ಮಾತಾಡ್ಕೊಂಡು ಒನ್ ವೇನಲ್ಲಿ ಬಂದು ಮತ್ತೊಬ್ಬನ ಕೈ ಕಟ್ ಮಾಡಿದ!

    ಫೋನಿನಲ್ಲಿ ಮಾತಾಡ್ಕೊಂಡು ಒನ್ ವೇನಲ್ಲಿ ಬಂದು ಮತ್ತೊಬ್ಬನ ಕೈ ಕಟ್ ಮಾಡಿದ!

    ಚಿಕ್ಕಮಗಳೂರು: ಫೋನಿನಲ್ಲಿ ಮಾತನಾಡಿಕೊಂಡು ಒನ್ ವೇ ನಲ್ಲಿ ಬಂದ ಯುವಕನಿಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಕೈ ಕಟ್ ಆಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

    ನಗರದ ಕೆ.ಎಂ.ರಸ್ತೆಯಲ್ಲಿನ ಕಾಂಗ್ರೆಸ್ ಕಚೇರಿ ಮುಂಭಾಗ ಈ ದುರ್ಘಟನೆ ಸಂಭವಿಸಿದೆ. ಫೋನ್ ನಲ್ಲಿ ಮಾತನಾಡಿಕೊಂಡು ಒನ್ ವೇನಲ್ಲಿ ಬಂದ ಯುವಕ ಕಾರಿನ ಪಕ್ಕ ನಿಲ್ಲಿಸಿದ್ದಾರೆ. ಫೋನ್ ನಲ್ಲಿ ಮಾತನಾಡಿಕೊಂಡು ಮುನ್ನುಗ್ಗಿದ ಪರಿಣಾಮ ಎದುರಿನಿಂದ ಬಂದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಸವಾರ ಕೆಳಗೆ ಬೀಳುತ್ತಿದ್ದಂತೆ ಪಕ್ಕದಲ್ಲಿದ್ದ ಲಾರಿ ಆತನ ಎಡಗೈ ಮೇಲೆ ಹತ್ತಿದ ಪರಿಣಾಮ ಬೈಕ್ ಸವಾರನ ಎಡಗೈ ಕಟ್ ಆಗಿದೆ. ಇದನ್ನೂ ಓದಿ:  ರಾಹುಲ್‍ಗೆ ಪಿಸ್ತೂಲ್ ಬಳಸಲು ತರಬೇತಿಯನ್ನು ನೀಡಲಾಗಿತ್ತು: ಡಿಸಿಪಿ ಅನುಚೇತ್

    ಫೋನಿನಲ್ಲಿ ಮಾತನಾಡಿಕೊಂಡು ಓನ್ ವೇನಲ್ಲಿ ಬಂದ ಯುವಕನನ್ನು ವಿಶ್ವಾಸ್ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ನ್ಯಾಯಸಮ್ಮತವಾಗಿ, ರಸ್ತೆ ನಿಯಮಗಳಡಿ ಬಂದು ಅಪಘಾತಕ್ಕೀಡಾಗಿ ಕೈ ಕಳೆದುಕೊಂಡ ವ್ಯಕ್ತಿಯನ್ನ 55 ವರ್ಷದ ಸುಂದರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ:  ಮುಂದಿನ ದಿನಗಳಲ್ಲಿ ಕ್ಷೇತ್ರವಾರು ಶಾಸಕರ ಜೊತೆ ಸಭೆ ಮಾಡಿ ಲಸಿಕೆ ಅಭಿಯಾನ ಮಾಡ್ತೇವೆ: ಆರ್.ಅಶೋಕ್

    ಅಪಘಾತದಿಂದ ತೀವ್ರ ಗಾಯಾಗೊಂಡ ಸುಂದರ್ ಅವರನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಸುಂದರ್ ನಗರದ ಸಾಮಿಲ್ ವೊಂದರಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರೆಂದು ತಿಳಿದುಬಂದಿದೆ.

    ಅಪಘಾತದದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಅಯ್ಯೋ ಮಗನೇ, ಆ ದೇವರು ನಿನ್ನ ಬದಲು ನನ್ನನ್ನು ಕರೆದುಕೊಳ್ಳಬೇಕಿತ್ತು

  • ಒನ್ ವೇನಲ್ಲಿ ದಾರಿ ಕೊಡದ್ದಕ್ಕೆ ಕಿಡಿಗೇಡಿಗಳಿಂದ ಟೆಕ್ಕಿ ಕಾರು ಧ್ವಂಸ

    ಒನ್ ವೇನಲ್ಲಿ ದಾರಿ ಕೊಡದ್ದಕ್ಕೆ ಕಿಡಿಗೇಡಿಗಳಿಂದ ಟೆಕ್ಕಿ ಕಾರು ಧ್ವಂಸ

    ಬೆಂಗಳೂರು: ಒನ್ ವೇನಲ್ಲಿ ದಾರಿಕೊಡಲಿಲ್ಲ ಎಂದು ಯುವಕರಿಬ್ಬರು ಟೆಕ್ಕಿಯೊಬ್ಬರ ಕಾರನ್ನು ಧ್ವಂಸಗೊಳಿಸಿದ್ದಾರೆ.

    ಟೆಕ್ಕಿ ವಿಜಯ್ ಕುಮಾರ್ ಅವರ ಕಾರನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಗುರುವಾರ ಸಂಜೆ ಬಸವನಗುಡಿಯ ಬುಲ್ ಟೆಂಪಲ್ ಬಳಿ ಈ ಘಟನೆ ನಡೆದಿದೆ. ವಿಜಯ್ ಕುಮಾರ್ ಅವರು ಒನ್ ವೇನಲ್ಲಿ ಬಂದಿದ್ದಕ್ಕೆ ಯುವಕರನ್ನು ಪ್ರಶ್ನಿಸಿದ್ದಾರೆ. ಆದ್ದರಿಂದ ಕೋಪಗೊಂಡು ಕಿಡಿಗೇಡಿಗಳು ಕಾರನ್ನು ಧ್ವಂಸಗೊಳಿಸಿದ್ದಾರೆ.

    ಗುರುವಾರ ಸಂಜೆ ವಿಜಯ್ ಕುಮಾರ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಒನ್ ವೇನಲ್ಲಿ ಇಬ್ಬರು ಯುವಕರು ಬಂದಿದ್ದಾರೆ. ಒನ್ ವೇನಲ್ಲಿ ಬಂದರೂ ಯುವಕರು ಸೈಡ್ ಬಿಡುವಂತೆ ಕೇಳಿದ್ದಾರೆ. ಆಗ ಪಕ್ಕದಲ್ಲಿ ಕಾರ್ ಗಳು ಪಾರ್ಕಿಂಗ್ ಆಗಿದ್ದರಿಂದ ಯುವಕರಿಗೆ ಸೈಡ್ ಬಿಡಲು ಸಾಧ್ಯವಾಗಲಿಲ್ಲ. ಇದಕ್ಕೆ ಕುಪಿತಗೊಂಡ ಇಬ್ಬರು ವಿಜಯ್ ಕುಮಾರ್ ಕಾರ್ ಮೇಲೆ ಏಕಾಏಕಿ ಅಟ್ಯಾಕ್ ಮಾಡಿ ಕಲ್ಲಿನಿಂದ ಹೊಡೆದು ಕಾರನ್ನು ಜಖಂಗೊಳಿಸಿದ್ದಾರೆ.

    ಆರೋಪಿಗಳು ಕಲ್ಲಿನಿಂದ ಹೊಡೆದಿದ್ದಕ್ಕೆ ಕಾರಿನ ಗ್ಲಾಸ್ ಜಖಂಗೊಂಡಿವೆ. ಬಳಿಕ ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಹನುಮಂತನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ವಿಜಯ್ ಕುಮಾರ್ ಅವರು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv