Tag: ಒಪ್ಪಂದ

  • ರಾತ್ರಿ 9 ಗಂಟೆಯವರೆಗೆ ಪತಿಗೆ ಡಿಸ್ಟರ್ಬ್ ಮಾಡಲ್ಲ- ಪತ್ನಿ ಸಹಿ ಹಾಕಿರುವ ಪತ್ರ ವೈರಲ್

    ರಾತ್ರಿ 9 ಗಂಟೆಯವರೆಗೆ ಪತಿಗೆ ಡಿಸ್ಟರ್ಬ್ ಮಾಡಲ್ಲ- ಪತ್ನಿ ಸಹಿ ಹಾಕಿರುವ ಪತ್ರ ವೈರಲ್

    ತಿರುವನಂತಪುರಂ: ಇತ್ತೀಚೆಗೆ ಮದುವೆ (Marriage) ಯ ಬಳಿಕ ಅಥವಾ ಮುವೆಗೂ ಮುನ್ನ ಪತಿ ಹಾಗೂ ಪತ್ನಿ ಕೆಲವೊಂದು ಒಪ್ಪಂದಗಳನ್ನು ಮಾಡಿಕೊಂಡು ಬಳಿಕ ಪತ್ರಕ್ಕೆ ಸಹಿ ಹಾಕುತ್ತಿರುವುದು ಟ್ರೆಂಡ್ ಆಗಿದೆ. ಅಂತೆಯೇ ಕೇರಳ (Kerala) ದಲ್ಲಿ ಪತ್ನಿಯೊಬ್ಬಳು ತನ್ನ ಪತಿ ಜೊತೆಗೆ ಮಾಡಿಕೊಂಡಿರುವ ಒಪ್ಪಂದದ ಪತ್ರವೊಂದು ಸಾಕಷ್ಟು ಸದ್ದು ಮಾಡುತ್ತಿದೆ.

    ಎಸ್. ಅರ್ಚನಾ ಹಾಗೂ ರಘು ಎಸ್ ಕೆಡಿಆರ್ ದಂಪತಿಯ ಒಪ್ಪಂದದ ಪತ್ರ ವೈರಲ್ ಆಗಿದೆ. ಮದುವೆಗೂ ಮುನ್ನ ಈ ಜೋಡಿ ಒಪ್ಪಂದವನ್ನು ಮಾಡಿಕೊಂಡು ಸಹಿ ಹಾಕಿದೆ. ಅದರಲ್ಲಿ ಮದುವೆಯ ನಂತರ ರಾತ್ರಿ 9 ಗಂಟೆಯವರೆಗೆ ನಾನು ಪತಿಗೆ ಯಾವುದೇ ರೀತಿಯ ತೊಂದರೆ ಕೊಡಲ್ಲ. ಹೀಗಾಗಿ ಅಲ್ಲಿಯವರೆಗೆ ಪತಿ ತನ್ನ ಗೆಳೆಯರ ಜೊತೆ ಸಮಯ ಕಳೆಯಲು ಅವಕಾಶ ನೀಡುತ್ತೇನೆಂದು ಬರೆಯಲಾಗಿದೆ. ಅಲ್ಲದೆ ಇದಕ್ಕೆ ಅರ್ಚನಾ ಸಹಿ ಕೂಡ ಹಾಕಿದ್ದಾರೆ.

    ಈ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಅಲ್ಲದೆ ವೈರಲ್ ಆಗುತ್ತಿರುವ ಪತ್ರಕ್ಕೆ ಸಾಕಷ್ಟು ಪರ-ವಿರೋಧದ ಕಾಮೆಂಟ್ ಗಳು ಬರುತ್ತಿವೆ. ಇದನ್ನೂ ಓದಿ: ದ್ರೌಪದಿ ಮುರ್ಮು ನೋಡಲು ಹೇಗಿದ್ದಾರೆ ಗೊತ್ತಲ್ಲ- ವಿವಾದವಾಗ್ತಿದ್ದಂತೆ ಟಿಎಂಸಿ ಸಚಿವ ಕ್ಷಮೆ

    ರಘು ಅವರು ಬ್ಯಾಡ್ಮಿಂಟನ್ ಆಟಗಾರರಾಗಿದ್ದು, ವಾಟ್ಸಪ್ ಗ್ರೂಪ್‍ನಲ್ಲಿಯೂ ಇದ್ದಾರೆ. ಈ ಗ್ರೂಪ್ ನಲ್ಲಿ ತಮ್ಮ ಮದುವೆಗಳಲ್ಲಿ ನಡೆದಿರುವ ಅಚ್ಚರಿಯ ಘಟನೆಗಳು ನಡೆದಿರುವುದನ್ನು ಹಂಚಿಕೊಳ್ಳುತ್ತಾರೆ. ಅಂತೆಯೇ ರಘು ಅವರು ತಮ್ಮ ಮದುವೆಯ ಮುನ್ನ ನಡೆದಿರುವ ಒಪ್ಪಂದದ ಕುರಿತು ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚೀನಾ ಭಾರತದೊಂದಿಗಿನ ಗಡಿ ಒಪ್ಪಂದವನ್ನು ಕಡೆಗಣಿಸಿದೆ: ಜೈಶಂಕರ್ ಬೇಸರ

    ಚೀನಾ ಭಾರತದೊಂದಿಗಿನ ಗಡಿ ಒಪ್ಪಂದವನ್ನು ಕಡೆಗಣಿಸಿದೆ: ಜೈಶಂಕರ್ ಬೇಸರ

    ಬ್ರೆಸಿಲಿಯಾ: ಚೀನಾ ಭಾರತದೊಂದಿಗಿನ ಗಡಿ ಒಪ್ಪಂದವನ್ನು ಕಡೆಗಣಿಸಿದೆ. ಗಲ್ವಾನ್ ಕಣಿವೆಯ ಬಿಕ್ಕಟ್ಟಿನಿಂದಾಗಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹದಗೆಡುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದರು.

    ಬ್ರೆಜಿಲ್‌ನ ಸಾವೋ ಪಾಲೋದಲ್ಲಿ ಭಾರತೀಯ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಜೈಶಂಕರ್ ಈ ವೇಳೆ ಮಾತನಾಡಿ, ನಾವು 1990ರ ದಶಕದಿಂದ ಚೀನಾದೊಂದಿಗೆ ಗಡಿ ಪ್ರದೇಶದಲ್ಲಿ ದೊಡ್ಡ ಸಂಖ್ಯೆಯ ಪಡೆಗಳನ್ನು ನಿಯೋಜಿಸುವುದನ್ನು ನಿಷೇಧಿಸುವ ಒಪ್ಪಂದ ಮಾಡಿಕೊಂಡಿದ್ದೇವೆ. ಆದರೆ ಅವರು ಆ ಒಪ್ಪಂದವನ್ನು ನಿರ್ಲಕ್ಷಿಸಿದ್ದಾರೆ. ಗಲ್ವಾನ್ ಕಣಿವೆಯಲ್ಲಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಆ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂದು ತಿಳಿಸಿದರು.

    ಭಾರತ-ಚೀನಾ ನಡುವಿನ ಗಡಿ ಪರಿಸ್ಥಿತಿ ಕುರಿತು ಮಾತನಾಡಿದ ಜೈಶಂಕರ್, ಸಂಬಂಧಗಳು ಏಕಮುಖವಾಗಿರಬಾರದು. ಸಂಬಂಧಗಳನ್ನು ಉಳಿಸಿಕೊಳ್ಳಲು ಪರಸ್ಪರ ಗೌರವ ಇರುವುದು ಮುಖ್ಯ. ಅವರು ನಮ್ಮ ನೆರೆಹೊರೆಯವರು. ಪ್ರತಿಯೊಬ್ಬರೂ ನೆರೆಹೊರೆಯವರೊಂದಿಗೆ ಬೆರೆಯಲು ಬಯಸುತ್ತಾರೆ. ಅದು ವೈಯಕ್ತಿಕ ಜೀವನ, ದೇಶಗಳ ನಡುವೆಯೂ ಅನ್ವಯಿಸುತ್ತದೆ ಎಂದರು. ಇದನ್ನೂ ಓದಿ: ಆಜಾನ್ ವಿರುದ್ಧ ಮತ್ತೆ ಸಮರ – 23ರಂದು ರಾಜ್ಯಾದ್ಯಂತ ಹೋರಾಟಕ್ಕೆ ಶ್ರೀರಾಮಸೇನೆ ಕರೆ

    ಭಾರತದ ಗಡಿ ಪ್ರದೇಶದಲ್ಲಿ ಚೀನಾ ಸೇನೆ ಒಪ್ಪಂದಗಳನ್ನು ಉಲ್ಲಂಘಿಸಿರುವ ಬಗ್ಗೆ ಭಾರತ ಹಾಗೂ ಚೀನಾ 2020ರ ಏಪ್ರಿಲ್-ಮೇ ತಿಂಗಳಿನಲ್ಲಿ ವಾಗ್ವಾದ ನಡೆಸಿದೆ. ಇದರ ಬೆನ್ನಲ್ಲೇ 2020ರ ಜೂನ್‌ನಲ್ಲಿ ಗಲ್ವಾನ್ ಕಣಿವೆಯಲ್ಲಿ ಭಾರತದ ಸೇನೆಯೊಂದಿಗೆ ಚೀನಾ ಹಿಂಸಾತ್ಮಕ ಘರ್ಷಣೆ ನಡೆಸಿದ್ದು, ಇದರಿಂದ ಪರಿಸ್ಥಿತಿ ಹದಗೆಟ್ಟಿದೆ.

    ಜೈಶಂಕರ್ ಅವರು 3 ರಾಷ್ಟ್ರಗಳ ಭೇಟಿಯ ಮೊದಲ ಹಂತದಲ್ಲಿದ್ದು, ಇಂದು ಬ್ರೆಜಿಲ್‌ನ ಸಾವೊ ಪಾಲೊದಲ್ಲಿ ಭಾರತೀಯ ಸಮುದಾಯವನ್ನು ಭೇಟಿ ಮಾಡಿದರು. ಜೈಶಂಕರ್ ಪರಾಗ್ವೆ ಮತ್ತು ಅರ್ಜೆಂಟೀನಾಗೂ ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: 23 ಏಮ್ಸ್‌ಗಳಿಗೆ ಸ್ವಾತಂತ್ರ್ಯ ಹೋರಾಟಗಾರರು, ಸ್ಥಳೀಯ ನಾಯಕರ ಹೆಸರಿಡಿ – ಕೇಂದ್ರಕ್ಕೆ ಪ್ರಸ್ತಾವ

    Live Tv
    [brid partner=56869869 player=32851 video=960834 autoplay=true]

  • ಅಫ್ಘಾನಿಸ್ತಾನದ ವಿಮಾನ ಕಾರ್ಯಾಚರಣೆಗೆ ಯುಎಇ ಜೊತೆ ತಾಲಿಬಾನ್ ಒಪ್ಪಂದ

    ಅಫ್ಘಾನಿಸ್ತಾನದ ವಿಮಾನ ಕಾರ್ಯಾಚರಣೆಗೆ ಯುಎಇ ಜೊತೆ ತಾಲಿಬಾನ್ ಒಪ್ಪಂದ

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ವಿಮಾನ ಕಾರ್ಯಾಚರಣೆ ಹಾಗೂ ವಿಮಾನ ನಿಲ್ದಾಣ ನಿರ್ವಹಣೆ ಕುರಿತು ತಾಲಿಬಾನ್, ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

    ತಾಲಿಬಾನ್ ಯುಎಇ, ಟರ್ಕಿ ಹಾಗೂ ಕತಾರ್‌ನೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದು, ಮಂಗಳವಾರ ಒಪ್ಪಂದಕ್ಕೆ ಸಹಿ ಹಾಕಿದೆ.

    ತಾಲಿಬಾನ್‌ನ ಸಾರಿಗೆ ಮತ್ತು ನಾಗರಿಕ ವಿಮಾನಯಾನದ ಉಪ ಮಂತ್ರಿ ಗುಲಾಮ್ ಜೈಲಾನಿ ವಫಾ ಅವರು ಮೊದಲ ಉಪ ಪ್ರಧಾನಮಂತ್ರಿ ಮುಲ್ಲಾ ಅಬ್ದುಲ್ ಘನಿ ಬರಾದರ್ ಅವರ ಸಮ್ಮುಖದಲ್ಲಿ ಮಂಗಳವಾರ ಜಿಎಎಸಿ ನಿಗಮದ ಪ್ರತಿನಿಧಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದರು. ಇದನ್ನೂ ಓದಿ: ಹೆಚ್‍ಡಿಕೆ ಮನೆಯಲ್ಲಿನ ದೇವಸ್ಥಾನ ಪುಡಿ ಮಾಡಿದ್ರೆ ಸುಮ್ಮನಿರುತ್ತಿದ್ದರಾ?- ಈಶ್ವರಪ್ಪ

    ಒಪ್ಪಂದಕ್ಕೆ ಸಹಿ ಹಾಕುವ ವೇಳೆ ಮಾತನಾಡಿದ ಮುಲ್ಲಾ ಬರದಾರ್, ದೇಶದ ಭದ್ರತೆ ಬಲವಾಗಿದೆ ಹಾಗೂ ಇಸ್ಲಾಮಿಕ್ ಎಮಿರೇಟ್ಸ್, ವಿದೇಶಿ ಹೂಡಿಕೆದಾರರೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ. ಎಲ್ಲಾ ವಿದೇಶೀ ವಿಮಾನಯಾನ ಸಂಸ್ಥೆಗಳು ಅಫ್ಘಾನಿಸ್ತಾನಕ್ಕೆ ಸುರಕ್ಷಿತವಾಗಿ ಹಾಗೂ ವಿಶ್ವಾಸಾರ್ಹವಾಗಿ ಹಾರಾಟ ಪ್ರಾರಂಭಿಸಬಹುದು ಎಂದು ಭರವಸೆ ನಿಡಿದರು. ಇದನ್ನೂ ಓದಿ: ಮಹಾರಾಷ್ಟ್ರ ಸಚಿವ ಅನಿಲ್ ಪರಬ್ ಮನೆ, ಕಚೇರಿ ಮೇಲೆ ಇಡಿ ದಾಳಿ

    ಆಗಸ್ಟ್ 2021ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡಿತು ಹಾಗೂ ಹಿಂದಿನ ಸರ್ಕಾರ ಪತನವಾಯಿತು. 2021ರ ಡಿಸೆಂಬರ್‌ನಲ್ಲಿ ಟರ್ಕಿಶ್ ಹಾಗೂ ಕತಾರಿ ಕಂಪನಿಗಳು ಕಾಬೂಲ್ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಜ್ಞಾಪಕ ಪತ್ರಕ್ಕೆ ಸಹಿ ಹಾಕಿದವು. ಅಫ್ಘಾನಿಸ್ತಾನದಲ್ಲಿ ತೀವ್ರ ಆರ್ಥಿಕ ಪರಿಸ್ಥಿತಿ ಇರುವುದರಿಂದ ಈಗಲೂ ಬಾಲ್ಖ್, ಹೆರಾತ್, ಕಂದಹಾರ್ ಹಾಗೂ ಖೋಸ್ಟ್ ನಗರಗಳ ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸಲು ಹೆಣಗಾಡುತ್ತಿವೆ.

  • 50 ವರ್ಷಗಳ ಗಡಿ ವಿವಾದ ಅಂತ್ಯ- ಅಸ್ಸಾಂ, ಮೇಘಾಲಯ ಮಹತ್ವದ ಒಪ್ಪಂದಕ್ಕೆ ಸಹಿ

    50 ವರ್ಷಗಳ ಗಡಿ ವಿವಾದ ಅಂತ್ಯ- ಅಸ್ಸಾಂ, ಮೇಘಾಲಯ ಮಹತ್ವದ ಒಪ್ಪಂದಕ್ಕೆ ಸಹಿ

    ನವದೆಹಲಿ: ಅಸ್ಸಾಂ ಮತ್ತು ಮೇಘಾಲಯ ಸರ್ಕಾರಗಳು ತಮ್ಮ 50 ವರ್ಷಗಳ ಗಡಿ ವಿವಾದಕ್ಕೆ ಅಂತ್ಯವಾಡಲು ಮಂಗಳವಾರ ರಾಷ್ಟ್ರೀಯ ರಾಜಧಾನಿಯಲ್ಲಿ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದವು.

    ಗೃಹ ಸಚಿವಾಲಯದ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಮೇಘಾಲಯದ ಸಿಎಂ ಸಹವರ್ತಿ ಕಾನ್ರಾಡ್ ಕೆ ಸಂಗ್ಮಾ ಅವರು ಒಪ್ಪಂದಕ್ಕೆ ಸಹಿ ಹಾಕಿದರು. ಈ ವೇಳೆ ಎರಡೂ ರಾಜ್ಯಗಳ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: 5.21 ಲಕ್ಷ ಮನೆ ಉದ್ಘಾಟನೆ, ಬಡವರ ಸಬಲೀಕರಣಕ್ಕಾಗಿ ಬಿಜೆಪಿ ಕೆಲಸ: ಮೋದಿ

    ಪ್ರಸ್ತಾವಿತ ಒಪ್ಪಂದದ ಶಿಫಾರಸುಗಳ ಪ್ರಕಾರ, 36.79 ಚದರ ಕಿ.ಮೀ. ಭೂಪ್ರದೇಶದ ಪೈಕಿ ಅಸ್ಸಾಂ 18.51 ಚದರ ಕಿ.ಮೀ. ಭೂಪ್ರದೇಶ ಪಡೆಯಲಿದೆ. ಉಳಿದ 18.28 ಚದರ ಕಿ.ಮೀ. ಭೂಪ್ರದೇಶವನ್ನು ಮೇಘಾಲಯಕ್ಕೆ ನೀಡಿದೆ.

    1972ರಲ್ಲಿ ಅಸ್ಸಾಂನಿಂದ ಮೇಘಾಲಯ ಬೇರ್ಪಟ್ಟ ನಂತರ ಈ ಗಡಿ ವಿವಾದ ಹುಟ್ಟುಕೊಂಡಿತು. ಹೊಸ ರಾಜ್ಯಗಳ ರಚನೆ ಸಂದರ್ಭದಲ್ಲಿನ ಪ್ರಾಥಮಿಕ ಒಪ್ಪಂದದ ವೇಳೆಯಲ್ಲಾದ ಗಡಿ ಗುರುತಿನ ವ್ಯತ್ಯಾಸದ ನಂತರ ವಿವಾದ ಉಲ್ಬಣಗೊಳ್ಳಲು ಕಾರಣವಾಗಿತ್ತು.  ಇದನ್ನೂ ಓದಿ: ಪರವಾನಿಗೆ ಇಲ್ಲದೆ ಬಂದೂಕುಗಳನ್ನು ಹೊಂದಲು ಕೊಡವರಿಗೆ ಅವಕಾಶ- ರಾಜ್ಯಕ್ಕೆ ಸುಪ್ರೀಂ ನೋಟಿಸ್‌

  • ಭಾರತ – ಶ್ರೀಲಂಕಾ ಹೊಸ ಇಂಧನ ಒಪ್ಪಂದ

    ಭಾರತ – ಶ್ರೀಲಂಕಾ ಹೊಸ ಇಂಧನ ಒಪ್ಪಂದ

    ನವದೆಹಲಿ: ಭಾರತ ಹಾಗೂ ಶ್ರೀಲಂಕಾ ಜಂಟಿಯಾಗಿ ಅಭಿವೃದ್ಧಿಯೊಂದನ್ನು ಕಾರ್ಯಗತಗೊಳಿಸುವ ಒಪ್ಪಂದ ನಡೆಸಿದೆ. ಟ್ರಿಂಕೋಮಲಿ ತೈಲ ಟ್ಯಾಂಕ್ ಫಾರ್ಮ್ ಅನ್ನು ಜಂಟಿಯಾಗಿ ಅಭಿವೃದ್ಧಿ ಪಡಿಸಲು ಗುರುವಾರ ಭಾರತ ಹಾಗೂ ಶ್ರೀಲಂಕಾ ಮಾತುಕತೆ ನಡೆಸಿದೆ.

    ಶ್ರೀಲಂಕಾ ಕ್ಯಾಬಿನೆಟ್ ಟ್ರಿಂಕೋಮಲಿ ಟ್ಯಾಂಕ್ ಫಾರ್ಮ್‌ಗಳ ಅಭಿವೃದ್ಧಿಗೆ ಒಪ್ಪಿಗೆ ನೀಡಿದೆ. ಇಂಧನ ಭದ್ರತೆಗೆ ಶ್ರೀಲಂಕಾದೊಂದಿಗಿನ ನಮ್ಮ ದ್ವಿಪಕ್ಷೀಯ ಸಹಕಾರ ಮುಖ್ಯವಾಗಿದೆ. ಟ್ರಿಂಕೋಮಲಿ ಟ್ಯಾಂಕ್ ಫಾರ್ಮ್‌ನ ಆಧುನೀಕರಣಕ್ಕೆ ಶ್ರೀಲಂಕಾ ಸರ್ಕಾರದೊಂದಿಗೆ ನಾವು ಮಾತುಕತೆ ನಡೆಸುತ್ತಿದ್ದೇವೆ. ಇದು ಇಂಧನ ಸಂಗ್ರಹಣೆಯೊಂದಿಗೆ ದ್ವಿಪಕ್ಷೀಯ ಭದ್ರತೆ ಹೆಚ್ಚಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದರು. ಇದನ್ನೂ ಓದಿ: ನನ್ನ ಹೆಸರು Kovid, ಆದ್ರೆ ನಾನು ವೈರಸ್ ಅಲ್ಲ: ಬೆಂಗಳೂರು ಉದ್ಯಮಿ

    ಸೋಮವಾರ ನಡೆದ ವರ್ಷದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಭಾರತ ಹಾಗೂ ಶ್ರೀಲಂಕಾ ಜಂಟಿಯಾಗಿ ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತರಲು ಒಪ್ಪಂದ ನಡೆಸಿದೆ ಎಂದು ಸರ್ಕಾರಿ ಮಾಹಿತಿ ಇಲಾಖೆ ಹೊರಡಿಸಿದ ಮಾಹಿತಿಯಲ್ಲಿ ತಿಳಿಸಿದೆ.

    ಶ್ರೀಲಂಕಾ ಕ್ಯಾಬಿನೆಟ್ ಇತರ ಎರಡು ಪ್ರಸ್ತಾಪಗಳನ್ನು ಅಂಗೀಕರಿಸಿದೆ. ಅಶೋಕ್ ಲೇಲ್ಯಾಡ್ ಶ್ರೀಲಂಕಾಗೆ 500 ಹೊಸ ಬಸ್‌ಗಳನ್ನು ಒದಗಿಸುವ ಬಿಡ್ ಅನ್ನು ಗೆದ್ದಿದೆ ಹಾಗೂ ಶ್ರೀಲಂಕಾ ಪೊಲೀಸ್ ಪಡೆ ಮಹೀಂದ್ರಾ ಕಂಪನಿಯಿಂದ 750 ಜೀಪ್‌ಗಳನ್ನು ಖರೀದಿಸಲಿದೆ ಎಂದು ಶ್ರೀಲಂಕಾ ಇಲಾಖೆಯ ಅಧಿಕೃತ ಮಾಹಿತಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ಇಂದು ರಾತ್ರಿ 8 ಗಂಟೆಯಿಂದ್ಲೇ ಸಿಗಲ್ಲ ಮದ್ಯ – ಎಣ್ಣೆ ಪಾರ್ಸೆಲ್‍ಗೂ ನೋ ಪರ್ಮಿಷನ್

  • ಭಾರತ ಸೇನೆಗೆ ಅಪಾಚೆ, ಸೀಹಾಕ್ ಬಲ- ಬರಲಿದೆ ನೈಸರ್ಗಿಕ ಅನಿಲ: ಏನೇನು ಒಪ್ಪಂದ ನಡೆದಿದೆ? ಇಲ್ಲಿದೆ ಪೂರ್ಣ ವರದಿ

    ಭಾರತ ಸೇನೆಗೆ ಅಪಾಚೆ, ಸೀಹಾಕ್ ಬಲ- ಬರಲಿದೆ ನೈಸರ್ಗಿಕ ಅನಿಲ: ಏನೇನು ಒಪ್ಪಂದ ನಡೆದಿದೆ? ಇಲ್ಲಿದೆ ಪೂರ್ಣ ವರದಿ

    – ಭಾರತ, ಅಮೆರಿಕ ಮಧ್ಯೆ 3 ಶತಕೋಟಿ ಡಾಲರ್ ಒಪ್ಪಂದ
    – ಗ್ಯಾಸ್, ಔಷಧ, 5ಜಿ ಸ್ಪೆಕ್ಟ್ರಂ ಬಗ್ಗೆ ಚರ್ಚೆ
    – ಔಷಧ, ವೈದ್ಯಕೀಯ ಉಪಕರಣಗಳ ಅಕ್ರಮ ಸರಬರಾಜಿಗೆ ತಡೆ

    ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 2 ದಿನಗಳ ಭಾರತ ಪ್ರವಾಸವನ್ನು ಇಡೀ ಜಗತ್ತೇ ಕುತೂಹಲದಿಂದ ಕಾಯುತ್ತಿತ್ತು. ಟ್ರಂಪ್ ಪ್ರವಾಸದ ಭಾಗವಾಗಿ ಇಂದು ಮಹಾ ಮಾತುಕತೆಯೂ ನಡೆದಿದೆ. ಅಮೆರಿಕ ಹಾಗೂ ಭಾರತದ ಮಧ್ಯೆ ಭಾರೀ ಒಪ್ಪಂದ ನಡೆದಿದ್ದು, 21,625 ಕೋಟಿ ರೂ. ಒಪ್ಪಂದಕ್ಕೆ ಎರಡು ದೇಶಗಳು ಸಹಿ ಹಾಕಿವೆ.

    ದೆಹಲಿಯ ಹೈದ್ರಾಬಾದ್ ಹೌಸ್‍ನಲ್ಲಿ ಇಂದು ಬೆಳಗ್ಗೆ ಒಂದೂವರೆ ತಾಸು ನಡೆದ ಮಾತುಕತೆಯಲ್ಲಿ ರಕ್ಷಣೆ, ಇಂಧನ ಹಾಗೂ ಔಷಧ ಕ್ಷೇತ್ರಕ್ಕೆ ಸಂಬಂಧಿಸಿದಂತೆ 3 ಪ್ರಮುಖ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಉಭಯ ದೇಶಗಳ ನಡುವಿನ ರಕ್ಷಣಾ ಒಪ್ಪಂದ ಬಲಪಡಿಸುವಿಕೆಯೇ ಇವತ್ತಿನ ಮಾತುಕತೆ ಪ್ರಮುಖ ಅಂಶವಾಗಿದೆ.

    ವಿಶ್ವದ ಅತ್ಯಾಧುನಿಕ ಎಂಹೆಚ್ 60 ಸೀಹಾಕ್ ರೋಮಿಯೋ ಹೆಲಿಕಾಪ್ಟರ್‌ನಿಂದ ನೌಕಾಪಡೆಗೆ ಆನೆಬಲ ಬಂದಂತಾಗಿದೆ. ಮಾತುಕತೆ ವೇಳೆ ಸಿಎಎ ಬಗ್ಗೆ ನೇರವಾಗಿ ಪ್ರಸ್ತಾಪವಾಗದಿದ್ದರೂ, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಚರ್ಚೆ ನಡೆದಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹಕ್ಕೆ ಭಾರತ ಕೈಗೊಂಡಿರುವ ಕ್ರಮಗಳನ್ನು ಟ್ರಂಪ್ ಪ್ರಶಂಸಿದ್ದಾರೆ. ಪಾಕಿಸ್ತಾನ ನೆಲದಿಂದ ಉಂಟಾಗುತ್ತಿರುವ ಇಸ್ಲಾಮಿಕ್ ಭಯೋತ್ಪಾದನೆಯನ್ನು ನಿಯಂತ್ರಿಸಲು ಉಭಯ ದೇಶಗಳು ಸಂಕಲ್ಪ ಮಾಡಿವೆ.

    ಮೂರು ಒಪ್ಪಂದಗಳು:
    ನೌಕಾಪಡೆಗೆ ಆನೆಬಲ ನೀಡಲಿರುವ ‘ಅಮೆರಿಕದ ರೋಮಿಯೋ’ ಭಾರತದ ಬತ್ತಳಿಕೆ ಸೇರಿದೆ. ಅತ್ಯಾಧುನಿಕ ತಂತ್ರಜ್ಞಾನಗಳಿಂದ ಕೂಡಿರುವ ಸಬ್ ಮೆರೀನ್ ನಿರೋಧಕ ಹಾಗೂ ಬಹುವಿಧ ಕಾರ್ಯವೈಖರಿಯ ಎಂಹೆಚ್ 60 ರೋಮಿಯೋ ಸೀ ಹಾಕ್ ಹೆಲಿಕಾಪ್ಟರ್‌ಗಳ ಸೇರ್ಪಡೆ ಭಾರತ ಇನ್ನಷ್ಟು ಬಲಿಷ್ಠವಾಗಿದೆ.

    ರೋಮಿಯೋ ಸೀ ಹಾಕ್ ಹೆಲಿಕಾಪ್ಟರ್‌

    ‘ರೋಮಿಯೋ’ ವೈಶಿಷ್ಟತೆ:
    24 ಎಂಹೆಚ್ 60 ರೋಮಿಯೋ ಸೀ ಹಾಕ್ ಹೆಲಿಕಾಪ್ಟರ್ ಖರೀದಿಸಲು ಒಪ್ಪಂದ ನಡೆದಿದೆ. ಈಗ ಲಭ್ಯವಿರುವ ನೌಕಾ ಹೆಲಿಕಾಪ್ಟರ್‌ಗಳಲ್ಲೇ ಇದು ಅತ್ಯಂತ ಆಧುನಿಕವಾಗಿರುವುದು ವಿಶೇಷ. ಭಾರತೀಯ ನೌಕಾಪಡೆಯಲ್ಲಿ ಈಗ ಇಂಗ್ಲೆಂಡಿನ ಹಳೆಯ ಮಾದರಿ ಹೆಲಿಕಾಪ್ಟರ್‌ಗಳಿವೆ. ಸೀಹಾಕ್ ಖರೀದಿ ಸಂಬಂಧ 2.6 ಬಿಲಿಯನ್ ಡಾಲರ್ (18,683 ಕೋಟಿ ರೂ.) ಮೊತ್ತದ ವ್ಯವಹಾರ ನಡೆದಿದ್ದು, ಸಾಗರದಾಳದ ಸಬ್ ಮೆರೀನ್‍ಗಳನ್ನು ಗುರುತಿಸಿ ಹೊಡೆದುರುಳಿಸುವ ಸಾಮರ್ಥ್ಯ ಈ ಹೆಲಿಕಾಪ್ಟರ್ ಗಳಿಗಿವೆ. ಸಮುದ್ರದಲ್ಲಿ ಶೋಧ, ರಕ್ಷಣಾ ಕಾರ್ಯಾಚರಣೆ ನಡೆಸಲಿರುವುದರಿಂದ ಭಾರತದ ಜಲ ಪ್ರದೇಶ ಇನ್ನಷ್ಟು ಬಲಿಷ್ಠವಾಗಲಿದೆ. ವಿಶೇಷವಾಗಿ ಚೀನಾ ಯುದ್ಧನೌಕೆಗಳ ಮೇಲೆ ಕಣ್ಗಾವಲು ಇಡಲಿದೆ. ಅಮೆರಿಕದ ಪ್ರತಿಷ್ಠಿತ ಶಸ್ತ್ರಾಸ್ತ್ರ ತಯಾರಿ ಮತ್ತು ಮಾರಾಟ ಸಂಸ್ಥೆ ಲಾಕ್ ಹೀಡ್ ಮಾರ್ಟಿನ್ ಈ ಹೆಲಿಕಾಪ್ಟರ್ ನಿರ್ಮಾಣ ಮಾಡುತ್ತಿದೆ.

    ಅಪಾಚೆ ಹೆಲಿಕಾಪ್ಟರ್:
    ನೌಕಾಪಡೆಯಂತೆ ಭಾರತೀಯ ವಾಯುಪಡೆಗೂ ಆನೆಬಲ ಬಂದಿದೆ. `ಹಾರುವ ಯುದ್ಧ ಟ್ಯಾಂಕ್‍ಗಳೆಂದೇ’ ಪ್ರಸಿದ್ಧಿ ಪಡೆದಿರುವ ಅಪಾಚೆ ಹೆಲಿಕಾಪ್ಟರ್‌ಗಳು ಖರೀದಿಗೆ ಒಪ್ಪಂದ ನಡೆಯಿತು. ಶತ್ರು ರಾಷ್ಟ್ರಗಳನ್ನು ನಡುಗಿಸುವ ಅಪಾಚೆ ಹೆಲಿಕಾಪ್ಟರ್ ಅನ್ನು ಅಮೆರಿಕದ ಖ್ಯಾತ ವಿಮಾನ ತಯಾರಿಕಾ ಸಂಸ್ಥೆ ಬೋಯಿಂಗ್ ನಿರ್ಮಾಣ ಮಾಡಿದೆ.

    ಅಪಾಚೆ ಹೆಲಿಕಾಪ್ಟರ್

    ಅಪಾಚೆ ವಿಶೇಷತೆಗಳು:
    ಭಾರತದ ಮೊದಲ ಪೂರ್ಣ ಪ್ರಮಾಣದ ಅಟ್ಯಾಕ್ ಹೆಲಿಕಾಪ್ಟರ್ ಇದಾಗಿದ್ದು, 2015ರಲ್ಲಿ 1.4 ಶತಕೋಟಿ ಡಾಲರ್ ಮೊತ್ತದ 22 ಅಪಾಚೆ ಹೆಲಿಕಾಪ್ಟರ್‌ಗಳಿಗಾಗಿ ಒಪ್ಪಂದ ನಡೆದಿದೆ. ಈಗಾಗಲೇ ಭಾರತೀಯ ವಾಯುಸೇನೆಯಲ್ಲಿ 17 ಅಪಾಚೆ ಹೆಲಿಕಾಪ್ಟರ್‌ಗಳ ಬಳಕೆ ಆಗುತ್ತಿದ್ದು, ಇದೇ ಮಾರ್ಚ್ ನಲ್ಲಿ ಉಳಿದ 5 ಹೆಲಿಕಾಪ್ಟರ್‌ಗಳು ಭಾರತಕ್ಕೆ ರವಾನೆ ಆಗಲಿದೆ.

    ಭೂ ಸೇನೆಗಾಗಿ 6 ಹೆಲಿಕಾಪ್ಟರ್‌ಗಳ ಖರೀದಿಗೆ 6,680 ಕೋಟಿ ರೂ. ಒಪ್ಪಂದ ನಡೆದಿದೆ. 30 ಎಂಎಂ ಚೈನ್‍ಗನ್, ಎಐಎಂ- 92 ಕ್ಷಿಪಣಿ, ಹೈಡ್ರಾ 70 ಎಂಎಂ ರಾಕೆಟ್, ಸ್ಟೈಕ್ ಕ್ಷಿಪಣಿಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಈ ಹೆಲಿಕಾಪ್ಟರಿಗೆ ಇದೆ. ನಿಖರ, ನಿರ್ದಿಷ್ಟ ಸ್ಥಳದ ಮೇಲೆ ಕ್ಷಿಪಣಿ ದಾಳಿ ಮಾಡಬಹುದಾಗಿದೆ. ಬಿರುಗಾಳಿ, ಮಳೆ ಸೇರಿದಂತೆ ಯಾವುದೇ ಪರಿಸ್ಥಿತಿಗಳಲ್ಲಿ ಕಾರ್ಯಾಚರಣೆ ಮಾಡಬಲ್ಲದು. ಗುಡ್ಡಗಾಡು, ಕಿರಿದಾದ ಪ್ರದೇಶಗಳಲ್ಲೂ ಸುಲಭವಾಗಿ ಇಳಿಯಬಲ್ಲದು. ಯುದ್ಧಭೂಮಿಯಿಂದ ನಿಯಂತ್ರಣ ಭೂಮಿಗೆ ನೇರವಾಗಿ ಚಿತ್ರಗಳನ್ನು ಕಳುಹಿಸುವ ಸಾಮಥ್ರ್ಯ ಈ ಹೆಲಿಕಾಪ್ಟರ್‌ಗೆ ಇದೆ.

    ದ್ರವೀಕೃತ ನೈಸರ್ಗಿಕ ಅನಿಲ ಖರೀದಿ
    ಮೂರನೇ ಒಪ್ಪಂದ ಇದಾಗಿದ್ದು, ಅಮೆರಿಕದ ಎಕ್ಸಾನ್ ಮೊಬಿಲ್-ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಡುವೆ ಈ ಒಪ್ಪಂದ ನಡೆದಿದೆ. ಪೈಪ್‍ಲೈನ್, ರಸ್ತೆ, ರೈಲು ಮಾರ್ಗ, ಸಮುದ್ರ ಮಾರ್ಗಗಳಲ್ಲಿ ಕಂಟೈನರ್‍ಗಳ ಮೂಲಕ ದ್ರವೀಕೃತ ನೈಸರ್ಗಿಕ ಅನಿಲ(ಎಲ್‍ಎನ್‍ಜಿ) ಸರಬರಾಜು ಆಗಲಿದೆ. ಅಮೆರಿಕದಿಂದ ಅತೀ ಹೆಚ್ಚು ಇಂಧನ ಖರೀದಿ ಮಾಡುತ್ತಿರುವ 6ನೇ ದೇಶ ಭಾರತವಾಗಿದ್ದು 2018ರಲ್ಲಿ 609 ದಶಲಕ್ಷ ಡಾಲರ್ ಮೌಲ್ಯದ ಕಚ್ಚಾತೈಲವನ್ನು ಭಾರತ ಖರೀದಿಸಿದೆ. ಜಗತ್ತಿನಲ್ಲಿ ದ್ರವೀಕೃತ ನೈಸರ್ಗಿಕ ಅನಿಲ ಖರೀದಿಸುತ್ತಿರುವ ನಾಲ್ಕನೇ ಅತೀ ದೊಡ್ಡ ರಾಷ್ಟ್ರ ಭಾರತವಾಗಿದ್ದು, ಸುವರ್ಣ ಚತುಷ್ಪತ ರಸ್ತೆಯಲ್ಲಿ ಎಲ್‍ಎನ್‍ಜಿ ಕೇಂದ್ರ ಸ್ಥಾಪಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಡೀಸೆಲ್ ಬದಲು ಭವಿಷ್ಯದಲ್ಲಿ ಟ್ರಕ್ ವಾಹನಗಳು ಎಲ್‍ಎನ್‍ಜಿ ಬಳಸಲು ಸರ್ಕಾರ ಉತ್ತೇಜಿಸಲಿದ್ದು, ಇಂಧನ ಬಳಕೆಯಲ್ಲಿ ಎಲ್‍ಎನ್‍ಜಿ ಪಾಲು 10 ವರ್ಷಗಳಲ್ಲಿ ಈಗಿರುವ ಶೇ.6.2ರಿಂದ ಶೇ 15 ಹೆಚ್ಚಿಸುವ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. -168 ಡಿಗ್ರಿ ಸೆಲ್ಸಿಯಸ್‍ನಲ್ಲಿ ದ್ರವೀಕೃತ ನೈಸರ್ಗಿಕ ಅನಿಲವನ್ನ ಪೂರೈಸಲಾಗುತ್ತದೆ.

    ಬೇರೆ ಏನು ಒಪ್ಪಂದ ನಡೆದಿದೆ?
    ಮೇಲೆ ತಿಳಿಸಿದ ಮೂರು ಒಪ್ಪಂದಗಳ ಜೊತೆಗೆ ಹಲವು ವಿಷಯಗಳೂ ಚರ್ಚೆ ಆಗಿವೆ. ಭಾರತ-ಅಮೆರಿಕ ನಡುವೆ ಔಷಧ ಸಹಕಾರ ಒಪ್ಪಂದ ನಡೆದಿದೆ. ಈ ಮೂಲಕ ಭಾರತದಿಂದ ಅಕ್ರಮವಾಗಿ ಔಷಧ, ವೈದ್ಯಕೀಯ ಉಪಕರಣಗಳ ಸರಬರಾಜು ತಡೆಗೆ ಉಭಯ ದೇಶಗಳು ಸಹಿ ಹಾಕಿವೆ. ಅಮೆರಿಕ ಆಹಾರ ಮತ್ತು ಔಷಧ ಆಡಳಿತ ಹಾಗೂ ಭಾರತದ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಜೊತೆ ಒಡಂಬಡಿಕೆ ನಡೆದಿದೆ.

    ಬೇರೊಂದು ರಾಷ್ಟ್ರದ ಮೂಲಕ ಅಕ್ರಮವಾಗಿ ಭಾರತದಿಂದ ಅಮೆರಿಕಕ್ಕೆ ಔಷಧ, ವೈದ್ಯಕೀಯ ಉಪಕರಣಗಳ ಪೂರೈಕೆ ಆಗುತ್ತಿದೆ. 2019ರಲ್ಲಿ ಈ ರೀತಿಯ 50 ಬಗೆಯ ಔಷಧಗಳು, ಉಪಕರಣಗಳ ಅಕ್ರಮ ಸಾಗಾಟ ನಡೆದಿದೆ. ಹೆಚ್‍ಐವಿ, ಕ್ಯಾನ್ಸರ್ ಮುಂತಾದ ರೋಗಗಳಿಗೆ ಅಮೆರಿಕ ನಿಗದಿಪಡಿಸಿದ ಗುಣಮಟ್ಟಕ್ಕಿಂತ ಕಡಿಮೆ ಗುಣಮಟ್ಟದ ಔಷಧ, ವೈದ್ಯಕೀಯ ಉಪಕರಣಗಳ ಮಾರಾಟ ನಡೆದಿದೆ.

    5ಜಿ ಚರ್ಚೆ:
    5ಜಿ ತರಂಗಾಂತರದ ಬಗ್ಗೆಯೂ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ ಚರ್ಚೆ ನಡೆಸಿದ್ದಾರೆ. ಭಾರತದಲ್ಲಿ 5ಜಿ ತರಂಗಾಂತರ ಹರಾಜು ಪ್ರಕ್ರಿಯೆ ಬಾಕಿ ಇದ್ದು ಚೀನಾ ಮೂಲದ ಹುವಾವೇ ಕಂಪನಿಗೆ ಉಪಕರಣಗಳ ಬಳಕೆ ಅನುಮತಿ ನೀಡಲಾಗಿದೆ. ವಿಶ್ವದಲ್ಲಿ ಅತೀ ಹೆಚ್ಚು 5ಜಿ ಉಪಕರಣಗಳನ್ನು ಉತ್ಪಾದಿಸುತ್ತಿರುವ ಹುವವೇ ಒಟ್ಟು 60 ಕಂಪನಿಗಳ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಆದರೆ ಸುರಕ್ಷತೆಯ ದೃಷ್ಟಿಯಿಂದ ಅಮೆರಿಕದಲ್ಲಿ ಹುವಾವೇ ಕಂಪನಿಗೆ ಟ್ರಂಪ್ ಸರ್ಕಾರ ನಿಷೇಧ ಹೇರಿದೆ. ಹೀಗಾಗಿ ಭಾರತ ಸರ್ಕಾರ ಹುವಾವೇ ಕಂಪನಿಯನ್ನು 5ಜಿ ವ್ಯವಹಾರ ನಿಷೇಧಿಸಬೇಕೆಂದು ಟ್ರಂಪ್ ಪ್ರಸ್ತಾಪ ಮಾಡಿದ್ದಾರೆ ಎಂದು ವರದಿಯಾಗಿದೆ.

  • ಇನ್ವೆಸ್ಟ್ ಕರ್ನಾಟಕ – 72 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ!

    ಇನ್ವೆಸ್ಟ್ ಕರ್ನಾಟಕ – 72 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ!

    – 90 ಸಾವಿರ ಉದ್ಯೋಗ ಸೃಷ್ಟಿ

    ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಒಟ್ಟು 51 ಕಂಪನಿಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಯಿತು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

    ಸಮಾವೇಶದ ಬಳಿಕ ಡೆನಿಸ್ಸನ್ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಮಾವೇಶದ ಕುರಿತು ಮಾಹಿತಿ ನೀಡಿದರು. ಇನ್ವೆಸ್ಟ್ ಕರ್ನಾಟಕ ನಿರೀಕ್ಷೆಗೂ ಮೀರಿ ಯಶಸ್ವಿಗೊಂಡಿದೆ. 1500 ಕ್ಕೂ ಹೆಚ್ಚು ಉದ್ಯಮಿಗಳು ಆಗಮಿದ್ದರು. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಯು ಈ ಸಮಾವೇಶದ ಯಶಸ್ಸಿಗೆ ಸಾಕ್ಷಿಯಾದವು ಎಂದರು.

    ಒಟ್ಟು ಸಮಾವೇಶದಲ್ಲಿ 51 ಕಂಪನಿಗಳೊಂದಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಗಿದ್ದು, 72 ಸಾವಿರ ಕೋಟಿ ಹೂಡಿಕೆ ಹರಿದು ಬರಲಿದೆ. ಇದರಿಂದ 90 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ ಎಂದು ಜಗದೀಶ್ ಶೆಟ್ಟರ್ ವಿವರಿಸಿದರು.

    ಇನ್ವೆಸ್ಟ್ ಮಾಡಿದ ಕಂಪನಿಗಳು:
    ರಾಜೇಶ್ ಎಕ್ಸ್ ಪೋಟ್ರ್ಸ್ ಲಿಮಿಟೆಡ್ 50 ಸಾವಿರ ಕೋಟಿ, ಸೊನಾಲಿ ಪವರ್ ಪ್ರೈವೆಟ್ ಲಿಮಿಟೆಡ್ ಕಂಪನಿಯು 4800 ಕೋಟಿ ರೂ., ನ್ಯಾಟ್‍ಕ್ಯಾಪ್ ಪವರ್ ಪ್ರೈವೆಟ್ ಲಿಮಿಟೆಡ್ 3000 ಕೋಟಿ, ಜೆಟ್‍ವಿಂಗ್ಸ್ ಏರೋಸ್ಪೇಸ್ ಆಂಡ್ ಏವಿಯೇಷನ್ 2060 ಕೋಟಿ, ಅಯನಾ ರಿನಿವೆಬಲ್ ಪವರ್ ಪ್ರೈವೆಟ್ ಲಿಮಿಟೆಡ್ 3000 ಕೋಟಿ, ಲುಗ್ಸೋರ್ ಎನರ್ಜಿ ಪ್ರೈವೆಟ್ ಲಿಮಿಟೆಡೆ 1200 ಕೋಟಿ ಸೇರಿದಂತೆ ಭಾಗೀರಥ ಕೆಮಿಕಲ್ಸ್, ಎಚ್‍ಪಿಸಿ, ಐಒಸಿ, ಪವರ್ ರಿನ್ಯೂ, ಗುಜರಾತ್ ಅಂಬುಜಾ, ಕೆಎಲ್‍ಇ ಸೊಸೈಟಿ, ದೋಡ್ಲಾ ಡೈರಿ, ಎಸಿಸಿ ಲಿಮಿಟೆಡ್, ಡೆಪೆಡ್ರೊ ಶುಗರ್, ವುಕ್ಸಿ ಮೆಂಗ್ಯಾಂಗ್ ಮೆಷಿನರಿ ಕಂಪನಿಗಳು ಒಳಗೊಂಡಿವೆ.

  • ನವಭಾರತದ ದೇವಾಲಯ ಎಚ್‍ಎಎಲ್‍ಗೆ ಕೇಂದ್ರದಿಂದ ಅವಮಾನ: ರಾಹುಲ್ ಗಾಂಧಿ

    ನವಭಾರತದ ದೇವಾಲಯ ಎಚ್‍ಎಎಲ್‍ಗೆ ಕೇಂದ್ರದಿಂದ ಅವಮಾನ: ರಾಹುಲ್ ಗಾಂಧಿ

    ಬೆಂಗಳೂರು: ರಫೇಲ್ ಯುದ್ಧ ವಿಮಾನದ ಒಪ್ಪಂದವನ್ನು ಬೇರೆ ಸಂಸ್ಥೆಗೆ ನೀಡುವ ಮೂಲಕ ದೇಶದ ರಕ್ಷಣಾ ವ್ಯವಸ್ಥೆಗೆ ಮಹತ್ವದ ಕೊಡುಗೆಗಳನ್ನು ನೀಡಿದ್ದ ಎಚ್‍ಎಎಲ್ ಸಂಸ್ಥೆಗೆ ಮೋದಿ ಸರ್ಕಾರ ಅವಮಾನ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

    ನಿವೃತ್ತ ಎಚ್‍ಎಎಲ್ ನೌಕಕರೊಂದಿಗಿನ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಚ್‍ಎಎಲ್ ಸಂಸ್ಥೆ ಸುಮಾರು 78 ವರ್ಷಗಳ ಹಳೆಯ ಸಂಸ್ಥೆಯಾಗಿದ್ದು, ಹಲವು ಮಾದರಿಯ ವಿಮಾನಗಳು, ಹೆಲಿಕಾಪ್ಟರ್ ಗಳನ್ನು ತಯಾರಿಸುತ್ತಿದೆ. ಅಲ್ಲದೇ ದೇಶದ ವೈಮಾನಿಕ ರಂಗಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ದೇಶದ ಬೆನ್ನೆಲುಬು ನಮ್ಮ ರಕ್ಷಣಾ ಕ್ಷೇತ್ರ. ಆದರೆ ಕೇಂದ್ರ ಸರ್ಕಾರ ರಫೇಲ್ ಯುದ್ಧ ವಿಮಾನದ ಒಪ್ಪಂದವನ್ನು ಬೇರೆ ಸಂಸ್ಥೆಗೆ ನೀಡಿದೆ. ಝೀರೋ ಪರ್ಸೆಂಟ್ ಅನುಭವವಿಲ್ಲದವರಿಗೆ ಟೆಂಡರ್ ನೀಡುವ ಮೂಲಕ ಎಚ್‍ಎಎಲ್ ಸಂಸ್ಥೆಗೆ ಕೇಂದ್ರ ಅವಮಾನ ಮಾಡಿದೆ ಎಂದು ದೂರಿದರು.

    ನಾನು ನಿಮ್ಮೊಂದಿಗೆ ಯಾವುದೇ ರಾಜಕೀಯ ಭಾಷಣ ಮಾಡಲು ಬಂದಿಲ್ಲ. ಕೇವಲ ಕೇಂದ್ರ ಸರ್ಕಾರ ಭ್ರಷ್ಟಚಾರದ ಬಗ್ಗೆ ಮಾತನಾಡಲು ನನಗೆ ವೇದಿಕೆ ಸಿಕ್ಕಿದೆ. ಎಚ್‍ಎಎಲ್ ದೇಶಕ್ಕೆ ನೀಡಿದ್ದ ಕೊಡುಗೆಗಳ ಬಗ್ಗೆ ಮಾತನಾಡಲು ನಾನು ಬಂದಿದ್ದೇನೆ. ಇಲ್ಲಿ ಸೇರಿರುವ ನಿಮಗೆಲ್ಲ ಅಭಿನಂದನೆಗಳು. ಭಾರತದ ವೈಮಾನಿಕ ಕ್ಷೇತ್ರಕ್ಕೆ ತನ್ನದೆಯಾದ ಕೊಡುಗೆಯನ್ನು ನೀಡಿರುವ ಸಂಸ್ಥೆ ಹಾಗೂ 70 ವರ್ಷಗಳ ನೌಕರರ ಶ್ರಮಕ್ಕೆ ಕೇಂದ್ರ ಸರ್ಕಾರ ಅಪಮಾನ ಮಾಡಿದೆ. ಎಚ್‍ಎಎಲ್ ರಫೇಲ್ ಯುದ್ಧ ವಿಮಾನ ತಯಾರಿಸುವ ಸಾಕಷ್ಟು ಸಾಮರ್ಥ್ಯ ಹೊಂದಿದೆ. ಆದರೆ ಪ್ರಧಾನಿ ಮೋದಿಯವರು ಅನಿಲ್ ಅಂಬಾನಿಯವರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಮತ್ತೊಮ್ಮೆ ಆರೋಪಿಸಿದರು.

    ಈ ಒಪ್ಪಂದದಲ್ಲಿ ಅನಿಲ್ ಅಂಬಾನಿಗೆ ಯಾವುದೇ ಅನುಭವವಿಲ್ಲ. ಎಚ್‍ಎಎಲ್ ಸಂಸ್ಥೆ ನಷ್ಟದಲ್ಲಿಲ್ಲ, ಆದರೆ ರಿಲಯನ್ಸ್ ನಷ್ಟದಲ್ಲಿದೆ. ಅನಿಲ್ ಅಂಬಾನಿಗಾಗಿ ಎಚ್‍ಎಎಲ್ ಸಂಸ್ಥೆಯನ್ನು ನಾಶ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರು ಅನಿಲ್ ಅಂಬಾನಿ ಒಡೆತನದ ಸಂಸ್ಥೆಗೆ ರಫೇಲ್ ಒಪ್ಪಂದ ನೀಡುವ ಮೂಲಕ ದೇಶದ ಸಾವಿರಾರು ಜನರ ಉದ್ಯೋಗವನ್ನು ಕಿತ್ತುಕೊಂಡಿದ್ದಾರೆ. ಅಲ್ಲದೇ 35,000 ಕೋಟಿ ರೂಪಾಯಿ ಕೊಟ್ಟು ಒಪ್ಪಂದ ಮಾಡುವಲ್ಲಿ ಪ್ರಧಾನಿ ಉತ್ಸುಕರಾಗಿದ್ದಾರೆ. ಸತ್ಯ ಇವತ್ತು ಕೇಂದ್ರದವರಿಗೆ ಬೇಕಾಗಿಲ್ಲ. ಮಾಧ್ಯಮಗಳು ಕೂಡ ಸತ್ಯವನ್ನ ಮರೆಮಾಚುತ್ತಿವೆ ಎಂದು ಆರೋಪಿಸಿದರು.

    ಎಚ್‍ಎಎಲ್ ಅನ್ನು ದೇವಾಲಯಕ್ಕೆ ಹೋಲಿಸಿ ಮಾತನಾಡಿದ ಅವರು, ಇದು ನವಭಾರತದ ದೇವಾಲಯವಿದ್ದಂತೆ ಆದರೆ ಇದನ್ನು ಪ್ರೀತಿಸಲು ನಮ್ಮಿಂದ ಆಗುತ್ತಿಲ್ಲ. 70 ವರ್ಷಗಳ ಸಾಧನೆ ಮತ್ತು ಮಹತ್ವದ ಕೆಲಸವನ್ನು ಯಾರೂ ಗಮನಿಸುತ್ತಿಲ್ಲ. ಕೇಂದ್ರ ಸರ್ಕಾರದ ಹಿರಿಯರೊಬ್ಬರು ಎಚ್‍ಎಎಲ್ ಸಾಮರ್ಥ್ಯ ವಿಲ್ಲವೆಂದು ಹೇಳುತ್ತಿದ್ದಾರೆ. ನಾನು ಅವರನ್ನು ಕೇಳುತ್ತೇನೆ ನಿಮಗಿರುವ ಸಾಮಥ್ರ್ಯವಾದರೂ ಏನು? ನಾನು ಚಿಕ್ಕವನಿದ್ದಾಗಿನಿಂದಲೂ ಎಚ್‍ಎಎಲ್ ಸಾಧನೆಗಳ ಬಗ್ಗೆ ಕೇಳಿಕೊಂಡು ಬೆಳೆದಿದ್ದೇನೆ. ಇದನ್ನು ನೋಡುವ ದೃಷ್ಟಿಕೋನ ನಮ್ಮ ಸರ್ಕಾರಕ್ಕಿಲ್ಲ. ಸರ್ಕಾರ ನಿಮ್ಮ ಬಳಿ ಕ್ಷಮೆ ಕೇಳದಿದ್ದರೆ ನಾನು ನಿಮ್ಮನ್ನು ಕ್ಷಮೆ ಕೋರುತ್ತೇನೆ. ರಫೇಲ್ ಗುತ್ತಿಗೆ ನಿಮ್ಮ ಹಕ್ಕು, ಆ ಹಕ್ಕಿಗೆ ನಿಮ್ಮ ಜೊತೆ ನಾನು ಶ್ರಮಿಸುತ್ತೇನೆ. ದಿನದ 24 ಗಂಟೆಯೂ ಹೋರಾಟ ಮಾಡಲು ನಾನು ಸಿದ್ಧನಿದ್ದೇನೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಚ್‍ಎಎಲ್ ಜೊತೆ ರಫೇಲ್ ಯೋಜನೆ ಕೈಬಿಟ್ಟಿದ್ದೇಕೆ: ಸ್ಪಷ್ಟನೆ ನೀಡಿದ ರಕ್ಷಣಾ ಸಚಿವೆ

    ಎಚ್‍ಎಎಲ್ ಜೊತೆ ರಫೇಲ್ ಯೋಜನೆ ಕೈಬಿಟ್ಟಿದ್ದೇಕೆ: ಸ್ಪಷ್ಟನೆ ನೀಡಿದ ರಕ್ಷಣಾ ಸಚಿವೆ

    ನವದೆಹಲಿ: ಎಚ್‍ಎಎಲ್(ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್)ನೊಂದಿಗೆ ರಫೇಲ್ ಯುದ್ದ ವಿಮಾನದ ಒಪ್ಪಂದವನ್ನು ಕೈಬಿಟ್ಟಿದ್ದೇಕೆ ಎಂಬುದರ ಕುರಿತು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ.

    ರಫೇಲ್ ಒಪ್ಪಂದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದಲ್ಲಿ ಸಂಪಾದಕರು ಮತ್ತು ವರದಿಗಾರರ ಜೊತೆ ಸಂವಾದ ನಡೆಸಿದ ಸೀತಾರಾಮನ್ ಕಾಂಗ್ರೆಸ್ ಅವಧಿಗಿಂತ ನಮ್ಮ ಒಪ್ಪಂದ ಅತ್ಯುತ್ತಮವಾಗಿದೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

    ಫ್ರಾನ್ಸ್ ಡಸಾಲ್ಟ್ ಏವಿಯೇಶನ್ ಸಹಯೋಗದೊಂದಿಗೆ ರಫೇಲ್ ಯುದ್ದ ವಿಮಾನಗಳನ್ನು ನಿರ್ಮಿಸುವ ಸಾಮರ್ಥ್ಯ ಎಚ್‍ಎಎಲ್‍ಗೆ ಇರಲಿಲ್ಲ. ಇದು ಯುಪಿಎ ಅವಧಿಯಲ್ಲಿ ಮಾಡಿಕೊಂಡಿದ್ದ 126 ರಫೆಲ್ ಯುದ್ದ ವಿಮಾನಗಳ ಖರೀದಿ ಒಪ್ಪಂದ ಮುರಿದು ಬೀಳಲು ಪ್ರಮಖ ಕಾರಣ. ರಫೇಲ್ ಯುದ್ದ ವಿಮಾನಗಳ ಖರೀದಿ ಸಂಬಂಧ ಎಚ್‍ಎಎಲ್ ಮತ್ತು ಫ್ರಾನ್ಸ್’ನ ಡಸಾಲ್ಟ್ ಏವಿಯೇಶನ್ ಜೊತೆಗೆ ಹಲವು ಸುತ್ತಿನ ಮಾತುಕತೆಗಳು ನಡೆದವು. ಮಾತುಕತೆ ವೇಳೆ ರಫೇಲ್ ಯುದ್ದ ವಿಮಾನಗಳನ್ನು ಭಾರತದಲ್ಲಿಯೇ ಉತ್ಪಾದಿಸಲು ಮುಂದಾದರೆ ಅದರ ಬೆಲೆ ಮೂಲ ಬೆಲೆಗಿಂತ ದುಪ್ಪಟ್ಟಾಗುವ ವಿಚಾರ ಬೆಳಕಿಗೆ ಬಂದಿತ್ತು. ಒಂದು ವೇಳೆ ವಿಮಾನಗಳನ್ನು ಭಾರತದಲ್ಲೇ ತಯಾರಿಸಿದರೆ, ಅವುಗಳಿಗೆ ಗ್ಯಾರೆಂಟಿ ಕೊಡಬೇಕಾಗಿತ್ತು. ಆದರೆ ವಿಮಾನಗಳಿಗೆ ಗ್ಯಾರಂಟಿ ಕೊಡುವ ಪರಿಸ್ಥಿತಿಯಲ್ಲಿ ಎಚ್‍ಎಎಲ್ ಇರಲಿಲ್ಲ. ಹೀಗಾಗಿ ಡಸಾಲ್ಟ್ ಕಂಪೆನಿಯು ಜಂಟಿಯಾಗಿ ರಫೇಲ್ ವಿಮಾನಗಳನ್ನು ನಿರ್ಮಿಸುವ ಮಾತುಕತೆಯನ್ನು ನಿಲ್ಲಿಸಿತ್ತು ಎಂದು ವಿವರಿಸಿದರು.

    ಯುಪಿಎ ಸರ್ಕಾರದ ಅವಧಿಯಲ್ಲಿನ ಒಪ್ಪಂದಕ್ಕೆ ಹೋಲಿಸಿದರೆ, ಮುಂದಿನ ವರ್ಷ 2019ರ ಸೆಪ್ಟೆಂಬರ್ ತಿಂಗಳಿನಲ್ಲಿಯೇ ರಫೇಲ್ ಯುದ್ಧವಿಮಾನಗಳು ಸೇನೆಗೆ ಸಿಗಲಿವೆ. ಇವುಗಳು ಶಸ್ತ್ರಬಳಕೆ, ಏವಿಯೋನಿಕ್ಸ್ ತಂತ್ರಜ್ಞಾನ ಹಾಗೂ ಇನ್ನೂ ಅನೇಕ ಉನ್ನತ ತಂತ್ರಜ್ಞಾನಗಳನ್ನು ಒಳಗೊಂಡಿವೆ. 2016ರಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 36 ರಫೇಲ್ ಯುದ್ಧವಿಮಾನಗಳನ್ನು ಖರೀದಿಸಲು ಫ್ರಾನ್ಸ್’ನೊಂದಿಗೆ ಒಪ್ಪಂದ ಮಾಡಿಕೊಟ್ಟಿತ್ತು. ಈ ವಿಚಾರದಲ್ಲಿ ಬಹುಕೋಟಿ ಹಗರಣ ನಡೆದಿದ್ದು, ಎಚ್‍ಎಎಲ್‍ನೊಂದಿಗೆ ಒಪ್ಪಂದ ಮಾಡಿಕೊಂಡಿಲ್ಲವೆಂದು ಕಾಂಗ್ರೆಸ್ ಗಂಭೀರವಾಗಿ ಆರೋಪ ಮಾಡುತ್ತಿದೆ ಎಂದು ತಿಳಿಸಿದರು.

    ಕಾಂಗ್ರೆಸ್‍ಗೆ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಮಾತನಾಡಲು ಯಾವುದೇ ವಿಷಯಗಳು ಸಿಗಲಿಲ್ಲ. ಹೀಗಾಗಿ ಅವರು ರಫೇಲ್ ಒಪ್ಪಂದದಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಹೇಳಲು ಮುಂದಾದರು. ಆದರೆ ನಮ್ಮದು ದೇಶಕಂಡ ಅತ್ಯಂತ ಸ್ವಚ್ಛ ಹಾಗೂ ಭ್ರಷ್ಟಾಚಾರ ಮುಕ್ತ ಸರ್ಕಾರ ಎಂಬುದು ಜನರಿಗೆ ಗೊತ್ತಿದೆ. ಹತಾಶಾ ಮನೋಭಾವನೆಗೆ ತಲುಪಿರುವ ಕಾಂಗ್ರೆಸ್ ನಮ್ಮ ಸರ್ಕಾರದಿಂದ ಕಲಿಯಬೇಕಾದ ಪಾಠಗಳು ಸಾಕಷ್ಟು ಇವೆ ಎಂದು ಹೇಳಿದರು.

    ರಫೇಲ್ ಒಪ್ಪಂದದ ಕುರಿತು ವಿರೋಧ ಪಕ್ಷಗಳಿಗೆ ಮನವರಿಕೆ ಮಾಡಿಕೊಡುವ ಆಸಕ್ತಿ ನಮಗಿಲ್ಲ. ವಿರೋಧ ಪಕ್ಷಗಳು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ವಾಯುಪಡೆಯ ಕಾರ್ಯಾಚರಣೆ ಸನ್ನದ್ಧತೆಯು ಹೇಗೆ ಇರಬೇಕೆಂಬುದರ ಕಾಳಜಿ ಇಲ್ಲ. ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ 526 ಕೋಟಿಗೆ ಒಪ್ಪಂದ ಆಗಿತ್ತು. ಆದರೆ ಬಿಜೆಪಿ ಅವಧಿಯಲ್ಲಿ 1,670 ಕೋಟಿ ರೂಪಾಯಿ ಏರಿಕೆ ಮಾಡಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ನಾನು ಇಷ್ಟಂತು ಹೇಳಬಲ್ಲೆ, ಯುಪಿಎ ಅವಧಿಯಲ್ಲಿನ ಒಪ್ಪಂದದ ವಿಮಾನಗಳು ಕೇವಲ ಹಾರುವ ಮತ್ತು ಇಳಿಯುವ ಸಾಮರ್ಥ್ಯವನ್ನು ಮಾತ್ರ ಹೊಂದಿದ್ದವು. ಆದರೆ ನಮ್ಮ ಅವಧಿಯಲ್ಲಿನ ವಿಮಾನಗಳು ಅತ್ಯಾಧುನಿಕ ತಂತ್ರಜ್ಞಾನಗಳ ಸಹಿತ ಶತ್ರುಗಳೊಂದಿಗೆ ಹೋರಾಡುವ ಶಕ್ತಿಯನ್ನು ಸಹ ಹೊಂದಿವೆ ಎಂದು ತಿಳಿಸಿದರು.

    ಏನಿದು ರಫೇಲ್ ಒಪ್ಪಂದ?
    ಯುಪಿಎ ಸರ್ಕಾರದ ಅವಧಿಯಲ್ಲಿ 2012ರಲ್ಲಿ ಫ್ರಾನ್ಸ್’ನ ಡಸಾಲ್ಟ್ ಏವಿಯೇಶನ್ ಸಂಸ್ಥೆಯೊಂದಿಗೆ 126 ಮಧ್ಯಮ ಶ್ರೇಣಿಯ ಬಹುಮುಖಿ ಯುದ್ಧ ವಿಮಾನಗಳ(ಎಂಎಂಆರ್’ಸಿಎ-ಮೀಡಿಯಂ ಮಲ್ಟಿ ರೋಲ್ ಕಾಂಬಾಟ್ ಏರ್’ಕ್ರಾಫ್ಟ್) ಖರೀದಿಗೆ ಒಪ್ಪಂದ ಮಾಡಿಕೊಟ್ಟಿತ್ತು. ಮಾತುಕತೆಯ ನಿಯಮಗಳ ಪ್ರಕಾರ ಡಸಾಲ್ಟ್ ಏವಿಯೇಶನ್ ಸಂಸ್ಥೆಯು 18 ರಫೇಲ್ ಜೆಟ್‍ಗಳನ್ನು ಹಾರಾಡಲು ಸನ್ನದ್ಧವಾಗಿರುವ ಸ್ಥಿತಿಯಲ್ಲಿ ಭಾರತಕ್ಕೆ ಪೂರೈಸಬೇಕು ಹಾಗೂ ಭಾರತದ ಎಚ್‍ಎಎಲ್‍ನೊಂದಿಗೆ ಉಳಿದ 108 ಯುದ್ಧ ವಿಮಾನಗಳನ್ನು ಭಾರತದಲ್ಲಿಯೇ ತಯಾರಿಸಬೇಕೆನ್ನುವ ಷರತ್ತನ್ನು ಹಾಕಿತ್ತು.

    ಎಚ್‍ಎಎಲ್ ಕೈ ಬಿಡಲು ಕಾರಣಗಳೇನು?
    ಎಚ್‍ಎಎಲ್ ಸಂಸ್ಥೆಗೆ ರಫೇಲ್ ಯುದ್ಧ ವಿಮಾನಗಳನ್ನು ನಿರ್ಮಿಸುವ ಸಾಮರ್ಥ್ಯವಿಲ್ಲವೆಂಬುದೇ ಪ್ರಮುಖ ಕಾರಣ. ಅಲ್ಲದೇ ಎಚ್‍ಎಎಲ್‍ನಲ್ಲಿ ಉತ್ಪಾದನೆಯಾಗುವ ವಿಮಾನಗಳ ವೆಚ್ಚವು ಫ್ರಾನ್ಸ್’ನಲ್ಲಿ ತಯಾರಾಗುವ ವಿಮಾನಗಳ ವೆಚ್ಚಕ್ಕಿಂತ ದುಬಾರಿಯಾಗಿತ್ತು. ಸಂಸ್ಥೆಗೆ ವಿಮಾನಗಳ ಉತ್ಪಾದನೆಗೆ ಬೇಕಾಗುವ ಸಂಪನ್ಮೂಲಗಳ ಬಗ್ಗೆ ಅಂದಿನ ಕೇಂದ್ರ ಸರ್ಕಾರ ತಲೆ ಕೆಡಿಸಿಕೊಂಡಿರಲಿಲ್ಲ. ಇದಲ್ಲದೇ 2013ರ ರಕ್ಷಣಾ ಸಚಿವ ಎ.ಕೆ.ಆಂಟನಿಯವರು ಪದೇ ಪದೇ ಯುದ್ಧ ವಿಮಾನಗಳ ಖರೀದಿ ಮಾತುಕತೆಯಲ್ಲಿ ಮಧ್ಯ ಪ್ರವೇಶಿಸುತ್ತಿದ್ದರಿಂದ ಫ್ರಾನ್ಸ್ ಕಂಪೆನಿಯು ಜಂಟಿ ತಯಾರಿಕೆಗೆ ಹಿಂದೇಟು ಹಾಕಿತು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • KIALನಲ್ಲಿ ನಿಮ್ಮ ಮುಖವೇ ನಿಮ್ಮ ಬೋರ್ಡಿಂಗ್ ಪಾಸ್

    KIALನಲ್ಲಿ ನಿಮ್ಮ ಮುಖವೇ ನಿಮ್ಮ ಬೋರ್ಡಿಂಗ್ ಪಾಸ್

    – ಭಾರತದಲ್ಲೇ ಮೊದಲ ಬಾರಿಗೆ ಸೆಲ್ಫ್ ರೆಕಾಗ್ನೇಸಿಂಗ್ ಬೋರ್ಡಿಂಗ್ ತಂತ್ರಜ್ಞಾನ!

    ಚಿಕ್ಕಬಳ್ಳಾಪುರ: ಪ್ರಯಾಣಿಕ ಸ್ನೇಹಿ ವಿಮಾನ ನಿಲ್ದಾಣವೆಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಗ್ಗಳಿಕೆ ಗಳಿಸಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಎಲ್)ದಲ್ಲಿ ಶೀಘ್ರವೇ ಸೆಲ್ಫ್ ರೆಕಾಗ್ನೇಸಿಂಗ್ ಬೋರ್ಡಿಂಗ್ ತಂತ್ರಜ್ಞಾನ ಅಳವಡಿಸಲಿದೆ.

    ಕೆಐಎಎಲ್ ನಿರ್ವಹಣೆ ನಡೆಸುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಬಿಐಎಎಲ್) ಮತ್ತು ವಿಷನ್ ಬಾಕ್ಸ್‍ಗಳು ಕಾಗದ ರಹಿತ ಬಯೋಮೆಟ್ರಿಕ್ ಸೆಲ್ಫ್ ರೆಕಾಗ್ನೇಸಿಂಗ್ ಬೋರ್ಡಿಗ್ ತಂತ್ರಜ್ಞಾನವನ್ನು ಆರಂಭಿಸುವ ಒಪ್ಪಂದವೊಂದಕ್ಕೆ ಸಹಿ ಹಾಕಿವೆ. ಪ್ರಯಾಣಿಕರಿಗೆ ಅತ್ಯುತ್ತಮ ಸೇವೆ ಹಾಗೂ ಮತ್ತು ಭವಿಷ್ಯಕ್ಕೆ ಸಜ್ಜಾದ ಹೈಟೆಕ್ ವಿಮಾನ ನಿಲ್ದಾಣವನ್ನು ಸೃಷ್ಟಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

    https://twitter.com/BLRAirport/status/1037404789598904320

    ಸ್ಮಾರ್ಟ್ ಫೋನ್ ಗಳಲ್ಲಿ ಇತ್ತೀಚೆಗೆ ಹೊಚ್ಚ ಹೊಸ ನವಜಮಾನದ ಟ್ರೆಂಡಿಂಗ್ ಆಗಿರುವ ಫೇಸ್ ಅನ್ ಲಾಕಿಂಗ್ ಮಾದರಿಯ ತಂತ್ರಜ್ಞಾನವನ್ನ ಬಳಕೆ ಮಾಡಿಕೊಂಡು ವಿಮಾನ ನಿಲ್ದಾಣದಲ್ಲೂ ಸಹ ಪ್ರಯಾಣಿಕರ ಮುಖವನ್ನು ಗುರುತಿಸುವ ಮೂಲಕ ವಿಮಾನಯಾನಕ್ಕೆ ಅವಕಾಶ ಮಾಡಿಕೊಡುವುದಾಗಿದೆ. ಭಾರತ ಸರ್ಕಾರದ ಡಿಜಿಟಲ್ ಇಂಡಿಯಾ ಅಭಿಯಾನದ ಕನಸಿಗೆ ಇದೊಂದು ಅತ್ಯಂತ ಗಮನಾರ್ಹ ಹೆಜ್ಜೆಗಳಲ್ಲಿ ಒಂದಾಗಿದ್ದು,.

    ಏನಿದು ಯೋಜನೆ?
    ಭಾರತ ಸರ್ಕಾರದ ಮಹತ್ವಕಾಂಕ್ಷಿ ಡಿಜಿಯಾತ್ರಾ ಯೋಜನೆಗೆ ಬಯೋಮೆಟ್ರಿಕ್ ಸೆಲ್ಫ್ ರೆಕಾಗ್ನೇಸಿಂಗ್ ಬೋರ್ಡಿಂಗ್ ತಂತ್ರಜ್ಞಾನ ಮತ್ತಷ್ಟು ಮೆರುಗು ನೀಡಲಿದೆ. ವಿಮಾನಯಾನದ ಪ್ರತಿಯೊಂದು ಹಂತದಲ್ಲಿ ಕಾಗದ ರಹಿತ ಪ್ರಯಾಣವನ್ನು ಸೃಷ್ಟಿಸಿ ಡಿಜಿಟಲ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಉದ್ದೇಶವನ್ನು ಡಿಜಿಯಾತ್ರಾ ಹೊಂದಿದೆ. ಬಯೋಮೆಟ್ರಿಕ್ ತಂತ್ರಜ್ಞಾನದ ಅನುಷ್ಟಾನದಿಂದ ಕಾಗದರಹಿತ ವಿಮಾನ ಪ್ರಯಾಣ ಹೊಂದಿರುವ ಭಾರತದ ಪ್ರಪ್ರಥಮ ವಿಮಾನ ನಿಲ್ದಾಣವಾಗಿ ಶೀಘ್ರವೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹೊರಹೊಮ್ಮಲಿದೆ.

    https://twitter.com/visionbox/status/1037389380762132481

    ಕಾಗದರಹಿತ ವಿಮಾನಯಾನ:
    ಈ ಡಿಜಿಯಾತ್ರಾ ಯೋಜನೆಯ ಉದ್ದೇಶ ಎಂದರೆ ಟಿಕೆಟ್ ನೋಂದಣಿಯಿಂದ ವಿಮಾನ ಹತ್ತುವವರೆಗಿನ ಪ್ರಕ್ರಿಯೆಯನ್ನು ಕಾಗದ ರಹಿತವಾಗಿಸುವುದರೊಂದಿಗೆ ವಿಮಾನ ಪ್ರಯಾಣವನ್ನು ಸರಳವಾಗಿಸುವುದು. ಬಯೋಮೆಟ್ರಿಕ್ ಸೆಲ್ಫ್ ಬೋರ್ಡಿಂಗ್ ತಂತ್ರಜ್ಞಾನದಿಂದ ವಿಮಾನ ನಿಲ್ದಾಣದಲ್ಲಿ ಚಲಿಸುವಾಗಲೇ ಪ್ರಯಾಣಿಕರನ್ನು ಫೇಸ್ ರೆಕಾಗ್ನೇಸಿಂಗ್ ಮೂಲಕ ಅವರ ಮುಖಚರ್ಯೆಗಳಿಂದಲೆ ಗುರುತಿಸುವುದಲ್ಲದೆ, ಪದೇ ಪದೇ ಬೋರ್ಡಿಂಗ್ ಪಾಸ್‍ಗಳು, ಪಾಸ್‍ಪೋರ್ಟ್‍ಗಳನ್ನು ಅಥವ ಇತರೆ ಭೌತಿಕ ಗುರುತಿನ ದಾಖಲೆಗಳನ್ನು ಸಲ್ಲಿಸುವ ಮತ್ತು ಅನಗತ್ಯ ತಡೆಗಳನ್ನು ಇಲ್ಲವಾಗಿಸುವುದು. ಈ ಯೋಜನೆಯಿಂದಾಗಿ ಸಮಯದ ಉಳಿತಾಯದ ಜೊತೆಗೆ ಪ್ರಯಾಣಿಕರನ್ನು ಸಾಲುಗಟ್ಟಿ ನಿಲ್ಲದಂತೆ ಮಾಡಿ ಕಿರಿಕಿರಿ ತಪ್ಪಿಸುತ್ತದೆ.

    ಯಾವಾಗ ಬರುತ್ತೆ?
    ದೇಶದಲ್ಲೇ ಮೊದಲ ಅನುಷ್ಟಾನದ ಮೈಲುಗಲ್ಲಿನ ಪ್ರಕ್ರಿಯೆಯು ಬೆಂಗಳೂರು ವಿಮಾನ ನಿಲ್ದಾಣದಲ್ಲಿ 2019 ರ ಮೊದಲ ತ್ರೈಮಾಸಿಕದಲ್ಲಿ ಪೂರ್ಣವಾಗಲಿದೆ ಎನ್ನಲಾಗಿದೆ.

    ಈಗಾಗಲೇ ಈ ಒಪ್ಪಂದಕ್ಕೆ ಪೋರ್ಚುಗಲ್‍ನ ಲಿಸ್ಬನ್‍ನಲ್ಲಿ ಬಿಐಎಎಲ್ ನ ನಿರ್ದೇಶಕ ಹರಿ ಮಾರರ್ ಮತ್ತು ವಿಷನ್ ಬಾಕ್ಸ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಿಗೆಲ್ ಲೀಟ್‍ಮನ್ ಸಹಿ ಹಾಕಿದ್ದಾರೆ. ಈ ಸಮಾರಂಭದಲ್ಲಿ ಪೋರ್ಚುಗೀಸ್ ಪ್ರಧಾನ ಮಂತ್ರಿ ಆಂಟೋನಿಯೊಕೋಸ್ಟಾ, ಹಣಕಾಸು ಸಚಿವರಾದ ಮ್ಯಾನ್ಯುವೆಲ್ ಕಾಲ್ಡಿರಾ ಕಾಬ್ರಲ್, ಪೋರ್ಚುಗಲ್‍ ಭಾರತದ ರಾಯಭಾರಿ ನಂದಿನಿ ಸಿಂಗ್ಲಾ, ಇಂಟರ್‌ನ್ಯಾಷನಲೈಷನ್‍ನ ರಾಷ್ಟ್ರೀಯ ಕಾರ್ಯದರ್ಶಿ ಯುರಿಕೊ ಬ್ರಿಲ್‍ಹಾಂಟೆ ಡಯಾಸ್ ಮತ್ತು ಇತರೆ ಸರ್ಕಾರಿ ಪ್ರತಿನಿಧಿಗಳು ಹಾಜರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv