Tag: ಒಳನುಸುಳುವಿಕೆ

  • ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿ ಪಡೆದಿದ್ದ ಬಾಗು ಖಾನ್ ಹತ್ಯೆ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿ ಪಡೆದಿದ್ದ ಬಾಗು ಖಾನ್ ಹತ್ಯೆ

    ಶ್ರೀನಗರ: ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಮೃತ ಇಬ್ಬರ ಪೈಕಿ ‘ಮಾನವ ಜಿಪಿಎಸ್’ (Human GPS)ಎಂದೇ ಕುಖ್ಯಾತಿ ಪಡೆದಿರುವ ಬಾಗು ಖಾನ್ (Bagu Khan) ಹತ್ಯೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ‘ಸಮಂದರ್ ಚಾಚಾ’ ಎಂದೂ ಕರೆಯಲ್ಪಡುವ ಬಾಗು ಖಾನ್, 1995ರಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿದ್ದ. ಭಾರತದ ಒಳಗೆ ಉಗ್ರರನ್ನು ಕಳುಹಿಸಲು ಸಹಾಯ ಮಾಡುವ ಅತ್ಯಂತ ಹಳೇ ಹಾಗೂ ಪ್ರಮುಖ ಮಾಸ್ಟರ್ ಮೈಂಡ್ ಆಗಿದ್ದ. ಭದ್ರತಾ ಮೂಲಗಳ ಪ್ರಕಾರ, ಗುರೇಜ್ ವಲಯದ ವಿವಿಧ ಪ್ರದೇಶಗಳಿಂದ 100ಕ್ಕೂ ಹೆಚ್ಚು ನುಸುಳುಕೋರತನದ ಯತ್ನಗಳಿಗೆ ಬಾಗು ಖಾನ್ ಕಾರಣನಾಗಿದ್ದ. ಇಲ್ಲಿನ ಕಠಿಣ ಭೂಪ್ರದೇಶ ಮತ್ತು ರಹಸ್ಯ ಮಾರ್ಗಗಳ ಬಗ್ಗೆ ಆತನಿಗೆ ಇದ್ದ ಆಳವಾದ ಜ್ಞಾನದಿಂದ ಹೆಚ್ಚಿನ ಉಗ್ರರನ್ನು ಭಾರತಕ್ಕೆ ಕಳುಹಿಸಲು ಯಶಸ್ವಿಯಾಗಿದ್ದ. ಇದೇ ಕಾರಣಕ್ಕೆ ಆತ ಎಲ್ಲಾ ಉಗ್ರಗಾಮಿ ಗುಂಪುಗಳಿಗೂ ವಿಶೇಷ ವ್ಯಕ್ತಿಯಾಗಿದ್ದ. ಇದನ್ನೂ ಓದಿ: ಪಾಕ್‌ ಹುಟ್ಟಡಗಿಸಲು ಐಎಎಫ್‌ ಬಳಸಿದ್ದು 50ಕ್ಕಿಂತಲೂ ಕಡಿಮೆ ಶಸ್ತ್ರಾಸ್ತ್ರ: ವಾಯುಪಡೆಯ ಉಪಮುಖ್ಯಸ್ಥ ಮಾಹಿತಿ

    ಬಾಗು ಖಾನ್ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದರೂ, ನಿಯಂತ್ರಣ ರೇಖೆಯುದ್ದಕ್ಕೂ ಇರುವ ಗುರೇಜ್ ಮತ್ತು ಅದರ ನೆರೆಯ ವಲಯಗಳಿಂದ ಉಗ್ರರ ಒಳನುಸುಳಿವಿಕೆ ಯಶಸ್ವಿಯಾಗಲು ಪ್ರತಿಯೊಂದು ಉಗ್ರ ಸಂಘಟನೆಗೂ ಸಹಾಯ ಮಾಡುತ್ತಿದ್ದ. ಬಾಗು ಖಾನ್ ಭಯೋತ್ಪಾದಕ ಹಿಜ್ಬುಲ್ ಮುಜಾಹಿದ್ದೀನ್‌ನೊಂದಿಗೆ ಸಹ ಸಂಬಂಧ ಹೊಂದಿದ್ದ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 7 ವರ್ಷಗಳ ನಂತರ ಚೀನಾಗೆ ಪ್ರಧಾನಿ ಮೋದಿ ಭೇಟಿ

    ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರೆಜ್ ಸೆಕ್ಟರ್‌ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಈ ವೇಳೆ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿದಾಳಿಯಾಗಿ ಭದ್ರತಾ ಪಡೆ ಕೂಡ ಗುಂಡಿನ ದಾಳಿ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ಚಿನಾರ್ ಕಾರ್ಪ್ಸ್ ಎಕ್ಸ್ನಲ್ಲಿ ತಿಳಿಸಿದೆ. ಬಾಗು ಖಾನ್ ಜೊತೆ ಹತ್ಯೆಯಾದ ಇನ್ನೊಬ್ಬ ಭಯೋತ್ಪಾದಕ ಕೂಡ ಪಾಕಿಸ್ತಾನಿ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ 85%ಗೆ ಏರಿಕೆ: ತೇಜಸ್ವಿ ಯಾದವ್

  • ಕಾಶ್ಮೀರ ಗಡಿಯಲ್ಲಿ ಒಳ ನುಸುಳುತ್ತಿದ್ದ ಐವರು ವಿದೇಶಿ ಭಯೋತ್ಪಾದಕರ ಹತ್ಯೆ

    ಕಾಶ್ಮೀರ ಗಡಿಯಲ್ಲಿ ಒಳ ನುಸುಳುತ್ತಿದ್ದ ಐವರು ವಿದೇಶಿ ಭಯೋತ್ಪಾದಕರ ಹತ್ಯೆ

    ಶ್ರೀನಗರ: ಜಮ್ಮು ಕಾಶ್ಮೀರದ (Jammu And Kashmir) ಕುಪ್ವಾರದ (Kupwara) ಗಡಿ ನಿಯಂತ್ರಣಾ ರೇಖೆ ಬಳಿ ಒಳನುಸುಳುತ್ತಿದ್ದ (Infiltration)  5 ಭಯೋತ್ಪಾದಕರನ್ನು ಭದ್ರತಾ ಪಡೆ ಗುಂಡಿಕ್ಕಿ ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಉತ್ತರ ಕಾಶ್ಮೀರದ ಎಲ್‌ಒಸಿ (LOC) ಬಳಿಯ ಜುಮಗುಂಡ್ (Jumagund) ಪ್ರದೇಶದಲ್ಲಿ ಖಚಿತ ಮಾಹಿತಿ ಮೇರೆಗೆ ಗುರುವಾರ ರಾತ್ರಿ ಭದ್ರತಾ ಪಡೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಮುಂಜಾನೆ ವೇಳೆ 5 ಭಯೋತ್ಪಾದಕರನ್ನು ಹತ್ತಿಕ್ಕಲಾಗಿದೆ. 5 ವಿದೇಶಿ ಭಯೋತ್ಪಾದಕರನ್ನು ಎನ್‌ಕೌಂಟರ್ ಮಾಡಿದ್ದು, ಆ ಪ್ರದೇಶದಲ್ಲಿ ಶೋಧ ಕಾರ್ಯಗಳು ಮುಂದುವರೆಯುತ್ತಿವೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ವಿಜಯ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರ ಹಿಂಸಾಚಾರ – ಕೇಂದ್ರ ಸಚಿವರ ಮನೆಗೆ ಬೆಂಕಿಯಿಟ್ಟ ಕಿಡಿಗೇಡಿಗಳು

    ಪೂಂಚ್ ಸೆಕ್ಟರ್‌ನಲ್ಲಿ ಭಯೋತ್ಪಾದಕರ ಒಳನುಸುಳುವಿಕೆಯನ್ನು ವಿಫಲಗೊಳಿಸಿದ ಭದ್ರತಾ ಪಡೆ, ಭಯೋತ್ಪಾದಕರಿಂದ ಬೃಹತ್ ಪ್ರಮಾಣದ ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರ ವಶಪಡಿಸಿಕೊಂಡಿದೆ. ಫೆಬ್ರವರಿಯಿಂದ ಇಲ್ಲಿಯವರೆಗೆ ಒಟ್ಟು 10 ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Cyclone Biparjoy : 140 ಕಿ.ಮೀ ವೇಗದಲ್ಲಿ ಆರ್ಭಟ – ಗುಜರಾತ್‍ ತೀರದಲ್ಲಿಅಲ್ಲೋಲ ಕಲ್ಲೋಲ

    ಇದೇ ಜೂನ್ 13ರಂದು ಕುಪ್ವಾರದ ಗಡಿ ನಿಯಂತ್ರಣಾ ರೇಖೆ ಇಬ್ಬರು ಭಯೋತ್ಪಾದಕರನ್ನು (Terrorists) ಭದ್ರತಾಪಡೆ (Security Force) ಹತ್ಯೆ ಮಾಡಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ. ಅಲ್ಲದೇ ಈ ವರ್ಷದಲ್ಲಿ 5 ಭಯೋತ್ಪಾದಕರನ್ನು ಏಕಕಾಲದಲ್ಲಿ ಎನ್‌ಕೌಂಟರ್ ಮಾಡಿರುವುದು ಇದೇ ಮೊದಲಾಗಿದೆ. ಇದನ್ನೂ ಓದಿ: ಪತ್ನಿಯನ್ನು ಅಪ್ಪಿಕೊಂಡು ಹೊಡೆದ ಗುಂಡು ತನಗೂ ಮುಳುವಾಯ್ತು- ದಂಪತಿ ಸಾವು

    ಭದ್ರತಾ ಪಡೆ ಭಯೋತ್ಪಾದಕರಿಂದ ಒಟ್ಟು 2 ಎಕೆ 47, 48 ಸುತ್ತಿನ ಮದ್ದುಗುಂಡುಗಳು, 4 ನಿಯತಕಾಲಿಕಗಳು, 4 ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಸಿಗರೇಟ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: Biparjoy Cyclone ಅಬ್ಬರ ನಡುವೆ ಹೆಣ್ಣುಮಗುವಿಗೆ ‘ಬಿಪರ್‌ಜಾಯ್‌’ ಅಂತ ಹೆಸರಿಟ್ಟ ದಂಪತಿ

  • ಭಾರತಕ್ಕೆ ನುಸುಳಲು ತುದಿಗಾಲಲ್ಲಿ ನಿಂತಿದ್ದಾರೆ 50ಕ್ಕೂ ಹೆಚ್ಚು ಉಗ್ರರು

    ಭಾರತಕ್ಕೆ ನುಸುಳಲು ತುದಿಗಾಲಲ್ಲಿ ನಿಂತಿದ್ದಾರೆ 50ಕ್ಕೂ ಹೆಚ್ಚು ಉಗ್ರರು

    – ಇಬ್ಬರು ಉಗ್ರರಿಂದ ಭಯಾನಕ ಮಾಹಿತಿ ಬಹಿರಂಗ

    ನವದೆಹಲಿ: ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ಪಾಕಿಸ್ತಾನ ಭಾರೀ ಸಂಚು ರೂಪಿಸಿದ್ದು, ಪಾಕಿಸ್ತಾನಿ ಸೈನಿಕರ ಸಹಾಯದಿಂದ 50ಕ್ಕೂ ಹೆಚ್ಚು ಲಷ್ಕರ್-ಇ-ತೋಯ್ಬಾ(ಎಲ್‍ಇಟಿ) ಉಗ್ರರು ದೇಶ ಪ್ರವೇಶಿಸಲು ಕಾಯುತ್ತಿದ್ದಾರೆ ಎಂಬ ಭಯಾನಕ ಮಾಹಿತಿ ಪ್ರಕಟವಾಗಿದೆ.

    ಎಲ್‍ಇಟಿಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಪಾಕ್ ನಾಗರಿಕರು ಕಾಶ್ಮೀರದ ಮೂಲಕ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಇವರ ವಿಚಾರಣೆ ವೇಳೆ 50 ಉಗ್ರರು ಭಾರತಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಅಲ್ಲದೆ, ಪಾಕಿಸ್ತಾನಿ ಸೈನಿಕರು ಹಾಗೂ ಆಂತರಿಕ ಗುಪ್ತಚರ ದಳದ ಸಹಾಯದಿಂದ ಭಾರತ ಪ್ರವೇಶಿಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿಯನ್ನು ಈ ಇಬ್ಬರು ಹೊರ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಪಾಕಿಸ್ತಾನದ ಪ್ರಜೆಗಳಾದ ಖಲೀಲ್ ಅಹ್ಮದ್ ಮತ್ತು ಮೊಜಾಮ್ ಖೋಕರ್ ಇಬ್ಬರೂ ವಿಚಾರಣೆ ವೇಳೆ ಮಾಹಿತಿ ನೀಡಿದ್ದು, ಪಾಕಿಸ್ತಾನದ ಸೈನಿಕರು ಕಚಾರ್ಬನ್ ಪೋಸ್ಟ್ ಮೂಲಕ ಭಯೋತ್ಪಾದಕರನ್ನು ಭಾರತಕ್ಕೆ ನುಸುಳಲು ಸಹಾಯ ಮಾಡುತ್ತಿದ್ದಾರೆ. ಇದಕ್ಕಾಗಿ ಪಾಕಿಸ್ತಾನ ಸೇನೆ ಮತ್ತು ಐಎಸ್‍ಐ ಗಡಿ ನಿಯಂತ್ರಣ ರೇಖೆಯಾದ್ಯಂತ(ಎಲ್‍ಓಸಿ) ಒಂದು ಡಜನ್‍ಗೂ ಹೆಚ್ಚು ಲಾಂಚಿಂಗ್ ಪ್ಯಾಡ್(ಉಗ್ರರಿಗೆ ಎಲ್ಲ ರೀತಿಯ ತರಬೇತಿ ನೀಡಿ ಅವರನ್ನು ಸಂಪೂರ್ಣವಾಗಿ ಸಿದ್ಧಗೊಳಿಸಿ ಶಸ್ತ್ರಾಸ್ತ್ರಗಳನ್ನು ನೀಡಿ ದೇಶದ ಒಳಗಡೆ ಕಳುಹಿಸಲು ಸ್ಥಾಪಿಸಲಾದ ಕೇಂದ್ರ) ಗಳನ್ನು ಸಕ್ರಿಯಗೊಳಿಸಿವೆ.

    ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಓಕೆ)ದ ಮೂರು ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಯೋತ್ಪಾದಕರಿದ್ದು, ಪಾಕ್ ಸೇನೆ ಪಿಓಕೆಯ ಮೂರು ಲಾಂಚ್ ಪ್ಯಾಡ್‍ಗಳಲ್ಲಿ ಐಎಸ್‍ಐ ಭಯೋತ್ಪಾದಕರಿಗೆ ಆಶ್ರಯ ನೀಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪಿಓಕೆಯ ಲಿಪಾ ಕಣಿವೆಯ ಲಾಂಚ್ ಪ್ಯಾಡ್‍ನಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರು ತಂಗಿದ್ದಾರೆ ಎಂದು ಶಂಕಿಸಲಾಗಿದೆ.

    ಲಾಂಚ್ ಪ್ಯಾಡ್‍ಗಳಲ್ಲಿನ ಭಯೋತ್ಪಾದಕರು ಜೈಷ್-ಎ-ಮೊಹಮ್ಮದ್ ಹಾಗೂ ಅಲ್-ಬದ್ರ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಲಿಪಾ ಲಾಂಚ್ ಪ್ಯಾಡ್ ಜಮ್ಮು ಕಾಶ್ಮೀರದ ತಂಗ್‍ಧಾರ್ ಹಾಗೂ ಉರಿ ವಲಯದಲ್ಲಿದೆ. ಪಿಓಕೆಯ ಲ್ಯಾಂಜೋಟೆ ಮತ್ತು ಕಲು ಲಾಂಚ್‍ಪ್ಯಾಡ್‍ಗಳಲ್ಲಿ 60ರಿಂದ 70 ಭಯೋತ್ಪಾದಕರಿದ್ದಾರೆ. ಈ ಕಲು ಲಾಂಚ್ ಪ್ಯಾಡ್ ಮೂಲಕ ಸಹ ಜಮ್ಮು ಕಾಶ್ಮೀರವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಇಬ್ಬರು ಪಾಕಿಸ್ತಾನಿ ಪ್ರಜೆಗಳು ಕಾಶ್ಮೀರವನ್ನು ಪ್ರವೇಶಿಸಲು ಯತ್ನಿಸುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ ಎಂದು ಉನ್ನತ ಭದ್ರತಾ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

    ಕಣಿವೆಯಲ್ಲಿ ಶಾಂತಿ ಭಂಗಗೊಳಿಸಲು ಭಯೋತ್ಪಾದಕರನ್ನು ಒಳನುಸುಳಿಸುವಲ್ಲಿ ವಿಫಲವಾದ್ದರಿಂದ ಪಾಕಿಸ್ತಾನ ಹತಾಶವಾಗಿದೆ ಎಂದು ಸೇನೆಯ 15 ಕಾಪ್ರ್ಸ್‍ನ ಜನರಲ್ ಆಫೀಸರ್ ಕಮಾಂಡಿಂಗ್(ಜಿಓಸಿ) ಲೆಫ್ಟಿನೆಂಟ್ ಜನರಲ್ ಕೆಜೆಎಸ್ ಧಿಲ್ಲಾನ್ ಅವರು ಕಾಶ್ಮೀರದ ಎಡಿಜಿಪಿ ಮುನಿರ್ ಖಾನ್ ಅವರಿಂದೊಗೆ ನಡೆದ ಜಂಟಿ ಸುದ್ದಿಗೋಷ್ಠಿ ವೇಳೆ ತಿಳಿಸಿದ್ದಾರೆ.

    ಎಲ್‍ಇಟಿಗೆ ಸಂಬಂಧಿಸಿದ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಆಗಸ್ಟ್ 21ರಂದು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಬಂಧಿತ ಪಾಕಿಸ್ತಾನಿಗಳು ಒಳನುಸುಳುವಿಕೆಯನ್ನು ಒಪ್ಪಿಕೊಂಡಿರುವ ವಿಡಿಯೋವನ್ನು ಸಹ ಸುದ್ದಿಗೋಷ್ಠಿಯಲ್ಲಿ ತೋರಿಸಿದ್ದಾರೆ.

    ಈ ಎರಡು ವಿಡಿಯೋಗಳು ಪಾಕಿಸ್ತಾನಿ ಸೇನೆ ನಾಗರಿಕರನ್ನು ಕಾಶ್ಮೀರಕ್ಕೆ ಹೇಗೆ ತಳ್ಳುತ್ತಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ವಿಶೇಷವಾಗಿ ಆಗಸ್ಟ್ 5ರಿಂದ ಕಾಶ್ಮೀರದಲ್ಲಿ ನೆಲೆಸಿರುವ ಶಾಂತಿಯನ್ನು ಭಂಗಗೊಳಿಸಲು ಕಣಿವೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಕೈಗೊಳ್ಳುತ್ತಿದೆ ಎಂದು ಧಿಲ್ಲಾನ್ ತಿಳಿಸಿದ್ದಾರೆ.

    ಒಳನುಸುಳುವಿಕೆ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಭಾರತೀಯ ಸೇನೆ ಈ ವರೆಗೆ ಇಂತಹ ಅನೇಕ ಪ್ರಯತ್ನಗಳನ್ನು ವಿಫಲಗೊಳಿಸಿದೆ ಎಂದು ಮುನೀರ್ ಖಾನ್ ತಿಳಿಸಿದ್ದಾರೆ.