Tag: ಓಟಿಟಿ

  • ಒಟಿಟಿಗೆ ಬಂದ ‘ಗಾಮಿ’: ವಿಶ್ವಕ್ ಸೇನ್ ಚಿತ್ರಕ್ಕೆ ಮೆಚ್ಚುಗೆ

    ಒಟಿಟಿಗೆ ಬಂದ ‘ಗಾಮಿ’: ವಿಶ್ವಕ್ ಸೇನ್ ಚಿತ್ರಕ್ಕೆ ಮೆಚ್ಚುಗೆ

    ಮಾರ್ಚ್‌ 8ರಂದು ತೆರೆಕಂಡಿರುವ ವಿಶ್ವಕ್‌ ಸೇನ್‌ ನಟನೆಯ ತೆಲುಗು ಚಿತ್ರ ‘ಗಾಮಿ’ (Gaaami) ಓಟಿಟಿಯತ್ತ ಹೆಜ್ಜೆ ಹಾಕಿದ್ದು, ಏ.12ರಂದು ಜೀ5ನಲ್ಲಿ  ಸ್ಟ್ರೀಮಿಂಗ್ ಆಗುತ್ತಿದೆ. ಗಾಮಿ ಸಿನಿಮಾಗೆ ವಿದ್ಯಾರ್ಧ ಕಾಗಿತಾ ನಿರ್ದೇಶನವಿದೆ.

    ವಿದ್ಯಾರ್ಧ ಕಾಗಿತಾ (Vidyardha Kagita) ಇವರ ಚೊಚ್ಚಲ ಪ್ರಯತ್ನ. ವಿಶ್ವಕ್‌ ಸೇನ್‌ಗೆ ನಾಯಕಿಯಾಗಿ ಚಾಂದಿನಿ ಚೌದರಿ ನಟಿಸಿದ್ದಾರೆ. ಎಂಜಿ ಅಭಿನಯ, ಮೊಹಮ್ಮದ್‌ ಸಮದ್‌, ಹರಿಕಾ ಪೇಡಾಡ, ಶಾಂತಿ ರಾವ್‌, ಮಯಾಂಕ್‌ ಪರಾಕ್‌ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

    ಸಿನಿಮಾಗೆ ವಿಶ್ವನಾಥ ರೆಡ್ಡಿ ಚೆಲುಮಲ್ಲ ಛಾಯಾಗ್ರಹಣ, ರಾಘವೇಂದ್ರ ತಿರುನ್‌ ಸಂಕಲನ, ನರೇಶ್‌ ಕುಮಾರನ್‌ ಸಂಗೀತ ಒದಗಿಸಿದ್ದಾರೆ. ಕಾರ್ತಿಕ್‌ ಶಬರೀಶ್‌ ಚಿತ್ರಕ್ಕೆ ಹಣ ಹಾಕಿದ್ದಾರೆ.

  • ಖಾಸಗಿ ವಿಡಿಯೋ ಲೀಕ್ ಮಾಡಿದ್ದ ನಟಿಗೆ ‘ಬಿಗ್ ಬಾಸ್’ನಲ್ಲಿ ಅವಕಾಶ

    ಖಾಸಗಿ ವಿಡಿಯೋ ಲೀಕ್ ಮಾಡಿದ್ದ ನಟಿಗೆ ‘ಬಿಗ್ ಬಾಸ್’ನಲ್ಲಿ ಅವಕಾಶ

    ಬಿಗ್ ಬಾಸ್ ಶುರುವಾಗೋದಕ್ಕೂ ಮುಂಚೆ ಸ್ಪರ್ಧೆಗಳ ವಿಚಾರದಲ್ಲಿ ಸಾಕಷ್ಟು ಚರ್ಚೆ ಆಗುತ್ತದೆ. ಅದೇ ಯಾವುದೇ ಭಾಷೆ ಇರಲಿ, ಸಖತ್ ಸುದ್ದಿ ಆಗದೇ ಬಿಗ್ ಬಾಸ್ ಶುರುವಾಗುವುದೇ ಇಲ್ಲ. ಈಗ ಹಿಂದಿ ಓಟಿಟಿಯಲ್ಲಿ ಬಿಗ್ ಬಾಸ್ ಪ್ರಾರಂಭವಾಗುತ್ತಿದ್ದು, ತಮ್ಮ ಖಾಸಗಿ ವಿಡಿಯೋವನ್ನು ಲೀಕ್ ಮಾಡಿದ್ದ ಭೋಜ್ ಪುರಿ ನಟಿ ತ್ರಿಶಾ ಕರ್ ಮಧು (Trisha Kar Madhu) ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಿನಿಮಾಗಿಂತಲೂ ಬಿಗ್ ಬಾಸ್ ಶೋ (Bigg Boss Hindi Ott 3) ನೋಡೋದಕ್ಕೆ ಕಾದು ಕೂರುವ ಅಭಿಮಾನಿಗಳಿದ್ದಾರೆ. ಇದೀಗ ಬಿಗ್ ಬಾಸ್ ಹಿಂದಿ ಒಟಿಟಿ 3 ಪ್ರಸಾರಕ್ಕೆ ಈಗ ಮುಹೂರ್ತ ಫಿಕ್ಸ್ ಆಗಿದೆ. ಡಿಜಿಟಲ್ ವರ್ಷನ್ ಬಿಗ್ ಬಾಸ್ ಒಟಿಟಿಗೆ ಸಕಲ ತಯಾರಿ ನಡೆಯುತ್ತಿದೆ. ಮೇ 15ರಂದು ಒಟಿಟಿಯಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಪ್ರಸಾರ ಮಾಡಲು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಒಟಿಟಿ ನಿರೂಪಣೆಗೆ ಈ ಬಾರಿಯೂ ಸಲ್ಮಾನ್ ಖಾನ್ (Salman Khan) ಸಾಥ್ ನೀಡುತ್ತಿದ್ದಾರೆ.‌

    ಅಂದಹಾಗೆ, ಈ ಬಾರಿ ಒಟಿಟಿ ಸೀಸನ್‌ಗೆ ಸೋಷಿಯಲ್ ಮೀಡಿಯಾ ಸ್ಟಾರ್ ಜಾಸ್ಮಿನ್ ಕೌರ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಸೋ ಬ್ಯೂಟಿಫುಲ್, ಸೋ ಎಲಿಗೆಂಟ್, ಜಸ್ಟ್ ಲುಕಿಂಗ್ ಲೈಕ್ ಎ ವಾವ್ ಎಂದು ಹೇಳುವ ಮೂಲಕ ರಾತ್ರೋ ರಾತ್ರಿ ಫೇಮಸ್ ಆದವರು ಜಾಸ್ಮಿನ್ ಕೌರ್. ಅವರು ಬಟ್ಟೆಯ ಗುಣಮಟ್ಟವನ್ನು ವಿವರಿಸುವ ರೀತಿಯಿಂದ ಗಮನ ಸೆಳೆದಿದ್ದಾರೆ.


    ಜಾಸ್ಮಿನ್ ಕೌರ್ (Jasmeen Kaur) ಸೇರಿದಂತೆ ಅನೇಕ ರೀಲ್ಸ್ ಸ್ಟಾರ್‌ಗಳ ಹೆಸರು ಸದ್ದು ಮಾಡುತ್ತಿದೆ. ಆದರೆ ಬಿಗ್ ಬಾಸ್ ಒಟಿಟಿ ತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಜಾಸ್ಮಿನ್ ಒಟಿಟಿಗೆ ಶೋ ಬರುತ್ತಾರಾ? ಕಾದುನೋಡಬೇಕಿದೆ.

  • ಒಟಿಟಿಯಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ಬಿ

    ಒಟಿಟಿಯಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ಬಿ

    ಕ್ಷಿತ್ ಶೆಟ್ಟಿ ನಟಿಸಿರುವ ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಒಟಿಟಿಯಲ್ಲಿ (OTT) ಲಭ್ಯವಾಗಿದೆ. ಜನವರಿ 25ರ ಮಧ್ಯರಾತ್ರಿಯಿಂದಲೇ ಅಮೆಜಾನ್ ಪ್ರೈಂ ವಿಡಿಯೋದಲ್ಲಿ ನೋಡಬಹುದು ಎಂದು ನಿರ್ದೇಶಕ ಹೇಮಂತ್ ರಾವ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಎ ಮತ್ತು ಬಿ ಪಾರ್ಟ್ ಎರಡನ್ನೂ ಪ್ರೇಕ್ಷಕರು ಒಪ್ಪಿಕೊಂಡಿದ್ದರು. ಬಾಕ್ಸ್ ಆಫೀಸಿನಲ್ಲೂ ಗೆದ್ದಿದ್ದವು.

    ಕೇವಲ ಪ್ರೇಕ್ಷಕರು ಮಾತ್ರವಲ್ಲ, ಸೆಲೆಬ್ರಿಟಿಗಳು ಈ ಸಿನಿಮಾವನ್ನು ಒಪ್ಪಿಕೊಂಡಿದ್ದರು. ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದರು.

    ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದರು. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದರು.

    ಕೇವಲ ಕನ್ನಡದಲ್ಲಿ ಮಾತ್ರವಲ್ಲ,  ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿತ್ತು. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿತ್ತು. ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದರು. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು.

     

    ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

  • ಜಿಯೋ ಪ್ರೀಪೇಯ್ಡ್ ಗ್ರಾಹಕರಿಗೆ  JioTV ಪ್ರೀಮಿಯಂ ಪ್ಲ್ಯಾನ್‌ ಪರಿಚಯಿಸಿದ ರಿಲಯನ್ಸ್

    ಜಿಯೋ ಪ್ರೀಪೇಯ್ಡ್ ಗ್ರಾಹಕರಿಗೆ JioTV ಪ್ರೀಮಿಯಂ ಪ್ಲ್ಯಾನ್‌ ಪರಿಚಯಿಸಿದ ರಿಲಯನ್ಸ್

    ಬೆಂಗಳೂರು: ರಿಲಯನ್ಸ್ ಜಿಯೋದಿಂದ (Reliance Jio) ಈಗ ಜಿಯೋಟಿವಿ ಪ್ರೀಮಿಯಂ ಪ್ಲ್ಯಾನ್‌ಗಳನ್ನು (JioTV Premium Plans) ಪರಿಚಯಿಸಲಾಗುತ್ತಿದೆ. ಜಿಯೋ ಪ್ರೀಪೇಯ್ಡ್ ಬಳಕೆದಾರರು ಈಗ ಜಿಯೋಟಿವಿ ಪ್ರೀಮಿಯಂ ಪ್ಲ್ಯಾನ್‌ಗಳ ಜೊತೆಗೆ ನಿರಂತರ ಮನರಂಜನೆ ಆನಂದಿಸಬಹುದು. ಮಾಸಿಕ, ತ್ರೈಮಾಸಿಕ ಹಾಗೂ ವಾರ್ಷಿಕ ಪ್ಲ್ಯಾನ್‌ಗಳು ಇರಲಿದ್ದು, ಇದರ ಮೂಲಕ ಅನಿಯಮಿತ ಡೇಟಾ, ಧ್ವನಿ, ಎಸ್‌ಎಂಎಸ್‌ ಹಾಗೂ 14 ಪ್ರಮುಖ OTT (ಓವರ್ ದಿ ಟಾಪ್)ಗಳಿಗೆ ಚಂದಾದಾರಿಕೆ ಪಡೆಯಬಹುದು. 1,000 ರೂ. ಮೌಲ್ಯದ ಒಟಿಟಿ ಚಂದಾದಾರಿಕೆ ಯಾವುದೇ ಹೆಚ್ಚುವರಿ ಶುಲ್ಕ ಇಲ್ಲದೇ ಇದು ಲಭ್ಯವಾಗಲಿದೆ.

    ಪ್ಲ್ಯಾನ್‌ಗಳು ತಿಂಗಳಿಗೆ 398 ರೂ.ನೊಂದಿಗೆ ಆರಂಭವಾಗುತ್ತದೆ. ಅಂದ ಹಾಗೆ ಈ 14 OTT ಗಳಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಹಾಗೂ ಪ್ರಾದೇಶಿಕ ಕಂಟೆಂಟ್ ಲಭ್ಯವಾಗುತ್ತದೆ. ಡಿಜಿಟಲ್ ಟಿವಿ, ಕ್ರೀಡಾ, ಒರಿಜಿನಲ್ಸ್, ಟೀವಿ ಶೋಗಳು ಮುಂತಾದವು ದೊರೆಯುತ್ತವೆ. ಪ್ರೀಪೇಯ್ಡ್ ಸೆಗ್ಮೆಂಟ್‌ನಲ್ಲಿ ವಾರ್ಷಿಕ ಪ್ಲ್ಯಾನ್‌ ಖರೀದಿ ಮಾಡುವಂಥ ಗ್ರಾಹಕರಿಗಾಗಿಯೇ ಒನ್ ಕ್ಲಿಕ್ ಕಾಲ್ ಸೆಂಟರ್ ಬೆಂಬಲ ಸಹ ದೊರೆಯುತ್ತದೆ.

    ಯಾವ್ಯಾವ ಆ್ಯಪ್‌ಗಳು ದೊರೆಯುತ್ತವೆ?

    • ರಾಷ್ಟ್ರೀಯ ಆ್ಯಪ್‌ಗಳು: ಜಿಯೋಸಿನಿಮಾ (JioCinema) ಪ್ರೀಮಿಯಂ, ಡಿಸ್ನಿ+ ಹಾಟ್ ಸ್ಟಾರ್, ಝೀ5, ಸೋನಿಲಿವ್
    • ಅಂತಾರಾಷ್ಟ್ರೀಯ ಆ್ಯಪ್‌ಗಳು: ಪ್ರೈಮ್ ವಿಡಿಯೋ (ಮೊಬೈಲ್), ಲಯನ್ಸ್ ಗೇಟ್ ಪ್ಲೇ, ಡಿಸ್ಕವರಿ+, ಡಾಕ್ಯುಬೇ
    • ಪ್ರಾದೇಶಿಕ ಆ್ಯಪ್‌ಗಳು: ಸನ್ ನೆಕ್ಸ್ಟ್, ಹೊಯ್ ಚೊಯ್, ಪ್ಲಾನೆಟ್ ಮರಾಠಿ, ಚೌಪಾಲ್, ಎಪಿಕ್ ಆನ್, ಕಂಚಾ ಲಂಕಾ

    ಇದೊಂದು‌ ಪ್ಲ್ಯಾನ್‌ ಖರೀದಿಸಿದವರಿಗೆ ವಿವಿಧ ಒಟಿಟಿಗಳಿಗೆ ಸಬ್‌ಸ್ಕ್ರೈಬ್ ಆಗಬೇಕು ಎಂಬ ಅಗತ್ಯ ಇರುವುದಿಲ್ಲ. ಹಲವು ಲಾಗಿನ್ ಐಡಿ ಬೇಕು, ಪ್ರತಿ ಆ್ಯಪ್‌ ಗೂ ಪ್ರತ್ಯೇಕವಾಗಿ ಪಾಸ್‌ವರ್ಡ್‌ಬೇಕು ಅಂತಿಲ್ಲ. ಒಂದೇ ಕಡೆಗೆ ಎಲ್ಲ ವಿವಿಧ ಕಂಟೆಂಟ್‌ಗಳು ದೊರೆಯುತ್ತದೆ. ಇನ್ನೂ ಗ್ರಾಹಕರು ತಮಗೆ ಬೇಕಾದ ಕಂಟೆಂಟ್ ಹುಡುಕುವುದು ಸಹ ಸುಲಭವಾಗಿದ್ದು, ಶಿಫಾರಸಿಗಾಗಿಯೇ ಉತ್ತಮವಾದ ಹುಡುಕಾಟದ ಎಂಜಿನ್ ವ್ಯವಸ್ಥೆ ಇದೆ. ಅದೇ ರೀತಿ ಗ್ರಾಹಕರು ತಮ್ಮ ಆದ್ಯತೆಯಂತೆ ಮಾಸಿಕ, ತ್ರೈಮಾಸಿಕ ಹಾಗೂ ವಾರ್ಷಿಕ ಪ್ಲ್ಯಾನ್‌ಗಳ ಮಿತಿಯನ್ನು ಆರಿಸಿಕೊಳ್ಳಬಹುದು. ಒಂದೇ ಕ್ಲಿಕ್ ನಲ್ಲಿ ಕಸ್ಟಮರ್ ಕೇರ್ ಕಾಲ್ ಬ್ಯಾಕ್ ಸೇವೆ ಲಭ್ಯ ಇದ್ದು, ವಾರ್ಷಿಕ ಪ್ಲ್ಯಾನ್‌ ರೀಚಾರ್ಜ್‌ಗೆ ಇಎಂಐ ಸೌಲಭ್ಯ ಸಹ ದೊರೆಯಲಿದೆ.

    ಪ್ರೀಮಿಯಂ OTT ಕಂಟೆಂಟ್ ಬಳಸುವುದು ಹೇಗೆ?

    • ಮೊದಲಿಗೆ ಜಿಯೋಟಿವಿ ಪ್ರೀಮಿಯಂನ ಮಾಸಿಕ, ತ್ರೈಮಾಸಿಕ ಅಥವಾ ವಾರ್ಷಿಕ ಪ್ಲ್ಯಾನ್‌ನೊಂದಿಗೆ ರೀಚಾರ್ಜ್ ಮಾಡಬೇಕು
    • ಅದೇ ಜಿಯೋ ಮೊಬೈಲ್ ಫೋನ್ ಸಂಖ್ಯೆಯೊಂದಿಗೆ ಜಿಯೋ ಟಿವಿ ಆ್ಯಪ್‌ಗೆ ಸೈನ್ ಇನ್ ಆಗಬೇಕು
    • ಜಿಯೋಟಿವಿ ಪ್ರೀಮಿಯಂ ಟ್ಯಾಬ್ ಮೂಲಕವಾಗಿ ಪ್ರೀಮಿಯಂ ಒಟಿಟಿ ಆ್ಯಪ್‌ ಕಂಟೆಂಟ್ ಅನ್ನು ಆನಂದಿಸಬಹುದು
    • ಪ್ರತ್ಯೇಕವಾದ ಲಾಗಿನ್ ಅಥವಾ ಪಾಸ್‌ವರ್ಡ್ ಅಗತ್ಯ ಇಲ್ಲ.

    ಗಮನಿಸಬೇಕಾದ ಅಂಶಗಳು:

    • ಬಳಕೆದಾರರ ಮೈಜಿಯೋ ಕೂಪನ್ ವಿಭಾಗದಲ್ಲಿ ದೊರೆಯುವ ಕೂಪನ್ ಮೂಲಕವಾಗಿ ಜಿಯೋಸಿನಿಮಾ ಪ್ರೀಮಿಯಂ ಸಬ್ ಸ್ಕ್ರಿಪ್ಷನ್ ದೊರೆಯುತ್ತದೆ. ಪ್ರೀಮಿಯಂ ಕಂಟೆಂಟ್ ಬೇಕು ಅಂತಾದಲ್ಲಿ ಜಿಯೋಸಿನಿಮಾ ಆ್ಯಪ್‌ನಲ್ಲಿ ಕೂಪನ್ ರಿಡೀಮ್ ಮಾಡಬೇಕು.
    • ತಮ್ಮ ಬಳಿ ಇರುವಂಥ ಆಯಾ ಆ್ಯಪ್‌ ಮೂಲಕವಾಗಿಯೇ ಪ್ರೈಮ್ ವಿಡಿಯೋ (ಮೊಬೈಲ್) ಮತ್ತು ಡಿಸ್ನಿ+ ಹಾಟ್ ಸ್ಟಾರ್ ಕಂಟೆಂಟ್ ಗಳನ್ನು ನೋಡಬಹುದು.
    • ಮೈಜಿಯೋ ಮೂಲಕ ಬಳಕೆದಾರರು ಅಮೆಜಾನ್ ಪ್ರೈಮ್ ಸಬ್ ಸ್ಕ್ರಿಪ್ಷನ್ ಸಕ್ರಿಯಗೊಳಿಸಬೇಕಾಗುತ್ತದೆ. ಆಪ್‌ಗೆ ಲಾಗಿನ್ ಆಗುವಾಗ ಡಿಸ್ನಿ+ ಹಾಟ್ ಸ್ಟಾರ್ ಆಕ್ಟಿವೇಟ್ ಆಗುತ್ತದೆ.
    • ಈಗಾಗಲೇ ಇರುವಂಥ ಬಳಕೆದಾರರು ಹಾಗೂ ಹೊಸ ಬಳಕೆದಾರರಿಗೆ ಈ ಪ್ಲಾನ್ ದೊರೆಯಲಿದೆ. ಡಿಸೆಂಬರ್ 15ರಿಂದ ಈ ಪ್ಲ್ಯಾನ್‌ ದೊರೆಯಲಿದೆ.

  • ಓಟಿಟಿಯಲ್ಲಿ ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ಜೀವನಗಾಥೆ

    ಓಟಿಟಿಯಲ್ಲಿ ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ಜೀವನಗಾಥೆ

    ವೈವಿಧ್ಯಮಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಹೊಂದಿರುವ ಕಂಟೆಂಟ್‌ ಅನ್ನು ಜನರಿಗೆ ನೀಡುವಲ್ಲಿ JioCinema ಮುಂಚೂಣಿಯಲ್ಲಿದೆ. ಆ ಪ್ರಯತ್ನದ ಭಾಗವಾಗಿ ಇದೀಗ, ಮುತ್ತಯ್ಯ ಮುರಳೀಧರನ್‌ (Muttiah Muralidharan) ಅವರ ಜೀವನವನ್ನಾಧರಿಸಿದ, ಎಂ.ಎಸ್‌. ಶ್ರೀಪತಿ (MS Sripathy) ನಿರ್ದೇಶಿಸಿರುವ ‘800’ ಸಿನಿಮಾ JioCinemaದಲ್ಲಿ ಬಿಡುಗಡೆಗೊಳ್ಳುತ್ತಿದೆ. ಇದೇ ಡಿಸೆಂಬರ್ 2ರಂದು ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೊಳ್ಳುತ್ತಿರುವ ಈ ಸಿನಿಮಾ, ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರ ಬದುಕು ಮತ್ತು ಸಾಧನೆಗಳನ್ನು ಆಧರಿಸಿದ್ದು. ಟೆಸ್ಟ್‌ ಕ್ರಿಕೆಟ್‌ನಲ್ಲಿ 800 ವಿಕೆಟ್‌ಗಳನ್ನು ಪಡೆದುಕೊಂಡು ದಾಖಲೆ ನಿರ್ಮಿಸಿದ್ದ ಬೌಲರ್‍‌ ಬದುಕಿನ ತೆರೆ-ಮರೆಯ ಕಥೆಯನ್ನು ಹೇಳುವ ಈ ಸಿನಿಮಾ, ಕ್ರಿಕೆಟ್ ಪ್ರಿಯರಿಗಂತೂ ಮನರಂಜನೆಯ ಮೃಷ್ಟಾನ್ನವನ್ನೇ ಉಣಿಸುತ್ತದೆ.

    ವಿವೇಕ್‌ ರಂಗಾಚಾರಿ ನಿರ್ಮಾಣದ ಈ ಸಿನಿಮಾ ತಮಿಳು, ತೆಲುಗು, ಮಲಯಾಳಂ, ಹಿಂದಿ, ಬೆಂಗಾಲಿ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ವೀಕ್ಷಣೆಗೆ ಲಭ್ಯವಿರುವುದು ವಿಶೇಷ. ಖ್ಯಾತ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಕ್ರಿಕೆಟ್‌ ಬದುಕಿನ ಸಾಧನೆಗಳನ್ನು ಹೇಳುವ ‘800’ ಸಿನಿಮಾ, ಅವರ ಖಾಸಗೀ ಬದುಕಿನ ಸಂಕಷ್ಟಗಳನ್ನೂ ನೋಡುಗರ ಎದುರಿಗೆ ತೆರೆದಿಡುತ್ತದೆ. ಹಲವು ಸಂಕಷ್ಟಗಳು, ವಿವಾದಗಳನ್ನು ಹಾದು ಕ್ರಿಕೆಟ್‌ ಜಗತ್ತಿನ ಲೆಜೆಂಡ್ ಆದ ಸ್ಪೂರ್ತಿಕಥೆಯನ್ನು ಹೇಳುತ್ತದೆ.

    ಬ್ರಿಟಿಷ್ ಆಳ್ವಿಕೆಯ ಅವಧಿಯಲ್ಲಿ, ಎಸ್ಟೆಟ್‌ ಕೆಲಸಗಾರರಾಗಿ ದಕ್ಷಿಣ ಭಾರತದಿಂದ ಶ್ರೀಲಂಕಾಗೆ ವಲಸೆ ಬರುವ ಮುತ್ತಯ್ಯ ಮುರಳೀಧರನ್ ಅವರ ತಾತನ ಕುಟುಂಬ ನಂತರ ಅಲ್ಲಿಯೇ ನೆಲೆಗೊಳ್ಳುತ್ತದೆ. ಬಾಲ್ಯದಿಂದಲೇ ಕ್ರಿಕೆಟ್ ವ್ಯಾಮೋಹ ಬೆಳೆಸಿಕೊಂಡಿದ್ದ ಮುತ್ತಯ್ಯ, ಬದುಕಿನುದ್ದಕ್ಕೂ ತಮ್ಮ ನೆಚ್ಚಿನ ಕ್ರೀಡೆಗೆ ಮತ್ತು ತಮ್ಮ ತಾಯ್ನೆಲಕ್ಕೆ ತೋರಿದ ಬದ್ಧತೆ ಅನನ್ಯವಾದದ್ದು. ವೈಯಕ್ತಿಕ ಬದುಕಿನ ಸಂಕಷ್ಟ-ಸವಾಲುಗಳ ನಡುವೆಯೂ ಕ್ರಿಕೆಟ್‌ ಜಗತ್ತಿನಲ್ಲಿ ಅವರು ನಿರ್ಮಿಸಿದ ದಾಖಲೆಗಳು, ಕ್ರೀಡಾಪ್ರೇಮಿಗಳಿಗಷ್ಟೇ ಅಲ್ಲ,ಸಾಧನೆಯ ಹಾದಿ ಹಿಡಿಯುವ ಹಂಬಲ ಇರುವ ಎಲ್ಲರಿಗೂ ಸ್ಫೂರ್ತಿಯನ್ನು ನೀಡುವಂಥದ್ದು. ‘800’ ಸಿನಿಮಾದಲ್ಲಿ, ತಮಿಳಿನ ಯುವನಟ ಮಧುರ್ ಮಿತ್ತಲ್, ಮುತ್ತಯ್ಯ ಮುರಳೀಧರನ್ ಅವರ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಮಹಿಮಾ ನಂಬಿಯತಾರ್, ನಾಸರ್, ಆರುಲ್‌ದಾಸ್‌ ಮುಖ್ಯಭೂಮಿಕೆಯಲ್ಲಿದ್ದಾರೆ.

    ಮುತ್ತಯ್ಯ ಮುರಳೀಧರನ್ ಪಾತ್ರಕ್ಕೆ ಜೀವತುಂಬುವ ಅವಕಾಶ ಸಿಕ್ಕಿರುವುದು ಮಧುರ್ ಮಿತ್ತಲ್ ಅವರಿಗೆ ಸಾಕಷ್ಟು ಖುಷಿಕೊಟ್ಟಿದೆ. ತಮ್ಮ ಸಿನಿಮಾ JioCinemaದಲ್ಲಿ ಪ್ರೀಮಿಯರ್ ಆಗುತ್ತಿರುವ ಕುರಿತೂ ಅವರು ಅಷ್ಟೇ ಎಕ್ಸೈಟ್ ಆಗಿದ್ದಾರೆ. ‘ನಾನು ಚಿಕ್ಕಂದಿನಿಂದಲೂ ಕ್ರಿಕೆಟ್‌ ಅಭಿಮಾನಿಯಾಗಿದ್ದವನು. ಮುರಳೀಧರನ್ ಅವರ ಅಮೋಘ ಆಟವನ್ನು ನೋಡುತ್ತಲೇ ಬೆಳೆದವನು. ಈಗ ಅವರದ್ದೇ ಪಾತ್ರಕ್ಕೆ ತೆರೆಯ ಮೇಲೆ ಜೀವ ತುಂಬುವ ಅವಕಾಶ ಸಿಕ್ಕಿರುವುದು ನಿಜಕ್ಕೂ ನನಗೆ ಸಂದ ಬಹುದೊಡ್ಡ ಸಮ್ಮಾನ. ಈ ಪಾತ್ರಕ್ಕೆ ಗಟ್ಟಿತನವಿದೆ. ಇದೊಂದು ಸತತ ಪರಿಶ್ರಮ ಮತ್ತು ಬದ್ಧತೆಯ ಬದುಕನ್ನು ಬದುಕಿದ ವ್ಯಕ್ತಿಯ ಪಾತ್ರ. ಒಬ್ಬ ಕ್ರಿಕೆಟರ್ ಆಗಿ ಮುರಳೀಧರನ್ ಕೋಟ್ಯಂತರ ಜನರನ್ನು ಪ್ರಭಾವಿಸಿದ್ದಾರೆ. ಇಂಥ ಸಾಧಕನ ಬದುಕನ್ನು ಜನರಿಗೆ  ಪರಿಚಯಿಸುವುದೂ ಅಷ್ಟೇ ಮುಖ್ಯ. ಈ ಕೆಲಸವನ್ನು ‘800’ ತುಂಬ ಪರಿಣಾಮಕಾರಿಯಾಗಿ ಮಾಡಿದೆ. ಈಗ ಈ ಸಿನಿಮಾ ಜಿಯೋ ಸಿನಿಮಾದಲ್ಲಿ ಬಿಡುಗಡೆಯಾಗುತ್ತಿರುವುದು ನಿಜಕ್ಕೂ ನನಗೆ ತುಂಬ ಖುಷಿಯ ಸಂಗತಿ’ ಎನ್ನುತ್ತಾರೆ ನಟ ಮಧುರ್ ಮಿತ್ತಲ್.

     

    JioCinema ಒಟಿಟಿ (OTT) ವೇದಿಕೆಯ ಮೂಲಕ ತಮ್ಮ ಜೀವನವನ್ನಾಧರಿಸಿದ ಸಿನಿಮಾ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿರುವುದು ಮುತ್ತಯ್ಯ ಮುರಳೀಧರನ್ ಅವರನ್ನೂ ರೋಮಾಂಚಿತಗೊಳಿಸಿದೆ. ‘ನನ್ನ ಬದುಕಿನ ಕಥೆ, ಸ್ಫೂರ್ತಿದಾಯಕ ಸಿನಿಮಾ ಆಗುತ್ತಿರುವುದು ನಿಜಕ್ಕೂ ನನ್ನಲ್ಲಿ ವಿನೀತಭಾವ ಹುಟ್ಟಿಸಿದೆ. ಇದಕ್ಕೆ ಕಾರಣರಾದವರಿಗೆ ನಾನು ಕೃತಜ್ಞನಾಗಿದ್ದೇನೆ. ಈ ಸಿನಿಮಾಗೆ ತುಂಬ ಒಳ್ಳೆಯ ಪ್ರತಿಸ್ಪಂದನ ಸಿಗುತ್ತದೆ ಎಂಬ ನಂಬಿಕೆ ನನಗಿದೆ. ತಮ್ಮ ಕನಸನ್ನು ನನಸಾಗಿಸಿಕೊಳ್ಳುವ ದಾರಿಯಲ್ಲಿರುವ ಅಸಂಖ್ಯ ಯವ ಪ್ರತಿಭಾವಂತರಿಗೆ ಈ ಸಿನಿಮಾ ಸ್ಫೂರ್ತಿ ನೀಡಲಿ ಎಂದು ನಾನು ಹಾರೈಸುತ್ತೇನೆ. ನನ್ನ ಪಾಲಿಗೆ ಕ್ರಿಕೆಟ್‌ ಎನ್ನುವುದು ಬದುಕಿನ ಕ್ರಮವೇ ಆಗಿತ್ತು. ದೇಶಕ್ಕಾಗಿ ಆಡುವ ಅವಕಾಶ ಸಿಕ್ಕಿದ್ದು ನನಗೆ ಸಂದ ದೊಡ್ಡ ಗೌರವ’’ ಎಂದು ಮುರಳೀಧರನ್‌ ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ. ಕ್ರಿಕೆಟ್ ಲೋಕದಲ್ಲಿ ದಂತಕಥೆಯಾದ ಮುತ್ತಯ್ಯ ಮುರಳೀಧರನ್ ಬದುಕಿನ ಕಥೆ, ‘800’ ಸಿನಿಮಾವನ್ನು ಡಿಸೆಂಬರ್ 2ರಿಂದ ಎಕ್ಸ್‌ಕ್ಲ್ಯೂಸಿವ್ ಆಗಿ ವೀಕ್ಷಿಸಬಹುದಾಗಿದೆ.

  • ಹತ್ತು ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರ್ ಅನಾವರಣ

    ಹತ್ತು ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರ್ ಅನಾವರಣ

    ನ್ನಡ ಕಿರುತೆರೆ ಲೋಕದಲ್ಲಿ ಜೀ ಕನ್ನಡ ಈಗಾಗ್ಲೇ ಹಲವು ವಿಭಿನ್ನ ಪ್ರಯತ್ನಗಳನ್ನಾ ಮಾಡುತ್ತಾ ಬಂದಿದೆ. ಕನ್ನಡದ ಹೆಸರಾಂತ ಮನರಂಜನಾ ಚಾನೆಲ್ ಎಂಬ ಎಂಬ ಖ್ಯಾತಿಯನ್ನು ತನ್ನದಾಗಿಸಿಕೊಂಡಿದ್ದು, ಜೊತೆಗೆ ಜೀ5 ಒಟಿಟಿ ಮೂಲಕ ಒಳ್ಳೆ ಕಂಟೆಂಟ್ ಸಿನಿಮಾಗಳನ್ನು ಪ್ರಪಂಚದೆದುರು ತೆರೆದಿಡ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಭಿನ್ನ-ವಿಶೇಷ ಯೋಜನೆಗಳನ್ನು ಈ ಒಟಿಟಿ ಹಾಕಿಕೊಂಡಿದೆ. ಸದ್ಯ ಜೀ5 ಒಟಿಟಿಯಲ್ಲಿ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಧಮಾಕ ಎಬ್ಬಿಸ್ತಿದೆ.

    ಸಾಹಸ ಥ್ರಿಲ್ಲರ್‌ ಸಿನಿಮಾ ಘೋಸ್ಟ್‌ (Ghost) ಇದೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಶಿವಣ್ಣನ (Shivaraj Kumar) ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಿಲ್ಲದೆ ಇರುವವರು ಜೀ5 ಒಟಿಟಿಯಲ್ಲಿ ಕಣ್ತುಂಬಿಕೊಳ್ಳಬಹುದು. ಈಗಾಗಲೇ ನೋಡಿರುವವರು ಇನ್ನೊಮ್ಮೆ ಒಟಿಟಿಯಲ್ಲೂ ನೋಡಬಹುದು.

    ಸಿನಿಮಾ ಜೀ5ನಲ್ಲಿ ರಿಲೀಸ್ ಆಗಿರುವುದಕ್ಕೆ ಅದ್ದೂರಿಯಾಗಿ ಪ್ರಚಾರ ಮಾಡಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ ಹತ್ತು ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರ್ಅನ್ನು ಜೀ5 ಬಿಡುಗಡೆ ಮಾಡಿದೆ. ಜಯನಗರದ ಎಂಇಎಸ್ ಗ್ರೌಂಡ್ ನಲ್ಲಿ ಘೋಸ್ಟ್ ಸಿನಿಮಾದ  10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗೆ ಬ್ಯಾನರ್, ಪೋಸ್ಟರ್ ಹಾಕೋದು ಸಹಜ. ಆದರೆ, ಈ ಬಾರಿ ಒಟಿಟಿ ರಿಲೀಸ್‌ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಿದೆ ಜೀ ಕನ್ನಡ.

    ಘೋಸ್ಟ್ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ಮಾಸ್‌ ಅವತಾರದಲ್ಲಿ ಮಿಂಚಿದ್ದಾರೆ. ನಿರ್ದೇಶಕ ಶ್ರೀನಿ ಅಭಿಮಾನಿಗಳಿಗೆ ಶಿವರಾಜ್‌ಕುಮಾರ್‌ ಅವರ ಹೊಸ ಲುಕ್‌ ದರ್ಶನ ಮಾಡಿದ್ದಾರೆ.  ಸಂದೇಶನ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ಘೋಸ್ಟ್’ ಸಿನಿಮಾ ನಿರ್ಮಾಣಗೊಂಡಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ರಿಲೀಸ್ ಆಗಿದೆ. ಚಿತ್ರದ ಹಾಡುಗಳಿಗೆ ಅರ್ಜುನ್‌ ಜನ್ಯಾ ಸಂಗೀತವಿದೆ. ಶಿವಣ್ಣನ ಜೊತೆ ಮಲಯಾಳಂ ನಟ ಜಯರಾಮ್‌, ಹಿಂದಿ ನಟ ಅನುಪಮ್‌ ಖೇರ್‌, ಅರ್ಚನಾ ಜೋಯಿಸ್‌, ಸತ್ಯಪ್ರಕಾಶ್‌, ನಿರ್ದೇಶಕ ಎಂಜಿ ಶ್ರೀನಿವಾಸ್‌ (Srini) ಹಾಗೂ ಇನ್ನಿತರರು ನಟಿಸಿದ್ದಾರೆ.

  • ಓಟಿಟಿಗೆ ದುಬಾರಿ ಮೊತ್ತಕ್ಕೆ ಸೇಲ್ ಆಯಿತು ‘ಜವಾನ್’ ಸಿನಿಮಾ

    ಓಟಿಟಿಗೆ ದುಬಾರಿ ಮೊತ್ತಕ್ಕೆ ಸೇಲ್ ಆಯಿತು ‘ಜವಾನ್’ ಸಿನಿಮಾ

    ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಸಿನಿಮಾ ರಿಲೀಸ್ ಆದ ಆರೇ ಆರು ದಿನಕ್ಕೆ ಆರು ನೂರು ಕೋಟಿ ರೂಪಾಯಿ ಗಳಿಸಿ ದಾಖಲೆ ನಿರ್ಮಾಣ ಮಾಡಿದೆ. ಇದೀಗ ಓಟಿಟಿಗೂ (OTT) ಈ ಸಿನಿಮಾ ಸೇಲ್ ಆಗಿದ್ದು, ನೆಟ್ ಫ್ಲಿಕ್ಸ್ ಸಂಸ್ಥೆಯು ಬರೋಬ್ಬರಿ 250 ಕೋಟಿ ರೂಪಾಯಿ ಕೊಟ್ಟು ಸಿನಿಮಾ ಖರೀದಿ ಮಾಡಿದೆ.

    ಜವಾನ್ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಸಿನಿಮಾ ರಿಲೀಸ್ ಆಗಿ ಇಂದಿಗೆ ಆರು ದಿನಗಳು ಕಳೆದಿವೆ. ಅಷ್ಟೂ ದಿನಗಳು ಕೂಡ ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ಹಣ ಹರಿದು ಬರುತ್ತಿದೆ. ಬಾಕ್ಸ್ ಆಫೀಸಿನ ಲೆಕ್ಕಾಚಾರ ಪಂಡಿತರ ಪ್ರಕಾರ ವಿಶ್ವದಾದ್ಯಂತ ಜವಾನ್ ಸಿನಿಮಾ 600 ಕೋಟಿ ರೂಪಾಯಿಗೂ ಹೆಚ್ಚು ಹರಿದು ಬಂದಿದೆ. ಭಾರತದಾದ್ಯಂತ 300 ಕೋಟಿ ರೂಪಾಯಿಗೂ ಹೆಚ್ಚು ಹಣ ಸಂದಾಯವಾಗಿದೆ.

    ಅತೀ ವೇಗದಲ್ಲಿ ನೂರು, ಇನ್ನೂರು ಮತ್ತು ಮುನ್ನೂರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಸಿನಿಮಾ ಎನ್ನುವ ಹೆಗ್ಗಳಿಕೆಗೂ ಈ ಸಿನಿಮಾ ಪಾತ್ರವಾಗಿದೆ. ವೀಕೆಂಡ್ ಮಾತ್ರವಲ್ಲ, ಸಾಮಾನ್ಯ ದಿನಗಳಲ್ಲೂ ಬಾಕ್ಸ್ ಆಫೀಸ್ (Box Office) ತುಂಬುತ್ತಿರುವುದು ಸಹಜವಾಗಿಯೇ ಬಾಲಿವುಡ್ ಸಿನಿಮಾ ರಂಗಕ್ಕೆ ಟಾನಿಕ್ ನೀಡಿದೆ. ಈ ಗೆಲುವನ್ನು ದಕ್ಷಿಣದ ಗೆಲುವು ಎಂದೇ ಬಿಂಬಿಸಲಾಗುತ್ತಿದೆ. ಕಾರಣ, ಈ ಚಿತ್ರದ ನಿರ್ದೇಶಕ ಅಟ್ಲಿ, ತಮಿಳು ಚಿತ್ರರಂಗದ ನಿರ್ದೇಶಕ ಎನ್ನುವುದಾಗಿದೆ. ಇದನ್ನೂ ಓದಿ:ಡಿಸೆಂಬರ್ ನಲ್ಲಿ ‘ಯಶ್ 19’ ಸಿನಿಮಾ ಶೂಟಿಂಗ್: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್

    ಜವಾನ್ 2

    ಶಾರುಖ್ ಖಾನ್ (Sharukh Khan) ನಟನೆಯ ‘ಜವಾನ್’ (Jawan) ಸಿನಿಮಾ ಚಿತ್ರಮಂದಿರಲ್ಲಿ ಸಕ್ಸಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಜವಾನ್ 2 (Jawan 2) ಬರುವ ಬಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಶಾರುಖ್- ವಿಜಯ್ ಸೇತುಪತಿ (Vijay Sethupathi) ಜುಗಲ್‌ಬಂದಿ ಜವಾನ್ ಸಿನಿಮಾದಲ್ಲಿ ವರ್ಕೌಟ್ ಆಗಿದೆ. ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಇರುವ ಶಾರುಖ್‌ಗೆ ‘ಜವಾನ್’ ಚಿತ್ರದ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಅವರ ಉತ್ತರ ಜವಾನ್ 2 ಬರುವ ಬಗ್ಗೆ ಸೂಚನೆ ಕೊಟ್ಟಿದೆ.

     

    ಅಭಿಮಾನಿಯೊಬ್ಬರು, ಸರ್, ನೀವೇಕೆ ಕಾಳಿ ವಿಜಯ್ ಸೇತುಪತಿ ಜೊತೆಗೆ ಡೀಲ್ ಮಾಡಿಕೊಳ್ಳಲಿಲ್ಲ? ನಾನು ವಿಜಯ್ ಸೇತುಪತಿ ಸರ್‌ಗೆ ದೊಡ್ಡ ಅಭಿಮಾನಿ ಎಂದು ಟ್ವೀಟ್ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಶಾರುಖ್ ಖಾನ್, ನಾನು ಕೂಡ ವಿಜಯ್ ಸರ್‌ಗೆ ದೊಡ್ಡ ಅಭಿಮಾನಿ. ನಾನು ಈಗಾಗಲೇ ಕಾಳಿಯ ಕಪ್ಪು ಹಣವನ್ನು ತೆಗೆದುಕೊಂಡು ಬಂದಿದ್ದೇನೆ. ಈಗ ಬೇರೆಯವರ ಕಪ್ಪು ಹಣವನ್ನು ಹೊರ ತೆಗೆಯುವುದಕ್ಕೆ ಕಾಯುತ್ತಿದ್ದೇನೆ. ವೀಸಾಗಾಗಿ ಕಾಯುತ್ತಿದ್ದೇನೆ ಎಂದು ಟ್ಟೀಟ್ ಮಾಡಿದ್ದಾರೆ. ಈ ಟ್ವೀಟ್ ಜವಾನ್ 2 ಬರುವ ಬಗ್ಗೆ ಸೂಚನೆ ನೀಡುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವದಲ್ಲೇ ಮೊದಲ ಬಾರಿಗೆ ಮೊಬೈಲ್ ಪ್ರೀಪೇಯ್ಡ್ ಪ್ಲ್ಯಾನ್‌ ಜೊತೆಗೆ ನೆಟ್‌ಫ್ಲಿಕ್ಸ್‌ ಸಬ್‌ಸ್ಕ್ರಿಪ್ಷನ್ ಪರಿಚಯಿಸುತ್ತಿದೆ Reliance Jio

    ವಿಶ್ವದಲ್ಲೇ ಮೊದಲ ಬಾರಿಗೆ ಮೊಬೈಲ್ ಪ್ರೀಪೇಯ್ಡ್ ಪ್ಲ್ಯಾನ್‌ ಜೊತೆಗೆ ನೆಟ್‌ಫ್ಲಿಕ್ಸ್‌ ಸಬ್‌ಸ್ಕ್ರಿಪ್ಷನ್ ಪರಿಚಯಿಸುತ್ತಿದೆ Reliance Jio

    ನವದೆಹಲಿ: ಇದೀಗ ನೆಟ್‌ಫ್ಲಿಕ್ಸ್‌ ಸಬ್‌ಸ್ಕ್ರಿಪ್ಷನ್ (Netflix Subscriptions) ಜೊತೆಗೆ ಬರುವಂತಹ ಎರಡು ಹೊಸ ʻಜಿಯೋ-ನೆಟ್‌ಫ್ಲಿಕ್ಸ್ ಪ್ರಿಪೇಯ್ಡ್ʼ ಯೋಜನೆಗಳನ್ನು ರಿಲಯನ್ಸ್ ಜಿಯೋ ಬಿಡುಗಡೆ ಮಾಡಿದೆ. 1,099 ರೂ. ಬೆಲೆಯ ಯೋಜನೆಯೊಂದಿಗೆ ಗ್ರಾಹಕರು ದಿನಕ್ಕೆ 2 GB ಡೇಟಾ ಪಡೆಯುತ್ತಾರೆ. ಇದೇ ರೀತಿ 1,499 ರೂ.ಳ ಯೋಜನೆಯೊಂದಿಗೆ, ಕಂಪನಿಯು ದಿನಕ್ಕೆ 3 ಜಿಬಿ ಡೇಟಾ ನೀಡುತ್ತಿದೆ. ಎರಡೂ ಯೋಜನೆಗಳ ಮಾನ್ಯತೆ 84 ದಿನಗಳು ಆಗಿರುತ್ತದೆ. ಆಯ್ದ ಜಿಯೋ ಪೋಸ್ಟ್‌ಪೇಯ್ಡ್ (Jio Postpaid) ಮತ್ತು ಜಿಯೋ ಫೈಬರ್ ಯೋಜನೆಗಳಲ್ಲಿ ನೆಟ್‌ಫ್ಲಿಕ್ಸ್ ಸಬ್‌ಸ್ಕ್ರಿಪ್ಷನ್ ಈಗಾಗಲೇ ಲಭ್ಯವಿದ್ದರೂ ಪ್ರಿಪೇಯ್ಡ್ ಯೋಜನೆಗಳಲ್ಲಿ ನೆಟ್‌ಫ್ಲಿಕ್ಸ್ ಸಬ್ ಸ್ಕ್ರಿಪ್ಷನ್ ಲಭ್ಯ ಇರುವುದು ಇದೇ ಮೊದಲಾಗಿದೆ.

    ವಿಶ್ವದಲ್ಲೇ ಮೊದಲ ಬಾರಿಗೆ ಎಂಬಂತೆ ನೆಟ್‌ಫ್ಲಿಕ್ಸ್ ಅನ್ನು ಪ್ರೀಪೇಯ್ಡ್ ಪ್ಲ್ಯಾನ್‌ ಜೊತೆಗೆ ನೀಡುತ್ತಿರುವ ಮೊದಲ ಟೆಲಿಕಾಂ ಆಪರೇಟರ್ ಜಿಯೋ ಆಗಿದೆ. ಇದರೊಂದಿಗೆ ಜಿಯೋದ 400 ಮಿಲಿಯನ್, ಅಂದರೆ 40 ಕೋಟಿ ಪ್ರಿಪೇಯ್ಡ್ ಗ್ರಾಹಕರು ನೆಟ್‌ಫ್ಲಿಕ್ಸ್ ಸಬ್‌ಸ್ಕ್ರಿಪ್ಷನ್ ಜೊತೆಗೆ ಯೋಜನೆಗಳನ್ನ ಆಯ್ಕೆ ಮಾಡುವ ಅವಕಾಶ ಪಡೆಯುತ್ತಾರೆ. ನೆಟ್‌ಫ್ಲಿಕ್ಸ್‌ನೊಂದಿಗೆ ಗ್ರಾಹಕರು ಹಾಲಿವುಡ್‌ನಿಂದ ಬಾಲಿವುಡ್ ತನಕ ಜನಪ್ರಿಯ ಟಿವಿ ಶೋಗಳು, ಭಾರತೀಯ ಪ್ರಾದೇಶಿಕ ಚಲನಚಿತ್ರಗಳು ಮತ್ತು ಇನ್ನೂ ಹೆಚ್ಚಿನದ್ದನ್ನು ತಮ್ಮ ಮೊಬೈಲ್ ಸಾಧನದಲ್ಲಿ ಯಾವುದೇ ಸಮಯದಲ್ಲಿ, ಎಲ್ಲಿಯಾದರೂ ವೀಕ್ಷಿಸಲು ಸಾಧ್ಯವಾಗುತ್ತದೆ. ಜಿಯೋದ ಇತರ ಯೋಜನೆಗಳಂತೆ ಗ್ರಾಹಕರು ಆನ್‌ಲೈನ್ ಅಥವಾ ಆಫ್‌ಲೈನ್ ರೀಚಾರ್ಜ್ ಸೌಲಭ್ಯವನ್ನು ಎರಡೂ ಯೋಜನೆಗಳಲ್ಲಿ ಪಡೆಯುತ್ತಾರೆ.

    ಈ ಯೋಜನೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಸಿಇಒ ಕಿರಣ್ ಥಾಮಸ್, ನಮ್ಮ ಗ್ರಾಹಕರಿಗೆ ವಿಶ್ವ ದರ್ಜೆಯ ಸೇವೆಗಳನ್ನು ತರಲು ನಾವು ಬದ್ಧರಾಗಿದ್ದೇವೆ. ನಮ್ಮ ಪ್ರಿಪೇಯ್ಡ್ ಯೋಜನೆಗಳೊಂದಿಗೆ ನೆಟ್‌ಫ್ಲಿಕ್ಸ್‌ನ ಪ್ರಾರಂಭವು ನಮ್ಮ ಸಂಕಲ್ಪ ತೋರಿಸುವಂಥ ಮತ್ತೊಂದು ಹಂತವಾಗಿದೆ. ನೆಟ್‌ಫ್ಲಿಕ್ಸ್‌ನಂತಹ ಜಾಗತಿಕ ಪಾಲುದಾರರೊಂದಿಗೆ ನಮ್ಮ ಸಹಭಾಗಿತ್ವವು ಬಲವಾಗಿ ಬೆಳೆದಿದೆ ಮತ್ತು ಪ್ರಪಂಚದ ಉಳಿದ ಭಾಗಗಳಲ್ಲಿ ಇದನ್ನ ಅನುಸರಿಸಲು ನಾವು ಬಳಕೆಯ ಮೊದಲ ಪ್ರಕರಣವನ್ನ ರೂಪಿಸುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: Aditya-L1: ಚಂದ್ರಯಾನ ಆಯ್ತು – ಈಗ ಸೂರ್ಯ ಸವಾರಿಯತ್ತ ಇಸ್ರೋ ಚಿತ್ತ

    ನೆಟ್‌ಫ್ಲಿಕ್ಸ್‌ನ ಏಷ್ಯಾ ಪೆಸಿಫಿಕ್ (ಎಪಿಎಸಿ) ಪಾಲುದಾರಿಕೆಗಳ ಉಪಾಧ್ಯಕ್ಷ ಟೋನಿ ಜೆಮ್‌ಕೋವ್ ಸ್ಕಿ, ʻಜಿಯೋ ಜೊತೆಗಿನ ನಮ್ಮ ಸಂಬಂಧವನ್ನ ವಿಸ್ತರಿಸಲು ನಾವು ರೋಮಾಂಚಿತರಾಗಿದ್ದೇವೆ. ವರ್ಷಗಳಲ್ಲಿ, ನಮ್ಮ ಹಲವಾರು ಯಶಸ್ವಿ ಸ್ಥಳೀಯ ಶೋಗಳು, ಸಾಕ್ಷ್ಯಚಿತ್ರಗಳು ಮತ್ತು ಚಲನಚಿತ್ರಗಳನ್ನ ಭಾರತದಾದ್ಯಂತ ಪ್ರೇಕ್ಷಕರು ಇಷ್ಟಪಡುತ್ತಿದ್ದಾರೆ. ಜಿಯೋ ಜೊತೆಗಿನ ನಮ್ಮ ಹೊಸ ಪ್ರಿಪೇಯ್ಡ್ ಜೊತೆಗೆ ನೀಡುವಂತಹ ಈ ಯೋಜನೆ ಪಾಲುದಾರಿಕೆಯು ಗ್ರಾಹಕರಿಗೆ ಭಾರತೀಯ ಕಂಟೆಂಟ್ ಮತ್ತು ಪ್ರಪಂಚದಾದ್ಯಂತದ ಕಂಟೆಂಟ್‌ಗಳಿಗೆ ಸಂಪರ್ಕವನ್ನು ನೀಡುತ್ತದೆ ಎಂದರು. ಇದನ್ನೂ ಓದಿ: Chandrayaan-3; ರಾಜ್ಯದ ಎಲ್ಲಾ ಶಾಲೆಗಳಲ್ಲೂ ಲ್ಯಾಂಡಿಂಗ್‌ ನೇರ ಪ್ರಸಾರ: ಯೋಗಿ ಆದಿತ್ಯನಾಥ್‌

    ಗ್ರಾಹಕರು ಬಯಸಿದರೆ ನೆಟ್‌ಫ್ಲಿಕ್ಸ್ ಅಪ್ಲಿಕೇಷನ್ ಅನ್ನು ಬಹು ಸಾಧನಗಳಲ್ಲಿ ಡೌನ್‌ಲೋಡ್ ಮಾಡಬಹುದು ಮತ್ತು ಅದೇ ಲಾಗಿನ್ ಕ್ರೆಡೆನ್ಷಿಯಲ್ಸ್‌ಗಳೊಂದಿಗೆ ಬಳಸಬಹುದು. ಆದ್ರೆ ಇದನನ್‌ ಒಂದು ಸಮಯದಲ್ಲಿ, ಒಂದು ಸಾಧನದಲ್ಲಿ ಮಾತ್ರ ವೀಕ್ಷಿಸಬಹುದು. 1,499 ರೂ.ನ ಯೋಜನೆಯಲ್ಲಿ ಟಿವಿ ಅಥವಾ ಲ್ಯಾಪ್‌ಟಾಪ್‌ನಂತಹ ಯಾವುದೇ ದೊಡ್ಡ ಪರದೆಯ ಮೇಲೆ ನೆಟ್‌ಫ್ಲಿಕ್ಸ್ ಅನ್ನು ಸ್ಟ್ರೀಮ್ ಮಾಡಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ನರೇಶ್-ರಮ್ಯಾ ಡಿವೋರ್ಸ್: ನ್ಯಾಯಾಲಯ ಹೇಳಿದ್ದೇನು?

    ನಟ ನರೇಶ್-ರಮ್ಯಾ ಡಿವೋರ್ಸ್: ನ್ಯಾಯಾಲಯ ಹೇಳಿದ್ದೇನು?

    ತೆಲುಗಿನ ನಟ ನರೇಶ್ (Naresh) ಮತ್ತು ಬೆಂಗಳೂರಿನ ರಮ್ಯಾ ರಘುಪತಿ (Ramya Raghupathi) ಡಿವೋರ್ಸ್ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು (Court) ‘ಕಳೆದ ಆರು ವರ್ಷಗಳಿಂದ ರಮ್ಯಾ ಮತ್ತು ನರೇಶ್ ಪರಸ್ಪರ ಪ್ರತ್ಯೇಕವಾಗಿಯೇ ವಾಸಿಸುತ್ತಿರುವ ಕಾರಣದಿಂದಾಗಿ ಮದುವೆ ಅನೂರ್ಜಿತಗೊಳಿಸಬಹುದು ಎಂದು ಅಭಿಪ್ರಾಯ ಪಟ್ಟಿದೆ. ಹೀಗಾಗಿ ಅತೀ ಶೀಘ್ರದಲ್ಲೇ ನರೇಶ್ ಮತ್ತು ರಮ್ಯಾ ಅಧಿಕೃತವಾಗಿ ದೂರವಾಗಲಿದ್ದಾರೆ.

    ಈ ಅರ್ಜಿಯ ಜೊತೆಗೆ ನರೇಶ್ ಮತ್ತು ಕುಟುಂಬದವರು ರಮ್ಯಾ ತಮ್ಮ ನಿವಾಸಕ್ಕೆ ಅಧಿಕೃತವಾಗಿ ಪ್ರವೇಶ ಮಾಡುವುದನ್ನು ನಿಷೇಧಿಸುವಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣಕ್ಕೂ ಆದೇಶ ಹೊರಡಿಸಿದ್ದು ನರೇಶ್ ಅವರ ನಿವಾಸವನ್ನು ಪ್ರವೇಶಿಸುವುದಕ್ಕೆ ರಮ್ಯಾ ಅವರಿಗೆ ಕೋರ್ಟ್ ನಿರ್ಬಂಧ ಹೇರಿದೆ.

    ಸಿನಿಮಾ ವಿಷ್ಯದಲ್ಲೂ ರಮ್ಯಾಗೆ ಶಾಕ್

    ತಮ್ಮ ಜೀವನದ ಕಥೆಯನ್ನೇ ಪತಿ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ (Pavitra Lokesh) ಸಿನಿಮಾ ಮಾಡಿದ್ದಾರೆ. ಅದು ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಅದನ್ನು ತಡೆಯಬೇಕು ಎಂದು ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್ ಮೆಟ್ಟಿಲು ಏರಿದ್ದರು. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಈ ಕುರಿತಂತೆ ವಿಚಾರಣೆ ನಡೆಸಿ, ಅಂತಿಮ ತೀರ್ಪು ನೀಡಿದೆ. ಅರ್ಜಿಯಲ್ಲಿ ಯಾವುದೇ ಸಕರಾರಣವಿಲ್ಲದ ಕಾರಣದಿಂದಾಗಿ ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

    ಈ ಹಿಂದೆ ಸಿನಿಮಾ ರಿಲೀಸ್ ವೇಳೆಯೂ ರಮ್ಯಾ ಇದೇ ರೀತಿಯಲ್ಲಿ ತಡೆಯಾಜ್ಞೆ ತರುವ ಪ್ರಯತ್ನ ಮಾಡಿದ್ದರು. ಸಿನಿಮಾದ ಕಥೆಯು ತಮ್ಮ ಜೀವನದ ಅನೇಕ ಘಟನೆಗಳನ್ನು ಹೋಲುತ್ತದೆ. ಹಾಗಾಗಿ ಚಿತ್ರವು ರಿಲೀಸ್ ಆಗಬಾರದು ಎಂದು ಕೋರ್ಟ್ ಮೆಟ್ಟಿಲು ಏರಿದ್ದರು. ಆಗಲೂ ಕೂಡ ರಮ್ಯಾಗೆ ಹಿನ್ನೆಡೆಯಾಗಿತ್ತು. ಸಿನಿಮಾದಲ್ಲಿ ಕಾಲ್ಪನಿಕ ಕಥೆಯಂದು ಹಾಕಲಾಗಿದೆ. ಸೆನ್ಸಾರ್ ಮಂಡಳಿ ಕೂಡ ಅದಕ್ಕೆ ಒಪ್ಪಿ ಪತ್ರ ಕೊಟ್ಟಿದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿತ್ತು.

    ಜೂನ್ 23 ರಿಂದ ಮತ್ತೆ ಮದುವೆ ಸಿನಿಮಾ ಪ್ರತಿಷ್ಠಿತ ಒಟಿಟಿ (OTT) ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮಿಂಗ್ ಆಗುತ್ತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಮೂಡಿಬಂದಿದ್ದ ಮತ್ತೆ ಮದುವೆಗೆ ಥಿಯೇಟರ್ ನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ಮಳ್ಳಿಪೆಳ್ಳಿ ಎಂಬ ಟೈಟಲ್ ನಡಿ ಮೇ 26ರಂದು ಬಿಡುಗಡೆಯಾಗಿತ್ತು.

    ಟಾಲಿವುಡ್ ನಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕ ಬೆನ್ನಲ್ಲೆ ಕನ್ನಡದಲ್ಲಿ ಮತ್ತೆ ಮದುವೆ ಎಂಬ ಶೀರ್ಷಿಕೆಯಡಿ ಜೂನ್ 9ರಂದು ತೆರೆಕಂಡಿತ್ತು. ಕನ್ನಡ ಸಿನಿಪ್ರಿಯರು ಹಾಗೂ ಸಿನಿತಾರೆಯರು ಮೆಚ್ಚಿದ್ದ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಿನಿಮಾ ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

    ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್‌’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ಮತ್ತೆ ಮದುವೆ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದರು. ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದು, ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು.

     

    ವನಿತಾ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಮತ್ತೆ ಮದುವೆಯ ಭಾಗವಾಗಿದ್ದರು. ಬೋಲ್ಡೆಸ್ಸ್ ಜೋಡಿಯ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಹಾನಿಯನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಅಮೇಜಾನ್ ನಲ್ಲಿ ನೋಡಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪವಿತ್ರಾ ಲೋಕೇಶ್-ನರೇಶ್ ಮತ್ತೆ ಮದುವೆ: ಪತ್ನಿ ರಮ್ಯಾಗೆ ಬಿಗ್ ಶಾಕ್ ನೀಡಿದ ಕೋರ್ಟ್

    ಪವಿತ್ರಾ ಲೋಕೇಶ್-ನರೇಶ್ ಮತ್ತೆ ಮದುವೆ: ಪತ್ನಿ ರಮ್ಯಾಗೆ ಬಿಗ್ ಶಾಕ್ ನೀಡಿದ ಕೋರ್ಟ್

    ಮ್ಮ ಜೀವನದ ಕಥೆಯನ್ನೇ ಪತಿ ನರೇಶ್ (Naresh) ಮತ್ತು ನಟಿ ಪವಿತ್ರಾ ಲೋಕೇಶ್ (Pavitra Lokesh) ಸಿನಿಮಾ ಮಾಡಿದ್ದಾರೆ. ಅದು ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಅದನ್ನು ತಡೆಯಬೇಕು ಎಂದು ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್ ಮೆಟ್ಟಿಲು ಏರಿದ್ದರು. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಈ ಕುರಿತಂತೆ ವಿಚಾರಣೆ ನಡೆಸಿ, ಅಂತಿಮ ತೀರ್ಪು ನೀಡಿದೆ. ಅರ್ಜಿಯಲ್ಲಿ ಯಾವುದೇ ಸಕರಾರಣವಿಲ್ಲದ ಕಾರಣದಿಂದಾಗಿ ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

    ಈ ಹಿಂದೆ ಸಿನಿಮಾ (Matte Maduve ) ರಿಲೀಸ್ ವೇಳೆಯೂ ರಮ್ಯಾ ಇದೇ ರೀತಿಯಲ್ಲಿ ತಡೆಯಾಜ್ಞೆ ತರುವ ಪ್ರಯತ್ನ ಮಾಡಿದ್ದರು. ಸಿನಿಮಾದ ಕಥೆಯು ತಮ್ಮ ಜೀವನದ ಅನೇಕ ಘಟನೆಗಳನ್ನು ಹೋಲುತ್ತದೆ. ಹಾಗಾಗಿ ಚಿತ್ರವು ರಿಲೀಸ್ ಆಗಬಾರದು ಎಂದು ಕೋರ್ಟ್ ಮೆಟ್ಟಿಲು ಏರಿದ್ದರು. ಆಗಲೂ ಕೂಡ ರಮ್ಯಾಗೆ (Ramya Raghupathi) ಹಿನ್ನೆಡೆಯಾಗಿತ್ತು. ಸಿನಿಮಾದಲ್ಲಿ ಕಾಲ್ಪನಿಕ ಕಥೆಯಂದು ಹಾಕಲಾಗಿದೆ. ಸೆನ್ಸಾರ್ ಮಂಡಳಿ ಕೂಡ ಅದಕ್ಕೆ ಒಪ್ಪಿ ಪತ್ರ ಕೊಟ್ಟಿದೆ ಎಂದು ಕೋರ್ಟ್ (Court) ಅಭಿಪ್ರಾಯ ಪಟ್ಟಿತ್ತು.

    ಜೂನ್ 23 ರಿಂದ ಮತ್ತೆ ಮದುವೆ ಸಿನಿಮಾ ಪ್ರತಿಷ್ಠಿತ ಒಟಿಟಿ (OTT) ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮಿಂಗ್ ಆಗುತ್ತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಮೂಡಿಬಂದಿದ್ದ ಮತ್ತೆ ಮದುವೆಗೆ ಥಿಯೇಟರ್ ನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ಮಳ್ಳಿಪೆಳ್ಳಿ ಎಂಬ ಟೈಟಲ್ ನಡಿ ಮೇ 26ರಂದು ಬಿಡುಗಡೆಯಾಗಿತ್ತು. ಇದನ್ನೂ ಓದಿ:ರಾಜೀವ್ ಅಭಿನಯದ ‘ಉಸಿರೇ ಉಸಿರೇ ಚಿತ್ರದ ಫಸ್ಟ್ ಸಾಂಗ್ ರಿಲೀಸ್

    ಟಾಲಿವುಡ್ ನಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕ ಬೆನ್ನಲ್ಲೆ ಕನ್ನಡದಲ್ಲಿ ಮತ್ತೆ ಮದುವೆ ಎಂಬ ಶೀರ್ಷಿಕೆಯಡಿ ಜೂನ್ 9ರಂದು ತೆರೆಕಂಡಿತ್ತು. ಕನ್ನಡ ಸಿನಿಪ್ರಿಯರು ಹಾಗೂ ಸಿನಿತಾರೆಯರು ಮೆಚ್ಚಿದ್ದ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಿನಿಮಾ ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

    ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್‌’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ಮತ್ತೆ ಮದುವೆ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದರು. ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದು, ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು.

     

    ವನಿತಾ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಮತ್ತೆ ಮದುವೆಯ ಭಾಗವಾಗಿದ್ದರು. ಬೋಲ್ಡೆಸ್ಸ್ ಜೋಡಿಯ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಹಾನಿಯನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಅಮೇಜಾನ್ ನಲ್ಲಿ ನೋಡಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]