Tag: ಓಮಿಕ್ರೋನ್

  • ಒಂದೇ ದಿನ ಕೋಟಿ ಲಸಿಕೆ ನೀಡಿಕೆ-5ನೇ ಸಲ ದಾಖಲೆ

    ಒಂದೇ ದಿನ ಕೋಟಿ ಲಸಿಕೆ ನೀಡಿಕೆ-5ನೇ ಸಲ ದಾಖಲೆ

    ನವದೆಹಲಿ: ಲಸಿಕೆಯೆ ಅಭಿಯಾನ ಪ್ರಾರಂಭವಾದ ಬಳಿಕ 5ನೇ ಸಲ ಈ ದಾಖಲೆಯಾಗಿದೆ. ಓಮಿಕ್ರೋನ್ ವೈರಸ್ ಪತ್ತೆಯಾಗಿರುವ ಬೆನ್ನಲ್ಲೇ ದೇಶಾದ್ಯಂತ ಮತ್ತೆ ಜನರು ಲಸಿಕೆ ತೆಗೆದುಕೊಳ್ಳುತ್ತಿದ್ದಾರೆ.

    ದೇಶದಲ್ಲಿ ಓಮಿಕ್ರೋನ್ ವೈರಸ್‌ ಬೆನ್ನಲ್ಲೇ ಕುಂಠಿತಗೊಂಡಿದ್ದ ಲಸಿಕಾ ಅಭಿಯಾನಕ್ಕೆ ಮತ್ತೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶನಿವಾರ ಒಂದೇ ದಿನ 1 ಕೋಟಿ ಲಸಿಕೆ ಡೋಸ್‍ಗಳನ್ನು ನೀಡಲಾಗಿದೆ.

    2 ತಿಂಗಳ ಬಳಿಕ ಮೊದಲ ಬಾರಿಗೆ 1 ಕೋಟಿಗಿಂತ ಹೆಚ್ಚು ಡೋಸ್ ನೀಡಿದಂತಾಗಿದೆ. ಜೊತೆಗೆ ಇದುವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 127.5 ಕೋಟಿ ಡೋಸ್ ದಾಟಿದೆ. ಈ ಸಂಬಂಧ ನಿನ್ನೆ ರಾತ್ರಿ 8.15ರ ವೇಳೆಗೆ 1 ಕೋಟಿಗಿಂತ ಹೆಚ್ಚು ಡೋಸ್ ನೀಡಲಾಗಿದೆ. ಇದನ್ನೂ ಓದಿ: ಲಸಿಕೆ ಪ್ರಮಾಣ ಪತ್ರ ಎಡವಟ್ಟು – ವ್ಯಾಕ್ಸಿನ್ ಪಡೆಯಲು ಬಂದಾತನಿಗೆ ಶಾಕ್

    ಲಸಿಕೆ ಅಭಿಯಾನ ಆರಂಭವಾಗಿದ್ದು, ಈವರೆಗೆ 5ನೇ ಸಲ ಒಂದು ದಿನದಲ್ಲಿ 1 ಕೋಟಿಗಿಂತ ಹೆಚ್ಚು ಲಸಿಕೆ  ನೀಡಲಾಗಿದೆ. ತನ್ನಮೂಲಕ ವಿಶ್ವದಲ್ಲೇ ಅತಿದೊಡ್ಡ ಲಸಿಕೆ ಅಭಿಯಾನವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹೊಸ ಎತ್ತರಕ್ಕೆ ತಲುಪುತ್ತಿದೆ ಎಂದು ಹರ್ಷಿಸಿದ್ದಾರೆ. ಈ ಹಿಂದೆ ಆ.27ರಂದು ದೇಶಾದ್ಯಂತ 1 ಕೋಟಿಗಿಂತ ಹೆಚ್ಚು ಡೋಸ್ ನೀಡಲಾಗಿತ್ತು. ಪ್ರಧಾನಿ ಮೋದಿ ಅವರ ಜನ್ಮದಿನದಂದು 2 ಕೋಟಿ ಜನಕ್ಕೆ ಲಸಿಕೆ ನೀಡಲಾಗಿತ್ತು. ಇದನ್ನೂ ಓದಿ: ಕಾಫಿನಾಡಲ್ಲಿ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಅಪ್ಪು ಕಪ್ ಕ್ರಿಕೆಟ್ ಪಂದ್ಯಾವಳಿ

  • ಓಮಿಕ್ರೋನ್ ಭೀತಿ – ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಪ್ರಕಟ

    ಓಮಿಕ್ರೋನ್ ಭೀತಿ – ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಪ್ರಕಟ

    ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರ ವೈರಸ್ ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.

    ಪ್ರಮುಖವಾಗಿ ಧಾರವಾಡ, ಬೆಂಗಳೂರು, ಮೈಸೂರು ಕ್ಲಸ್ಟರ್ ಮೇಲೆ ನಿಗಾ ವಹಿಸಬೇಕು ಎಂದು ಸೂಚಿಸಿರುವ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದನ್ನೂ ಓದಿ: ರಾಜ್ಯದಲ್ಲಿ ಒಮಿಕ್ರಾನ್ ಆತಂಕ – ಸೋಂಕಿತ ರಾಷ್ಟ್ರಗಳಿಂದ ಬರೋರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

    ಹೊಸ ಗೈಡ್ ಲೈನ್:
    ಧಾರವಾಡ, ಬೆಂಗಳೂರು, ಮೈಸೂರು ಮೂರು ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಕೇರಳ, ಮಹಾರಾಷ್ಟ್ರದಿಂದ ಬಂದ ವಿದ್ಯಾರ್ಥಿಗಳಿಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ. ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಎರಡು ಕೋವಿಡ್ ಟೆಸ್ಟ್. 7 ದಿನಗಳ ನಂತರ ಮತ್ತೊಮ್ಮೆ RTPCR ಟೆಸ್ಟ್. ಕೇರಳ ಗಡಿ ಭಾಗದವರಿಗೆ ಸ್ಕ್ರೀನಿಂಗ್ ಕಡ್ಡಾಯ ಗೊಳಿಸಲಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2 ತಿಂಗಳು ಬ್ರೇಕ್ ಹಾಕಲಾಗಿದ್ದು, ಕಾರ್ಯಾಗಾರ, ಸೆಮಿನಾರ್ ಮುಂದೂಡಲು ಸೂಚನೆ ನೀಡಿದೆ. ವಿದ್ಯಾರ್ಥಿಗಳು ಲಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಸೂಚನೆ ಹೊರಡಿಸಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಭಾರೀ ಡೇಂಜರ್ – ಹೊಸ ವೈರಸ್, ಹೊಸ ಲಕ್ಷಣ!