ವಿಜಯಪುರ: ಚಲಿಸುತ್ತಿದ್ದ ಓಮಿನಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ (Basavana Bagewadi) ತಾಲೂಕಿನ ಉಕ್ಕಲಿ ಗ್ರಾಮದ ಬಳಿ ನಡೆದಿದೆ.
ಉಕ್ಕಲಿ ಗ್ರಾಮದಿಂದ ಸಂಬಂಧಿಕರನ್ನು ಕರೆದುಕೊಂಡು ಎಡೆಯೂರುಗೆ ಹೊರಟ್ಟಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಾಹನದಲ್ಲಿದ್ದವರು ಕೆಳಗಿಳಿದಿದ್ದಾರೆ.
ಓಮಿನಿ ಕಾರು ಹೌದು. ಆದರೆ ಲ್ಯಾಟಿನ್ ಭಾಷೆಯಲ್ಲಿ “ಓಮಿನಿ” ಗೆ ಎಲ್ಲಾ ಎಂಬ ಅರ್ಥವಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಸನ್ಮಾನ್ಯ ಗೃಹಸಚಿವರಾದ ಅರಗ ಜ್ಞಾನೇಂದ್ರ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ತೀರ್ಥಹಳ್ಳಿ ಸುಂದರವಾದ ಊರು. ಅಲ್ಲಿನ ಗಾಳಿ, ನೀರಿಗೆ ಏನೋ ಅದ್ಭುತ ಶಕ್ತಿ ಇದೆ ಅನಿಸುತ್ತದೆ. ರಾಷ್ಟ್ರಕವಿ ಕುವೆಂಪು, ಮಾಜಿ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಅವರು ಸೇರಿದಂತೆ ಅನೇಕ ಗಣ್ಯರು ನಮ್ಮ ತಾಲ್ಲೂಕಿನವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಈ “ಓಮಿನಿ” ಚಿತ್ರದ ನಿರ್ದೇಶಕ ಮಂಜು ಕೂಡ ನಮ್ಮೂರಿನವರು. ಇವರೆಲ್ಲಾ ಬಂದು ನನ್ನನ್ನು ಸಮಾರಂಭಕ್ಕೆ ಆಹ್ವಾನಿಸಿದಾಗ ಬರಲ್ಲ ಎಂದು ಹೇಳಲು ಆಗಲಿಲ್ಲ. ಅವರೆಲ್ಲರ ಪ್ರೀತಿ ನನ್ನ ಇಲ್ಲಿಯವರೆಗೂ ಕರೆತಂದಿದೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹಾರೈಸಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ರವಿಸಿಂಗ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. “ಓಮಿನಿ” ಎಂದರೆ ಲ್ಯಾಟಿನ್ ಭಾಷೆಯಲ್ಲಿ ಎಲ್ಲಾ ಎಂದು ಅರ್ಥ. ಆದರೆ “ಓಮಿನಿ” ಕಾರ್ ಸಹ ನಮ್ಮ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಆಗಸ್ಟ್ 19 ರಂದು ಚಿತ್ರ ತೆರೆಗೆ ಬರಲಿದೆ. ಇದು ನನ್ನ ಪಾಲಿಗೆ ಅತೀ ದೊಡ್ಡ ಸಮಾರಂಭ. ನಮ್ಮೂರಿನವರೇ ಆದ ಸನ್ಮಾನ್ಯ ಗೃಹ ಸಚಿವರು ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ನನ್ನ ಬಾಯಲ್ಲಿ ಪದಗಳೇ ಹೊರಡುತ್ತಿಲ್ಲ. ಗೃಹ ಸಚಿವರಿಗೆ ಎಷ್ಟು ಕಾರ್ಯದೊತ್ತಡ ಇರುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಅಂತಹ ಬಿಡುವಿಲ್ಲದ ಕಾರ್ಯದೊತ್ತಡದ ನಡುವೆ ಈ ಕಾರ್ಯಕ್ರಮಕ್ಕೆ ಬಂದು ಹಾರೈಸಿರುವುದು ತುಂಬಾ ಸಂತೋಷವಾಗುತ್ತಿದೆ. ನಾನು ನಿರ್ದೇಶನದೊಂದಿಗೆ ಹಲವು ಜವಾಬ್ದಾರಿ ಹೊತ್ತುಕೊಂಡಿದ್ದೀನಿ. ಪ್ರಮುಖಪಾತ್ರದಲ್ಲೂ ಕಾಣಿಸಿಕೊಂಡಿದ್ದೀನಿ ಎಂದರು ನಿರ್ದೇಶಕ ಮಂಜು ಹೆದ್ದೂರ್. ಇದನ್ನೂ ಓದಿ:ಬ್ರೇಕಪ್ ನಂತರ ಸ್ಟಾರ್ ನಟಿ ಸಹೋದರನ ಜೊತೆ ಇಲಿಯಾನಾ ಡೇಟಿಂಗ್
ಇದೊಂದು ವಿಭಿನ್ನ ಕಥೆಯ ಚಿತ್ರ. ಚಿತ್ರವೊಂದರಲ್ಲಿ ಚಿತ್ರವನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ. ಲವ್, ಸಸ್ಪೆನ್ಸ್, ಹಾರಾರ್ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ನಮ್ಮ ಚಿತ್ರದಲ್ಲಿ “ಓಮಿನಿ” ಪ್ರಮುಖಪಾತ್ರ ವಹಿಸುತ್ತದೆ. ತೀರ್ಥಹಳ್ಳಿಯ ಸುಂದರ ಪರಿಸರದಲ್ಲೇ ಹೆಚ್ಚು ಚಿತ್ರೀಕರಣ ನಡೆದಿದೆ. ಅತೀ ದೊಡ್ಡದಾದ ದಾವಣಗೆರೆಯ ಗ್ಲಾಸ್ ಹೌಸ್ ನಲ್ಲಿ ಚಿತ್ರೀಕರಣವಾಗಿರುವುದು ವಿಶೇಷ. ಆಗಸ್ಟ್ 19 ರಂದು ರಾಜ್ಯಾದ್ಯಂತ “ಓಮಿನಿ” ಸಂಚಾರ ಆರಂಭವಾಗಲಿದೆ. ಇದು ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ನೋಡಿ. ಹಾರೈಸಿ ಎಂದರು ನಾಯಕ ಸಿದ್ದು ಮೂಲಿಮನಿ.
ಹಲವು ವರ್ಷಗಳ ನಂತರ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದೇನೆ. ಒಳ್ಳೆಯ ಪಾತ್ರ ನೀಡಿದ್ದಾರೆ. ನಾನು ಮಲೆನಾಡ ಹುಡುಗಿ. ಅದೇ ಊರಿನ ಹುಡುಗಿ ಪಾತ್ರ ಸಿಕ್ಕಿರುವುದು ಖುಷಿಯಾಗಿದೆ ಎಂದರು ನಾಯಕಿ ಅಶ್ವಿನಿ ಚಂದ್ರಶೇಖರ್. ಗೀತರಚನೆಕಾರ ಪ್ರಮೋದ್ ಮರವಂತೆ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು “ಓಮಿನಿ” ಬಗ್ಗೆ ಮಾತನಾಡಿದರು. ಶ್ರೀ ಬೆಳ್ಳುಡಿ ಫಿಲಂಸ್ ಹಾಗೂ ಎಸ್ ಆರ್ ಗ್ರೂಪ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಮಂಜು ಹೆದ್ದೂರ್ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ನಿರ್ದೇಶನ ಹಾಗೂ ಎಂ.ಬಿ.ಅಳ್ಳಿಕಟ್ಟಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸಿದ್ದು ಮೂಲಿಮನಿ, ಪೂಜಾ ಜನಾರ್ದನ, ಅಶ್ವಿನಿ ಚಂದ್ರಶೇಖರ್, ಭರತ್ ಬೋಪ್ಪಣ್ಣ, ಮಂಜು ಹೆದ್ದೂರ್, ಆಕಾಂಕ್ಷ ಪಟಮಕ್ಕಿ, ಮೋಹನ್ ಜುನೇಜ, ಪ್ರಕಾಶ್ ತುಮ್ಮಿನಾಡು, ಮನಸ್ವಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ಚಿತ್ರದುರ್ಗ: ನಿಂತಿದ್ದ ಲಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಓಮ್ನಿ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರೇಣುಕಮ್ಮಾ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಶಂಕರ್ ಪುಟ್ಟಿಲಿಂಗಯ್ಯ(39) ಹಾಗೂ ಶಿವರಾಜ್(55) ಸಾವನ್ನಪ್ಪಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದಾರೆ.
ಈ ವೇಳೆ ಅಂಬುಲೆನ್ಸ್ ಗೆ ಕರೆ ಮಾಡಿ, ಸುಮಾರು ಅರ್ಧ ಗಂಟೆಗಳ ಕಾಲ ಪರದಾಡಿದರೂ ಯಾರು ಸ್ಪಂದಿಸಲಿಲ್ಲ. ಕೊನೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಗೊಂಡಿದ್ದ ಐವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಇಂದು ಮಧ್ಯಾಹ್ನ ಓಮ್ನಿಯಲ್ಲಿ ಬೆಂಗಳೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದ್ದು, ಇನ್ನುಳಿದ ತಾಯಿ ಜಯಶ್ರೀ (25), ಮಗಳು ಮೋನಿಕಾ(05) ಹಾಗೂ ಮಗ ಶೋಬಿತ್(07) ಗಾಯಾಳುಗಳು ಅಧೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮೀಣ ಠಾಣೆಯ ಸಿಪಿಐ ಬಾಲಚಂದ್ರ ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿದ್ದಾರೆ.
ಮಡಿಕೇರಿ: ಪಿಕಪ್ ಮತ್ತು ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭೇತ್ರಿಯಲ್ಲಿ ನಡೆದಿದೆ.
ಮೃತರನ್ನು ಮೂರ್ನಾಡು ಗ್ರಾಮದ ಹರೀಶ್(45) ಮತ್ತು ಅದೇ ಗ್ರಾಮದ ಸುಬ್ರಹ್ಮಣಿ(42) ಎಂದು ಗುರುತಿಸಲಾಗಿದೆ. ಪಿಕಪ್ ಬಂದು ಗುದ್ದಿದ ರಭಸಕ್ಕೆ ಓಮ್ನಿ ನಜ್ಜುಗುಜ್ಜಾಗಿದೆ. ವಾಹನ ಹಿಂದಿಕ್ಕುವ ರಭಸದಲ್ಲಿ ಓಮ್ನಿ ವಾಹನ ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಳಿಕ ಪಿಕಪ್ ಓಮ್ನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿ ರಭಸಕ್ಕೆ ಓಮ್ನಿ ನಜ್ಜುಗುಜ್ಜಾಗಿದ್ದು, ಪಿಕಪ್ ವಾಹನ ಉರುಳಿ ಬಿದ್ದಿದೆ. ಓಮ್ನಿ ಚಲಾಯಿಸುತ್ತಿದ್ದ ಹರೀಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇತ್ತ ಘಟನೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಸುಬ್ರಹ್ಮಣಿಯನ್ನು ಚಿಕಿತ್ಸೆಗೆಂದು ಮಡಿಕೇರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಬ್ರಹ್ಮಣಿ ಕೂಡ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಘಟನೆ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ವೇಗವಾಗಿ ಬಂದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಆಟೋ, ಓಮಿನಿ ಹಾಗೂ ಕಾರಿಗೆ ಡಿಕ್ಕಿಯಾಗಿ ಓರ್ವ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಸುಂಕದಕಟ್ಟೆಯಲ್ಲಿ ನಡೆದಿದೆ.
ಮುನಿಯಪ್ಪ ಸಾವನ್ನಪ್ಪಿದ್ದ ವ್ಯಕ್ತಿ. ಬ್ರೇಕ್ ಫೇಲ್ ಆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಭಯಾನಕ ಅಪಘಾತದ ದೃಶ್ಯ ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬ್ರೇಕ್ ಫೇಲ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕ್ರೇನ್ ರಸ್ತೆ ಪಕ್ಕದಲ್ಲೇ ನಿಂತಿದ್ದ ಓಮಿನಿ, ಕಾರಿಗೆ ಡಿಕ್ಕಿ ಹೊಡೆದಿದೆ. ಅಷ್ಟೇ ಅಲ್ಲದೆ ಭಾರೀ ವೇಗವಾಗಿದ್ದರಿಂದ ಮುಂದಿನ ಅಡ್ಡ ರಸ್ತೆಯಲ್ಲಿ ಬರುತ್ತಿದ್ದ ಆಟೋಗೂ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಎಲ್ಲ ಮೂರೂ ವಾಹನಗಳು ನಜ್ಜುಗುಜ್ಜಾಗಿವೆ.
ಆಟೋ ಮತ್ತು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಡಿಕೇರಿ: ತಮ್ಮ ಪಾಡಿಗೆ ಸ್ನೇಹಿತರೊಂದಿಗೆ ರಸ್ತೆ ಬದಿ ನಿಂತಿದ್ದ ಗ್ರಾಮಪಂಚಾಯ್ತಿ ಸದಸ್ಯರೊಬ್ಬರಿಗೆ ಏಕಾಏಕಿ ಓಮ್ನಿ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಹರಿಶ್ಚಂದ್ರ ಪುರದಲ್ಲಿ ತಡರಾತ್ರಿ ನಡೆದಿದೆ.
ವಿರಾಜಪೇಟೆ ತಾಲೂಕಿನ ಗೊಣಿಕೊಪ್ಪಲು ಗ್ರಾಮಪಂಚಾಯ್ತಿ ಸದಸ್ಯ ಕಲೀಮುಲ್ಲಾ ಮೃತ ದುರ್ದೈವಿ. ಆರೋಪಿಯನ್ನು ಚಾಲಕ ಬಾಲ ಎಂದು ಗುರುತಿಸಲಾಗಿದೆ. ರಾತ್ರಿ ರಸ್ತೆ ಬದಿಯಲ್ಲಿ ನಿಂತು ಸ್ನೇಹಿತರ ಜೊತೆ ಕಲೀಮುಲ್ಲಾ ಮಾತನಾಡುತ್ತಿದ್ದರು. ಈ ವೇಳೆ ಓಮ್ನಿ ಕಾರೊಂದು ಏಕಾಏಕಿ ಬಂದು ಕಲೀಮುಲ್ಲಾ ಅವರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ಬಳಿಕ ಕಾರನ್ನು ನಿಲ್ಲಿಸದೆ ಚಾಲಕ ಎಸ್ಕೇಪ್ ಆಗಿದ್ದನು.
ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಕಲೀಮುಲ್ಲಾರನ್ನ ಅವರ ಸ್ನೇಹಿತರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಲೀಮುಲ್ಲಾ ನಿಧನರಾಗಿದ್ದಾರೆ. ಹಾಗೆಯೇ ಅಪಘಾತ ನಡೆದ ವೇಳೆ ಕಲೀಮುಲ್ಲಾ ಪಕ್ಕದಲ್ಲಿದ್ದ ಮತ್ತೊಬ್ಬ ಸ್ನೇಹಿತ ಕೂಡ ಗಾಯಗೊಂಡಿದ್ದಾರೆ.
ಸದ್ಯ ಈ ಘಟನೆ ಕುರಿತು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು ಓಮ್ನಿಯನ್ನು ವಶಕ್ಕೆ ಪಡೆದಿದ್ದು, ಆರೋಪಿಯನ್ನು ಬಂದಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು 50 ಅಡಿ ಆಳದ ಕಂದಕಕ್ಕೆ ಉರುಳಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ 5 ಗಂಟೆಗೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಮಳಿಗೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೈಸೂರು ಮೂಲದ ಲೀಲಾವತಿ(54) ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಾಯಗೊಂಡಿದ್ದಾರೆ.
ಲೀಲಾವತಿ ಅವರ ಕುಟುಂಬ ಮೈಸೂರಿನಿಂದ ಶೃಂಗೇರಿಗೆ ಬಂದಿದ್ದರು. ಶೃಂಗೇರಿಗೆ ಹೋಗುವಾಗ ದಾರಿ ತಿಳಿಯದೇ ಜಯಪುರುದ ಮಾರ್ಗದ ಬಳಿ ಹೋಗಿದ್ದಾರೆ. ಅಲ್ಲಿಂದ ಕೊಪ್ಪಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಂದಕಕ್ಕೆ ಉರುಳಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಗಾಯಾಳುಗಳನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಾದಗಿರಿ: ರಸ್ತೆ ಪಕ್ಕದಲ್ಲಿರುವ ಜಮೀನಿನಲ್ಲಿ ಭತ್ತದ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಸುತ್ತಲೂ ಹೊಗೆ ಆವರಿಸಿದರಿಂದ ಬಸ್ ಮತ್ತು ಓಮನಿ ನಡುವೆ ಡಿಕ್ಕಿ ಸಂಭವಿಸಿದೆ.
ಈ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಡಗೇರಾ ಕ್ರಾಸ್ ಬಳಿ ಘಟನೆ ನಡೆದಿದೆ. ಓಮ್ನಿ ವಾಹನವು ಯಾದಗಿರಿಯಿಂದ ಹಾಲಿಗೇರಿಗೆ ಗ್ರಾಮಕ್ಕೆ ತೆರಳುತ್ತಿತ್ತು. ಈ ವೇಳೆ ವಡಗೇರಾ ಕ್ರಾಸ್ ಬಳಿ ಬರುತ್ತಿದ್ದಂತೆಯೇ ಸುತ್ತಲೂ ಹೊಗೆ ತುಂಬಿಕೊಂಡಿದ್ದು, ರಸ್ತೆ ಕಾಣುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಓಮ್ನಿ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿದ್ದಾರೆ.
ಓಮ್ನಿಯಲ್ಲಿದ್ದ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪಕ್ಕದ ಜಮೀನಿಲ್ಲಿ ಬೆಂಕಿ ಬಿದ್ದು ಹೊಗೆಯಾಗಿದ್ದರಿಂದಲೇ ಈ ಅವಘಢ ಸಂಭವಿಸಿದೆ ಅಂತ ಪೊಲೀಸರು ತಿಳಿಸಿದ್ದಾರೆ.
ವಡಗೇರಾ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.