Tag: ಓಲ್ಡ್ ಸಿಟಿ

  • ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ ಬರೆಯಲು ಯತ್ನಿಸಿದ ನಕಲಿ ಅಭ್ಯರ್ಥಿ ಪೊಲೀಸರ ವಶ

    ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ ಬರೆಯಲು ಯತ್ನಿಸಿದ ನಕಲಿ ಅಭ್ಯರ್ಥಿ ಪೊಲೀಸರ ವಶ

    ಬೀದರ್: ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ ಇಂದು ನಡೆದಿದ್ದು, ಈ ವೇಳೆ ಪರೀಕ್ಷೆ ಬರೆಯಲು ಯತ್ನ ಮಾಡಿದ ನಕಲಿ ಅಭ್ಯರ್ಥಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೀದರ್‍ನಲ್ಲಿ ನಡೆದಿದೆ.

    ಇಂದು ರಾಜ್ಯಾದ್ಯಂತ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ ನಡೆದಿತ್ತು. ಆದರೆ ಗಡಿ ಜಿಲ್ಲೆ ಬೀದರ್ ನಲ್ಲಿ ನಿಜವಾದ ಅಭ್ಯರ್ಥಿ ಪರೀಕ್ಷೆ ಬರೆಯದೇ ಆತನ ಪರವಾಗಿ ನಕಲಿ ಅಭ್ಯರ್ಥಿ ಪರೀಕ್ಷೆ ಬರೆಯಲು ಯತ್ನ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಆರೋಪಿಯನ್ನು ಬಿಜಾಪುರ ಮೂಲದ ಪಶು ವೈದ್ಯ ಎನ್ನಲಾಗುತ್ತಿದೆ. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ದೇವಾಲಯದ ಮೇಲೆ ನಡೆದಿರೋ ದೌರ್ಜನ್ಯ ಖಂಡಿಸಿ ಪ್ರತಿಭಟನೆ

    ಬೀದರ್ ನ ಓಲ್ಡ್ ಸಿಟಿಯಲ್ಲಿರುವ ಬಾಲಕಿಯರ ಪ್ರೌಢ ಶಾಲೆಯಲ್ಲಿ ಪರೀಕ್ಷೆ ನಡೆದಿದ್ದು, ಈ ಪರೀಕ್ಷೆ ಬರೆಯಲು ನಕಲಿ ಅಭ್ಯರ್ಥಿ ಯತ್ನ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ನಗರ ಠಾಣೆಯ ಪೊಲೀಸರು ನಕಲಿ ಅಭ್ಯರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

  • ಬೀದರ್ ಓಲ್ಡ್ ಸಿಟಿಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ: 28ಕ್ಕೇರಿದ ಸೋಂಕಿತರ ಸಂಖ್ಯೆ

    ಬೀದರ್ ಓಲ್ಡ್ ಸಿಟಿಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ: 28ಕ್ಕೇರಿದ ಸೋಂಕಿತರ ಸಂಖ್ಯೆ

    ಬೀದರ್: ದೆಹಲಿಯ ಜಮಾತ್‍ಗೆ ಹೋಗಿ ಬಂದಿದ್ದ ಕೊರೊನಾ ಸೋಂಕಿತ ವ್ಯಕ್ತಿಯ ಮುಖಾಂತರ ಓಲ್ಡ್ ಸಿಟಿಯಲ್ಲಿ ಇಂದು ಮತ್ತೆ ಇಬ್ಬರು ಸೋಂಕಿಗೆ ತುತ್ತಾಗಿದ್ದಾರೆ.

    ಓಲ್ಡ್ ಸಿಟಿಯ ಇಡೇನ್ ಕಾಲೋನಿಯ 50 ವರ್ಷದ ವ್ಯಕ್ತಿ ಹಾಗೂ 27 ವಯಸ್ಸಿನ ಯುವಕನಲ್ಲಿ ಸೋಂಕು ಪತ್ತೆಯಾಗಿದ್ದು, ಈ ಇಬ್ಬರು ಕೊರೊನಾ ರೋಗಿ ನಂಬರ್ 644ರ ಸಂಪರ್ಕಕ್ಕೆ ಬಂದು ಸೋಂಕು ತಗುಲಿಸಿಕೊಂಡಿದ್ದಾರೆ. ಈಗ ಬೀದರ್ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾಗಿದ್ದು, 14 ಜನರನ್ನು ಗುಣಮುಖ ಮಾಡಿ ಮನೆಗೆ ಕಳುಹಿಸಲಾಗಿದೆ.

    ಜಿಲ್ಲೆಯಲ್ಲಿ ಸೋಂಕಿಗೆ ಒಂದು ಸಾವಾಗಿದೆ. ಸದ್ಯ ಕೊರೊನಾ ವಾರ್ಡ್‍ನಲ್ಲಿ 13 ಜನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯಾದ್ಯಂತ ಇಂದು 10 ಮಂದಿ ಹೊಸ ಪ್ರಕರಣಗಳು ದಾಖಲಾಗಿವೆ. ಬೀದರ್ ನಲ್ಲಿ 2, ಬಾಗಲಕೋಟೆಯಲ್ಲಿ 2, ದಾವಣಗೆರೆಯಲ್ಲಿ 3, ಹಾವೇರಿ, ವಿಜಯಪುರ ಹಾಗೂ ಕಲಬುರಗಿಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 858ಕ್ಕೆ ಏರಿದೆ.