Tag: ಔತನಕೂಟ

  • ಆಪರೇಷನ್ ಕಮಲಕ್ಕೆ ಪ್ರತಿತಂತ್ರ! – ‘ಕೈ’ ಸಚಿವರು, ನಾಯಕರಿಗೆ ಔತಣಕೂಟ ಏರ್ಪಡಿಸಿದ ಸಿದ್ದರಾಮಯ್ಯ

    ಆಪರೇಷನ್ ಕಮಲಕ್ಕೆ ಪ್ರತಿತಂತ್ರ! – ‘ಕೈ’ ಸಚಿವರು, ನಾಯಕರಿಗೆ ಔತಣಕೂಟ ಏರ್ಪಡಿಸಿದ ಸಿದ್ದರಾಮಯ್ಯ

    ಬೆಂಗಳೂರು: ವಿಧಾನ ಸಭೆ ಅಧಿವೇಶನದ ಆರಂಭದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪಕ್ಷದ ಸಚಿವರು ಹಾಗೂ ನಾಯಕರಿಗೆ ಔತಣಕೂಟ ಏರ್ಪಡಿಸಿದ್ದು, ನಗರ ಕಾವೇರಿ ನಿವಾಸದಲ್ಲಿ ನಾಳೆ ಭೋಜನ ಕೂಟ ನಡೆಯಲಿದೆ.

    ಫೆ.06 ರಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಕೈಗೊಂಡಿದ್ದಾರೆ ಎನ್ನಲಾದ ಆಪರೇಷನ್ ಕಮಲದ ಸುದ್ದಿಯ ಬಗ್ಗೆಯು ಈ ಔತಣಕೂಟದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಔತಣಕೂಟ ಏರ್ಪಡಿಸುವ ಮೂಲಕ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಇದರ ಮತ್ತೊಂದು ಉದ್ದೇಶವಾಗಿದೆ ಎನ್ನಲಾಗಿದೆ.

    ಸಿಎಂ ಕುಮಾರಸ್ವಾಮಿ ಅವರು ಮಂಡಿಸಲಿರುವ ಬಜೆಟ್‍ಗೆ ಅನುಮೋದನೆ ಹಾಗೂ ಒಂದೊಮ್ಮೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಬಿಜೆಪಿ ಮಂಡಿಸಿದರೆ ಏನು ಮಾಡಬೇಕು ಎಂಬುದರ ಬಗ್ಗೆಯೂ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಪ್ರಮುಖವಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಸಚಿವರು, ಮುಖಂಡರು ಹಾಗೂ ಶಾಸಕರಿಗೆ ಔತಣಕೂಟಕ್ಕೆ ಆಗಮಿಸುವಂತೆ ಸಿದ್ದರಾಮಯ್ಯ ಪತ್ರ ಬರೆದು ಆಹ್ವಾನ ನೀಡಿದ್ದಾರೆ.

    ಸಭೆಯಲ್ಲಿ ಭಾಗವಹಿಸುವ ಶಾಸಕರನ್ನು ಆಯಾ ಜಿಲ್ಲಾ ಉಸ್ತುವಾರಿ ಸಚಿವರು ವಿಶ್ವಾಸಕ್ಕೆ ತೆಗೆದುಕೊಂಡು ಅಗತ್ಯ ಮಾಹಿತಿ ಪಡೆಯಬೇಕಿದೆ. ಸಭೆಯಲ್ಲಿ ಬಂಡಾಯದ ವರ್ತನೆ ತೋರಿರುವ ಹಾಗೂ ಸರಿಯಾಗಿ ಸಂಪರ್ಕಕ್ಕೆ ಸಿಗದೆ ಇರುವ ಶಾಸಕರ ಮೇಲೆ ಹೆಚ್ಚಿನ ನಿಗಾ ವಹಿಸಿ ಅಸಮಾಧಾನವನ್ನು ಪರಿಹಾರ ಮಾಡುವ ಕಾರ್ಯ ನಡೆಯಲಿದೆ ಎಂಬ ಮಾಹಿತಿ ಲಭಿಸಿದೆ.

    ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಕೂಡ ಪಕ್ಷದ ಎಲ್ಲಾ ನಾಯಕರು ಹಾಗೂ ಶಾಸಕರು ಬೆಂಗಳೂರಿಗೆ ಆಗಮಿಸಲು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬಿಜೆಪಿ ನಾಯಕರ ಈ ನಡೆ ಆಪರೇಷನ್ ಕಮಲ ಚುರುಕುಗೊಂಡಿದೇಯಾ ಎಂಬ ಅನುಮಾನ ಮೂಡಲು ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಳ್ಳಾರಿ ಸಂಸದರಿಗೆ `ದೊಡ್ಡಣ್ಣ’ನ ಆಹ್ವಾನ- ಟ್ರಂಪ್ ಆಹ್ವಾನಿತ ಗಣ್ಯರ ಲಿಸ್ಟ್ ನಲ್ಲಿ ಶ್ರೀರಾಮುಲುಗೂ ಕರೆ

    ಬಳ್ಳಾರಿ ಸಂಸದರಿಗೆ `ದೊಡ್ಡಣ್ಣ’ನ ಆಹ್ವಾನ- ಟ್ರಂಪ್ ಆಹ್ವಾನಿತ ಗಣ್ಯರ ಲಿಸ್ಟ್ ನಲ್ಲಿ ಶ್ರೀರಾಮುಲುಗೂ ಕರೆ

    ಬಳ್ಳಾರಿ: ಸಂಸದ ಶ್ರೀರಾಮುಲು ಅವರಿಗೆ ವಿಶ್ವದ ದೊಡ್ಡಣ್ಣ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಔತಣಕೂಟಕ್ಕೆ ಆಹ್ವಾನ ನೀಡಿದ್ದಾರೆ.

    130 ರಾಷ್ಟ್ರಗಳ ಗಣ್ಯರಿಗೆ ಆಹ್ವಾನ ನೀಡಿರುವ ಟ್ರಂಪ್ ಅವರು, ಭಾರತದಿಂದ ಬಳ್ಳಾರಿ ಸಂಸದ ಶ್ರೀರಾಮುಲು ಹಾಗೂ ಮಹಾರಾಷ್ಟ್ರ ಸಿಎಂ ದೇವೇಂದ್ರ ಪಡ್ನಾವಿಸ್ ಗೂ ಆಹ್ವಾನವಿಟ್ಟಿದ್ದಾರೆ.

    ಒಕ್ಕೂಟ ವ್ಯವಸ್ಥೆಯ ರಾಷ್ಟ್ರಗಳ ಗಣ್ಯರಿಗೆ ಪ್ರತಿ ವರ್ಷ ಔತಣಕೂಟ ಹಾಗೂ ಶಾಂತಿ ಸ್ಥಾಪನೆ ಬಗ್ಗೆ ನಡೆಯೋ ಚರ್ಚೆಗೆ ತಮ್ಮನ್ನೂ ಆಹ್ವಾನಿಸಿರುವುದು ನನ್ನ ಪುಣ್ಯವೆಂದು ಶ್ರೀರಾಮುಲು ಬಣ್ಣಿಸಿದ್ದಾರೆ. ಅಲ್ಲದೇ ಫೆಬ್ರವರಿ 7,8 ರಂದು ಅಮೆರಿಕಾಕ್ಕೆ ಹೋಗಬೇಕಾಗಿದೆ. ಆದ್ರೆ ಬಜೆಟ್ ಅಧಿವೇಶನ ನಡೆಯುತ್ತಿರುವುದರಿಂದ ಬಿಜೆಪಿ ಸಂಸದರಿಗೆ ವಿಪ್ ಜಾರಿಯಾಗಿರುವುದರಿಂದ ತಾವೂ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಿ ಅಮೆರಿಕಾಕ್ಕೆ ತೆರಳುವ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.

    ಈಗಾಗಲೇ ಅಮೆರಿಕಾಕ್ಕೆ ತೆರಳಲು ಸಿದ್ಧತೆ ಹಾಗೂ ವೀಸಾ ಸಿದ್ಧಪಡಿಸಿಕೊಂಡಿರುವ ಶ್ರೀರಾಮುಲುಗೆ ಪಕ್ಷದ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ರೆ ಭಾರತದ ಪರವಾಗಿ ಅಮೆರಿಕಾದ ಅಧ್ಯಕ್ಷರ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.