Tag: ಔರಂಗಜೇಬ್

  • ಮಹಾ ಅಸೆಂಬ್ಲಿಯಿಂದ ಅಬು ಅಜ್ಮಿ ಸಸ್ಪೆಂಡ್ – ನಮ್ಮಲ್ಲಿಗೆ ಕಳಿಸಿ ಟ್ರೀಟ್ಮೆಂಟ್ ಕೊಡ್ತೀವೆಂದ ಯೋಗಿ

    ಮಹಾ ಅಸೆಂಬ್ಲಿಯಿಂದ ಅಬು ಅಜ್ಮಿ ಸಸ್ಪೆಂಡ್ – ನಮ್ಮಲ್ಲಿಗೆ ಕಳಿಸಿ ಟ್ರೀಟ್ಮೆಂಟ್ ಕೊಡ್ತೀವೆಂದ ಯೋಗಿ

    ಮುಂಬೈ/ಲಕ್ನೋ: ಮಹಾರಾಷ್ಟ್ರ ರಾಜಕೀಯದಲ್ಲಿ ಔರಂಗಜೇಬ್ (Aurangzeb) ಜಟಾಪಟಿ ತಾರಕಕ್ಕೇರಿದೆ. ಔರಂಗಜೇಬ್ ಹೊಗಳಿದ್ದ ಸಮಾಜವಾದಿ ಪಕ್ಷದ (SP) ಶಾಸಕ ಅಬು ಅಜ್ಮಿಯನ್ನು (Abu Azmi) ಮಹಾರಾಷ್ಟ್ರ ವಿಧಾನಸಭೆಯಿಂದ (Maharashtra Vidhan Sabha) ಅಧಿವೇಶನ ಅಂತ್ಯವಾಗುವವರೆಗೆ ಅಮಾನತು ಮಾಡಲಾಗಿದೆ.

    ಸಚಿವ ಚಂದ್ರಕಾಂತ್ ಪಾಟೀಲ್ ಮಂಡಿಸಿದ ಅಮಾನತು ಪ್ರಸ್ತಾಪಕ್ಕೆ ಮತದಾನದ ಮೂಲಕ ಸದನ ಅನುಮೋದನೆ ನೀಡಿತು. ಈ ಬೆನ್ನಲ್ಲೇ ಅಬು ಅಜ್ಮಿಯನ್ನು ಅಮಾನತು ಮಾಡಲಾಗಿದೆ.

    ಅಬು ಅಜ್ಮಿ ವಿರುದ್ಧ ಯುಪಿ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ (Yogi Adityanath) ಸಹ ಕಿಡಿಕಾರಿದ್ದಾರೆ. ಸಮಾಜವಾದಿ ಪಕ್ಷದಿಂದ ಆತನನ್ನು ಕಿತ್ತೆಸೆದು ಉತ್ತರ ಪ್ರದೇಶಕ್ಕೆ ಕಳುಹಿಸಿ. ನಾವು ಸರಿಯಾದ ಉಪಚಾರ ಮಾಡುತ್ತೇವೆ ಎಂದು ಗುಡುಗಿದರು. ಇಂತಹ ವ್ಯಕ್ತಿ ದೇಶದಲ್ಲಿರುವ ಅರ್ಹನೆ ಉತ್ತರಿಸಿ ಎಂದು ಸಮಾಜವಾದಿ ಪಕ್ಷವನ್ನು ಪ್ರಶ್ನಿಸಿದರು. ಸಮಾಜವಾದಿ ಪಕ್ಷ ಅಬು ಅಜ್ಮಿ ಬೆಂಬಲಿಸಿ ಮಾತಾಡಿ ಮತ್ತೆ ಪೇಚಿಗೆ ಸಿಲುಕಿದೆ.

    ಗೋವಾ ಬೀದಿಯಲ್ಲಿ ಗಲಾಟೆ ಮಾಡಿದ ಆರೋಪದ ಮೇರೆಗೆ ಶಾಸಕ ಅಬು ಅಜ್ಮಿ ಪುತ್ರ ಫರ್ಹಾನ್ ಅಜ್ಮಿ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ. ನಟಿ ಆಯೆಷಾ ಟಕಿಯಾ ಪತಿಯೂ ಆಗಿರುವ ಫರ್ಹಾನ್‌ರನ್ನು ಠಾಣೆಗೆ ಕರೆದೊಯ್ದ ಪೊಲೀಸರು ಹೇಳಿಕೆ ಪಡೆದು ಕಳುಹಿಸಿದ್ದಾರೆ. ಇದನ್ನೂ ಓದಿ: ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಮಹಿಳೆಯ ಕೈ ಬಳೆ ಎಳೆದ ಡಿಎಂಕೆ ಕೌನ್ಸಿಲರ್‌

    ಅಜ್ಮಿ ಮಹಾರಾಷ್ಟ್ರ ಸಮಾಜವಾದಿ ಪಕ್ಷದ ಅಧ್ಯಕ್ಷರಾಗಿದ್ದಾರೆ. ಔರಂಗಜೇಬ್ ನ ಅವಧಿಯಲ್ಲಿ ಭಾರತದ ಗಡಿಗಳು ಅಫ್ಘಾನಿಸ್ತಾನ ಹಾಗೂ ಮ್ಯಾನ್ಮಾರ್‌ವರೆಗೂ ವಿಸ್ತರಿಸಿದ್ದವು, ಆತನ ಆಳ್ವಿಕೆಯಲ್ಲಿ ನಮ್ಮ ಜಿಡಿಪಿ ಜಗತ್ತಿನ ಶೇ.24 ರಷ್ಟಿತ್ತು. ಔರಂಗಜೇಬ್ ಕ್ರೂರಿಯಲ್ಲ, ಹಿಂದೂ ದೇಗುಲ ಕಟ್ಟಿಸಿದ ಮಹಾನ್ ಚಕ್ರವರ್ತಿ ಎಂದು ಅಜ್ಮಿ ಹಾಡಿ ಹೊಗಳಿದ್ದರು. ಈ ಹೊಗಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.  ಇದನ್ನೂ ಓದಿ: ಚೈತ್ರಾ ವಾಸುದೇವನ್‌ ವಿವಾಹವಾದ ಜಾಗದಲ್ಲೇ ಮಾಜಿ ಪತಿಯ ಅದ್ಧೂರಿ ಮದುವೆ

     

  • ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ

    ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ

    ನವದೆಹಲಿ: ಮಥುರಾದಲ್ಲಿ ಕೃಷ್ಣ ದೇವಸ್ಥಾನವನ್ನು (Krishna Janmabhoomi in Mathura) ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಮಾಹಿತಿ ನೀಡಿದೆ.

    ಉತ್ತರ ಪ್ರದೇಶದ ಮೈನ್‌ಪುರಿ ನಿವಾಸಿ ಅಜಯ್ ಪ್ರತಾಪ್ ಸಿಂಗ್ ಅವರು ಮಾಹಿತಿ ಹಕ್ಕು ಕಾಯ್ದೆ (RTI) ಅಡಿ ಕೇಳಿದ ಪ್ರಶ್ನೆಗೆ ಎಎಸ್‌ಐ ಉತ್ತರ ನೀಡಿದೆ.

    ಪ್ರಶ್ನೆ ಏನಿತ್ತು?
    1670ರಲ್ಲಿ ಕೇಶವದೇವ ದೇವಸ್ಥಾನವನ್ನು ಕೆಡವಿ ಶಾಹಿ ಈದ್ಗಾ ನಿರ್ಮಾಣವಾದ ಬಗ್ಗೆ 1920ರ ನವೆಂಬರ್‌ನಲ್ಲಿ ಬ್ರಿಟಿಷರು (British) ನಡೆಸಿದ ಸರ್ವೆ ಮಾಹಿತಿ ನೀಡುವಂತೆ ಪ್ರಶ್ನೆ ಕೇಳಲಾಗಿತ್ತು.

    ಎಎಸ್‌ಐ ಉತ್ತರ ಏನಿತ್ತು?
    1920 ರಲ್ಲಿ ಅಲಹಾಬಾದ್‌ನಿಂದ ಬ್ರಿಟಿಷರು ಪ್ರಕಟಿಸಿದ ಗೆಜೆಟ್‌ನಲ್ಲಿ (ರಾಜ್ಯಪತ್ರ) ಲೋಕೋಪಯೋಗಿ ಇಲಾಖೆಯು ಉತ್ತರ ಪ್ರದೇಶದ (Uttar Pradesh) ವಿವಿಧೆಡೆ 39 ಸ್ಮಾರಕಗಳ ಪಟ್ಟಿಯನ್ನು ನೀಡಿದೆ. ಈ ಪಟ್ಟಿಯಲ್ಲಿ ಕತ್ರಾ ಕೇಶವ ದೇವ್ ಭೂಮಿಯಲ್ಲಿರುವ ಶ್ರೀ ಕೃಷ್ಣ ಭೂಮಿಯನ್ನು 37ನೇ ಸ್ಥಾನದಲ್ಲಿ ಉಲ್ಲೇಖಿಸಲಾಗಿದೆ. ಹಿಂದೆ ಕತ್ರಾ ದಿಬ್ಬದ ಮೇಲೆ ಕೇಶವದೇವ್‌ ದೇವಸ್ಥಾನವಿತ್ತು. ಅದನ್ನು ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಉತ್ತರ ನೀಡಿದೆ.

    ಕೃಷ್ಣ ಜನ್ಮಭೂಮಿ ಮುಕ್ತಿ ನ್ಯಾಸ್ ಅಧ್ಯಕ್ಷ ವಕೀಲ ಮಹೇಂದ್ರ ಪ್ರತಾಪ್ ಪ್ರತಿಕ್ರಿಯಿಸಿ, ರಾಜ್ಯಪತ್ರದಲ್ಲಿ ಉಲ್ಲೇಖವಾದ ಹಾಗೂ ಈಗ ಆರ್‌ಟಿಐ ಅಡಿ ನೀಡಿದ ಪ್ರಶ್ನೆಗೆ ಎಎಸ್‌ಐ ನೀಡಿದ ಮಾಹಿತಿಯನ್ನೇ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ಸಾಕ್ಷ್ಯವಾಗಿ ಸೇರಿಸುತ್ತೇವೆ ಎಂದು ಹೇಳಿದ್ದಾರೆ.

    ಮಥುರಾದ ಕೇಶವದೇವ ದೇವಾಲಯವನ್ನು ಸುಮಾರು 5000 ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎಂದು ನಂಬಲಾಗುತ್ತಿದೆ. ಮಥುರಾ ಶ್ರೀಕೃಷ್ಣನ ಜನ್ಮಸ್ಥಳ. ಶ್ರೀಕೃಷ್ಣನ ಮೊಮ್ಮಕ್ಕಳಾದ ವ್ರಜ ಮತ್ತು ವ್ರಜನಾಭ ರಾಜ ಪರೀಕ್ಷಿತನ ಸಹಾಯದಿಂದ ಮಥುರಾದಲ್ಲಿ ಕೇಶದೇವ ದೇವಾಲಯವನ್ನು ನಿರ್ಮಿಸಿದರು ಎಂಬ ಕಥೆಯಿದೆ.

    ಮೊಘಲ್ ರಾಜ ಔರಂಗಜೇಬ್‌ (Aurangzeb) 1670ರಲ್ಲಿ ಕೇಶವದೇವನ ದೇವಾಲಯವನ್ನು ಕೆಡವಲು ಆದೇಶಿಸಿದ್ದ. ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ನಂತರ ನಿರ್ಮಿಸಲಾದ ಮಸೀದಿಯಲ್ಲಿ ಔರಂಗಜೇಬ ಸ್ವತಃ ನಮಾಜ್ ಮಾಡಿದ್ದ.

    ಏನಿದು ವಿವಾದ?
    ಮಥುರಾದ ವಿವಾದವು 13.37 ಎಕರೆ ಭೂಮಿಯ ಮಾಲೀಕತ್ವದ ಹಕ್ಕುಗಳಿಗೆ ಸಂಬಂಧಿಸಿದೆ. ಶ್ರೀ ಕೃಷ್ಣ ಜನ್ಮಭೂಮಿ 10.9 ಎಕರೆ ಜಮೀನು ಹೊಂದಿದ್ದರೆ, ಶಾಹಿ ಈದ್ಗಾ ಮಸೀದಿ ಎರಡೂವರೆ ಎಕರೆ ಜಮೀನು ಹೊಂದಿದೆ. ಪ್ರಸ್ತುತ ಈಗ ಇರುವ ಶಾಹಿ ಈದ್ಗಾ ಮಸೀದಿಯನ್ನು ಅಕ್ರಮ ಎಂದು ಘೋಷಿಸಿ ಅದನ್ನು ನೆಲಸಮಗೊಳಿಸಬೇಕು ಮತ್ತು 13.37 ಎಕರೆ ಸಂಪೂರ್ಣ ಭೂಮಿಯನ್ನು ಡಿ-ಫಾಕ್ಟೋ ಮಾಲೀಕ ಭಗವಾನ್ ಶ್ರೀಕೃಷ್ಣ ವಿರಾಜಮಾನರಿಗೆ ಹಸ್ತಾಂತರಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

    ವಕೀಲರಾದ ರಂಜನಾ ಅಗ್ನಿಹೋತ್ರಿ ಸೇರಿ ಇತರ ಆರು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ಇನ್ನೂ ಅನೇಕ ಮಂದಿ ಅರ್ಜಿ ಸಲ್ಲಿಸಿದ್ದರು. ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್, ಶಾಹಿ ಈದ್ಗಾ ಮಸೀದಿ, ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್ ಮತ್ತು ಶ್ರೀಕೃಷ್ಣ ಜನ್ಮಭೂಮಿ ಸೇವಾ ಸಂಸ್ಥಾನವನ್ನು ಪ್ರಕರಣದಲ್ಲಿ ಭಾಗಿ ಮಾಡಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ತ್ತರ ಪ್ರದೇಶದ ಮಥುರಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಸಮೀಕ್ಷೆ ನಡೆಸುವಂತೆ ಆದೇಶಿಸಿತ್ತು.

    ಅರ್ಜಿಯಲ್ಲಿ ಏನಿತ್ತು?
    ಶಾಹಿ ಈದ್ಗಾ ಮಸೀದಿಯನ್ನು ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ 1669-70ರಲ್ಲಿ ಶ್ರೀಕೃಷ್ಣನ ಜನ್ಮಸ್ಥಳದ ಸಮೀಪವಿರುವ ಕತ್ರಾ ಕೇಶವ್ ದೇವ್ ದೇವಸ್ಥಾನದ ಬಳಿ ನಿರ್ಮಿಸಲಾಗಿದೆ. 13.37 ಎಕರೆ ಜಾಗದಲ್ಲಿ ಹರಡಿರುವ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಒಂದು ಭಾಗವನ್ನು ಕೆಡವಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ. ಈ ಜಾಗದ ಸಂಪೂರ್ಣ ಹಕ್ಕು ಭಗವಾನ್ ಶ್ರೀಕೃಷ್ಣ ವಿರಾಜಮಾನರಿಗೆ ನೀಡಬೇಕು. ಹೀಗಾಗಿ ಶಾಹಿ ಈದ್ಗಾ ಮಸೀದಿಯನ್ನು ತೆರವು ಮಾಡಿ ಮಂದಿರಕ್ಕೆ ಭೂಮಿಯನ್ನು ವಾಪಸ್ ನೀಡುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

  • ವಾಟ್ಸಾಪ್‍ನಲ್ಲಿ ಔರಂಗಜೇಬ್ ಡಿಪಿ ಹಾಕಿದ್ದ ವ್ಯಕ್ತಿಯ ಬಂಧನ

    ವಾಟ್ಸಾಪ್‍ನಲ್ಲಿ ಔರಂಗಜೇಬ್ ಡಿಪಿ ಹಾಕಿದ್ದ ವ್ಯಕ್ತಿಯ ಬಂಧನ

    ಮುಂಬೈ: ಮೊಘಲ್ ಚಕ್ರವರ್ತಿ ಔರಂಗಜೇಬ್ (Aurangzeb) ಚಿತ್ರವನ್ನು ತನ್ನ ವಾಟ್ಸಾಪ್ (Whatsapp) ಪ್ರೊಫೈಲ್ ಫೋಟೋವನ್ನಾಗಿ ಹಾಕಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮುಂಬೈ (Mumbai) ಪೊಲೀಸರು ಬಂಧಿಸಿದ್ದಾರೆ.

    ಬಂಧನಕ್ಕೊಳಗಾದ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 298 ಅಡಿಯಲ್ಲಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಮತ್ತು 153 ಎ ಅಡಿಯಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಪ್ರಕರಣ ದಾಖಲಿಸಲಾಗಿದೆ. ಬಂಧನದ ಬಳಿಕ ಆತನನ್ನು ವಿಚಾರಣೆ ನಡೆಸಿ, ಸೂಕ್ತ ಉತ್ತರ ನೀಡುವಂತೆ ನೋಟಿಸ್ ಜಾರಿಗೊಳಿಸಿ ಬಿಡುಗಡೆ ಮಾಡಲಾಗಿದೆ. ಅಲ್ಲದೇ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೋ ಬೆರ್ಲುಸ್ಕೋನಿ ನಿಧನ

    ಹಿಂದೂ ಪರ ಸಂಘಟನೆಗಳು ಔರಂಗಜೇಬ್ ಚಿತ್ರ ಹಾಕಿರುವ ಸ್ಕ್ರೀನ್‍ಶಾಟ್‍ನ್ನು ಪೊಲೀಸರಿಗೆ ಸಲ್ಲಿಸಿ, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದವು. ಇತ್ತೀಚೆಗೆ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ವಿಚಾರವಾಗಿ ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ಕೋಮು ಉದ್ವಿಗ್ನ ಘಟನೆಗಳು ನಡೆದಿದ್ದವು.

    ಕೊಲ್ಹಾಪುರದಲ್ಲಿ (Kolhapur) ಟಿಪ್ಪು ಸುಲ್ತಾನ್ (Tipu Sultan) ಚಿತ್ರವನ್ನು ಆಕ್ಷೇಪಾರ್ಹ ಆಡಿಯೋದೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿತ್ತು. ಇದರಿಂದಾಗಿ ಕಲ್ಲು ತೂರಾಟ ನಡೆದಿತ್ತು. ಅಲ್ಲದೇ ಮೆರವಣಿಗೆಯೊಂದರಲ್ಲಿ ಔರಂಗಜೇಬ್ ಫೋಟೋಗಳನ್ನು ಪ್ರದರ್ಶಿಸಲಾಗಿತ್ತು. ಇದರಿಂದಾಗಿ ನಡೆದ ಗಲಭೆಯಲ್ಲಿ ಹಲವರು ಗಾಯಗೊಂಡಿದ್ದರು. ಇದನ್ನೂ ಓದಿ: ವಿಧಾನಸೌಧದಲ್ಲಿ ಕಚೇರಿ ಪೂಜೆ ನೆರವೇರಿಸಿದ ಸಚಿವ ಎಂ.ಬಿ ಪಾಟೀಲ್

  • ಔರಂಗಜೇಬ್ ಪೋಸ್ಟರ್ ಹಿಡಿದು ಡ್ಯಾನ್ಸ್ – 8 ಕಿಡಿಗೇಡಿಗಳ ವಿರುದ್ಧ ಕೇಸ್

    ಔರಂಗಜೇಬ್ ಪೋಸ್ಟರ್ ಹಿಡಿದು ಡ್ಯಾನ್ಸ್ – 8 ಕಿಡಿಗೇಡಿಗಳ ವಿರುದ್ಧ ಕೇಸ್

    ಮುಂಬೈ: ಮೊಘಲ್ ರಾಜ ಔರಂಗಜೇಬನ ಪೋಸ್ಟರ್‌ಗಳನ್ನು (Aurangzeb poster) ಹಿಡಿದು ನೃತ್ಯ (Dance) ಮಾಡಿದ್ದ 8 ಯುವಕರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಹಾರಾಷ್ಟ್ರದ (Maharashtra) ವಾಶಿಮ್‍ನ ಮಂಗ್ರುಲ್ಪಿರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಜ.1ರಂದು ದಾದಾ ಹಯಾತ್ ಖಲಂದರ್‍ನ ಉರುಸ್ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಔರಂಗಜೇಬ್‍ನ ಪೋಸ್ಟರ್‌ಗಳನ್ನು ಹೊತ್ತುಕೊಂಡು ಬಂದಿದ್ದರು. ತದನಂತರ ಆ ಪೋಸ್ಟರ್‌ಗಳನ್ನು ಹಿಡಿದು ನರ್ತಿಸಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡ ತನಿಖೆಯನ್ನು ಆರಂಭಿಸಿದ್ದಾರೆ. ಈ ವೇಳೆ ಘಟನೆಗೆ ಸಂಬಂಧಿಸಿ 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಆರೋಗ್ಯ ಇಲಾಖೆಯ ಟೆಂಡರ್ ಕೊಡಿಸದ್ದಕ್ಕೆ ನನ್ನ ಮೇಲೆ ಭ್ರಷ್ಟಾಚಾರ ಆರೋಪ: ಶಾಸಕ ತಿಪ್ಪಾರೆಡ್ಡಿ

    ವೀಡಿಯೋದಲ್ಲಿ ಏನಿದೆ?: ಕೆಲವು ಪುಂಡರು ಔರಂಗಜೇಬ್‍ನ ಪೋಸ್ಟರ್‌ಗಳನ್ನು ಕೈಯಲ್ಲಿ ಹಿಡಿದುಕೊಂಡು ಹಾಡು ಹಾಡುತ್ತಾ ನರ್ತಿಸುತ್ತಿದ್ದಾರೆ. ಜೊತೆಗೆ ಅನೇಕ ಘೋಷಣೆಗಳನ್ನು ಕೂಗುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

    ಹಿಂದೂ ಸಂಘಟನೆಯಿಂದ ಪ್ರತಿಭಟನೆ: ಔರಂಗಜೇಬ್ ಫೋಟೋ ಇಟ್ಟುಕೊಂಡು ನೃತ್ಯ ಮಾಡಿದ ಜನರ ಗುಂಪಿನ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಹಿಂದೂ ಸಂಘಟನೆಯೊಂದು ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದೆ. ಅಲ್ಲದೆ, ಔರಂಗಜೇಬ್ ಪ್ರತಿಕೃತಿಯನ್ನು ಸಹ ಈ ಸಂಘಟನೆ ದಹಿಸಿದೆ. ಇದನ್ನೂ ಓದಿ: 13 ಜನ ಸಚಿವರ ಸಿಡಿಗಳು ಚುನಾವಣೆ ಒಳಗೆ ಬಿಡುಗಡೆಯಾಗಲಿದೆ: ಸಿಎಂ ಇಬ್ರಾಹಿಂ ಹೊಸ ಬಾಂಬ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಥುರಾದ ಕೃಷ್ಣ ಜನ್ಮಭೂಮಿ, ಶಾಹಿ ಈದ್ಗಾ ಮಸೀದಿ ವಿವಾದ – 4 ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಸೂಚನೆ

    ಮಥುರಾದ ಕೃಷ್ಣ ಜನ್ಮಭೂಮಿ, ಶಾಹಿ ಈದ್ಗಾ ಮಸೀದಿ ವಿವಾದ – 4 ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಸೂಚನೆ

    ಲಕ್ನೋ: ಮಥುರಾದ ಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ಮಸೀದಿ ವಿವಾದ ಪ್ರಕರಣದ ಬಗ್ಗೆ ಅಲಹಾಬಾದ್ ಹೈಕೋರ್ಟ್ ವಿಚಾರಣೆ ನಡೆಸಿ ನಾಲ್ಕು ತಿಂಗಳಲ್ಲಿ ತೀರ್ಪು ನೀಡುವಂತೆ ಮಥುರಾ ಕೋರ್ಟ್‍ಗೆ ಸೂಚಿಸಿದೆ.

    ಶಾಹಿ ಈದ್ಗಾ ಮಸೀದಿಯಿರುವ ಭೂಮಿ ಕೃಷ್ಣ ಜನ್ಮಭೂಮಿಗೆ ಸೇರಿದ್ದು, ಮಸೀದಿ ತೆರವು ಮಾಡಬೇಕು ಎನ್ನುತ್ತಾ ಹಿಂದೂ ಆರ್ಮಿಯ ಮನೀಶ್ ಯಾದವ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ಸುನ್ನಿ ವಕ್ಫ್ ಬೋರ್ಡ್ ಸೇರಿ ಇತರೆ ಪಾರ್ಟಿಗಳು ಗೈರಾಗಿದ್ದರು. ಹೀಗಾಗಿ ಇದಕ್ಕೆ ಸಂಬಂಧಿಸಿದ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ನಾಲ್ಕು ತಿಂಗಳಲ್ಲಿ ನಡೆಸಲು ಮಥುರಾ ಕೋರ್ಟ್‍ಗೆ ಅಲಹಾಬಾದ್ ಹೈಕೋರ್ಟ್ ಸೂಚನೆ ನೀಡಿದೆ. ಇದನ್ನೂ ಓದಿ: ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ

    ವಕೀಲೆ ರಂಜನಾ ಅಗ್ನಿಹೋತ್ರಿ ಮತ್ತು ಇತರ ಆರು ಮಂದಿ ಕಳೆದ ವರ್ಷ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಈ ಪ್ರಕರಣದ ಕುರಿತಾಗಿ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್, ಶಾಹಿ ಈದ್ಗಾ ಮಸೀದಿ, ಶ್ರೀ ಕೃಷ್ಣ ಜನ್ಮಭೂಮಿ ಟ್ರಸ್ಟ್ ಮತ್ತು ಶ್ರೀ ಕೃಷ್ಣ ಜನ್ಮಭೂಮಿ ಸೇವಾ ಸಂಸ್ಥಾನವನ್ನು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಶ್ರೀ ಕೃಷ್ಣ ಜನ್ಮಭೂಮಿಯ 13.37 ಎಕರೆ ಭೂಮಿಯನ್ನು ಬಿಡುಗಡೆ ಮಾಡುವಂತೆ ಮತ್ತು ಜನ್ಮಭೂಮಿಯ ಆವರಣದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆಗೆದುಹಾಕುವಂತೆ ಅರ್ಜಿಯಲ್ಲಿ ಮನವಿ ಸಲ್ಲಿಸಲಾಗಿದೆ. ಇದನ್ನೂ ಓದಿ: ಇನ್ನು ಮುಂದೆ ಬಲವಂತದ ಮತಾಂತರ ಅಪರಾಧ: ಕಾಯ್ದೆಯಲ್ಲಿ ಏನಿದೆ?

    ಟ್ರಸ್ಟ್‌ನ ಭೂಮಿಯಲ್ಲಿ ನಿರ್ಮಿಸಲಾದ ಈದ್ಗಾವನ್ನು ಅಕ್ರಮ ಎಂದು ಘೋಷಿಸಿ ಅದನ್ನು ಕೆಡವಲು ಮತ್ತು ಸಂಪೂರ್ಣ ಭೂಮಿಯನ್ನು ಡಿ ಫ್ಯಾಕ್ಟೋ ಮಾಲೀಕ ಭಗವಾನ್ ಶ್ರೀ ಕೃಷ್ಣ ವಿರಾಜಮಾನರಿಗೆ ಹಸ್ತಾಂತರಿಸುವಂತೆ ಅರ್ಜಿದಾರರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿವಾದಿತ ಸ್ಥಳವನ್ನು ಅಗೆಯುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.

    ಹಿಂದೂಗಳ ಪ್ರಕಾರ ಈ ಮಸೀದಿಯನ್ನು ಮೊಘಲ್ ದೊರೆ ಔರಂಗಜೇಬ್ ಆದೇಶದ ಮೇರೆಗೆ 1669 ರಿಂದ 70ರ ಅವಧಿಯಲ್ಲಿ ಖತ್ರಾ ಕೇಶವ್ ದೇವ್ ಮಂದಿರದ ಸಮೀಪದ 13.37 ಎಕರೆ ಭೂಮಿಯಲ್ಲಿ ನಿರ್ಮಿಸಲಾಗಿದೆ. ಇದು ಕೃಷ್ಣ ಜನ್ಮಸ್ಥಳಕ್ಕೆ ಸನಿಹವಿದೆ. ಹೀಗಾಗಿ ಈ ಮಸೀದಿಯನ್ನು ತೆರವು ಮಾಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

  • ಕಾಶಿ ವಿಶ್ವನಾಥ ದೇವಾಲಯ, ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆಗೆ ಆದೇಶ

    ಕಾಶಿ ವಿಶ್ವನಾಥ ದೇವಾಲಯ, ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆಗೆ ಆದೇಶ

    ಲಕ್ನೋ: ಕಾಶಿ ವಿಶ್ವನಾಥ ದೇವಸ್ಥಾನ – ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಪುರಾತತ್ವ ಇಲಾಖೆಗೆ ಮಹತ್ವದ ಆದೇಶ ನೀಡಿದೆ.

    1664 ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ್ 2 ಸಾವಿರ ವರ್ಷಗಳಷ್ಟು ಹಳೆಯದಾದ ಕಾಶಿ ವಿಶ್ವನಾಥ ದೇವಾಲಯದ ಒಂದು ಭಾಗವನ್ನು ಕೆಡವಿ ಅಲ್ಲಿ ಮಸೀದಿ ನಿರ್ಮಿಸಿದ್ದಾನೆ. ಹೀಗಾಗಿ ಈ ಜಾಗ ಹಿಂದೂಗಳಿಗೆ ಸೇರಬೇಕು. ಈ ಜಾಗದಲ್ಲಿ ಮೊದಲು ದೇವಾಲಯ ಇತ್ತೋ? ಮಸೀದಿ ನಿರ್ಮಾಣವಾಗಿತ್ತೋ ಎಂಬುದನ್ನು ತಿಳಿಯಲು ಸಮೀಕ್ಷೆ ನಡೆಸಲು ಅನುಮತಿ ನೀಡಬೇಕೆಂದು ವಕೀಲ ವಿಜಯ್ ಶಂಕರ್ ರಸ್ತೋಗಿ ಅರ್ಜಿ ಮೂಲಕ ಮನವಿ ಸಲ್ಲಿಸಿದ್ದರು.

    ಈ ಜಾಗದಲ್ಲಿ ಸಮೀಕ್ಷೆ ನಡೆಸುವುದಕ್ಕೆ ಮಸೀದಿಯ ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸಿ 2020ರಲ್ಲಿ ಅರ್ಜಿ ಸಲ್ಲಿಸಿತ್ತು. ಈಗ ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಸಮೀಕ್ಷೆ ನಡೆಸುವಂತೆ ಪುರಾತತ್ವ ಇಲಾಖೆಗೆ ಸೂಚಿಸಿದೆ. ಸಮೀಕ್ಷೆಗೆ ಸಂಬಂಧಿಸಿದ ಎಲ್ಲ ಖರ್ಚುಗಳನ್ನು ಉತ್ತರ ಪ್ರದೇಶ ಸರ್ಕಾರ ಭರಿಸಬೇಕೆಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

    ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಇಲಾಖೆ ಶೀಘ್ರವೇ ಒಂದು ಸಮಿತಿಯನ್ನು ರಚಿಸಿ ಸಮೀಕ್ಷೆ ನಡೆಸುವ ಸಾಧ್ಯತೆಯಿದೆ.

  • ಮಸೀದಿ ತೆರವುಗೊಳಿಸಿ ಶ್ರೀಕೃಷ್ಣ ಜನ್ಮಭೂಮಿ ವಶ ಕೋರಿದ್ದ ಅರ್ಜಿ ವಜಾ

    ಮಸೀದಿ ತೆರವುಗೊಳಿಸಿ ಶ್ರೀಕೃಷ್ಣ ಜನ್ಮಭೂಮಿ ವಶ ಕೋರಿದ್ದ ಅರ್ಜಿ ವಜಾ

    ಮಥುರಾ: ಶ್ರೀ ಕೃಷ್ಣ ಜನ್ಮಭೂಮಿಯಾದ ಮಥುರಾದಲ್ಲಿ ನಿರ್ಮಾಣಗೊಂಡಿದೆ ಎನ್ನಲಾದ ಈದ್ಗಾ ಮಸೀದಿ ತೆರವುಗೊಳಿಸಬೇಕೆಂದು ಸಲ್ಲಿಕೆಯಾದ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ.

    1991ರ ಪ್ರಾರ್ಥನಾ ಸ್ಥಳಗಳ (ವಿಶೇಷ ನಿಯಮಾವಳಿ) ಕಾಯ್ದೆಯ ಪ್ರಕಾರ ಪ್ರಾರ್ಥನಾ ಮಂದಿರಗಳ ಬದಲಾವಣೆ ಮಾಡಲು ಅಸಾಧ್ಯ. ಹೀಗಾಗಿ ಅರ್ಜಿಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಮಥುರಾ ಜಿಲ್ಲಾ ಸಹಾಯಕ ನ್ಯಾಯಾಧೀಶ ಛಯ್ಯಾ ಶರ್ಮಾ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

    ಕೋರ್ಟ್‌ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಶ್ರೀ ಕೃಷ್ಣ ಜನ್ಮಸ್ಥಾನ ಪರ ಹೋರಾಟದ ಭಾಗವಾದ ಅಖಾಡ ಪರಿಷತ್‌ ಅಧ್ಯಕ್ಷ ಮಹಾಂತ್‌ ನರೇಂದ್ರ ಗಿರಿ,  ಅ.15ರಂದು ಕೋರ್ಟ್‌ ಆದೇಶದ ಸಂಬಂಧ ಸಭೆ ನಡೆಯಲಿದೆ. ಅಲ್ಲಿ ಮಥುರಾದ ಶ್ರೀಕೃಷ್ಣ ಜನ್ಮಸ್ಥಾನ ವಶಕ್ಕೆ ಅಗತ್ಯವಿರುವ ಹೋರಾಟದ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಅಯೋಧ್ಯೆಯ ರಾಮ ದೇವಾಲಯವಿದ್ದ ಜಾಗದಲ್ಲಿ ಬಾಬ್ರಿ ಮಸೀದಿ ನಿರ್ಮಾಣವಾಗಿದೆ ಎಂದು ಸುಪ್ರೀಂಕೋರ್ಟ್‌ ಐತಿಹಾಸಿಕಾ ತೀರ್ಪು ನೀಡಿದ ಬಳಿಕ ಈ ಅರ್ಜಿ ಸಲ್ಲಿಕೆಯಾಗಿತ್ತು.

    ಯುಪಿ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಮತ್ತು ಶಾಹಿ ಈದ್ಗಾ ಟ್ರಸ್ಟ್​ನ ನಿರ್ವಹಣಾ ಸಮಿತಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.

    ಅರ್ಜಿಯಲ್ಲಿ ಏನಿತ್ತು?
    ಮಥುರಾದ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದೆ. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳವಾಗಿದೆ. 1968ರ ರಾಜಿ ಪತ್ರವನ್ನು ಒಪ್ಪಲಾಗದು.

    ಕೆಲವು ಮುಸ್ಲಿಮರ ಸಹಾಯದಿಂದ ಈದ್ಗಾ ಟ್ರಸ್ಟ್ ಶ್ರೀ ಕೃಷ್ಣ ಜನಂಸ್ಥಾನ್ ಟ್ರಸ್ಟ್ ಮತ್ತು ದೇವತೆಗೆ ಸೇರಿದ ಭೂಮಿಯನ್ನು ಅತಿಕ್ರಮಣ ಮಾಡಿ ಈದ್ಗಾ ಮಸೀದಿ ನಿರ್ಮಾಣ ಮಾಡಲಾಗಿದೆ. ಕೃಷ್ಣ ಜನಿಸಿದ ಸ್ಥಳವನ್ನು ʼಕತ್ರಾ ಕೇಶವ್ ದೇವ್’ ಎಂದು ಗುರುತಿಸಲಾಗಿದೆ. ಅಯೋಧ್ಯೆಯಂತೆ ಇಲ್ಲೂ ಸಹ ಶ್ರೀಕೃಷ್ಣನ ಜನ್ಮಸ್ಥಳವು ಈದ್ಗಾ ಮಸೀದಿ ಟ್ರಸ್ಟ್‌ನ ನಿರ್ವಹಣಾ ಸಮಿತಿ ರಚಿಸಿರುವ ಸಂರಚನೆಯ ಕೆಳಗೆ ಇದೆ.

    ಮಥುರಾದಲ್ಲಿನ ಕೃಷ್ಣ ದೇಗುಲವನ್ನು ಮುಘಲ್ ದೊರೆ ಔರಂಗಜೇಬ್ ಧ್ವಂಸಗೊಳಿಸಿದ್ದ ಎಂಬುದ್ದಕ್ಕೆ ಇತಿಹಾಸದಲ್ಲಿ ಸಾಕ್ಷ್ಯಗಳು ಸಿಗುತ್ತದೆ. ಕೃಷ್ಣ ಜನ್ಮಭೂಮಿಯಲ್ಲಿದ್ದ ದೇಗುಲವೂ ಸೇರಿದಂತೆ ಅನೇಕ ಹಿಂದೂ ದೇಗುಲಗಳನ್ನು ಔರಂಗಜೇಬ್ ಧ್ವಂಸಗೊಳಿಸಿದ್ದ, ಹೀಗಾಗಿ ಕೃಷ್ಣ ಜನ್ಮಭೂಮಿಯ 13.37 ಎಕರೆ ಪ್ರದೇಶ ಹಿಂದೂಗಳಿಗೆ ಸೇರಿದೆ. ಹೀಗಾಗಿ ಕೃಷ್ಣ ಜನ್ಮಭೂಮಿಯಿಂದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಿ ಈ ಜಾಗವನ್ನು ಹಿಂದೂಗಳಿಗೆ ನೀಡಬೇಕೆಂದು ಮನವಿ ಮಾಡಲಾಗಿತ್ತು.

  • ಔರಂಗಜೇಬ್ ಹೆಸರು, ಪಠ್ಯವನ್ನು ತೆಗೆಯಿರಿ- ಶಿರೋಮಣಿ ಅಕಾಲಿದಳ ಒತ್ತಾಯ

    ಔರಂಗಜೇಬ್ ಹೆಸರು, ಪಠ್ಯವನ್ನು ತೆಗೆಯಿರಿ- ಶಿರೋಮಣಿ ಅಕಾಲಿದಳ ಒತ್ತಾಯ

    ನವದೆಹಲಿ: ರಾಜ್ಯದಲ್ಲಿ ಬಿಜೆಪಿ ಟಿಪ್ಪು ಪಠ್ಯವನ್ನು ತೆಗೆಯುವಂತೆ ಒತ್ತಾಯಿಸಿದ ನಂತರ ಇದೀಗ ಮೊಘಲ್ ದೊರೆ ಔರಂಗಜೇಬನ ಹೆಸರನ್ನು ಸಹ ತೆಗೆದು ಹಾಕಬೇಕು ಎಂದು ಶಿರೋಮಣಿ ಅಕಾಲಿ ದಳ ಒತ್ತಾಯಿಸಿದೆ.

    ದೆಹಲಿಯ ಔರಂಗಜೇಬ್ ರಸ್ತೆ ಎಂಬ ಹೆಸರಿನ ನಾಮಫಲಕಕ್ಕೆ ಶಿರೋಮಣಿ ಅಕಾಲಿದಳ ಕಪ್ಪು ಬಣ್ಣ ಬಳಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ. ಮೊಘಲ್ ದೊರೆ ಔರಂಗಜೇಬ್ ಹೆಸರಿನ ರಸ್ತೆಯ ನಾಮಫಲಕಗಳು ಹಾಗೂ ವಿದ್ಯಾರ್ಥಿಗಳ ಇತಿಹಾಸದ ಪುಸ್ತಕಗಳಲ್ಲಿನ ಔರಂಗಜೇಬನ ಪಠ್ಯವನ್ನು ತೆಗೆಯಬೇಕು ಎಂದು ಶಿರೋಮಣಿ ಅಕಾಲಿ ದಳದ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಹಾಗೂ ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ(ಡಿಎಸ್‍ಜಿಎಂಸಿ) ಸದಸ್ಯರು ಒತ್ತಾಯಿಸಿದ್ದಾರೆ. ಅಲ್ಲದೆ ಔರಂಗಜೇಬ್ ಹೆಸರಿನ ರಸ್ತೆಗಳ ನಾಮಫಲಕಕ್ಕೆ ಕಪ್ಪು ಬಣ್ಣ ಬಳಿದಿದ್ದಾರೆ.

    ಔರಂಗಜೇಬ್ ಒಬ್ಬ ಹಂತಕ, ಅವನ ಒತ್ತಾಯಪೂರ್ವಕ ಮತಾಂತರದಿಂದ ಗುರು ತೇಜ್ ಬಹದ್ದೂರ್ ಅವರು ತಮ್ಮ ಪ್ರಾಣವನ್ನೇ ತ್ಯಜಿಸಿದರು. ಹೀಗಾಗಿ ನಾವು ರಸ್ತೆಗಳಿಗೆ ಔರಂಗಜೇಬನ ಹೆಸರಿಡುವುದು ಹಾಗೂ ವಿದ್ಯಾರ್ಥಿಗಳ ಇತಿಹಾಸ ಪುಸ್ತಕದಲ್ಲಿ ಆತನ ಪಠ್ಯ ಇರುವುದನ್ನು ವಿರೋಧಿಸುತ್ತೇವೆ. ಆತ ಒಬ್ಬ ಹಂತಕ, ಆತನ ಹೆಸರನ್ನು ರಸ್ತೆಗಳಿಗೆ ಇಡುವುದರಿಂದ ನಮ್ಮ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೆಲ ದಿನಗಳ ಹಿಂದೆ ಬೆಂಗಾಳಿ ಮಾರುಕಟ್ಟೆಯ ಬಾಬರ್ ರಸ್ತೆಯ ಹೆಸರಿಗೆ ಹಿಂದೂ ಸೇನೆಯವರು ಕಪ್ಪು ಬಣ್ಣ ಬಳಿದಿದ್ದರು. ರಸ್ತೆಯ ಹೆಸರನ್ನು ಬದಲಿಸುವಂತೆ ಸಂಘಟನೆಯು ಒತ್ತಾಯಿಸಿತ್ತು.

    ದಕ್ಷಿಣ ಭಾರತದ ಕರ್ನಾಟಕದಲ್ಲಿ ಟಿಪ್ಪು ವಿರುದ್ಧ ಹೋರಾಟ ನಡೆಯುತ್ತಿದ್ದರೆ, ಉತ್ತರ ಭಾರತದಲ್ಲಿ ಔರಂಗಜೇಬನ ಕುರಿತು ಅಸಮಾಧಾನ ಎದ್ದಿದೆ. ಟಿಪ್ಪು ಜಯಂತಿಯನ್ನು ಸರ್ಕಾರ ನಿಲ್ಲಿಸಿದ್ದು, ಆತನ ಬಗ್ಗೆ ಇರುವ ಪಠ್ಯವನ್ನೂ ಪುಸ್ತಕದಿಂದ ತೆಗೆಯಬೇಕು ಎಂದು ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ.

  • ಮೋದಿ ಆಧುನಿಕ ಔರಂಗಜೇಬ್: ಸಂಜಯ್ ನಿರುಪಮ್

    ಮೋದಿ ಆಧುನಿಕ ಔರಂಗಜೇಬ್: ಸಂಜಯ್ ನಿರುಪಮ್

    ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ಔರಂಗಜೇಬ್ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.

    ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕಾರಿಡಾರ್ ಯೋಜನೆಗಾಗಿ ನಗರದಲ್ಲಿದ್ದ ನೂರಾರು ದೇವಸ್ಥಾನಗಳನ್ನು ನಾಶ ಮಾಡಿದ್ದಾರೆ. ಮೊಘಲ್ ಚಕ್ರವರ್ತಿ ಔರಂಗಜೇಬ್ ಕೂಡ ಅನೇಕ ಹಿಂದೂ ದೇವಸ್ಥಾನಗಳನ್ನು ನಾಶ ಮಾಡಿದ್ದ. ಈ ಹಿಂದೆ ಔರಂಗಜೇಬ್ ಮಾಡಿದ್ದನ್ನು ಮೋದಿ ಈಗ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಬಾಬಾ ವಿಶ್ವನಾಥ ದೇವಸ್ಥಾನ ಪ್ರವೇಶಕ್ಕೆ ಹಾಗೂ ದೇವರ ದರ್ಶನ ಪಡೆಯಲು 500 ರೂ. ಶುಲ್ಕ ನಿಗದಿ ಮಾಡಿದ್ದಾರೆ. ಔರಂಗಜೇಬ್ ಮಾಡದೇ ಇರುವುದನ್ನು ನರೇಂದ್ರ ಮೋದಿ ಮಾಡುತ್ತಿದ್ದಾರೆ. ಹಿಂದೂಗಳ ಮೇಲೆ ಔರಂಗಜೇಬ್ ದರ್ಪ ಮೆರೆದ, ಶೋಷಣೆ ಮಾಡಿದ. ಈಗ ಅದನ್ನು ಮೋದಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

    ಪ್ರಧಾನಿ ಮೋದಿ ದುರ್ಯೋಧನ ಇದ್ದಂತೆ ಎಂದು ಉತ್ತರ ಪ್ರದೇಶ ಪೂರ್ವದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ನಿನ್ನೆಯಷ್ಟೇ ಹೇಳಿದ್ದರು. ಹರ್ಯಾಣದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ್ದ ಅವರು, ಭಾರತದ ನೆಲದಲ್ಲಿ ಅಹಂಕಾರದಿಂದ ನಡೆದುಕೊಳ್ಳುವ ವ್ಯಕ್ತಿಗಳಿಗೆ ತಕ್ಕ ಶಿಕ್ಷೆಯಾಗಿದೆ. ಮಹಾಭಾರತದಲ್ಲಿ ದುರ್ಯೋಧನ ಅಹಂಕಾರದಿಂದ ನಡೆದುಕೊಂಡ. ಕೃಷ್ಣ ಸಂಧಾನಕ್ಕೆ ಬಂದರೂ ಒಪ್ಪಲಿಲ್ಲ. ಕೊನೆಗೆ ದುರ್ಯೋಧನ ನಾಶವಾಗಿ ಹೋದ. ದುರ್ಯೋಧನ ರೀತಿಯಲ್ಲಿಯೇ ಮೋದಿಯವರು ಕೂಡ ಅಹಂಕಾರದಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.

  • ಮೇಜರ್ ಆದಿತ್ಯ ಕುಮಾರ್, ರೈಫಲ್‍ಮ್ಯಾನ್ ಔರಂಗಜೇಬ್‍ಗೆ ಶೌರ್ಯ ಚಕ್ರ ಪುರಸ್ಕಾರ

    ಮೇಜರ್ ಆದಿತ್ಯ ಕುಮಾರ್, ರೈಫಲ್‍ಮ್ಯಾನ್ ಔರಂಗಜೇಬ್‍ಗೆ ಶೌರ್ಯ ಚಕ್ರ ಪುರಸ್ಕಾರ

    ನವದೆಹಲಿ: ಬುಧವಾರ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಭಾಗವಾಗಿ ನೀಡುವ ಮರಣೋತ್ತರ ಶೌರ್ಯ ಪ್ರಶಸ್ತಿಯ ಗೌರವಕ್ಕೆ ಮೇಜರ್ ಆದಿತ್ಯ ಕುಮಾರ್, ರೈಫಲ್‍ಮ್ಯಾನ್ ಔರಂಗಜೇಬ್ ಪಾತ್ರರಾಗಿದ್ದಾರೆ.

    ಜಮ್ಮು ಕಾಶ್ಮೀರದಲ್ಲಿ ಸೇವೆಗೆ ನಿಯೋಜನೆಗೊಂಡು ಅಪ್ರತಿಮ ಸಾಧನೆ ತೋರಿದ ಹಿನ್ನೆಲೆಯಲ್ಲಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜನವರಿ 27 ರಂದು ನಡೆದ ಕಲ್ಲು ತೂರಾಟ ಘಟನೆಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದರು. ಈ ವೇಳೆ ಮೇಜರ್ ಆದಿತ್ಯನಾಥ್ ಅವರು ಆರೋಪ ಎದುರಿಸಿದ್ದರು. ಬಳಿಕ ಅವರ ಹೆಸರು ಎಫ್‍ಐಆರ್ ನಲ್ಲಿ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿತ್ತು.

    ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ರೈಫಲ್ ಮ್ಯಾನ್ ಔರಂಗಜೇಬ್‍ರನ್ನು ಉಗ್ರರು ಅಪರಹಣ ಮಾಡಿ ಹತ್ಯೆ ಮಾಡಿದ್ದರು. ರಂಜಾನ್ ಹಬ್ಬಕ್ಕೆ ರಜೆಗೆ ತೆರಳಿದ್ದ ವೇಳೆ ಔರಂಗಜೇಬ್‍ರನ್ನು ಅಪರಹಣ ಮಾಡಲಾಗಿತ್ತು.

    ಔರಂಗಜೇಬ್ ಅವರು ಲೈಟ್ ಇನ್‍ಫ್ಯಾಂಟ್ರಿನ್ ನಾಲ್ಕನೇ ಪಡೆಗೆ ಸೇರಿದ್ದರು. ಈ ಪಡೆಯನ್ನು ಕಾಶ್ಮೀರದ ಶೋಪಿಯಾನ್ ಶಾದಿಮಾರ್ಗ್ ನಲ್ಲಿ ನೀಯೋಜಿಸಲಾಗಿತ್ತು. ಅಲ್ಲದೇ ಈ ಪಡೆಯಲ್ಲಿ ಮೇಜರ್ ರೋಹಿತ್ ಶುಕ್ಲಾ ಇದ್ದು, ಹಿಜ್ಜುಲ್ ಮಜಾಹಿದೀನ್ ಉಗ್ರ ಸಮೀರ್ ಟೈಗರ್ ನನ್ನು ಎನ್‍ಕೌಂಟರ್ ಮಾಡಿತ್ತು. ಈ ದಾಳಿಯ ಪ್ರತಿಕಾರವಾಗಿಯೇ ಅಪಾರ ಶಸ್ತ್ರ ಹೊಂದಿದ್ದ ಉಗ್ರ ತಂಡ ಔರಂಗಬೇಜ್‍ರನ್ನು ಅಪಹರಣ ಮಾಡಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv