Tag: ಕಂಚು

  • ಉದ್ಘಾಟನೆಗೊಳ್ಳದ ರಾಯಣ್ಣನ ಫೈಬರ್ ಮೂರ್ತಿ ತೆರವು ಮಾಡಿ ಕಂಚಿನ ಪುತ್ಥಳಿ ನಿರ್ಮಾಣ: ನಾರಾ ಭರತ್ ರೆಡ್ಡಿ

    ಉದ್ಘಾಟನೆಗೊಳ್ಳದ ರಾಯಣ್ಣನ ಫೈಬರ್ ಮೂರ್ತಿ ತೆರವು ಮಾಡಿ ಕಂಚಿನ ಪುತ್ಥಳಿ ನಿರ್ಮಾಣ: ನಾರಾ ಭರತ್ ರೆಡ್ಡಿ

    ಬಳ್ಳಾರಿ: ಈಗಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿಯು (Sangolli Rayanna Statue) ಫೈಬರ್‌ನಿಂದ ತಯಾರಿಸಲಾಗಿದ್ದು, ಇದನ್ನು ತೆರವುಗೊಳಿಸಿ ನೂತನ ಕಂಚಿನ ಪುತ್ಥಳಿಯನ್ನು ನಿರ್ಮಿಸಿ ಸ್ಥಾಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ (Nara Bharath Reddy) ಹೇಳಿದರು.

    ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಎದುರು ಇರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ನಂತರ ಸಮುದಾಯದ ಮುಖಂಡರು ಹಾಗೂ ವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ಹೋರಾಟ ಸಮಿತಿಯ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್ NIAಗೆ ಇಲ್ಲ – ಸಿಎಂ ಪರೋಕ್ಷ ಹೇಳಿಕೆ

     

    ಈ ಹಿಂದೆ ರಾಯಣ್ಣನ ಪ್ರತಿಮೆ ಸ್ಥಾಪನೆ ವೇಳೆ ಸರ್ಕಾರ ಹಾಗೂ ಕಾನೂನಾತ್ಮಕ ಅನುಮತಿಗಳನ್ನು ಪಡೆಯಲಾಗಿರಲಿಲ್ಲ, ಹೀಗಾಗಿ ಪುತ್ಥಳಿಯ ಅನಾವರಣ ಕಾರ್ಯ ನೆನೆಗುದಿಗೆ ಬಿದ್ದಿತ್ತು, ಸಮುದಾಯದ ಮುಖಂಡರ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಗಮನಕ್ಕೆ ತಂದು, ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಅನುಮತಿ ದೊರಕಿಸಿ ಕೊಟ್ಟಿದ್ದೇವೆ ಎಂದರು. ಇದನ್ನೂ ಓದಿ:  ಖಾಸಗಿ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯಿಂದ ಬಿಮ್ಸ್‌ನಲ್ಲಿ ರೋಗಿಗಳಿಗೆ ಚಿಕಿತ್ಸೆ!

    ಪುತ್ಥಳಿಯ ಸ್ಥಾಪನೆ ವಿಚಾರದಲ್ಲಿ ನನ್ನೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್, ಮಾಜಿ ಸಚಿವ ಬಿ.ನಾಗೇಂದ್ರ ಅವರು ಕೂಡ ಸರ್ಕಾರದ ಮೇಲೆ ಒತ್ತಡ ತಂದು ಈ ಕಾರ್ಯವನ್ನು ಸಾಧ್ಯವಾಗಿಸಿದ್ದಾರೆ. ಸಮುದಾಯದ ಪರ ಅವರಿಗೂ ಧನ್ಯವಾದ ಸಲ್ಲಿಸುವೆ. ಈಗಿರುವ ಪುತ್ಥಳಿಯು ಫೈಬರ್ ನಿಂದ ತಯಾರಿಸಲಾಗಿದ್ದು, ಈ ಪುತ್ಥಳಿಯನ್ನು ತೆರವುಗೊಳಿಸಲಾಗುವುದು ಎಂದು ಹೇಳಿದ ಶಾಸಕ ನಾರಾ ಭರತ್ ರೆಡ್ಡಿ, ರಾಯಣ್ಣನ ನೂತನ ಕಂಚಿನ ಪ್ರತಿಮೆಯನ್ನು ನಿರ್ಮಿಸಿ, ಇದೇ ಜಾಗದಲ್ಲಿ ಸ್ಥಾಪಿಸಿ, ಅನಾವರಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

    ಈ ಸಂದರ್ಭ ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ, ಕುರುಬರ ಸಂಘದ ಜಿಲ್ಲಾಧ್ಯಕ್ಷ ಡಾ.ಗಾದಿಲಿಂಗನಗೌಡ, ಮಾಜಿ ಮೇಯರ್ ಎಂ.ರಾಜೇಶ್ವರಿ, ಮಾಜಿ ಉಪ ಮೇಯರ್ ಬೆಣಕಲ್ ಬಸವರಾಜಗೌಡ, ಹೋರಾಟ ಸಮಿತಿಯ ಇಟ್ಟಂಗಿ ಭಟ್ಟಿ ಯರಿಸ್ವಾಮಿ, ಕೆ.ಮೋಹನ್, ಸುಬ್ಬರಾಯುಡು, ಬೆಣಕಲ್ ಮಂಜುನಾಥ, ಕೆ.ಯಶೋಧಾ, ಕೊಳಗಲ್ ಅಂಜಿನಿ, ಸುರೇಂದ್ರಗೌಡ, ಕವಿತಾ ಸೇರಿದಂತೆ ಹಲವರು ಇದ್ದರು.

  • 1 ಕೆಜಿ ಜಾಸ್ತಿ ಎತ್ತಿದ್ದರೆ ಪದಕ – ಮೀರಾಬಾಯಿ ಚಾನುಗೆ ಕಂಚು ಜಸ್ಟ್‌ ಮಿಸ್‌!

    1 ಕೆಜಿ ಜಾಸ್ತಿ ಎತ್ತಿದ್ದರೆ ಪದಕ – ಮೀರಾಬಾಯಿ ಚಾನುಗೆ ಕಂಚು ಜಸ್ಟ್‌ ಮಿಸ್‌!

    ಪ್ಯಾರಿಸ್‌: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದು ಪದಕದ ನಿರೀಕ್ಷೆ ಮೂಡಿಸಿದ್ದ ಭಾರತದ (India) ಖ್ಯಾತ ವೇಟ್‌ ಲೀಫ್ಟರ್‌ ಮೀರಾಬಾಯಿ ಚಾನು (Mirabai Chanu) ಅವರಿಗೆ ಕಂಚಿನ ಪದಕ ಜಸ್ಟ್‌ ಮಿಸ್‌ ಆಗಿದೆ. ಮಹಿಳೆಯರ 49 ಕೆಜಿ ವಿಭಾಗದಲ್ಲಿ ಒಟ್ಟು 199 ಕೆಜಿ (88+111) ಎತ್ತುವ ಮೂಲಕ ನಾಲ್ಕನೇ ಸ್ಥಾನ ಪಡೆದಿದರು.

    ಸ್ನ್ಯಾಚ್‌ನ ಮೊದಲ ಯತ್ನದಲ್ಲಿ 85 ಕೆಜಿಯನ್ನು ಸುಲಭವಾಗಿ ಎತ್ತಿದ ಅವರು ಎರಡನೇ ಪ್ರಯತ್ನದಲ್ಲಿ 88 ಕೆ.ಜಿ ತೂಕವನ್ನು ಎತ್ತುವಲ್ಲಿ ವಿಫಲರಾದರು. ಮೂರನೇ ಪ್ರಯತ್ನದಲ್ಲಿ 88 ಕೆ.ಜಿಗಳ ಬೆಸ್ಟ್ ಲಿಫ್ಟ್ ಮೂಲಕ ಕಂಚಿನ ಪದಕದ ಸ್ಥಾನದಲ್ಲಿದ್ದರು.  ಇದನ್ನೂ ಓದಿ: ತಲೆಗೂದಲು ಕಟ್‌, ರಕ್ತ ಹೊರತೆಗೆತ, ಕಠಿಣ ವ್ಯಾಯಾಮ, ಆಹಾರದಿಂದ ದೂರ – ತೂಕ ಇಳಿಸಲು ಏನೆಲ್ಲಾ ಮಾಡಿದ್ರು ವಿನೇಶ್‌?

    ಕ್ಲೀನ್‌ ಆಂಡ್‌ ಜರ್ಕ್‌ನಲ್ಲಿ ಮೊದಲ ಯತ್ನದಲ್ಲಿ 111 ಕೆಜಿ ಎತ್ತಲು ಮೀರಾಬಾಯ ಮುಂದಾಗಿದ್ದರು. ಆದರೆ ಮೊದಲ ಪ್ರಯತ್ನದಲ್ಲಿ ವಿಫಲರಾಗಿದ್ದರು. ಎರಡನೇ ಪ್ರಯತ್ನದಲ್ಲಿ 111 ಕೆಜಿ ಎತ್ತುವಲ್ಲಿ ಸಫಲರಾದರು. ಆದರೆ ಪ್ರತಿಸ್ಪರ್ಧಿಗಳು ಹೆಚ್ಚಿನ ಭಾರ ಎತ್ತಿದ ಪರಿಣಾಮ ಮೀರಾಬಾಯಿ ಚಾನು ನಾಲ್ಕನೇ ಸ್ಥಾನ ಪಡೆದರು. ಅಂತಿಮವಾಗಿ ಕ್ಲೀನ್ ಮತ್ತು ಜರ್ಕ್ ನಲ್ಲಿ 111 ಹಾಗೂ ಸ್ನ್ಯಾಷ್ ನಲ್ಲಿ 88 ಕೆಜಿ ಸೇರಿಸಿ ಒಟ್ಟು 199 ಕೆ.ಜಿ ಲಿಫ್ಟ್ ಮಾಡಿದರು.

    ಚೀನಾದ ವೇಟ್‌ ಲಿಫ್ಟರ್‌ ಜಿಹುಯಿ ಅವರು 206 ಕೆಜಿ ಎತ್ತಿ ನೂತನ ಒಲಿಂಪಿಕ್ಸ್ ದಾಖಲೆಯನ್ನು ಬರೆದರು. ಇವರು ಸ್ನ್ಯಾಷ್‌ ಒಟ್ಟು 89 ಎತ್ತಿದ್ದರು. ಅಲ್ಲದೆ ಇವರು ಕ್ಲೀನ್‌ ಆಂಡ್‌ ಜರ್ಕ್‌ನಲ್ಲಿ 117 ಕೆ.ಜಿ ಭಾರವನ್ನು ಎತ್ತಿದರು.  ರೊಮೇನಿಯಾದ ವ್ಯಾಲಂಟಿನಾ 205 ಕೆಜಿ ಎತ್ತಿದರೆ ಥಾಯ್ಲೆಂಡಿನ ಸುರೋದ್ಚನಾ 200 ಕೆಜಿ ಎತ್ತಿ ಮೂರನೇ ಸ್ಥಾನ ಪಡೆದರು.

     

  • CWG 2022: ನಡಿಗೆ, ಜಾವೆಲಿನ್‌ನಲ್ಲಿ ಭಾರತಕ್ಕೆ ಕಂಚು

    CWG 2022: ನಡಿಗೆ, ಜಾವೆಲಿನ್‌ನಲ್ಲಿ ಭಾರತಕ್ಕೆ ಕಂಚು

    ಲಂಡನ್: 22ನೇ ಕಾಮನ್‌ವೆಲ್ತ್ ಕ್ರಿಡಾಕೂಟ ಪ್ರಾರಂಭವಾಗಿ ಇಂದು 10ನೇ ದಿನವಾಗಿದ್ದು, ಭಾರತೀಯ ಕ್ರೀಡಾಪಟುಗಳು ಒಂದಾದಮೇಲೊಂದರಂತೆ ಪದಕಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಇದೀಗ ಪುರುಷರ ನಡಿಗೆ ಸ್ಪರ್ಧೆಯಲ್ಲಿ ಸಂದೀಪ್ ಕುಮಾರ್ ಹಾಗೂ ಮಹಿಳೆಯರ ಜಾವೆಲಿನ್ ಸ್ಪರ್ಧೆಯಲ್ಲಿ ಅನು ರಾಣಿ ಕಂಚನ್ನು ಗೆದ್ದಿದ್ದಾರೆ.

    ಸಂದೀಪ್ ಕುಮಾರ್ ಅವರು ಪುರುಷರ 10,000 ಮೀ. ಫೈನಲ್ ವಾಕ್ ರೇಸ್‌ನಲ್ಲಿ ಕಂಚಿನ ಪದಕವನ್ನು ಪಡೆದಿದ್ದಾರೆ. ಭಾರತವನ್ನು ಪ್ರತಿನಿಧಿಸಿದ ಸಂದೀಪ್ ಕಾಮನ್‌ವೆಲ್ತ್ ಗೇಮ್ಸ್ 2022ರ ಅಥ್ಲೆಟಿಕ್ಸ್‌ನಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಇದನ್ನೂ ಓದಿ: CWG 2022: ಟ್ರಿಪಲ್ ಜಂಪ್‍ನಲ್ಲಿ ಡಬಲ್ ಧಮಾಕ – ಎಲ್ದೋಸ್ ಪೌಲ್‍ಗೆ ಚಿನ್ನ, ಅಬ್ದುಲ್ಲಾ ಅಬೂಬಕರ್‌ಗೆ ಬೆಳ್ಳಿ

    ಶನಿವಾರವಷ್ಟೇ ಮಹಿಳೆಯರ ನಡಿಗೆ ಸ್ಪರ್ಧೆಯಲ್ಲಿ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ಗೆದ್ದಿದ್ದರು. ಇಂದು ಪುರುಷರ ನಡಿಗೆ ಸ್ಪರ್ಧೆಯಲ್ಲಿ ಸಂದೀಪ್ ಕುಮಾರ್ 10,000 ಮೀ. ಅನ್ನು ಕೇವಲ 28:49.21 ಸಮಯದಲ್ಲಿ ಕ್ರಮಿಸಿ ಕಂಚನ್ನು ಬಾಚಿಕೊಂಡಿದ್ದಾರೆ.

    ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್ ಎಸೆತದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಅನು ರಾಣಿ ಪಾತ್ರರಾಗಿದ್ದಾರೆ. 60 ಮೀ. ದೂರಕ್ಕೆ ಜಾವೆಲಿನ್ ಎಸೆದ ಅನು ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದನ್ನೂ ಓದಿ: CWG-2022: ಭಾರತಕ್ಕೆ ಚಿನ್ನದ ಕಿಕ್ ಕೊಟ್ಟ ಬಾಕ್ಸರ್ಸ್, ಸಿಂಧು ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    Live Tv
    [brid partner=56869869 player=32851 video=960834 autoplay=true]

  • 355 ಕೆಜಿ ವೇಟ್ ಲಿಫ್ಟ್ ಮಾಡಿ ಕಂಚಿನ ಪದಕ ಗೆದ್ದ ಲವ್‌ಪ್ರೀತ್ ಸಿಂಗ್

    355 ಕೆಜಿ ವೇಟ್ ಲಿಫ್ಟ್ ಮಾಡಿ ಕಂಚಿನ ಪದಕ ಗೆದ್ದ ಲವ್‌ಪ್ರೀತ್ ಸಿಂಗ್

    ಲಂಡನ್: ಕಾಮನ್‍ವೆಲ್ತ್ ಗೇಮ್ಸ್‌ನ ಪುರುಷರ 109 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್‍ನಲ್ಲಿ ಭಾರತದ ಲವ್‌ಪ್ರೀತ್ ಸಿಂಗ್ ಒಟ್ಟು 355 ಕೆಜಿ ವೇಟ್ ಲಿಫ್ಟ್ ಮಾಡಿ ಕಂಚಿನ ಪದಕ ಗೆದ್ದಿದ್ದಾರೆ.

    ಲವ್‌ಪ್ರೀತ್ ಸಿಂಗ್ ಸ್ನ್ಯಾಚ್‍ನಲ್ಲಿ 163 ಕೆಜಿ ಮತ್ತು ಕ್ಲೀನ್ & ಜರ್ಕ್‍ನಲ್ಲಿ 192 ಕೆಜಿ ಸೇರಿ ಒಟ್ಟು 355 ಕೆಜಿ ಭಾರ ಎತ್ತಿ ಮೂರನೇ ಸ್ಥಾನ ಪಡೆದು ಕಂಚಿನ ಪದಕಕ್ಕೆ ಮುತ್ತಿಕ್ಕಿದರು. ಈ ಪದಕದೊಂದಿಗೆ ಭಾರತ ವೇಟ್ ಲಿಫ್ಟಿಂಗ್‍ನಲ್ಲಿ ಒಟ್ಟು 9ನೇ ಪದಕ ಗೆದ್ದುಕೊಂಡಿದೆ. ಇದನ್ನೂ ಓದಿ: CWG 2022: ಲಾನ್ ಬಾಲ್ಸ್‌ನಲ್ಲಿ ಚಿನ್ನ – ವರ್ಕೌಟ್ ಆಯ್ತು ಧೋನಿ ಟಿಪ್ಸ್!

    ಈ ಮೂಲಕ ಭಾರತ ಒಟ್ಟು 5 ಚಿನ್ನ, 5 ಬೆಳ್ಳಿ, 4 ಕಂಚಿನ ಪದಕ ಸೇರಿ ಒಟ್ಟು 14 ಪದಕ ಗೆದ್ದುಕೊಂಡು 6ನೇ ಸ್ಥಾನದಲ್ಲಿದೆ. ಈ ಬಾರಿ ಕಾಮನ್‍ವೇಲ್ತ್ ಗೇಮ್ಸ್‌ನಲ್ಲಿ ಒಟ್ಟು 9 ಪದಕ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಸಿಕ್ಕಿದೆ. ಈ ಮೊದಲು ಮೀರಾಬಾಯಿ ಚಾನು, ಜೆರೆಮಿ ಲಾಲ್ರಿನ್ನುಂಗಾ, ಅಚಿಂತಾ ಶೆಯುಲಿ, ಸಂಕೇತ್ ಸರ್ಗರ್, ಬಿಂದ್ಯಾರಾಣಿ ರಾಣಿ, ಗುರುರಾಜ್ ಪೂಜಾರಿ, ಹಜಿರ್ಂದರ್ ಕೌರ್, ವಿಕಾಸ್ ಪದಕ ಗೆದ್ದಿದ್ದರು. ಇದನ್ನೂ ಓದಿ: ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಬೆಳ್ಳಿ ಗೆದ್ದ ಪ್ರಿಯಾ ಮೋಹನ್‍ಗೆ 5 ಲಕ್ಷ ನಗದು ಪುರಸ್ಕಾರ: ನಾರಾಯಣಗೌಡ

    Live Tv
    [brid partner=56869869 player=32851 video=960834 autoplay=true]

  • ಡಿಸ್ಕಸ್ ಥ್ರೋ ಬೆಳ್ಳಿ ಪದಕ ಗೆದ್ದ ಯೋಗೇಶ್ ಕಥುನಿಯಾ

    ಡಿಸ್ಕಸ್ ಥ್ರೋ ಬೆಳ್ಳಿ ಪದಕ ಗೆದ್ದ ಯೋಗೇಶ್ ಕಥುನಿಯಾ

    ಟೋಕಿಯೋ: ಪ್ಯಾರಾಲಂಪಿಕ್ಸ್ ಪುರುಷರ ಡಿಸ್ಕಸ್ ಥ್ರೋ ಎಫ್ 56 ವಿಭಾಗದಲ್ಲಿ ಭಾರತದ ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ.

    24 ವರ್ಷದ ಯೋಗೇಶ್ ಕಥುನಿಯಾ ಪ್ಯಾರಾಲಂಪಿಕ್ಸ್ ಪುರುಷರ ಡಿಸ್ಕಸ್ ಥ್ರೋ ಎಫ್ 56 ವಿಭಾಗದಲ್ಲಿ 44.38 ಮೀಟರ್ ಎಸೆತದೊಂದಿಗೆ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಭಾರತಕ್ಕೆ ಐದನೇ ಪದಕ ತಂದುಕೊಟ್ಟಿದ್ದಾರೆ. ಈ ಹಿಂದೆ ದುಬೈನಲ್ಲಿ ನಡೆದಿದ್ದ ವಲ್ರ್ಡ್ ಪ್ಯಾರಾ ಅಥ್ಲಿಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಕಂಚು ಗೆದ್ದಿದ್ದರು.  ಇದನ್ನೂ ಓದಿ: ಶೂಟಿಂಗ್‍ನಲ್ಲಿ ಚಿನ್ನ ಗೆದ್ದ ಅವನಿ ಲೇಖರಾ

    ಯೋಗೇಶ್ ಕಥುನಿಯಾ ಸಾಧನೆಗೆ ಪ್ರಧಾನಿ ಮೋದಿ ಟ್ವಿಟ್ಟರ್‍ ನಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ನಿನ್ನೆ ವಿನೋದ್ ಕುಮಾರ್ ಡಿಸ್ಕಸ್ ಥ್ರೋನ ಎಫ್ 52 ವಿಭಾಗದಲ್ಲಿ 19.91 ಮೀಟರ್ ಎಸೆದು ಬೆಳ್ಳಿ ಪದಕ ಗೆದ್ದು ವಿಶ್ವ ದಾಖಲೆ ಸರಿದೂಗಿಸಿದ್ದರು. ಆದರೆ ಅವರ ಪದಕಕ್ಕೆ ತಡೆ ಹಿಡಿಯಲಾಗಿದ್ದು ಇಂದು ಅಧಿಕೃತ ಘೋಷಣೆ ಹೊರಬರಲಿದೆ. ಇದನ್ನೂ ಓದಿ: ಡಿಸ್ಕಸ್ ಥ್ರೋ ವಿನೋದ್ ಕುಮಾರ್ ಕಂಚಿನ ಪದಕಕ್ಕೆ ತಡೆ

    ಟೋಕಿಯೋ 2020 ಪ್ಯಾರಾಲಿಂಪಿಕ್ಸ್‍ನಲ್ಲಿ ಭಾರತವು ಇದುವರೆಗೆ 1 ಚಿನ್ನ, 3 ಬೆಳ್ಳಿ, 1 ಕಂಚಿನ ಪದಕ ಗೆದ್ದಿದೆ. ಇದನ್ನೂ ಓದಿ: ಪ್ಯಾರಾಲಂಪಿಕ್ಸ್‌ನಲ್ಲಿ ಬೆಳ್ಳಿ ಪದಕ – ಇತಿಹಾಸ ನಿರ್ಮಿಸಿದ ಭವಿನಾಬೆನ್ ಪಟೇಲ್

  • ಡಿಸ್ಕಸ್ ಥ್ರೋ ವಿನೋದ್ ಕುಮಾರ್ ಕಂಚಿನ ಪದಕಕ್ಕೆ ತಡೆ

    ಡಿಸ್ಕಸ್ ಥ್ರೋ ವಿನೋದ್ ಕುಮಾರ್ ಕಂಚಿನ ಪದಕಕ್ಕೆ ತಡೆ

    ಟೋಕಿಯೋ: ಪ್ಯಾರಾಲಂಪಿಕ್ಸ್ ಪುರುಷರ ಡಿಸ್ಕಸ್ ಥ್ರೋ ಎಫ್ 52 ವಿಭಾಗದಲ್ಲಿ ಭಾರತದ ವಿನೋದ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ. ಆದರೆ ಫಲಿತಾಂಶ ಘೋಷಣೆ ತಡೆ ಹಿಡಿಯಲಾಗಿದೆ.

    ವಿನೋದ್ ಕುಮಾರ್ 19.91 ಮೀಟರ್ ಅತ್ಯುತ್ತಮ ಎಸೆತದೊಂದಿಗೆ ಕಂಚಿನ ಪದಕ ಗೆದ್ದಿದ್ದರು. ಈ ಮೂಲಕ ವಿನೋದ್ ಕುಮಾರ್ ಏಷ್ಯನ್ ದಾಖಲೆಯನ್ನು ನಿರ್ಮಿಸಿದ್ದರು. ಆದರೆ ಇವರ ಪದಕದ ವಿಜಯಕ್ಕೆ ಇತರ ದೇಶದ ಸ್ಪರ್ಧಿಗಳು ಆಕ್ಷೇಪ ವ್ಯಕ್ತಪಡಿಸಿರುವುದರಿಂದಾಗಿ ಫಲಿತಾಂಶಕ್ಕೆ ತಡೆ ಬಿದ್ದಿದೆ. ಇದನ್ನೂ ಓದಿ: ಪ್ಯಾರಾಲಂಪಿಕ್ಸ್‌ನಲ್ಲಿ ಬೆಳ್ಳಿ ಪದಕ – ಇತಿಹಾಸ ನಿರ್ಮಿಸಿದ ಭವಿನಾಬೆನ್ ಪಟೇಲ್

    ಇತರ ದೇಶದ ಸ್ಪರ್ಧಿಗಳ ಆಕ್ಷೇಪದ ಪ್ರಕಾರ ವಿನೋದ್ ಎಫ್52 ವಿಭಾಗದಲ್ಲಿ ಸ್ಪರ್ಧಿಸುವ ಅವಕಾಶ ಹೊಂದಿರಲಿಲ್ಲ. ಆದರೆ ಪ್ಯಾರಾಲಂಪಿಕ್ಸ್ ಸಮಿತಿ ಹೇಳಿರುವ ಪ್ರಕಾರ ದುರ್ಬಲ ಮಾಂಸ ಖಂಡಗಳಿರುವವರು, ನಿಧಾನಗತಿಯ ಚಲನೆ ಹೊಂದಿರುವವರು ಮತ್ತು ಕಾಲಿನಲ್ಲಿ ಸಮತೋಲನ ಶಕ್ತಿ ಇಲ್ಲದವರು ಭಾಗವಹಿಸಬಹುದು ಎಂದಿತ್ತು. ಹಾಗಾಗಿ ವಿನೋದ್ ಅವರು ಸ್ಪರ್ಧಿಸಿದ್ದರು.

    ಟೋಕಿಯೋ 2020 ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತವು ಇದುವರೆಗೆ 2 ಪದಕಗಳನ್ನು ಗೆದ್ದಿದೆ. ಮೂರನೇ ಪದಕ ಗೆದ್ದಿದ್ದರೂ ಕೂಡ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದುಕೊಂಡಿದೆ. ಇದನ್ನೂ ಓದಿ: ಪ್ಯಾರಾಲಂಪಿಕ್‍ನಲ್ಲಿ ಹೈ ಜಂಪ್‍ನಲ್ಲಿ ಗೆದ್ದ ನಿಶಾದ್ ಕುಮಾರ್‌ – ಪ್ರಧಾನಿ ಮೋದಿ ವಿಶ್

  • ಟೋಕಿಯೋ ಕುಸ್ತಿಯಲ್ಲಿ ಭಜರಂಗ್ ಪುನಿಯಗೆ ಕಂಚಿನ ಪದಕ

    ಟೋಕಿಯೋ ಕುಸ್ತಿಯಲ್ಲಿ ಭಜರಂಗ್ ಪುನಿಯಗೆ ಕಂಚಿನ ಪದಕ

    ಟೋಕಿಯೋ: ಒಲಿಂಪಿಕ್ಸ್ ಕುಸ್ತಿಯ 65 ಕೆ.ಜಿ ವಿಭಾಗದಲ್ಲಿ ಭಾರತದ ಕುಸ್ತಿಪಟು ಭಜರಂಗ್ ಪುನಿಯ ಕಂಚಿನ ಪದಕ ಗೆದ್ದ ಕಮಾಲ್ ಮಾಡಿದ್ದಾರೆ.

    ಕಂಚಿನ ಪದಕದ ಹೋರಾಟದಲ್ಲಿ ಕಜಿಕಿಸ್ತಾನದ ನಿಯಾಜ್ ಬೆಕೊವ್ ವಿರುದ್ಧ 8-0 ಅಂತರದ ಗೆಲುವಿನೊಂದಿಗೆ ಭಜರಂಗ್ ಪುನಿಯ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಇದನ್ನೂ ಓದಿ: 200 ರಿಂದ 4ನೇ ಸ್ಥಾನಕ್ಕೆ ಜಿಗಿತ – ಕೊನೆ ಕ್ಷಣದಲ್ಲಿ ಅದಿತಿಗೆ ತಪ್ಪಿತು ಪದಕ

    ಭಜರಂಗ್ ಪುನಿಯರ ಈ ಕಂಚಿನ ಪದಕದೊಂದಿಗೆ ಭಾರತ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಗೆದ್ದ ಪದಕಗಳ ಸಂಖ್ಯೆ 6ಕ್ಕೆ ಏರಿಕೆ ಕಂಡಿದೆ. ಈಗಾಗಲೇ ಭಾರತ 2 ಬೆಳ್ಳಿ 4 ಕಂಚು ಗೆದ್ದು ಕೂಟದಲ್ಲಿ ಮುನ್ನಡೆಯುತ್ತಿದೆ.

  • ಸೆಮಿಯಲ್ಲಿ ಲವ್ಲೀನಾಗೆ ಸೋಲು – ಭಾರತಕ್ಕೆ ಕಂಚು

    ಸೆಮಿಯಲ್ಲಿ ಲವ್ಲೀನಾಗೆ ಸೋಲು – ಭಾರತಕ್ಕೆ ಕಂಚು

    ಟೋಕಿಯೋ: ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಸೆಮಿಯಲ್ಲಿ ಸೋತಿದ್ದು, ಕಂಚಿನ ಪದಕವನ್ನು ಗೆದ್ದಿದ್ದಾರೆ.

    69 ಕೆಜಿ ವಿಭಾಗದಲ್ಲಿ ಟರ್ಕಿಯ ಬುಸೆನಾಜ್ ಸುರ್ ಮನೇಲಿ ವಿರುದ್ಧ ಲವ್ಲೀನಾ 0-5 ಅಂಕಗಳಿಂದ ಸೋತಿದ್ದಾರೆ. ಈ ಪಂದ್ಯ ಸೋತರೂ ಬಾಕ್ಸಿಂಗ್ ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಎಲ್ಲ ಸ್ಪರ್ಧಿಗಳಿಗೆ ಪದಕ ನೀಡುವ ಕಾರಣ ಲವ್ಲೀನಾ ಕಂಚಿನ ಪದಕಕ್ಕೆ ಪಾತ್ರರಾಗಿದ್ದಾರೆ.

    ಮೀರಾಬಾಯಿ ಚಾನು ಮತ್ತು ಪಿ.ವಿ. ಸಿಂಧು ಈಗಾಗಲೇ ಭಾರತಕ್ಕೆ ಬೆಳ್ಳಿ ಮತ್ತು ಕಂಚಿನ ಪದಕವನ್ನು ಗೆದ್ದಿದ್ದಾರೆ.

  • ಸಿಂಧುಗೆ ಜಯ – ಭಾರತಕ್ಕೆ ಕಂಚಿನ ಸಿಂಧೂರ

    ಸಿಂಧುಗೆ ಜಯ – ಭಾರತಕ್ಕೆ ಕಂಚಿನ ಸಿಂಧೂರ

    ಟೋಕಿಯೋ: ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಪಿವಿ ಸಿಂಧು ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಸತತ ಎರಡು ಒಲಿಂಪಿಕ್ಸ್ ನಲ್ಲಿ ಭಾರತದ ಪರ ಪದಕ ಪಡೆದ ಮೊದಲ  ಮಹಿಳಾ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ.

    ಇಂದು ನಡೆದ ಪಂದ್ಯದಲ್ಲಿ ಚೀನಾದ ಬಿಂಗ್ ಜಿಯಾವೋ ವಿರುದ್ಧ 21-13, 21-15 ನೇರ ಸೆಟ್‍ಗಳಿಂದ ಜಯಗಳಿಸಿ ಕಂಚಿನ ಪದಕ ಗೆದ್ದಿದ್ದಾರೆ. 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಸಿಂಧು ಫೈನಲ್ ನಲ್ಲಿ ಸೋತು ಬೆಳ್ಳಿ ಪದಕವನ್ನು ಗೆದ್ದಿದ್ದರು.

    ನಿನ್ನೆ ನಡೆದ ಪಂದ್ಯದಲ್ಲಿ ವಿಶ್ವದ ನಂಬರ್ 1 ಬ್ಯಾಡ್ಮಿಂಟನ್ ಆಟಗಾರ್ತಿ ತೈ ತ್ಸು ಯಿಂಗ್ ವಿರುದ್ಧ ಸಿಂಧು ಸೋಲನ್ನು ಅನುಭವಿಸಿದ್ದರು. ಇಂದು ಆರಂಭದಿಂದಲೇ ಭರ್ಜರಿ ಆಟ ಪ್ರದರ್ಶಿಸಿ ಎದುರಾಳಿಯನ್ನು ಸೋಲಿಸಿ ಭಾರತಕ್ಕೆ ಎರಡನೇ ಪದಕವನ್ನು ತಂದುಕೊಟ್ಟಿದ್ದಾರೆ. ಇದನ್ನೂ ಓದಿ : ಡಿಸ್ಕಸ್ ಥ್ರೋನಲ್ಲಿ ಕಮಲ್‍ಪ್ರೀತ್ ಅಚ್ಚರಿ- ಫೈನಲ್‍ಗೆ ಲಗ್ಗೆ

    ಪುರುಷರ 66 ಕೆಜಿ ಕುಸ್ತಿ ವಿಭಾಗದಲ್ಲಿ ಸುಶೀಲ್ ಕುಮಾರ್ 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಕಂಚು, 2012ರ ಲಂಡನ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.

  • ಏಷ್ಯನ್ ಓಪನ್ ಶಾರ್ಟ್ ಟ್ರ್ಯಾಕ್ ಸ್ಪೀಡ್ ಸ್ಕೇಟಿಂಗ್: ಅಶ್ವಿನ್ ಡಿಸಿಲ್ವಾಗೆ ಕಂಚು

    ಏಷ್ಯನ್ ಓಪನ್ ಶಾರ್ಟ್ ಟ್ರ್ಯಾಕ್ ಸ್ಪೀಡ್ ಸ್ಕೇಟಿಂಗ್: ಅಶ್ವಿನ್ ಡಿಸಿಲ್ವಾಗೆ ಕಂಚು

    ಮಂಗಳೂರು: ಇಂಡೊನೇಷ್ಯಾದ ಜಕಾರ್ತದಲ್ಲಿ ನಡೆದ ಪುರುಷರ ಜೂನಿಯರ್ ವಿಭಾಗದ 1,000 ಮೀಟರ್ ಏಷ್ಯನ್ ಓಪನ್ ಶಾರ್ಟ್ ಟ್ರ್ಯಾಕ್ ಸ್ಪೀಡ್ ಸ್ಕೇಟಿಂಗ್ ನಲ್ಲಿ ನಗರದ ಅಶ್ವಿನ್ ಕ್ಯಾಲೆನ್ ಡಿಸಿಲ್ವಾ ಕಂಚಿನ ಪದಕ ಪಡೆದಿದ್ದಾರೆ.

    ಅಶ್ವಿನ್ ಕ್ಯಾಲೆನ್ ಡಿಸಿಲ್ವಾ ಮಂಗಳೂರಿನ ಆಲ್ವಿನ್ ಮತ್ತು ಆಶಾ ಡಿಸಿಲ್ವಾ ದಂಪತಿಯ ಪುತ್ರನಾಗಿದ್ದಾರೆ. ಇದೇ ಡಿಸೆಂಬರ್ 1 ಮತ್ತು 2 ರಂದು ಜಕಾರ್ತದಲ್ಲಿ ನಡೆದ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಸ್ಪರ್ಧೆಯಲ್ಲಿ ಅಶ್ವಿನ್ ಕಂಚಿನ ಪದಕ ಗೆಲ್ಲುವ ಮೂಲಕ ಜನವರಿಯಲ್ಲಿ ಕೆನಡಾದಲ್ಲಿ ನಡೆಯಲಿರುವ ವರ್ಲ್ಡ್ ಜೂನಿಯರ್ ಚಾಂಪಿಯನ್ ಶಿಪ್ ಗೂ ಸಹ ಅರ್ಹತೆಯನ್ನು ಗಿಟ್ಟಿಸಿಕೊಂಡಿದ್ದಾರೆ.

    ಇದಲ್ಲದೇ ಫೆಬ್ರವರಿಯಲ್ಲಿ ಜರ್ಮನಿಯ ಡ್ರೆಸ್ಡೆನ್ ನಲ್ಲಿ ನಡೆಯಲಿರುವ ವರ್ಲ್ಡ್ ಕಪ್ ಚಾಂಪಿಯನ್ ಶಿಪ್ ನಲ್ಲಿಯೂ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv