Tag: ಕಂಟೇನರ್

  • ವಿಜಯಪುರದಲ್ಲಿ ಭೀಕರ ಅಪಘಾತ – ಐವರು ದುರ್ಮರಣ

    ವಿಜಯಪುರದಲ್ಲಿ ಭೀಕರ ಅಪಘಾತ – ಐವರು ದುರ್ಮರಣ

    ವಿಜಯಪುರ: ಟಿಯುವಿ ಕಾರು, ಕಂಟೇನರ್ ಹಾಗೂ ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಬಸವನ ಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿ ಪಟ್ಟಣದ ಬಳಿ ಎನ್‌ಹೆಚ್ 50ರಲ್ಲಿ ನಡೆದಿದೆ.

    ಭೀಕರ ಅಪಘಾತದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್‌ನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಇತರರಿಗೆ ಗಾಯಗಳಾಗಿವೆ. ಅಲ್ಲದೇ ಕಂಟೇನರ್‌ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಇದನ್ನೂ ಓದಿ: ಮನೆಯ ಒಳಗಡೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಲಷ್ಕರ್‌ ಉಗ್ರನಿಗೆ ಗುಂಡೇಟು!

    ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಈ ಬಾರಿ 1 ವಾರ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ?

  • ಕಂಟೇನರ್ ಡಿಕ್ಕಿ ಹೊಡೆದು ಈರುಳ್ಳಿ ಟೆಂಪೋ ಪಲ್ಟಿ – ಓರ್ವ ಸಾವು

    ಕಂಟೇನರ್ ಡಿಕ್ಕಿ ಹೊಡೆದು ಈರುಳ್ಳಿ ಟೆಂಪೋ ಪಲ್ಟಿ – ಓರ್ವ ಸಾವು

    – ಈರುಳ್ಳಿ ತುಂಬಿಕೊಳ್ಳಲು ಮುಗಿಬಿದ್ದ ಜನ

    ನೆಲಮಂಗಲ: ಹಿಂಬದಿಯಿಂದ ಕಂಟೇನರ್ (Container) ಡಿಕ್ಕಿ ಹೊಡೆದ ಪರಿಣಾಮ ಈರುಳ್ಳಿ ತುಂಬಿದ್ದ ಟೆಂಪೋ (Tempo) ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಬೆಂಗಳೂರು (Bengaluru) ಹೊರವಲಯದ ನೆಲಮಂಗಲದ (Nelamangala) ಅಂಚೆಪಾಳ್ಯದ (Anchepalya) ಬಳಿ ನಡೆದಿದೆ.

    ತುಮಕೂರು ಮಾರ್ಗವಾಗಿ ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ ಬರುತ್ತಿದ್ದ ಈರುಳ್ಳಿ ತುಂಬಿದ ಟೆಂಪೋಗೆ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಕಂಟೇನರ್ ಗುದ್ದಿದ ರಭಸಕ್ಕೆ ಟೆಂಪೋ ಪಲ್ಟಿಯಾಗಿದೆ. ಘಟನೆಯಲ್ಲಿ ಈರುಳ್ಳಿ ಟೆಂಪೋದಲ್ಲಿದ್ದ ಗಂಗಾಧರಪ್ಪ (55) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇಡೀ ವಿಶ್ವದಲ್ಲಿ ಜನರ ಖಾತೆಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು – ಯತೀಂದ್ರ

    ಮತ್ತೊಂದು ವಾಹನದ ಚಾಲಕ ಓಬಣ್ಣರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟೆಂಪೋ ಪಲ್ಟಿಯಾಗಿದ್ದರಿಂದ ಕೆಲ ಜನರು ಈರುಳ್ಳಿ ತುಂಬಲು ಮುಗಿಬಿದ್ದ ಘಟನೆ ಕೂಡ ನಡೆದಿದೆ. ಸ್ಥಳಕ್ಕೆ ಬಂದ ನೆಲಮಂಗಲ ಸಂಚಾರಿ ಪೊಲೀಸರು ಎರಡೂ ವಾಹನಗಳನ್ನು ತೆರವು ಮಾಡಿದ್ದಾರೆ. ಈ ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ನಿಯಂತ್ರಿಸಿದ್ದಾರೆ. ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗೆ ಫುಲ್‌ ಡಿಮ್ಯಾಂಡ್‌ – 69 ಪ್ರಶಸ್ತಿಗೆ 2,000ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

  • ಗುಡ್ಡ ಕುಸಿತದಿಂದ ಶಿರಾಡಿ ಘಾಟ್ ಮತ್ತೆ ಬಂದ್ – ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿ

    ಗುಡ್ಡ ಕುಸಿತದಿಂದ ಶಿರಾಡಿ ಘಾಟ್ ಮತ್ತೆ ಬಂದ್ – ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿ

    – ರಸ್ತೆಯಲ್ಲಿ ಸಿಲುಕಿದ ನೂರಾರು ವಾಹನಗಳು

    ಹಾಸನ: ಜಿಲ್ಲೆಯಲ್ಲಿ ಭಾರೀ ಮಳೆಗೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದ (Landslide) ಪರಿಣಾಮ ಶಿರಾಡಿ ಘಾಟ್ (Shiradi Ghat) ಮತ್ತೆ ಬಂದ್ ಆಗಿದೆ.

    ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಸಕಲೇಶಪುರ (Sakleshpur) ತಾಲೂಕಿನ ದೊಡ್ಡತಪ್ಲು ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿದೆ. ಇದನ್ನೂ ಓದಿ: ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲು

    ಗುಡ್ಡ ಕುಸಿತದ ರಭಸಕ್ಕೆ ಬೃಹತ್ ಗಾತ್ರದ ಕಂಟೇನರ್ (Container) ಒಂದು ಪಲ್ಟಿಯಾಗಿದೆ. ಇದರೊಂದಿಗೆ ಇತರೆ ವಾಹನಗಳು ಕೂಡ ಸಿಲುಕಿಕೊಂಡಿವೆ. ಪಲ್ಟಿಯಾದ ಕಂಟೇನರ್ ಜೊತೆಗೆ ಚಾಲಕ ಕೂಡ ಮಣ್ಣಿನಡಿ ಸಿಲುಕಿಕೊಂಡಿದ್ದಾರೆ. ಇದನ್ನೂ ಓದಿ: ನಮ್ಮ ಸರ್ಕಾರದಲ್ಲಿ ನಾನೇ ನ್ಯಾಯಕ್ಕಾಗಿ ಬೇಡುವ ಪರಿಸ್ಥಿತಿ ಬಂದಿದೆ: ನೇಹಾ ಪ್ರಕರಣದಲ್ಲಿ ತಂದೆ ಅಸಮಾಧಾನ

    ಇಂದು ಬೆಳಗ್ಗೆ ಇದೇ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ಭೇಟಿ ನೀಡಿದ್ದರು. ಸಂಜೆ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ. ಇದರಿಂದಾಗಿ ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಸಂಚಾರ ಬಂದ್ ಆಗಿದೆ. ಇದನ್ನೂ ಓದಿ: ಸರ್ಕಾರಿ ಕಾಲೇಜುಗಳಲ್ಲಿ ಓದುವ ಪಿಯುಸಿ ಮಕ್ಕಳಿಗೆ ಉಚಿತ ನೀಟ್ ತರಬೇತಿ: ಮಧು ಬಂಗಾರಪ್ಪ

  • ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ – ಕಂಟೇನರ್‌ ನಜ್ಜುಗುಜ್ಜು

    ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ – ಕಂಟೇನರ್‌ ನಜ್ಜುಗುಜ್ಜು

    ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್‌ವೊಂದು (Container) ಡಿವೈಡರ್‌ಗೆ (Divider) ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಹಾಸನ (Hassan) ನಗರದ ಭಗತ್‌ ಸಿಂಗ್‌ ಸರ್ಕಲ್‌ನಲ್ಲಿ ನಡೆದಿದೆ.

    ನಗರದ ಎನ್.ಆರ್. ವೃತ್ತದಿಂದ ಸಂತೆಪೇಟೆ ಮಾರ್ಗವಾಗಿ ಹೋಗುತ್ತಿದ್ದ ಕಂಟೇನರ್ ಭಗತ್‌‌ಸಿಂಗ್ ಸರ್ಕಲ್‌ನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.‌ ಈ ಕಂಟೇನರ್‌ ಪಲ್ಟಿ ಆಗಿದೆ. ಈ ರಭಸಕ್ಕೆ ಕಂಟೇನರ್‌ ನಜ್ಜುಗುಜ್ಜಾಗಿದೆ. ಆದರೆ ಅದೃಷ್ಟವಶಾತ್‌ ಚಾಲಕ (Driver) ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ-ಪುಟ್ಟ ಗಾಯಗಳಾಗಿದೆ. ಇದನ್ನೂ ಓದಿ: ನ್ಯೂ ಇಯರ್ ಮುಗಿಸಿ ವಾಪಸ್ಸಾಗ್ತಿದ್ದಾಗ KSRTC ಬಸ್‌ಗೆ ಕಾರು ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು

    ಘಟನೆಗೆ ಸಂಬಂಧಿಸಿ ಚಾಲಕ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಂಟೇನರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸೆಲ್ಫಿ ತೆಗೆದುಕೊಳ್ಳಲು ಮಹಿಳೆಯರಿಗೆ ಒತ್ತಾಯ- 2 ಗುಂಪುಗಳ ನಡುವೆ ಮಾರಾಮಾರಿ

    Live Tv
    [brid partner=56869869 player=32851 video=960834 autoplay=true]

  • ಲಾರಿ, ಕಂಟೇನರ್ ಮಧ್ಯೆ ಭೀಕರ ರಸ್ತೆ ಅಪಘಾತ- ಸ್ಥಳದಲ್ಲೇ ಇಬ್ಬರು ಚಾಲಕರು ಸಾವು

    ಲಾರಿ, ಕಂಟೇನರ್ ಮಧ್ಯೆ ಭೀಕರ ರಸ್ತೆ ಅಪಘಾತ- ಸ್ಥಳದಲ್ಲೇ ಇಬ್ಬರು ಚಾಲಕರು ಸಾವು

    ಬೀದರ್: ಲಾರಿ (Lorry) ಮತ್ತು ಕಂಟೇನರ್ (Container) ಮಧ್ಯೆ ಭೀಕರ ರಸ್ತೆ ಅಪಘಾತವಾಗಿ (Accident) ಇಬ್ಬರು ಚಾಲಕರು ಸಾವನ್ನಪ್ಪಿದ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ ತಾಲೂಕಿನ ಅಂಬೆಸಂಗವಿ ಕ್ರಾಸ್ ಬಳಿ ನಡೆದಿದೆ.

    ಲಾರಿ ಚಾಲಕ ವಿಜಯಕುಮಾರ್(40) ಹಾಗೂ ಕಂಟೇನರ್ ಚಾಲಕ ರಾಮ್‍ಕಿಶನ್ (32) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಲಾರಿ ಹಾಗೂ ಕಂಟೇನರ್‌ನಲ್ಲಿದ್ದ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್‍ನಿಂದ ರಸ್ತೆ ಮೇಲೆ ಬಿದ್ದ ತಾಯಿ, ಮಗು – ಭಯಾನಕ ವೀಡಿಯೋ ವೈರಲ್

    ಗುಜರಾತಿನಿಂದ ಟೈಲ್ಸ್ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಬೀದರ್ ಕಡೆಯಿಂದ ವೇಗವಾಗಿ ಬಂದ ಕಂಟೇನರ್ ಲಾರಿಗೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತವಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಭೀಕರ ರಸ್ತೆ ಅಪಘಾತವಾಗಿದ್ದು, ಭಾಲ್ಕಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರಿಗೆ ಭದ್ರತೆ ಕಲ್ಪಿಸುವಲ್ಲಿ ಮೋದಿ ಸರ್ಕಾರ ವಿಫಲ – ಕಾಂಗ್ರೆಸ್ ಟೀಕೆ

    Live Tv
    [brid partner=56869869 player=32851 video=960834 autoplay=true]

  •  ಕಂಟೇನರ್​ಗೆ ಲಾರಿ ಡಿಕ್ಕಿ – ಇಬ್ಬರ ದುರ್ಮರಣ

     ಕಂಟೇನರ್​ಗೆ ಲಾರಿ ಡಿಕ್ಕಿ – ಇಬ್ಬರ ದುರ್ಮರಣ

    ಬೆಳಗಾವಿ: ಕಂಟೇನರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿಯ ಹೊರ ವಲಯದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬಳಿಯ ವಂಟಮೂರಿ ಘಾಟ್‍ನಲ್ಲಿ ನಡೆದಿದೆ.

    ಮಂಗಳವಾರ ತಡರಾತ್ರಿ 1 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಶಿಗ್ಗಾಂವಿ ಕಡೆಯಿಂದ ಮಹಾರಾಷ್ಟ್ರಕ್ಕೆ ಮೆಕ್ಕೆಜೋಳದ ಹಿಟ್ಟನ್ನು ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್, ರಾಷ್ಟ್ರೀಯ ಹೆದ್ದಾರಿ-4ರ ಸುತಗಟ್ಟಿ ಇಳಿಜಾರು ಪ್ರದೇಶದಲ್ಲಿ ಡಿವೈಡರ್ ಹಾರಿ ಮಹಾರಾಷ್ಟ್ರ ಕಡೆಯಿಂದ ಬೆಳಗಾವಿಗೆ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

    ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನೀರಜ್ ಹಾಗೂ ರಾಜೇಂದ್ರ ಎಂಬ ಇಬ್ಬರು ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಂಟೇನರ್ ನ ಮೇಲ್ಭಾಗ ಕಿತ್ತು ಬಿದ್ದು, ಔಷಧಿ ತುಂಬಿಕೊಂಡು ನಿಂತಿದ್ದ ಕಂಟೇನರ್​ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:ಮಹಿಳೆಗೆ ಪ್ಯಾಂಟ್ ಬಿಚ್ಚಿ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಶೀಲ್ದಾರ್

  • ಕಂಟೇನರ್ ಲಾರಿ​ಗೆ ಅಂಬುಲೆನ್ಸ್ ಡಿಕ್ಕಿ- ತಮ್ಮನ ಶವ ತರಲು ಹೋದವರು ಹೆಣವಾದ್ರು

    ಕಂಟೇನರ್ ಲಾರಿ​ಗೆ ಅಂಬುಲೆನ್ಸ್ ಡಿಕ್ಕಿ- ತಮ್ಮನ ಶವ ತರಲು ಹೋದವರು ಹೆಣವಾದ್ರು

    – ಚಾಲಕ ಸೇರಿದಂತೆ ಐವರ ದುರ್ಮರಣ

    ಲಕ್ನೋ: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತಕ್ಕೊಳಗಾದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ಗೋಪಿಗಂಜ್ ವ್ಯಾಪ್ತಿಯ ಮಾಧೋಪುರ ಮಾರ್ಗದ ಹೆದ್ದಾರಿಯಲ್ಲಿ ನಡೆದಿದೆ.

    ಅಂಬುಲೆನ್ಸ್ ಪಶ್ಚಿಮ ಬಂಗಾಳದಿಂದ ರಾಜಸ್ಥಾನಕ್ಕೆ ಶವವನ್ನ ರವಾನಿಸುತ್ತಿತ್ತು. ಬೆಳಗಿನ ಜಾವ ಚಾಲಕ ನಿದ್ದೆಗೆ ಜಾರಿದ್ದರಿಂದ ಹೆದ್ದಾರಿಯಲ್ಲಿ ನಿಂತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕ ಮತ್ತು ಆತನ ಜೊತೆಯಲ್ಲಿದ್ದ ಸಹಾಯಕ ಮತ್ತು ಮೂವರು ಸಾವನ್ನಪ್ಪಿದ್ದಾರೆ.

    ರಾಜಸ್ಥಾನದ ಚಿತ್ತೋಡಗಢ ನಿವಾಸಿ ವಿಪಿನ್ ಪಾಲ್ ಸಿಂಗ್ (30) ಪಶ್ಚಿಮ ಬಂಗಾಳದ ಕೋಲ್ ಇಂಡಿಯಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸೋಮವಾರ ವಿಪಿನ್ ನಿಧನರಾಗಿದ್ದರಿಂದ ಶವ ತೆಗೆದುಕೊಂಡು ಹೋಗಲು ಅಣ್ಣ ನವನೀತ್ ಇಬ್ಬರು ಗೆಳೆಯರ ಜೊತೆ ಆಗಮಿಸಿದ್ದರು. ಶವವನ್ನ ಊರಿಗೆ ಒಯ್ಯಲು ನವನೀತ್ ಖಾಸಗಿ ಅಂಬುಲೆನ್ಸ್ ಬಾಡಿಗೆಗೆ ಪಡೆದುಕೊಂಡಿದ್ದರು. ಬದೋಹಿ ಜಿಲ್ಲೆ ಪ್ರವೇಶಿಸುತ್ತಿದ್ದಂತೆ ಅಪಘಾತ ಸಂಬಂಧಿಸಿದ್ದು, ಶವ ಒಯ್ಯಲು ಬಂದವರು ಹೆಣವಾಗಿದ್ದಾರೆ. ಚಾಲಕನನ್ನ ರಾಕೇಶ್ ಎಂದು ಗುರುತಿಸಲಾಗಿದ್ದು, ಇನ್ನುಳಿದ ಮೂವರು ಗುರುತು ಪತ್ತೆಯಾಗಿಲ್ಲ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿ ಆರು ಶವಗಳನ್ನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತಕ್ಕೊಳಗಾದ ಅಂಬುಲೆನ್ಸ್ ಒಡೆತನದ ಆಸ್ಪತ್ರೆಗೆ ಮಾಹಿತಿ ನೀಡಲಾಗಿದೆ. ಅಂಬುಲೆನ್ಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ರಸ್ತೆ ಅಪಘಾತದಲ್ಲಿ ಗಾಯಕಿ ಸಾವು

    ರಸ್ತೆ ಅಪಘಾತದಲ್ಲಿ ಗಾಯಕಿ ಸಾವು

    ಮುಂಬೈ: ರಸ್ತೆ ಅಪಘಾತದಲ್ಲಿ ಮರಾಠಿ ಗಾಯಕಿ ಮೃತಪಟ್ಟ ಘಟನೆ ಗುರುವಾರ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

    ಗೀತಾ ಮಲಿ ಮೃತಪಟ್ಟ ಗಾಯಕಿ. ಗೀತಾ ಹಲವು ಮರಾಠಿ ಚಿತ್ರಗಳಿಗೆ ಹಾಡು ಹಾಡಿದ್ದಾರೆ. ಗುರುವಾರ ಗೀತಾ ಅಮೆರಿಕದಿಂದ ನಾಸಿಕ್‍ನಲ್ಲಿರುವ ತನ್ನ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಮುಂಬೈ- ಆಗ್ರಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

    ಗೀತಾ ಪ್ರಯಾಣಿಸುತ್ತಿದ್ದ ಕಾರು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಕಂಟೇನರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗೀತಾ ಮೃತಪಟ್ಟಿದ್ದಾಳೆ. ಗೀತಾ ಜೊತೆ ಆಕೆಯ ಪತಿ ವಿಜಯ್ ಕೂಡ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಅಪಘಾತದಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

    ಅಪಘಾತದ ಸಂಭವಿಸಿದ ನಂತರ ಸ್ಥಳೀಯರು ಇಬ್ಬರನ್ನು ಶಾಹಾಪುರ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಗೀತಾ ಮೃತಪಟ್ಟಿದ್ದು, ಆಕೆಯ ಪತಿ ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಗೀತಾ ಹಲವು ಮರಾಠಿ ಚಿತ್ರಗಳಿಗೆ ಹಾಡು ಹಾಡಿದ್ದಾರೆ. ಅಲ್ಲದೆ ತಮ್ಮ ಸ್ವಂತ ಮ್ಯೂಸಿಕ್ ಆಲ್ಬಂ ಕೂಡ ಶುರು ಮಾಡಿದ್ದರು.

  • ಗಾಡಿ ನಂಬರ್ ನೋಡಲು ತೆರಳಿ ಕಂಟೇನರ್ ಅಡಿ ಸಿಲುಕಿದ ಚಾಲಕ!

    ಗಾಡಿ ನಂಬರ್ ನೋಡಲು ತೆರಳಿ ಕಂಟೇನರ್ ಅಡಿ ಸಿಲುಕಿದ ಚಾಲಕ!

    – 4 ದಿನಗಳ ನಂತ್ರ ಶವ ಪತ್ತೆ

    ಬೆಂಗಳೂರು: ಕಂಟೇನರ್ ಲಾರಿ ಕೆಳಗೆ ಸಿಲುಕಿದ್ದ ಚಾಲಕನ ಮೃತದೇಹ ನಾಲ್ಕು ದಿನಗಳ ಬಳಿಕ ಪತ್ತೆಯಾದ ಘಟನೆ ಬೆಂಗಳೂರಿನ ವೈಟ್‍ಫೀಲ್ಡ್ ನ ಕಂಟೇನರ್ ಕಾರ್ಪೋರೇಷನ್ ಆಫ್ ಇಂಡಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಬಾಗಲಕೋಟೆ ಮೂಲದ ಹನುಮಂತ ಎಂಬ ಕಂಟೇನರ್ ಚಾಲಕ ಮೃತಪಟ್ಟಿದ್ದಾನೆ. ಕಳೆದ ಹಲವು ವರ್ಷಗಳಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ ಹನುಮಂತ, ಶುಕ್ರವಾರ ಸಂಜೆ ತಾನು ಕೊಂಡೊಯ್ಯಬೇಕಾದ ಕಂಟೇನರ್ ನಂಬರ್ ನೋಡಲು ತೆರಳಿದ್ದನು.

    ಇದು ಗೊತ್ತಿಲ್ಲದೇ ಹನುಮಂತ ನಿಂತಿದ್ದ ಜಾಗದಲ್ಲೇ ಮತ್ತೊಬ್ಬ ಚಾಲಕ ಕಂಟೇನರ್ ಇಳಿಸಿದ್ದಾನೆ. ಸಿಬ್ಬಂದಿಗೆ ಹನುಮಂತ ಕಂಟೇನರ್ ಅಡಿ ಸಿಲುಕಿರುವುದು ಅರಿವಿಗೆ ಬಂದಿರಲಿಲ್ಲ. ಪರಿಣಾಮ ಅದರಡಿ ಸಿಲುಕಿ ಹನುಮಂತ ಮೃತಪಟ್ಟಿದ್ದಾನೆ.

    ಇದಾದ ನಾಲ್ಕು ದಿನಗಳ ಬಳಿಕ ಮತ್ತೊಬ್ಬ ಸಿಬ್ಬಂದಿ ಕಂಟೇನರ್ ತೆಗೆದ ವೇಳೆ ಹನುಮಂತನ ಮೃತದೇಹ ಪತ್ತೆಯಾಗಿದೆ. ಕೂಡಲೇ ಕಾಡುಗೋಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

    ವಿಚಾರ ತಿಳಿದ ನೂರಕ್ಕೂ ಅಧಿಕ ಚಾಲಕರು ಸ್ಥಳಕ್ಕೆ ದೌಡಾಯಿಸಿದರು. ಆತನ ಸಾವಿನ ಹಿಂದೆ ಸಿಬ್ಬಂದಿಯ ಬೇಜವಾಬ್ದಾರಿತನವೇ ಕಾರಣ ಎಂದು ಆರೋಪಿಸಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ.

  • ಕಂಟೇನರ್ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – 13 ಮಂದಿಗೆ ಗಾಯ, ಡ್ರೈವರ್ ಕಾಲು ಮುರಿತ

    ಕಂಟೇನರ್ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – 13 ಮಂದಿಗೆ ಗಾಯ, ಡ್ರೈವರ್ ಕಾಲು ಮುರಿತ

    ಬೆಂಗಳೂರು: ಏರ್‌ಪೋರ್ಟ್ ರಸ್ತೆ ಮೃತ್ಯುಕೂಪವಾಗ್ತಿದೆಯಾ ಎನ್ನುವ ಅನುಮಾನ ಕಾಡುತ್ತಿದೆ. ಏಕೆಂದರೆ ಸೋಮವಾರವಷ್ಟೇ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದರು. ಇಂದು ಪುನಃ ಯಲಹಂಕದ ಬಳಿ ಭೀಕರ ಅಪಘಾತ ಸಂಭವಿಸಿದೆ.

    ಸ್ಲೋ ಮೂವಿಂಗ್ ಕಂಟೇನರ್ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಡ್ರೈವರ್ ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ. ಆಂಧ್ರದ ಅನಂತಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಇದಾಗಿದ್ದು 30ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು.

    ಡ್ರೈವರ್ ನಂದನ್ ಎರಡು ಕಾಲು ಮುರಿದಿದ್ದು, ಕೊಡಿಗೇಹಳ್ಳಿ ಗೇಟ್ ಸಮೀಪದ ಕಾವೇರಿ ಎಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಸೋಮವಾರ ಅಂಬುಲೆನ್ಸ್ ಚಾಲಕನ ಬೇಜವಾಬ್ದಾರಿತನದಿಂದ ಅಪಘಾತ ನಡೆದಿತ್ತು ಎಂಬುದು ತಿಳಿದು ಬಂದಿದೆ. ಅಂಬುಲೆನ್ಸ್ ಚಾಲಕ ವೇಗವಾಗಿ ವಾಹನ ಚಲಾಯಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಬಳಿಕ ಡಿವೈಡರ್ ನಿಂದ ಹಾರಿ ಮುಂದೆ ಬರುತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು.