ಬೆಂಗಳೂರು: ಸ್ಪೋರ್ಟ್ಸ್ ಪ್ರಾಕ್ಟಿಸ್ (Sports Practice) ನೋಡಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆಯಾದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ಗೊರಗುಂಟೆಪಾಳ್ಯ (Goraguntepalya) ನಿವಾಸಿ ಡಿಮನ್ ರಾಜ್ ನಾಪತ್ತೆಯಾದ ವಿದ್ಯಾರ್ಥಿ. ಏಳನೇ ತರಗತಿ ಓದುತ್ತಿದ್ದ ಡಿಮನ್ ರಾಜ್ ಎಂದಿನಂತೆ ಬೆಳಗ್ಗೆ ಮನೆಯಿಂದ ಟ್ಯೂಷನ್‌ಗೆ ಹೋಗಿದ್ದ. ಆದರೆ ಟ್ಯೂಷನ್‌ಗೆ ಹೋಗದೇ ಕಂಠೀರವ ಸ್ಟೇಡಿಯಂಗೆ (Kanteerava Stadium) ಬಂದಿದ್ದ. ಕಂಠೀರವ ಸ್ಟೇಡಿಯಂನಲ್ಲಿ ಜಾವೆಲಿನ್ ಥ್ರೋ ಪ್ರಾಕ್ಟಿಸ್ ನೋಡಲು ಬಂದಿದ್ದ ಡಿಮನ್ ರಾಜ್ ಸ್ಟೇಡಿಯಂನಲ್ಲಿ ನೀರಜ್ ಚೋಪ್ರಾ ಜೊತೆ ಪೋಟೋ ತೆಗೆಸಿಕೊಂಡಿದ್ದ. ಬಳಿಕ ಅಲ್ಲಿದ್ದ ವ್ಯಕ್ತಿಯೊಬ್ಬರ ಮೂಲಕ ಪೋಟೋವನ್ನ ತನ್ನ ತಾಯಿಗೆ ಕಳುಹಿಸಿದ್ದ. ಅನಂತರ ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದಾನೆ. ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ಡ್ಯೂಟಿ ಡಾಕ್ಟರ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
ವಿದ್ಯಾರ್ಥಿ ನಾಪತ್ತೆ ಬಗ್ಗೆ ನಂದಿನಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಪೋಷಕರು ರಾತ್ರಿಯಿಡೀ ಹುಡುಕಾಟ ನಡೆಸಿದ್ದಾರೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಕಂಠೀರವ ಸ್ಟೇಡಿಯಂ, ಮಾರ್ಕೆಟ್ ಸೇರಿದಂತೆ ಹಲವೆಡೆ ಹುಡುಕಾಟ ನಡೆಸಲಾಗಿದೆ. ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ಪೋಷಕರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರಿ ಕೊಡಿಸುವುದಾಗಿ 200 ರೂ. ವಂಚನೆ; 30 ವರ್ಷದ ನಂತರ ಬಂಧನ
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಮತ್ತು ಕನ್ನಡಿಗರನ್ನು ಹೀಯಾಳಿಸುವ ಕೆಲಸ ಆಗುತ್ತಿದೆ. ಇನ್ನೂ ಮುಂದೆ ಯಾರಾದರೂ ನಿಂದಿಸಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಎಚ್ಚರಿಕೆ ನೀಡಿದರು.
ಬೆಂಗಳೂರಿನ (Bengaluru) ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರೆಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸರ್ಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್, ಶಿಕ್ಷಣ ಸಚಿವ ಮಧುಬಂಗಾರಪ್ಪ ಭಾಗಿಯಾಗಿದ್ದರು.ಇದನ್ನೂ ಓದಿ: ವಕ್ಫ್ ಆಸ್ತಿಯನ್ನು ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸಿ – ಪ್ರಧಾನಿ ಮೋದಿಗೆ ಯತ್ನಾಳ್ ಪತ್ರ
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಎಲ್ಲರಲ್ಲಿಯೂ ಕನ್ನಡ ಅಭಿಮಾನ ಇರಲಿ, ದುರಭಿಮಾನ ಬೇಡ. ಅಭಿಮಾನವಿದ್ದರೆ ಮಾತ್ರ ಕನ್ನಡ ಬೆಳೆಯುತ್ತದೆ. ಕನ್ನಡ ಬಾರದವರ ಜೊತೆಯಲ್ಲಿಯೂ ಕನ್ನಡದಲ್ಲಿಯೇ ಮಾತನಾಡಿ. ಕನ್ನಡ ಬಾರದವರಿಗೆ ಕನ್ನಡ ಕಲಿಸಬೇಕು, ಆಗ ಕನ್ನಡದ ವಾತಾವರಣ ನಿರ್ಮಾಣವಾಗುತ್ತದೆ. ಎಲ್ಲರೂ ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು. ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ, ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ, ಅಂತಹವರ ವಿರುದ್ಧ ಸರ್ಕಾರ ಮುಲಾಜಿಲ್ಲದೇ ಕಠಿಣ ಕ್ರಮ ತಗೊಳ್ಳುತ್ತದೆ. ನಾವು ಕನ್ನಡಿಗರಾಗಿರುತ್ತೇವೆ. ಬೇರೆಯವರನ್ನೂ ಕನ್ನಡಿಗರಾಗಿ ಮಾಡುತ್ತೇವೆ. ವ್ಯವಹಾರದಲ್ಲೂ ಕನ್ನಡ ಬಳಸುತ್ತೇವೆ ಎಂದು ಶಪಥ ಮಾಡೋಣ ಎಂದು ತಿಳಿಸಿದರು.
ರಾಜ್ಯದ ಎಲ್ಲ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರು ದಿನ ಮೊಟ್ಟೆ ಕೊಡುತ್ತಿದ್ದೇವೆ. ಈಗ ಮಕ್ಕಳಿಗೆ ಹಾಲಿನ ಜೊತೆಗೆ ರಾಗಿ ಮಾಲ್ಟ್ ಕೊಡುತ್ತಿದ್ದೇವೆ. ಅಸಮಾನತೆ, ಅಪೌಷ್ಟಿಕತೆಯನ್ನು ಹೊಡೆದೊಡಿಸಲು ಹಾಗೂ ಗುಣಮಟ್ಟದ ಶಿಕ್ಷಣ ಕೊಡುವ ಸಲುವಾಗಿ ಈ ಯೋಜನೆಗಳನ್ನು ಮಾಡುತ್ತಿದ್ದೇವೆ. ಕನ್ನಡದ ಅಭಿಮಾನವಿರಲಿ. ಬೇರೆ ಭಾಷಿಕರಿಗೂ ಕನ್ನಡ ಕಲಿಸುವ ಕೆಲಸ ಮಾಡಬೇಕು. ಯಾವುದೇ ಧರ್ಮ, ಭಾಷೆ, ಪ್ರಾಂತ್ಯದವರು ಇರಲಿ ಕರ್ನಾಟಕದಲ್ಲಿ ಇರುವವರೆಲ್ಲ ಕನ್ನಡಿಗರೇ. ಈ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಕನ್ನಡ ಶಾಸ್ತ್ರೀಯ ಭಾಷೆ. ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು. ಭಾಷೆ ವ್ಯಾಮೋಹವೂ ಅತಿಯಾಗಿರಬಾರದು, ಆದರೆ ಕನ್ನಡ ಅಭಿಮಾನ ಬಿಟ್ಟುಕೊಡಬಾರದು. ಬೇರೆ ಭಾಷೆ ಕಲಿಯಿರಿ, ಆದರೆ ಕನ್ನಡ ಮರೆಯಬೇಡಿ ಎಂದು ಹೇಳಿದರು.
ರಾಜ್ಯಗಳ ಏಕೀಕರಣ ಆಗಿ 68 ವರ್ಷಗಳು ತುಂಬಿದ್ದು 69ಕ್ಕೆ ಕಾಲಿಟ್ಟಿದ್ದೀವಿ. 1953ರಲ್ಲಿ ಫಜಲ್ ಅಲಿ ನೇತೃತ್ವದಲ್ಲಿ ರಾಜ್ಯಗಳ ಪುನರ್ವಿಂಗಡಣೆ ಸಮಿತಿ ರಚಿಸಲಾಯಿತು. ಇವರು ಕೊಟ್ಟ ವರದಿ ಆಧಾರದಲ್ಲಿ ಭಾಷಾವಾರು ರಾಜ್ಯಗಳ ವಿಂಗಡಣೆ ಆಯಿತು. ಆ ದಿನವನ್ನು ನಾವೆಲ್ಲರೂ ಇಡೀ ದೇಶದಲ್ಲಿ ರಾಜ್ಯಗಳ ಏಕೀಕರಣ ದಿನವಾಗಿ ಆಚರಿಸುತ್ತಿದ್ದೇವೆ. 1973ರವರೆಗೆ ಕರ್ನಾಟಕ ರಾಜ್ಯ ಆಗಿರಲಿಲ್ಲ, ಮೈಸೂರು ರಾಜ್ಯ ಆಗಿತ್ತು. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು 1973 ನವೆಂಬರ್ 1 ರಂದು ಹೆಸರು ಇಡಲಾಯಿತು. ನಾಮಕರಣ ಆಗಿ 51 ವರ್ಷ ತುಂಬುತ್ತಿದೆ. 50 ವರ್ಷವಾದಾಗ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿತ್ತು. ಆದರೆ ಅವರು 50ನೇ ವರ್ಷದ ಆಚರಣೆ ಮಾಡಲಿಲ್ಲ. ನಾವು ಬಂದ ಮೇಲೆ ಇಡೀ ವರ್ಷ ಸಂಭ್ರಮದಿಂದ ಆಚರಣೆ ಮಾಡಿದೆವು ಎಂದರು.
ರಾಜ್ಯಕ್ಕೆ ತೆರಿಗೆ ಅನ್ಯಾಯದ ವಿಚಾರ:
ಕರ್ನಾಟಕಕ್ಕೆ ಇವತ್ತು ದೊಡ್ಡ ಅನ್ಯಾಯ ಆಗುತ್ತಿದೆ. ಮಹಾರಾಷ್ಟ್ರ ಬಿಟ್ಟರೆ ಅತೀ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ನಮ್ಮದು. ನಾವು 4 ಲಕ್ಷ ಕೋಟಿ ರೂ.ಗೂ ಹೆಚ್ಚು ತೆರಿಗೆ ಕಟ್ಟಿದ್ದರೂ ವಾಪಸ್ ಪಡೆಯುತ್ತಿರುವುದು 50-60 ಸಾವಿರ ರೂ. ಕೋಟಿ ಮಾತ್ರ. 1 ರೂ.ಯಲ್ಲಿ 14-15 ಪೈಸೆ ಮಾತ್ರ ನಮಗೆ ವಾಪಸ್ ಕೊಡುತ್ತಿದ್ದಾರೆ. ನಾವು ಮುಂದುವರೆದ ರಾಜ್ಯ ಎಂದು ತೆರಿಗೆ ಪಾಲಿನಲ್ಲಿ ಅನ್ಯಾಯ ಆಗುತ್ತಿದೆ. ಹಸು ಹಾಲು ಕೊಡುತ್ತದೆ ಎಂದು ಕರುವಿಗೆ ಹಾಲು ಕೊಡದಿದ್ದರೆ ಆ ಕರು ದುರ್ಬಲ ಆಗುತ್ತದೆ. ನಾವು ಕೊಡುವ ತೆರಿಗೆ, ನಮ್ಮ ತೆರಿಗೆ ಪಾಲು ಸರಿಯಾಗಿ ಕೊಡಿ ಎಂದರೆ ಅದಕ್ಕೆ ರಾಜಕೀಯ ಬಣ್ಣ ಹಚ್ಚುತ್ತಾರೆ. ಇದನ್ನು ನಾವೆಲ್ಲ ಕನ್ನಡಿಗರೂ ಅರ್ಥ ಮಾಡಿಕೊಳ್ಳಬೇಕು. ನಮ್ಮ ಹಕ್ಕು ನಾವು ಕೇಳಬೇಕು. ಎಲ್ಲ ಸಂಸದರೂ ಲೋಕಸಭೆಯಲ್ಲಿ ಪ್ರತಿಭಟಿಸಿ, ತಮ್ಮ ದನಿಯನ್ನು ಲೋಕಸಭೆಯಲ್ಲಿ ಎತ್ತಬೇಕು ಆಗ ಮಾತ್ರ ನಮಗೆ ನ್ಯಾಯ ಸಿಗುತ್ತದೆ. ಸಂಸದರಿಗೆ ನಮ್ಮ ಅನ್ಯಾಯ ಪ್ರಸ್ತಾಪಿಸಿ, ಸರಿಪಡಿಸುವ ಶಕ್ತಿ ಬರಲಿ. ಹಿಂದೆಯಿದ್ದ ಬಿಜೆಪಿ ನಮಗೆ ಬರಬೇಕಾದ ತೆರಿಗೆ ಪಾಲು ಕೇಳುವ ಕೆಲಸ ಮಾಡಲಿಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿ: ಸಕ್ಕರೆ ನಾಡಿಗೂ ಕಾಲಿಟ್ಟ ವಕ್ಫ್ ವಿವಾದ – ಮಂಡ್ಯದಲ್ಲಿ ದೇವಸ್ಥಾನವೇ ವಕ್ಫ್ ಆಸ್ತಿ
ಬೆಂಗಳೂರು: ಸಣ್ಣ ವಿಚಾರಕ್ಕೆ ಕೋಚ್ (Coach) ಪತ್ನಿ ಹಾಗೂ ಅಥ್ಲಿಟ್ (Athlete) ನಡುವೆ ಕಂಠೀರವ ಕ್ರೀಡಾಂಗಣದಲ್ಲಿ ಗಲಾಟೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚ್ ಯತೀಶ್ ಹಾಗೂ ಪತ್ನಿ ಶ್ವೇತಾ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ.
ಸಂಪಂಗಿ ರಾಮನಗರ (Sampangi Ramanagara) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ಬೆಂಗಳೂರಿನ (Bengaluru) ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ಬಿಂದುರಾಣಿ ಹಾಗೂ ಶ್ವೇತಾ ಮಧ್ಯೆ ಖೇಲ್‌ರತ್ನ ಪ್ರಶಸ್ತಿ ಕುರಿತ ವಿಡಿಯೋವೊಂದರ ಕುರಿತು ಜಗಳ ನಡೆದಿತ್ತು. ಕಳೆದ ಶುಕ್ರವಾರ ಅಥ್ಲಿಟ್ ಬಿಂದುರಾಣಿ ಟೆಡೆಕ್ಸ್ ಕಾರ್ಯಕ್ರಮದಲ್ಲಿ ತನ್ನ ಸಾಧನೆ ಬಗ್ಗೆ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದರು. ಬಿಂದು ಸೋಶಿಯಲ್ ಮೀಡಿಯಾ ಮಾಹಿತಿಯಲ್ಲಿ ಖೇಲ್‌ರತ್ನ ಪ್ರಶಸ್ತಿ ಬಗ್ಗೆ ಪ್ರಸ್ತಾಪ ಮಾಡಿಕೊಂಡಿದ್ದರ ಕುರಿತು ಕೋಚ್ ಯತೀಶ್ ವಾಟ್ಸಪ್‌ನ ಕೋಚ್ ಗ್ರೂಪ್‌ನಲ್ಲಿ ನಿಮಗೆ ಯಾವಾಗ ಖೇಲ್‌ರತ್ನ ಪ್ರಶಸ್ತಿ ಬಂದಿದೆ ಎನ್ನುವ ರೀತಿಯಲ್ಲಿ ಬಿಂದುರಾಣಿಗೆ ಪ್ರಶ್ನೆ ಮಾಡಿದ್ದರು. ಇದನ್ನೂ ಓದಿ: ರಸ್ತೆ ಬದಿ ಸೊಪ್ಪು ಮಾರೋ ವೃದ್ಧೆ ತಲೆಗೆ ಮಚ್ಚಿನಿಂದ ಹಲ್ಲೆ
ಈ ಕುರಿತು ಬಿಂದುರಾಣಿ ಗ್ರೂಪ್‌ನಲ್ಲಿ ಉತ್ತರಿಸದೇ ಗಂಡನ ಕಡೆಯಿಂದ ಕಾಲ್ ಮಾಡಿಸಿದ್ದಾರೆ. ಯತೀಶ್ ಸರಿಯಾಗಿ ರೆಸ್ಪಾನ್ಸ್ ಮಾಡದೇ ಹೋಗಿದ್ದಕ್ಕೆ ಬಿಂದು ಯತೀಶ್ ಅವರಿಗೆ ಮತ್ತೆ ಕಾಲ್ ಮಾಡಿದಾಗ ಕೋಚ್ ಪತ್ನಿ ಶ್ವೇತಾ ಜಿ.ಕೆ ಉತ್ತರಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಒಂದಷ್ಟು ವಾಗ್ವಾದ ನಡೆದಿದೆ. ಆ ವಿಚಾರವಾಗಿ ಶ್ವೇತಾ ಸ್ಟೇಡಿಯಂಗೆ ಬಂದು ಬಿಂದುರಾಣಿ ಜೊತೆ ಗಲಾಟೆ ಮಾಡಿಕೊಂಡಿದ್ದಲ್ಲದೆ ಬಿಂದು ಅವರನ್ನು ನಿಂದಿಸಿ ಅವರ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದರು. ಇದನ್ನೂ ಓದಿ: ಕೋಚ್ ಪತ್ನಿಯಿಂದ ಅಥ್ಲಿಟ್ ಮೇಲೆ ಹಲ್ಲೆ- ವೀಡಿಯೋ ವೈರಲ್
ಘಟನೆ ಸಂಬಂಧ ಬಿಂದುರಾಣಿ ಸಂಪಂಗಿ ರಾಮ ನಗರ ಪೊಲೀಸ್ ಠಾಣೆಯಲ್ಲಿ ಶ್ವೇತಾ.ಜಿ.ಕೆ ಹಾಗೂ ಅವರ ಪತಿ ಯತೀಶ್ ವಿರುದ್ಧ ಮಾನಹಾನಿ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ. ಬಿಂದುರಾಣಿ ಕೊಟ್ಟ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲು ಮಾಡಿಕೊಂಡಿರುವ ಸಂಪಂಗಿ ರಾಮನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಲವರ್ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ಳು – ಪತ್ನಿ ಸೇರಿ ಐವರು ಅರೆಸ್ಟ್
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಪನೀತ್ ಅವರ ಮಗಳು ಧೃತಿ ಈಗಾಗಲೇ ದೆಹಲಿಯನ್ನು ತಲುಪಿದ್ದಾರೆ. ಅವರು ಬರಲು ಇನ್ನೂ ಸಮಯ ತೆಗೆದುಕೊಳ್ಳುತ್ತದೆ. 5.30 ನಂತರ ಅಂತ್ಯಕ್ರಿಯೆ ಮಾಡಲು ಸಾಧ್ಯವಿಲ್ಲ. ಯಾಕಂದರೆ ಜಾಗ ತುಂಬಾ ಕಿರಿದಾಗಿದ್ದು, ಕತ್ತಲಾದರೆ ಕಷ್ಟ ಸಾಧ್ಯ. ಹೀಗಾಗಿ ಪುನೀತ್ ಅವರ ಸಹೋದರ ಶಿವರಾಜ್‍ಕುಮಾರ್ ಅವರ ಬಳಿ ಹಾಗೂ ಕುಟುಂಬದ ಜೊತೆಗೆ ಚರ್ಚೆ ಮಾಡಿ ನಾಳೆ ಅಂತ್ಯಕ್ರಿಯೆ ನಡೆಸಲು ತೀರ್ಮಾನ ಮಾಡಲಾಗಿದೆ. ನಾಳೆವರೆಗೂ ಅಭಿಮಾನಿಗಳಿಗೆ ಬರಲು ಅವಕಾಶ ನೀಡಲಾಗಿದೆ. ದಯವಿಟ್ಟು ನೀವು ಸಹಕರಿಸಿ ಎಂದು ಬೊಮ್ಮಾಯಿ ಅವರು ಹೇಳಿದ್ದಾರೆ. ಇದನ್ನೂ ಓದಿ: ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ
ಚಂದನವನದ ದೊಡ್ಮನೆ ಹುಡುಗ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದು, ನೆಚ್ಚಿನ ನಟ ಅಂತಿಮ ದರ್ಶನವನ್ನು ಪಡೆಯಲು ಅಭಿಮಾನಿಗಳಿಗೆ ನಾಳೆವರೆಗೂ ಬರಲು ಅವಕಾಶ ನೀಡಲಾಗಿದೆ. ನಂತರ ಕಂಠೀರವ ಸ್ಟುಡಿಯೋದವರೆಗೂ ಮೆರವಣಿಗೆ ನಡೆಸಲಾಗುತ್ತದೆ. ಇದನ್ನೂ ಓದಿ: ರಾಜಕುಮಾರನಂತೆ ಬಾಳಬೇಕಿದ್ದ ನನ್ನ ತಮ್ಮ ಇನ್ನಿಲ್ಲ ಅಂತಂದ್ರೆ ನಂಬಲು ಅಸಾಧ್ಯ: ಸುಧಾರಾಣಿ
ಪುನೀತ್ ಪುತ್ರಿ ಧ್ರುತಿ ನ್ಯೂಯಾರ್ಕ್‍ನಿಂದ ದೆಹಲಿಗೆ ಆಗಮಿಸಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಸಂಜೆ 4.15ಕ್ಕೆ ಆಗಮಿಸಲಿದ್ದಾರೆ. ಧ್ರುತಿ ಅವರು ಬಂದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇವಲ ಆಪ್ತವಲಯಕ್ಕಷ್ಟೇ ಅವಕಾಶ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ: ಅಪ್ಪು ಅಗಲಿಕೆಗೆ ಮಂತ್ರಾಲಯ ಶ್ರೀಗಳಿಂದ ಸಂತಾಪ
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಹೃದಯಘಾತದಿಂದ ನಿಧನರಾಗಿದ್ದಾರೆ. ಇದೀಗ ಇಂದು ಸಂಜೆಯೇ ಪುನೀತ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಚಂದನವನದ ದೊಡ್ಮನೆ ಹುಡುಗ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದು, ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 5.30ರ ಸುಮಾರಿಗೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ನೆಚ್ಚಿನ ನಟನ ಅಂತಿಮ ದರ್ಶನವನ್ನು ಪಡೆಯಲು ಅಭಿಮಾನಿಗಳಿಗೆ ಇಂದು ಮಧ್ಯಾಹ್ನ 3 ಗಂಟೆಯವರಿಗೂ ವ್ಯವಸ್ಥೆಗೊಳಿಸಲಾಗಿದ್ದು, ನಂತರ ಕಂಠೀರವ ಸ್ಟುಡಿಯೋದವರೆಗೂ ಮೆರವಣಿಗೆ ನಡೆಸಲಾಗುತ್ತದೆ. ಇದನ್ನೂ ಓದಿ: ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ
ಹೀಗಾಗಿ ಕುಟುಂಬಸ್ಥರು 3 ಗಂಟೆಯ ಬಳಿಕ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಬರದಂತೆ ಮನವಿ ಮಾಡಿದ್ದಾರೆ. ಪುನೀತ್ ಪುತ್ರಿ ಧ್ರುತಿ ನ್ಯೂಯಾರ್ಕ್‍ನಿಂದ ದೆಹಲಿಗೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಸಂಜೆ 4.15ಕ್ಕೆ ಆಗಮಿಸಲಿದ್ದಾರೆ. ಧ್ರುತಿ ಅವರು ಬಂದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇವಲ ಆಪ್ತವಲಯಕ್ಕಷ್ಟೇ ಅವಕಾಶ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ: ಅಪ್ಪು ಅಗಲಿಕೆಗೆ ಮಂತ್ರಾಲಯ ಶ್ರೀಗಳಿಂದ ಸಂತಾಪ
ಬೆಂಗಳೂರು: ವಿದ್ಯುತ್ ಉಳಿತಾಯದ ಸಂದೇಶ ಸಾರುವ ಉದ್ದೇಶದಿಂದ ಬೆಸ್ಕಾಂನಿಂದ ನಗರದಲ್ಲಿ ವಾಕ್ ಥಾನ್ ಹಮ್ಮಿಕೊಳ್ಳಲಾಗಿತ್ತು.
ಇಂಧನ ಸಚಿವ ಡಿಕೆ ಶಿವಕುಮಾರ್, ನಟಿ ಮಯೂರಿ ಮತ್ತು ಪುಟ್ಟಗೌರಿ ಖ್ಯಾತಿ ರಂಜಿನಿ ಸೇರಿದಂತೆ ಹಲವು ಕಿರುತೆರೆ ನಟಿಯರು ವಾಕ್ ಥಾನ್‍ನಲ್ಲಿ ಪಾಲ್ಗೊಂಡಿದ್ದರು. ಕಂಠೀರವ ಸ್ಟೇಡಿಯಂನಿಂದ ಕಬ್ಬನ್‍ಪಾರ್ಕ್ ವರೆಗೆ ಜಾಗೃತಿ ಜಾಥ ನಡೆದಿದ್ದು, ವಿದ್ಯುತ್ ಉಳಿತಾಯ ಸಂದೇಶವನ್ನು ನೀಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಉಳಿತಾಯ ಮಾಡಬೇಕು. ವಿದ್ಯುತ್ ನ ಒಂದು ಯುನಿಟ್ ಉಳಿಸಿದರೆ, ನಾವು ಒಂದು ಯುನಿಟ್ ಸಂಪಾದನೆ ಮಾಡಿದಂತೆ ಆಗುತ್ತದೆ. ನಾವು ಇವತ್ತು ನೂರಾರು ಸೈಕಲ್ ಇಟ್ಟಿದ್ದೇವೆ. ಆ ಸೈಕಲಿನಲ್ಲಿ ವಿದ್ಯುತ್ ಜನರೇಟ್ ಮಾಡಬಹುದು. ಈ ರೀತಿ ಸೈಕಲ್ ನನ್ನು ಮನೆಯಲ್ಲಿ, ಜಿಮ್‍ಗಳಲ್ಲಿ ತುಳಿದರೆ ವಿದ್ಯುತ್ ಜನರೇಟ್ ಆಗುತ್ತದೆ. ನಮ್ಮ ಜನರಿಗೆ ಹಾಗೂ ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ಸಲುವಾಗಿ ಈ ರೀತಿಯ ಒಂದು ಪ್ರಯೋಗ ಮಾಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರು: ನನ್ನ ಪತ್ನಿ ಪ್ರಾಕ್ಟೀಸ್ ಮಾಡುತ್ತಿದ್ದಾರೆ. ಆದ್ದರಿಂದ ಸ್ಟೇಡಿಯಂಗೆ ಯಾರೂ ಬರಬೇಡಿ ಎಂದು ಹೇಳಿ ಐಪಿಎಸ್ ಅಧಿಕಾರಿ ಅನುಪಮ್ ಅಗರವಾಲ್ ನ್ಯಾಷನಲ್ ಅಥ್ಲೆಟಿಕ್ ಕ್ರೀಡಾಪಟುಗಳಿಗೆ ಅವಮಾನ ಮಾಡಿದ್ದಾರೆ.
ಕಂಠೀರವ ಸ್ಟೇಡಿಯಂ ನಿರ್ದೇಶಕ ಅನುಪಮ್ ಅಗರವಾಲ್ ರಾಷ್ಟ್ರೀಯ ಕ್ರೀಡಾಪಟುಗಳ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಸ್ಟೇಡಿಯಂನಲ್ಲಿ ನನ್ನ ಪತ್ನಿ ಪ್ರಾಕ್ಟೀಸ್ ಮಾಡುವ ಸಂದರ್ಭದಲ್ಲಿ ಯಾರೂ ಸ್ಟೇಡಿಯೋ ಒಳಗಡೆ ಇರಬಾರದು ಎಂದು ಹೆಂಡತಿಗೋಸ್ಕರ ಅಥ್ಲೀಟ್‍ಗಳನ್ನು ಸ್ಟೇಡಿಯಂನಿಂದ ಹೊರ ಹೋಗಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಹೋಂಗಾರ್ಡ್‍ಗಳನ್ನು ಕರೆದು ಕ್ರೀಡಾಪಟುಗಳನ್ನು ಹೊರ ಹಾಕಿಸಿದ್ದಾರೆ.
ಐಪಿಎಸ್ ಅಧಿಕಾರಿ ಅನುಪಮ್ ಅಗರವಾಲ್ ಅವರ ಪತ್ನಿಪ್ರೇಮಕ್ಕೆ ಕಂಗಾಲಾದ ಅಥ್ಲೀಟ್‍ಗಳು ಕಂಠೀರವ ಸ್ಟೇಡಿಯಂ ಬಿಟ್ಟು ಕಬ್ಬನ್ ಪಾರ್ಕ್‍ನಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದಾರೆ. ಈ ಎಲ್ಲಾ ಅಥ್ಲೆಟಿಕ್ ಕ್ರೀಡಾಪಟುಗಳು ಅಂತರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ.
ಅನುಪಮ್ ಅಗರವಾಲ್ ಫೋನ್ ಮಾಡಿ ಯಾವುದೇ ಪೆÇಲೀಸ್ ಠಾಣೆಯಲ್ಲೂ ದೂರು ಸ್ವೀಕಾರ ಮಾಡಬೇಡಿ ಅಂತ ಹೇಳಿದ್ದಾರೆ. ಸಂಪಗಿ ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಪೊಲೀಸರು ನಿರಾಕರಿಸಿದ್ದಾರೆ.