Tag: ಕಂದಕ

  • ಬಸ್‌ ಕಂದಕಕ್ಕೆ ಉರುಳಿ‌ 22 ಮಂದಿ ಸಾವು – ಮೃತರ ಕುಟುಂಬಗ್ಗೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ!

    ಬಸ್‌ ಕಂದಕಕ್ಕೆ ಉರುಳಿ‌ 22 ಮಂದಿ ಸಾವು – ಮೃತರ ಕುಟುಂಬಗ್ಗೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ!

    ಶ್ರೀನಗರ: ಯಾತ್ರಿಕರಿದ್ದ ಬಸ್‌ವೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು (Bus Accident) ಮೃತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಇನ್ನೂ ಘಟನೆಯಲ್ಲಿ 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಘಟನೆ ಸಂಭವಿಸಿದ ಕೆಲವೇ ಸಮಯದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಉತ್ತರ ಪ್ರದೇಶದ ಹತ್ರಾಸ್‌ನಿಂದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಜಮ್ಮುವಿನ ಅಖ್ನೂರ್ (Akhnoor) ತಾಂಡಾ ಬಳಿ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಜಮ್ಮುವಿನ ಉಪಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

    2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ:
    ಇನ್ನೂ ಘಟನೆ ನೆನೆದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಖ್ನೂರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ಅತೀವವಾದ ನೋವನ್ನುಂಟು ಮಾಡಿದೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ಸಂತಾಪ ಸೂಚಿಸಿದ್ದಾರೆ.

    ಜೆ&ಕೆ ರಾಜ್ಯಪಾಲರಿಂದ 5 ಲಕ್ಷ ರೂ. ಪರಿಹಾರ ಘೋಷಣೆ:
    ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ತಲಾ 2 ಲಕ್ಷ ರೂ. ಹೊರತುಪಡಿಸಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಸಹ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

  • ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಕಂದಕಕ್ಕೆ ಉರುಳಿ‌ 15 ಮಂದಿ ದುರ್ಮರಣ

    ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಕಂದಕಕ್ಕೆ ಉರುಳಿ‌ 15 ಮಂದಿ ದುರ್ಮರಣ

    ಶ್ರೀನಗರ: ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಕಂದಕಕ್ಕೆ ಉರುಳಿ‌ 15 ಮಂದಿ ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu Kashmir) ರಾಜೌರಿ ಜಿಲ್ಲೆಯಲ್ಲಿ ಇಂದು (ಗುರುವಾರ) ನಡೆದಿದೆ.

    ಮಾಹಿತಿ ಪ್ರಕಾರ, ಉತ್ತರ ಪ್ರದೇಶದ ಈ ಬಸ್ ಜಮ್ಮುವಿನಿಂದ ಶಿವಖೋಡಿಗೆ ಹೋಗುತ್ತಿತ್ತು. ಬಸ್ಸಿನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಇದನ್ನೂ ಓದಿ: ಮಂಡಿಯೂರಿ ವೃದ್ಧೆ ಕಾಲಿಗೆ ನಮಸ್ಕರಿಸಿದ ಪ್ರಧಾನಿ ಮೋದಿ ವೀಡಿಯೋ ವೈರಲ್‌

    ಶಿವಖೋಡಿಗೆ ತೆರಳುತ್ತಿದ್ದ ಬಸ್‌ ಅಖ್ನೂರ್ ನ ತುಂಗಿ ಮೋರ್ ಎಂಬಲ್ಲಿ ರಸ್ತೆಯಿಂದ ಜಾರಿ ಸುಮಾರು 150 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ 9 ಮಂದಿ ಮೃತಪಟ್ಟರೆ, 30 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೇ ಗಾಯಾಳುಗಳನ್ನು ಕೂಡ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಎಲ್ಲರನ್ನೂ ಜಮ್ಮುವಿನ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಹಲವು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸ್ಥಳದಲ್ಲಿ ಎಸ್‌ಡಿಎಂ ಅಖ್ನೂರ್ ಲೇಖ್ ರಾಜ್, ಎಸ್‌ಡಿಪಿಒ ಅಖ್ನೂರ್ ಮೋಹನ್ ಶರ್ಮಾ, ಪೊಲೀಸ್ ಠಾಣೆ ಪ್ರಭಾರಿ ಅಖ್ನೂರ್ ತಾರಿಕ್ ಅಹ್ಮದ್ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

  • ಪಾಕಿಸ್ತಾನದಲ್ಲಿ ಬಸ್‌ ಕಮರಿಗೆ ಉರುಳಿ 28 ಮಂದಿ ದುರ್ಮರಣ

    ಪಾಕಿಸ್ತಾನದಲ್ಲಿ ಬಸ್‌ ಕಮರಿಗೆ ಉರುಳಿ 28 ಮಂದಿ ದುರ್ಮರಣ

    ಇಸ್ಲಾಮಾಬಾದ್:‌ ಪಾಕಿಸ್ತಾನದ (Pakistan) ಬಲೂಚಿಸ್ತಾನ್ (Balochistan) ಪ್ರಾಂತ್ಯದಲ್ಲಿ ಬಸ್‌ ಕಮರಿಗೆ ಉರುಳಿದ್ದು, ಮಕ್ಕಳು ಹಾಗೂ ಮಹಿಳೆಯರು ಸೇರಿದಂತೆ ಕನಿಷ್ಠ 28 ಮಂದಿ ಮೃತಪಟ್ಟಿದ್ದಾರೆ.

    ಬಸ್ ಟರ್ಬತ್‌ನಿಂದ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾಕ್ಕೆ ಹೋಗುತ್ತಿತ್ತು. ಹೀಗೆ ಕ್ವೆಟ್ಟಾದಿಂದ ಸುಮಾರು 700 ಕಿಮೀ ದೂರದಲ್ಲಿರುವ ವಾಶುಕ್ ಪಟ್ಟಣದ ಬಳಿ ಕಮರಿಗೆ ಉರುಳಿದೆ. ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದಾರೆ ಎಂಬುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

    6 ಮಂದಿ ಸ್ಥಳದಲ್ಲೇ ಮೃತಪಟ್ಟರೆ, 22 ಮಂದಿ ಬಾಸಿಮಾದ ಸಿವಿಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಹಾಗೂ ಚಿಕಿತ್ಸೆಯ ವೇಳೆ ಮೃತಪಟ್ಟಿದ್ದಾರೆ ಎಂದು ಸಹಾಯಕ ಆಯುಕ್ತ (ಎಸಿ) ಇಸ್ಮಾಯಿಲ್ ಮೆಂಗಲ್ ದೃಢಪಡಿಸಿದ್ದಾರೆ. ತಿರುವಿನಲ್ಲಿ ಬಸ್‌ನ ಟೈಯರ್ ಒಡೆದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಮರಿಗೆ ಬಿದ್ದಿದೆ ಎಂದು ಮೆಂಗಲ್ ಹೇಳಿದರು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ

    ಅತಿವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಸಂಚಾರ ನಿಯಮಗಳು ಮತ್ತು ಸುರಕ್ಷತಾ ಮಾನದಂಡಗಳನ್ನು ಅನುಸರಿಸದ ಪಾಕಿಸ್ತಾನದಲ್ಲಿ ರಸ್ತೆ ಅಪಘಾತಗಳು ಸಾಮಾನ್ಯವಾಗಿದೆ.

  • ಟೂರಿಸ್ಟ್ ಟೆಂಪೋ ಕಂದಕಕ್ಕೆ ಬಿದ್ದು 7 ವಿದ್ಯಾರ್ಥಿಗಳ ದುರ್ಮರಣ, 10 ಮಂದಿಗೆ ಗಾಯ

    ಟೂರಿಸ್ಟ್ ಟೆಂಪೋ ಕಂದಕಕ್ಕೆ ಬಿದ್ದು 7 ವಿದ್ಯಾರ್ಥಿಗಳ ದುರ್ಮರಣ, 10 ಮಂದಿಗೆ ಗಾಯ

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಭಾನುವಾರ ರಾತ್ರಿ ಭೀಕರ ಅಪಘಾತವೊಂದು (Accident) ಸಂಭವಿಸಿದೆ. ಟೂರಿಸ್ಟ್ ಟೆಂಪೋ ಟ್ರಾವೆಲರ್ (Tourist Tempo) ಒಂದು ಕಂದಕಕ್ಕೆ (Ditch) ಬಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 10 ಜನರು ಗಾಯಗೊಂಡಿದ್ದಾರೆ.

    ಘಟನೆ ಹಿಮಾಚಲ ಪ್ರದೇಶದ ಕುಲುವಿನ (Kullu) ಜಲೋಡಿ ಪಾಸ್ ಬಳಿ ನಡೆದಿದೆ. ವಾಹನದಲ್ಲಿ 17 ಜನರು ಪ್ರಯಾಣಿಸುತ್ತಿದ್ದು, ರಾತ್ರಿ 8:30ರ ಸುಮಾರಿಗೆ ದುರ್ಘಟನೆ ನಡೆದಿದೆ. ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಮಧ್ಯರಾತ್ರಿ ಸುಮಾರು 1:37ರ ಹೊತ್ತಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಇದನ್ನೂ ಓದಿ: BBMP ಹೊಸ ಪ್ಲಾನ್ – ರಸ್ತೆ ಗುಂಡಿ ಮುಚ್ಚಲು ಆ್ಯಪ್ ಬಳಕೆ

    ವರದಿಗಳ ಪ್ರಕಾರ ಟೂರಿಸ್ಟ್ ವಾಹನದಲ್ಲಿದ್ದವರು ವಾರಣಾಸಿಯ ವಿದ್ಯಾರ್ಥಿಗಳಾಗಿದ್ದು, ಶೈಕ್ಷಣಿಕ ಪ್ರವಾಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಎಲ್ಲಾ ಗಾಯಾಳುಗಳಿಗೆ ಕುಲುವಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: Training To Be Organised – ಪಿಎಫ್‌ಐ ಪತ್ರ, ಪೊಲೀಸ್‌ ತನಿಖೆ ಚುರುಕು

    Live Tv
    [brid partner=56869869 player=32851 video=960834 autoplay=true]

  • ಚಿತ್ತೂರು ಬಸ್ ದುರಂತಕ್ಕೆ ಮೋದಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

    ಚಿತ್ತೂರು ಬಸ್ ದುರಂತಕ್ಕೆ ಮೋದಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

    – ಗಾಯಾಳುಗಳಿಗೆ 50 ಸಾವಿರ ಪರಿಹಾರ

    ಅಮರಾವತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದ ಬಸ್ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ ದುರಂತ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

    ಘಟನೆಯಲ್ಲಿ 45 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳಿಗೆ 50 ಸಾವಿರ ಪರಿಹಾರ ನೀಡುವುದಾಗಿ ಮೋದಿ ತಿಳಿಸಿದ್ದಾರೆ.

    ಆಗಿದ್ದೇನು..?
    ಶನಿವಾರ ರಾತ್ರಿ 11.30ರ ಸುಮಾರಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಭಾಕರಪೇಟ್‍ನಲ್ಲಿ ಬಸ್ಸೊಂದು ಕಂದಕ್ಕೆ ಬಿದ್ದಿತ್ತು. ಘಟನೆಯಲ್ಲಿ 7 ಮಂದಿ ಮೃತಪಟ್ಟರೆ 45 ಮಂದಿ ಗಾಯಗೊಂಡಿದ್ದಾರೆ.

    ಮದುವೆ ಸಮಾರಂಭಕ್ಕೆಂದು ಖಾಸಗಿ ಬಸ್ ಅನಂತಪುರ ಜಿಲ್ಲೆಯ ಧರ್ಮಾವರಂನಿಂದ ಚಿತ್ತೂರಿನ ನಗರಿ ಬಳಿಯ ಗ್ರಾಮಕ್ಕೆ 52 ಮಂದಿಯನ್ನು ಕರೆದುಕೊಂಡು ಹೋಗುತ್ತಿತ್ತು. ಘಾಟ್ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಸ್ 50 ಅಡಿ ಆಳದ ಪ್ರಪಾತಕ್ಕೆ ಉರುಳಿದೆ.

    ಈ ಸಂಬಂಧ ಪ್ರತಿಕ್ರಿಯಿಸಿದ್ದ ತಿರುಪತಿ ಪೊಲೀಸ್ ವರಿಷ್ಠಾಧಿಕಾರಿ, ಚಾಲಕನ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದರು.

  • ಗೋಕಾಕ್ ಫಾಲ್ಸ್ ಬಳಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ 140 ಅಡಿ ಕಂದಕಕ್ಕೆ ಬಿದ್ದವ ಪವಾಡ ಸದೃಶ ರೀತಿ ಪಾರು

    ಗೋಕಾಕ್ ಫಾಲ್ಸ್ ಬಳಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ 140 ಅಡಿ ಕಂದಕಕ್ಕೆ ಬಿದ್ದವ ಪವಾಡ ಸದೃಶ ರೀತಿ ಪಾರು

    – ಸ್ನೇಹಿತರಿಗೆ ಲೊಕೇಶನ್ ಶೇರ್ ಮಾಡಿದ್ದ ಯುವಕ

    ಬೆಳಗಾವಿ: ಗೋಕಾಕ್ ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ 140 ಅಡಿ ಕಂದಕಕ್ಕೆ ಬಿದ್ದಿದ್ದ ಯುವಕ ಪವಾಡ ಸದೃಶ ರೀತಿ ಪಾರಾಗಿದ್ದು, ಸ್ನೇಹಿತರಿಗೆ ಲೊಕೇಶನ್ ಕಳುಹಿಸಿದ್ದರ ಆಧಾರದ ಮೇಲೆ ರಕ್ಷಿಸಲಾಗಿದೆ.

    ಜಿಲ್ಲೆಯ ಗೋಕಾಕ್ ಫಾಲ್ಸ್ ನಲ್ಲಿ ಬಳಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಯುವಕ ಪ್ರದೀಪ್ ಸಾಗರ್ 140 ಅಡಿ ಕಂದಕಕ್ಕೆ ಬಿದ್ದಿದ್ದ. ಯುವಕನನ್ನು ಗೋಕಾಕ್‍ನ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ ರಕ್ಷಿಸಿದ್ದಾರೆ. ಆಯೂಬ್ ಖಾನ್‍ಗೆ ಪ್ರದೀಪ್ ಸಾಗರ್ ಪೋಷಕರು ಅಳುತ್ತಲೇ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಕಾರು ಬಿಟ್ಟು ಜೆಸಿಬಿಯಲ್ಲಿ ನವ ವಿವಾಹಿತ ದಂಪತಿ ಸವಾರಿ- ವೀಡಿಯೋ ವೈರಲ್

    ಕಲಬುರಗಿ ಜಿಲ್ಲೆಯ ಜೇವರ್ಗಿ ಮೂಲದ ಪ್ರದೀಪ್ ಸಾಗರ್ ಬೆಳಗಾವಿಯ ಖಾಸಗಿ ಬ್ಯಾಂಕ್‍ನಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ರಜೆ ಹಿನ್ನೆಲೆ ಸ್ನೇಹಿತರ ಜೊತೆ ಟ್ರಿಪ್‍ಗೆ ಹೋಗಿದ್ದ. ಈ ವೇಳೆ ಸೆಲ್ಫಿ ಕ್ಲಿಕ್ಕಿಸಲು ಹೋಗಿ 140 ಅಡಿ ಆಳದ ಕಂದಕಕ್ಕೆ ಬಿದ್ದಿದ್ದ. ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ್ದ ಗೋಕಾಕ್ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ, ಪ್ರದೀಪ್ ಸಾಗರ್ ಸಿಗದ್ದಕ್ಕೆ ಬರಿಗೈಲಿ ಮರಳಿದ್ದರು. ಕತ್ತಲಾದ ಹಿನ್ನೆಲೆ ಕಾರ್ಯಾಚರಣೆ ಮೊಟಕುಗೊಳಿಸಿ ತೆರಳಿದ್ದರು. ಇದನ್ನೂ ಓದಿ:  ಮೂವರು ಪ್ರಭಾವಿಗಳು ಸೇರಿ 40 ಬಿಜೆಪಿ ಶಾಸಕರು ಶೀಘ್ರವೇ ಕಾಂಗ್ರೆಸ್‍ಗೆ ಬರುತ್ತಾರೆ: ರಾಜು ಕಾಗೆ

    ಸ್ನೇಹಿತರು ಹಾಗೂ ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ಪ್ರದೀಪ್ ಸಾಗರ್ ಮೃತಪಟ್ಟಿದ್ದಾನೆ ಎಂದೇ ಭಾವಿಸಿದ್ದರು. ಆದರೆ ಬೆಳಗಿನ ಜಾವ 4 ಗಂಟೆಗೆ ಪ್ರದೀಪ್ ಸಾಗರ್ ಸ್ನೇಹಿತರಿಗೆ ಕರೆ ಮಾಡಿದ್ದ. ಅಲ್ಲದೆ ತನ್ನ ಲೊಕೇಶನ್ ಶೇರ್ ಮಾಡಿದ್ದ. ಬಳಿಕ ಸ್ನೇಹಿತರು ಗೋಕಾಕ್ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್‍ಗೆ ಕರೆ ಮಾಡಿದ್ದರು. ಈ ವೇಳೆ ಆಯೂಬ್ ಖಾನ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ 140 ಅಡಿ ಆಳದ ಕಂದಕಕ್ಕೆ ತೆರಳಿ ಪ್ರದೀಪ್ ಸಾಗರ್ ರಕ್ಷಿಸಿದ್ದಾರೆ. ಆಯೂಬ್ ಖಾನ್ ಹಾಗೂ ರಕ್ಷಣಾ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರದೀಪ್ ಸಾಗರ್ ಸದ್ಯ ಗೋಕಾಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

  • ರಸ್ತೆಯಲ್ಲಿ ಕಂದಕ ನಿರ್ಮಿಸಿ ಪಂಚಾಯತಿ ಸದಸ್ಯೆ ಪತಿ ದರ್ಬಾರ್

    ರಸ್ತೆಯಲ್ಲಿ ಕಂದಕ ನಿರ್ಮಿಸಿ ಪಂಚಾಯತಿ ಸದಸ್ಯೆ ಪತಿ ದರ್ಬಾರ್

    ನೆಲಮಂಗಲ: ಅನಾದಿ ಕಾಲದಿಂದಲೂ ಓಡಾಡುತ್ತಿದ್ದ ರಸ್ತೆಗೆ ಅಡ್ಡಲಾಗಿ ಗ್ರಾಮ ಪಂಚಾಯತಿ ಸದಸ್ಯೆ ಪತಿ ಜೆಸಿಬಿಯಿಂದ ಕಂದಕ ತೋಡಿ ರಸ್ತೆ ಮುಚ್ಚಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಲಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ಕುಲುವನ ಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆಗೆ ಚುನಾವಣೆ ಹಿನ್ನೆಲೆ ಯಾರೊಬ್ಬರು ಮತ ನೀಡಿಲ್ಲ ಎಂಬ ಕಾರಣಕ್ಕೆ ಗ್ರಾಮ ಪಂಚಾಯತಿ ಸದಸ್ಯೆ ಪತಿರಾಯ ಶಿವಕುಮಾರ್ ಗ್ರಾಮದಲ್ಲಿ ಅಶಾಂತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಶಿವಕುಮಾರ್ ಅವರ ಮೇಲೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡದೇ ಅಂಧ ದರ್ಬಾರ್ ನಡೆಸುತ್ತಿರುವ ಆರೋಪ ಕೇಳಿ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತನ್ನ ಜಮೀನಿನ ಮುಖಾಂತರ ಊರಿನ ಜನಗಳು ಕೆರೆಗೆ ಓಡಾಡುತ್ತಾರೆ ಎನ್ನುವ ಉದ್ದೇಶದಿಂದ ಮೊನ್ನೆಯಷ್ಟೇ ಗ್ರಾಮದ ಕಾಂಕ್ರೀಟ್ ರಸ್ತೆಗೆ ಅಡ್ಡಲಾಗಿ ಮಣ್ಣು ಸುರಿಸಿರುವ ಆರೋಪ ಈಗ ಕೇಳಿ ಬಂದಿದೆ. ಇದನ್ನೂ ಓದಿ: 7 ಕೋಟಿ ಮೊತ್ತದ ಅಡಿಕೆಯ ಜೊತೆ 7 ಲಾರಿ ಜಪ್ತಿ – 7 ಮಂದಿ ಅರೆಸ್ಟ್

    ಗ್ರಾಮ ಪಂಚಾಯತಿಗೆ ಭೇಟಿ ನೀಡಿದ ಸಿಇಒ ಶಿವಕುಮಾರ್ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಎಂದು ಆದೇಶಿಸಿದ್ದರು. ಈ ಹಿನ್ನೆಲೆ ಕಾಂಕ್ರೀಟ್ ರಸ್ತೆಗೆ ಅಡ್ಡಲಾಗಿ ಹಾಕಿದ್ದ ಮಣ್ಣನ್ನು ತೆರವುಗೊಳಿಸಿದ್ದಾರೆ. ಈಗ ಆತನ ಜಮೀನಿನ ದಾರಿಯಲ್ಲಿ ಸಾರ್ವಜನಿಕರು ಕೆರೆಗೆ ಓಡಾಡುತ್ತಾರೆ ಎಂದು ರಸ್ತೆಗೆ ಅಡ್ಡಲಾಗಿ ಕಂದಕ ತೆಗೆದು ಬೇಲಿ ಹಾಕಿದ್ದಾರೆ. ಇದನ್ನೂ ಓದಿ: ಯೋಗ ಇರೋರು ಮಾತ್ರ ಯೋಗ ಮಾಡುತ್ತಾರೆ: ಡಿಸಿ ಆರ್ ಲತಾ

    ಗ್ರಾಮದ ಹಿರಿಯರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 50ಕ್ಕಿಂತಲೂ ಹೆಚ್ಚು ಕಂದಕ ತೋಡಿದ್ದ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ನಮಗೆ ರಸ್ತೆ ಬೇಕು ಇಲ್ಲಿನ ಜನ ರೈತಾಪಿ ವರ್ಗದವಾರಗಿದ್ದು, ನಮಗೆ ಪ್ರತಿಯೊಂದಕ್ಕೂ ಕೆರೆಗೆ ಹೋಗಬೇಕಿದೆ. ಆದ್ದರಿಂದ ಸಂಬಂಧಪಟ್ಟವರು ನಮ್ಮ ಗ್ರಾಮಕ್ಕೆ ಬಂದು ಕೆರೆಗೆ ರಸ್ತೆ ಕಲ್ಪಿಸಿ ಎಂದು ಮನವಿ ಮಾಡಿದ್ದಾರೆ.

  • ಬೆಳಗಾವಿಯಲ್ಲಿ ಬಾಯ್ಬಿಟ್ಟ ಭೂಮಿ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ

    ಬೆಳಗಾವಿಯಲ್ಲಿ ಬಾಯ್ಬಿಟ್ಟ ಭೂಮಿ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ

    ಬೆಳಗಾವಿ: ಕಳೆದ ಹದಿನೈದು ದಿನಗಳಿಂದ ಅಲ್ಲಿ ದಿನದಿಂದ ದಿನಕ್ಕೆ ಭೂಮಿ ಕುಸಿಯುತ್ತಾ ಹೋಗುತ್ತಿದೆ. ಆತಂಕದಲ್ಲಿ ಅಲ್ಲಿನ ಗ್ರಾಮಸ್ಥರು ದಿನ ಕಳೆಯುತ್ತಿದ್ದರೆ, ಇತ್ತ ಭೂಕುಸಿದಿರುವ ಸ್ಥಳ ನೋಡಲು ಜನರು ಮುಗಿ ಬೀಳುತ್ತಿದ್ದಾರೆ. ಅಪಾಯ ಅಂತಾ ಗೊತ್ತಿದ್ದರೂ ಯುವಕರು ಆಳಕ್ಕಿಳಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ಅವಾಂತರ ಅಲ್ಲಿ ನಡೆಯುತ್ತಿದ್ದರೂ ಯಾರಿಗೆ ಎನಾದ್ರೇನೂ ಅದಕ್ಕೂ ನಮಗೂ ಸಂಬಂಧ ಇಲ್ಲ ಎನ್ನುವಂತೆ ತಾಲೂಕು ಆಡಳಿತಾಧಿಕಾರಿಗಳು ಕುಳಿತಿದ್ದಾರೆ.

    ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕುಳ್ಳೂರಿನಲ್ಲಿ ಕಳೆದ 15 ಹದಿನೈದು ದಿನಗಳಿಂದ ಜಮೀನು ಮತ್ತು ರಸ್ತೆಗಳಲ್ಲಿ ಅಲ್ಲಲ್ಲಿ ದೊಡ್ಡ ದೊಡ್ಡ ಹೊಂಡ ಬಿದ್ದಿದೆ. ಈ ಕಂದಕಗಳನ್ನು ನೋಡೋಕೆ ಅಂತಾನೇ ಡೈಲಿ ಸಾವಿರಾರು ಜನ ಬರುತ್ತಿದ್ದಾರೆ. ಊರೋರು ಸಾಲಲ್ಲ ಎಂದು ಕಾರು, ಟಾಟಾ ಏಸ್, ಟ್ರ್ಯಾಕ್ಟರ್ ಮಾಡಿಕೊಂಡು ಬಂದು ಕಂದಕ ನೋಡಿ ಗಾಬರಿಯಿಂದ ವಾಪಸ್ ಹೋಗುತ್ತಿದ್ದಾರೆ ಎಂದು ಗ್ರಾಮಸ್ಥರಾದ ರವಿ ಹೇಳಿದ್ದಾರೆ. ಇದನ್ನೂ ಓದಿ: ಕುಸಿದ ಜಾಗದಲ್ಲೇ ಭೂಮಿ ತಾಯಿಗೆ ವಿಶೇಷ ಪೂಜೆ

    ಯುವಕರನ್ನಂತೂ ಕೇಳೋದೇ ಬೇಡ, ಗ್ರಾಮದ ದೊಡ್ಡವರೆಲ್ಲಾ ಹಿಂಗಾದ್ರೆ ಹೆಂಗೆ ಎಂದು ಗಾಬರಿ ಪಡುತ್ತಿದ್ದರೆ, ಯುವಕರು ಆ ಕಂದಕಕ್ಕೇ ಇಳಿದು ಸೆಲ್ಫಿ ತೆಗೆದುಕೊಳ್ಳುದ್ದಾರೆ. ಒಂದು ಸಾರಿ ನೆಪಮಾತ್ರಕ್ಕೆ ಭೇಟಿ ಕೊಟ್ಟು ಹೋದ ಅಧಿಕಾರಿಗಳು ಮತ್ತೆ ಇತ್ತ ತಿರುಗಿಯೇ ನೋಡುತ್ತಿಲ್ಲ. ಅಲ್ಲದೆ ಕುಸಿದ ರಸ್ತೆಯನ್ನು ಸರಿಪಡಿಸಿ ಸಂಚಾರಕ್ಕೂ ಅನುವು ಮಾಡಿಕೊಡುತ್ತಿಲ್ಲ. ಹೀಗಾಗಿ ಊರಿನ ಜನ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿ ಮಹಾಂತೇಶ್ ತಿಳಿಸಿದ್ದಾರೆ.

  • ಕಂದಕಕ್ಕೆ ಉರುಳಿದ ಬಸ್ – ಮರಗಳಿಂದಾಗಿ 70 ಮಂದಿ ಪಾರು

    ಕಂದಕಕ್ಕೆ ಉರುಳಿದ ಬಸ್ – ಮರಗಳಿಂದಾಗಿ 70 ಮಂದಿ ಪಾರು

    – ಮಿಸ್ಸಾಗಿದ್ರೆ 200 ಅಡಿ ಆಳಕ್ಕೆ ಬೀಳುತಿತ್ತು ಬಸ್

    ಗಾಂಧಿನಗರ: ಕಂದಕಕ್ಕೆ ಉರುಳಿ ಬೀಳುತ್ತಿದ್ದ ಬಸ್ಸಿನಲ್ಲಿದ್ದ 70 ಮಂದಿ ಪ್ರಯಾಣಿಕರು ಮರಗಳಿಂದಾಗಿ ಪವಾಡಸದೃಶವಾಗಿ ಪಾರಾದ ಘಟನೆ ಗುಜರಾತಿನ ಸೂರತ್‍ನಲ್ಲಿ ನಡೆದಿದೆ.

    ಈ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ಸೂರತ್‍ನ ಡೈಮಂಡ್ ಸಿಟಿ ವ್ಯಾಪ್ತಿಯಲ್ಲಿ ಖಾಸಗಿ ಬಸ್ ಶಿರಡಿಗೆ ಹೋಗುತ್ತಿತ್ತು. ಈ ದಾರಿ ಗುಡ್ಡಗಾಡು ಪ್ರದೇಶವಾಗಿದ್ದರಿಂದ ರಸ್ತೆ ತುಂಬ ಕಿರಿದಾಗಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಜಾರಿದೆ. ಆದರೆ ಆ ಸ್ಥಳದಲ್ಲಿ ಸಾಕಷ್ಟು ಮರಗಳಿದ್ದರಿಂದ 200 ಅಡಿ ಆಳದ ಕಂದಕಕ್ಕೆ ಉರುಳದೇ ಬಸ್ ಅಲ್ಲೇ ಸಿಕ್ಕಿಹಾಕಿಕೊಂಡಿದೆ. ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಬಾಗಿಲ ಮೂಲಕವೇ ಹೊರ ಬಂದಿದ್ದಾರೆ.

    ಸಹರಾ ದರ್ವಜಾ ಪ್ರದೇಶದಿಂದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಿರಡಿಗೆ ಹೋಗುತ್ತಿದ್ದೆವು. ಬಸ್ ಡ್ಯಾಂಗ್ ಜಿಲ್ಲೆಯಲ್ಲಿ ಗುಡ್ಡಗಾಡು ಪ್ರದೇಶದಲ್ಲಿ ಹೋಗುತಿತ್ತು. ಆಗ ಮಲೆಗಾವ್-ಸಪುತಾರಾಯಲ್ಲಿ ಕಡಿದಾದ ದಾರಿಯಲ್ಲಿ ಚಾಲಕ ತಿರುವು ತೆಗೆದುಕೊಳ್ಳುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪ್ರಯಾಣಿಕರು ಪೊಲೀಸರಿಗೆ ವಿವರಿಸಿದ್ದಾರೆ.

    ಸದ್ಯಕ್ಕೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇತ್ತ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

    ಸಹರಾ ದರ್ವಜಾದ ನಿವಾಸಿಗಳಾದ ರಾಥೋಡ್ ಕುಟುಂಬದ ಸದಸ್ಯರು ಶಿರಡಿಗೆ ತೆರಳಲು ಖಾಸಗಿ ಬಸ್ ಬುಕ್ ಮಾಡಿಕೊಂಡು ಹೊರಟಿದ್ದರು ಎಂದು ತಿಳಿದು ಬಂದಿದೆ.

  • 80 ಅಡಿಯ ಕಂದಕಕ್ಕೆ ಕಾರ್ ಪಲ್ಟಿ- ದಂಪತಿ ಸೇರಿ ನಾಲ್ವರು ದುರ್ಮರಣ

    80 ಅಡಿಯ ಕಂದಕಕ್ಕೆ ಕಾರ್ ಪಲ್ಟಿ- ದಂಪತಿ ಸೇರಿ ನಾಲ್ವರು ದುರ್ಮರಣ

    ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ವ್ಯಾಗನರ್ ಕಾರೊಂದು 80 ಅಡಿಯ ಕಂದಕಕ್ಕೆ ಬಿದ್ದು ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಹೀರೇಬೈಲು ಗ್ರಾಮದ ಬಳಿ ನಡೆದಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ವಿಶ್ವನಾಥ್ (55), ಪುಷ್ಪಾವತಿ (48) ದಂಪತಿ ಹಾಗೂ ರಾಹುಲ್ ರೈ (58) ಮಮತಾ (51) ದಂಪತಿ ಮೃತ ದುರ್ದೈವಿಗಳು. ಈ ಅಪಘಾತದ ಸಂಜು ಶೆಟ್ಟಿ ಎಂಬರಿಗೆ ಗಾಯವಾಗಿದ್ದು, ಅವರನ್ನು ಕಳಸ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ವಿಶ್ವನಾಥ್ ಸೇರಿದಂತೆ ಒಟ್ಟು 5 ಜನರು ಮೂಡಿಗೆರೆ ತಾಲೂಕಿನ ಬಾಳೆಹೊಳೆ ಗ್ರಾಮದಲ್ಲಿ ಸಂಬಂಧಿಕರ ಮನೆಗೆ ಯಕ್ಷಗಾನ ನೋಡಲು ವ್ಯಾಗನರ್ ಕಾರಿನಲ್ಲಿ ಬರುತ್ತಿದ್ದರು. ಕಳಸದಿಂದ ಬಾಳೆಹೊಳೆ ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದರಿಂದ ಈ ಅವಘಡ ಸಂಭವಿಸಿದೆ. ಈ ದೃಶ್ಯವನ್ನು ನೋಡಿದ ಸ್ಥಳೀಯರು ಘಟನಾ ಸ್ಥಳಕ್ಕೆ ಬರುವಷ್ಟರಲ್ಲಿ ಕಾರು 80 ಅಡಿ ಆಳದ ಕಂದಕಕ್ಕೆ ಬಿದ್ದಿದ್ದರಿಂದ ಕಾರಿನಲ್ಲಿದ್ದವರು ಕುಳಿತ್ತಿದ್ದ ಜಾಗದಲ್ಲೇ ಪ್ರಾಣ ಬಿಟ್ಟಿದ್ದರು.

    ಈ ಘಟನೆಯ ಕುರಿತು ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಗಂಭೀರ ಗಾಯಗೊಂಡಿದ್ದ ಸಂಜು ಶೆಟ್ಟಿ ಅವರನ್ನು ಕಳಸದ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv