Tag: ಕಂಪ್ಲಿ

  • Ballari | ಮಟ್ಕಾ ದಂಧೆ ಬಯಲಿಗೆಳೆದ ವ್ಯಕ್ತಿಯ ಮೇಲೆ ಅಟ್ರಾಸಿಟಿ ಕೇಸ್

    Ballari | ಮಟ್ಕಾ ದಂಧೆ ಬಯಲಿಗೆಳೆದ ವ್ಯಕ್ತಿಯ ಮೇಲೆ ಅಟ್ರಾಸಿಟಿ ಕೇಸ್

    ಬಳ್ಳಾರಿ: ಅಕ್ರಮ ಜೂಜಾಟ (Gambling) ಬಯಲು ಮಾಡಿದ ವ್ಯಕ್ತಿ ಮೇಲೆಯೇ ಪೊಲೀಸರು ಅಟ್ರಾಸಿಟಿ ಕೇಸ್ (Atrocity Case) ದಾಖಲಿಸಿರುವ ಘಟನೆ ಬಳ್ಳಾರಿಯ (Ballari) ಕಂಪ್ಲಿಯಲ್ಲಿ (Kampli) ಬೆಳಕಿಗೆ ಬಂದಿದೆ. ಕಂಪ್ಲಿ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

    ಕಳೆದ ವಾರ ಕಂಪ್ಲಿಯಲ್ಲಿ ಮಟ್ಕಾ ನಡೆಯುವ ಐದು ಸ್ಥಳಗಳಿಗೆ ಹೋಗಿ ನಾರಾಯಣಸ್ವಾಮಿ ಎಂಬವರು ವೀಡಿಯೋ ಮಾಡಿ, ಧಂದೆಯ ಕರಾಳ ಮುಖ ಬಯಲು ಮಾಡಿದ್ದರು. ಆದರೆ ಮಟ್ಕಾ ದಂಧೆ ಬಯಲಿಗೆಳೆದ ನಾರಾಯಣಸ್ವಾಮಿ ಮೇಲೆಯೇ ಮಟ್ಕಾ ಬರೆಸುತ್ತಿದ್ದ ಆರೋಪಿ ಜಂಬಣ್ಣ ಎನ್ನುವಾತ ಅಟ್ರಾಸಿಟಿ ಕೇಸ್ ಹಾಕಿದ್ದಾನೆ. ಮಟ್ಕಾ ದಂಧೆಕೋರ ಜಂಬಣ್ಣನಿಂದಲೇ ನಾರಾಯಣಸ್ವಾಮಿ ವಿರುದ್ಧ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದು ಮುಖ್ಯ: ಬಿ.ವೈ.ವಿಜಯೇಂದ್ರ ಅಭಿಪ್ರಾಯ

    ಇದೇ ಮಟ್ಕಾ ದಂಧೆಕೋರ ಜಂಬಣ್ಣನ ವಿರುದ್ಧ ಮಟ್ಕಾ ಬರೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಪ್ರಕರಣಗಳು ಕಂಪ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ನಿರಂತರವಾಗಿ ಮಟ್ಕಾ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದ ಕಾರಣಕ್ಕೆ ನಾರಾಯಣಸ್ವಾಮಿ ರಹಸ್ಯವಾಗಿ ವೀಡಿಯೋ ಮಾಡಿಕೊಂಡು ಬಂದಿದ್ದ. ಇದನ್ನೇ ನೆಪವಾಗಿ ಇಟ್ಟುಕೊಂಡ ಮಟ್ಕಾ ಬುಕ್ಕಿ ಜಂಬಣ್ಣ ನಾರಾಯಣಸ್ವಾಮಿ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾನೆ. ಹೀಗಾಗಿ ಜೀವ ಭಯದಲ್ಲಿ ಸಾಮಾಜಿಕ ಹೋರಾಟಗಾರ ನಾರಾಯಣ ಸ್ವಾಮಿ ಓಡಾಡುತ್ತಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | 3 ವರ್ಷಗಳಲ್ಲಿ 536 ಮಂದಿ ಆತ್ಮಹತ್ಯೆ – ಮಹಿಳೆಯರಿಗಿಂತ ಪುರುಷರ ಸಂಖ್ಯೆಯೇ ಹೆಚ್ಚು!

    ಇನ್ನೂ ವೀಡಿಯೋ ಮಾಡುವ ವೇಳೆ ನಾರಾಯಣಸ್ವಾಮಿ ಮೇಲೆ ದಂಧೆಕೋರರು ಹಲ್ಲೆ ಮಾಡಿದ್ದರು. ಅಷ್ಟೆಲ್ಲಾ ಆದಮೇಲೂ ಪೊಲೀಸರು ರಕ್ಷಣೆ ನೀಡಿಲ್ಲ ಎಂದು ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಕಂಪ್ಲಿ ಪೊಲೀಸರೇ ಮಟ್ಕಾ ಬುಕ್ಕಿಗಳಿಗೆ ಸಾಥ್ ನೀಡುತ್ತಿದ್ದಾರೆ ಎಂದು ಪಬ್ಲಿಕ್ ಟಿವಿ ಮುಂದೆ ನಾರಾಯಣಸ್ವಾಮಿ ಅಳಲು ತೋಡಿಕೊಂಡಿದ್ದಾರೆ. ಕಂಪ್ಲಿ ಸಿಪಿಐ ಮಟ್ಕಾಗೆ ಸಾಥ್ ಕೊಟ್ಟಿದ್ದಾರೆ. ಅದಕ್ಕೆ ನನ್ನ ಮೇಲೆ ಅಟ್ರಾಸಿಟಿ ಕೇಸ್ ಹಾಕಲಾಗಿದೆ. ಮಟ್ಕಾ ಬುಕ್ಕಿಗಳಿಂದ ನನಗೆ ಜೀವಭಯ ಇದೆ ಎಂದು ನಾರಾಯಣಸ್ವಾಮಿ ನೋವು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಗದಗ | ಕಾರಿನ ಮೇಲೆ ಪಾಕ್ ಧ್ವಜ ಪ್ರದರ್ಶನ – ಅಪ್ರಾಪ್ತನ ವಿರುದ್ಧ ಕೇಸ್

  • ಮನೆಯಲ್ಲಿನ ಫ್ರಿಡ್ಜ್‌ ಸ್ಫೋಟ -ತಪ್ಪಿತು ಭಾರೀ ಅನಾಹುತ

    ಮನೆಯಲ್ಲಿನ ಫ್ರಿಡ್ಜ್‌ ಸ್ಫೋಟ -ತಪ್ಪಿತು ಭಾರೀ ಅನಾಹುತ

    ಬಳ್ಳಾರಿ: ಮನೆಯೊಂದರಲ್ಲಿದ್ದ ಫ್ರಿಡ್ಜ್‌ (Fridge) ಸ್ಫೋಟಗೊಂಡ (Blast) ಘಟನೆ ಕಂಪ್ಲಿ ಪಟ್ಟಣದ ವಾರ್ಡ್ ನಂ 13 ರಲ್ಲಿ ನಡೆದಿದೆ.

    ಶರೀಫ್‌ ಸಾಬ್ ಅವರ ಮನೆಯಲ್ಲಿದ್ದ ಫ್ರಿಡ್ಜ್‌ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಮನೆಯಲ್ಲಿ (House) ಯಾರು ಇಲ್ಲದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಇದನ್ನೂ ಓದಿ: ರಾಜ್ಯದಲ್ಲಿ ಜಾತಿಗಣತಿಗೆ ದಿನಾಂಕ ಫಿಕ್ಸ್‌ ಸೆ.22ರಿಂದ ಅ.7ರ ವರೆಗೆ ಸಮೀಕ್ಷೆ ನಡೆಸಲು ನಿರ್ಧಾರ

    ರೆಫ್ರಿಜರೇಟರ್ ಸ್ಪೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಪೋಟದಿಂದ ಮನೆ ಗೋಡೆ ಬಿರಕು ಬಿಟ್ಟಿದ್ದು, ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಜೆಸ್ಕಾಂ ಎಇ ವಿನೋದ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ಯಾಸ್‌ ಲೀಕ್‌ ಆಗಿ ಫ್ರಿಡ್ಜ್‌ ಸ್ಫೋಟಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

  • ರೀಲ್ಸ್‌ಗಾಗಿ ಕಂಪ್ಲಿ ಸೇತುವೆಯಿಂದ ಜಿಗಿದು ಹುಚ್ಚಾಟ

    ರೀಲ್ಸ್‌ಗಾಗಿ ಕಂಪ್ಲಿ ಸೇತುವೆಯಿಂದ ಜಿಗಿದು ಹುಚ್ಚಾಟ

    ಬಳ್ಳಾರಿ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಭದ್ರಾ ನದಿಗೆ (Tungabhadra River) ಹಾರಿ ಯುವಕ ಹುಚ್ಚಾಟ ಮೆರೆದಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ (Kampli) ಬಳಿ ನಡೆದಿದೆ.

    ರಿಲ್ಸ್‌ಗಾಗಿ (Reels) ಯುವಕ ಕಂಪ್ಲಿ ಸೇತುವೆಯಿಂದ ತುಂಗಭದ್ರಾ ನದಿಗೆ ಹಾರಿದ್ದಾನೆ. ಹರಿಯುವ ನದಿಯಲ್ಲಿ ಮೊಸಳೆ, ವಿಷ ಜಂತುಗಳು ತೇಲಿ ಬರುತ್ತಿವೆ. ಈಗಾಗಲೇ ಅಧಿಕಾರಿಗಳು ಅಪಾಯದ ಮುನ್ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಇಂದಲ್ಲ, ನಾಳೆ ಸಿಎಂ ಆಗೇ ಆಗ್ತಾರೆ: ಶಾಸಕ ರಂಗನಾಥ್

    ಅಪಾಯದ ಅರಿವಿದ್ದರೂ ಸೇತುವೆ ಮೇಲಿನಿಂದ ಜಿಗಿದಿದ್ದಾನೆ. ರೀಲ್ಸ್‌ಗಾಗಿ ತುಂಗಭದ್ರಾ ನದಿಗೆ ಹಾರಿದ ಯುವಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

  • ಆಲಿಕಲ್ಲು ಮಳೆಗೆ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಹಾಳು – ಕಂಗಲಾದ ಕಂಪ್ಲಿಯ ರೈತರು

    ಆಲಿಕಲ್ಲು ಮಳೆಗೆ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಹಾಳು – ಕಂಗಲಾದ ಕಂಪ್ಲಿಯ ರೈತರು

    ಬಳ್ಳಾರಿ: ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು (Hailstorm) ಸಹಿತ ಭಾರೀ ಮಳೆಯಿಂದ (Rain) ಬೆಳೆಗಳು ಹಾಳಾಗಿದ್ದು ಅನ್ನದಾತರು (Farmers) ಸಂಕಷ್ಟಕ್ಕೀಡಾಗಿದ್ದಾರೆ. ಮಳೆಗೆ ಭತ್ತದ ಬೆಳೆ ಸಂಪೂರ್ಣ ಹಾಳಾಗಿದ್ದು ರೈತರು ಸಾಲದ ಸುಳಿಗೆ ಸಿಲುಕುವಂತಾಗಿದೆ.

    ಕಂಪ್ಲಿ (Kampli) ತಾಲೂಕಿನ ವ್ಯಾಪ್ತಿಯ 150 ಎಕರೆಗೂ ಅಧಿಕ ಭತ್ತದ ಬೆಳೆ ಆಲಿಕಲ್ಲು ಮಳೆಗೆ ನಾಶವಾಗಿದೆ. ಈಗಾಗಲೇ ಭತ್ತ ಕಟಾವಿಗೆ ಬಂದಿತ್ತು. ಆದರೆ ಮಳೆಗೆ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಹಾಳಾಗಿದೆ. ಬೆಳೆ ಹಾಳಾಗಿದ್ರೂ ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮೋದಿ

     

    ಲಕ್ಷಾಂತರ ಖರ್ಚು ಮಾಡಿ ಬೆಳೆ ಬೆಳೆದಿದ್ದೆವು. ಆದರೆ ಇನ್ನೇನು ಬೆಳೆ ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ಮಳೆರಾಯ ಆಹುತಿ ಪಡೆದಿದ್ದಾನೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ನಾವು ಸಾಲದ ಸುಳಿಗೆ ಸಿಲುಕಿದ್ದೇವೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.  ಇದನ್ನೂ ಓದಿ: Anytime, Anywhere – ಬ್ರಹ್ಮೋಸ್‌ ಹಾರಿಸಿ ಎಲ್ಲದ್ದಕ್ಕೂ ಸಿದ್ಧ ಎಂದ ನೌಕಾಸೇನೆ

    ಜಯನಗರ ಜಿಲ್ಲೆಯಾದ್ಯಂತ ಭಾರಿ ಗಾಳಿ, ಸಿಡಿಲು ಸಹಿತ ಸುರಿದ ಮಳೆಗೆ ಹಲವು ಅವಾಂತರ ಸೃಷ್ಟಿಯಾಗಿವೆ. ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ತುಂಬಿನಕೇರಿ ತಾಂಡಾದಲ್ಲಿ ರೈತ ಸಂಕ್ರನಾಯ್ಕ್ ಎನ್ನುವವರಿಗೆ ಸೇರಿದ್ದ ಎತ್ತು ಸಿಡಿಲು ಬಡಿದು ಸಾವನ್ನಪ್ಪಿದೆ. ಪೂರ್ವ ಮುಂಗಾರು ಮಳೆ ಉತ್ತಮವಾಗಿದ್ದರಿಂದ ಕೃಷಿ ಚಟುವಟಿಕೆ ಚುರುಕುಕೊಂಡಿದೆ. ಹೀಗಾಗಿ ವಾರದ ಹಿಂದೆಯಷ್ಟೇ ಸಂಕ್ರಾನಾಯ್ಕ್ ಎತ್ತು ಖರೀದಿಸಿದ್ದರು.

    ಲ್ಲೆಯ ಹಲವೆಡೆ ಬಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ರಾಜ್ಯ ಹೆದ್ದಾರಿ 25 ರ ಉಪನಾಯಕನಹಳ್ಳಿ ಗ್ರಾಮದ ಲಕ್ಷ್ಮೀ ಪೌಲ್ಟ್ರೀ ಫಾರಂ ಬಳಿ ರಸ್ತೆಗೆ ಮರಗಳು ಉರುಳಿ ಬಿದ್ದಿವೆ.

  • ಎಕ್ಸೆಲ್‌ ತುಂಡಾಯ್ತು – ಆಟೋ ಪಲ್ಟಿ, ಯುವಕ ಸಾವು

    ಎಕ್ಸೆಲ್‌ ತುಂಡಾಯ್ತು – ಆಟೋ ಪಲ್ಟಿ, ಯುವಕ ಸಾವು

    ಬಳ್ಳಾರಿ: ಎಕ್ಸೆಲ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ರಿಕ್ಷಾ ಪಲ್ಟಿಯಾಗಿ ಯುವಕನೋರ್ವ ಮೃತ ಪಟ್ಟರುವ ಘಟನೆ ಕಂಪ್ಲಿಯ (Kampli) ತುಂಗಭದ್ರಾ ಸೇತುವೆ (Tungabhadra Bridge) ಮೇಲೆ ನಡೆದಿದೆ.

    ಕಂಪ್ಲಿಯ ಎನ್.ಆಸ್ಲಾಂ(24) ಮೃತಪಟ್ಟಿರುವ ಯುವಕ. ಗಂಗಾವತಿಯಿಂದ ಕಂಪ್ಲಿಗೆ ತುಂಗಭದ್ರಾ ನದಿ ಸೇತುವೆ ಮೇಲೆ ಬರುತ್ತಿದ್ದಾಗ ರಿಕ್ಷಾದ ಎಕ್ಸೆಲ್ ತುಂಡಾಗಿದೆ. ಪರಿಣಾಮ ರಿಕ್ಷಾ ನಿಯಂತ್ರಣ ತಪ್ಪಿ ನೆಲಕ್ಕೆ ವಾಲಿದ್ದರಿಂದ ಪ್ರಯಾಣಿಕರು ಕೆಳಗೆ ಬಿದ್ದು ಗಾಯಗೊಂಡಿದ್ದರು. ಇದನ್ನೂ ಓದಿ: ಯಲ್ಲಾಪುರ ಅಪಘಾತ| ಸಾವಿನ ಸಂಖ್ಯೆ 10ಕ್ಕೆ ಏರಿಕೆ – ಮೃತರು ಯಾರು? ವಯಸ್ಸು ಎಷ್ಟು?

     

    ಎನ್.ಆಸ್ಲಾಂ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಂಗಾವತಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಆಮೀನಾಬೀ ಎನ್ನುವ ವೃದ್ಧೆಯ ಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು ಬಳ್ಳಾರಿಯ ವಿಮ್ಸ್ ಗೆ ದಾಖಲಿಸಲಾಗಿದೆ.

     

  • Ballari | ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    Ballari | ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    ಬಳ್ಳಾರಿ: ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ (Ballari) ಜಿಲ್ಲೆ ಕಂಪ್ಲಿ (Kampli) ತಾಲೂಕಿನ ಮೆಟ್ರಿ ಹೊನ್ನಳಿ ಗ್ರಾಮದಲ್ಲಿ ನಡೆದಿದೆ.

    ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ಸೇವಿಸಿದ ಬಳಿಕ ವಿದಾರ್ಥಿಗಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಡುಗೆ ಸಿಬ್ಬಂದಿ ನಿರ್ಲಕ್ಷದಿಂದಲೇ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೆಲ ಕೋರ್ಟ್‌ಗಳು ಬಿಜೆಪಿ ಹೇಳಿದಂತೆ ಕೇಳುತ್ತಿವೆ: ಯತೀಂದ್ರ ಸಿದ್ದರಾಮಯ್ಯ

    ತಹಶೀಲ್ದಾರ್ ಹಾಗೂ ತಾಲೂಕು ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ. ನಿರ್ಲಕ್ಷ್ಯ ತೋರಿದ ಅಡುಗೆ ಸಿಬ್ಬಂದಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದಾರೆ. ಇದನ್ನೂ ಓದಿ: ತುರ್ತು ವಿಚಾರಣೆಗೆ ಇ-ಮೇಲ್ ಮಾಡಿ, ಮೌಖಿಕ ಮನವಿ ನಡೆಯಲ್ಲ: ನೂತನ ಸಿಜೆಐ ಸಂಜೀವ್ ಖನ್ನಾ ಸೂಚನೆ

  • ಫೆಬ್ರವರಿಯಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಜಮೀರ್

    ಫೆಬ್ರವರಿಯಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಜಮೀರ್

    ಬಳ್ಳಾರಿ: ಮುಂಬರುವ ಫೆಬ್ರವರಿ ತಿಂಗಳಲ್ಲಿ ಕಂಪ್ಲಿ (Kampli) ವಿಧಾನಸಭಾ ಕ್ಷೇತ್ರಕ್ಕೆ ವಸತಿ ಇಲಾಖೆಯಿಂದ ಹೆಚ್ಚುವರಿಯಾಗಿ 10 ಸಾವಿರ ಮನೆಗಳನ್ನು ನೀಡಲಾಗುವುದು ಎಂದು ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಬಳ್ಳಾರಿ (Ballary) ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ (Zameer Ahmed) ಹೇಳಿದರು.

    ಕಂಪ್ಲಿ ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಸಲುವಾಗಿ ಎಸ್.ಎನ್.ಪೇಟೆ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಇದನ್ನೂ ಓದಿ: ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ್‌ಗೆ ಮಾತೃ ವಿಯೋಗ

    ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಂಪ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಮಂಜೂರು ಮಾಡಿದರು. ನಮ್ಮ ಸರ್ಕಾರವು ಸರ್ವರಿಗೂ ಸೂರು ಸಿಗಲಿ ಎಂಬ ಉದ್ದೇಶ ಹೊಂದಿದೆ. ಈ ಹಿಂದೆ ವಿವಿಧ ಕಾರಣಗಳಿಂದಾಗಿ ನನೆಗುದಿಗೆ ಬಿದ್ದಿದ್ದ ಮನೆಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದು, ಫೆಬ್ರವರಿ ತಿಂಗಳಲ್ಲಿ ಹಂತ ಹಂತವಾಗಿ ಮನೆ ವಿತರಿಸಲಾಗುವುದು ಎಂದು ಭರವಸೆ ನೀಡಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು, ನಮ್ಮ ಇಲಾಖೆಗೆ ಸಾಕಷ್ಟು ಅನುದಾನ ನೀಡಿದ್ದು, ಯಾವುದೇ ಅನುದಾನದ ಕೊರತೆ ಇಲ್ಲ. ಅದೇ ರೀತಿಯಾಗಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸಿ ನುಡಿದಂತೆ ನಡೆದುಕೊಂಡು ಬಂದಿದೆ. ಬಡಜನರ ಕಲ್ಯಾಣಕ್ಕಾಗಿ, ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಈ ಬಾರಿಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ 3,200 ಕೋಟಿ ರೂ. ನೀಡಲಾಗಿದೆ. ಈ ಪೈಕಿ 1,620 ಕೋಟಿ ರೂ. ಶಿಕ್ಷಣಕ್ಕೆ ವೆಚ್ಚ ಮಾಡಲಾಗುತ್ತಿದೆ ಎಂದರು.ಇದನ್ನೂ ಓದಿ: ಪೂರ್ಣವಾಗಿ ಲಾಕ್‌ ಆಗುತ್ತಿಲ್ಲ ಹಿಪ್ಪರಗಿ ಬ್ಯಾರಜ್‌ನ 7ನೇ ಗೇಟ್‌

  • ಜ್ಞಾನ ದೀವಿಗೆ – ಕಂಪ್ಲಿಯ ಮೂರು ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಟ್ಯಾಬ್

    ಜ್ಞಾನ ದೀವಿಗೆ – ಕಂಪ್ಲಿಯ ಮೂರು ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಟ್ಯಾಬ್

    ಬಳ್ಳಾರಿ: ಪಬ್ಲಿಕ್ ಟಿವಿ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಹಕಾರದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಮಾಡಲಾಯಿತು. ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಒಟ್ಟು ಮೂರು ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಟ್ಯಾಬ್ ಗಳನ್ನು ವಿತರಣೆ ಮಾಡಲಾಯಿತು.

    ಕಂಪ್ಲಿಯ ಸರ್ಕಾರಿ ಬಾಲಕರ ಪ್ರೌಢ ಶಾಲೆಯ ಒಟ್ಟು 155 ಮಕ್ಕಳಿಗೆ 78 ಟ್ಯಾಬ್ ಗಳನ್ನು ಹಾಗೂ ಚಿಕ್ಕಜಾಯಿಗನೂರು ಶಾಲೆಯ ಸರ್ಕಾರಿ ಪ್ರೌಢ ಶಾಲೆಯ ಒಟ್ಟು 38 ಮಕ್ಕಳಿಗೆ 19 ಟ್ಯಾಬ್ ಗಳನ್ನು ಹಾಗೂ ಬಾಲಕಿಯರ ಪ್ರೌಢ ಶಾಲೆ ಕಂಪ್ಲಿಯ ಶಾಲೆಯ ಒಟ್ಟು 208 ಮಕ್ಕಳಿಗೆ 104 ಟ್ಯಾಬ್ ಗಳನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸುನಂದಾ ಅವರು ಭಾಗವಹಿಸಿ, ಪಬ್ಲಿಕ್ ಟಿವಿ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಕಳೆದ ನಾಲ್ಕು ತಿಂಗಳಲ್ಲಿ ಜಿಲ್ಲೆಯ ಹೊಸಪೇಟೆ ಹಾಗೂ ಕಂಪ್ಲಿ ತಾಲೂಕಿನ ಪ್ರತಿ ಮಕ್ಕಳಿಗೆ ಟ್ಯಾಬ್ ಗಳನ್ನು ಪಬ್ಲಿಕ್ ಟಿವಿ ನೀಡಿದೆ. ಅವರ ಈ ಕಾರ್ಯ ಮಕ್ಕಳ ಬಾಳಲ್ಲಿ ಒಂದು ಹೊಸ ಹುಮ್ಮಸ್ಸು ತರಿಸಿದೆ. ಪಬ್ಲಿಕ್ ಟಿವಿ ಅವರು ಮತ್ತಷ್ಟು ಇದೇ ರೀತಿಯಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುವಂತೆ ಸುನಂದಾ ಹಾರೈಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ಅನುಪಸ್ಥಿತಿಯಲ್ಲಿ ಟ್ಯಾಬ್ ಗಳನ್ನು ಮೂರು ಶಾಲೆಯ ಮಕ್ಕಳಿಗೆ ನೀಡಲಾಯಿತು. ಕೊರೊನಾ ಸಮಯದಲ್ಲಿ ಶಾಲೆಗಳು ಇಲ್ಲದೆ ಕಲಿಕೆಯಲ್ಲಿ ನಾವು ಹಿಂದೆ ಬಿದ್ದಿದ್ದು ಉಳಿದ ದಿನಗಳನ್ನು ಈ ಟ್ಯಾಬ್ ನೋಡಿಕೊಂಡು ಉತ್ತಮ ಫಲಿತಾಂಶ ತರುತ್ತೇವೆ ಎಂದು ಮಕ್ಕಳ ಹೇಳಿದ್ದಾರೆ.

  • ಸಭೆ ಸಮಾರಂಭದಲ್ಲಿ ಬಳ್ಳಾರಿ ಪೊಲೀಸರು ಭಾಗಿ ಆಗುವುದಕ್ಕೆ ಬ್ರೇಕ್

    ಸಭೆ ಸಮಾರಂಭದಲ್ಲಿ ಬಳ್ಳಾರಿ ಪೊಲೀಸರು ಭಾಗಿ ಆಗುವುದಕ್ಕೆ ಬ್ರೇಕ್

    ಬಳ್ಳಾರಿ: ಜಿಲ್ಲೆಯಲ್ಲಿ ದಿನೇ ದಿನೇ ಸೋಂಕು ಹೆಚ್ಚಾಗುತ್ತಿದೆ. ಅದರಲ್ಲೂ ಕೊರೊನಾ ವಾರಿಯರ್ಸ್ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ವ್ಯಾಪಿಸುತ್ತಿದೆ. ಕೆಲವು ಕಡೆ ಇಡೀ ಠಾಣೆ ಸೀಲ್‍ಡೌನ್ ಮಾಡಬೇಕಾದ ಸ್ಥಿತಿ ಎದುರಾಗಿದೆ.

    ಇನ್ಮುಂದೆ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಯಾವುದೇ ರೀತಿಯ ಕಾರ್ಯಕ್ರಮ ಪಾರ್ಟಿಗಳಿಗೆ ಹಾಜರಾಗುವಂತಿಲ್ಲ. ಮದುವೆ, ನಾಮಕರಣ ಸೇರಿದಂತೆ ಯಾವುದೇ ಪಾರ್ಟಿಗಳಿಗೆ ಭಾಗಿಯಾಗುವಂತಿಲ್ಲ ಎಂದು ಬಳ್ಳಾರಿ ಎಸ್‍ಪಿ ಸಿ.ಕೆ.ಬಾಬಾ ಆದೇಶವೊಂದನ್ನು ಹೊರಡಿಸಿದ್ದಾರೆ. ಒಂದು ವೇಳೆ ಭಾಗಿಯಾಗುವಂತಿದ್ದರೆ ಎಸ್.ಪಿ ಕಚೇರಿಯಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕಾಗುತ್ತದೆ.

    ಕಂಪ್ಲಿಯ ಎಸ್‍ಐ ಒಬ್ಬರು ಮಾಡಿದ ಪಾರ್ಟಿಯಲ್ಲಿ ಭಾಗಿಯಾಗಿದ್ದ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಇಡೀ ಠಾಣೆಯನ್ನೇ ಸೀಲ್ ಮಾಡಲಾಗಿತ್ತು. ಇನ್ಮುಂದೆ ಇಂತಹ ಯಾವುದೇ ರೀತಿಯ ಪಾರ್ಟಿ, ಕಾರ್ಯಕ್ರಮ ಆಯೋಜಿಸುವುದನ್ನ ನಿರ್ಬಂಧಿಸಿ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಮಾಡಿದ್ದಾರೆ.

    ಜಿಲ್ಲೆಯ ಕಂಪ್ಲಿ ಪಟ್ಟಣದ ಪೊಲೀಸ್ ಠಾಣೆಯ 51 ವರ್ಷದ ಸಿಪಿಐಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಸೋಂಕಿತ ಸಿಪಿಐ ಅವರನ್ನು ಕೋವಿಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಕಳೆದ ಒಂದು ವಾರದ ಹಿಂದೆ ಕಂಪ್ಲಿ ಪೊಲೀಸ್ ಠಾಣೆ ಪಿಎಸ್‍ಐ ಅವರಿಗೆ ಗಂಡು ಮಗು ಜನಿಸಿತ್ತು. ಹೀಗಾಗಿ ನಗರದ ಹೊರ ವಲಯದ ಸಮುದಾಯ ಭವನದಲ್ಲಿ ಭರ್ಜರಿ ಪಾರ್ಟಿ ಕೊಟ್ಟಿದ್ದರು. ಅದೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಕಂಪ್ಲಿ ಪೊಲೀಸ್ ಠಾಣೆಯ ಪೇದೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಕಾರಣ ಸಂಪೂರ್ಣ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

  • ಪಿಎಸ್‍ಐಗೆ ಮಗ ಹುಟ್ಟಿದ್ದಕ್ಕೆ ಕೊಟ್ಟ ಪಾರ್ಟಿಗೆ ತೆರಳಿ ಸೋಂಕು ತಗುಲಿಸಿಕೊಂಡ ಸಿಪಿಐ

    ಪಿಎಸ್‍ಐಗೆ ಮಗ ಹುಟ್ಟಿದ್ದಕ್ಕೆ ಕೊಟ್ಟ ಪಾರ್ಟಿಗೆ ತೆರಳಿ ಸೋಂಕು ತಗುಲಿಸಿಕೊಂಡ ಸಿಪಿಐ

    ಬಳ್ಳಾರಿ: ಜಿಲ್ಲೆಯ ಕಂಪ್ಲಿ ಪಟ್ಟಣದ ಪೊಲೀಸ್ ಠಾಣೆಯ 51 ವರ್ಷದ ಸಿಪಿಐಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಸೋಂಕಿತ ಸಿಪಿಐ ಅವರನ್ನು ಕೋವಿಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಕಳೆದ ಒಂದು ವಾರದ ಹಿಂದೆ ಕಂಪ್ಲಿ ಪೊಲೀಸ್ ಠಾಣೆ ಪಿಎಸ್‍ಐ ಅವರಿಗೆ ಗಂಡು ಮಗು ಜನಿಸಿತ್ತು. ಹೀಗಾಗಿ ನಗರದ ಹೊರ ವಲಯದ ಸಮುದಾಯ ಭವನದಲ್ಲಿ ಭರ್ಜರಿ ಪಾರ್ಟಿ ಕೊಟ್ಟಿದ್ದರು. ಅದೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಕಂಪ್ಲಿ ಪೊಲೀಸ್ ಠಾಣೆಯ ಪೇದೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಕಾರಣ ಸಂಪೂರ್ಣ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

    ಅದೇ ಪಾರ್ಟಿಯಲ್ಲಿ ಕಂಪ್ಲಿ ಸಿಪಿಐ ಸಹ ಭಾಗಿ ಆಗಿದ್ದರು. ಹೀಗಾಗಿ ಕಂಪ್ಲಿ ಪೊಲೀಸ್ ಠಾಣೆಯ ಸಿಬ್ಬಂದಿ ಸೇರಿದಂತೆ ಹೋಮ್ ಗಾರ್ಡ್ ಅವರನ್ನು ಕ್ವಾರೆಂಟೈನ್ ನಾಡಲಾಗಿತ್ತು. ಆದರೆ ಪೊಲೀಸ್ ಸಿಬ್ಬಂದಿಯ ರ್ಯಾಂಡಮ್ ಟೆಸ್ಟ್ ಮಾಡಿದ್ದು ನಿನ್ನೆ 52 ಜನರಲ್ಲಿ ಸಿಪಿಐ ಅವರಿಗೆ ಸೋಂಕು ಇರುವುದು ದೃಢವಾಗಿದೆ. ಹೀಗಾಗಿ ಉಳಿದ ಸಿಬ್ಬಂದಿಯಲ್ಲಿ ಸಹ ಕೊರೊನಾ ಭಯ ಉಂಟು ಮಾಡಿದೆ.

    ಕಂಪ್ಲಿ ಠಾಣೆ ಸಿಪಿಐ ವಾಹನದ ಚಾಲಕ ಸೇರಿ ಕಂಪ್ಲಿ ಹಾಗೂ ಕಮಲಾಪುರ ಠಾಣೆಯ ಮೂವರು ಪಿಎಸ್‍ಐಗಳು ಹಾಗೂ ಪೇದೆಗಳು ಸಂಪರ್ಕದಲ್ಲಿದ್ದರು ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಸದ್ಯ ಪಟ್ಟಣದ ಠಾಣೆಯ ಎಲ್ಲಾ ಸಿಬ್ಬಂದಿಯನ್ನು ಕ್ವಾರೈಂಟೈನಲ್ಲಿ ಇಡಲಾಗುವುದು. ಅಲ್ಲದೇ ಪೇದೆಯೊಂದಿಗೆ ಸಂಪರ್ಕದಲ್ಲಿದ್ದ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚಲಾಗುತ್ತಿದೆ. ಕಂಪ್ಲಿ ಪೊಲೀಸ್ ಠಾಣೆಯ ಸಿಪಿಐ ಅವರ ಮನೆಗೆ ರಾಸಾಯನಿಕ ದ್ರಾವಣ ಸಿಂಪಡಣೆ ಮಾಡಲಾಗಿದೆ.