Tag: ಕಚೋರಿ

  • ಇಂದು ಮಾಡಿ ಬಿಸಿಯಾದ ಗರಂ ಗರಂ ಕಚೋರಿ

    ಇಂದು ಮಾಡಿ ಬಿಸಿಯಾದ ಗರಂ ಗರಂ ಕಚೋರಿ

    ತಂಪಾದ ವಾತಾವರಣಕ್ಕೆ ಏನಾದರೂ ಬಿಸಿಬಿಸಿ, ರುಚಿಯಾದ ಖಾದ್ಯ ತಿನ್ನಲಿದ್ದರೆ ಬಹಳ ಚೆನ್ನಾಗಿರುತ್ತದೆ ಎಂದು ಹೆಚ್ಚಿನವರಿಗೆ ಅನಿಸುವುದುಂಟು. ಆದರೆ ಅದೇ ಬಜ್ಜಿ, ಬೋಂಡಾ ತಿಂದು ಬೇಜಾರಾಗಿದ್ದರೆ, ಬಿಸಿ ಬಿಸಿಯಾದ ಕಚೋರಿ ಒಮ್ಮೆ ಟ್ರೈ ಮಾಡಬಹುದು. ಮಕ್ಕಳು ಕಚೋರಿಯನ್ನು ತುಂಬಾ ಇಷ್ಟಪಟ್ಟು ತಿನ್ನುತ್ತಾರೆ.

    ಬೇಕಾಗುವ ಸಾಮಗ್ರಿಗಳು:
    * ಮೈದಾಹಿಟ್ಟು – 2 ಕಪ್
    * ರುಚಿಗೆ ತಕ್ಕಷ್ಟು ಉಪ್ಪು
    * ಅಜ್ವಾನ – ಅರ್ಧ ಚಮಚ
    * ಅಡುಗೆ ಎಣ್ಣೆ- ಅರ್ಧ ಕಪ್
    * ದನಿಯಾ – 1 ಚಮಚ
    * ಜೀರಿಗೆ – 1 ಚಮಚ
    * ಸೋಂಪು – 1 ಚಮಚ
    * ಈರುಳ್ಳಿ – 3
    * ಹಸಿಮೆಣಸು – 2
    * ಕಡಲೆಹಿಟ್ಟು – 2 ಚಮಚ
    * ಖಾರದ ಪುಡಿ – 1 ಚಮಚ
    * ಗರಂಮಸಾಲೆ – ಅರ್ಧ ಚಮಚ
    * ಕಾಳುಮೆಣಸಿನ ಪುಡಿ – ಅರ್ಧ ಚಮಚ
    * ಅರಿಸಿಣ ಪುಡಿ – ಚಿಟಿಕೆ
    * ಆಲೂಗೆಡ್ಡೆ – 3 (ಬೇಯಿಸಿದ್ದು)
    * ಕೊತ್ತಂಬರಿ ಸೊಪ್ಪು – ಸ್ವಲ್ಪ
    * ಸಕ್ಕರೆ- 1 ಚಮಚ

    ಮಾಡುವ ವಿಧಾನ:
    * ಮೈದಾಹಿಟ್ಟಿಗೆ ಉಪ್ಪು, ಅಜ್ವಾನ, ಅಡುಗೆಎಣ್ಣೆ ಹಾಗೂ ಸ್ವಲ್ಪ ಸ್ವಲ್ಪ ನೀರು ಸೇರಿಸಿ ಚಪಾತಿ ಹಟ್ಟಿನ ಹದಕ್ಕೆ ಕಲೆಸಿಕೊಂಡು 20 ನಿಮಿಷಗಳ ಕಾಲ ನೆನೆಸಿಡಿ.
    * ದನಿಯಾ, ಜೀರಿಗೆ ಹಾಗೂ ಸೋಂಪನ್ನು ಹುಡಿ ಮಾಡಿಕೊಳ್ಳಿ. ಇದನ್ನೂ ಓದಿ:  ನಾಲಿಗೆ ಚಪ್ಪರಿಸಿ ತಿನ್ನುವ ಶುಂಠಿ ಉಪ್ಪಿನಕಾಯಿ ಮಾಡುವ ವಿಧಾನ

    * ಪಾತ್ರೆಯೊಂದಕ್ಕೆ 3 ಅಡುಗೆಎಣ್ಣೆ, ಈರುಳ್ಳಿ, ಹಸಿಮೆಣಸು, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಕಡಲೆಹಿಟ್ಟು, ಖಾರದಪುಡಿ, ಗರಂಮಸಾಲೆ, ಕಾಳುಮೆಣಸಿನ ಪುಡಿ, ಅರಿಸಿನ ಪುಡಿ, ಇಂಗು ಹಾಗೂ ಈಗಾಗಲೇ ಹುಡಿ ಮಾಡಿಟ್ಟುಕೊಂಡ ಹುಡಿಯನ್ನು ಸೇರಿಸಿ ಎಲ್ಲವನ್ನೂ ಮಿಶ್ರಣ ಮಾಡಿ ಬೇಯಿಸಿಕೊಳ್ಳಬೇಕು. ಇದನ್ನೂ ಓದಿ:   ಅಕ್ಕಿ ರೊಟ್ಟಿಗೆ ಕಾಂಬಿನೇಷನ್ ಖಾರವಾದ ಚಿಕನ್ ಮಸಾಲ


    * ಅದಕ್ಕೆ ಪುಡಿ ಮಾಡಿದ ಆಲೂಗೆಡ್ಡೆ ಕೊತ್ತಂಬರಿ ಸೊಪ್ಪು, ಸಕ್ಕರೆ ಸೇರಿಸಿ ಕಲೆಸಿ. ಇದನ್ನು ಉಂಡೆ ಮಾಡಿಕೊಳ್ಳಿ. ಮೈದಾಹಿಟ್ಟಿನ ಮಿಶ್ರಣವನ್ನು ಉಂಡೆ ಮಾಡಿಕೊಂಡು ಅಂಗೈ ಅಗಲಕ್ಕೆ ತಟ್ಟಿಕೊಳ್ಳಿ. ಅದರೊಳಗೆ ಆಲೂಗೆಡ್ಡೆ ಉಂಡೆಯನ್ನು ಇರಿಸಿ ಲಟ್ಟಿಸಿಕೊಳ್ಳಿ. ಇದನ್ನು ಎಣ್ಣೆಯಲ್ಲಿ ಕರಿದರೆ ಕಚೋರಿ ಸವಿಯಲು ಸಿದ್ಧವಾಗುತ್ತದೆ.  ಇದನ್ನೂ ಓದಿ: ಚಳಿಗೆ ಬಿಸಿ ಬಿಸಿಯಾದ ಇಡ್ಲಿ ಮಂಚೂರಿ ಸಖತ್ ಟೇಸ್ಟ್

  • ರಸ್ತೆಬದಿ ದಹಿ ಕಚೋರಿ ಮಾರುವ 14ರ ಬಾಲಕನ ಭಾವನಾತ್ಮಕ ಕಥೆ

    ರಸ್ತೆಬದಿ ದಹಿ ಕಚೋರಿ ಮಾರುವ 14ರ ಬಾಲಕನ ಭಾವನಾತ್ಮಕ ಕಥೆ

    ಅಹಮದಾಬಾದ್: ಅಹಮದಾಬಾದ್‍ನ ರಸ್ತೆಬದಿಯಲ್ಲಿ ದಹಿ ಕಚೋರಿ ವ್ಯಾಪಾರ ಮಾಡುವ 14 ವರ್ಷದ ಬಾಲಕನ ಭಾವನಾತ್ಮಕ ಕಥೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    boy kachori

    ಈ ವೀಡಿಯೋವನ್ನು ಫುಡ್ ಬ್ಲಾಗರ್ ಡೋಯಶ್ ಪತ್ರಾಬೆ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದು, ವೀಡಿಯೋದಲ್ಲಿ ಬಾಲಕ ಮಣಿನಗರ ರೈಲ್ವೆ ನಿಲ್ದಾಣದ ಎದುರಿಗಿರುವ ಅಂಗಡಿಯೊಂದರಲ್ಲಿ ವ್ಯಾಪಾರ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: USನಿಂದ 157 ಪುರಾತನ ಕಲಾಕೃತಿಗಳನ್ನು ವಾಪಸ್ ಭಾರತಕ್ಕೆ ತಂದ ಪ್ರಧಾನಿ ಮೋದಿ

    boy kachori

    ಬಾಲಕ ತನ್ನ ಕುಟುಂಬಕ್ಕೆ ಸಹಾಯ ಮಾಡಲು ಕಚೋರಿ ವ್ಯಾಪಾರ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಬಾಲಕನ ಸಂಪೂರ್ಣ ಕಥೆ ಕೇಳಿ ಡೊಯಾಶ್ ಭಾವುಕಗೊಂಡು ವೀಡಿಯೋ ಹಂಚಿಕೊಳ್ಳುವುದರ ಜೊತೆಗೆ ಬಾಲಕನಿಗೆ ಸಹಾಯ ಮಾಡುವಂತೆ ಶೀರ್ಷಿಕೆಯಲ್ಲಿ ಬರೆದು ವಿನಂತಿಸಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿ- ಡ್ರೈವರ್ ಗ್ರೇಟ್ ಎಸ್ಕೇಪ್

    ಅವನಿಗೆ ಸಹಾಯ ಮಾಡಿ. ಬಾಲಕ 14 ವರ್ಷ ವಯಸ್ಸಿನವನಾಗಿದ್ದು, ಗುಜರಾತ್‍ನ ಅಹಮದಾಬಾದ್‍ನ ಮಣಿನಗರ ರೈಲ್ವೆ ನಿಲ್ದಾಣದ ಎದುರು ಕೇವಲ 10ರೂ.ಗೆ ದಹಿ ಕಚೋರಿ ಮಾರುತ್ತಿದ್ದಾನೆ. ಅವನಿಗೆ ಸಹಾಯ ಮಾಡಬೇಕೆಂದು ವೀಡಿಯೋವನ್ನು ಹಂಚಿಕೊಂಡಿದ್ದೇನೆ. ಕೇವಲ 14 ವರ್ಷಕ್ಕೆ ಅವನ ಕುಟುಂಬಕ್ಕೆ ಸಹಾಯ ಮಾಡಲು ಬಾಲಕ ಶ್ರಮಿಸುತ್ತಿದ್ದಾನೆ. ಅವನ ಬಗ್ಗೆ ಹೆಮ್ಮೆಯಾಗುತ್ತಿದೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

    ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಬಾಲಕನ ಬಗ್ಗೆ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ ಮತ್ತು ಆತನಿಗೆ ಧೈರ್ಯ ತುಂಬುತ್ತಿದ್ದಾರೆ. ಜೊತೆಗೆ ವೀಡಿಯೋವನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಧನ್ನೆಗಾಂವ್ ಜಲಾಶಯದಿಂದ ನೀರು ಬಿಡುಗಡೆ ಮಾಂಜ್ರಾ ನದಿ ದಡದಲ್ಲಿ ಪ್ರವಾಹ ಭೀತಿ