Tag: ಕಟೀಲು ದುರ್ಗಾಪರಮೇಶ್ವರಿ

  • ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಶಿಲ್ಪಾ ಶೆಟ್ಟಿ

    ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಶಿಲ್ಪಾ ಶೆಟ್ಟಿ

    ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ (Shilpa Shetty) ಅವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ರಾಜಮೌಳಿ ಮೇಲೆ ಗಂಭೀರ ಆರೋಪ : ನಿರ್ಮಾಪಕ ಆತ್ಮಹತ್ಯೆ

    ಕುಟುಂಬದೊಂದಿಗೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿಲ್ಪಾ ಶೆಟ್ಟಿಯವರ ಮಗ, ಮಗಳು, ತಾಯಿ, ತಂಗಿ ನಟಿ ಶಮಿತಾ ಶೆಟ್ಟಿ ಜೊತೆ ಬಂದು ಕಟೀಲು ದೇವಿಯ ದರ್ಶನ ಪಡೆದು ಮಲ್ಲಿಗೆ ಹೂವು ಹರಕೆ ರೂಪದಲ್ಲಿ ದೇವಿಗೆ ನೀಡಿದ್ದಾರೆ. ಕಟೀಲು ಪರಿಸರದ ಮೊದಲಾಡಿಗುತ್ತುನಲ್ಲಿ ಮೂಲ ಮನೆ ಹೊಂದಿರುವ ಶಿಲ್ಪಾ ಶೆಟ್ಟಿ ಆಗಾಗ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡುತ್ತಿರುತ್ತಾರೆ.

    ಅಂದಹಾಗೆ, ನಟಿ ಶಿಲ್ಪಾ ಶೆಟ್ಟಿ ಅವರು ಡೈರೆಕ್ಟರ್ ಪ್ರೇಮ್ ಮತ್ತು ಧ್ರುವ ಸರ್ಜಾ ನಟನೆಯ ‘ಕೆಡಿ’ (KD Film) ಸಿನಿಮಾದಲ್ಲಿ ಪವರ್‌ಫುಲ್ ಪಾತ್ರದಲ್ಲಿ ನಟಿಸಿದ್ದಾರೆ. ಹಲವು ವರ್ಷಗಳ ಬಳಿಕ ಈ ಚಿತ್ರದ ಮೂಲಕ ಅವರು ಕಮ್‌ಬ್ಯಾಕ್ ಆಗುತ್ತಿದ್ದಾರೆ. ಸದ್ಯದಲ್ಲೇ ಈ ಸಿನಿಮಾ ರಿಲೀಸ್‌ ಆಗಲಿದೆ.

  • ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಡಾಲಿ, ನವೀನ್‌ ಶಂಕರ್

    ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಡಾಲಿ, ನವೀನ್‌ ಶಂಕರ್

    ನ್ನಡದ ನಟ ಡಾಲಿ (Daali Dhananjay) ಸದ್ಯ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಸಿನಿಮಾ ಕೆಲಸಕ್ಕೆ ಬ್ರೇಕ್‌ ಸಿಕ್ಕ ಬೆನ್ನಲ್ಲೇ ಸ್ನೇಹಿತರ ಜೊತೆ ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಡಾಲಿ ಭೇಟಿ ನೀಡಿದ್ದಾರೆ. ಇದನ್ನೂ ಓದಿ:BBK 11: ಬಿಗ್‌ ಬಾಸ್‌ ನಿರೂಪಣೆಗೆ ಕಿಚ್ಚ ಸುದೀಪ್‌ ಗುಡ್‌ಬೈ

    ‘ಸಲಾರ್’ ನಟ ನವೀನ್ ಶಂಕರ್ (Naveen Shankar) ಜೊತೆ ಡಾಲಿ ಧನಂಜಯ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ಈ ವೇಳೆ, ಡಾಲಿ ಮತ್ತು ನವೀನ್ ಶಂಕರ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ.

    ಅಂದಹಾಗೆ, ಅಣ್ಣ ಫ್ರಂ ಮೆಕ್ಸಿಕೋ, ಉತ್ತರಕಾಂಡ, ನಾಡಪ್ರಭು ಕೆಂಪೇಗೌಡ ಸೇರಿದಂತೆ ಡಾಲಿ ಕೈಯಲ್ಲಿ ಹಲವು ಸಿನಿಮಾಗಳಿವೆ. ಜೊತೆಗೆ ತಮ್ಮದೇ ನಿರ್ಮಾಣ ಸಂಸ್ಥೆಯ ಮೂಲಕ ಹೊಸ ಪ್ರತಿಭೆಗಳಿಗೆ ಧನಂಜಯ ಅವಕಾಶ ನೀಡುತ್ತಿದ್ದಾರೆ. ಇನ್ನೂ ಶಿವಣ್ಣ ನಟನೆಯ ಹೊಸ ಸಿನಿಮಾದಲ್ಲಿ ನವೀನ್ ಶಂಕರ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

  • ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸುದೀಪ್ ದಂಪತಿ ಭೇಟಿ

    ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸುದೀಪ್ ದಂಪತಿ ಭೇಟಿ

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ದಂಪತಿ ಕಟೀಲು ದುರ್ಗಾಪರಮೇಶ್ವರಿ (Kateel Durgaparameshwari Temple) ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಬಿಗ್ ಬಾಸ್‌ನ(Bigg Boss) ವಾರಾಂತ್ಯದ ಶೂಟಿಂಗ್ ಮುಗಿಸಿ, ಕಟೀಲು ದೇವಿಯ ದರ್ಶನಕ್ಕೆ ಸುದೀಪ್ ಬಂದಿದ್ದಾರೆ.

    ವಿಕ್ರಾಂತ್ ರೋಣ ಸಿನಿಮಾದ ನಂತರ ಬಿಗ್ ಬಾಸ್ ಸೀಸನ್ 9ರ ನಿರೂಪಣೆಯ ಹೊಣೆ ಹೊತ್ತಿರುವ ಕಿಚ್ಚ ಸುದೀಪ್ ಇದೀಗ ಖಾಸಗಿ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಮಂಗಳೂರಿಗೆ ಬಂದಿದ್ದಾರೆ. ಈ ವೇಳೆ ಕಟೀಲು ದುರ್ಗಾಪರಮೇಶ್ವರಿ ಸನ್ನಿಧಾನಕ್ಕೆ ಪತ್ನಿ ಪ್ರಿಯಾ(Priya Sudeep) ಜೊತೆ ಸುದೀಪ್ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ದೊಡ್ಮನೆ ಯುವರಾಜನಿಗೆ ನಾಯಕಿ ಯಾರು? ಕೊನೆಗೂ ಸಿಕ್ತು ಅಪ್‌ಡೇಟ್

    ಕಟೀಲು ಮತ್ತು ಮುಲ್ಕಿ ಕಾರ್ಯಕ್ರಮದಲ್ಲಿವೊಂದರಲ್ಲಿ ಭಾಗವಹಿಸಲು ಸುದೀಪ್ ತಮ್ಮ ಕುಟುಂಬದ ಜೊತೆ ಬಂದಿದ್ದಾರೆ. ಈ ವೇಳೆ ಕಟೀಲು ದೇವಸ್ಥಾನದ ವತಿಯಿಂದ ಸುದೀಪ್‌ಗೆ ಆತ್ಮೀಯವಾಗಿ ಗೌರವಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿಎಂ ಆಗಿ ಕಟೀಲಿಗೆ ಬಂದಿದ್ದ ಡಿವಿಎಸ್ – 9 ವರ್ಷಗಳ ಬಳಿಕ ಅದೇ ದಿನ ರಾಜೀನಾಮೆ

    ಸಿಎಂ ಆಗಿ ಕಟೀಲಿಗೆ ಬಂದಿದ್ದ ಡಿವಿಎಸ್ – 9 ವರ್ಷಗಳ ಬಳಿಕ ಅದೇ ದಿನ ರಾಜೀನಾಮೆ

    ಬೆಂಗಳೂರು: 2012ರಲ್ಲಿ ಡಿ.ವಿ ಸದಾನಂದ ಗೌಡ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಜುಲೈ 7 ರಂದು ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅದಾದ 9 ವರ್ಷಗಳ ಬಳಿಕ ಕಾಕತಾಳೀಯವೆಂಬಂತೆ ಇದೇ ದಿನ ಕೇಂದ್ರ ಸಚಿವ ಸಂಪುಟಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿಎಸ್ ರಾಜೀನಾಮೆ ನೀಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾಗಿದೆ. ಕರ್ನಾಟಕದ ನಾಲ್ವರು ಮೋದಿ ಸಂಪುಟಕ್ಕೆ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಡಿವಿಎಸ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿಂದೆ ಇದೇ ದಿನ ಮುಖ್ಯಮಂತ್ರಿಯಾಗಿದ್ದ ವೇಳೆ ಕಟೀಲಿಗೆ ಬಂದು ದೇವಿ ದರ್ಶನ ಪಡೆದಿದ್ದರು. ಇದೇ ದಿನ ಇಂದು ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಮೋದಿ ಸಂಪುಟದಲ್ಲಿ ಸದಾನಂದ ಗೌಡರು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಡಿ.ವಿ ಸದಾನಂದ ಗೌಡ ರಾಜೀನಾಮೆ

    ಮೋದಿ ಸಂಪುಟದಲ್ಲಿ ಎರಡು ಬಾರಿ ಸಚಿವರಾಗಿದ್ದ ಡಿವಿಎಸ್, ಇಂದು ಕೇಂದ್ರ ಸಂಪುಟದಲ್ಲಿರುವ ವರಿಷ್ಠರ ಸೂಚನೆಯಂತೆ ರಾಜೀನಾಮೆ ನೀಡಿದ್ದಾರೆ. ಸದಾನಂದ ಗೌಡ ಅವರು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸೇರ್ಪಡೆಯಾಗಿದ್ದಾರೆ.

    ಕಳೆದ ವಾರವೇ ಡಿವಿಎಸ್ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ ಎಂಬ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು. ಡಿವಿಎಸ್ ಬದಲಿಗೆ ಒಕ್ಕಲಿಗರಾಗಿರುವ ಶೋಭಾ ಕರಂದ್ಲಾಜೆ ಅಥವಾ ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರಿಗೆ ಮಂತ್ರಿಗಿರಿ ಸಿಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದ್ದವು.

  • ಬಡವರಿಗೆ ಊಟ ನೀಡದೆ ಖಾಸಗಿ ಆಸ್ಪತ್ರೆಗೆ ಕಟೀಲಿನಿಂದ ಆಹಾರ ರವಾನೆ

    ಬಡವರಿಗೆ ಊಟ ನೀಡದೆ ಖಾಸಗಿ ಆಸ್ಪತ್ರೆಗೆ ಕಟೀಲಿನಿಂದ ಆಹಾರ ರವಾನೆ

    ಮಂಗಳೂರು: ನಿರ್ವಸಿತ ಕೂಲಿ ಕಾರ್ಮಿಕರಿಗೆ ಮತ್ತು ನಿರ್ಗತಿಕರಿಗೆ ಮುಜರಾಯಿ ಇಲಾಖೆಯ ಎ ದರ್ಜೆಯ ದೇವಸ್ಥಾನಗಳಿಂದ ಊಟ ನೀಡಲು ಸರಕಾರ ಆದೇಶ ಮಾಡಿದೆ. ಆದರೆ ಎ ದರ್ಜೆಯ ಹೆಚ್ಚಿನ ದೇವಸ್ಥಾನಗಳಿಂದ ಈ ಆದೇಶ ಪಾಲನೆಯಾಗುತ್ತಿಲ್ಲ.

    ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಎ ದರ್ಜೆಯ ದೇವಸ್ಥಾನ ಆಗಿರುವ ಕಟೀಲು ದುರ್ಗಾಪರಮೇಶ್ವರಿ ದೇಗುಲದಿಂದ ಖಾಸಗಿ ಕೆಎಂಸಿ ಆಸ್ಪತ್ರೆಗೆ ಗುಪ್ತವಾಗಿ ಊಟ ರವಾನಿಸುತ್ತಿರುವ ವಿಡಿಯೋ ಈಗ ಹರಿದಾಡುತ್ತಿದೆ. ದೇವಸ್ಥಾನದ ಅಕ್ಕಿ ಬಳಸಿ, ಅಲ್ಲಿನ ಅಡುಗೆ ಕಾರ್ಮಿಕರ ಮೂಲಕ ಊಟ ರೆಡಿ ಮಾಡಲಾಗುತ್ತಿದ್ದು ದಿನವೊಂದಕ್ಕೆ ಎರಡು ಸಾವಿರ ಜನರಿಗೆ ಊಟ ತಯಾರಿಸಿ ಕೊಡಲಾಗುತ್ತಿದೆ. ದೇವಸ್ಥಾನದ ದುಡ್ಡಲ್ಲಿ ಊಟ ರೆಡಿ ಮಾಡಿಸಿ, ಕೆಎಂಸಿ ಆಸ್ಪತ್ರೆಗೆ ಮಾರಾಟ ಮಾಡಲಾಗುತ್ತಿದೆ ಅನ್ನುವ ಆರೋಪ ಕೇಳಿಬಂದಿದೆ.

    ದೇವಸ್ಥಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ಇಲ್ಲದಿರುವ ಸಂದರ್ಭ ಇಷ್ಟೊಂದು ಭೋಜನ ತಯಾರಿಸುತ್ತಿರುವುದಲ್ಲದೆ, ಖಾಸಗಿ ಆಸ್ಪತ್ರೆಯ ಅಂಬುಲೆನ್ಸ್ ನಲ್ಲಿ ಊಟ ರವಾನಿಸುತ್ತಿರುವ ಬಗ್ಗೆ ಸಾರ್ವಜನಿಕರು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ದೇವಸ್ಥಾನದ ಆಡಳಿತ ವಹಿಕೊಂಡಿರುವ ಆಸ್ರಣ್ಣರ ಕಾರುಬಾರಿನಲ್ಲಿ ಸರ್ಕಾರಿ ದೇವಸ್ಥಾನದಿಂದ ಊಟ ಮಾರಾಟ ಮಾಡಲಾಗುತ್ತಿದೆಯೇ ಅನ್ನುವ ಪ್ರಶ್ನೆ ಎದುರಾಗಿದೆ.

    ಬಡ ಕೂಲಿ ಕಾರ್ಮಿಕರಿಗೆ ಊಟ ಪೂರೈಸುವ ಬಗ್ಗೆ ಪ್ರಶ್ನೆ ಮಾಡಿದರೆ ಅಡುಗೆ ಕಾರ್ಮಿಕರು ಕೆಲಸಕ್ಕೆ ಬರುತ್ತಿಲ್ಲ ಎಂದು ನೆಪ ಹೇಳುತ್ತಾರೆ. ಈಗ ಕೆಎಂಸಿ ಅಂಬುಲೆನ್ಸ್ ನಲ್ಲಿ ಊಟ ರವಾನಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.