Tag: ಕಟ್ಟಡ ಕಾರ್ಮಿಕ

  • ಕ್ವಾರಿ ಹೊಂಡದ ನೀರಿನಲ್ಲಿ ಮುಳುಗಿ ಬಿಹಾರ ಮೂಲದ ಕಾರ್ಮಿಕ ಸಾವು

    ಕ್ವಾರಿ ಹೊಂಡದ ನೀರಿನಲ್ಲಿ ಮುಳುಗಿ ಬಿಹಾರ ಮೂಲದ ಕಾರ್ಮಿಕ ಸಾವು

    ಚಿಕ್ಕಬಳ್ಳಾಪುರ: ಕ್ವಾರಿ ಹೊಂಡದ ನೀರಿನಲ್ಲಿ ಈಜಲು ಹೋದ ಕಾರ್ಮಿಕನೊರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಕಣಿವೆನಾರಾಯಣಪುರದ ಬಳಿ ನಡೆದಿದೆ.

    ಬಿಹಾರ (Bihar) ಮೂಲಕದ ಮಹಮ್ಮದ್ ಕೈಫ್(27) ಮೃತ ದುರ್ದೈವಿ. ಇದನ್ನೂ ಓದಿ: ಕ್ರೈಸ್ತ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ

    ಕೈಫ್ ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಆಸ್ಪತ್ರೆಯ ಕಟ್ಟಡ ನಿರ್ಮಾಣದ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಸಹ ಕಾರ್ಮಿಕರೊಂದಿಗೆ ಕೈಫ್ ಕ್ವಾರಿ ಹೊಂಡದಲ್ಲಿ ಈಜಲು ತೆರಳಿದ್ದ. ಈಜು ಬಾರದ ಕೈಫ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಓಂ ಪ್ರಕಾಶ್ ಸಾವಿಗೆ ಉತ್ತರ ಕನ್ನಡದಲ್ಲಿದ್ದ ಆಸ್ತಿಯ ಕಲಹ ಕಾರಣವಾಯ್ತೇ?

    ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹಕ್ಕಾಗಿ ಸಾಕಷ್ಟು ಹುಡುಕಾಟ ನಡೆಸಿದ್ದು, ಹೊಂಡ ಬಹಳ ಆಳ ಇರುವ ಕಾರಣ ಇನ್ನೂ ಮೃತದೇಹ ಪತ್ತೆಯಾಗಿಲ್ಲ. ನಂದಿಗಿರಿಧಾಮ ಪೊಲೀಸ್ ಠಾಣಾ (Nandhigiridhama Police Station) ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

  • ಸೌಲಭ್ಯಗಳ ಜೊತೆ ಕಟ್ಟಡ ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷತೆ ಬೇಕು: ಕೆ.ಮಹಾಂತೇಶ್

    ಸೌಲಭ್ಯಗಳ ಜೊತೆ ಕಟ್ಟಡ ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷತೆ ಬೇಕು: ಕೆ.ಮಹಾಂತೇಶ್

    ಬಳ್ಳಾರಿ: ಕಟ್ಟಡ ಕಾರ್ಮಿಕ ಸಂಘಗಳ ಹೋರಾಟ ಮತ್ತು ಕಲ್ಯಾಣ ಮಂಡಳಿ ಅಧಿಕಾರಿಗಳ ನಿರಂತರ ಪ್ರಯತ್ನದ ಫಲವಾಗಿ ಇದೀಗ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಗಳನ್ನು ಕಾರ್ಮಿಕರು ಪಡೆದಿದ್ದಾರೆ. ಆದರೆ ಕಾರ್ಮಿಕರು ಕೇವಲ ಸೌಲಭ್ಯಗಳಿಗಾಗಿ ಮಾತ್ರ ಸಂಘಟಿತರಾಗದೇ ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ತಮ್ಮ ಕುಟುಂಬದ ಸಾಮಾಜಿಕ ಭದ್ರತೆಗಾಗಿ ತಮ್ಮ ವಾಸ ಪ್ರದೇಶದಲ್ಲಿ ಕಟ್ಟಡ ಕಾರ್ಮಿಕರ ಸಂಘಗಳನ್ನು ರಚಿಸಿಕೊಳ್ಳಬೇಕು ಎಂದು CWFI ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್ ಆಗ್ರಹಿಸಿದ್ದಾರೆ.


    ಇಂದು ಹೊಸಪೇಟೆ ತಾಲೂಕಿನ ಕಟ್ಟಡ ಕಾರ್ಮಿಕರ 6 ನೇ ಸಮ್ಮೇಳನ ಅಂಬೇಡ್ಕರ್ ಭವನದ ಗೌತಮ ಬುದ್ಧ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಕೆ.ಮಹಾಂತೇಶ್, ಕೊರೊನಾ ಸಂದರ್ಭದಲ್ಲಿ ಲಕ್ಷಾಂತರ ಕಟ್ಟಡ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದಾಗ ಅವರ ನೆರವಿಗೆ ಕಾರ್ಮಿಕ ಸಂಘ ಜೊತೆ ಕಾರ್ಮಿಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಗಲು ರಾತ್ರಿಗಳೆನ್ನದೆ ಶ್ರಮಿಸಿದ್ದಾರೆ ಇದರಿಂದಾಗಿ ಸಾವಿರಾರು ಕಾರ್ಮಿಕರು ಹಸಿವಿನ ದವಡೆಯಿಂದ ಪಾರಾಗಿದ್ದಾರೆ. ಇದು ಅಭಿನಂದನಾರ್ಹ ಕೆಲಸ ಆದರೆ ಕೊರೊನಾ ಅಲೆಗಳಲ್ಲಿ ನಿರುದ್ಯೋಗಿಗಳಾಗಿರುವ ಲಕ್ಷಾಂತರ ಕಾರ್ಮಿಕರಿಗೆ ಸರ್ಕಾರ ಉದ್ಯೋಗ ಭದ್ರತೆ ಮತ್ತು ಸೌಲಭ್ಯಗಳ ಅಸಮರ್ಪಕ ಸಿಗದೇ ಇರುವ ಕಾರಣದಿಂದಾಗಿ ಕಾರ್ಮಿಕರಲ್ಲಿ ಅಸಮಧಾನಕ್ಕೆ ಕಾರಣವಾಗಿದೆ ಎಂದು ನುಡಿದರು. ಇದನ್ನೂ ಓದಿ: ಹಣದ ವಿಚಾರಕ್ಕೆ ಜೋಡಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು ಅರೆಸ್ಟ್‌!


    ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಅಲ್ತಫಾ ಹಾಗೂ ಮಾರಿಕಾಂಬಾ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ಮತ್ತು ಹೊಸಪೇಟೆ ಭಾಗದಲ್ಲಿ ಇಲಾಖೆವತಿಯಿಂದ ಸಾವಿರಾರು ರೇಷನ್‍ಕಿಟ್‍ಗಳನ್ನು ಇತರೆ ಸಾಮಾಗ್ರಿಗಳನ್ನು ವಿತರಿಸಲಾಗಿದೆ ಜೊತೆಗೆ ಲಕ್ಷಾಂತರ ರೂಪಾಯಿ ಪರಿಹಾರವನ್ನು ಕೊಡಿಸಲು ಶ್ರಮಿಸಲಾಗಿದೆ ಆದರೆ ತಾಂತ್ರಿಕ ಕಾರಣದಿಂದಾಗಿ ಇನ್ನೂ ನೂರಾರು ಅರ್ಜಿಗಳ ವಿಲೆವಾರಿಯಾಗಿಲ್ಲ ಇದನ್ನು ಇತ್ಯರ್ಥಪಡಿಸಿ ಪರಿಹಾರ ಒದಗಿಸಲಾಗುವುದು ಎನ್ನುವ ಭರವಸೆ ನೀಡಿದರು.

    ಕಾರ್ಮಿಕ ನಿರೀಕ್ಷಕರಾದ ಭೂಪಾಲ್ ಹಾಗೂ ಅಶೋಕ್, ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಭಾಸ್ಕರ ರೆಡ್ಡಿ, ತಾಲೂಕು ಅಧ್ಯಕ್ಷರಾದ ನಾಗರತ್ನಮ್ಮ, ಕೂಡ್ಲಿಗಿ ತಾಲೂಕು ಸಿಐಟಿಯು ಮುಖಂಡರು ವಕೀಲರಾದ ವಿರುಪಾಕ್ಷ, ಮತ್ತು ರಾಘವೇಂದ್ರ, ಜಿಲ್ಲಾ ಅಧ್ಯಕ್ಷರಾದ ಯಲ್ಲಾಲಿಂಗ, ತಾಲೂಕು ಅಧ್ಯಕ್ಷರಾದ ಗೋಪಾಲ, ಕಾರ್ಯದರ್ಶಿ ರಾಮಾಂಜಿ ಹಾಗೂ ಡಿವೈಎಫ್‍ಐ ಜಿಲ್ಲಾ ಅಧ್ಯಕ್ಷ ವಿ. ಸ್ವಾಮಿ, ವಿಮಾ ಪ್ರತಿನಿಧಿಗಳ ದಕ್ಷಿಣ ವಲಯ ಅಧ್ಯಕ್ಷ ಎಲ್.ಮಂಜುನಾಥ್, ಹಾಗೂ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಮಹಿಳಾ ಮುಖಂಡರಾದ ಭೀಯಮ್ಮ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಜನಧನ್ ಖಾತೆಗಳಿಂದ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆಯಾಗಿದೆ: ಎಚ್‍ಡಿಕೆ

  • ಹೆಂಡ್ತಿ ಮಕ್ಕಳನ್ನು ಸಾಕಲು ಸೂಕ್ತ ಕೆಲಸವಿಲ್ಲ- ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

    ಹೆಂಡ್ತಿ ಮಕ್ಕಳನ್ನು ಸಾಕಲು ಸೂಕ್ತ ಕೆಲಸವಿಲ್ಲ- ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

    ಹೈದರಾಬಾದ್: ವ್ಯಕ್ತಿಯೊಬ್ಬ ತನ್ನ ಹೆಂಡತಿ ಮಕ್ಕಳನ್ನು ಸಾಕಲು ನನಗೆ ಕೆಲಸವಿಲ್ಲ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಸದ್ಯ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪೊಲೆಪಲ್ಲಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ಮೂಲತಃ ಗುಂಟೂರ್ ನವನಾಗಿರುವ ಈತ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ವೆಂಕಟೇಶ್ ಅಕ್ಟೋಬರ್ ಮೊದಲ ವಾರದಲ್ಲೇ ಆತ್ಮಹತ್ಯೆಗೆ ಮಾಡಿಕೊಂಡಿದ್ದನು.

    ಆತ್ಮಹತ್ಯೆಗೂ ಮುನ್ನ ವೆಂಕಟೇಶ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿಕೊಂಡಿದ್ದನು. ಸದ್ಯ ಮರಳಿನ ಕೊರತೆಯಿಂದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕಾರ್ಮಿಕರು ತಮ್ಮ ಕೆಲ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವೆಂಕಟೇಶ್ ವಿಡಿಯೋ ವೈರಲ್ ಆಗುತ್ತಿದೆ.

    ವಿಡಿಯೋದಲ್ಲೇನಿದೆ..?
    ಪರಿಸ್ಥಿತಿ ಚೆನ್ನಾಗಿಲ್ಲ. ನನಗೆ ಕೆಲಸ ಇಲ್ಲ. ಹೀಗಾಗಿ ನನಗೆ ನನ್ನ ಹೆಂಡತಿ, ಮಕ್ಕಳನ್ನು ಸಾಕಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ತನಗೆ ಕೆಲಸವಿಲ್ಲದೆ ಸರಿ ಸುಮಾರು 4 ತಿಂಗಳುಗಳೇ ಕಳೆದಿದೆ ಎಂದು ವೆಂಕಟೇಶ್ ವಿಡಿಯೋದಲ್ಲಿ ತನ್ನ ಅಳಲು ತೋಡಿಕೊಂಡಿದ್ದಾನೆ.

    ಅಕ್ಟೋಬರ್ 2ರಂದು ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಆತನ ಪತ್ನಿ ರಾಶಿ ಮಾಧ್ಯಮಗಳೊಂದಿಗೆ ಮಾತನಾಡಿ, ಮಗ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ನಮಗೆ ಆತನಿಗೆ ಸರಿಯಾದ ಚಿಕಿತ್ಸೆ ಕೊಡಿಸಲು ಹಣವಿಲ್ಲ. ಹೀಗಾಗಿ ಕಳೆದ ಒಂದು ವರ್ಷದಿಂದ ಪತಿ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಆದರೆ ಸರ್ಕಾರದ ಹೊಸ ಮರಳು ನೀತಿ ಕಟ್ಟಡ ಕಾರ್ಮಿಕರನ್ನು ಖಿನ್ನತೆಗೆ ದೂಡಿದೆ ಎಂದು ವಿರೋಧ ಪಕ್ಷಗಳು ಮಾತ್ರ ಆರೋಪ ಮಾಡುತ್ತಿವೆ.

    ವೆಂಕಟೇಶ್ ಸಾವಿಗೂ ಮುನ್ನ ನಿರ್ಮಾನ ಮೇಲ್ವಿಚಾರಕರೊಬ್ಬರು ಕೂಡ ಆತ್ಮಹತ್ಯೆಗೆ ಶರಣಾಗಿದ್ದರು. ಸದ್ಯ ವೆಂಕಟೇಶ್ ವಿಡಿಯೋವನ್ನು ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡು ಕಟ್ಟಡ ಕಾರ್ಮಿಕರಿಗೆ ಸೂಕ್ತ ಪರಿಹಾರವನ್ನು ಶೀಘ್ರವೇ ಒದಗಿಸುವಂತೆ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ. ಇದೊಂದು ಮನಕಲಕುವ ಘಟನೆಯಾಗಿದೆ. ಹೀಗಾಗಿ ಈ ವಿಡಿಯೋ ನೋಡಿದ ಮೇಲಾದರೂ ಸರ್ಕಾರ ಕೂಡಲೇ ಎಚ್ಚೆತ್ತು ಉದ್ಯೋಗ ವಂಚಿತರಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಕೆಲಸ ಕಳೆದುಕೊಂಡವರ ಜೊತೆ ನಮ್ಮ ಪಕ್ಷವಿದೆ ಎಂದು ಸ್ಥೈರ್ಯ ತುಂಬಿದ್ದಾರೆ.