Tag: ಕಡತ

  • ಅಜ್ಞಾತ ಸ್ಥಳದಲ್ಲಿ ಸಿಎಂ ಬೊಮ್ಮಾಯಿ ಕಡತ ಪರಿಶೀಲನೆ

    ಅಜ್ಞಾತ ಸ್ಥಳದಲ್ಲಿ ಸಿಎಂ ಬೊಮ್ಮಾಯಿ ಕಡತ ಪರಿಶೀಲನೆ

    ಬೆಂಗಳೂರು: ಮುಖ್ಯಮಂತ್ರಿ ಸೇರಿ ಸಚಿವರ ಸಾಧನೆಯ ಮೌಲ್ಯಮಾಪನಕ್ಕೆ ಹೈಕಮಾಂಡ್ ಮುಂದಾದ ಬೆನ್ನಲ್ಲೇ, ಮುಖ್ಯಮಂತ್ರಿಗಳು ತಮ್ಮದೇ ಸಾಧನೆಗಳ ಪರಿಶೀಲನೆಗೆ ಮುಂದಾಗಿದ್ದಾರೆ.

    ತಾವು ಸಿಎಂ ಆದ ದಿನದಿಂದ ಹೊರಡಿಸಿರುವ ಸರ್ಕಾರಿ ಆದೇಶಗಳ ವಿವರಗಳನ್ನು ಅಜ್ಞಾತ ಸ್ಥಳದಲ್ಲಿ ಕುಳಿತು ಬಸವರಾಜ ಬೊಮ್ಮಾಯಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್, ಯೂನಿವರ್ಸಲ್ ಪಾಸ್ ಕೊಡುವ ಚಿಂತನೆ: ಸುಧಾಕರ್‌

    ತಮ್ಮ ಬೆಂಗಾವಲು ಪಡೆಯನ್ನು ಬಿಟ್ಟು, ತಮ್ಮ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಜೊತೆ ಕಡತ ವಿಲೇವಾರಿ ಮತ್ತು ಆದೇಶಗಳನ್ನು ರೀ ಚೆಕ್ ಮಾಡ್ತಿದ್ದಾರೆ. ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆ ಆಗಬಹುದು ಎಂಬ ಸುದ್ದಿಯ ಬೆನ್ನಲ್ಲೇ ಮುಖ್ಯಮಂತ್ರಿಗಳು ಈಗ ಕಡತ ವಿಲೇವಾರಿಯಲ್ಲಿ ಫುಲ್‌ ಬ್ಯುಸಿಯಾಗಿದ್ದಾರೆ.

  • ಸರ್ವೇ ವೇಳೆ ಆಶಾ ಕಾರ್ಯಕರ್ತೆಯರ ದಾಖಲೆ ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿ

    ಸರ್ವೇ ವೇಳೆ ಆಶಾ ಕಾರ್ಯಕರ್ತೆಯರ ದಾಖಲೆ ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿ

    ಹುಬ್ಬಳ್ಳಿ: ಕೊರೊನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಸರ್ವೇ ಕಾರ್ಯ ಮಾಡುತ್ತಿದ್ದ ಆಶಾ ಕಾರ್ಯಕರ್ತೆಯರ ಕೈಯಲ್ಲಿದ್ದ ಕಡತಗಳನ್ನು ಕಸಿದುಕೊಂಡು ದುಷ್ಕರ್ಮಿಗಳು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಹುಬ್ಬಳ್ಳಿಯ ಗೌಳಿ ಗಲ್ಲಿಯಲ್ಲಿ ನಡೆದಿದೆ.

    ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಜಿಲ್ಲಾಡಳಿತದ ಆದೇಶದ ಮೇರೆಗೆ ಹಾಗೂ ಆರೋಗ್ಯ ಇಲಾಖೆಯ ನಿರ್ದೇಶನದ ಮೇರೆಗೆ ಸರ್ವೇ ಮಾಡಲು ಆಗಮಿಸಿದ ಆಶಾ ಕಾರ್ಯಕರ್ತೆಯರಿಗೆ ದುಷ್ಕರ್ಮಿಗಳು ಕೆಲಸ ಮಾಡಲು ಅಡ್ಡಿಪಡೆಸಿದ್ದಾರೆ. ಗೌಳಿ ಗಲ್ಲಿಯ ಕೆಲವು ಪುಡಾರಿಗಳು ಆಶಾ ಕಾರ್ಯಕರ್ತೆಯರ ಬಳಿಯಿದ್ದ ದಾಖಲೆಗಳನ್ನು ಕಸಿದುಕೊಂಡು ಅನುಚಿತವಾಗಿ ವರ್ತನೆ ಮಾಡಿದ್ದಾರೆ. ಆಶಾ ಕಾರ್ಯಕರ್ತೆಯರಾದ ನಾಗವೇಣಿ ಪಾನಗಲ್, ಲತಾ ಶ್ರೀರಾಮ ಮೇಲೆ ದೌರ್ಜನ್ಯ ನಡೆಸಲಾಗಿದೆ.

    ಸರ್ವೇ ಮಾಡುತ್ತಿದ್ದ ವೇಳೆ ಕಡತಗಳನ್ನು ಕಸಿದುಕೊಂಡು ನಮ್ಮ ಜಮಾತ್‍ನಲ್ಲಿ ಯಾವುದೇ ಮಾಹಿತಿಯಿಲ್ಲ ಎಂದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಸ್ಥಳಕ್ಕೆ ಶಹರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಆಗಮಿಸಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

  • ಹುಬ್ಬಳ್ಳಿ- ಧಾರವಾಡ ಪಾಲಿಕೆಯ ಪ್ರಮುಖ ಕಡತಗಳು ಬೆಂಕಿಯಲ್ಲಿ ಧಗ ಧಗ!

    ಹುಬ್ಬಳ್ಳಿ- ಧಾರವಾಡ ಪಾಲಿಕೆಯ ಪ್ರಮುಖ ಕಡತಗಳು ಬೆಂಕಿಯಲ್ಲಿ ಧಗ ಧಗ!

    ಹುಬ್ಬಳ್ಳಿ: ರಾಜ್ಯದ ಎರಡನೇಯ ಬಹುದೊಡ್ಡ ಮಹಾನಗರ ಪಾಲಿಕೆಯಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪ್ರಮುಖ ಕಡತಗಳು ಬೆಂಕಿಗೆ ಆಹುತಿಯಾಗಿವೆ.

    ಸ್ಮಾರ್ಟ್ ಸಿಟಿ ಯೋಜನೆ, ಸೇರಿದಂತೆ ಅವಳಿ ನಗರದಲ್ಲಿ ರಸ್ತೆಯಲ್ಲಿನ ಗುಂಡಿ ಮುಚ್ಚುವುದು ಸೇರಿದ ಹಲವು ಕಾಮಗಾರಿಗಳ ಕಡತಗಳು ಬೆಂಕಿಗೆ ಆಹುತಿಯಾಗಿವೆ. ಈ ಪ್ರಮುಖ ಕಡತಗಳು ಬೆಂಕಿಗೆ ಆಹುತಿಯಾಗಿದ್ದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎನ್ನುವ ಶಂಕೆ ವ್ಯಕ್ತವಾಗಿದೆ.

    ಆರ್‌ಟಿಐ  ಕಾಯ್ದೆ ಅಡಿಯಲ್ಲಿ ಮಾಹಿತಿ ಕೇಳಬಹುದು ಅಥವಾ ಜನಪ್ರತಿನಿಧಿಗಳು ಮಾಹಿತಿ ಕೇಳಬಹುದು ಎನ್ನುವ ಉದ್ದೇಶದಿಂದ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿ ಕಡತಗಳು ಬೆಂಕಿ ಹಚ್ಚಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.

    ಅವಳಿ ನಗರದಲ್ಲಿ ಗುಂಡಿ ಮುಚ್ಚುವ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿತ್ತು. ಈ ಮಧ್ಯೆ ಹುಬ್ಬಳ್ಳಿ- ಧಾರವಾಡ ಅವಳಿ ನಗರದ ಬಹುತೇಕ ಕಾಮಗಾರಿಗಳ ಟೆಂಡರ್ ಮತ್ತು ಗುತ್ತಿಗೆದಾರರಿಗೆ ಸೇರಿದ ದಾಖಲೆಗಳು ಬೆಂಕಿಗೆ ಆಹುತಿಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

    ಕಾರ್ಯನಿರ್ವಾಹಕ ದಕ್ಷಿಣ ಹಾಗೂ ಅಧೀಕ್ಷಕ ಅಭಿಯಂತರರ ಕಚೇರಿಯ ಕಡತಗಳು ಬೆಂಕಿಗೆ ಆಹುತಿಯಾಗಿವೆ. ಕಳೆದ ವಾರ ನಡೆದ ಅವಳಿ ನಗರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಜನಪ್ರತಿನಿಧಿಗಳು ಕೆಲಸವನ್ನು ಸರಿಯಾಗಿ ಮಾಡದಕ್ಕೆ ಅಧಿಕಾರಿಗಳನ್ನು ಸಾಕಷ್ಟು ತರಾಟೆಗೆ ತೆಗೆದುಕೊಂಡಿದ್ದರು.

    ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಕಡತಗಳು ಬೆಂಕಿಗೆ ಆಹುತಿಯಾಗಿದ್ದನ್ನು ನೋಡಿದರೆ ಸಾಕಷ್ಟು ಅನುಮಾನಗಳು ಎದ್ದಿದೆ. ಪಾಲಿಕೆಯ ಜಂಟಿ ಆಯುಕ್ತ ಅಜೀಜ್ ದೇಸಾಯಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಉಪ ನಗರ ಪೊಲೀಸರು ಹಾಗೂ ವಿದ್ಯುತ್ ಇಲಾಖೆಗೆ ಯಾವ ಕಾರಣಕ್ಕೆ ಅಗ್ನಿ ಅವಘಡ ಸಂಭವಿಸಿದೆ ಎನ್ನುವ ಬಗ್ಗೆ ತನಿಖೆ  ನಡೆಸುವಂತೆ ಆದೇಶಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=-doEdFRq2iI