Tag: ಕಣ್ಣು

  • ನಟಿ ಪರಿಣಿತಿ ಚೋಪ್ರಾ ಪತಿಯ ಕಣ್ಣಿಗೆ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆ

    ನಟಿ ಪರಿಣಿತಿ ಚೋಪ್ರಾ ಪತಿಯ ಕಣ್ಣಿಗೆ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆ

    ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರ ಪತಿ, ರಾಜಕಾರಣಿ ರಾಘವ್ ಚಡ್ಡಾ ಅವರ ಕಣ್ಣಿಗೆ ಬಲವಾಗಿ ಏಟು ಬಿದ್ದಿರುವ ಪರಿಣಾಮ, ಅವರಿಗೆ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆ (Surgery) ನಡೆಸಲಾಗಿದೆ. ಕಣ್ಣಿನ ರೆಟಿನಾದಲ್ಲಿ ರಂಧ್ರವಿರುವ ಕಾರಣದಿಂದಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎನ್ನುವ ಮಾಹಿತಿ ಇದೆ. ಸದ್ಯ ಲಂಡನ್ (London) ನಲ್ಲೇ ಪತಿಯ ಆರೈಕೆಯಲ್ಲಿದ್ದಾರೆ ಪರಿಣಿತಿ.

    ಈ ನಡುವೆ ಪರಿಣಿತಿ ಚೋಪ್ರಾ (Parineeti Chopra) ವೈವಾಹಿಕ ಬದುಕಿನ ಬಗ್ಗೆ ಈಗ ಭಾರೀ ಚರ್ಚೆ ಆಗುತ್ತಿದೆ. ಮದುವೆಯಾಗಿ ಮಕ್ಕಳಿರುವ ರಾಘವ್ (Raghav Chadha) ಜೊತೆ ಪರಿಣಿತಿ ಮದುವೆಯಾದ್ರಾ? ಎಂಬ ವಿಚಾರ ಚರ್ಚೆಯಾಗುತ್ತಿದೆ. ರಾಘವ್‌ಗೆ ಇದು 2ನೇ ಮದುವೆನಾ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

    ಪರಿಣಿತಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ನೀಡಿರುವ ಹೇಳಿಕೆ ಈಗ ರಾಘವ್ ಮೊದಲ ಮದುವೆ ಬಗ್ಗೆ ಚರ್ಚೆ ಹುಟ್ಟು ಹಾಕಿದೆ. ನಾವಿಬ್ಬರೂ ಲಂಡನ್ ಕಾರ್ಯಕ್ರಮದಲ್ಲಿ ಭೇಟಿಯಾದೆವು. ಸಾಮಾನ್ಯವಾಗಿ ನಾನು ಜಸ್ಟ್ ಹಾಯ್ ಹೇಳಿ ಮುಂದುವರಿಯುತ್ತೇನೆ. ಆದರೆ ರಾಘವ್ ವಿಚಾರದಲ್ಲಿ ಹಾಗಾಗಲಿಲ್ಲ, ನಾನು ಅವರಲ್ಲಿ ಉಪಾಹಾರಕ್ಕಾಗಿ ಭೇಟಿಯಾಗೋಣ ಎಂದು ಹೇಳಿದೆ.

    ಅಂದು ನಮ್ಮ ಗ್ಯಾಂಗ್ ಕೂಡ ಇತ್ತು, ನಮ್ಮ ಈ ಟೀಮ್‌ನಲ್ಲಿ 8 ರಿಂದ 10 ಜನರಿದ್ದರು. ಹಾಗೂ ಮರುದಿನ ನಾವು ಭೇಟಿಯಾದೆವು. ನನಗೆ ಆತನ ಬಗ್ಗೆ ಯಾವುದೇ ಐಡಿಯಾಗಳಿರಲಿಲ್ಲ, ಆತ ಯಾರು ಏನು ಮಾಡುತ್ತಿದ್ದಾನೆ ಎಂಬ ಬಗ್ಗೆ ನನಗೆ ತಿಳಿದಿರಲಿಲ್ಲ. ಭೇಟಿಯಾದ ಕೆಲವೇ ನಿಮಿಷಗಳಲ್ಲಿ ನಾನು ಇವರನ್ನೇ ಮದುವೆಯಾಗುತ್ತೇನೆ ಎಂದು ಅನಿಸಿತು.

     

    ಅವರಿಗೆ ಮದುವೆಯಾಗಿದೆಯೋ, ಮಕ್ಕಳಿದ್ದಾರೋ ಅಥವಾ ಅವರ ವಯಸ್ಸು ಎಷ್ಟಿರಬಹುದು ಎಂದು ಯಾವುದೇ ವಿಚಾರ ನನಗೆ ತಿಳಿದಿರಲಿಲ್ಲ ಎಂದು ಪತಿ ಜೊತೆಗಿನ ಮೊದಲ ಭೇಟಿಯ ಬಗ್ಗೆ ಪರಿಣಿತಿ ಮಾತನಾಡಿದ್ದಾರೆ. ಈ ಹೇಳಿಕೆಯನ್ನು ಕೇಳಿ ಫ್ಯಾನ್ಸ್ ಕನ್ಫೂಸ್ ಆಗಿದ್ದಾರೆ. ಸದ್ಯ ಚರ್ಚೆಯಾಗುತ್ತಿರುವ ರಾಘವ್ ಮೊದಲ ಮದುವೆ ಮ್ಯಾಟರ್ ನಿಜನಾ? ಸುಳ್ಳಾ ಎಂಬುದನ್ನು ನಟಿಯೇ ತಿಳಿಸಬೇಕಿದೆ.

  • ಶಸ್ತ್ರಚಿಕಿತ್ಸೆ ವೇಳೆ ವೃದ್ಧೆಯ ತಲೆಗೆ 3 ಬಾರಿ ಪಂಚ್‌ ಕೊಟ್ಟ ವೈದ್ಯ- ಮುಂದೇನಾಯ್ತು?

    ಶಸ್ತ್ರಚಿಕಿತ್ಸೆ ವೇಳೆ ವೃದ್ಧೆಯ ತಲೆಗೆ 3 ಬಾರಿ ಪಂಚ್‌ ಕೊಟ್ಟ ವೈದ್ಯ- ಮುಂದೇನಾಯ್ತು?

    ಬೀಜಿಂಗ್:‌ ಕಣ್ಣಿನ ವೈದ್ಯರೊಬ್ಬರು (Eye Doctor) ಶಸ್ತ್ರಚಿಕಿತ್ಸೆ ವೇಳೆ ವೃದ್ಧೆಯ ತಲೆಗೆ ಮೂರು ಬಾರಿ ಹೊಡೆದ ಘಟನೆ ಚೀನಾದಲ್ಲಿ (China) ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಈ ಘಟನೆ 2019ರಲ್ಲಿ ನಡೆದಿದ್ದು, ಇದರ ವೀಡಿಯೋ ಸಾಕಷ್ಟು ವೈರಲ್‌ (Viral Video) ಆಗಿದೆ. ಈ ಸಂಬಂಧ ಆಸ್ಪತ್ರೆಯೂ ಕೂಡ ಸ್ಪಷ್ಟನೆಯ ಹೇಳಿಕೆ ಬಿಡುಗಡೆ ಮಾಡಿತ್ತು. ಸದ್ಯ ವೈದ್ಯನನ್ನೇ ಆಸ್ಪತ್ರೆಯಿಂದ ಅಮಾನತು ಮಾಡಲಾಗಿದೆ.

    ನಡೆದಿದ್ದೇನು..?: 82 ವರ್ಷದ ವೃದ್ಧೆಯೊಬ್ಬರು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ (Eye Surgery) ಆಸ್ಪತ್ರೆಗೆ ಹೋದರು. ಈ ವೇಳೆ ವೈದ್ಯರು ವೃದ್ಧೆಗೆ ಅನಸ್ತೇಶಿಯಾ ನೀಡಿದ್ದಾರೆ. ಈ ವೇಳೆ ವೈದ್ಯರು ಭಾಷೆ ವೃದ್ಧೆಗೆ ಅರ್ಥವಾಗುತ್ತಿರಲಿಲ್ಲ. ವೃದ್ಧೆ ಸ್ಥಳೀಯ ಭಾಷೆ ಮಾತನಾಡುತ್ತಿದ್ದರಿಂದ ಆಕೆಗೆ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೈದ್ಯರ ಎಚ್ಚರಿಕೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಪರಿಣಾಮ ತನ್ನ ಮಾತಿಗೆ ವೃದ್ಧೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಸಿಟ್ಟುಗೊಂಡು ತಲೆಗೆ ಮೂರು ಬಾರಿ ಹೊಡೆದಿದ್ದಾರೆ.

    ಈ ಘಟನೆ ತುಂಬಾ ಹಳೆಯದ್ದಾಗಿದ್ದು, ಅಂದರೆ 2019ರಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಈ ಘಟನೆಯ ಸಂಪೂರ್ಣ ವೀಡಿಯೋ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೀಡಿಯೋವನ್ನು ಆಸ್ಪತ್ರೆಯ ವೈದ್ಯರೊಬ್ಬರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯೊಂದರಲ್ಲಿ ಹಂಚಿಕೊಂಡಿದ್ದರು. ಬಳಿಕ ಈ ವೀಡಿಯೋ ಸಾಕಷ್ಟು ವೈರಲ್‌ ಆಗಿತ್ತು, ಈಗಲೂ ವೈರಲ್‌ ಆಗುತ್ತಿದೆ.

    ವೀಡಿಯೋ ವೈರಲ್‌ ಆಗುತ್ತಿದ್ದಂತೆಯೇ ಆಸ್ಪತ್ರೆ ಕೂಡ ಸ್ಪಷ್ಟನೆ ನೀಡಿದೆ. ಶಸ್ತ್ರಚಿಕಿತ್ಸೆಗಾಗಿ ರೋಗಿಗೆ ಅನಸ್ತೇಶಿಯಾ ನೀಡಲಾಯಿತು. ಆದರೆ ವೃದ್ಧೆ ಅದನ್ನು ಸಹಿಸಿಕೊಳ್ಳಲು ತಯಾರಿರಲಿಲ್ಲ. ಇಷ್ಟು ಮಾತ್ರವಲ್ಲದೇ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೃದ್ಧೆ ತನ್ನ ತಲೆ ಮತ್ತು ಕಣ್ಣುಗುಡ್ಡೆಗಳನ್ನು ಚಲಿಸುತ್ತಲೇ ಇದ್ದಳು. ರೋಗಿಯು ಸ್ಥಳೀಯ ಉಪಭಾಷೆಯನ್ನು ಮಾತನಾಡುತ್ತಿದ್ದರಿಂದ ಮ್ಯಾಂಡರಿನ್‌ನಲ್ಲಿ ವೈದ್ಯರ ಎಚ್ಚರಿಕೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ತುರ್ತು ಪರಿಸ್ಥಿತಿಯಲ್ಲಿಯೂ ರೋಗಿಗೆ ವೈದ್ಯರು ಚಿಕಿತ್ಸೆ ನೀಡಿದರು ಎಂದು ಆಸ್ಪತ್ರೆ ಸ್ಪಷ್ಟನೆ ನೀಡಿದೆ.

    ಆದರೂ ವೃದ್ಧೆಯ ಮೇಲೆ ವೈದ್ಯರು ತೋರಿದ ಅಮಾನವೀಯತೆಗೆ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಆಕ್ರೋಶದ ಜೊತೆಗೆ ಖಂಡನೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯು ಸದ್ಯ ವೈದ್ಯನನ್ನು ಅಮಾನತು ಮಾಡಿದೆ. ಅಲ್ಲದೆ ವೃದ್ಧೆಯ ಕ್ಷಮೆಯಾಚಿಸಿ ಆಸ್ಪತ್ರೆಯು ಆಕೆಗೆ 5,800 ರೂ. ಪರಿಹಾರವನ್ನು ನೀಡಿತು. ಈ ನಡುವೆ ತನ್ನ ತಾಯಿಯ ಎಡಗಣ್ಣು ಕುರುಡಾಗಿದೆ ಎಂದು ವೃದ್ಧೆಯ ಮಗ ಗಂಭೀರ ಆರೋಪ ಮಾಡಿದ್ದಾನೆ. ಆದರೆ ಇದು ಇದೇ ಘಟನೆಯಿಂದಾಗಿ ಇದು ಸಂಭವಿಸಿದೆ ಎಂದು ಸೂಚಿಸುವ ಯಾವುದೇ ವೈದ್ಯಕೀಯ ವರದಿಗಳಿಲ್ಲ ಎಂದು ಆಸ್ಪತ್ರೆ ಹೇಳಿದೆ.

  • ಪಟಾಕಿ ಕಚ್ಚಿ ಕಾರ್ಯಕರ್ತರ ಸಂಭ್ರಮ- ಸಚಿವ ರಾಜಣ್ಣ ಕಣ್ಣಿಗೆ ಗಾಯ

    ಪಟಾಕಿ ಕಚ್ಚಿ ಕಾರ್ಯಕರ್ತರ ಸಂಭ್ರಮ- ಸಚಿವ ರಾಜಣ್ಣ ಕಣ್ಣಿಗೆ ಗಾಯ

    ತುಮಕೂರು: ಸಹಕಾರಿ ಸಚಿವ ಕೆ.ಎನ್ ರಾಜಣ್ಣ (Minister K N Rajanna) ಅವರ ಕಣ್ಣಿ (Eye) ಗೆ ಪಟಾಕಿ ಕಿಡಿ ಹಾರಿ ಗಾಯಗೊಂಡ ಘಟನೆ ಪಟ್ಟದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

    ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎನ್ ರಾಜಣ್ಣ ಅವರು ಇಂದು ಶಕ್ತಿ ಯೋಜನೆ (Shakti Yojana) ಗೆ ಚಾಲನೆ ನೀಡಲು ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದರು. ವಿಷಯ ತಿಳಿದ ಕೆಎನ್ ಆರ್ ಅಭಿಮಾನಿಗಳು ಹಿತೈಷಿಗಳು ಕಾಂಗ್ರೆಸ್ (Congress) ಕಾರ್ಯಕರ್ತರು ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿಗೌಡ ಸರ್ಕಲ್ ಬಳಿ ಕಾರನ್ನು ತಡೆದು ಹೂಮಾಲೆ ಹಾಕಿ ಅಭಿನಂದಿಸಿದರು. ಬಳಿಕ ಸಮೀಪದಲ್ಲೇ ಪಟಾಕಿ ಸಿಡಿಸಿದರು. ಇದನ್ನೂ ಓದಿ: 14ರ ಹಿಂದೂ ಬಾಲಕಿ ಕಿಡ್ನ್ಯಾಪ್‌ ಮಾಡಿ ಇಸ್ಲಾಂಗೆ ಮತಾಂತರ – ಪೋಷಕರ ಜೊತೆ ಕಳುಹಿಸಲು ಪಾಕ್‌ ಕೋರ್ಟ್‌ ನಿರಾಕರಣೆ

    ಇತ್ತ ಯಾಕೋ ಸಚಿವರು ತಮ್ಮ ಕನ್ನಡಕವನ್ನೊಮ್ಮೆ ತೆಗೆದರು. ಇದೇ ವೇಳೆ ಪಟಾಕಿಯ ಕಿಡಿ ನೇರವಾಗಿ ಬಲಗಣ್ಣಿನತ್ತ ಹಾರಿದೆ. ಕೂಡಲೇ ಸಚಿವರನ್ನು ಎಂ.ಎಂ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ನೇತ್ರ ತಜ್ಞ ಡಾ.ರವಿಕುಮಾರ್ ಅವರಿಂದ ಚಿಕಿತ್ಸೆ ಕೊಡಿಸಲಾಯಿತು, ಬಳಿಕ ಅವರು ಹಾಸನಕ್ಕೆ ತೆರಳಿದರು.

     

  • ಇಬ್ಬರ ಬಾಳಿಗೆ ಬೆಳಕು ನೀಡಿದ ಡಾ. ಭುಜಂಗಶೆಟ್ಟಿ ಕಣ್ಣುಗಳು

    ಇಬ್ಬರ ಬಾಳಿಗೆ ಬೆಳಕು ನೀಡಿದ ಡಾ. ಭುಜಂಗಶೆಟ್ಟಿ ಕಣ್ಣುಗಳು

    ಬೆಂಗಳೂರು: ಹೃದಯಾಘಾತಕ್ಕೀಡಾಗಿ ನಿಧನರಾದ ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ (Dr. Bhujanga Shetty) ಯವರ ಕಣ್ಣುಗಳು ಇಬ್ಬರ ಬಾಳಿಗೆ ಬೆಳಕಾಗಿದೆ.

    ಲಕ್ಷಾಂತರ ಕಣ್ಣುಗಳನ್ನ ದಾನ ಮಾಡುವ ಮೂಲಕ ನೇತ್ರದಾನ (Eye Donate) ದ ಕ್ರಾಂತಿ ಮಾಡಿದ್ದ ನೇತ್ರ ತಜ್ಞರಿಂದಲೇ ಇದೀಗ ನೇತ್ರದಾನವಾಗಿದೆ. ಬದುಕಿದ್ದಾಗ ಲಕ್ಷಾಂತರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿ ಅಂಧಕಾರವನ್ನ ನೀಗಿಸಿದ್ದರು.

    ಶುಕ್ರವಾರ ತಡರಾತ್ರಿ ಡಾ. ರಾಜ್ ಕುಮಾರ್ ಕಣ್ಣಿನ ಬ್ಯಾಂಕ್ ಗೆ ನೇತ್ರದಾನ ಮಾಡಲಾಗಿದೆ. ನೇತ್ರದಾನ ಮಾಡುವ ಮೂಲಕ ಭುಜಂಗ ಶೆಟ್ಟಿಯವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇದನ್ನೂ ಓದಿ: ನಾರಾಯಣ ನೇತ್ರಾಲಯ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಭುಜಂಗಶೆಟ್ಟಿ ಇನ್ನಿಲ್ಲ

    ನಿನ್ನೆ ಸಂಜೆ 7:30 ರ ವೇಳೆಗೆ ಮನೆಯಲ್ಲಿದ್ದಾಗ ಡಾ. ಭುಜಂಗ ಶೆಟ್ಟಿಯವರಿಗೆ ಹೃದಯಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

     

  • ಕತ್ತಲಲ್ಲಿ ಸ್ಮಾರ್ಟ್ ಫೋನ್ ಬಳಸಿ ದೃಷ್ಟಿ ಕಳೆದುಕೊಂಡ ಮಹಿಳೆ

    ಕತ್ತಲಲ್ಲಿ ಸ್ಮಾರ್ಟ್ ಫೋನ್ ಬಳಸಿ ದೃಷ್ಟಿ ಕಳೆದುಕೊಂಡ ಮಹಿಳೆ

    ಹೈದರಾಬಾದ್: ಅತಿಯಾದ ಸ್ಮಾರ್ಟ್ ಫೋನ್ (Smartphone) ಬಳಕೆಯಿಂದ ಮಹಿಳೆಯೊಬ್ಬಳು ಕಣ್ಣು ಕಳೆದುಕೊಂಡಿದ್ದ ಘಟನೆ ಹೈದರಾಬಾದ್‍ನಲ್ಲಿ (Hyderabad) ನಡೆದಿದೆ.

    30 ವರ್ಷದ ಮಂಜು ಒಂದೂವರೆ ವರ್ಷಗಳಿಂದ ದೃಷ್ಟಿ ದೋಷದ ಲಕ್ಷಣಗಳನ್ನು ಹೊಂದಿದ್ದರು. ಮಂಜು ಕತ್ತಲೆಯಲ್ಲಿ ತನ್ನ ಸ್ಮಾರ್ಟ್‍ಫೋನ್ ಅನ್ನು ಅತಿಯಾಗಿ ಬಳಸುತ್ತಿದ್ದಳು. ಇದರಿಂದಾಗಿ ಆಕೆ ದೃಷ್ಟಿ ಕಳೆದುಕೊಂಡಿದ್ದಳು.

    ತನ್ನ ಮಗುವನ್ನು ನೋಡಿಕೊಳ್ಳುವ ಸಲುವಾಗಿ ಆಕೆ ಬ್ಯೂಟಿಷಿಯನ್ ಕೆಲಸವನ್ನು ತೊರೆದಿದ್ದಾಳೆ. ನಂತರ ತನ್ನ ಮೊಬೈಲ್‍ನಲ್ಲೇ ಗಂಟೆಗಟ್ಟಲೆ ಕಳೆಯಲು ಪ್ರಾರಂಭಿಸಿದಳು. ಅದಾದ ಬಳಿಕ ಆಕೆಗೆ ಈ ರೋಗಲಕ್ಷಣಗಳು ಪ್ರಾರಂಭವಾದವು.

    ಅದಾದ ಬಳಿಕ ಆಕೆ ವೈದ್ಯರನ್ನು ಸಂಪರ್ಕಿಸಿದಳು. ಅ ಸಂದರ್ಭದಲ್ಲಿ ಆ ವೈದ್ಯರು (Doctor) ಯಾವುದೇ ಮಾತ್ರೆಯನ್ನು ನೀಡಿಲ್ಲ. ಜೊತೆಗೆ ಚಿಕಿತ್ಸೆಯನ್ನು ನೀಡಲಿಲ್ಲ. ಬದಲಾಗಿ ಮೊಬೈಲ್ ಬಳಕೆ ಕಡಿಮೆ ಮಾಡಲು ತಿಳಿಸಿದರು. ಇದಾದ ಬಳಿಕ ಆಕೆ ಸಂಪೂರ್ಣವಾಗಿ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿದ್ದರಿಂದ ಒಂದೂವರೆ ವರ್ಷದ ಬಳಿಕ ಆಕೆಯ ಕಣ್ಣು ಸಹಜ ಸ್ಥಿತಿಗೆ ಮರಳಿತು. ಇದನ್ನೂ ಓದಿ: ರಿಯಾಯ್ತಿ ದಂಡ ವಸೂಲಿಗಿಂದು ಕೊನೆ ದಿನ- ಬೆಂಗ್ಳೂರಲ್ಲಿ ನಕಲಿ ನಂಬರ್ ಜಾಲ ಬೆಳಕಿಗೆ

    ಅತಿಯಾದ ಸ್ಮಾರ್ಟ್‍ಫೋನ್ ಬಳಕೆಯಿಂದ ಕೆಲವರು ದೃಷ್ಟಿದೋಷದ ಸಮಸ್ಯೆಗೆ ಒಳಗಾಗುತ್ತಾರೆ. ಇದನ್ನು ಸ್ಮಾರ್ಟ್‍ಫೋನ್ ಮಿಷನ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಅದರಲ್ಲೂ ರಾತ್ರಿ ಹೊತ್ತು ಲೈಟ್ ಆಫ್ ಮಾಡಿಕೊಂಡು ಸ್ಮಾರ್ಟ್‍ಫೊನ್ ನೋಡುವುದರಿಂದ ಈ ರೋಗ ಹೆಚ್ಚಾಗಿ ಬರುತ್ತದೆ. ಈ ಬಗ್ಗೆ ಹೈದರಾಬಾದ್ ಮೂಲದ ಡಾ. ಸುಧೀರ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹತ್ಯೆ ಮಾಡಲು ಬಂದವನೇ ಭೀಕರವಾಗಿ ಕೊಲೆಯಾದ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಿವಲಿಂಗದ ಮೇಲೆ ಮೂಡಿದ ಕಣ್ಣಿನ ಆಕೃತಿ – ವಿಸ್ಮಯ ನೋಡಲು ಮುಗಿಬಿದ್ದ ಜನ

    ಶಿವಲಿಂಗದ ಮೇಲೆ ಮೂಡಿದ ಕಣ್ಣಿನ ಆಕೃತಿ – ವಿಸ್ಮಯ ನೋಡಲು ಮುಗಿಬಿದ್ದ ಜನ

    ರಾಮನಗರ: ಮಾಗಡಿ (Magadi) ಪಟ್ಟಣದ ಕೆಎಸ್‍ಆರ್‌ಟಿಸಿ ಬಸ್ (KSRTC Bus)ನಿಲ್ದಾಣದ ಆವರಣದಲ್ಲಿರುವ ಬಸವೇಶ್ವರ ಹಾಗೂ ಉಮಾ ಮಹೇಶ್ವರಿ ದೇಗುಲದಲ್ಲಿನ ಶಿವಲಿಂಗ ಕಣ್ಣು ತೆರೆದಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆ ದೇಗುಲಕ್ಕೆ ಭಕ್ತರ ದಂಡೇ ಹರಿದುಬಂದಿದೆ.

    ಭಕ್ತರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟಿದ್ದಾರೆ. ಹೂವಿನಿಂದ ಅಲಂಕೃತಗೊಂಡಿದ್ದ ಲಿಂಗ ಆಕಾರದ ಮೂರ್ತಿಯ ಮೇಲ್ಭಾಗದಲ್ಲಿ ಕಣ್ಣುಗಳ ಆಕೃತಿ ಕಾಣಿಸಿಕೊಂಡಿದೆ. ಇದರಿಂದ ದೇವರೇ ಕಣ್ಣು ಬಿಟ್ಟಿದ್ದಾನೆಂದು ಭಾವಿಸಿದ ಭಕ್ತರು ಶಿವಲಿಂಗ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.  ಇದನ್ನೂ ಓದಿ: ಮಂಡ್ಯದಲ್ಲಿ ಕಮಲ ಅರಳಿಸಲು ಪ್ಲಾನ್ – ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಬಿಜೆಪಿಗೆ

    ಇದನ್ನು ಕಾಣಲು ಸುತ್ತಮುತ್ತಲಿನ ನೂರಾರು ಜನರು ದೇವಾಲಯಕ್ಕೆ ಬಂದಿದ್ದು, ಕ್ರಮೇಣ ನೂಕುನುಗ್ಗಲು ಉಂಟಾಗಿದೆ. ಕೆಲಕಾಲದ ಬಳಿಕ ಕಣ್ಣಿನ ಆಕೃತಿ ಅದೃಶ್ಯವಾಗಿದ್ದು ಭಕ್ತರನ್ನು ಅಚ್ಚರಿಗೊಳಿಸಿದೆ. ಇದನ್ನೂ ಓದಿ: ಶ್ರದ್ಧಾವಾಕರ್ ಹತ್ಯೆ ಪ್ರಕರಣ – ಪಾಲಿಗ್ರಾಫ್ ಪರೀಕ್ಷೆ ವೇಳೆ ಅಫ್ತಾಬ್‍ಗೆ ಕೇಳಿದ ಪ್ರಶ್ನೆಗಳೇನು?

    Live Tv
    [brid partner=56869869 player=32851 video=960834 autoplay=true]

  • ಪಟಾಕಿ ಸಿಡಿತದಿಂದ ಹೈದರಾಬಾದ್‍ನಲ್ಲಿ 24 ಮಂದಿ ಕಣ್ಣಿಗೆ ಗಾಯ

    ಪಟಾಕಿ ಸಿಡಿತದಿಂದ ಹೈದರಾಬಾದ್‍ನಲ್ಲಿ 24 ಮಂದಿ ಕಣ್ಣಿಗೆ ಗಾಯ

    ಹೈದರಾಬಾದ್: ದೀಪಾವಳಿ ಹಬ್ಬದ (Diwali Celebrations) ಮೊದಲ ದಿನವೇ ಪಟಾಕಿ ಸಿಡಿತದಿಂದ ಸುಮಾರು 24 ಮಂದಿ ಕಣ್ಣಿಗೆ ಗಾಯವಾಗಿರುವ ಘಟನೆ ಹೈದರಾಬಾದ್‍ನ (Hyderabad) ಮೆಹದಿಪಟ್ನಂನಲ್ಲಿ (Mehdipatnam) ನಡೆದಿದೆ.

    ಮೆಹದಿಪಟ್ಟಣಂನಲ್ಲಿರುವ ಸರ್ಕಾರಿ ಸರೋಜಿನಿ ದೇವಿ ಕಣ್ಣಿನ ಆಸ್ಪತ್ರೆಯಲ್ಲಿ (Sarojini Devi Eye Hospital) ಮಕ್ಕಳು ಸೇರಿದಂತೆ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ದೀಪಾವಳಿ ಸಮಯದಲ್ಲಿ ನಿಷೇಧಿತ ಪಟಾಕಿಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ಮತ್ತು ಅಂಗಡಿಗಳ ಮೇಲೆ ತೆಲಂಗಾಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಟಿಎಸ್‍ಪಿಸಿಬಿ) ಇತ್ತೀಚೆಗಷ್ಟೇ ಕಠಿಣ ಕ್ರಮ ಕೈಗೊಂಡಿದೆ.

    ನಾಗರಿಕ ಮತ್ತು ಮಾಲಿನ್ಯ ಮಂಡಳಿ ನಿಯಮಗಳನ್ನು ಅನುಸಿಸದೇ ಇರುವವರನ್ನು ಗುರುತಿಸಲು ವಿಶೇಷ ತಂಡವನ್ನು ರಚಿಸಲಾಗಿದೆ. ಭಾರತ ಮತ್ತು ಪ್ರಪಂಚದಾದ್ಯಂತ ಅಕ್ಟೋಬರ್ 24 ರವರೆಗೂ ದೀಪಾವಳಿ ಹಬ್ಬವನ್ನು ಹಿಂದೂಗಳು ಸಂಪ್ರದಾಯಿಕವಾಗಿ ಆಚರಿಸುತ್ತಾರೆ. ಇದನ್ನೂ ಓದಿ: ಕೇತುಗ್ರಸ್ಥ ಸೂರ್ಯಗ್ರಹಣ – ಘಾಟಿಸುಬ್ರಮಣ್ಯ ದೇವಾಲಯ, ಶ್ರೀ ಭೋಗನಂದೀಶ್ವರನ ಆಲಯ ಬಂದ್

    ಪ್ರತಿ ದೀಪಾವಳಿ ಹಬ್ಬದಲ್ಲೂ ಆಂಧ್ರಪ್ರದೇಶದ ಜನತೆ ಸತ್ಯಭಾಮೆಯ ಮಣ್ಣಿನ ವಿಗ್ಹವನ್ನು ತಯಾರಿಸಿ, ಅದಕ್ಕೆ ಪ್ರಾರ್ಥನೆ ಸಲ್ಲಿಸಿ, ಆಶೀರ್ವಾದ ಪಡೆಯುತ್ತಾರೆ. ಬಳಿಕ ತಮ್ಮ ಪ್ರೀತಿ ಪಾತ್ರರೊಂದಿಗೆ ಸಂತೋಷದಿಂದ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಇದನ್ನೂ ಓದಿ: ಶಿವಮೊಗ್ಗ ಮತ್ತೆ ಉದ್ವಿಗ್ನ – ಹರ್ಷನ ಮನೆ ಮುಂದೆ ಲಾಂಗು, ಮಚ್ಚು ಹಿಡಿದು ಓಡಾಟ

    Live Tv
    [brid partner=56869869 player=32851 video=960834 autoplay=true]

  • ಮಹಿಳೆಯ ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್‍ನ್ನು ಹೊರತೆಗೆದ ವೈದ್ಯರು

    ಮಹಿಳೆಯ ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್‍ನ್ನು ಹೊರತೆಗೆದ ವೈದ್ಯರು

    ಹುಬ್ಬಳ್ಳಿ: ಅಪರೂಪದ ಶಸ್ತ್ರ ಚಿಕಿತ್ಸೆವೊಂದರಲ್ಲಿ ಹುಬ್ಬಳ್ಳಿಯ ಕಿಮ್ಸ್ ವೈದ್ಯರು 28 ವರ್ಷದ ಮಹಿಳೆಯೊಬ್ಬರ ಕಣ್ಣಿನ ಕೆಳಗೆ ಸಿಲುಕಿದ್ದ ಮುರಿದ ಟೂತ್ ಬ್ರಶ್‍ವೊಂದನ್ನು ಹೊರ ತೆಗೆದಿದ್ದಾರೆ.

    ಹಾವೇರಿ ಜಿಲ್ಲೆ ಹಾನಗಲ್ ಬಳಿಯ ಹಿರೂರು ಗ್ರಾಮದ ಗೃಹಿಣಿ ವಿನೋದಾ ತಳವರ್ (28) ಅವರ 4 ವರ್ಷದ ಮಗಳು ಆ. 14ರಂದು ಬೆಳಗ್ಗೆ ಹಲ್ಲು ಉಜ್ಜುವಾಗ ಇದ್ದಕ್ಕಿದ್ದಂತೆ ಟೂತ್ ಬ್ರಶ್, ಆಕೆಯ ತಾಯಿಯ ಎಡಗಣ್ಣಿನ ಕೆಳಗೆ ಸಿಲುಕಿದೆ. ನಂತರ ಕುಟುಂಬ ಸದಸ್ಯರು ಅದನ್ನು ತೆಗೆಯಲು ಪ್ರಯತ್ನಿಸಿದಾಗ ಬ್ರಶ್ ಮುರಿದಿದೆ.

    ಕುಟುಂಬಸ್ಥರು ಕೂಡಲೇ ಮಹಿಳೆಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರೋಗಿಯನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ಶಿಫಾರಸ್ಸು ಮಾಡಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಮಹಿಳೆಯನ್ನು ದಾಖಲಿಸಲಾಗಿತ್ತು. ವೈದ್ಯರು ಮುಖದ ಸಿಟಿ ಸ್ಕ್ಯಾನ್, ಸಿಟಿ ಆಂಜಿಯೋಗ್ರಾಮ್ ಮಾಡಿದಾಗ ಕಣ್ಣಿನ ಕೆಳಗೆ ಬ್ರಶ್ ಸಿಲುಕಿರುವುದು ತಿಳಿದುಬಂದಿದೆ. ಇದನ್ನೂ ಓದಿ: ಪರಿಶಿಷ್ಟ ಜಾತಿಗೆ ಸೇರಿದವಳೆಂದು ತಿಳಿದು ಆಕೆ ದೇಹ ಮುಟ್ಟುತ್ತಾನೆಂಬುದು ನಂಬಲಸಾಧ್ಯ: ಕೋರ್ಟ್‌

    ಸ್ಕ್ಯಾನ್ ವರದಿ ತನಿಖೆ ವೇಳೆ ಎಡಗಣ್ಣು ಸಂಪೂರ್ಣವಾಗಿ ಹಾನಿಯಾಗಿರುವುದು ಕಂಡುಬಂದಿತ್ತು. ನಂತರ ನೇತ್ರಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಕೂಡಲೇ ಶಸ್ತ್ರ ಚಿಕಿತ್ಸೆ ಮಾಡಲು ನಿರ್ಧರಿಸಿದ್ದಾಗಿ ಹಿರಿಯ ವೈದ್ಯರೊಬ್ಬರು ತಿಳಿಸಿದರು. ಇದನ್ನೂ ಓದಿ: ಕ್ಯಾನ್ಸರ್ ಇದೆ ಎಂದು ತಿಳಿದು ಇಡೀ ಫ್ಯಾಮಿಲಿ ಆತ್ಮಹತ್ಯೆಗೆ ಶರಣು

    ಸಂಪೂರ್ಣ ಅಧ್ಯಯನ ನಂತರ, ಬುಧವಾರ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಲಾಯಿತು. ಡಾ. ಮಂಜುನಾಥ್ ವಿಜಯಪುರ, ಡಾ. ವಸಂತ್ ಕಟ್ಟಿಮನಿ, ಡಾ. ಅನುರಾಧ ನಾಗನಗೌಡರ್, ಡಾ. ಸ್ಫೂರ್ತಿ ಶೆಟ್ಟಿ ಮತ್ತು ಅರವಳಿಕೆ ಮತ್ತು ನೇತ್ರಶಾಸ್ತ್ರ ವಿಭಾಗದ ಸಿಬ್ಬಂದಿಯ ನೆರವಿನಿಂದ ಬುಧವಾರ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಶೂಟಿಂಗ್ ವೇಳೆ ಅವಘಡ: ಆಸ್ಪತ್ರೆ ಸೇರಿದ ಬಾಹುಬಲಿ ಬಿಜ್ಜಳದೇವ ಪಾತ್ರಧಾರಿ ನಾಸರ್

    ಶೂಟಿಂಗ್ ವೇಳೆ ಅವಘಡ: ಆಸ್ಪತ್ರೆ ಸೇರಿದ ಬಾಹುಬಲಿ ಬಿಜ್ಜಳದೇವ ಪಾತ್ರಧಾರಿ ನಾಸರ್

    ನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಹಿರಿಯ ಕಲಾವಿದ ನಾಸರ್ ಕಣ್ಣಿಗೆ ಪೆಟ್ಟು ಮಾಡಿಕೊಂಡು ಆಸ್ಪತ್ರೆ ಸೇರಿದ್ದಾರೆ. ತೆಲಂಗಾಣ ಪೊಲೀಸ್ ಅಕಾಡಮಿಯಲ್ಲಿ ನಡೆದ ಶೂಟಿಂಗ್ ವೇಳೆ ಮೆಟ್ಟಿಲಿನಿಂದ ಬಿದ್ದ ನಾಸರ್ ಅವರಿಗೆ ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ಟು ತೀವ್ರವಾಗಿ ಬಿದ್ದಿದ್ದರಿಂದ ಶಸ್ತ್ರ ಚಿಕಿತ್ಸೆ ಕೂಡ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

    ಈ ಶೂಟಿಂಗ್ ವೇಳೆ ಸುಹಾಸಿನಿ ಮಣಿರತ್ನ, ಸಯ್ಯಾಜಿ ಶಿಂಧೆ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದರು. ಮೆಟ್ಟಿಲಿನಿಂದ ಇಳಿದು ಬರುವ ದೃಶ್ಯವನ್ನು ನಿರ್ದೇಶಕರು ಸೆರೆ ಹಿಡಿಯುತ್ತಿದ್ದರು ಎನ್ನಲಾಗುತ್ತಿದೆ. ನಾಸರ್ ಈ ಸಮಯದಲ್ಲಿ ಆಯಾ ತಪ್ಪಿ ಬಿದ್ದಿದ್ದಾರೆ. ರಭಸವಾಗಿಯೇ ನಾಸರ್ ಬಿದ್ದಿದ್ದರಿಂದ ಏಟಾಗಿದೆ ಎಂದು ಹೇಳಲಾಗುತ್ತಿದೆ.

    ನಾಸರ್ ಕನ್ನಡದಲ್ಲೂ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮಿಳು, ತೆಲುಗು, ಮಲೆಯಾಳಂ, ಹಿಂದಿ ಹೀಗೆ ಹಲವು ಭಾಷೆಯ ಚಿತ್ರಗಳಲ್ಲೂ ಇವರು ಕಾಣಿಸಿಕೊಂಡಿದ್ದಾರೆ. ಅದರಲ್ಲೂ ರಾಜಮೌಳಿ ನಿರ್ದೇಶನದ ಬಾಹುಬಲಿ ಸಿನಿಮಾದ ಬಿಜ್ಜಳದೇವ ಪಾತ್ರದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಅವರು ಅಭಿಮಾನಿಗಳನ್ನು ಗಳಿಸಿದ್ದರು. ಸದ್ಯ ಆರೋಗ್ಯ ಸ್ಥಿರವಾಗಿದ್ದು, ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಾಕ್ಸ್‌ನಲ್ಲಿ ಕಣ್ಣು, ಕಿವಿ ಮೆದುಳು ಸಂಗ್ರಹಿಸಿಟ್ಟ ದುಷ್ಕರ್ಮಿಗಳು

    ಬಾಕ್ಸ್‌ನಲ್ಲಿ ಕಣ್ಣು, ಕಿವಿ ಮೆದುಳು ಸಂಗ್ರಹಿಸಿಟ್ಟ ದುಷ್ಕರ್ಮಿಗಳು

    ಮುಂಬೈ: ಕಟ್ಟಡದ ನೆಲಮಾಳಿಗೆಯಲ್ಲಿ ಬೀಗ ಹಾಕಲಾಗಿದ್ದ ಅಂಗಡಿಯೊಂದರಲ್ಲಿ ಮೃತ ದೇಹದ ಭಾಗಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

    ಕಳೆದೆರಡು ದಿನಗಳಿಂದ ಅಂಗಡಿಯಿಂದ ದುರ್ವಾಸನೆ ಬರುತ್ತಿತ್ತು. ಈ ಕುರಿತಾಗಿ ಮಹಾರಾಷ್ಟ್ರದ ನಾಸಿಕ್ ನಗರದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗ ಪರಿಶೀಲನೆ ಮಾಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

    ನಡೆದಿದ್ದೇನು?: ಮೂರ್ನಾಲ್ಕು ದಿನಗಳಿಂದ ಬೀಗ ಹಾಕಲಾಗಿದ್ದ ಅಂಗಡಿಯೊಂದರಿಂದ ದುರ್ನಾತ ಬರುತ್ತಿತ್ತು. ಅಕ್ಕಪಕ್ಕದವರಿಗೆ ಅನುಮಾನ ಉಂಟಾಗಿ ಪೊಲೀಸರಿಗೆ ಈ ವಿಷಯ ತಿಳಿಸಿದ್ದರು. ಆಗ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಂಗಡಿಯ ಬಾಗಿಲು ಒಡೆದು ನೆಲಮಾಳಿಗೆಯನ್ನು ಪರಿಶೀಲನೆ ಮಾಡಿದ್ದಾರೆ.

    ತುಂಬಿಡಲಾಗಿದ್ದ ಗುಜರಿ ವಸ್ತುಗಳ ಮಧ್ಯೆ ಒಂದು ಬಾಕ್ಸ್‌ನಲ್ಲಿ ಮನುಷ್ಯರ ಕಣ್ಣು, ಕಿವಿ, ಮೆದುಳು, ಮುಖದ ಕೆಲವು ಭಾಗಗಳು ಪತ್ತೆಯಾಗಿವೆ. ಮಾನವನ ದೇಹದ ಭಾಗಗಳನ್ನು ವಶಕ್ಕೆ ತೆಗೆದುಕೊಂಡಿದ್ದೇವೆ. ಅಂಗಡಿಯ ಮಾಲೀಕನ ಇಬ್ಬರು ಪುತ್ರರು ವೈದ್ಯರಾಗಿದ್ದಾರೆ. ವೈದ್ಯಕೀಯ ಉದ್ದೇಶಗಳಿಗಾಗಿ ಸಂರಕ್ಷಿಸಿಟ್ಟಿರುವ ಸಾಧ್ಯತೆಯಿದೆ. ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಮುಂಬೈ ನಾಕಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.