Tag: ಕದನ ವಿರಾಮ

  • ಕದನ ವಿರಾಮ ಉಲ್ಲಂಘನೆ: ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ಪ್ರತ್ಯುತ್ತರ – ಪ್ರಹ್ಲಾದ್ ಜೋಶಿ

    ಕದನ ವಿರಾಮ ಉಲ್ಲಂಘನೆ: ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ಪ್ರತ್ಯುತ್ತರ – ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಕದನ ವಿರಾಮ ಘೋಷಣೆಯಾದ ಮೇಲೆಯೂ ಪಾಕಿಸ್ತಾನ ದಾಳಿ ಮುಂದುವರೆಸಿ ಇಬ್ಬಗೆ ನೀತಿ ಪ್ರದರ್ಶಿಸಿದ್ದು, ಭಾರತೀಯ ಸೇನೆ (Indian Army) ಇದಕ್ಕೆ ಪ್ರತ್ಯುತ್ತರ ಕೊಡುತ್ತದೆ. ಪಾಕ್ ವಿರುದ್ಧದ ದಾಳಿಗೆ ಕೇಂದ್ರ ಸರ್ಕಾರ ಸೇನೆಗೆ ಮುಕ್ತ ಅಧಿಕಾರ, ಸ್ವಾತಂತ್ರ‍್ಯ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ತಿಳಿಸಿದರು.

    ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಯಾವತ್ತೂ ದ್ವಂದ್ವ ನಿಲುವು ಮತ್ತು ಇಬ್ಬಗೆ ನೀತಿ ಅನುಸರಿಸುವಲ್ಲಿ ಎತ್ತಿದ ಕೈ ಎಂಬುದು ಗೊತ್ತಿರುವ ವಿಷಯ. ಅಲ್ಲದೇ, ಅಲ್ಲಿನ ಮಿಲಿಟರಿ ಪಡೆ ಚುನಾಯಿತ ಸರ್ಕಾರದ ಮಾತು ಕೇಳುವುದಿಲ್ಲ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ ಎಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ:`ಆಪರೇಷನ್ ಸಿಂಧೂರ’ ಭಾರತದ ರಾಜಕೀಯ, ಸಾಮಾಜಿಕ, ಮಿಲಿಟರಿ ಶಕ್ತಿಯ ಬಲ – ರಾಜನಾಥ್ ಸಿಂಗ್

    ಪಹಲ್ಗಾಮ್ (Pahalgam) ಭಯೋತ್ಪಾದಕ ದಾಳಿಯ ನಂತರ ಗುಳ್ಳೇನರಿ ಬುದ್ಧಿಯ ಪಾಕಿಸ್ತಾನಕ್ಕೆ ಪಾಠ ಕಲಿಸಲು ಭಾರತೀಯ ಸೇನೆಗೆ ನಮ್ಮ ಸರ್ಕಾರ ಮುಕ್ತ ಅವಕಾಶ ನೀಡಿದೆ. ಅದರಂತೆ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತೀಕ್ಷ್ಣ ಪ್ರತಿಕ್ರಿಯೆ, ಪ್ರತೀಕಾರದಲ್ಲಿ ತೊಡಗಿದೆ. ಬಹುದೊಡ್ಡ ಸಂಖ್ಯೆಯಲ್ಲಿ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿದೆ. ಭಾರತೀಯ ಸೇನೆ ಮೊದಲ ದಿನವೇ ಪಾಕಿಸ್ತಾನದ 9ಕ್ಕಿಂತ ಹೆಚ್ಚು ಭಯೋತ್ಪಾದಕರ ನೆಲೆಗಳನ್ನು ನಾಶಪಡಿಸಿದೆ. ಈ ದಾಳಿಯಿಂದಾಗಿ ದೊಡ್ಡ ಸಂಖ್ಯೆಯಲ್ಲಿ ಭಯೋತ್ಪಾದಕರು ಮತ್ತು ಭಯೋತ್ಪಾದಕ ಕುಟುಂಬಗಳು ಬಲಿಯಾಗಿವೆ. ಸಾಕಷ್ಟು ಭಯೋತ್ಪಾದಕ ಅಡಗುತಾಣಗಳು ಛಿದ್ರವಾಗಿವೆ. ಪ್ರಮುಖ ಉಗ್ರರು ಹತರಾಗಿದ್ದಾರೆ ಎಂದು ತಿಳಿಸಿದರು.

    ಯುದ್ಧವಾಗಿ ಪರಿಗಣಿಸುವ ಕಠಿಣ ನಿಲುವು: ದೇಶದಲ್ಲಿ ಭಯೋತ್ಪಾದನೆ ಸಂಪೂರ್ಣ ನಿರ್ಮೂಲನೆಗೆ ಪಣ ತೊಟ್ಟ ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ ಅತ್ಯಂತ ಕಠೋರ ನಿಲುವು ತೆಗೆದುಕೊಂಡಿದೆ. ಪಾಕ್ ಕದನ ವಿರಾಮಕ್ಕೂ ಮೊದಲೇ ಭಯೋತ್ಪಾದನೆಯನ್ನು ಯುದ್ಧವಾಗಿ ಪರಿಗಣಿಸುವಂತಹ ಅಭೂತಪೂರ್ವ ನಿರ್ಣಯ ಕೈಗೊಂಡಿದೆ ಎಂದು ಹೇಳಿದರು.

    ಕದನ ವಿರಾಮ ಪ್ರಸ್ತಾಪಿಸಿದ್ದ ಪಾಕ್: ಪಾಕಿಸ್ತಾನದ ಮಿಲಿಟರಿ ಪಡೆಗಳ ನಿರ್ದೇಶಕರು ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಿಗೆ ಫೋನ್ ಮಾಡಿ ಕದನ ವಿರಾಮಕ್ಕೆ ವಿನಂತಿ ಮಾಡಿದ್ದರು. ಆದರೆ ಅದನ್ನು ಈಗ ಉಲ್ಲಂಘಿಸಿದ್ದಾರೆ. ಹೀಗಾಗಿ ಭಯೋತ್ಪಾದಕರು ಮತ್ತು ಭಯೋತ್ಪಾದಕ ಸಂಘಟನೆಗಳನ್ನು ಪೋಷಿಸಿಕೊಂಡು ಬಂದ ಪಾಕ್‌ಗೆ ಭಾರತೀಯ ಸೇನೆ ಪ್ರತ್ಯುತ್ತರ ಕೊಡುತ್ತದೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ಭಯೋತ್ಪಾದನೆ ನಿಗ್ರಹಿಸಲಾಗಿದೆ. 1980ರ ನಂತರ ಪಹಲ್ಗಾಮ್‌ಗಿಂತ ದೊಡ್ಡ ಪ್ರಮಾಣದಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಯುತ್ತಿದ್ದವು. ಆದರೆ, ಈಗ ಅಂಥದ್ದಕ್ಕೆಲ್ಲ ಕಡಿವಾಣ ಹಾಕಲಾಗಿದೆ. ಹಿಂದೆಲ್ಲಾ ದೊಡ್ಡ ಪ್ರಮಾಣದ ಭಯೋತ್ಪಾದನೆ ನಡೆದಾಗಲೂ ಸೌಮ್ಯ ಪ್ರತಿಕ್ರಿಯೆ ನೀಡುತ್ತಿದ್ದ ಭಾರತ ಇದೇ ಮೊದಲ ಬಾರಿ ಪಾಕ್‌ಗೆ ನುಗ್ಗಿ ಹೊಡೆಯುತ್ತಿದ್ದೇವೆ ಎಂದರು.

    ಇಡೀ ದೇಶ ಒಂದಾಗಿ ಹೋರಾಡುತ್ತಿದೆ: ಪಹಲ್ಗಾಮ್ ದಾಳಿಯ ನಂತರ ಇದೇ ಮೊದಲ ಬಾರಿ ಭಯೋತ್ಪಾದನೆ ವಿರುದ್ಧ ಇಡೀ ದೇಶವೇ ಒಂದಾಗಿ ಹೋರಾಡುತ್ತಿದೆ. ಭಾರತೀಯ ಸೇನೆ ಅತ್ಯಂತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಪ್ರತೀಕಾರದ ದಾಳಿಯಲ್ಲಿ ಕಂದಹಾರ ಪ್ರಕರಣದಲ್ಲಿದ್ದವರು ಮತ್ತು ಪ್ರಮುಖ ಉಗ್ರರು ಸೇರಿದಂತೆ ಅವರ ಕುಟುಂಬದವರು ಹತರಾಗಿದ್ದಾರೆ.

    ಭಾರತ ಶಾಂತಿಪ್ರಿಯ ರಾಷ್ಟ್ರ. ಭಾರತೀಯರು ಯಾವತ್ತೂ ಶಾಂತಿಪ್ರಿಯರೇ, ನಾವಾಗಿಯೇ ಯಾವತ್ತೂ ಯಾರ ಮೇಲೂ ದಂಡೆತ್ತಿ ಹೋಗುವುದಿಲ್ಲ. ಆದರೆ, ನಮ್ಮ ಮೇಲೆ ಯಾರಾದರೂ ಬಂದರೆ ಸುಮ್ಮನೆ ಬಿಡುವ ಮಾತೇ ಇಲ್ಲ. ಭಾರತ-ಭಾರತೀಯರಿಗೆ ಅಂತದ್ದೊAದು ಶಕ್ತಿಯಿದೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.ಇದನ್ನೂ ಓದಿ: ಪಾಕ್‌ ಕದನ ವಿರಾಮ ಉಲ್ಲಂಘಿಸಿದ್ರೆ ಪ್ರತಿದಾಳಿ ನಡೆಸಿ – ಕಮಾಂಡರ್‌ಗಳಿಗೆ ಭಾರತೀಯ ಸೇನೆ ಪೂರ್ಣ ಅಧಿಕಾರ

  • ಪಾಕ್‌ ಕದನ ವಿರಾಮ ಉಲ್ಲಂಘಿಸಿದ್ರೆ ಪ್ರತಿದಾಳಿ ನಡೆಸಿ – ಕಮಾಂಡರ್‌ಗಳಿಗೆ ಭಾರತೀಯ ಸೇನೆ ಪೂರ್ಣ ಅಧಿಕಾರ

    ಪಾಕ್‌ ಕದನ ವಿರಾಮ ಉಲ್ಲಂಘಿಸಿದ್ರೆ ಪ್ರತಿದಾಳಿ ನಡೆಸಿ – ಕಮಾಂಡರ್‌ಗಳಿಗೆ ಭಾರತೀಯ ಸೇನೆ ಪೂರ್ಣ ಅಧಿಕಾರ

    ನವದೆಹಲಿ: ಪಾಕಿಸ್ತಾನ ಕದನ ವಿರಾಮ (Ceasefire) ಉಲ್ಲಂಘಿಸಿದರೆ ಪ್ರತಿದಾಳಿ ನಡೆಸಿ ಎಂದು ಸೇನಾ ಕಮಾಂಡರ್‌ಗಳಿಗೆ ಭಾರತೀಯ ಸೇನೆ (Indian Army) ಪೂರ್ಣ ಅಧಿಕಾರ ನೀಡಿದೆ.

    ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವೆ ಶನಿವಾರ ನಡೆದ ಒಪ್ಪಂದವನ್ನು ಉಲ್ಲಂಘಿಸಿದರೆ ಪ್ರತಿದಾಳಿ ನಡೆಸಲು ಪಶ್ಚಿಮ ಗಡಿಯಲ್ಲಿರುವ ಎಲ್ಲಾ ಸೇನಾ ಕಮಾಂಡರ್‌ಗಳಿಗೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ನೀಡಿ ಆದೇಶಿಸಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ- ಹುತಾತ್ಮ ವೀರ ಯೋಧನಿಗೆ ಭಾವುಕ ವಿದಾಯ; ಕಣ್ಣೀರಿಟ್ಟ ಕುಟುಂಬಸ್ಥರು

    ನಿನ್ನೆ ಸಂಜೆ ಎರಡೂ ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಮಾತನಾಡಿದ ನಂತರ ಗಡಿಯಲ್ಲಿ ಯಾವುದೇ ದಾಳಿಗಳು ನಡೆದಿಲ್ಲ ಎನ್ನಲಾಗಿದೆ.

    ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ನಂಟು ಹೊಂದಿದ್ದ ಭಯೋತ್ಪಾದಕರು 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತು. ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತ ದಾಳಿ ಮಾಡಿತು.

    ನಾಗರಿಕ ಸರ್ಕಾರದ ಮೇಲೆ ಸೇನೆಯು ಬಲವಾದ ಹಿಡಿತವನ್ನು ಹೊಂದಿರುವ ನೆರೆಯ ರಾಷ್ಟ್ರವು ಭಾರತದ ನಾಗರಿಕ ಪ್ರದೇಶಗಳ ಮೇಲೆ ಡ್ರೋನ್‌ಗಳ ಮೂಲಕ ದಾಳಿ ಮಾಡುವ ಮೂಲಕ ಪರಿಸ್ಥಿತಿಯನ್ನು ಉಲ್ಬಣಗೊಳಿಸಿತ್ತು. ಇದನ್ನೂ ಓದಿ: ಅಣ್ವಸ್ತ್ರಗಳಿರೋ ಬೆಟ್ಟದ ಮೇಲೆ ದಾಳಿ – ಬೆದರಿದ ಪಾಕ್‌, ಅಮೆರಿಕಕ್ಕೂ ಶಾಕ್‌!

    ಭಾರತವು ಪ್ರತಿಯಾಗಿ ಪಾಕಿಸ್ತಾನದ ಪ್ರದೇಶದೊಳಗೆ ಆಯ್ದ ಮಿಲಿಟರಿ ಗುರಿಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿತು. ಇವುಗಳಲ್ಲಿ ರಫಿಕಿ, ಚಕ್ಲಾಲಾ, ರಹೀಮ್ ಯಾರ್ ಖಾನ್, ಸುಕ್ಕೂರ್ ಮತ್ತು ಸಿಯಾಲ್‌ಕೋಟ್‌ನಲ್ಲಿರುವ ರೆಡಾರ್‌ ಸ್ಥಾಪನೆಗಳು, ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳು ಮತ್ತು ಮದ್ದುಗುಂಡು ಡಿಪೋಗಳು ಸೇರಿವೆ.

  • ಕದನ ವಿರಾಮ ಮೊದಲು ಘೋಷಿಸಿದ್ದು ಅಮೆರಿಕ ಅಧ್ಯಕ್ಷ – ಮೋದಿಗೆ ಪತ್ರ ಬರೆದ ರಾಹುಲ್‌ ಗಾಂಧಿ

    ಕದನ ವಿರಾಮ ಮೊದಲು ಘೋಷಿಸಿದ್ದು ಅಮೆರಿಕ ಅಧ್ಯಕ್ಷ – ಮೋದಿಗೆ ಪತ್ರ ಬರೆದ ರಾಹುಲ್‌ ಗಾಂಧಿ

    ನವದೆಹಲಿ: ಕೇಂದ್ರ ಸರ್ಕಾರ ಪಾಕಿಸ್ತಾನದೊಂದಿಗೆ (Pakistan) ಕದನ ವಿರಾಮ (Ceasefire) ಒಪ್ಪಂದ ಘೋಷಿಸಿದ ಒಂದು ದಿನದ ನಂತರ ಪ್ರಧಾನಿ ಮೋದಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ (Rahul Gandhi) ಪತ್ರ ಬರೆದಿದ್ದಾರೆ.

    ಆಪರೇಷನ್ ಸಿಂಧೂರ ಮತ್ತು ಕದನ ವಿರಾಮದ ಬಗ್ಗೆ ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮೊದಲು ಕದನ ವಿರಾಮವನ್ನು ಘೋಷಿಸಿದರು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 300 ಕೋಟಿ ವೆಚ್ಚದ ʻಬ್ರಹ್ಮೋಸ್ʼ ಕ್ಷಿಪಣಿ ಉತ್ಪಾದನಾ ಘಟಕ ಉದ್ಘಾಟನೆ; ವಾರ್ಷಿಕ 100 ಮಿಸೈಲ್‌ ಉತ್ಪಾದನೆ ಗುರಿ

    ಪತ್ರದಲ್ಲೇನಿದೆ?
    ಆತ್ಮೀಯ ಪ್ರಧಾನ ಮಂತ್ರಿಯವರೇ, ಸಂಸತ್ತಿನ ವಿಶೇಷ ಅಧಿವೇಶನವನ್ನು ತಕ್ಷಣವೇ ಕರೆಯಬೇಕೆಂಬ ವಿರೋಧ ಪಕ್ಷದ ಸರ್ವಾನುಮತದ ವಿನಂತಿಯನ್ನು ನಾನು ಪುನರುಚ್ಚರಿಸುತ್ತೇನೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆಯಿತು. ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯಿತು. ಆದರೆ, ಇಂದಿನ ಕದನ ವಿರಾಮವನ್ನು ಅಮೆರಿಕ ಅಧ್ಯಕ್ಷ ಟ್ರಂಪ್ ಮೊದಲು ಘೋಷಿಸಿದರು. ಇದು ಮುಂಬರುವ ಸವಾಲುಗಳನ್ನು ಎದುರಿಸಲು ನಮ್ಮ ಸಾಮೂಹಿಕ ಸಂಕಲ್ಪವನ್ನು ಪ್ರದರ್ಶಿಸಲು ಒಂದು ಅವಕಾಶವಾಗಿದೆ. ನೀವು ಈ ಬೇಡಿಕೆಯನ್ನು ಗಂಭೀರವಾಗಿ ಮತ್ತು ತ್ವರಿತವಾಗಿ ಪರಿಗಣಿಸುತ್ತೀರಿ ಎಂದು ನಾನು ನಂಬುತ್ತೇನೆ ಎಂದು ರಾಹುಲ್‌ ಗಾಂಧಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಕಾಂಗ್ರೆಸ್ ಮುಖ್ಯಸ್ಥ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಪ್ರಧಾನಿಗೆ ಪತ್ರ ಬರೆದಿದ್ದಾರೆ. ‘ಪಹಲ್ಗಾಮ್‌ನಲ್ಲಿ ನಡೆದ ಅಮಾನವೀಯ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಸಂಸತ್ತಿನ ಎರಡೂ ಸದನಗಳ ವಿಶೇಷ ಅಧಿವೇಶನವನ್ನು ಕರೆಯಲು ಏಪ್ರಿಲ್ 28 ರಂದು ಬರೆದ ನಮ್ಮ ಪತ್ರಗಳನ್ನು ನೀವು ನೆನಪಿಸಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ | ಲಷ್ಕರ್ ಮುಖ್ಯಸ್ಥ ಸೇರಿ 140 ಉಗ್ರರು ಉಡೀಸ್

    ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಹಲ್ಗಾಮ್ ಭಯೋತ್ಪಾದನೆ, ಆಪರೇಷನ್ ಸಿಂಧೂರ ಮತ್ತು ಮೊದಲು ವಾಷಿಂಗ್ಟನ್ ಡಿಸಿಯಿಂದ, ನಂತರ ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳಿಂದ ಕದನ ವಿರಾಮ ಘೋಷಣೆಗಳ ಬಗ್ಗೆ ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಎಲ್ಲಾ ವಿರೋಧ ಪಕ್ಷಗಳ ಸರ್ವಾನುಮತದಿಂದ ವಿನಂತಿಸಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕರು ಈಗಾಗಲೇ ನಿಮಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ನಾನು ಈ ವಿನಂತಿಯನ್ನು ಬೆಂಬಲಿಸಿ ಬರೆಯುತ್ತಿದ್ದೇನೆ. ನೀವು ಒಪ್ಪುತ್ತೀರಿ ಎಂದು ನಾನು ನಂಬುತ್ತೇನೆ ಎಂದು ಖರ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

  • Ceasefire | ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯುವಂತೆ ಕಾಂಗ್ರೆಸ್‌ ಆಗ್ರಹ

    Ceasefire | ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯುವಂತೆ ಕಾಂಗ್ರೆಸ್‌ ಆಗ್ರಹ

    ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿ, ಆಪರೇಷನ್‌ ಸಿಂಧೂರ, ಭಾರತ ಮತ್ತು ಪಾಕ್‌ ನಡುವಿನ ಕದನ ವಿರಾಮ (Ceasefire) ಕುರಿತು ಪ್ರಧಾನಿ ಮೋದಿ (Narendra Modi) ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು. ಜೊತೆಗೆ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ನಡೆಸಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್‌ ಆಗ್ರಹಿಸಿದೆ.

    ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ (Jairam Ramesh) ತಮ್ಮ ಎಕ್ಸ್‌ ಖಾತೆಯಲ್ಲಿ ಆಗ್ರಹಿಸಿದ್ದಾರೆ. ಕೂಡಲೇ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಹಾಗೂ ಸಂಸತ್‌ನಲ್ಲಿ ವಿಶೇಷ ಅಧಿವೇಶನ ಕರೆದರೆ ಈ ಎಲ್ಲ ವಿಷಯಗಳ ಬಗ್ಗೆ‌ ಸಮಗ್ರವಾಗಿ ಚರ್ಚಿಸಬಹುದು ಎಂದು ಹೇಳಿದ್ದಾರೆ.

    ಮುಂದುವರಿದು… ಭಾರತ ಮತ್ತು ಪಾಕಿಸ್ತಾನದ (Pakistan) ನಡುವಿನ ಕದನ ವಿರಾಮ ಕುರಿತ ಚರ್ಚೆಗೆ ʻತಟಸ್ಥ ವೇದಿಕೆʼಯ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಪ್ರಸ್ತಾಪಿಸಿರುವುದು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ನಂಬುತ್ತದೆ. ನಾವು ಶಿಮ್ಲಾ ಒಪ್ಪಂದವನ್ನು ಕೈಬಿಟ್ಟಿದ್ದೇವೆಯೇ? 3ನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಆಹ್ವಾನ ಕೊಟ್ಟಿದ್ದೇವೆ ಎಂಬ ಅನುಮಾನ ಮೂಡಿದೆ ಅಂತ ಕಳವಳ ವ್ಯಕ್ತಪಡಿಸಿದ್ದಾರೆ.

    ಭಾರತ ಮತ್ತು ಪಾಕಿಸ್ತಾನ (India – Pakistan) ನಡುವೆ ರಾಜತಾಂತ್ರಿಕ ಮಾರ್ಗಗಳನ್ನು ಮತ್ತೆ ತೆರೆಯಲಾಗುತ್ತಿದೆಯೇ? ಎಂದು ಕಾಂಗ್ರೆಸ್ ಕೇಳಲು ಬಯಸುತ್ತದೆ. ನಾವು ಪಾಕಿಸ್ತಾನದಿಂದ ಯಾವ ಬದ್ಧತೆ ಬಯಸಿದ್ದೇವೆ, ಅದರಿಂದ ನಮಗೆ ಏನು ಸಿಕ್ಕಿದೆ? ಈ ಇಡೀ ಪರಿಸ್ಥಿತಿಯ ಕುರಿತು ದೇಶದ ಇಬ್ಬರು ಮಾಜಿ ಸೇನಾ ಮುಖ್ಯಸ್ಥರು ನೀಡಿದ ಹೇಳಿಕೆಗಳ ಬಗ್ಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಗಮನ ಸೆಳೆಯಲು ಬಯಸುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನ ಮಂತ್ರಿಗಳೇ ಪ್ರತಿಕ್ರಿಯಿಸಬೇಕು ಎಂದು ಮನವಿ ಮಾಡಿದ್ದಾರೆ.

    ಕೊನೆಯದ್ದಾಗಿ, 1971 ರಲ್ಲಿ ಇಂದಿರಾ ಗಾಂಧಿಯವರು ಪ್ರದರ್ಶಿಸಿದ ಅಸಾಧಾರಣ ದಿಟ್ಟ ಮತ್ತು ದೃಢನಿಶ್ಚಯದ ನಾಯಕತ್ವವನ್ನು ದೇಶವು ನೆನಪಿಸಿಕೊಳ್ಳುವುದು ಸ್ವಾಭಾವಿಕ ಎಂದು ರಾಷ್ಟ್ರೀಯ ಕಾಂಗ್ರೆಸ್ ನಂಬುತ್ತದೆ ಎಂದು ಎಕ್ಸ್‌ನಲ್ಲಿ ಜೈರಾಮ್‌ ರಮೇಶ್‌ ತಿಳಿಸಿದ್ದಾರೆ.

    ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್‌ ದಾಳಿ ಉದ್ದೇಶಿಸಿ ನಡೆದ ಮೊದಲ ಸರ್ವಪಕ್ಷ ಸಭೆ ಹಾಗೂ ಆಪರೇಷನ್‌ ಸಿಂಧೂರ ಬಗ್ಗೆ ನಡೆದ ಸರ್ವಪಕ್ಷ ಸಭೆಗಳಿಗೆ ಮೋದಿ ಗೈರಾಗಿದ್ದರು.

  • ಬ್ರಹ್ಮೋಸ್‌ ದಾಳಿಗೆ ಬೆಚ್ಚಿ ಗೋಗರೆದು ಕದನ ವಿರಾಮ ಮಾಡಿಸಿದ್ದ ಪಾಕ್‌!

    ಬ್ರಹ್ಮೋಸ್‌ ದಾಳಿಗೆ ಬೆಚ್ಚಿ ಗೋಗರೆದು ಕದನ ವಿರಾಮ ಮಾಡಿಸಿದ್ದ ಪಾಕ್‌!

    ನವದೆಹಲಿ: ಭಾರತದ (India) ಬ್ರಹ್ಮೋಸ್‌ ಕ್ಷಿಪಣಿ (Brahmos Missile) ದಾಳಿಗೆ ಬೆದರಿದ ಪಾಕಿಸ್ತಾನ (Pakistan) ಗೋಗರೆದು ಕದನ ವಿರಾಮ ಮಾಡಿಸಿತ್ತು ಎಂಬ ವಿಚಾರ ಈಗ ಸರ್ಕಾರಿ ಮೂಲಗಳಿಂದ ತಿಳಿದು ಬಂದಿದೆ.

    ಭಾರತದ ಉಗ್ರರ ನೆಲೆಗಳ ಮೇಲೆ ಬಾಂಬ್‌ ದಾಳಿ ನಡೆಸಿದ ಬಳಿಕ ಪಾಕಿಸ್ತಾನ ಆರಂಭದಲ್ಲಿ ಡ್ರೋನ್‌, ಸಣ್ಣ ಕ್ಷಿಪಣಿಗಳನ್ನು ಹಾರಿಸಿ ದಾಳಿ ನಡೆಸುತ್ತಿತ್ತು. ಆದರೆ ಮೇ 9, 10 ರ ರಾತ್ರಿ ದೆಹಲಿಯನ್ನು ಗುರಿಯಾಗಿಸಿ ಪಾಕ್‌ ಫತಾಹ್-II ಕ್ಷಿಪಣಿಯನ್ನು ಪಾಕ್‌ ಪ್ರಯೋಗಿಸಿತ್ತು. ಪಾಕ್‌ ಖಂಡಾಂತರ ಕ್ಷಿಪಣಿಯನ್ನು ಪ್ರಯೋಗಿಸಿದ ಬೆನ್ನಲ್ಲೇ ಭಾರತ ಮೇ 10ರ ಮುಂಜಾನೆ ಮೊದಲ ಬಾರಿಗೆ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿಯನ್ನು ಹಾರಿಸಿತ್ತು. ಇನ್ನೊಂದು ದೇಶದ ಮಧ್ಯೆ ಕಾದಾಟ ನಡೆಸುತ್ತಿದ್ದಾಗ ಭಾರತ ಬ್ರಹ್ಮೋಸ್‌ ಕ್ಷಿಪಣಿಯನ್ನು ಹಾರಿಸಿದ್ದು ಇದೇ ಮೊದಲು.

    ನಗರಗಳನ್ನು ಗುರಿಯಾಗಿಸಿ ಭಾರತ ಕ್ಷಿಪಣಿಯನ್ನು ಹಾರಿಸಿರಲಿಲ್ಲ. ಪಾಕಿಸ್ತಾನದ ಪ್ರಮುಖ ವಾಯುನೆಲೆಯನ್ನು (Air Base) ಗುರಿಯಾಗಿಸಿಕೊಂಡೇ ದಾಳಿ ನಡೆಸಿತ್ತು. ಭಾರತ ಮೊದಲೇ ಚೀನಾ ನಿರ್ಮಿತ ವಾಯು ರಕ್ಷಣಾ ವ್ಯವಸ್ಥೆಯನ್ನು ಧ್ವಂಸ ಮಾಡಿತ್ತು. ಹೀಗಾಗಿ ಬಹ್ಮೋಸ್‌ ಕ್ಷಿಪಣಿ ಮೊದಲು ರಾವಲ್ಪಿಂಡಿ ಬಳಿಯ ಚಕ್ಲಾಲಾ ಮತ್ತು ಪಂಜಾಬ್ ಪ್ರಾಂತ್ಯದ ಸರ್ಗೋಧಾದ ಮೇಲೆ ಬಿತ್ತು. ಇದನ್ನೂ ಓದಿ: ದೆಹಲಿಗೆ ಬರುತ್ತಿದ್ದ ಪಾಕ್‌ ಬ್ಯಾಲಿಸ್ಟಿಕ್‌ ಮಿಸೈಲ್‌ ಹರ್ಯಾಣದಲ್ಲೇ ಛಿದ್ರ!

    ಪಾಕಿಸ್ತಾನದ ದಾಳಿ ನಡೆಸುವ ಮೂಲಕ ಲಾಜಿಸ್ಟಿಕ್ಸ್‌ ಸಂಗ್ರಹ ಇರುವ ಈ ನೆಲೆಯ ಮೇಲೆ ಭಾರತ ದಾಳಿ ನಡೆಸಿತ್ತು. ಪಾಕ್‌ ಈ ದಾಳಿಯ ಬಗ್ಗೆ ಪಾಕ್‌ ವಿಶ್ಲೇಷಣೆ ನಡೆಸುತ್ತಿದ್ದಾಗಲೇ ಭಾರತ ಜಕೋಬಾಬಾದ್, ಭೋಲಾರಿ ಮತ್ತು ಸ್ಕಾರ್ಡು ಮೇಲೆ ದಾಳಿ ನಡೆಸಿತು. ಎಲ್ಲಾ ಸೇರಿ ಒಟ್ಟು 11 ವಾಯು ನೆಲೆ (ನೂರ್ ಖಾನ್/ಚಕ್ಲಾಲಾ, ರಫಿಕ್ವಿ, ಮುರಿಡ್, ಸುಕ್ಕುರ್, ಸಿಯಾಲ್‌ಕೋಟ್‌, ಪಸರೂರು, ಚುನಿಯನ್, ಸರ್ಗೋಧಾ, ಸ್ಕಾರ್ಡು, ಭೋಲಾರಿ, ಜಾಕೋಬಾಬಾದ್) ಮೇಲೆ ಭಾರತ ದಾಳಿ ನಡೆಸಿತ್ತು. ದಾಳಿಯಿಂದ ಎಷ್ಟು ಪ್ರಮಾಣದ ಹಾನಿಯಾಗಿದೆ ಎನ್ನುವುದರ ಬಗ್ಗೆ ಅಧಿಕೃತ ಮಾಹಿತಿ ಇಲ್ಲದೇ ಇದ್ದರೂ ಕೆಲವು ಕಡೆ ರನ್‌ವೇ ಹಾಳಾಗಿದ್ದಾರೆ ಕೆಲವು ಕಡೆ ವಿಮಾನಗಳು ತಂಗಿದ್ದ ಶೆಡ್‌ ಮೇಲೆಯೇ ಡ್ರೋನ್‌/ ಕ್ಷಿಪಣಿಯನ್ನು ಹಾಕಿತ್ತು.

    ಮುಖ್ಯವಾಗಿ ಸರ್ಗೋಧಾ ವಾಯುನೆಲೆ (Sargodha Base) ಪಾಕಿಸ್ತಾನದ ಶಕ್ತಿಶಾಲಿ ವಾಯು ನೆಲೆಯಾಗಿದ್ದು ಭಾರತದ ವಿರುದ್ಧ ದಾಳಿ ಮಾಡುವ ಎಫ್‌16 ವಿಮಾನಗಳು ಇಲ್ಲಿಂದಲೇ ಟೇಕಾಫ್‌ ಆಗುತ್ತಿದ್ದವು. ಈ ನೆಲೆಯ ಮೇಲಿನ ದಾಳಿಯಿಂದ ಪಾಕ್‌ ಬೆಚ್ಚಿ ಬಿದ್ದಿತ್ತು. ಈ ಜಾಗವನ್ನು ಉಪಗ್ರಹದ ಮೂಲಕ ನೋಡಿದಾಗ ರನ್‌ವೇಯಲ್ಲಿ ದೊಡ್ಡ ಕುಳಿ ಬಿದ್ದಿರುವುದು ನೋಡಬಹುದು.

    ಈ ಸಮಯದಲ್ಲಿಯೇ ಪಾಕಿಸ್ತಾನ ತುರ್ತು ಹಸ್ತಕ್ಷೇಪಕ್ಕಾಗಿ ಅಮೆರಿಕದ ಸಹಾಯವನ್ನು ಕೋರಿದೆ. ಹಾಗೆ ನೋಡಿದರೆ ಅಮೆರಿಕ ಮೊದಲೇ ಎರಡು ದೇಶಗಳ ಜೊತೆ ಸಂಪರ್ಕದಲ್ಲಿತ್ತು. ಆದರೆ ಈಗ ಪಾಕ್‌ ನೇರವಾಗಿ ಮೊರೆ ಇಟ್ಟ ಕಾರಣ ಅಧಿಕೃತವಾಗಿ ಮಧ್ಯಪ್ರವೇಶ ಮಾಡಲು ಮುಂದಾಯಿತು.

    ಮೇ 10 ರ ಮಧ್ಯಾಹ್ನದ ವೇಳೆಗೆ ಪಾಕಿಸ್ತಾನದ ಡಿಜಿಎಂಒ ಮೇಜರ್ ಜನರಲ್ ಕಾಶಿಫ್ ಅಬ್ದುಲ್ಲಾ ಅವರು ತಮ್ಮ ಭಾರತ ಡಿಜಿಎಂಒ ಲೆಫ್ಟಿನೆಂಟ್‌ ಜನರಲ್ ರಾಜೀವ್ ಘಾಯ್ ಅವರಿಗೆ ನೇರ ಕರೆ ಮಾಡಿ ಕದನ ವಿರಾಮಕ್ಕೆ ಒಪ್ಪಿಗೆ ನೀಡುವಂತೆ ಮನವಿ ಮಾಡಿದರು. ಕೊನೆಗೆ ಸಂಜೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಪತ್ರಿಕಾಗೋಷ್ಠಿಯಲ್ಲಿ ಎರಡು ದೇಶಗಳ ಮಧ್ಯೆ ಕದನವಿರಾಮ ನಡೆದಿರುವ ಬಗ್ಗೆ ದೃಢಪಡಿಸಿದರು.

  • ಭಾರತ-ಪಾಕ್ ಕದನ ವಿರಾಮ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

    ಭಾರತ-ಪಾಕ್ ಕದನ ವಿರಾಮ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ (India Pakistan) ನಡುವಿನ ಕದನ ವಿರಾಮವನ್ನು ಸಿಎಂ ಸಿದ್ದರಾಮಯ್ಯ (Siddaramaiah) ಸ್ವಾಗತಿಸಿದ್ದಾರೆ.

    ಕದನ ವಿರಾಮದ (Ceasefire) ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಮೊದಲಿಗೆ ಸಿಎಂ ಹೇಳಿದರು. ಆಗ ಪಕ್ಕದಲ್ಲೇ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು, ಕದನ ವಿರಾಮ ಘೋಷಣೆ ಆಗಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಿದರು. ಆಗ ಮಾತನಾಡಿದ ಸಿದ್ದರಾಮಯ್ಯ, ಕದನ ವಿರಾಮವನ್ನು ಸ್ವಾಗತಿಸಿದರು.

    ಕದನ ವಿರಾಮ ಘೋಷಣೆಯಾದ್ರೂ ಕೂಡ ಎಚ್ಚರಿಕೆಯಿಂದ ಇರಬೇಕು. ಭಯೋತ್ಪಾದನೆಯನ್ನು ನಿಗ್ರಹಿಸುವ ಕೆಲಸ ಮಾಡುತ್ತೇವೆ. ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

  • ಭೂ, ಜಲ, ವಾಯು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಿ ಕದನ ವಿರಾಮಕ್ಕೆ ಭಾರತ-ಪಾಕ್‌ ಒಪ್ಪಿಗೆ

    ಭೂ, ಜಲ, ವಾಯು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಿ ಕದನ ವಿರಾಮಕ್ಕೆ ಭಾರತ-ಪಾಕ್‌ ಒಪ್ಪಿಗೆ

    ನವದೆಹಲಿ: ಭೂ, ಜಲ, ವಾಯು ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಿ ಭಾರತ ಮತ್ತು ಪಾಕಿಸ್ತಾನ (India Pakistan) ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ.

    ಜಗತ್ತನ್ನು ಆತಂಕಕ್ಕೀಡು ಮಾಡಿದ ನಾಲ್ಕು ದಿನಗಳ ಉದ್ವಿಗ್ನತೆ ನಂತರ, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ (Ceasefire) ಒಪ್ಪಿಕೊಂಡಿವೆ. ಇಂದು ಸಂಜೆ 5 ಗಂಟೆಯಿಂದಲೇ ಎಲ್ಲಾ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಇದನ್ನೂ ಓದಿ: ಭಾರತ-ಪಾಕಿಸ್ತಾನದಿಂದ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್‌ ಘೋಷಣೆ

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎಕ್ಸ್‌ ಖಾತೆಯಲ್ಲಿ, ಭಾರತ ಮತ್ತು ಪಾಕ್‌ ನಡುವಿನ ಸಂಧಾನದ ಬಗ್ಗೆ ಮಾಹಿತಿ ನೀಡಿದರು. ಸ್ವಲ್ಪ ಸಮಯದ ನಂತರ ಭಾರತವು ಕದನ ವಿರಾಮವನ್ನು ದೃಢಪಡಿಸಿತು.

    ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಸಂಜೆ 5 ಗಂಟೆಯಿಂದ ಭೂಮಿ, ವಾಯು ಮತ್ತು ಸಮುದ್ರದಲ್ಲಿ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ- ಪಾಕ್ ನಡುವೆ ಕದನ ವಿರಾಮ

    ಇದನ್ನು ಜಾರಿಗೆ ತರಲು ಎರಡೂ ಕಡೆಯಿಂದ ಸೂಚನೆಗಳನ್ನು ನೀಡಲಾಗಿದೆ. ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮೇ 12 ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾತುಕತೆ ನಡೆಸಲಿದ್ದಾರೆ ಎಂದು ಮಿಶ್ರಿ ಮಾಹಿತಿ ನೀಡಿದ್ದಾರೆ.

  • ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಸುದ್ದಿಗಳನ್ನು ಹಬ್ಬಿಸಿದೆ: ಸೋಫಿಯಾ ಖುರೇಷಿ

    ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಸುದ್ದಿಗಳನ್ನು ಹಬ್ಬಿಸಿದೆ: ಸೋಫಿಯಾ ಖುರೇಷಿ

    – ಭಾರತೀಯ ವಾಯುನೆಲೆಗಳು ಸುರಕ್ಷಿತ
    – ನಮ್ಮ ಪ್ರತಿದಾಳಿಯಿಂದ ಪಾಕ್ ಸೇನೆಗೆ ಅಪಾರ ನಷ್ಟ: ಕರ್ನಲ್ ಸೋಫಿಯಾ

    ನವದೆಹಲಿ: ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಆರೋಪ ಮಾಡಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ(Sofiya Qureshi) ಹೇಳಿದ್ದಾರೆ.

    ಶನಿವಾರ ಭಾರತ(India) ಹಾಗೂ ಪಾಕಿಸ್ತಾನದ(Pakistan) ನಡುವಿನ ಕದನ ವಿರಾಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್400 ಕ್ಷಿಪಣಿ, ಬ್ರಹ್ಮೋಸ್ ನೆಲೆ ನಾಶವಾಗಿಲ್ಲ. ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಆರೋಪಗಳನ್ನ ಮಾಡ್ತಿದೆ. ಚಂಡೀಗಢದಲ್ಲಿ ಪಾಕ್ ಶೆಲ್ ಮೇಲೆ ದಾಳಿ ಮಾಡಿರೋದು ಸುಳ್ಳು ಸುದ್ದಿಯಾಗಿದೆ. ಭಾರತೀಯ ಸೇನೆಯು ಪಾಕಿಸ್ತಾನದ ಡ್ರೋನ್‌ಗಳನ್ನ ಹೊಡೆದುರುಳಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ-ಪಾಕ್‌ ಒಪ್ಪಂದ: ಜೈಶಂಕರ್‌

    ಭಾರತೀಯ ಸೇನೆಯು(Indian Army) ಕೇವಲ ಪಾಕ್‌ನ ಸೇನಾವಲಯಗಳನ್ನ ಮಾತ್ರ ಗುರಿ ಮಾಡಿ ದಾಳಿ ಮಾಡಿದೆ. ಪಾಕಿಸ್ತಾನ ಸುಳ್ಳು ಸುದ್ದಿಗಳನ್ನ ಹಬ್ಬಿಸುತ್ತಿದೆ. ನಮ್ಮ ದಾಳಿಯಿಂದ ಪಾಕಿಸ್ತಾನ ಸೇನೆಗೆ ಸಾಕಷ್ಟು ನಷ್ಟವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿದೆ: ಪಾಕ್ ವಿದೇಶಾಂಗ ಸಚಿವ ಘೋಷಣೆ

    ಭಾರತೀಯ ಸೇನೆಯು ಪಾಕಿಸ್ತಾನದ ಯಾವುದೇ ಮಸೀದಿಗಳನ್ನ ಟಾರ್ಗೆಟ್ ಮಾಡಿಲ್ಲ. ಕೇವಲ ಪಾಕ್ ಉಗ್ರರ ನೆಲೆಗಳನ್ನ ಧ್ವಂಸ ಮಾಡಿದ್ದೇವೆ. ಪಾಕಿಸ್ತಾನ ಏರ್‌ಬೇಸ್‌ಗಳನ್ನ ಹೊಡೆದುರುಳಿಸಿದ್ದೇವೆ. ಎಲ್‌ಓಸಿಯಲ್ಲಿಯೂ ಪಾಕಿಸ್ತಾನ ಗುಂಡಿನ ದಾಳಿ ಮಾಡಿತ್ತು. ಅದಕ್ಕೆ ಪ್ರತಿಯಾಗಿ ಭಾರತ ದಾಳಿ ಮಾಡಿದ ವೇಳೆ ಅವರಿಗೂ ನಷ್ಟವಾಗಿದೆ. ಎಲ್ಲಾ ಸಮಯದಲ್ಲೂ ನಮ್ಮ ಸೇನೆ ಅಲರ್ಟ್ ಇರಲಿದೆ. ಪಾಕ್ ದಾಳಿಗೆ ಪ್ರತಿದಾಳಿ ಮಾಡಲು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

  • ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ-ಪಾಕ್‌ ಒಪ್ಪಂದ: ಜೈಶಂಕರ್‌

    ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ-ಪಾಕ್‌ ಒಪ್ಪಂದ: ಜೈಶಂಕರ್‌

    – ಭಯೋತ್ಪಾದನೆ ವಿರುದ್ಧ ಮಾತ್ರ ಭಾರತ ಎಂದೂ ರಾಜಿಯಾಗಲ್ಲ: ಸ್ಪಷ್ಟಪಡಿಸಿದ ವಿದೇಶಾಂಗ ಸಚಿವ

    ನವದೆಹಲಿ: ಭಾರತ ಮತ್ತು ಪಾಕಿಸ್ತಾನ (India Pakistan Conflict) ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್‌ (S.Jaishankar) ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಸಚಿವ ಮಾಹಿತಿ ಹಂಚಿಕೊಂಡಿದ್ದಾರೆ. ‘ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ಹೊಂದಿದೆ. ಅದು ಹಾಗೆಯೇ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ- ಪಾಕ್ ನಡುವೆ ಕದನ ವಿರಾಮ

    ಭಾರತ ಮತ್ತು ಪಾಕ್‌ ತ್ವರಿತ ಶಾಂತಿ ಮಾತುಕತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒತ್ತಾಯಿಸಿದ್ದರು. ಅಮೆರಿಕ ಮಧ್ಯಸ್ಥಿಕೆಯೊಂದಿಗೆ ಕೊನೆಗೂ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ.

    ಉಭಯ ದೇಶಗಳ ನಡುವೆ ಕದನ ವಿರಾಮ ಒಪ್ಪಂದ ಆಗಿದೆ ಎಂದು ಡೊನಾಲ್ಡ್‌ ಟ್ರಂಪ್‌ ಎಕ್ಸ್‌ ಪೋಸ್ಟ್‌ ಮೂಲಕ ತಿಳಿಸಿದ್ದರು. ಅದರ ಬೆನ್ನಲ್ಲೇ ಎರಡೂ ದೇಶಗಳು ಅಧಿಕೃತವಾಗಿ ಕದನ ವಿರಾಮದ ಬಗ್ಗೆ ತಿಳಿಸಿವೆ. ಇದನ್ನೂ ಓದಿ: ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿದೆ: ಪಾಕ್ ವಿದೇಶಾಂಗ ಸಚಿವ ಘೋಷಣೆ

  • ಭಾರತ- ಪಾಕ್ ನಡುವೆ ಕದನ ವಿರಾಮ

    ಭಾರತ- ಪಾಕ್ ನಡುವೆ ಕದನ ವಿರಾಮ

    – ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿ

    ನವದೆಹಲಿ: ಪಾಕಿಸ್ತಾನದ(Pakistan) ಜೊತೆಗಿನ ಕದನ ವಿರಾಮಕ್ಕೆ ಭಾರತ(India) ಒಪ್ಪಿಕೊಂಡಿದ್ದೆ ಎಂದು ವಿದೇಶಾಂಗ ಸಚಿವಾಲಯವು ತಿಳಿಸಿದೆ.

    ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ. ಮೇ 12ರಂದು ಉಭಯ ದೇಶಗಳು ಮಾತುಕತೆ ನಿರ್ಧರಿಸಿವೆ. ಈ ಸಭೆಗೆ ಅಮೆರಿಕಾ(America) ಮಧ್ಯಸ್ಥಿಕೆ ಇಲಾಖೆ ವಹಿಸಲಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿದೆ: ಪಾಕ್ ವಿದೇಶಾಂಗ ಸಚಿವ ಘೋಷಣೆ

    ಏ. 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್‌ ಉಗ್ರರು(Pahalgam Terror Attack) ದಾಳಿ ಮಾಡಿ 26 ಅಮಾಯಕರನ್ನು ಹತ್ಯೆ ಮಾಡಿದ್ದರು. ಇದಕ್ಕೆ ಪ್ರತೀಕಾರವಾಗಿ ಮೇ 7ರಂದು ಭಾರತವು ʻಆಪರೇಷನ್‌ ಸಿಂಧೂರʼ(Operation Sindoor) ಹೆಸರಿನಡಿಯಲ್ಲಿ ಪಾಕ್‌ನ ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿತ್ತು. ಇದನ್ನೂ ಓದಿ: ಭಾರತ-ಪಾಕಿಸ್ತಾನದಿಂದ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್‌ ಘೋಷಣೆ

    ಈ ದಾಳಿಗೆ ಪ್ರತಿಯಾಗಿ ಪಾಕ್‌ ಭಾರತದ ಮೇಲೆ ಡ್ರೋನ್‌ ಹಾಗೂ ಕ್ಷಿಪಣಿ ದಾಳಿ ಮಾಡಿತ್ತು. ಭಾರತೀಯ ಸೇನೆಯು ಪಾಕ್‌ನ ಡ್ರೋನ್‌ ಹಾಗೂ ಕ್ಷಿಪಣಿಗಳಿಗೆ ಹೊಡೆದುರುಳಿಸುವ ಮೂಲಕ ಪ್ರತ್ಯುತ್ತರ ನೀಡಿತ್ತು.  ಇದನ್ನೂ ಓದಿ: ಪಾಕ್‌ಗೆ ಬೆಂಬಲ ನೀಡಿದ ಟರ್ಕಿ, ಅಜೆರ್ಬೈಜಾನ್‌ಗೆ ಭಾರತ ಪೆಟ್ಟು – 2 ದೇಶಗಳಿಗೆ ಟೂರ್‌ ಪ್ಯಾಕೇಜ್‌ ಸ್ಥಗಿತ

    ಭಾರತದ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಏರ್ಪಡುತ್ತಿದ್ದಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌(Donald Trump) ಉಭಯ ರಾಷ್ಟ್ರಗಳಿಗೆ ಕದನ ವಿರಾಮ(Ceasefire) ಮಾಡುವಂತೆ ಸಲಹೆ ನೀಡಿದ್ದರು. ಆದರೆ ಇದು ಫಲಪ್ರದವಾಗಿರಲಿಲ್ಲ. ಇದೀಗ ಮತ್ತೊಮ್ಮೆ ಮಾತುಕತೆ ನಡೆಸಿ, ಎರಡೂ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದೆ.