Tag: ಕದ್ದಾಲಿಕೆ

  • ನನ್ನ ಫೋನ್​​ಗಳನ್ನು ಕದ್ದಾಲಿಕೆ ಮಾಡಲಾಗಿದೆ: ರಾಹುಲ್ ಗಾಂಧಿ

    ನನ್ನ ಫೋನ್​​ಗಳನ್ನು ಕದ್ದಾಲಿಕೆ ಮಾಡಲಾಗಿದೆ: ರಾಹುಲ್ ಗಾಂಧಿ

    ನವದೆಹಲಿ: ನನ್ನ ಎಲ್ಲಾ ಫೋನ್‍ಗಳನ್ನು ಕದ್ದಾಲಿಕೆ ಮಾಡಲಾಗಿದೆ. ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ಒತ್ತಾಯಿಸಿದ್ದು, ಇದನ್ನು ಸರ್ಕಾರ ತಿರಸ್ಕರಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

    ಸಂಸತ್ತಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಂಭಾವ್ಯ ಗುರಿ ಅಲ್ಲ. ನನ್ನ ಫೋನ್ ಟ್ಯಾಪ್ ಮಾಡಲಾಗಿದೆ, ಈ ಫೋನ್ ಮಾತ್ರವಲ್ಲ, ನನ್ನ ಎಲ್ಲಾ ಫೋನ್‍ಗಳನ್ನು ಟ್ಯಾಪ್ ಮಾಡಲಾಗಿದೆ ಎಂದಿದ್ದಾರೆ. ಸಂಸತ್ ನಲ್ಲಿ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಪೆಗಾಸಸ್ ಕಣ್ಗಾವಲು ಪ್ರಶ್ನಿಸಿ ಪ್ರತಿಭಟನೆ ನಡೆಸಿವೆ. ಸ್ರೇಲಿ ಕಂಪನಿ ಎನ್‍ಎಸ್‍ಒನ ಸ್ಪೈವೇರ್ ಪೆಗಾಸಸ್‍ನ ಸೋರಿಕೆಯಾದ ಡೇಟಾಬೇಸ್‍ನಲ್ಲಿ ರಾಹುಲ್ ಗಾಂಧಿ ಸಂಭಾವ್ಯ ಗುರಿಗಳ ಪಟ್ಟಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ, ಇದನ್ನು ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ಪ್ರತಿಪಕ್ಷದ ನಾಯಕರು, ಇಬ್ಬರು ಕೇಂದ್ರ ಸಚಿವರು, ಉದ್ಯಮಿ ಅನಿಲ್ ಅಂಬಾನಿ, ಮಾಜಿ ಸಿಬಿಐ ಮುಖ್ಯಸ್ಥ, ವೈರಾಲಜಿಸ್ಟ್ ಮತ್ತು 40 ಪತ್ರಕರ್ತರು ಭಾರತದ 300ಫೋನ್‍ಗಳ ಮೇಲೆ ಕಣ್ಗಾವಲು ಇರಿಸಿರುವ ಪಟ್ಟಿಯಲ್ಲಿದ್ದಾರೆ. ಎಲ್ಲಾ ಫೋನ್‍ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ದೃಢೀಕರಿಸಿಲ್ಲ ಎಂದಿದ್ದಾರೆ.

    ನನ್ನ ಸಂಭಾಷಣೆಗಳನ್ನು ಕದ್ದಾಲಿಕೆ ಮಾಡಲಾಗಿದೆ ಎಂದು ಭದ್ರತಾ ಸಿಬ್ಬಂದಿ ಹೇಳಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ನನ್ನ ಫೋನ್ ಅನ್ನು ಟ್ಯಾಪ್ ಮಾಡುವ ಐಬಿ (ಇಂಟೆಲಿಜೆನ್ಸ್ ಬ್ಯೂರೋ) ಜನರಿಂದ ನನಗೆ ಫೋನ್ ಕರೆಗಳು ಬರುತ್ತವೆ. ಅವರು ನಿಮ್ಮ ಫೋನ್ ಅನ್ನು ಟ್ಯಾಪ್ ಮಾಡಲಾಗುತ್ತಿದೆ ಎಂದು ಹೇಳುತ್ತಾರೆ. ನಾನು ಹೇಳುವುದನ್ನು ವಿವರಿಸಬೇಕೆಂದು ನನ್ನ ಭದ್ರತಾ ಸಿಬ್ಬಂದಿಗೆ ಹೇಳಲಾಗಿದೆ. ನನ್ನ ಸ್ನೇಹಿತರಿಗೆ ಕೂಡಾ ಫೋನ್‍ಗಳನ್ನು ಟ್ಯಾಪ್ ಮಾಡಿದ್ದಾರೆ ಎಂದು ತಿಳಿಸುವ ಕರೆಗಳನ್ನು ಬಂದಿವೆ. ನಾನು ಹೆದರುವುದಿಲ್ಲ. ನಾನು ಭಯಭೀತರಾಗುವುದಿಲ್ಲ. ಈ ದೇಶದಲ್ಲಿ, ನೀವು ಭ್ರಷ್ಟರಾಗಿದ್ದರೆ ಮತ್ತು ಕಳ್ಳರಾಗಿದ್ದರೆ ನೀವು ಭಯಪಡುತ್ತೀರಿ. ಇಲ್ಲದಿದ್ದರೆ ನೀವು ಭಯಪಡಬೇಕಾಗಿಲ್ಲ ಎಂದು ಹೇಳಿದರು.

    ಕಣ್ಗಾವಲು ಆರೋಪವನ್ನು ಸರ್ಕಾರ ನಿರಾಕರಿಸಿದೆ ಮತ್ತು ಸಂಭಾವ್ಯ ಗುರಿಗಳ ದೈನಂದಿನ ಬಹಿರಂಗಪಡಿಸುವಿಕೆಯ ನಡುವೆ ಯಾವುದೇ ಪಾತ್ರವನ್ನು ನಿರಾಕರಿಸಿದೆ. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸಂಸ್ಥೆಗಳ ವಿರುದ್ಧ ಗೃಹ ಸಚಿವ ಅಮಿತ್ ಶಾ ಈ ಶಸ್ತ್ರಾಸ್ತ್ರವನ್ನು (ಪೆಗಾಸಸ್) ಬಳಸುತ್ತಿದ್ದಾರೆ ರಾಹುಲ್ ಆರೋಪಿಸಿದರು. ಸರ್ಕಾರ ಇದಕ್ಕೆ ಹಣ ಪಾವತಿಸಿಲ್ಲವೇ? ಎಂಬದು ಪ್ರಮುಖ ಪ್ರಶ್ನೆ, ನೀವು ಪೆಗಾಸಸ್ ಖರೀದಿಸಬಹುದೇ? ನಾನು ಪೆಗಾಸಸ್ ಖರೀದಿಸಬಹುದೇ? ಒಂದು ಸರ್ಕಾರ ಮಾತ್ರ ಪೆಗಾಸಸ್ ಖರೀದಿಸಬಹುದು. ಪ್ರಧಾನ ಮಂತ್ರಿಯ ಸಹಿ, ಅಥವಾ ಕನಿಷ್ಠ ಗೃಹ ಸಚಿವರ ಸಹಿ ಇದಕ್ಕಾಗಿ ಬೇಕಾಗುತ್ತದೆ. ರಾಷ್ಟ್ರದ ಮಿಲಿಟರಿ ಪೆಗಾಸಸ್ ಅನ್ನು ಖರೀದಿಸಲು ಸಾಧ್ಯವಿಲ್ಲ ಎಂದು  ಹೇಳಿದರು.

    ಮುಂಗಾರು ಅಧಿವೇಶನದಲ್ಲಿ ಪೆಗಾಸಸ್ ವರದಿಗಳನ್ನು ತೀಕ್ಷವಾಗಿ ಪ್ರಶ್ನಿಸಲು ಕಾಂಗ್ರೆಸ್ ನಿರ್ಧರಿಸಿದೆ. ಹಾಗಾಗಿ ಸೋಮವಾರ ಆರಂಭವಾದ ಅಧಿವೇಶನದಲ್ಲಿ ಕಾಂಗ್ರೆಸ್ ಈ ವಿಷಯವನ್ನೆತ್ತಿ ಸರ್ಕಾರವನ್ನು ಪ್ರಶ್ನಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ

  • ನಾನು ಅಧ್ಯಕ್ಷನೇ ಹೊರತು ಯಾವುದೇ ಗುಂಪಿನ ನಾಯಕನಲ್ಲ: ಡಿಕೆಶಿ

    ನಾನು ಅಧ್ಯಕ್ಷನೇ ಹೊರತು ಯಾವುದೇ ಗುಂಪಿನ ನಾಯಕನಲ್ಲ: ಡಿಕೆಶಿ

    ನವದೆಹಲಿ: ಪಕ್ಷದಲ್ಲಿ ಯಾವುದೇ ಗುಂಪಿಲ್ಲ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನೇ ಹೊರತು, ಯಾವುದೇ ಗುಂಪಿನ ನಾಯಕನಲ್ಲ. ಗುಂಪುಗಾರಿಕೆಗೆ ಅವಕಾಶವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನದು ಯಾವ ಗುಂಪು ಇಲ್ಲ, ಬೇರೆಯವರ ಗುಂಪೂ ಇಲ್ಲ. ಇರುವುದು ಒಂದೇ ಗುಂಪು, ಅದು ಕಾಂಗ್ರೆಸ್. ಎಲ್ಲರೂ ಇದೇ ಹಾದಿಯಲ್ಲಿ ಸಾಗುತ್ತಾರೆ. ಸಣ್ಣ-ಪುಟ್ಟ ವಿಚಾರಗಳನ್ನು ನಾನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ನನ್ನ ಹೆಸರನ್ನು ಯಾರೂ ಹೇಳಬಾರದು. ಸದ್ಯ ಮುಂಬರುವ ಚುನಾವಣೆಗಳಲ್ಲಿ ಗೆಲ್ಲಬೇಕು. ಕೊರೊನಾ ಸಮಯದಲ್ಲಿ ಜನರನ್ನು ಉಳಿಸೋಣ. ಆರ್ಥಿಕ ಸಂಕಟಕ್ಕೆ ಪರಿಹಾರ ಕೊಡಲು ಶ್ರಮಿಸೋಣ ಎಂದರು.

    ಡಿಕೆಶಿ ಹೇಳಿದ್ದು ಏನು?
    ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕರಿಸಿದ ನಂತರ ಪಕ್ಷದ ದಿಲ್ಲಿ ನಾಯಕರನ್ನು ಅಧಿಕೃತವಾಗಿ ಭೇಟಿ ಮಾಡಿರಲಿಲ್ಲ. ಹೀಗಾಗಿ ಬಂದಿದ್ದೇನೆ. ಸೋನಿಯಾ ಗಾಂಧಿ ಅವರಿಗೆ ಆರೋಗ್ಯ ಸರಿ ಇಲ್ಲ. ಕೋರೋನಾ ಸಮಯದಲ್ಲಿ ದೂರದಿಂದಲೇ ಮಾತಕತೆ ಮಾಡಬೇಕಿದ್ದು, ಹೀಗಾಗಿ ಅವರ ಜತೆ ದೂರವಾಣಿಯಲ್ಲಿ ಮಾತನಾಡಲಾಗುವುದು. ರಾಹುಲ್ ಗಾಂಧಿ ಅವರ ಭೇಟಿಗೂ ಸಮಯ ಕೇಳಿದ್ದು, ಅವರು ಬಿಡುವಿದ್ದರೆ ಭೇಟಿ ಮಾಡುವೆ. ಇದನ್ನೂ ಓದಿ: ಜನರ ಕಷ್ಟದಲ್ಲಿ ಭಾಗಿಯಾಗಲು ಕಾಂಗ್ರೆಸ್ ಸಂಕಲ್ಪ: ಡಿ.ಕೆ ಶಿವಕುಮಾರ್

    ಪ್ರದೇಶ ಕಾಂಗ್ರೆಸ್ ಪದಾಧಿಕಾರಿಗಳ ಬದಲಾವಣೆ ಮಾಡಬೇಕಿದೆ. ಅದರ ಮಾರ್ಗಸೂಚಿ ಬಗ್ಗೆ ಪಕ್ಷದ ನಾಯಕರ ಜತೆ ಮಾತನಾಡಲು ಬಂದಿದ್ದೇನೆ. ಸದ್ಯಕ್ಕೆ ಕೆಲವು ಕಾರ್ಯಾಧ್ಯಕ್ಷರು ಮಾತ್ರ ಇದ್ದು, ಉಳಿದಂತೆ ಅಧಿಕೃತ ಸಮಿತಿ ಇಲ್ಲ. ಕೆಲವು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ಬದಲಾವಣೆ ಮಾಡಬೇಕಿದೆ. ಸಮಿತಿ ಗಾತ್ರ ಹೆಚ್ಚಿಸಬೇಕೆ, ಇಳಿಸಬೇಕೆ ಎಂದು ಎರಡು ಮೂರು ವರ್ಷಗಳಿಂದ ಚರ್ಚೆ ನಡೆದಿದೆ. ಈ ಬಗ್ಗೆ ನಮ್ಮ ಪ್ರಧಾನ ಕಾರ್ಯದರ್ಶಿಗಳ ಜತೆ ಮಾತನಾಡಲು ಬಂದಿದ್ದೇನೆ. ನಾಳೆ ಬೆಳಗ್ಗೆ ಸುರ್ಜೆವಾಲ ಅವರನ್ನು ಭೇಟಿ ಮಾಡಲಿದ್ದೇನೆ.

    ಪಕ್ಷದಲ್ಲಿ ಎಲ್ಲರೂ ಕೆಲಸ ಮಾಡುತ್ತಿದ್ದಾರೆ. ನಾನು ಒಂದು ವರ್ಷದಿಂದ ನೋಡಿದ್ದೇನೆ. ಕೆಲವು ಬದಲಾವಣೆ ಆಗಬೇಕಿದೆ. ಎಲ್ಲೆಲ್ಲಿ ಐದಾರು ವರ್ಷಗಳಿಂದ ಅಧ್ಯಕ್ಷರಿದ್ದಾರೋ ಅಲ್ಲಿ ಬದಲಾವಣೆ ಮಾಡಬೇಕು ಎಂದು ಹಿರಿಯ ನಾಯಕರ ಸಭೆಯಲ್ಲಿ ತೀರ್ಮಾನವಾಗಿದೆ. ಬ್ಲಾಕ್ ಅಥವಾ ಜಿಲ್ಲಾಧ್ಯಕ್ಷರು ಸತತ ಎರಡು ಬಾರಿ ಅಧ್ಯಕ್ಷರಾಗಿದ್ದರೆ ಬದಲಾವಣೆ ಮಾಡಬೇಕು ಎಂದು ತೀರ್ಮಾನಿಸಲಾಗಿದೆ. ಕೊರೊನಾ ಸಮಯದಲ್ಲಿ ಬದಲಾವಣೆ ಬೇಡ ಅಂತಾ ಸುಮ್ಮನಿದ್ದೆವು. ಕೊರೊನಾ ಸಮಯದಲ್ಲಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ.

    ಮಧ್ಯಂತರ ಚುನಾವಣೆ ವಿಚಾರ ಬಿಜೆಪಿಗೆ ಬಿಟ್ಟ ವಿಚಾರ. ಒಂದು ವಿಚಾರ ಏನೆಂದರೆ ಬಿಜೆಪಿಯಿಂದ ಆಡಳಿತ ನಡೆಸಲು ಸಾಧ್ಯವಿಲ್ಲ ಅನ್ನೋದು ರುಜುವಾತಾಗಿದೆ. ಕೊರೋನಾ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದನ್ನು ಬೆಳಕಿಗೆ ತಂದಿದ್ದೆವು. ಈಗ ಬಿಜೆಪಿ ಶಾಸಕರುಗಳೇ ನಮಗಿಂತ ಹೆಚ್ಚಾಗಿ ಮಾತನಾಡುತ್ತಿದ್ದಾರೆ. ಆ ಮೂಲಕ ನಮ್ಮ ಮಾತಿಗೆ ಪುಷ್ಠಿ ನೀಡುತ್ತಿದ್ದಾರೆ. ಸದ್ಯಕ್ಕೆ ನಾವು ಜಿಲ್ಲಾ ಪಂಚಾಯಿತಿ, ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಗಮನ ಹರಿಸುತ್ತಿದ್ದೇವೆ.

    ಯಾವುದೇ ನಾಯಕರಾದರೂ ಪಾಲಿಕೆ ಹಾಗೂ ಪಂಚಾಯಿತಿ ಚುನಾವಣೆ ಗೆಲ್ಲಬೇಕು. ಈಗ ಸಿಎಂ ಸ್ಥಾನ ಖಾಲಿ ಇಲ್ಲ. ಸಿಎಂ ಯಾರಾಗಬೇಕು ಎಂದು ತೀರ್ಮಾನ ಮಾಡೋರು ದೆಹಲಿ ನಾಯಕರು. ಸಿಎಂ ಸ್ಥಾನದ ಬಗ್ಗೆ ಬಿಜೆಪಿಯವರು ಮಾತನಾಡಬೇಕು. ನಮ್ಮ ಪಕ್ಷದವರಲ್ಲ. ನಾನು ಪ್ರತಿಜ್ಞೆ ಸ್ವೀಕಾರ ಮಾಡುವಾಗ ಸ್ಪಷ್ಟವಾಗಿ ಹೇಳಿದ್ದೆ, ವ್ಯಕ್ತಿ ಪೂಜೆಗೆ ಅವಕಾಶವಿಲ್ಲ, ಪಕ್ಷ ಪೂಜೆಗೆ ಮಾತ್ರ ಅವಕಾಶ ಎಂದು. ಆ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ.

    ನಾನು ಈ ಹಿಂದೆ ಪಕ್ಷದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ನನಗೆ ಶೇ.95 ರಷ್ಟು ಸಹಕಾರ ಸಿಗುತ್ತಿದೆ. ಉಳಿದ ಶೇ.5 ರಷ್ಟು ಜನ ಕೊರೊನಾ ವಿಚಾರವಾಗಿ ಗಾಬರಿಯಾಗಿದ್ದಾರೆ. ಮನೆಯಿಂದ ಈಚೆ ಬರಲು ಹೆದರುತ್ತಿದ್ದಾರೆ. ಖರ್ಗೆ ಅವರು, ಸಿದ್ದರಾಮಯ್ಯ ಅವರು, ಹರಿಪ್ರಸಾದ್, ದೇಶಪಾಂಡೆ ಅವರು, ಹೆಚ್.ಕೆ ಪಾಟೀಲ್, ಕೆ.ಎಚ್ ಮುನಿಯಪ್ಪ ಅವರು ಹೇಳಿದ ಕಡೆಯೆಲ್ಲ ಹೋಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಆ ಮೂಲಕ ಎಲ್ಲ ಹಿರಿಯ ನಾಯಕರು ನಮಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಕೊಟ್ಯಂತರ ರೂಪಾಯಿ ಸ್ವಂತ ಹಣ ಕೊಟ್ಟು ಲಸಿಕೆ ಹಾಕಿಸುತ್ತಿದ್ದಾರೆ. ಇದಕ್ಕಿಂತ ಇನ್ನೇನು ಸಹಕಾರ ಬೇಕು.

    ಮೈಸೂರು ಮೇಯರ್ ವಿಚಾರದ ಜವಾಬ್ದಾರಿಯನ್ನು ಕಾರ್ಯಾಧ್ಯಕ್ಷರಾದ ಧೃವನಾರಾಯಣ್ ಹಾಗೂ ಸ್ಫಳೀಯ ಅಧ್ಯಕ್ಷರಿಗೆ ನೀಡಿದ್ದೇನೆ. ಸ್ಥಳೀಯ ಪರಿಸ್ಥಿತಿ ಅವಲೋಕಿಸಿ ತೀರ್ಮಾನಿಸಲು ಹೇಳಿದ್ದೇನೆ.

    ಬಿಜೆಪಿಯಲ್ಲಿ ರಾಜೀನಾಮೆ ನೀಡುವ ಬ್ಲಾಕ್ ಮೇಲ್ ಗಳು ನಡೆಯುತ್ತಲೇ ಇವೆ. ನಾನ್ಯಾಕೆ ಅವರ ವಿಚಾರ ಮಾತನಾಡಲಿ. ಅವರು ಪಕ್ಷಕ್ಕೆ ಬರುವ ಅರ್ಜಿ ಬಂದಾಗ ಆ ಬಗ್ಗೆ ಮಾತನಾಡೋಣ. ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸಲು ಹೋರಾಟ ಮಾಡುತ್ತಿದ್ದೇವೆ. ರಾಜ್ಯದ ಜನ ಕೂಡ ಎಲ್ಲವನ್ನು ನೋಡುತ್ತಿದ್ದಾರೆ. ವಿರೋಧ ಪಕ್ಷವಾಗಿ ನಾವು ಈ ವಿಚಾರದಲ್ಲಿ ಸುಮ್ಮನೆ ಕೂರುವುದಿಲ್ಲ. ಈ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಉತ್ತರ ಕೊಡಬೇಕು. ತಮಿಳುನಾಡಿನಲ್ಲಿ ಮಾಜಿ ಸಚಿವರ ಅತ್ಯಾಚಾರ ಪ್ರಕರಣ ಏನಾಗಿದೆ? ಕರ್ನಾಟಕದಲ್ಲಿ ಯಾಕಾಗುತ್ತಿಲ್ಲ? ರಾಜ್ಯದ ಪೊಲೀಸ್ ವ್ಯವಸ್ಥೆ ಹಾಗೂ ಕಾನೂನಿಗೆ ಕಳಂಕ ಬರುತ್ತಿದೆ. ಆರೋಪಿಗಳಿಗೆ ರಕ್ಷಣೆ ನೀಡಲಾಗುತ್ತಿದೆ. ಪ್ರಕರಣ ತಿರುಚಲು ಯತ್ನಿಸುತ್ತಿದ್ದಾರೆ.

    ಬಿಜೆಪಿ ಶಾಸಕರೇ ಮಾಡಿರುವ ಭ್ರಷ್ಟಾಚಾರ ಆರೋಪಗಳ ಕುರಿತು ಚರ್ಚೆ ಮಾಡಲು ವರ್ಚುವಲ್ ಸಭೆ ಕರೆಯಿರಿ ಅಂತಾ ಅಗ್ರಹಿಸಿದ್ದೇವೆ. ಈ ವಿಚಾರವಾಗಿ ತನಿಖೆ ಮಾಡಲು ಜಂಟಿ ಸದನ ಸಮಿತಿ ರಚಿಸಲು ಒತ್ತಾಯಿಸಿದ್ದೇವೆ. ನೀರಾವರಿ ಖಾತೆ ಇಟ್ಟುಕೊಂಡಿರುವ ಮುಖ್ಯಮಂತ್ರಿಗಳು ಈ ಆರೋಪಗಳಿಗೆ ಉತ್ತರ ನೀಡದೇ, ಇವುಗಳನ್ನು ನಿಜ ಎಂದು ಒಪ್ಪಿಕೊಂಡಿದ್ದಾರೆ. ಕೊರೋನಾ ಪರಿಸ್ಥಿತಿಯಿಂದಾಗಿ ಸರ್ಕಾರದ ಭ್ರಷ್ಟಾಚಾರ ವಿರುದ್ಧ ದೊಡ್ಡಮಟ್ಟದ ಹೋರಾಟ ಮಾಡಲು ಆಗುತ್ತಿಲ್ಲ.

    ಸಿದ್ದರಾಮಯ್ಯ ಅವರ ಕಾಲದಲ್ಲಿ ಬಂದ ವಿಚಾರಗಳ ಬಗ್ಗೆ ಬಿಜೆಪಿಯವರ ಹೋರಾಟ ನೋಡಿದ್ದೇವೆ. ಕುಮಾರಸ್ವಾಮಿ ಅವರ ಸರ್ಕಾರ ಸಮಯದಲ್ಲಿ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಯಡಿಯೂರಪ್ಪನವರು ಸಿಬಿಐಗೆ ಕೊಟ್ಟರು. ಈಗ ಅವರದೇ ಸರ್ಕಾರ, ಅವರದೇ ಪಕ್ಷದ ಶಾಸಕರು ಆರೋಪ ಮಾಡಿದ್ದು, ಈಗಲೂ ಸಿಬಿಐಗೆ ನೀಡಲಿ. ಹಳೇ ಪ್ರಕರಣದಲ್ಲಿ ಸಿಬಿಐನವರು ನಮ್ಮ ನಾಯಕರಾದ ಬ್ರಿಜೇಶ್ ಕಾಳಪ್ಪ ಅವರಿಗೆ ನೋಟೀಸ್ ಕೊಟ್ಟು ವಿಚಾರಣೆ ನಡೆಸಿದ್ದರು. ಪಕ್ಷದ ವಕ್ತಾರರಿಗೂ ಕದ್ದಾಲಿಕೆಗೂ ಏನು ಸಂಬಂಧ?

  • ಫೋನ್ ಕದ್ದಾಲಿಕೆ – ಶೋಭಾ ಕರಂದ್ಲಾಜೆ ಗಂಭೀರ ಆರೋಪ

    ಫೋನ್ ಕದ್ದಾಲಿಕೆ – ಶೋಭಾ ಕರಂದ್ಲಾಜೆ ಗಂಭೀರ ಆರೋಪ

    ಬೆಂಗಳೂರು: ರಾಜ್ಯ ಸರ್ಕಾರ ಬಿಜೆಪಿ ನಾಯಕರಾದ ಸಿದ್ದೇಶ್ವರ್, ಪಿ.ಸಿ.ಮೋಹನ್ ಹಾಗೂ ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಶೋಭಾ ಕರಂದ್ಲಾಜೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಫೋನ್‍ಗಳಿಗೆ ಖಾಸಗಿತನ ಇಲ್ಲ. ರಾಜ್ಯ ಸರ್ಕಾರ ತಮ್ಮ ಹಾಗೂ ಸಿದ್ದೇಶ್ವರ್, ಪಿ.ಸಿ.ಮೋಹನ್ ಫೋನ್ ಕದ್ದಾಲಿಕೆ ಮಾಡುತ್ತಿದೆ. ಈ ಕುರಿತು ಲೋಕಸಭಾ ಸ್ಪೀಕರ್, ದೇಶದ ಗೃಹ ಸಚಿವರು, ಐಜಿ, ಡಿಜಿಗೆ ಪತ್ರ ಬರೆದಿದ್ದೇವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

    ಇದೇ ವೇಳೆ ಬಿಜೆಪಿಯಿಂದ ನಮ್ಮ ಶಾಸಕರಿಗೆ ನೂರು ಕೋಟಿ ಆಫರ್ ಕೊಟ್ಟಿದ್ದಾರೆ ಅನ್ನುವ ಕುಮಾರ ಸ್ವಾಮಿ ಹೇಳಿಕೆ ವಿಚಾರ ಪ್ರತಿಕ್ರಿಯೇ ನೀಡಿದ ಅವರು, ಕುದುರೆ ವ್ಯಾಪಾರದಲ್ಲಿ ಯಾರು ಎಕ್ಸ್ ಪರ್ಟ್ ಎನ್ನುವುದು ನಮಗೆ ಗೊತ್ತಿದೆ, ಅದು ರಾಜ್ಯದ ಜನರಿಗೂ ತಿಳಿದಿದೆ ಎಂದು ತಿರುಗೇಟು ನೀಡಿದರು. ಅಲ್ಲದೇ ರೆಸಾರ್ಟ್ ರಾಜಕೀಯದತ್ತ ಸಧ್ಯ ನಾವು ಚಿಂತನೆ ನಡೆಸಿಲ್ಲ ಎಂದರು.