Tag: ಕನಕಪುರ

  • ಚುಂಚಿಫಾಲ್ಸ್ ಪ್ರವೇಶಕ್ಕೆ ಪ್ರವಾಸಿಗರ ಬಳಿ ಅಕ್ರಮ ಹಣ ವಸೂಲಿ – ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ದಾಖಲು

    ಚುಂಚಿಫಾಲ್ಸ್ ಪ್ರವೇಶಕ್ಕೆ ಪ್ರವಾಸಿಗರ ಬಳಿ ಅಕ್ರಮ ಹಣ ವಸೂಲಿ – ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ದಾಖಲು

    ರಾಮನಗರ: ಚುಂಚಿಫಾಲ್ಸ್‌ಗೆ (Chunchi Falls) ಬರುವ ಪ್ರವಾಸಿಗರಿಂದ (Tourists) ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಹಣ ವಸೂಲಿ ಮಾಡಿ ಕಿರುಕುಳ ನೀಡುವ ಆರೋಪ ಕೇಳಿಬಂದಿದ್ದು, ಪ್ರವಾಸಿಗರ ಬಳಿ ಹಣ ವಸೂಲಿ ಮಾಡುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಕನಕಪುರ ಪ್ರಾದೇಶಿಕ ಅರಣ್ಯ ವ್ಯಾಪ್ತಿಯಲ್ಲಿರುವ ಚುಂಚಿಫಾಲ್ಸ್‌ನಲ್ಲಿ ಇಬ್ಬರಿಗೆ 100 ರೂ. ನಂತೆ ಖಾಸಗಿ ವ್ಯಕ್ತಿಗಳು ಹಣ ಪಡೆಯುತ್ತಿದ್ದು, ಇದನ್ನ ಪ್ರಶ್ನಿಸಿದ ಪ್ರವಾಸಿಗರ ಜೊತೆ ವಾಗ್ವಾದ ನಡೆಸಿದ್ದಾರೆ. ಹಣ ನೀಡದೇ ಯಾವುದೇ ಕಾರಣಕ್ಕೂ ಫಾಲ್ಸ್ ಬಳಿ ಬಿಡಲ್ಲ ಅಂತ ಪ್ರವಾಸಿಗರನ್ನ ಅಡ್ಡಗಟ್ಟಿದ್ದಾರೆ. ಈ ಬಗ್ಗೆ ಪ್ರವಾಸಿಗರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಹಾಸನ | ಶಾಲೆಯಲ್ಲಿ ಮಕ್ಕಳ ನಡುವೆ ಗಲಾಟೆ – ತಂದೆಯ ಕೊಲೆಯಲ್ಲಿ ಅಂತ್ಯ

    ವೀಡಿಯೋ ಗಮನಿಸಿದ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಅಕ್ರಮ ಹಣ ವಸೂಲಿ ಮಾಡ್ತಿರೋ ಖಾಸಗಿ ವ್ಯಕ್ತಿಗಳ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸಾತನೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಹೃದಯ ಶಸ್ತ್ರಚಿಕಿತ್ಸಕನಿಗೇ ಹೃದಯ ಸ್ತಂಭನ; ಆಸ್ಪತ್ರೆಯಲ್ಲಿ ರೌಂಡ್ಸ್‌ನಲ್ಲಿದ್ದಾಗ ಕುಸಿದುಬಿದ್ದು ಸಾವು

  • Ramanagara | ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ – ಇಬ್ಬರ ಮೇಲೆ ಪ್ರಕರಣ ದಾಖಲು

    Ramanagara | ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ – ಇಬ್ಬರ ಮೇಲೆ ಪ್ರಕರಣ ದಾಖಲು

    ರಾಮನಗರ: ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ (Gas Refilling) ಮಾಡ್ತಿದ್ದ ಅಡ್ಡೆ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೋಲಿಸರು ದಾಳಿ ನಡೆಸಿರೋ ಘಟನೆ ಕನಕಪುರ (Kanakapura) ಟೌನ್‌ನಲ್ಲಿ ನಡೆದಿದೆ.

    ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಬಗ್ಗೆ ಖಚಿತ ಮಾಹಿತಿ ಆಧರಿಸಿ ಆಹಾರ ಮತ್ತು ನಾಗರಿಕ ಸಬರಾಜು ಇಲಾಖೆ ನಿರೀಕ್ಷಕ ಮನೋಹರ್ ಹಾಗೂ ಸರ್ಕಲ್ ಇನ್‌ಸ್ಪೆಕ್ಟರ್ ಅನಂತ್‌ರಾಮ್ ನೇತೃತ್ವದ ತಂಡ, ನಗರದ ಪೈಪ್‌ಲೈನ್ ರಸ್ತೆ ಹಾಗೂ ಸಾಮ್ರಾಟ್ ಅಶೋಕ್ ನಗರದ ಉಮೇಶ್ ಎಂಬವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದಲೇ ರಾಜಣ್ಣ ಉಚ್ಚಾಟನೆ? – ಆಪ್ತನನ್ನು ಉಳಿಸಲು ಸಿಎಂ ಕಸರತ್ತು

    ಈ ವೇಳೆ ವಾಣಿಜ್ಯ ಬಳಕೆಯ 7 ಸಿಲಿಂಡರ್, 2 ಮನೆಬಳಕೆ ಸಿಲಿಂಡರ್ ಹಾಗೂ ರೀಫಿಲ್ಲಿಂಗ್ ಮಾಡುತ್ತಿದ್ದ ಸಾಮಾಗ್ರಿಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು, ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲು ಮಾಡಲಾಗಿದೆ. ಇದನ್ನೂ ಓದಿ: 2 ತಿಂಗಳಲ್ಲಿ ಇಡೀ ದೆಹಲಿಯನ್ನ ಬೀದಿನಾಯಿಗಳಿಂದ ಮುಕ್ತಗೊಳಿಸಬೇಕು – ಸುಪ್ರೀಂ ಆದೇಶ

  • ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಕೆಶಿ

    ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಕೆಶಿ

    – ನಮ್ಮ ಅವಧಿಯಲ್ಲಿಯೇ ಮೆಡಿಕಲ್ ಕಾಲೇಜು ಬರಲಿದೆ: ಡಿಸಿಎಂ

    ರಾಮನಗರ: ಬೆಂಗಳೂರು (Bengaluru) ಮಾದರಿಯಲ್ಲಿ ಸಂಗಮದ ಬಳಿ ಕಾವೇರಿ ನೀರನ್ನು (Cauvery Water) ಪಂಪ್ ಮಾಡಿ ಕ್ಷೇತ್ರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರನ್ನು ತಲುಪಿಸುವ ಯೋಜನೆ ರೂಪಿಸಲಾಗುತ್ತಿದೆ. ಜೊತೆಗೆ ಕ್ಷೇತ್ರದ ಕೆರೆಗಳಿಗೂ ನೀರನ್ನು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

    ಕನಕಪುರದ (Kanakapura) ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀರಾವರಿ ಸಚಿವನಾದ ನಾನು ನನ್ನ ಕ್ಷೇತ್ರದ ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದೇನೆ. ಶಿಂಷಾದಿಂದ ಸಾತನೂರು ಹೋಬಳಿಗೆ ನೀರು ತರಲಾಗುತ್ತಿದೆ. ಅರ್ಕಾವತಿಯಿಂದ ಕಸಬಾ ಹೋಬಳಿ ಕೆರೆಗಳನ್ನು ತುಂಬಿಸುವ ಕೆಲಸ ಮಾಡಲಾಗುತ್ತಿದೆ. ಹೊಸದುರ್ಗ ಭಾಗದ ಕೆರೆಗಳನ್ನು ಕಾವೇರಿ ನದಿ ನೀರಿನಿಂದ ತುಂಬಿಸಲಾಗುವುದು. ಈ ಅವಧಿಯಲ್ಲೇ ಮೆಡಿಕಲ್ ಕಾಲೇಜಿಗೆ ಮುಕ್ತಿ ನೀಡಲಾಗುವುದು. ಕ್ಷೇತ್ರದಲ್ಲಿ ಎರಡು ಮೆಡಿಕಲ್ ಕಾಲೇಜು ಇರಲಿದೆ. ಕನಕಪುರದಲ್ಲಿ ಇನ್ಫೋಸಿಸ್ ಸಹಾಯದಲ್ಲಿ ತಾಯಿ ಮಗು ಆಸ್ಪತ್ರೆ ತೆರೆಯಲಾಗಿದೆ. ಇಂತಹ ಸರ್ಕಾರಿ ಆಸ್ಪತ್ರೆ ಬೇರೆ ಎಲ್ಲಾದರೂ ಇದೆಯೇ? ನಾವು ಮಾಡುತ್ತಿರುವ ಕೆಲಸ ದೇಶಕ್ಕೆ ಮಾದರಿ. ನಾವು ಶುದ್ಧ ಕುಡಿಯುವ ನೀರಿನ ಘಟಕ, ಸೋಲಾರ್ ಪಾರ್ಕ್ ಮಾಡಿದೆವು. ನಂತರ ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ. ನಮ್ಮ ಮೆಡಿಕಲ್ ಕಾಲೇಜನ್ನು ಯಡಿಯೂರಪ್ಪ ಅವರು ಚಿಕ್ಕಬಳ್ಳಾಪುರಕ್ಕೆ ಹಾಕಿಬಿಟ್ಟರು. ಇಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾದರೆ ನೀವುಗಳು ಯಾರೂ ಬೆಂಗಳೂರಿಗೆ ಹೋಗಬೇಕಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: CBSE ಯಿಂದ ಸೇಫ್ಟಿ ಗೈಡ್‌ಲೈನ್ಸ್ ‌- ಶೌಚಾಲಯ ಹೊರತುಪಡಿಸಿ ಶಾಲೆಯ ಉಳಿದೆಲ್ಲಕಡೆ ಆಡಿಯೋವಿಶುವಲ್ ಸಿಸಿಟಿವಿ ಕಡ್ಡಾಯ

    ಆನೆಗಳ ಹಾವಳಿ ತಡೆಯಲು ಸುಮಾರು 50 ಕಿ.ಮೀ ಉದ್ದ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಮಿಕ್ಕ 50 ಕಿಮೀ ಅನ್ನು ಶೀಘ್ರವೇ ಪೂರ್ಣಗೊಳಿಸಿ ರೈತರ ಪರವಾಗಿ ಕೆಲಸ ಮಾಡುತ್ತೇವೆ. ನಮ್ಮ ಕ್ಷೇತ್ರದಲ್ಲಿ ಇಬ್ಬರು ರೈತರಂತೆ ಟ್ರಾನ್ಸ್ಫಾರ್ಮರ್ ನೀಡಿ ವಿದ್ಯುತ್ ಕ್ರಾಂತಿ ಮಾಡಿದ್ದೇವೆ. 25 ಸಾವಿರ ರೈತರಿಗೆ ಇದರಿಂದ ಉಪಯೋಗವಾಗಿದೆ. ಪಕ್ಕದ ಯಾವುದೇ ಕ್ಷೇತ್ರದಲ್ಲಿಯೂ ಈ ಸೌಲಭ್ಯವಿಲ್ಲ. ಹುಣಸನಹಳ್ಳಿ ಸೇರಿದಂತೆ ದೊಡ್ಡಾಲಹಳ್ಳಿಯಲ್ಲಿ ಸೋಲರ್ ವಿದ್ಯುತ್ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಹಗಲು ಹೊತ್ತಿನಲ್ಲಿಯೇ ರೈತರಿಗೆ ವಿದ್ಯುತ್ ನೀಡಲಾಗುವುದು. ಕ್ಷೇತ್ರದ 60-70 ಸಾವಿರ ಜನ ವಿದ್ಯಾಭ್ಯಾಸ, ಕೆಲಸದ ನಿಮಿತ್ತ ನಗರ ಪ್ರದೇಶ ಸೇರಿದ್ದಾರೆ. ನನ್ನನ್ನು ನಮ್ಮ ತಂದೆ ಬೆಂಗಳೂರು ಸೇರಿಸಿದ್ದರು. ಆದರೆ ನಮ್ಮ ಜನರು ಪಾನಿಪುರಿ, ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಊರಿಗೆ ಒಂದೆರಡು ಜನ ಉದ್ಧಾರವಾಗಿದ್ದಾರೆ. ಆದರೆ ಹೆಚ್ಚಿನ ಜನರಿಗೆ ಉತ್ತಮ ಜೀವನ ನೀಡಬೇಕು ಎಂದು ನಾನು ಪಣತೊಟ್ಟಿದ್ದೇನೆ. ಅದಕ್ಕೆ ಕೆಪಿಎಸ್ ಶಾಲೆಗಳನ್ನು ಪ್ರಾರಂಭ ಮಾಡಲಾಗುತ್ತಿದೆ. ಕೋಡಿಹಳ್ಳಿಯಲ್ಲಿ 10 ಎಕರೆ, ದೊಡ್ಡ ಆಲಹಳ್ಳಿಯಲ್ಲಿ ಶಾಲೆಗಾಗಿ ನಮ್ಮ ಸ್ವಂತ ಭೂಮಿಯನ್ನು ನೀಡಿದ್ದೇನೆ ಎಂದರು. ಇದನ್ನೂ ಓದಿ: ಸೋಪ್ ಬಾಕ್ಸ್‌ಲ್ಲಿ 14.69 ಕೋಟಿ ಮೌಲ್ಯದ ಕೊಕೇನ್ ಸ್ಮಗ್ಲಿಂಗ್ – ಇಬ್ಬರು ಮಹಿಳೆಯರು ಅರೆಸ್ಟ್

    ಸುರೇಶ್ ವಿರುದ್ಧ ದೇವೇಗೌಡರು ಅವರ ಅಳಿಯನನ್ನು ಬಿಜೆಪಿಯಿಂದ ನಿಲ್ಲಿಸಿದರು. ಅನಂತರ ಕುಮಾರಸ್ವಾಮಿ ಮಗನ ವಿರುದ್ಧ ಸುರೇಶ್ ಅವರನ್ನು ನಿಲ್ಲಿಸಬೇಕು ಎಂದು ಒತ್ತಡ ತರಲಾಯಿತು. ಅನಂತರ ಬೆಳವಣಿಗೆಯಲ್ಲಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರಿದರು. ಅವರು ಜನರ ಆಶೀರ್ವಾದಿಂದ 22 ಸಾವಿರ ಮತಗಳ ಅಂತರದಿಂದ ಗೆದ್ದರು. ಬೆಂಗಳೂರು ದಕ್ಷಿಣ ಜಿಲ್ಲೆಯಿಂದ 4 ಜನ ಶಾಸಕರು ವಿಧಾನಸಭೆಯಲ್ಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಮ್ಮ ಜನ ಮೋಸ ಮಾಡಿಲ್ಲ. ನಮಗೆ ಬೆಂಗಳೂರಿನಲ್ಲಿ ಮೋಸ ಆಗಿದೆ. ನಮ್ಮ ಗ್ರಾಮೀಣ ಭಾಗದಲ್ಲಿ ನಮಗೆ ಮೋಸ ಆಗಿಲ್ಲ. ಬೇರೆ ಕಡೆ ವಾಲಿರುವವರಿಗೆ ಬುದ್ಧಿ ಹೇಳಿ. ಚುನಾವಣೆ ಸಮಯದಲ್ಲಿ ಅನೇಕರು ಬಂದು ತಲೆ ಕೆಡಿಸುವ ಪ್ರಯತ್ನ ಮಾಡುತ್ತಾರೆ. ನೀವು ಯಾವುದಕ್ಕೂ ಮಣಿಯಬಾರದು. ನಿಮ್ಮ ಹೆಣ ಹಾಗೂ ಪಲ್ಲಕ್ಕಿ ಹೊರುವವನು ನಾನು. ನನ್ನ ಹೆಣ, ಪಲ್ಲಕ್ಕಿ ಹೊರುವವರು ನೀವು. ನಿಮ್ಮ ಹಾಗೂ ನಮ್ಮ ಸಂಬಂಧ ಭಕ್ತ ಹಾಗೂ ಭಗವಂತನ ನಡುವಿನ ಸಂಬಂಧ. ಚನ್ನಪಟ್ಟಣದಲ್ಲಿ ಒಂಬತ್ತು ಜಿಲ್ಲಾ ಪಂಚಾಯತಿಗಳಿಗೆ ತೆರಳಿ ಜನಸಂಪರ್ಕ ಸಭೆ ಮೂಲಕ ಜನರ ಬಳಿಗೆ ಹೋಗಿ ನೂತನ ಪ್ರಯೋಗ ಮಾಡಲಾಯಿತು. ಸುರೇಶ್ ಅವರನ್ನು ಸೋಲಿಸಲು ಅವರು ಹೇಗೆ ತಂತ್ರ ಮಾಡಿದರೋ ಅದೇ ರೀತಿ ನಾವು ಸಹ ತಂತ್ರ ನಡೆಸಲಾಯಿತು. ಅಲ್ಲಿನ ಜನರಿಂದ 22 ಸಾವಿರ ಅರ್ಜಿಗಳನ್ನು ಸ್ವೀಕಾರ ಮಾಡಲಾಯಿತು. ಸುಮಾರು 500 ಕೋಟಿಗೂ ಹೆಚ್ಚು ಅನುದಾನ ನೀಡಲಾಯಿತು. 5 ಸಾವಿರಕ್ಕೂ ಹೆಚ್ಚು ಮನೆಗಳನ್ನು ಮಂಜೂರು ಮಾಡಲಾಯಿತು. ನೂರಾರು ಎಕರೆ ಜಮೀನು ಗುರುತಿಸಿ ಬಡವರಿಗೆ ನಿವೇಶನ ಹಂಚಲಾಯಿತು ಎಂದು ಹೇಳಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ ಭಾರತದ ಸೇನಾ ಶಕ್ತಿಯನ್ನ ಇಡೀ ವಿಶ್ವವೇ ನೋಡಿದೆ; ಸಂಸತ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು

  • ವಾಕಿಂಗ್ ಮಾಡುವಾಗ ಹೃದಯಾಘಾತ – ನರ್ಸಿಂಗ್ ಹೋಮ್ ಮಾಲೀಕ ಸಾವು

    ವಾಕಿಂಗ್ ಮಾಡುವಾಗ ಹೃದಯಾಘಾತ – ನರ್ಸಿಂಗ್ ಹೋಮ್ ಮಾಲೀಕ ಸಾವು

    ರಾಮನಗರ: ವಾಕಿಂಗ್ (Walking) ಮಾಡುವಾಗ ಹೃದಯಾಘಾತಕ್ಕೆ (Heart Attack) ನರ್ಸಿಂಗ್ ಹೋಮ್ (Nursing Home) ಮಾಲೀಕನೋರ್ವ ಬಲಿಯಾಗಿರುವ ಘಟನೆ ಕನಕಪುರ (Kanakapura) ನಗರದಲ್ಲಿ ನಡೆದಿದೆ.

    ಮಂಜುನಾಥ್ (50) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಕನಕಪುರದ ಗಣೇಶ್ ನರ್ಸಿಂಗ್ ಹೋಮ್ ಹಾಗೂ ಗಣೇಶ್ ಮೆಡಿಕಲ್ ಮಾಲೀಕ ಮಂಜುನಾಥ್, ಇಂದು ಬೆಳಗ್ಗೆ ವಾಕಿಂಗ್‌ಗೆ ತೆರಳುವ ವೇಳೆ ಕುಸಿದುಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮಂಜುನಾಥ್ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು

    ಕನಕಪುರ ತಾಲೂಕು ಗ್ರಾಹಕರ ವೇದಿಕೆ ಅಧ್ಯಕ್ಷ ಹಾಗೂ ಔಷಧಿ ಮಾರಾಟಗಾರರ ಸಂಘದ ಅಧ್ಯಕ್ಷರೂ ಆಗಿದ್ದ ಮಂಜುನಾಥ್ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ದುಪ್ಪಟ್ಟು ಹಣ ವಸೂಲಿ – ಒಂದೇ ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋ ಸೀಜ್

  • ಕಮಲ್ ಹಾಸನ್ ವಿರುದ್ಧ ಕನಕಪುರ ಕೋರ್ಟ್‌ನಲ್ಲಿ ಖಾಸಗಿ ದೂರು – ಜು.5ಕ್ಕೆ ವಿಚಾರಣೆ

    ಕಮಲ್ ಹಾಸನ್ ವಿರುದ್ಧ ಕನಕಪುರ ಕೋರ್ಟ್‌ನಲ್ಲಿ ಖಾಸಗಿ ದೂರು – ಜು.5ಕ್ಕೆ ವಿಚಾರಣೆ

    ರಾಮನಗರ: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ (Kamal Haasan) ವಿರುದ್ಧ ಕನಕಪುರದ (Kanakapura) ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

    ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಎಂಬುವವರು ಕೋರ್ಟ್‌ಗೆ ಖಾಸಗಿ ದೂರು ದಾಖಲು ಮಾಡಿದ್ದಾರೆ. ಕನ್ನಡದ (Kannada) ಬಗ್ಗೆ ಕಮಲ್ ಹಾಸನ್ ಅವಹೇಳನ ಮಾಡಿರೋದು ವೈಯಕ್ತಿಕವಾಗಿ ನೋವು ತಂದಿದೆ. ಜೊತೆಗೆ ಮಾನಸಿಕವಾಗಿ ಖಿನ್ನತೆಯನ್ನ ತರಿಸಿದೆ. ಕನ್ನಡಕ್ಕೆ ಅಪಮಾನ ಮಾಡಿದ ಬಗ್ಗೆ ಕ್ಷಮೆ ಕೇಳದೇ ಉದ್ಧಟತನ ತೋರಿದ್ದಾರೆ ಎಂದು ದಾವೆಹೂಡಿರೋ ನಾಗಾರ್ಜುನ್, ಪ್ರಕರಣದ ಸಾಕ್ಷಿಯಾಗಿ ನಟ ಶಿವರಾಜ್ ಕುಮಾರ್ ರನ್ನ ಪರಿಗಣಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಏಷ್ಯಾ ಕಪ್‌ ಟೂರ್ನಿಗೆ ಮುಹೂರ್ತ ಫಿಕ್ಸ್‌; ಸೆ.7ಕ್ಕೆ ಭಾರತ-ಪಾಕ್‌ ಮುಖಾಮುಖಿ

    ನಾಗಾರ್ಜುನ ಗೌಡ ಪರ ವಕೀಲ ವಿನೋದ್ ಎಂಬುವವರು ಕೋರ್ಟ್ನಲ್ಲಿ ಈ ಬಗ್ಗೆ ವಾದ ಮಂಡಿಸಿದ್ದು, ಪ್ರಕರಣವನ್ನ ಜುಲೈ 5ಕ್ಕೆ ವಿಚಾರಣೆಗೆ ಮುಂದೂಡಿ ಕೋರ್ಟ್ ಆದೇಶಿಸಿದೆ. ಕನಕಪುರದ 2ನೇ ಅಪರ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅಸ್ತು – ಮಾರ್ಗಸೂಚಿ ಬಿಡುಗಡೆ

  • ಬಿಡದಿಯಲ್ಲಿ ವಿಮಾನ‌ ನಿಲ್ದಾಣ ಮಾಡ್ತಿಲ್ಲ, ಅಲ್ಲಿ ಶಿವಕುಮಾರ್ ಲೇಔಟ್ ಮಾಡ್ತಿದ್ದಾರೆ: ಎಂ.ಬಿ.ಪಾಟೀಲ್

    ಬಿಡದಿಯಲ್ಲಿ ವಿಮಾನ‌ ನಿಲ್ದಾಣ ಮಾಡ್ತಿಲ್ಲ, ಅಲ್ಲಿ ಶಿವಕುಮಾರ್ ಲೇಔಟ್ ಮಾಡ್ತಿದ್ದಾರೆ: ಎಂ.ಬಿ.ಪಾಟೀಲ್

    ಬೆಂಗಳೂರು: ನಾವು ಬಿಡದಿಯಲ್ಲಿ(Bidadi) ಎರಡನೇ ವಿಮಾನ‌ ನಿಲ್ದಾಣ ಮಾಡುತ್ತಿಲ್ಲ. ಅಲ್ಲಿ ಡಿ.ಕೆ.ಶಿವಕುಮಾರ್ (DK Shivakumar) ಲೇ ಔಟ್ ಮಾಡ್ತಿದ್ದಾರೆ. ಗ್ರೇಟರ್ ಬಿಡದಿ ಸೈಟ್ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ (MB Patil) ಹೇಳಿದ್ದಾರೆ.

    ಬಿಡದಿ ಸೂಕ್ತವಲ್ಲ ಎಂದು ಈ ಹಿಂದೆ ಟಿಕ್ನಿಕಲ್ ಟೀಂ ವರದಿ ವಿಚಾರವಾಗಿ ಮಾತನಾಡಿದ ಅವರು, ಕನಕಪುರದ (Kanakapura) ಹಾರೋಹಳ್ಳಿ ಬಳಿ ಒಂದು ಜಾಗ ನೋಡಲಾಗಿದೆ. ಕುಣಿಗಲ್ ರಸ್ತೆ ಬಳಿ ಒಂದು ಜಾಗ ನೋಡಿದ್ದೇವೆ. ವಿಧಾನಸೌಧಕ್ಕೆ 50 ಕಿ.ಮೀ ದೂರ ಇದೆ‌ ಎಂದರು. ಇದನ್ನೂ ಓದಿ: ವಿಚಾರಣೆಗೆ ದರ್ಶನ್‌ ಗೈರು – ಬೆಂಗಳೂರು ಕೋರ್ಟ್‌ ಅಸಮಾಧಾನ

    ಎರಡನೇ ವಿಮಾನ ‌ನಿಲ್ದಾಣಕ್ಕಾಗಿ ಕೇಂದ್ರ ಅಧ್ಯಯನ ತಂಡದ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಿನ್ನೆ, ಇವತ್ತು, ನಾಳೆ ಅವರು ಇರುತ್ತಾರೆ. ಮೂರು ದಿನ ಇದ್ದು ಸ್ಥಳ ಪರಿಶೀಲನೆ ಮಾಡುತ್ತಾರೆ. ವೀಕ್ಷಣೆ ಮಾಡಿ ದೆಹಲಿಗೆ ಹೋಗುತ್ತಾರೆ. ಜಾಗಗಳ ಬಗ್ಗೆ ರಿಪೋರ್ಟ್ ಕೊಡುತ್ತಾರೆ ಎಂದು ತಿಳಿಸಿದರು.

    ದೆಹಲಿಯಿಂದ ನಮಗೆ ಸ್ಥಳ ವರದಿ ಬರಬೇಕು, ಆಮೇಲೆ ನಾವು ಸಮಗ್ರ ಯೋಜನಾ ವರದಿ (DPR) ಮಾಡಬೇಕಾಗುತ್ತದೆ. ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ದೊಡ್ಡ ದೊಡ್ಡ ಕಂಪನಿಗಳು ಯಾವುದು ಎನ್ನುವುದನ್ನು ನೋಡಬೇಕಾಗುತ್ತದೆ. ಆಮೇಲೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕು, ಕ್ಯಾಬಿನೆಟ್ ಒಪ್ಪಿಗೆ ಬಳಿಕ ಅಂತಿಮ ಆಗಲಿದೆ ಎಂದು ಸ್ಪಷ್ಟಪಡಿಸಿದರು.

     

  • ಮಗು ಹಠ ಮಾಡ್ತಿದೆ ಎಂದು ಕೈಗೆ ಬರೆ, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ

    ಮಗು ಹಠ ಮಾಡ್ತಿದೆ ಎಂದು ಕೈಗೆ ಬರೆ, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ

    – ಅಂಗನವಾಡಿ ಸಹಾಯಕಿಯಿಂದ ಅವಮಾನೀಯ ಕೃತ್ಯ

    ರಾಮನಗರ: ಮಗು ಹಠ ಮಾಡುತ್ತಿದೆ ಎಂದು ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ಕನಕಪುರ (Kanakapura) ತಾಲೂಕಿನ ಮಹರಾಜಕಟ್ಟೆ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರಮೇಶ್ ಹಾಗೂ ಚೈತ್ರಾ ದಂಪತಿಯ ಎರಡೂವರೆ ವರ್ಷದ ಮಗು ಮೇಲೆ ಅಂಗನವಾಡಿ ಸಹಾಯಕಿ ಹಲ್ಲೆ ಮಾಡಿದ್ದರು. ಅಂಗನವಾಡಿಯಲ್ಲಿ ಮಗು ಹಠ ಮಾಡ್ತಿದೆ ಎಂದು ಕೈ ಮೇಲೆ ಬರೆ ಹಾಕಿ ಬಳಿಕ ಡೈಪರ್ ಒಳಗೆ ಚಂದ್ರಮ್ಮ ಖಾರದಪುಡಿ ಹಾಕಿದ್ದರು. ಇದನ್ನೂ ಓದಿ: ಅಮೆರಿಕದ ಶಿಕ್ಷಣ ಇಲಾಖೆಯೇ ಬಂದ್‌ – ಮಕ್ಕಳ ಮುಂದೆಯೇ ಆದೇಶಕ್ಕೆ ಟ್ರಂಪ್‌ ಸಹಿ

    ಅಂಗನವಾಡಿಯಿಂದ ಮಗು ಕರೆತರಲು ಹೋದಾಗ ಪೋಷಕರಿಗೆ ಹಲ್ಲೆಯ ವಿಚಾರ ತಿಳಿದಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಅಂಗನವಾಡಿ ಸಹಾಯಕಿ ಚಂದ್ರಮ್ಮ ವಿರುದ್ಧ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ (Kanakapura Town Police Station) ದೂರು ದಾಖಲಾಗಿದೆ. ಇದನ್ನೂ ಓದಿ: ಮೈಸೂರು ಪಾಕ್, ಜಿಲೇಬಿ ಪ್ರಿಯರೇ ಹುಷಾರ್ – ಕ್ಯಾನ್ಸರ್, ಡಯಾಬಿಟಿಸ್‌ಗೆ ಕಾರಣವಾಗ್ತಿದ್ಯಾ ಸಿಹಿತಿಂಡಿಗಳು?

  • ಬೆಂಗಳೂರಿನ 2ನೇ ಏರ್‌ಪೋರ್ಟ್‌ ಎಲ್ಲಿ ನಿರ್ಮಾಣ ಆಗುತ್ತೆ? – 3 ಜಾಗ ಫೈನಲ್‌, ಕೇಂದ್ರಕ್ಕೆ ರವಾನೆ

    ಬೆಂಗಳೂರಿನ 2ನೇ ಏರ್‌ಪೋರ್ಟ್‌ ಎಲ್ಲಿ ನಿರ್ಮಾಣ ಆಗುತ್ತೆ? – 3 ಜಾಗ ಫೈನಲ್‌, ಕೇಂದ್ರಕ್ಕೆ ರವಾನೆ

    ಬೆಂಗಳೂರು: ಕಳೆದ ಕೆಲ ತಿಂಗಳಿನಿಂದ ಸುದ್ದಿಯಾಗುತ್ತಿರುವ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Bengaluru Second International Airport) ನಿರ್ಮಾಣದ ಸ್ಥಳ ಗುರುತಿಸುವಿಕೆಗೆ ಕೆಲಸವನ್ನು ಸರ್ಕಾರ ಫೈನಲ್‌ ಮಾಡಿದೆ. ಒಟ್ಟು ಮೂರು ಸ್ಥಳಗಳನ್ನು ಗುರುತು ಮಾಡಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾಪವನ್ನು ಕಳುಹಿಸಿದೆ.

    ಕನಕಪುರ (Kanakapura) ರಸ್ತೆಯ ಎರಡು ಸ್ಥಳ ಮತ್ತು ನೆಲಮಂಗಲ-ಕುಣಿಗಲ್ (Nelamangala-Kunigal) ರಸ್ತೆಯಲ್ಲಿ ಒಂದು ಜಾಗವನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಕನಕಪುರ ರಸ್ತೆಯ ಒಂದು ಜಾಗ 4,800 ಎಕ್ರೆ ಇದ್ದರೆ ಇನ್ನೊಂದು ಜಾಗ 5,000 ಎಕ್ರೆ ಇದೆ. ನೆಲಮಂಗಲ-ಕುಣಿಗಲ್‌ ರಸ್ತೆಯಲ್ಲಿರುವ ಜಾಗ 5,200 ಎಕ್ರೆ ಇದೆ.

    ಈ ಮೂರು ಸ್ಥಳಗಳು ನಗರ ಕೇಂದ್ರದಿಂದ 50 ಕಿ.ಮೀ ವ್ಯಾಪ್ತಿಯಲ್ಲಿ ಬರಲಿದೆ. ಪ್ರಸ್ತಾವಿತ ಜಾಗಕ್ಕೆ ರಾಷ್ಟ್ರೀಯ ಹೆದ್ದಾರಿಯ ಸಂಪರ್ಕವೂ ಸಿಗಲಿದೆ. ಯಾವ ಸ್ಥಳದಲ್ಲಿ ನಿರ್ಮಿಸಿದರೂ ಆರ್ಥಿಕವಾಗಿ ಲಾಭ ಎಂದು ತಿಳಿಸಿದೆ. ಈ ಸ್ಥಳಗಳಲ್ಲಿ ಒಂದು ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬಂದರೆ, ಇನ್ನೊಂದು ರಾಮನಗರ ಜಿಲ್ಲೆಯಲ್ಲಿದೆ. ಇವುಗಳಲ್ಲಿ ಹಾರೋಹಳ್ಳಿ ಬಳಿಯ ಒಂದು ಸ್ಥಳವು ಮೆಟ್ರೋದ ಹಸಿರು ಮಾರ್ಗದ ಕೊನೆಯ ನಿಲ್ದಾಣದಿಂದ 10 ಕಿ.ಮೀ ದೂರದಲ್ಲಿದೆ.  ಇದನ್ನೂ ಓದಿ: HAL ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು: ತೇಜಸ್ವಿ ಸೂರ್ಯ

    ಮುಂದೇನು?
    ಕೇಂದ್ರದ ವಿಮಾನಯಾನ ಪ್ರಾಧಿಕಾರ ಸ್ಥಳ ವರದಿಗೆ ತಂಡವನ್ನು ಕಳುಹಿಸಿ ಕೊಡಲಿದೆ. ಈ ವರದಿಯ ಶಿಫಾರಸ್ಸಿನ ನಂತರ ಸ್ಥಳವನ್ನು ಫೈನಲ್‌ ಮಾಡಲಾಗುತ್ತದೆ.

    2ನೇ ವಿಮಾನ ನಿಲ್ದಾಣ ಯಾಕೆ?
    ಬೆಂಗಳೂರಿನ ಪ್ರಯಾಣಿಕರನ್ನು ಸೆಳೆಯಲು ಮತ್ತು ತಮಿಳುನಾಡಿಗೂ ಅನುಕೂಲವಾಗುವಂತೆ ಕರ್ನಾಟಕ ಗಡಿ ಭಾಗವಾದ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಣಕ್ಕೆ ತಮಿಳುನಾಡು ಸರ್ಕಾರ ಸಿದ್ಧತೆ ನಡೆಸುತ್ತಿದೆ.

    ಸದ್ಯ ಈಗ ದೇವನಹಳ್ಳಿಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣ ಬೆಂಗಳೂರು ಉತ್ತರ ಭಾಗದಲ್ಲಿದೆ. ಈ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ದಕ್ಷಿಣ ಭಾಗ, ಎಲೆಕ್ಟ್ರಾನಿಕ್‌ ಸಿಟಿಯಿಂದ ಪ್ರಯಾಣಿಕರು ಹೋಗುತ್ತಿದ್ದಾರೆ. ಒಂದು ವೇಳೆ ಹೊಸೂರಿನಲ್ಲಿ ನಿಲ್ದಾಣವಾದರೆ ದಕ್ಷಿಣ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುವ ಸಾಧ್ಯತೆಯಿದೆ. ಈ ಕಾರಣಕ್ಕೆ ದಕ್ಷಿಣ ಭಾಗದಲ್ಲಿ ವಿಮಾನ ನಿಲ್ದಾಣಕ್ಕೆ ಜಾಗವನ್ನು ಗುರುತಿಸಲಾಗಿದೆ.

    ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

    ರಾಜ್ಯ ಸರ್ಕಾರ ನಿಗದಿಪಡಿಸಿರುವ ಕನಕಪುರದ ಎರಡು ಜಾಗ ನೈಸ್ ರಸ್ತೆಯಿಂದ ಕೇವಲ 10 ಕಿಲೋಮೀಟರ್ ದೂರದಲ್ಲಿದ್ದು, ಸಮೀಪದ ಮೆಟ್ರೋ ನಿಲ್ದಾಣ ಸಹ 5 ಕಿಲೋಮೀಟರ್ ವ್ಯಾಪ್ತಿಯಲ್ಲಿದೆ. ಈ ಮೂಲಕ ತುಮಕೂರು ಭಾಗದಿಂದ ಬರುವ ಪ್ರಯಾಣಿಕರು ಹಾಗೂ ಬೆಂಗಳೂರು ಸೇರಿದಂತೆ ಮೈಸೂರು ಕಡೆಯಿಂದ ಬರುವ ಪ್ರಯಾಣಿಕರಿಗೂ ಅನುಕೂಲವಾಗುವಂತೆ ಸ್ಥಳ ನಿಗದಿಪಡಿಸಲಾಗಿದೆ.

    2033ರವರೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 150 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಹೊಸ ವಿಮಾನ ನಿಲ್ದಾಣ ಇರಬಾರದು ಎಂಬ ಒಪ್ಪಂದ ಇದೆ. ಈ ಒಪ್ಪಂದ ಅಂತ್ಯವಾಗಲು ಇನ್ನು 8 ವರ್ಷ ಇರುವಾಗಲೇ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗ ಕರ್ನಾಟಕ ಮತ್ತು ತಮಿಳುನಾಡು ಮುಂದಾಗುತ್ತಿವೆ. ಇದನ್ನೂ ಓದಿ: 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರ್ನಾಟಕ ಮುಂದಾಗುತ್ತಿದ್ದಂತೆ ಹೊಸೂರಿನಲ್ಲಿ ಏರ್ಪೋರ್ಟ್ ಘೋಷಿಸಿದ ಸ್ಟಾಲಿನ್

    ಕಳೆದ ಅಕ್ಟೋಬರ್‌ನಲ್ಲಿ ವಿಮಾನ ನಿಲ್ದಾಣ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್‌, ಎಂಬಿ ಪಾಟೀಲ್‌, ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಸಭೆಯ ನಂತರ ಪ್ರತಿಕ್ರಿಯಿಸಿದ್ದ ಎಂಬಿ ಪಾಟೀಲ್‌, ಎರಡನೇ ವಿಮಾನ ನಿಲ್ದಾಣ (Second Airport) ನಿರ್ಮಾಣಕ್ಕೆ 5 ಸ್ಥಳ ಗುರುತಿಸಲಾಗಿದೆ. ಆದರೆ ಯಾವುದೇ ಸ್ಥಳ ಅಂತಿಮವಾಗಿಲ್ಲ. ದಾಬಾಸ್ ಪೇಟೆ,‌ ನೆಲಮಂಗಲ, ಕುಣಿಗಲ್ ರಸ್ತೆಯಲ್ಲಿಎರಡು ಜಾಗ, ಹಾರೋಹಳ್ಳಿ ಹಾಗೂ ಬಿಡದಿ ಜಾಗ ಗುರುತಿಸಿದ್ದೇವೆ ಎಂದು ಮಾಹಿತಿ ನೀಡಿದ್ದರು.

    ಈ ಹಿಂದೆ ರಾಮನಗರ, ಕನಕಪುರ ಭಾಗದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಡಿಕೆ ಶಿವಕುಮಾರ್‌, ಈ ಭಾಗದ ಜನರಿಗೆ ಮನವಿ ಮಾಡುತ್ತಿದ್ದೇನೆ. ಯಾವುದೇ ಕಾರಣಕ್ಕೂ ನಿಮ್ಮ ಆಸ್ತಿಯನ್ನು ಮಾರಬೇಡಿ. ಮುಂದಿನ ದಿನಗಳಲ್ಲಿ ಇಲ್ಲಿನ ಭೂಮಿಗೆ ಚಿನ್ನದ ಬೆಲೆ ಬರಲಿದೆ. ಆದ್ದರಿಂದ ಆಸ್ತಿಯನ್ನ ಮಾರದೇ ಉಳಿಸಿಕೊಳ್ಳಿ. ಒಂದಲ್ಲ ಒಂದು ದಿನ ಇಲ್ಲಿನ ಗ್ರಾಮಗಳು ಬೆಂಗಳೂರು ಆಗೇ ಆಗುತ್ತವೆ. ಪ್ರತಿ ಅಡಿ ಲೆಕ್ಕದಲ್ಲಿ ಬೆಲೆ ಕಟ್ಟಲಾಗುತ್ತದೆ. ಆದ ಕಾರಣ ನನ್ನ ಮಾತನ್ನು ನೆನಪಿನಲ್ಲಿ ಇಟ್ಟುಕೊಳ್ಳಿ ಎಂದಿದ್ದರು.

    ರಾಮನಗರವನ್ನು ಬೆಂಗಳೂರು ದಕ್ಷಿಣಕ್ಕೆ ಸೇರಿಸಬೇಕು ಎಂದು ಈ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಒತ್ತಾಯ ಮಾಡಿದ್ದರು. ಈ ಒತ್ತಾಯದ ಬೆನ್ನಲ್ಲೇ ವಿಮಾನ ನಿಲ್ದಾಣ ತರಲು ಪ್ಲ್ಯಾನ್‌ ಮಾಡಲಾಗಿದ್ಯಾ ಎಂಬ ಪ್ರಶ್ನೆ ಎದ್ದಿದೆ.

     

  • ರಾಮನಗರ | ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ – 30 ಎಕರೆ ಸುಟ್ಟು ಭಸ್ಮ

    ರಾಮನಗರ | ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ – 30 ಎಕರೆ ಸುಟ್ಟು ಭಸ್ಮ

    – ಕೃತ್ಯವೆಸಗಿದ ಕುರಿಗಾಹಿ ಅರೆಸ್ಟ್

    ರಾಮನಗರ: ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ (Fire) ಹಾಕಿದ ಪರಿಣಾಮ ಸುಮಾರು 30 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಕನಕಪುರ (Kanakapura) ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ.

    ಅರಣ್ಯಕ್ಕೆ ಬೆಂಕಿಹಾಕಿದ ಹೂಳ್ಯ ಗ್ರಾಮದ ರಾಜಪ್ಪ (42) ಎಂಬಾತನನ್ನ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ಸಂಗಮ ವನ್ಯಜೀವಿ ವಲಯದಲ್ಲಿ ಅರಣ್ಯ ಪ್ರದೇಶದಲ್ಲಿ ಕುರಿಗಾಹಿ ರಾಜಪ್ಪ ಮೇಕೆಗಳ ಮೇಯಿಸಲು ಹೋಗಿದ್ದ. ಅರಣ್ಯದಲ್ಲಿರುವ ಒಣ ಹುಲ್ಲು ಸುಟ್ಟರೆ ಹೊಸ ಹುಲ್ಲು ಚಿಗುರುತ್ತೆ. ಇದರಿಂದ ಕುರಿ, ಮೇಕೆಗಳಿಗೆ ಮೇವು ಸಿಗುತ್ತದೆ ಎಂಬ ಕಾರಣಕ್ಕೆ ಅರಣ್ಯಕ್ಕೆ ಬೆಂಕಿಹಚ್ಚಿದ್ದ. ಇದನ್ನೂ ಓದಿ: ಮೊನಾಲಿಸಾ ಸಿನಿಮಾ ವಿವಾದ – ಐವರ ವಿರುದ್ಧ ಬಿತ್ತು ಕೇಸ್‌

    ಅರಣ್ಯಕ್ಕೆ ಬೆಂಕಿಬಿದ್ದ ಹಿನ್ನೆಲೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಬಳಿಕ ಬೆಂಕಿನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಬೆಂಕಿನಂದಿಸುವಷ್ಟರಲ್ಲಿ ಸುಮಾರು 30 ಎಕರೆಗಳಷ್ಟು ಅರಣ್ಯ ಸುಟ್ಟು ಭಸ್ಮವಾಗಿದೆ. ಈ ವೇಳೆ ಅಕ್ರಮವಾಗಿ ವನ್ಯಜೀವಿ ವಲಯಕ್ಕೆ ಎಂಟ್ರಿಯಾಗಿದ್ದ ರಾಜಪ್ಪನನ್ನ ಹಿಡಿದು ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಬೆಂಕಿಹಾಕಿದ್ದನ್ನ ರಾಜಪ್ಪ ಒಪ್ಪಿಕೊಂಡಿದ್ದಾನೆ. ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: 300 ಮಕ್ಕಳ ಮೇಲೆ ವೈದ್ಯನಿಂದ ರೇಪ್ – ನಾನು `ಶಿಶುಕಾಮಿ’ ಎಂದು ತಪ್ಪೊಪ್ಪಿಕೊಂಡ ಆರೋಪಿ

    ಅರಣ್ಯಕ್ಕೆ ಬೆಂಕಿಹಾಕಿದ ಹಿನ್ನೆಲೆ ಕೆಲ ವನ್ಯಜೀವಿಗಳೂ ಸಹ ಸಾವನ್ನಪ್ಪಿದ್ದು, ಬೃಹತ್ ಗಾತ್ರದ ಹೆಬ್ಬಾವು ಸಹ ಬೆಂಕಿಯಲ್ಲಿ ಸುಟ್ಟು ಮೃತಪಟ್ಟಿದೆ. ಇದನ್ನೂ ಓದಿ: ಕ್ರಿಪ್ಟೋ ಕರೆನ್ಸಿ ಹಗರಣ – ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ

  • ಸ್ವಗ್ರಾಮದ ರೇಷ್ಮೆ ಬೆಳೆಗಾರರ ಸಹಕಾರ ಸಂಘ ಚುನಾವಣೆಯಲ್ಲಿ ಡಿಕೆಶಿ ಮತದಾನ

    ಸ್ವಗ್ರಾಮದ ರೇಷ್ಮೆ ಬೆಳೆಗಾರರ ಸಹಕಾರ ಸಂಘ ಚುನಾವಣೆಯಲ್ಲಿ ಡಿಕೆಶಿ ಮತದಾನ

    ರಾಮನಗರ: ಸ್ವಗ್ರಾಮ ಕನಕಪುರ (Kanakapura) ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದ ರೇಷ್ಮೆ  (Sericulture) ಬೆಳೆಗಾರರ ರೈತ ಸೇವಾ ಸಹಕಾರ ಬ್ಯಾಂಕ್ ಚುನಾವಣೆಗೆ ಡಿಸಿಎಂ ಡಿಕೆಶಿ (DK Shivakumar) ಮತ ಚಲಾವಣೆ ಮಾಡಿದ್ದಾರೆ.

    ರೇಷ್ಮೆ ಬೆಳೆಗಾರರ ಸಾಲಗಾರರಲ್ಲದ ಕ್ಷೇತ್ರಕ್ಕೆ ಸರತಿ ಸಾಲಿನಲ್ಲಿ ನಿಂತು ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್ ಮತ ಚಲಾಯಿಸಿದ್ದಾರೆ. ಇದನ್ನೂ ಓದಿ:  WPL ನಿಂದ ಆರ್‌ಸಿಬಿ ಟಗರು ಪುಟ್ಟಿ ಶ್ರೇಯಾಂಕ ಹೊರಕ್ಕೆ?

    ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮೂರಲ್ಲಿ 40 ವರ್ಷಗಳ ಬಳಿಕ ರೇಷ್ಮೆ ಸಹಕಾರ ಸಂಘದ ಚುನಾವಣೆ ನಡೆಯುತ್ತಿದೆ. ಕಾರ್ಯಕರ್ತರು ನಮಗೋಸ್ಕರ ದುಡಿದಿದ್ದಾರೆ. ಇವರೆಲ್ಲ ನಮಗೆ ಚುನಾವಣೆ ಮಾಡಿದ್ದರು. ಈಗ ನಾವು ಅವರಿಗೆ ಚುನಾವಣೆ ಮಾಡೋಕೆ ಬಂದಿದ್ದೇವೆ. ನಮ್ಮೂರಿಗೆ ಬಂದು ಮತ ಚಲಾವಣೆ ಮಾಡಿದ್ದೇನೆ. ಸಹಕಾರ ಸಂಘಗಳು ಬೆಳೆಯಬೇಕು, ಎಲ್ಲರಿಗೂ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೂವರು ಆಪ್‌ ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆ – ದೆಹಲಿಯಲ್ಲಿ ಟ್ರಿಪಲ್‌ ಎಂಜಿನ್‌ ಸರ್ಕಾರ ಬರುತ್ತಾ?