Tag: ಕನಕಪುರ

  • ಬೆಂಗ್ಳೂರಿನಿಂದ ಕನಕಪುರಕ್ಕೆ ಕೆಎಸ್ಆರ್‌ಟಿಸಿ ಬಸ್ ಸಂಚಾರ ಸ್ಥಗಿತ

    ಬೆಂಗ್ಳೂರಿನಿಂದ ಕನಕಪುರಕ್ಕೆ ಕೆಎಸ್ಆರ್‌ಟಿಸಿ ಬಸ್ ಸಂಚಾರ ಸ್ಥಗಿತ

    ಬೆಂಗಳೂರು: ಡಿ.ಕೆ ಶಿವಕುಮಾರ್ ಬಂಧನ ವಿರೋಧಿಸಿ ಪ್ರತಿಭಟನೆಗಳು ಗಲಾಟೆಗಳು ಜೋರಾಗುತ್ತಿರುವ ಹಿನ್ನೆಲೆ ಬೆಂಗಳೂರಿನಿಂದ ಕನಕಪುರ ಮಾರ್ಗವಾಗಿ ಹೋಗುವ ಕೆಎಸ್ಆರ್‌ಟಿಸಿ ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

    ಬೆಳಗಿನ ಜಾವ ಸುಮಾರು 6 ಗಂಟೆಯಿಂದಲೂ ನಿಲ್ದಾಣಗಳಲ್ಲಿ ಪ್ರಯಾಣಿಕರು ಬಸ್ ಗಳಿಗೆ ಕಾಯುತ್ತಿದ್ದಾರೆ. ಬೆಂಗಳೂರಿನಿಂದ ಹಾರೋಹಳ್ಳಿ, ಕನಕಪುರ, ರಾಮನಗರದ ಇತರೆ ಭಾಗಗಳಿಗೆ ಹೋಗಬೇಕಾಗಿರುವ ಪ್ರವಾಣಿಕರು ಬಸ್ ಸೇವೆಯಿಲ್ಲದೆ ಪರದಾಡುತ್ತಿದ್ದಾರೆ. ಈಗಾಗಲೇ ಡಿಪೋ ಅಧಿಕಾರಿಗಳ ಸೂಚನೆ ಮೇರೆಗೆ ಯಾವುದೇ ಬಸ್ ಬೆಂಗಳೂರಿಂದ ಕನಕಪುರಕ್ಕೆ ತೆರಳುವ ಸಾಧ್ಯತೆ ಇಲ್ಲ. ಆದ್ದರಿಂದ ಆಕ್ರೋಶ ವ್ಯಕ್ತಪಡಿಸುತ್ತಿರುವ ಪ್ರಯಾಣಿಕರಿಗೆ ಕಲಾಸಿಪಾಳ್ಯದಲ್ಲಿ ಕೆಎಸ್ಆರ್‌ಟಿಸಿ ಅಧಿಕಾರಿಗಳು ಮನವೊಲಿಕೆ ಮಾಡುತ್ತಿದ್ದಾರೆ.

    ಕನಕಪುರದಲ್ಲಿ ಸರ್ಕಾರಿ ಹಾಗೂ ಖಾಸಗಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದೆ. ಕೆಎಸ್ಆರ್‌ಟಿಸಿ ಬಸ್ ಡಿಪೋ ಬಳಿ ಸಿಬ್ಬಂದಿ ಹಾಜರ್ ಆಗಿ ಬಸ್ಸುಗಳನ್ನು ಹೊರಗೆ ತೆಗೆಯದಿರಲು ನಿರ್ಧರಿಸಿದ್ದಾರೆ. ಮಂಗಳವಾರ ರಾತ್ರಿ ಡಿಕೆಶಿ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕನ ಬಂಧನ ಖಂಡಿಸಿ, 1 ಬಸ್ಸಿಗೆ ಬೆಂಕಿ ಹಚ್ಚಿ, ಸುಮಾರು 4 ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು.

    ಸಮಯ ಕಳೆಯುತ್ತಿದ್ದಂತೆ ಪ್ರತಿಭಟನೆಯ ಕಾವು ಜೋರಾಗುತ್ತಿದೆ. ಡಿಕೆಶಿ ಬೆಂಬಲಿಗರು ರಸ್ತೆ ಬಂದ್ ಮಾಡಿ, ನಡುರಸ್ತೆಗಳಲ್ಲಿ ಡಯರ್ ಸುಟ್ಟು, ಬಿಜೆಪಿ ನಾಯಕರ ಅಣಕು ಶವಗಳನ್ನು ಮೆರವಣಿಗೆ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

  • ಡಿಕೆಶಿ ಪರ ಪ್ರತಿಭಟನೆ ನಡೆಸಿದ 15ಕ್ಕೂ ಹೆಚ್ಚು ಮಂದಿ ಮೇಲೆ ಎಫ್‍ಐಆರ್

    ಡಿಕೆಶಿ ಪರ ಪ್ರತಿಭಟನೆ ನಡೆಸಿದ 15ಕ್ಕೂ ಹೆಚ್ಚು ಮಂದಿ ಮೇಲೆ ಎಫ್‍ಐಆರ್

    ರಾಮನಗರ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಸಿದವರ ಪೈಕಿ 15 ಮಂದಿ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

    ಕನಕಪುರದಲ್ಲಿ ಪ್ರತಿಭಟನೆ ನಡೆಸಿದ ಡಿಕೆಶಿ ಬೆಂಬಲಿಗರ ಮೇಲೆ ಎಫ್‍ಐಆರ್ ದಾಖಲಾಗಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟು 15 ಕ್ಕೂ ಹೆಚ್ಚು ಜನರ ಮೇಲೆ ಎಫ್‍ಐಆರ್ ಹಾಕಲಾಗಿದೆ.

    ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಹಿನ್ನೆಲೆ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಕನಕಪುರದಲ್ಲಿ ಎಸ್‍ಪಿ ಅನೂಪ್ ಶೆಟ್ಟಿ ಮೊಕ್ಕಾಂ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ನಗರದಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ಸ್ವತಃ ಎಸ್‍ಪಿ ಅವರೇ ನಗರದ ಬೀದಿ ಬೀದಿಗಳಲ್ಲಿ ರೌಂಡ್ಸ್ ಹಾಕುತ್ತಿದ್ದಾರೆ.

  • ಬೂದಿ ಮುಚ್ಚಿದ ಕೆಂಡವಾದ ಕನಕಪುರ- ರಸ್ತೆಗಿಳಿಯದ ಬಸ್ಸುಗಳು

    ಬೂದಿ ಮುಚ್ಚಿದ ಕೆಂಡವಾದ ಕನಕಪುರ- ರಸ್ತೆಗಿಳಿಯದ ಬಸ್ಸುಗಳು

    ರಾಮನಗರ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನದ ಹಿನ್ನೆಲೆ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ. ಈ ಹಿನ್ನೆಲೆ ಯಾವುದೇ ಸರ್ಕಾರಿ ಹಾಗೂ ಖಾಸಗಿ ಬಸ್ಸುಗಳಾಗಲಿ ರಸ್ತೆಗಿಳಿಯದ ಕಾರಣ ಸಾರ್ವಜನಿಕರು ಪರದಾಡುತ್ತಿದ್ದಾರೆ.

    ಕನಕಪುರದಲ್ಲಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದೆ. ಕೆಎಸ್‍ಆರ್ ಟಿಸಿ ಬಸ್ ಡಿಪೋ ಬಳಿ ಸಿಬ್ಬಂದಿ ಹಾಜರ್ ಆಗಿ ಬಸ್ಸುಗಳನ್ನು ಹೊರಗೆ ತೆಗೆಯದಿರಲು ನಿರ್ಧರಿಸಿದ್ದಾರೆ. ಮಂಗಳವಾರ ರಾತ್ರಿ ಡಿಕೆಶಿ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕನ ಬಂಧನ ಖಂಡಿಸಿ, 1 ಬಸ್ಸಿಗೆ ಬೆಂಕಿ ಹಚ್ಚಿ, ಸುಮಾರು 4 ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು.

    ಇತ್ತ ಬಸ್ಸಿಗಾಗಿ ಪ್ರಯಾಣಿಕರು ಕಾಯುತ್ತಿದ್ದಾರೆ. ಆದರೆ ಬಸ್ ನಿಲ್ದಾಣದೊಳಗೆ ಒಂದೇ ಒಂದು ಬಸ್ ಕೂಡ ಬರುತ್ತಿಲ್ಲ. ಹಾಗೆಯೇ ಕನಕಪುರ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಆರಂಭಗೊಂಡಿದೆ. ತರಕಾರಿಗಳನ್ನು ವ್ಯಾಪಾರಸ್ಥರು ತಂದು ಮಾರಾಟಕ್ಕೆ ಕೂತಿದ್ದಾರೆ, ಆದರೆ ಖರೀದಿಗೆ ಯಾರೂ ಬರುತ್ತಿಲ್ಲ. ಒಂದೆಡೆ ಬೆಳಗ್ಗಿನ ವೇಳೆ ಸಹಜ ಸ್ಥಿತಿಯಲ್ಲಿರುವ ಕನಕಪುರ ಕಾಣುತ್ತಿದ್ದರೂ ಬೂದಿ ಮುಚ್ಚಿದ ಕೆಂಡದಂತೆ ಅಲ್ಲಿನ ಪರಿಸ್ಥಿತಿ ಇದೆ.

    ಕನಕಪುರದಲ್ಲಿ ನಿಧಾನವಾಗಿ ಒಂದೊಂದೆ ಅಂಗಡಿ ಮುಂಗಟ್ಟುಗಳು ತೆರೆದುಕೊಳ್ಳುತ್ತಿದೆ. ಬಸ್ ನಿಲ್ದಾಣದ ಬಳಿಯ ಬೇಕರಿಗಳನ್ನು ಕೂಡ ತೆರೆಯಲಾಗಿದೆ. ಅಲ್ಲದೆ ಮತ್ತೆ ಯಾವುದೇ ಅಹಿತಕರ ಘಟನೆಗಳು, ಗಲಾಟೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸರು ಸಿಟಿ ರೌಂಡ್ಸ್ ಹಾಕುತ್ತಿದ್ದಾರೆ.

     

    ದೆಹಲಿ ನಿವಾಸದಲ್ಲಿ ಹಣ ಸಿಕ್ಕ ಪ್ರಕರಣ ಸಂಬಂಧ ಇಡಿ ಪ್ರಶ್ನೆಗೆ ಸರಿಯಾಗಿ ಉತ್ತರಿಸಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ 8.30ಕ್ಕೆ ಮಾಜಿ ಸಚಿವ, ಕರ್ನಾಟಕ ಕಾಂಗ್ರೆಸ್ ಆಪದ್ಬಾಂಧವ ಡಿಕೆ ಶಿವಕುಮಾರ್ ರನ್ನು ಬಂಧಿಸಿದೆ. ಡಿಕೆ ಶಿವಕುಮಾರ್ ಬಂಧನವಾಗುತ್ತಿದ್ದಂತೆ, ಮಾಜಿ ಸಚಿವರ ಬೆಂಬಲಿಗರು ದೆಹಲಿ ಸೇರಿದಂತೆ ರಾಜ್ಯದಲ್ಲಿ ಕೂಡ ಮಂಗಳವಾರ ರಾತ್ರಿಯೇ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಅಭಿಮಾನಿಗಳು ಬೀದಿಗಿಳಿದು ಬೆಂಕಿಹಚ್ಚಿ ಆಕ್ರೋಶ ಹೊರಹಾಕಿದ್ದು, ಈ ವೇಳೆ ಕೆಲವೆಡೆ ಹಿಂಸಾಚಾರ ಕೂಡ ನಡೆದಿತ್ತು.

    ರಾಮನಗರದಲ್ಲಿ ಡಿಕೆಶಿ ಅಭಿಮಾನಿಗಳಿ ಕೆಎಸ್‍ಆರ್ ಟಿಸಿಯ 1 ಬಸ್‍ಗೆ ಬೆಂಕಿ 4 ಬಸ್‍ಗಳ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದರು. ಐಜೂರು ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಅಭಿಮಾನಿಗಳು ರೋಷಾವೇಶ ಪ್ರದರ್ಶಿಸಿದರು. ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಕೇಂದ್ರ, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಹೆದ್ದಾರಿ ತಡೆದ ಪ್ರತಿಭಟನಕಾರರು ಪೊಲೀಸರ ನಡುವೆ ತಳ್ಳಾಟ, ನೂಕಾಟ ನಡೀತು. ಈ ವೇಳೆ ಡಿಕೆ ಅಭಿಮಾನಿಯೋರ್ವ ವಾಹನದ ಕೆಳಗೆ ಮಲಗಲು ಯತ್ನಿಸಿದ ಘಟನೆ ಸಂಭವಿಸಿತ್ತು.

    ಕಲ್ಲಹಳ್ಳಿ ಗೇಟ್, ಕನಕಪುರ: ಡಿಕೆ ಅಭಿಮಾನಿಗಳು ಕನಕಪುರ ಕೋಡಿಹಳ್ಳಿ ಸಂಪರ್ಕ ರಸ್ತೆ ಬಂದ್ ಮಾಡಿ ರಸ್ತೆಗಳಲ್ಲಿ ಮರದ ದಿಮ್ಮಿಗಳನ್ನಿಟ್ಟು ಬೆಂಕಿ ಹಚ್ಚಿದರು. ಇದಲ್ಲದೇ ರಸ್ತೆಗೆ ಕಲ್ಲುಗಳನ್ನಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ಹತೋಟಿಗೆ ತರಲು ಪ್ರಯತ್ನಿಸಿದರು. ಇದೇ ವೇಳೆ ಎಸ್.ಪಿ ಸ್ವತಃ ಪರಿಸ್ಥಿತಿ ನಿಯಂತ್ರಿಸಿದರು. ಕನಕಪುರ ಗಲ್ಲಿ ಗಲ್ಲಿಗಳಲ್ಲೂ ಪೊಲೀಸರ ನಿಯೋಜನೆ ಮಾಡಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾತನೂರು, ಚನ್ನಬಸಪ್ಪ ಸರ್ಕಲ್‍ನಲ್ಲೂ ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಹೆದ್ದಾರಿ ತಡೆದು ಪ್ರತಿಭಟಿಸಿದ್ದರು.

  • ಡಿಕೆಶಿ ಬಂಧನ – ಬುಧವಾರ ರಾಮನಗರ, ಕನಕಪುರ ಬಂದ್

    ಡಿಕೆಶಿ ಬಂಧನ – ಬುಧವಾರ ರಾಮನಗರ, ಕನಕಪುರ ಬಂದ್

    – ಬೆಂಗಳೂರು, ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ
    – ಕನಕಪುರದಲ್ಲಿ 2 ಬಸ್ಸುಗಳಿಗೆ ಕಲ್ಲು

    ರಾಮನಗರ: ಕಾಂಗ್ರೆಸ್ ಟ್ರಬಲ್ ಶೂಟರ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ್ದನ್ನು ಖಂಡಿಸಿ, ರಾಮನಗರ, ಕನಕಪುರ ಹಾಗೂ ಬಳ್ಳಾರಿಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಕ್ರೋಶಗೊಂಡು ಪ್ರತಿಭಟನೆ ಆರಂಭಿಸಿದ್ದಾರೆ.

    ಇಂದು ರಾತ್ರಿಯೇ ಬೆಂಗಳೂರು, ಮೈಸೂರು ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಬುಧವಾರ ರಾಮನಗರ, ಕನಕಪುರ ಬಂದ್ ಬಾಡಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

    ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೂರಾರು ಕಾರ್ಯಕರ್ತರು ಅಭಿಮಾನಿಗಳು ಪ್ರತಿಭಟಿಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

    ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಬುಧವಾರ ರಾಮನಗರ, ಕನಕಪುರ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ನಡೆಸಲು ಅಭಿಮಾನಿಗಳು ನಿರ್ಧರಿಸಿದ್ದು, ರಾಮನಗರ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ರಾಮನಗರ ಕನಕಪುರದ ಚನ್ನಬಸಪ್ಪ ಸರ್ಕಲ್‍ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದ್ದು, ಟೈರ್ ಗೆ ಬೆಂಕಿ ಹಚ್ಚಿ ಹೆದ್ದಾರಿ ತಡೆದು ಡಿಕೆಶಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರದ ಐಜೂರು ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತೀವ್ರ ಪ್ರತಿಭಟನೆ ಹಿನ್ನೆಲೆ ಕನಕಪುರಕ್ಕೆ ರಾಮನಗರ ಎಸ್‍ಪಿ ಭೇಟಿ ನೀಡಿದ್ದು, ಕನಕಪುರ ತಾಲೂಕಿನದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇತ್ತ ಬಳ್ಳಾರಿಯಲ್ಲಿ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಬುಧವಾರ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ಕರ್ನಾಟಕ ಕಾಂಗ್ರೆಸ್ ಮುಂದಾಗಿದೆ.

    ಮದ್ಯ ಮಾರಾಟ ಬಂದ್:

    ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಬಂಧಿಸಿದ್ದನ್ನು ಖಂಡಿಸಿ  ಪ್ರತಿಭಟನೆ ನಡೆಸಲಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಮನಗರದಲ್ಲಿ ಮೂರು ದಿನ ಮದ್ಯ  ಮಾರಾಟ ಬಂದ್ ಮಾಡಿ ಅಧಿಕಾರುಗಳು ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೆ ರೆಸ್ಟೋರೆಂಟ್ ಗಳನ್ನು ಕೂಡ ಬಂದ್ ಮಾಡುವಂತೆ  ಸೂಚನೆ ನೀಡಲಾಗಿದೆ.

  • ಮಗುವನ್ನ ಕೊಂದು ತಾಯಿ ಆತ್ಮಹತ್ಯೆ- ಮಗು, ಪತ್ನಿ ಕಂಡು ಪತಿಯೂ ನೇಣಿಗೆ ಶರಣು

    ಮಗುವನ್ನ ಕೊಂದು ತಾಯಿ ಆತ್ಮಹತ್ಯೆ- ಮಗು, ಪತ್ನಿ ಕಂಡು ಪತಿಯೂ ನೇಣಿಗೆ ಶರಣು

    ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೂವರೆ ವರ್ಷದ ಮಗುವಿಗೆ ನೇಣು ಬಿಗಿದು ಕೊಲೆ ಮಾಡಿ ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿ, ಮಗುವಿನ ಮೃತ ದೇಹ ಕಂಡು ಪತಿ ಕೂಡ ನೇಣಿಗೆ ಶರಣಾದ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ.

    ಕನಕಪುರದ ಅಜೀಜ್ ನಗರದ ನಿವಾಸಿ ಪತಿ ಫೈರೋಜ್ (23), ಪತ್ನಿ ಹರ್ಷಬಾನು (19) ಹಾಗೂ ಒಂದೂವರೆ ವರ್ಷದ ಮಗು ಇಸ್ಮಾಯಿಲ್ ಸಾವನ್ನಪ್ಪಿದ ದುರ್ದೈವಿಗಳು. ಮೃತರ ಕುಟುಂಬದಲ್ಲಿ ಸುಮಾರು ದಿನಗಳಿಂದ ಜಗಳ ನಡೆಯುತ್ತಿತ್ತು. ಕಳೆದ ಮೂರು ದಿನಗಳಿಂದ ಜಗಳ ಅತಿರೇಕಕ್ಕೆ ಹೋಗಿದ್ದು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು ಎಂದು ತಿಳಿದು ಬಂದಿದೆ.

    ಫೈರೋಜ್ ಹಾಗೂ ಹರ್ಷಬಾನು ಮಧ್ಯೆ ಉಂಟಾಗಿದ್ದ ಕಲಹವನ್ನು ಸ್ಥಳೀಯ ಮುಖಂಡರು ಹಾಗೂ ಪೊಲೀಸರು ರಾಜಿ ಸಂಧಾನ ಮೂಲಕ ಬಗೆಹರಿಸಿ, ದಂಪತಿಯನ್ನು ಒಂದು ಮಾಡಿದ್ದರು. ಆದರೆ ಸೋಮವಾರ ಮಧ್ಯಾಹ್ನ ಕೂಡ ಜಗಳ ನಡೆದಿದ್ದು ಪತಿ ಮನೆಯಿಂದ ಹೊರ ಹೋದ ಬಳಿಕ ಹರ್ಷಭಾನು ತನ್ನ ಮಗು ಇಸ್ಮಾಯಿಲ್‍ಗೆ ನೇಣು ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ತಾನೂ ಕೂಡ ನೇಣಿಗೆ ಶರಣಾಗಿದ್ದಾಳೆ.

    ಮನೆಯಿಂದ ಹೊರಗೆ ಹೋಗಿದ್ದ ಫೈರೋಜ್ ಮರಳಿ ಮನೆಗೆ ಬಂದ ವೇಳೆ ಪತ್ನಿ ಹಾಗೂ ಮಗುವಿನ ಸಾವು ಕಂಡು ಭಯಭೀತನಾಗಿ ಆತನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಕನಕಪುರ ಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಟ್ರಬಲ್ ಶೂಟರ್ ವಿಚಾರಣೆ ಖಂಡಿಸಿ ಸ್ವಕ್ಷೇತ್ರದಲ್ಲಿ ಪ್ರತಿಭಟನೆ

    ಟ್ರಬಲ್ ಶೂಟರ್ ವಿಚಾರಣೆ ಖಂಡಿಸಿ ಸ್ವಕ್ಷೇತ್ರದಲ್ಲಿ ಪ್ರತಿಭಟನೆ

    ರಾಮನಗರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸರ್ಕಾರ ಇಡಿ ಅಧಿಕಾರಿಗಳ ಮೂಲಕ ವಿಚಾರಣೆ ನಡೆಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಜಿಲ್ಲೆಯ ಕನಕಪುರದಲ್ಲಿ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕನಕಪುರದ ಚನ್ನಬಸಪ್ಪ ವೃತ್ತದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ರಸ್ತೆ ತಡೆ ನಡೆಸಿ ಟೈರ್ ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರು ಬೇಕಂತಲೇ ಇಡಿ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಡಿಕೆಶಿಯವರನ್ನು ವಿಚಾರಣೆಗೊಳಪಡಿಸಿದ್ದಾರೆ. ಅಲ್ಲದೇ ಡಿಕೆಶಿಯವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ದುರ್ಬಲವಾಗಿದೆ ಎಂಬ ಉದ್ದೇಶದಿಂದ ಅವರಿಗೆ ಖೆಡ್ಡಾ ತೋಡಲಾಗುತ್ತಿದೆ ಎಂದು ಮಾಜಿ ಸಚಿವರ ಬೆಂಬಲಿಗರು ಆರೋಪಿಸಿದರು.

    ಶುಕ್ರವಾರ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ಸಂಜೆ 6 ಗಂಟೆಯಿಂದ ರಾತ್ರಿ 11.30ರ ವರಿಗೆ ವಿಚಾರಣೆ ನಡೆಸಿತ್ತು. ನಂತರ ಮತ್ತೆ ಶನಿವಾರ 11 ಗಂಟೆಗೆ ಬರುವಂತೆ ಸೂಚಿಸಿತ್ತು. ಇಡಿ ಸೂಚನೆಯಂತೆ 11 ಗಂಟೆಗೆ ಬಂದ ಡಿಕೆಶಿ ಕೆಲವು ಅಪ್ತರ ಜೊತೆ ಇಡಿ ಕಚೇರಿಯಲ್ಲಿರುವ ಪೊಲೀಸ್ ಚೌಕಿಯೊಳಗೆ ಕುಳಿತು ಮಾತನಾಡಿದ್ದಾರೆ. ನಂತರ ಈಗ ಕೆಲವು ದಾಖಲೆಯ ಜೊತೆಗೆ ಇಡಿ ಕಚೇರಿಯೊಳಗೆ ತೆರಳಿದ್ದಾರೆ.

    ವಿಚಾರಣೆಯ ಎರಡನೇ ದಿನವಾದ ಇಂದು ಇಡಿ ಕಚೇರಿಯ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ತಿಂಗಳು ವಿಚಾರಣೆಗೆ ಕರೆದರೂ ನಾನು ಹಾಜರಾಗುತ್ತೇನೆ, ತನಿಖೆಗೆ ಸಹಕರಿಸುತ್ತೇನೆ ಎಂದು ತಿಳಿಸಿದ್ದಾರೆ. ನಾನು ಏನೂ ತಪ್ಪು ಮಾಡಿಲ್ಲ ನಾನು ಹೆದರಲ್ಲ. ನಾನೇ ಈ ಇದರ ಬಗ್ಗೆ ಜಾಸ್ತಿ ಯೋಚನೆ ಮಾಡುತ್ತಿಲ್ಲ. ನೀವು ಯಾಕೆ ಇಷ್ಟೊಂದು ಚಿಂತೆ ಮಾಡುತ್ತಿದ್ದಿರಾ ಎಂದು ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ.

  • ರಾಮನಗರ: ಸಂಗಮ ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆ

    ರಾಮನಗರ: ಸಂಗಮ ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆ

    ರಾಮನಗರ: ಜಿಂಕೆಯನ್ನು ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಅಪ್ಪ-ಮಗನನ್ನ ಬೆನ್ನಟ್ಟಿದ ಅರಣ್ಯ ಇಲಾಖೆ ಅಧಿಕಾರಿಗಳು 13 ಕೆಜಿ ಜಿಂಕೆ ಮಾಂಸ ಹಾಗೂ ಒಂದು ಬೈಕ್‍ನ್ನು ವಶಪಡಿಸಿಕೊಂಡಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

    ಕಾವೇರಿ ವನ್ಯಜೀವಿಧಾಮಕ್ಕೆ ಅಂಟಿಕೊಂಡಂತಿರುವ ಸಂಗಮ ವನ್ಯಜೀವಿ ಧಾಮದಲ್ಲಿ ಇಂದು ಅರೆಮೇಗಳದೊಡ್ಡಿಯ ನಿವಾಸಿಗಳಾದ ತಂದೆ ಕರಿಯಪ್ಪ ಹಾಗೂ ಮಗ ಸ್ವಾಮಿ ಇಬ್ಬರು ಸೇರಿ ಜಿಂಕೆಯನ್ನು ಗುಂಡಿಟ್ಟು ಬೇಟೆಯಾಡಿದ್ದರು. ಬಳಿಕ ಅರಣ್ಯ ಪ್ರದೇಶದಲ್ಲಿಯೇ ಜಿಂಕೆಯ ಚರ್ಮ ಸುಲಿದು ಮಾಂಸವನ್ನ ಸಾಗಿಸುತ್ತಿದ್ದರು. ಇದೇ ವೇಳೆ ಸಂಗಮ ವನ್ಯಜೀವಿ ಧಾಮದ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿನ ಶಬ್ದ ಬಂದ ಕಡೆಗೆ ಧಾವಿಸಿದ್ದು ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಅಪ್ಪ-ಮಗನ ಬೆನ್ನಟ್ಟಿದ್ದಾರೆ.

    ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಅರಣ್ಯ ಪ್ರದೇಶದಲ್ಲಿ ಬರುವುದನ್ನು ಗಮನಿಸಿದ ಬೇಟೆಗಾರರು ಜಿಂಕೆ ಮಾಂಸ ಹಾಗೂ ಬೈಕ್‍ನ್ನು ಸಂಗಮ ವನ್ಯಜೀವಿಧಾಮದ ಅಂಚಿನಲ್ಲಿನ ದೊಡ್ಡ ಆಲಹಳ್ಳಿ ಗ್ರಾಮದ ಸಮೀಪದ ಅರಣ್ಯದಲ್ಲಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು 13 ಕೆಜಿ ಜಿಂಕೆ ಮಾಂಸ, ಜಿಂಕೆ ಚರ್ಮ ಹಾಗೂ ಒಂದು ಬೈಕ್‍ನ್ನು ವಶಪಡಿಸಿಕೊಂಡಿದ್ದು ಬೇಟೆಗಾರ ತಂದೆ-ಮಗನ ಬಂಧನಕ್ಕೆ ಬಲೆ ಬೀಸಿದ್ದಾರೆ.

    ಇತ್ತೀಚೆಗೆ ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದ ವೇಳೆ ಕಾವೇರಿ ವನ್ಯಜೀವಿಧಾಮದಲ್ಲೂ ಸಹ ಬೆಂಕಿ ಬಿದ್ದು ನೂರಾರು ಹೆಕ್ಟೇರ್ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಪರಿಣಾಮ ಆಹಾರ ಹರಸಿ ಕಾಡಿನಿಂತ ನಾಡಿನತ್ತ ಪ್ರಾಣಿಗಳು ಮುಖ ಮಾಡುತ್ತಿದ್ದು ಬೇಟೆಗಾರರ ಕೈಗೆ ತಾವಾಗಿಯೇ ಸಿಕ್ಕಿ ಬೀಳುವಂತಾಗಿದೆ.

    ಕಾವೇರಿ ವನ್ಯಜೀವಿಧಾಮ ಹಾಗೂ ಸಂಗಮ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಬೇಟೆಗಾರರ ಹಾವಳಿ ವಿಪರೀತವಾಗಿದ್ದು ಬಲೆ, ಉರುಳು, ಸಿಡಿಮದ್ದು ಅಲ್ಲದೇ ಬಂದೂಕಿನಿಂದ ಬೇಟೆಯಾಡುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ಅರಣ್ಯ ಇಲಾಖೆ ಸಹ ಬೇಟೆಗಾರರನ್ನು ಬಂಧಿಸಿ ಜೈಲಿಗಟ್ಟಿದೆ. ಕಳೆದ ಎರಡು ವರ್ಷಗಳ ಹಿಂದೆ ಜಿಂಕೆ ಬೇಟೆಯಾಡಲು ಮುಂದಾಗಿದ್ದವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡು ಹಾರಿಸಿದ್ದ ವೇಳೆ ಓರ್ವ ಸಾವನ್ನಪ್ಪಿದ್ದ, ಇದು ಸುತ್ತಮುತ್ತಲ ಹಳ್ಳಿಯ ಜನರ ಆಕ್ರೊಶಕ್ಕೂ ಕಾರಣವಾಗಿತ್ತು.

  • ಋಣಮುಕ್ತ ಪತ್ರ ರೈತರ ಮೂಗಿಗೆ ತುಪ್ಪ ಸವರಿದಂತೆ : ಮಾಜಿ ಡಿಸಿಎಂ ಕಿಡಿ

    ಋಣಮುಕ್ತ ಪತ್ರ ರೈತರ ಮೂಗಿಗೆ ತುಪ್ಪ ಸವರಿದಂತೆ : ಮಾಜಿ ಡಿಸಿಎಂ ಕಿಡಿ

    ರಾಮನಗರ: ಸರ್ಕಾರ ನ್ಯಾಯವಾಗಿ ರೈತರ ಸಾಲಮನ್ನಾ ಮಾಡಿದ್ದರೆ, ರಾಜ್ಯದ ಎಲ್ಲಾ ರೈತರಿಗೂ ಒಟ್ಟಿಗೆ ಋಣಮುಕ್ತ ಪತ್ರ ನೀಡಿ. ಅದು ನಿಜವಾದ ರೈತರ ಸೇವೆ ಆಗುತ್ತೆ. ಆದರೆ ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುಬೇಡಿ ಎಂದು ಮಾಜಿ ಡಿಸಿಎಂ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜಿಲ್ಲೆಯ ಕನಕಪುರ ತಾಲೂಕಿನ ಪಡುವಣಗೆರೆಯಲ್ಲಿ ಬರ ವೀಕ್ಷಣೆ ನಡೆಸಿ ಮಾತನಾಡಿದ ಆರ್ ಅಶೋಕ್, ಸರ್ಕಾರ ರಚನೆಯಾದ 24 ಗಂಟೆಗಳಲ್ಲಿ ಸಾಲಮನ್ನಾ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ 6 ತಿಂಗಳು ಕಳೆದರು ಸಾಲಮನ್ನಾ ಆಗಿಲ್ಲ. ಸಾಲಮನ್ನಾ ಆಗುತ್ತೆ ಎಂದು ಹೇಳುತ್ತಾರೆ. ಆದರೆ ರಾಜ್ಯದ ಜನಕ್ಕೆ ಮುಖ್ಯಮಂತ್ರಿ ಅವರ ಮೇಲೆ ನಂಬಿಕೆ ಇಲ್ಲ. ಸಿಎಂ ಕುಮಾರಸ್ವಾಮಿ ಹೇಳುವುದು ಒಂದು ಮಾಡುವುದು ಇನ್ನೊಂದು ಎಂದು ಕಿಡಿಕಾಡಿದರು.

    ರಾಜ್ಯ ಜನರಿಗೆ ಋಣಮುಕ್ತ ಪತ್ರ ವಿತರಣೆ ಮಾಡುತ್ತೇನೆ ಎಂದು ಹೇಳುತ್ತೀರಾ. ಆದರೆ ಎಲ್ಲಾ ರೈತರು ಕೊಡುವುದನ್ನು ಬಿಟ್ಟು ನಿಮಗೆ ಬೇಕಾಗಿದ್ದ ನಾಲ್ಕು ಕಡೆ ಕೊಡುತ್ತಿದ್ದೀರಾ. ಇದನ್ನು ರಾಜ್ಯ ರೈತರ ಸಮುದಾಯದ ಎಲ್ಲರಿಗೂ ಕೊಟ್ಟಿದ್ದೀನಿ ಎಂದು ಹೇಳಿದರೆ ಬೊಗಳೆಯಾಗುತ್ತೆ. ರಾಜ್ಯದ ಯಾವುದೋ ಎರಡು ಹಳ್ಳಿಗೆ ಹೋಗಿ 50 ಜನರಿಗೆ ಕೊಟ್ಟರೆ, ಐದು ರಿಂದ ಹತ್ತು ಲಕ್ಷ ರೈತರು ಋಣ ಮುಕ್ತ ಪತ್ರಕ್ಕಾಗಿ ಕಾಯುತ್ತಿದ್ದಾರೆ. ಇದು ರೈತರ ಮೂಗಿಗೆ ತುಪ್ಪ ಸವರುವಂತಹ ಕೆಲಸ ಆಗಿದೆ. ಎಲ್ಲಾ ರೈತರಿಗೆ ಋಣ ಮುಕ್ತ ಪತ್ರ ಕೊಟ್ಟರೇ ಆಗ ನಿಜವಾಗಿ ಸಾಲಮನ್ನಾ ಮಾಡಿದಂತೆ ಎಂದರ್ಥ ಎಂದರು.

    ಇದಕ್ಕೂ ಮುನ್ನ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಪಡುವಣಗೆರೆಯಲ್ಲಿ ಬರ ವೀಕ್ಷಣೆ ನಡೆಸಿದರು. ಮಳೆಯಿಲ್ಲದೇ ನಾಶವಾಗಿರುವ ಜಮೀನು, ಬತ್ತಿ ಹೋಗಿರುವ ಕೆರೆಯನ್ನ ವೀಕ್ಷಣೆ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಪ್ ಎಚ್‍ಡಿಕೆ ಗೆದ್ರೂ ಮ್ಯಾನ್ ಆಫ್ ದಿ ಮ್ಯಾಚ್ ಡಿಕೆಶಿ!

    ಕಪ್ ಎಚ್‍ಡಿಕೆ ಗೆದ್ರೂ ಮ್ಯಾನ್ ಆಫ್ ದಿ ಮ್ಯಾಚ್ ಡಿಕೆಶಿ!

    ಬೆಂಗಳೂರು: ಕರ್ನಾಟಕ ಪೊಲಿಟಿಕಲ್ ಲೀಗ್ ಕಪ್ ಅನ್ನು ಕುಮಾರಸ್ವಾಮಿ ಗೆದ್ದುಕೊಂಡರೂ ಮ್ಯಾನ್ ಆಫ್ ದಿ ಮ್ಯಾಚ್ ಆಗಿ ಮಾಜಿ ಸಚಿವ ಡಿಕೆ ಶಿವಕುಮಾರ್ ಹೊರ ಹೊಮ್ಮಿದ್ದಾರೆ.

    ಆಪರೇಷನ್ ಕಮಲದ ಭೀತಿಗೆ ಒಳಗಾಗಿದ್ದ ಕಾಂಗ್ರೆಸ್ಸನ್ನು ರಕ್ಷಿಸಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಲ್ಲಿ ಬಹಳ ಮುಖ್ಯ ಪಾತ್ರವನ್ನು ಡಿಕೆ ಶಿವಕುಮಾರ್ ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಬಿಜೆಪಿ ಕೈ ಶಾಸಕರನ್ನು ಸೆಳೆಯಲು ಮುಂದಾಗುತ್ತಿದೆ ಎನ್ನುವ ಸುಳಿವು ಸಿಕ್ಕ ಕೂಡಲೇ ಬಿಡದಿಯ ಈಗಲ್ ಟನ್ ರೆಸಾರ್ಟ್ ಗೆ ಕರೆದುಕೊಂಡು ಹೋಗಿದ್ದರು. ರೆಸಾರ್ಟ್ ಗೆ ನೀಡಿದ್ದ ಪೊಲೀಸ್ ರಕ್ಷಣೆಯನ್ನು ಸರ್ಕಾರ ವಾಪಸ್ ಪಡೆದ ಬಳಿಕ ಇಲ್ಲೂ ಶಾಸಕರನ್ನು ಸೆಳೆಯಬಹುದು ಎನ್ನುವ ಭೀತಿಯಿಂದ ಎಲ್ಲರನ್ನೂ ಹೈದರಾಬಾದ್‍ಗೆ ಡಿಕೆಶಿ ಕರೆದುಕೊಂಡು ಹೋಗಿದ್ದರು.

    ಶನಿವಾರ ನಡೆದ ಸಂಪೂರ್ಣ ಬೆಳವಣಿಗೆಯಲ್ಲೂ ಡಿಕೆಶಿ ಬಹಳ ಮುಖ್ಯ ಪಾತ್ರವಹಿಸಿದ್ದರು. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಗೈರಾದ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಮತ್ತು ಪ್ರತಾಪ್ ಗೌಡ ಪಾಟೀಲ್ ಹುಡುಕಾಟ ನಡೆದಿತ್ತು. ಹೋಟೆಲ್ ನಲ್ಲಿ ಪತ್ತೆಯಾದ ವಿಚಾರ ತಿಳಿದ ಡಿಕೆಶಿ ಮಧ್ಯಾಹ್ನ ಸುಮಾರು ಒಂದು ಗಂಟೆ ವಿಧಾನಸೌಧದ ಹೊರಗಡೆಯೇ ಶಾಸಕರಿಗೆ ಕಾದಿದ್ದರು. ಪ್ರತಾಪ್ ಗೌಡ ವಿಧಾನಸೌಧ ಪ್ರವೇಶಿಸುತ್ತಿದ್ದಂತೆ ಅವರ ಶರ್ಟ್ ಕಿಸೆಗೆ ಡಿಕೆಶಿ ವಿಪ್ ಹಾಕಿದ್ದರು. ಬಳ್ಳಾರಿಯ ವಿಜಯನಗರ ಶಾಸಕರ ಆನಂದ್ ಸಿಂಗ್ ಅವರನ್ನು ಡಿಕೆಶಿ ವಿಧಾನಸೌಧಕ್ಕೆ ಕರೆದುಕೊಂಡು ಬಂದಿದ್ದರು. ಇದನ್ನೂ ಓದಿ: ಬೇಕಿದ್ರೆ ಬೆಟ್ ಕಟ್ತೀನಿ, ಚನ್ನಪಟ್ಟಣದಲ್ಲಿ ಬಿಜೆಪಿ ಗೆಲ್ಲಲ್ಲ: ಡಿಕೆ ಶಿವಕುಮಾರ್

    ಬಿಜೆಪಿ ಮ್ಯಾಜಿಕ್ ಸಂಖ್ಯೆಗೆ ತಲುಪುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಫಲಿತಾಂಶ ಬಂದ ದಿನವೇ ಖುದ್ದಾಗಿ ತೆರಳಿ ಮುಳುಬಾಗಿಲು ಪಕ್ಷೇತರ ಶಾಸಕ ನಾಗೇಶ್ ಅವರ ಜೊತೆ ಮಾತನಾಡಿ ನಮ್ಮ ಸರ್ಕಾರಕ್ಕೆ ಬೆಂಬಲ ನೀಡುವಂತೆ ಕೇಳಿಕೊಂಡಿದ್ದರು.

    ರಾಜ್ಯಪಾಲರು ಬಿಎಸ್‍ವೈಗೆ ಸರ್ಕಾರ ರಚನೆಗೆ ಆಹ್ವಾನ ನೀಡಿ 15 ದಿನ ಸಮಯ ನೀಡಿದ ಕೂಡಲೇ ಜೆಡಿಎಸ್ ಶಾಸಕರಿಗಿಂತ ಕಾಂಗ್ರೆಸ್ ಶಾಸಕರ ಮೇಲೆ ಬಿಜೆಪಿ ಕಣ್ಣಿಟ್ಟಿದೆ ಎನ್ನುವುದು ಕಾಂಗ್ರೆಸ್ ಹೈಕಮಾಂಡ್ ಗೊತ್ತಾಯಿತು. ಹೀಗಾಗಿ ರಾಜ್ಯದ ಕೈ ಶಾಸಕರು ಕಮಲಕ್ಕೆ ಹೋಗದಂತೆ ತಡೆಯಲು ಡಿಕೆ ಶಿವಕುಮಾರ್ ಸಹೋದರರ ಹೆಗಲಿಗೆ ಹೈಕಮಾಂಡ್ ಜವಾಬ್ದಾರಿಯನ್ನು ಹಾಕಿತ್ತು.  ಬಹುಮತ ಸಾಬೀತು ಪಡಿಸುವ ದಿನ ಯಾರಾದರೂ ಅಡ್ಡ ಮತದಾನ ಮಾಡಬಹುದು ಎನ್ನುವ ಶಂಕೆ ಇತ್ತು. ಆದರೆ ಕಾಂಗ್ರೆಸ್ಸಿನ ಯಾವೊಬ್ಬ ಶಾಸಕರು ಬಿಜೆಪಿಯ ತೆಕ್ಕೆಗೆ ಬೀಳಲೇ ಇಲ್ಲ. ಈ ಮೂಲಕ ಡಿಕೆಶಿ  ಹೈ ಕಮಾಂಡ್ ಗೆ ನೀಡಿದ ಮಾತನ್ನು ಉಳಿಸಿಕೊಡುವಲ್ಲಿ ಯಶಸ್ವಿಯಾದರು.

    ಈಗಲ್ ಟನ್ ರೆಸಾರ್ಟ್ ಗೆ ನೀಡಿದ್ದ ಭದ್ರತೆಯನ್ನು ಸರ್ಕಾರ ಹಿಂದಕ್ಕೆ ಪಡೆದಾಗ ಕನಕಪುರದ ಕಾರ್ಯಕರ್ತರನ್ನು ಕರೆಸಿ ರೆಸಾರ್ಟ್ ಸುತ್ತ ಭದ್ರ ಕಾವಲು ಹಾಕಿಸಿದ್ದರು. ಈ ಹಿಂದೆ ಗುಜರಾತ್ ನಲ್ಲಿ ರಾಜ್ಯಸಭಾ ಚುನಾವಣೆಯ ವೇಳೆ ಕೈ ಶಾಸಕರನ್ನು ಇದೇ ಈಗಲ್ ಟನ್ ರೆಸಾರ್ಟ್ ಗೆ ಕರೆ ತಂದು ಅಹ್ಮದ್ ಪಟೇಲ್ ಜಯಗಳಿಸುವಲ್ಲಿ ಬಹಳ ಮುಖ್ಯ ಪಾತ್ರವನ್ನು ಡಿಕೆಶಿ ವಹಿಸಿದ್ದರು.

  • ಬಿಡದಿ ಆಶ್ರಮಕ್ಕೆ ಭೇಟಿ ನೀಡಿದ್ದು ಯಾಕೆ: ಡಿಕೆಶಿ ಹೇಳ್ತಾರೆ ಓದಿ

    ಬಿಡದಿ ಆಶ್ರಮಕ್ಕೆ ಭೇಟಿ ನೀಡಿದ್ದು ಯಾಕೆ: ಡಿಕೆಶಿ ಹೇಳ್ತಾರೆ ಓದಿ

    ರಾಮನಗರ: ಎಲ್ಲ ಮಠ, ಆಶ್ರಮಗಳಿಗೂ ಭೇಟಿ ನೀಡುತ್ತಿದ್ದೇವೆ. ಬಿಡದಿ ನಿತ್ಯಾನಂದರ ಆಶ್ರಮದಲ್ಲೂ ಮತದಾರರು ಇರುವ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದೇನೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

    ನಾಮಪತ್ರ ಸಲ್ಲಿಸಿದ ಬಳಿಕ ಬಿಡದಿ ಆಶ್ರಮಕ್ಕೆ ಬುಧವಾರ ಭೇಟಿ ನೀಡಿದ್ದು ಯಾಕೆ ಎಂದು ಕೇಳಿದ ಪ್ರಶ್ನೆಗೆ, ನಿತ್ಯಾನಂದರ ಆಶೀರ್ವಾದ ಪಡೆಯಲು ಭೇಟಿ ನೀಡಿದ್ದೆ. ನಾವು ಹೋಗಿ ಕೇಳಬೇಕಾದದ್ದು ನಮ್ಮ ಕರ್ತವ್ಯ. ನಿರ್ಲಕ್ಷ್ಯ ಮಾಡಿ 1, 2 ವೋಟಿನಿಂದ ಸೋತವರಿದ್ದಾರೆ ಎಂದು ಉತ್ತರಿಸಿದರು.

     

    ಇಂದು ಬೆಳಗ್ಗೆ ಕನಕಪುರ ತಾಲೂಕಿನ ಕಬ್ಬಾಳುವಿನಲ್ಲಿರುವ ಕಬ್ಬಾಳಮ್ಮ ದೇವಿಗೆ, ಕನಕಪುರದ ಕೆಂಕೇರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವ ಡಿಕೆ ಶಿವಕುಮಾರ್ ನಾಮಪತ್ರ ಸಲ್ಲಿಸಿದರು. ದೇವಾಲಯದಿಂದ ಬೃಹತ್ ರ್ಯಾಲಿ ಮೂಲಕ ಸಾವಿರಾರು ಬೆಂಬಲಿಗರೊಡನೆ ತಾಲೂಕು ಕಚೇರಿಗೆ ಆಗಮಿಸಿದ ಸಚಿವರು ಚುನಾವಣಾಧಿಕಾರಿ ಉಮೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪತ್ನಿ ಉಷಾ, ತಾಯಿ ಗೌರಮ್ಮ, ತಮ್ಮ ಡಿ.ಕೆ.ಸುರೇಶ್ ಸಚಿವರ ಜೊತೆಗಿದ್ದರು.

    ಸಾರ್ವಜನಿಕರಿಂದ ಸಂಗ್ರಹವಾಗಿದ್ದ ಹಣವನ್ನು ಡೆಪಾಸಿಟ್ ಮಾಡಿದ ಸಚಿವರು ಠೇವಣಿ ಡೆಪಾಸಿಟ್ ನಲ್ಲಿ ನಮ್ಮದೂ ಪಾಲಿರಲಿ ಎಂಬುದು ಕಾರ್ಯಕರ್ತರ ಆಶಯವಾಗಿದೆ. ನಾನು ಠೇವಣಿಯನ್ನು ವಸೂಲಿ ಮಾಡಲು ಹೋಗಿಲ್ಲ. ಠೇವಣಿ ಡೆಪಾಸಿಟ್‍ಗೆ ನಾವು ಭಾಗಿಯಾಗಬೇಕು ಎಂದು ಕೆಲವರು 50, 100, 200, 500 ರೂಪಾಯಿಗಳನ್ನು ನೀಡಿದ್ದಾರೆ. ಆ ಹಣವನ್ನು ಡೆಪಾಸಿಟ್ ಕಟ್ಟಿದ್ದೇನೆ. ಇದು ಮೊದಲಿನಿಂದಲೂ ನಡೆದು ಬಂದ ಪದ್ದತಿಯಾಗಿದೆ ಎಂದು ತಿಳಿಸಿದರು.

    6 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು 7ನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದೇನೆ. ಕ್ಷೇತ್ರದ ಜನ ವಿಶ್ವಾಸವಿಟ್ಟು ಪ್ರೋತ್ಸಾಹಿಸಿದ್ದಾರೆ. ಪಕ್ಷಭೇದವಿಲ್ಲದೆ ಎಲ್ಲರನ್ನು ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡುತ್ತೇನೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಉತ್ತಮ ಪ್ರತಿಕ್ರಿಯೆಯಿದೆ. ಸುಮ್ಮನೆ ಬಂಡೆಗೆ ತಲೆ ಹೊಡೆದುಕೊಳ್ಳಬೇಡಿ. ನಿಮ್ಮ ಸೇವೆಗೆ ಸದಾ ಸಿದ್ದರಿದ್ದೇವೆ, ಬನ್ನಿ ನಮ್ಮ ಜೊತೆ ಕೈ ಜೋಡಿಸಿ ರಾಜ್ಯದ ಜನರ ಸೇವೆ ಮಾಡಲು ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ತರುವಂತೆ ಜನರಲ್ಲಿ ಮನವಿ ಮಾಡಿದರು.